Tag: Series Accident

  • ಸರಣಿ ಅಪಘಾತ: ಪೂಜೆಗಾಗಿ ಮದ್ವೆ ಆಮಂತ್ರಣ ಪತ್ರಿಕೆ ತೆಗೆದುಕೊಂಡು ಹೋಗ್ತಿದ್ದ ವ್ಯಕ್ತಿ ದುರ್ಮರಣ

    ಸರಣಿ ಅಪಘಾತ: ಪೂಜೆಗಾಗಿ ಮದ್ವೆ ಆಮಂತ್ರಣ ಪತ್ರಿಕೆ ತೆಗೆದುಕೊಂಡು ಹೋಗ್ತಿದ್ದ ವ್ಯಕ್ತಿ ದುರ್ಮರಣ

    ಬೆಂಗಳೂರು: ನಗರದ ಹೊರವಲಯ ನೆಲಮಂಗಲ ತಾಲೂಕಿನ ರಾಯರಪಾಳ್ಯದ ಬಳಿ ಕೆಎಸ್‍ಆರ್ ಟಿಸಿ ಬಸ್ ಹಾಗೂ ಖಾಸಗಿ ಶಾಲಾ ವಾಹನ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ.

    ಮೃತ ದುರ್ದೈವಿಯನ್ನು ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ಡಿ.ಹನುಮಂತಯ್ಯ ಎನ್ನಲಾಗಿದೆ. ಮದುವೆಯ ಆಮಂತ್ರಣ ಪತ್ರಿಕೆಯನ್ನು ದೇವರಿಗೆ ಪೂಜೆ ಸಲ್ಲಿಸಲು ತೆರಳುತ್ತಿದ್ದ ಸಂದರ್ಭದಲ್ಲಿ ಹನುಮಂತಯ್ಯ ಈ ಅವಘಡಕ್ಕೆ ಬಲಿಯಾಗಿದ್ದಾರೆ.

    ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿದ್ದ 35 ಮಂದಿ ಪ್ರಯಾಣಿಕರಿದ್ದು, ಹೆದ್ದಾರಿ ಮದ್ಯದ ಕಂದಕಕ್ಕೆ ಬಸ್ ಉರುಳದಂತೆ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ ನಿಯಂತ್ರಣಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.

    ಈ ಸರಣಿ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದು, ಟ್ರಾಫಿಕ್ ಜಾಮ್ ತೆರವು ಮಾಡಿದ್ದಾರೆ.

  • ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

    ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

    ಬೆಂಗಳೂರು: ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೆಡೆದಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿಯ ಬಳಿ ಈ ಅಪಘಾತ ಸಂಭವಿಸಿದೆ. ಲಾರಿ, ಬಸ್ ಹಾಗೂ ಬೊಲೆರೋ ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೊಲೆರೋ ಜೀಪಿನಲ್ಲಿದ್ದ ತುಮಕೂರು ಮೂಲದವರಾದ ಕೆಂಪರಾಜು(34) ಹಾಗೂ ರಾಕೇಶ್(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ವೇಗವಾಗಿ ಬಂದ ಲಾರಿ ಮುಂದೆ ಸಾಗುತ್ತಿದ್ದ ಬೊಲೆರೋ ಜೀಪ್ ಹಾಗೂ ಬಸ್ ಗೆ ಗುದ್ದಿದೆ. ಬಸ್ ಹಾಗೂ ಲಾರಿ ಮಧ್ಯದಲ್ಲಿ ಸಿಲುಕಿದ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದೆ.

    ಮೃತ ದೇಹಗಳನ್ನು ಜೀಪಿನಿಂದ ಹೊರತೆಗೆಯಲು ಕ್ರೇನ್ ಹಾಗೂ ಜೆಸಿಬಿ ಯಂತ್ರವನ್ನು ಸಹ ಬಳಸಲಾಗಿದ್ದು, ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.