Tag: sergei lavrov

  • ಭಾರತ, ಚೀನಾವನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎತ್ತಿಕಟ್ಟುತ್ತಿವೆ: ರಷ್ಯಾ ವಿದೇಶಾಂಗ ಸಚಿವ

    ಭಾರತ, ಚೀನಾವನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎತ್ತಿಕಟ್ಟುತ್ತಿವೆ: ರಷ್ಯಾ ವಿದೇಶಾಂಗ ಸಚಿವ

    ಮಾಸ್ಕೋ: ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತ (India) ಮತ್ತು ಚೀನಾವನ್ನು (China) ಪರಸ್ಪರ ಎತ್ತಿಕಟ್ಟುತ್ತಿವೆ ಎಂದು ರಷ್ಯಾದ (Russia) ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ (Sergey Lavrov ಹೇಳಿದ್ದಾರೆ.

    ಪಾಶ್ಚಿಮಾತ್ಯ ರಾಷ್ಟ್ರಗಳು ಚೀನಾ, ಭಾರತದ ಮೇಲೆ ಕಣ್ಣಿಟ್ಟಿದೆ. ಆಸಿಯಾನ್ ಭಾಗದಲ್ಲಿ ಪ್ರಮುಖ ಪಾತ್ರ ವಹಿಸಲು ಪಾಶ್ಚಿಮಾತ್ಯ ರಾಷ್ಟ್ರಗಳು ಈ ರೀತಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

    ಆಸಿಯಾನ್ ಪಾತ್ರವನ್ನು ದುರ್ಬಲಗೊಳಿಸಲು ಪಶ್ಚಿಮ ಪ್ರಯತ್ನಿಸುತ್ತಿದೆ. ಹೀಗಾಗಿ ಯುರೇಷಿಯಾದಲ್ಲಿ ಸಾಮೂಹಿಕ ಭದ್ರತಾ ವ್ಯವಸ್ಥೆಗಾಗಿ ಕಾಲ ಕೂಡಿ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಆಫ್ರಿಕಾದಲ್ಲಿ ಉಪ-ಪ್ರಾದೇಶಿಕ ಸ್ವರೂಪಗಳ ಜೊತೆಗೆ ಆಫ್ರಿಕನ್ ಒಕ್ಕೂಟ ಸ್ಥಾಪನೆಯಾಗಿದೆ. ಲ್ಯಾಟಿನ್ ಅಮೆರಿಕ ಮತ್ತು ಕೆರಿಬಿಯನ್‌ನಲ್ಲಿ ಲ್ಯಾಟಿನ್ ಅಮೆರಿಕನ್ ಮತ್ತು ಕೆರಿಬಿಯನ್ ರಾಜ್ಯಗಳ ಸಮುದಾಯ (CELAC) ರಚನೆಯಾಗಿದೆ. ಆದರೆ ಇಲ್ಲಿಯವರೆಗೆ ಯುರೇಷಿಯಾದಲ್ಲಿ ಇದುವರೆಗೂ ಅಂತಹ ಯಾವುದೇ ಸಾಮೂಹಿಕ ಸಂಘಟನೆ ರಚನೆಯಾಗಿಲ್ಲ ಎಂದು ತಿಳಿಸಿದರು.

  • ರಷ್ಯಾ ವಿದೇಶಾಂಗ ಸಚಿವನ ವಿವಾದಿತ ಹೇಳಿಕೆ – ಇಸ್ರೇಲ್ ಪ್ರಧಾನಿಗೆ ಪುಟಿನ್ ಕ್ಷಮೆ

    ರಷ್ಯಾ ವಿದೇಶಾಂಗ ಸಚಿವನ ವಿವಾದಿತ ಹೇಳಿಕೆ – ಇಸ್ರೇಲ್ ಪ್ರಧಾನಿಗೆ ಪುಟಿನ್ ಕ್ಷಮೆ

    ಮಾಸ್ಕೋ: ರಷ್ಯಾದ ವಿದೇಶಾಂಗ ಸಚಿವ ಸರ್ಗೇಯ್ ಲಾವ್ರೋನ ವಿವಾದಿತ ಹೇಳಿಕೆಗೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕ್ಷಮೆ ಕೋರಿದ್ದಾರೆ.

    ನಫ್ತಾಲಿ ಬೆನೆಟ್ ಉಕ್ರೇನ್ ಮೇಲಿನ ತಮ್ಮ ಕಾರ್ಯಾಚರಣೆ ಕುರಿತು ವಿವರಿಸುವ ಸಂದರ್ಭ ಹಿಟ್ಲರ್ ಯಹೂದಿ ಪರಂಪರೆಯನ್ನು ಹೊಂದಿದ್ದ ಎಂದು ವಿವಾದಿತ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ಸಂಬಂಧ ಹದಗೆಡಬಾರದೆಂದು ಪುಟಿನ್ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ: ನಮಗೆ ನಿಮ್ಮ ಸಲಹೆ ಬೇಡ: ನೆದರ್ಲೆಂಡ್‌ಗೆ ತಿರುಗೇಟು ನೀಡಿದ ಭಾರತ

    ಸರ್ಗೇಯ್ ಲಾವ್ರೋ ಸಂದರ್ಶನವೊಂದರಲ್ಲಿ ಯುದ್ಧದ ಬಗ್ಗೆ ರಷ್ಯಾದ ನಿಲುವನ್ನು ವಿವರಿಸುತ್ತಿರುವಾಗ ಹಿಟ್ಲರ್‌ನಲ್ಲಿ ಯಹೂದಿಗಳ ರಕ್ತವಿತ್ತು ಎಂದು ವಿವಾದಿತ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ಇಸ್ರೇಲ್ ಸೇರಿದಂತೆ ಹಲವಾರು ಪಾಶ್ಚಿಮಾತ್ಯ ದೇಶಗಳು ಲಾವ್ರೋ ಹೇಳಿಕೆಯನ್ನು ಖಂಡಿಸಿದ್ದವು. ಇದನ್ನೂ ಓದಿ: ಟ್ವಿಟ್ಟರ್‌ಗೆ ಎಲಾನ್‌ ಮಸ್ಕ್‌ ತಾತ್ಕಾಲಿಕ CEO?

    ಇಸ್ರೇಲ್ ತನ್ನ 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆನೆಟ್ ಹಾಗೂ ಪುಟಿನ್ ನಡುವೆ ಮಾತುಕತೆ ನಡೆದಿದ್ದು, ಈ ವೇಳೆ ಪುಟಿನ್ ಕ್ಷಮೆ ಕೋರಿದ್ದಾರೆ. ರಷ್ಯಾ ಹಾಗೂ ಇಸ್ರೇಲ್ ಉತ್ತಮ ಸಂಬಂಧ ಹೊಂದಿದ್ದು, ಬೆನೆಟ್ ಮಾಸ್ಕೋ ಪ್ರವಾಸದಲ್ಲಿ ಉಕ್ರೇನ್ ಮೇಲಿನ ಯುದ್ಧವನ್ನು ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ.

  • 3ನೇ ವಿಶ್ವ ಯುದ್ಧದಲ್ಲಿ ಪರಮಾಣ ಶಸ್ತ್ರಾಸ್ತ್ರ ಇರುತ್ತೆ: ರಷ್ಯಾ ಸಚಿವ

    3ನೇ ವಿಶ್ವ ಯುದ್ಧದಲ್ಲಿ ಪರಮಾಣ ಶಸ್ತ್ರಾಸ್ತ್ರ ಇರುತ್ತೆ: ರಷ್ಯಾ ಸಚಿವ

    ಮಾಸ್ಕೋ: ಮೂರನೇ ಮಹಾಯುದ್ಧ ನಡೆದರೆ ಅದು ಪರಮಾಣು ಶಸ್ತ್ರಾಸ್ತ್ರಗಳನ್ನು ಒಳಗೊಂಡಿರುತ್ತದೆ. ಜೊತೆಗೆ ವಿನಾಶಕಾರಿಯಾಗಿರುತ್ತದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ.

    ಕೀವ್‌ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಂಡರೆ ನಿಜವಾದ ಅಪಾಯ ಎದುರಿಸಬೇಕಾಗುತ್ತದೆ ಎಂದು ಉಕ್ರೇನ್‌ಗೆ ಲಾವ್ರೊವ್ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ಭಾರತದ ಧ್ವಜ ಹಿಡಿದು ಸುರಕ್ಷಿತವಾಗಿ ಉಕ್ರೇನ್‌ ಗಡಿ ದಾಟಿದ ಪಾಕಿಸ್ತಾನ ವಿದ್ಯಾರ್ಥಿಗಳು!

    ರಷ್ಯಾದ ಪಡೆಗಳು ಉಕ್ರೇನ್‌ನ ಎರಡನೇ ನಗರ ಖಾರ್ಕಿವ್‌ನ ಮಧ್ಯಭಾಗದಲ್ಲಿರುವ ಸ್ಥಳೀಯ ಸರ್ಕಾರದ ಪ್ರಧಾನ ಕಛೇರಿಯ ಮೇಲೆ ಭೀಕರ ದಾಳಿ ನಡೆಸಿತು. ಇದರಿಂದ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ಮತ್ತೊಂದೆಡೆ ಉಕ್ರೇನ್‌ ರಾಜಧಾನಿ ಕೀವ್‌ನ ಟೆಲಿವಿಷನ್‌ ಟವರ್‌ ಮೇಲೂ ರಷ್ಯಾ ದಾಳಿ ನಡೆಸಿದ್ದು, ಐವರು ಬಲಿಯಾಗಿದ್ದಾರೆ.

    ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಜೊತೆಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ದೂರವಾಣಿ ಕರೆಯಲ್ಲಿ ಮಾತನಾಡಿ, ಆಕ್ರಮಣಕಾರಿ ರಷ್ಯಾವನ್ನು ತಡೆಯಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 6 ದಿನದಲ್ಲಿ 6 ಸಾವಿರ ರಷ್ಯಾ ಯೋಧರ ಹತ್ಯೆ: ಉಕ್ರೇನ್ ಅಧ್ಯಕ್ಷ

    ನಿನ್ನೆ ಕೂಡ ಯೂರೋಪಿಯನ್‌ ನಾಯಕರೊಂದಿಗೆ ವೀಡಿಯೋ ಕರೆಯಲ್ಲಿ ಮಾತನಾಡಿದ್ದ ಝೆಲೆನ್‌ಸ್ಕಿ, ನಾವು ನಿಮ್ಮೊಂದಿಗಿದ್ದೇವೆ ಎಂಬುದನ್ನು ಸಾಬೀತುಪಡಿಸಿ ಎಂದು ಯೂರೋಪಿಯನ್‌ ನಾಯಕರಿಗೆ ತಾಕೀತು ಮಾಡಿದ್ದರು. ನೀವಿಲ್ಲದೇ ಉಕ್ರೇನ್‌ ಏಕಾಂಗಿಯಾಗಲಿದೆ ಎಂದು ಹೇಳಿದ್ದರು.

    ರಷ್ಯಾದ ಆಕ್ರಮಣದ ನಂತರ 6,77,000 ಕ್ಕೂ ಹೆಚ್ಚು ಜನರು ಉಕ್ರೇನ್‌ನಿಂದ ಪಲಾಯನ ಮಾಡಿದ್ದಾರೆ. ಪಲಾಯನ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಯುಎನ್‌ನ ನಿರಾಶ್ರಿತರ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಆರೋಪ – ಏನಿದರ ವಿಶೇಷ?