Tag: Series Accident

  • ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಗ್ರಾಮಸ್ಥರಿಂದ ಪ್ರತಿಭಟನೆ

    ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಗ್ರಾಮಸ್ಥರಿಂದ ಪ್ರತಿಭಟನೆ

    ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತವಾಗಿದ್ದು, ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ಈ ಘಟನೆ ಸಂಭವಿಸಿದೆ. ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಒಂದು ಬೈಕ್, ಎರಡು ಕಾರು ಹಾಗೂ ಒಂದು ಜೀಪ್‍ನ ನಡುವೆ ಅಪಘಾತ ಸಂಭವಿಸಿ, ಐವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸರ್ವಿಸ್ ರಸ್ತೆ ಇಲ್ಲದಿರುವುದೇ ಈ ಸರಣಿ ಅಪಘಾತಕ್ಕೆ ಕಾರಣಕ್ಕೆ ಎಂದು ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ಎರಡು ಮಾರ್ಗಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಎರಡು ಮಾರ್ಗಗಳು ಸಂಪೂರ್ಣ ಸ್ತಬ್ಧವಾಗಿ ಐದಾರು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಬಳಿಕ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಪೊಲೀಸರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಶುರುವಾಗಿ, ಸರ್ವಿಸ್ ರಸ್ತೆ ಮಾಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾರು, ಆಟೋ, ಸ್ಕೂಟರ್ ನಡುವೆ ಸರಣಿ ಅಪಘಾತ- ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    ಕಾರು, ಆಟೋ, ಸ್ಕೂಟರ್ ನಡುವೆ ಸರಣಿ ಅಪಘಾತ- ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    ಮೈಸೂರು: ನಗರದ ಬನ್ನೂರು ಮಳ್ಳವಳ್ಳಿ ಮುಖ್ಯರಸ್ತೆಯಲ್ಲಿ ಕಾರು, ಆಟೋ ಹಾಗೂ ಸ್ಕೂಟರ್ ನಡುವೆ ಸರಣಿ ಅಪಘಾತ ಸಂಭವಿಸಿದೆ.

    ಬನ್ನೂರು ರಸ್ತೆಯ ವಾಜಮಂಗಲ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಯಂತ್ರಣ ತಪ್ಪಿ ಒಂದಕ್ಕೊಂದು ಡಿಕ್ಕಿಯಾಗಿ ವಾಹನಗಳು ಹಳ್ಳಕ್ಕೆ ಬಿದ್ದಿದೆ.

    ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೆ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸಿದ್ದರ್ಥನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಇಬ್ಬರು ಚಾಲಕರ ದುರ್ಮರಣ

    ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ- ಇಬ್ಬರು ಚಾಲಕರ ದುರ್ಮರಣ

    ವಿಜಯಪುರ: ಎರಡು ಲಾರಿಗಳು ಮುಖಾಮುಖಿಯಾಗಿ ನಂತರ ಹಿಂಬದಿಯಲ್ಲಿದ್ದ ಲಾರಿ ಹಾಗೂ ಕಾರ್ ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಝಳಕಿ ಬಳಿಯ ಎನ್ ಎಚ್13ನಲ್ಲಿ ನಡೆದಿದೆ.

    ಮುಖಾಮುಖಿ ಡಿಕ್ಕಿಯಾದ ಲಾರಿಗಳ ಇಬ್ಬರು ಚಾಲಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿ ಆಗಿದ್ದು, ಲಾರಿಯಲ್ಲಿ ಕ್ಲೀನರ್ ಸಿಲುಕಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ. ಮೃತಪಟ್ಟ ಚಾಲಕರ ಹೆಸರು ಇನ್ನೂ ಪತ್ತೆಯಾಗಿಲ್ಲ.

    ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪಲ್ಟಿಯಾದ ಲಾರಿಗಳನ್ನು ತೆರವು ಕಾರ್ಯ ಮಾಡಲಾಗುತ್ತಿದೆ. ತೆರವಿನ ಬಳಿಕ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಲಿದೆ.

    ಈ ಬಗ್ಗೆ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟಯರ್ ಸ್ಫೋಟಗೊಂಡು ಸಿಲಿಂಡರ್ ವಾಹನ ಪಲ್ಟಿ – ಐದು ವಾಹನಗಳು ಜಖಂ

    ಟಯರ್ ಸ್ಫೋಟಗೊಂಡು ಸಿಲಿಂಡರ್ ವಾಹನ ಪಲ್ಟಿ – ಐದು ವಾಹನಗಳು ಜಖಂ

    ಬೆಂಗಳೂರು: ಸಿಲಿಂಡರ್ ಗಳನ್ನು ತುಂಬಿಕೊಂಡು ಹೊರಟಿದ್ದ ವಾಹನದ ಟೈಯರ್ ಸ್ಫೋಟಗೊಂಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಹದೇವಪುರ ಬಳಿ ನಡೆದಿದೆ.

    ಸಿಲಿಂಡರ್ ತುಂಬಿಕೊಂಡು ಬರುತ್ತಿದ್ದ ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಈ ವೇಳೆ ಲಾರಿ ಹಿಂಬದಿ ಬರುತ್ತಿದ್ದ ಮಿನಿ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇನ್ನೊಂದು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಟ್ಟು ಐದು ವಾಹನಗಳು ಜಖಂಗೊಂಡಿದ್ದು, ಮೂವರಿಗೆ ಗಾಯಗಳಾಗಿದೆ. ಗಾಯಗೊಂಡವರನ್ನು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸರಣಿ ಅಪಘಾತದಿಂದ ಮಂಗಳೂರು-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಪೈಪೋಟಿಯಿಂದಾಗಿ ಇಬ್ಬರು ಲಾರಿ ಚಾಲಕರಿಂದ ರ‍್ಯಾಶ್ ಡ್ರೈವಿಂಗ್!

    ಪೈಪೋಟಿಯಿಂದಾಗಿ ಇಬ್ಬರು ಲಾರಿ ಚಾಲಕರಿಂದ ರ‍್ಯಾಶ್ ಡ್ರೈವಿಂಗ್!

    – ಎರಡು ಲಾರಿ, ಬೈಕ್, ಕಾರು ನಡುವೆ ಸರಣಿ ಅಪಘಾತ

    ಬೆಂಗಳೂರು: ಪೈಪೋಟಿಗೆ ಬಿದ್ದು ರ‍್ಯಾಶ್ ಡ್ರೈವಿಂಗ್ ಮಾಡಿದ ಇಬ್ಬರು ಲಾರಿ ಚಾಲಕರ ಬೇಜಾವಾಬ್ದಾರಿಯಿಂದ ಎರಡು ಲಾರಿ, ಬೈಕ್, ಕಾರು ನಡುವೆ ಸರಣಿ ಅಪಘಾತ ನಡೆದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ಬಳಿ ನಡೆದಿದೆ.

    ಇಲ್ಲಿನ ಅಡಕಮಾರನಹಳ್ಳಿ ಗ್ರಾಮದ ಸಮೀಪದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳ ಚಾಲಕರಿಬ್ಬರು ಏಕಾಏಕಿ ಪೈಪೋಟಿಗೆ ಬಿದ್ದವರಂತೆ ಅತೀ ವೇಗವಾಗಿ ಚಾಲನೆ ಮಾಡಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿದ ಒಂದು ಲಾರಿ ರಸ್ತೆ ತಡೆಗೋಡೆಗೆ ಡಿಕ್ಕಿಯಾಗಿದೆ. ಮತ್ತೊಂದು ಲಾರಿ ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ.

    ಇದರಿಂದಾಗಿ ಬೈಕ್ ಹಾಗೂ ಕಾರುಗಳಿಗೆ ಡಿಕ್ಕಿಯಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಭೀಕರ ಸರಣಿ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಐದಾರು ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಅಪಘಾತದಿಂದಾಗಿ ಸುಮಾರು ನಾಲ್ಕೈದು ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಟ್ರಾಫಿಕ್ ನಲ್ಲಿ ಒಂದು ಅಂಬ್ಯುಲೈನ್ಸ್ ಸಿಲುಕಿ ಕೆಲಕಾಲ ಪರದಾಡುವಂತಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ವಾಹನ ಹಾಗೂ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ.

  • ಕುಡಿದ ಮತ್ತಿನಲ್ಲಿ ವ್ಯಾನ್ ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣವಾದ KSRP ಪೊಲೀಸ್!

    ಕುಡಿದ ಮತ್ತಿನಲ್ಲಿ ವ್ಯಾನ್ ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣವಾದ KSRP ಪೊಲೀಸ್!

    ಬೆಂಗಳೂರು: ಕೆಎಸ್ಆರ್ ಪಿ ಪೊಲೀಸಪ್ಪ ಕುಡಿದ ಮತ್ತಿನಲ್ಲಿ ಇಲಾಖೆಯ ವ್ಯಾನ್ ನನ್ನು ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣವಾದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸಿಂಗಸಂದ್ರ ಬಳಿ ನಡೆದಿದೆ.

    ಹೊಸೂರು ಮುಖ್ಯರಸ್ತೆಯ ಸಿಂಗಸಂದ್ರ ಬಳಿ ಬುಧವಾರ ಕೆಎಸ್ಆರ್ ಪಿ 9ನೇ ಪಡೆಯ ಡ್ರೈವರ್ ಕುಡಿದ ಮತ್ತಿನಲ್ಲಿ ಅಡ್ಡಾಡಿದ್ದಿಯಾಗಿ ಇಲಾಖೆಯ ವ್ಯಾನ್ ಚಲಾಯಿಸಿದ ಪರಿಣಾಮ ಸರಣಿ ಅಪಘಾತವಾಗಿದ್ದು, ಒಂದು ಕಾರು ಹಾಗೂ ಬೈಕ್ ಜಖಂಗೊಂಡಿದೆ.

    ಸ್ಥಳದಲ್ಲಿದ್ದ ಸಾರ್ವಜನಿಕರು ಕುಡುಕ ಪೊಲೀಸಪ್ಪನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ ಇನ್ನು ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿ ಕುಡುಕ ಪೊಲೀಸಪ್ಪ ವ್ಯಾನ್ ಸೈಡಿಗೆ ಹಾಕುವಂತೆ ವಿನಂತಿಸಿಕೊಳ್ಳುತ್ತಿದ್ದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

    ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ಕಾರ್ಪಿಯೊ, ಟಾಟಾ ಏಸ್, ಸ್ಕೂಟಿ ನಡುವೆ ಸರಣಿ ಅಪಘಾತ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಸ್ಕಾರ್ಪಿಯೊ, ಟಾಟಾ ಏಸ್, ಸ್ಕೂಟಿ ನಡುವೆ ಸರಣಿ ಅಪಘಾತ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಬಾಗಲಕೋಟೆ: ಸ್ಕಾರ್ಪಿಯೊ, ಟಾಟಾ ಏಸ್, ಸ್ಕೂಟಿ ನಡುವೆ ಡಿಕ್ಕಿಯಾಗಿ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಜಮಖಂಡಿ-ಮುಧೋಳ ಮಾರ್ಗ ಮಧ್ಯೆ ನಡೆದಿದೆ.

    ಸ್ಕಾರ್ಪಿಯೋ ಬೆಳಗಾವಿ ಜಿಲ್ಲೆಯ ಸವದತ್ತಿಯಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಹೊರಟಿತ್ತು. ಈ ವೇಳೆ ಸ್ಕಾರ್ಪಿಯೋ ಕಾರ್ ಟೈರ್ ಬ್ಲಾಸ್ಟ್ ಆಗಿದ್ದಕ್ಕೆ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಕಾರ್ಪಿಯೋ ಕಾರ್ ಟೈರ್ ಬ್ಲಾಸ್ಟ್ ಆಗಿ ಟಾಟಾ ಏಸ್, ಸ್ಕೂಟಿ ನಡುವೆ ಡಿಕ್ಕಿಯಾಗಿದೆ.

    ಸದ್ಯ ಗಾಯಾಳುಗಳನ್ನು ತಾಲೂಕು ಆಸ್ಪತ್ರಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಐದು ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

    ಐದು ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

    ಬೆಂಗಳೂರು: ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ, ಪವಾಡ ರೀತಿಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ.

    ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಬಳಿ ಐದು ಕಾರು ಹಾಗೂ ಒಂದು ಕ್ಯಾಂಟರ್ ವಾಹನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ರಸ್ತೆ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯಲ್ಲಿ ಕಾರುಗಳು ಉರುಳಿ ಬಿದ್ದಿದೆ.

    ಘಟನೆಯಲ್ಲಿ ಕಾರಿನಲ್ಲಿದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತ ದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿ ಕೆಲ ಸಮಯ ವಾಹನ ಸವಾರರು ಪರದಾಡಿದರು. ಘಟನಾ ಸ್ಥಳಕ್ಕೆ ಡಾಬಸ್ ಪೇಟೆ ಹಾಗೂ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಸಂಚಾರ ದಟ್ಟಣೆ ನಿಯಂತ್ರಿಸಲು ಹರಸಾಹಸ ಪಟ್ಟರು.

  • ಲಾರಿ, ಕ್ಯಾಂಟರ್, ಮಿನಿ ಬಸ್, ಬೈಕ್ ನಡುವೆ ಭೀಕರ ಸರಣಿ ಅಪಘಾತ- 12 ಮಂದಿಗೆ ಗಾಯ, ಮೂವರು ಗಂಭೀರ

    ಲಾರಿ, ಕ್ಯಾಂಟರ್, ಮಿನಿ ಬಸ್, ಬೈಕ್ ನಡುವೆ ಭೀಕರ ಸರಣಿ ಅಪಘಾತ- 12 ಮಂದಿಗೆ ಗಾಯ, ಮೂವರು ಗಂಭೀರ

    ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಭೀಕರ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

    ಲಾರಿ, ಕ್ಯಾಂಟರ್, ಮಿನಿ ಬಸ್, ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಶ್ರೀರಂಗಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಷ್ಟೇ ಅಲ್ಲದೇ ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • KSRTC ಬಸ್, ಕಾರು, ಲಾರಿ ನಡುವೆ ಭೀಕರ ಸರಣಿ ಅಪಘಾತ- ಬೆಂಗಳೂರು ಮೂಲದ ಐವರ ಸಾವು

    KSRTC ಬಸ್, ಕಾರು, ಲಾರಿ ನಡುವೆ ಭೀಕರ ಸರಣಿ ಅಪಘಾತ- ಬೆಂಗಳೂರು ಮೂಲದ ಐವರ ಸಾವು

    ಚೆನ್ನೈ: ಕೆಎಸ್‍ಆರ್ ಟಿಸಿ ಬಸ್ ಹಾಗು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಕಾಮನದೊಡ್ಡಿ ಬಳಿ ನಡೆದಿದೆ.

    ಲಾರಿ, ಕಾರು ಹಾಗು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು, ಹಿಂಬದಿಯಿಂದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕರ್ನಾಟಕ ನೊಂದಣಿಯ ಕೆಎ02ಎಂಇ8262 ಸಂಖ್ಯೆಯ ಕಾರು ಅಪಘಾತದ ರಭಸಕ್ಕೆ ಸಂಪೂರ್ಣ ನಜ್ಜುಗುಜ್ಜುಗಿದೆ. ಕಾರಿನಲ್ಲಿ ಸಿಕ್ಕಿಹಾಕಿಕೊಂಡಿರುವ ಮೃತ ದೇಹಗಳನ್ನು ಹೊರತೆಗೆಯಲು ಸ್ಥಳೀಯರು ಹಾಗು ಪೊಲೀಸರು ಹರಸಾಹಸಪಟ್ಟಿದ್ದಾರೆ.

    ಕಾರಿನಲ್ಲಿ ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು ಪ್ರಯಾಣಿಸುತ್ತಿದ್ದರು. ಘಟನೆಯಿಂದ ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

    ಸ್ಥಳಕ್ಕೆ ಹೊಸೂರಿನ ಅಟ್ಕೊ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.