Tag: Service Road

  • ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ, ಸರ್ವಿಸ್ ರಸ್ತೆ ವಿಲೀನ – ಡಿಕೆಶಿ ಸ್ಥಳ ಪರಿಶೀಲನೆ

    ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ, ಸರ್ವಿಸ್ ರಸ್ತೆ ವಿಲೀನ – ಡಿಕೆಶಿ ಸ್ಥಳ ಪರಿಶೀಲನೆ

    ಬೆಂಗಳೂರು: ಮೆಟ್ರೋ(Metro) ಕಾಮಗಾರಿ ನಡೆಯುತ್ತಿರುವ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲು ಮುಖ್ಯ ರಸ್ತೆ ಹಾಗೂ ಸರ್ವಿಸ್ ರಸ್ತೆಗಳನ್ನು ವಿಲೀನ ಮಾಡುವ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಅವರು ಸೋಮವಾರ ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

    ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಮೆಟ್ರೋ ಮಾರ್ಗದಲ್ಲಿ ಬರುವ ಮಹದೇವಪುರ ಹಾಗೂ ಮಾರತಹಳ್ಳಿ ಮೇಲ್ಸೇತುವೆ (Marthalli Flyover) ಬಳಿ ರಸ್ತೆ ವೀಕ್ಷಿಸಿದರು. ಇತ್ತೀಚೆಗೆ ನಡೆದ ಗ್ರೇಟರ್ ಬೆಂಗಳೂರು(Greater Bengaluru) ಸಭೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಖ್ಯರಸ್ತೆ ಹಾಗೂ ಸರ್ವಿಸ್ ರಸ್ತೆಗಳ ನಡುವೆ ಇರುವ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಲು ತೀರ್ಮಾನ ಮಾಡಲಾಗಿತ್ತು. ಇದನ್ನೂ ಓದಿ: ಕೇಸ್‌ನಿಂದ ಬಾಯಿ ಮುಚ್ಚಿಸಲು ಸಾಧ್ಯವಾಗದು, ಮಾನನಷ್ಟ ಮೊಕದ್ದಮೆಯ ನಾಟಕ ಬಿಡಿ: ಛಲವಾದಿ

    ಈ ವಿಚಾರವಾಗಿ ಈಗಾಗಲೇ ಬೆಂಗಳೂರಿನ ಶಾಸಕರ ಜೊತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದೆ. ಸುಮಾರು 40ರಿಂದ 50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವಿಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಕರ್ನಾಟಕ ಸಿಜೆ ಸೇರಿ ಮೂವರ ಹೆಸರು ಸುಪ್ರೀಂ ಕೋರ್ಟ್ ಜಡ್ಜ್ ನೇಮಕಕ್ಕೆ ಶಿಫಾರಸು

    ಮೆಟ್ರೋ ರೈಲು ಯೋಜನೆ ಹಿನ್ನೆಲೆಯಲ್ಲಿ ಮುಖ್ಯರಸ್ತೆಯ ಬಹುತೇಕ ಭಾಗ ಕಾಮಗಾರಿ ಉದ್ದೇಶಕ್ಕೆ ಬಳಕೆಯಾಗುತ್ತಿದ್ದು, ವಾಹನಗಳು ಸುಗಮವಾಗಿ ಸಾಗಲು ಸಾಧ್ಯವಾಗದೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

  • ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

    ಎಕ್ಸ್‌ಪ್ರೆಸ್‌ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಉರುಳಿದ ಕಾರು

    – ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯ

    ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Expressway) ನಿಯಂತ್ರಣ ತಪ್ಪಿದ ಕಾರೊಂದು (Car) ಡಿವೈಡರ್‌ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ (Service Road) ಉರುಳಿ ಬಿದ್ದ ಘಟನೆ ಚನ್ನಪಟ್ಟಣ (Channapatna) ತಾಲೂಕಿನ ಚೋಳಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಮೈಸೂರು (Mysuru) ಕಡೆಯಿಂದ ಬೆಂಗಳೂರು (Bengaluru) ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಸರ್ವಿಸ್ ರಸ್ತೆಗೆ ಉರುಳಿಬಿದ್ದ ಕಾರು, ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಕೇರಳ ಮೂಲದ ಕುಟುಂಬಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕೋಟಿ ಕೋಟಿ ಮೌಲ್ಯದ 5,13,400 ಸಿಗರೇಟ್‌ ಸೀಜ್‌

    ಇನ್ನು ಅದೇ ಮಾರ್ಗದಲ್ಲಿ ಬರುತ್ತಿದ್ದ ಮೈಸೂರಿನ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ (MK Somashekar) ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಅಂಬುಲೆನ್ಸ್ ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

  • ಬೊಮ್ಮಸಂದ್ರದಲ್ಲಿ ಸರಣಿ ಅಪಘಾತ – ದ್ವಿಚಕ್ರ ವಾಹನ ಸವಾರರಿಗೆ ಗಾಯ

    ಬೊಮ್ಮಸಂದ್ರದಲ್ಲಿ ಸರಣಿ ಅಪಘಾತ – ದ್ವಿಚಕ್ರ ವಾಹನ ಸವಾರರಿಗೆ ಗಾಯ

    – ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

    ಬೆಂಗಳೂರು: ಇನ್ನೋವಾ ಕಾರೊಂದು ಗೂಡ್ಸ್ ಆಟೋ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ (Serial Accident) ಉಂಟಾದ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಬೊಮ್ಮಸಂದ್ರ (Bommasandra) ಸರ್ವಿಸ್ ರಸ್ತೆಯಲ್ಲಿ (Service Road) ನಡೆದಿದೆ.

    ಇನ್ನೋವಾ ಕಾರು ಬೆಂಗಳೂರು (Bengaluru) ಕಡೆಯಿಂದ ಚಂದಾಪುರ ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಮುಂದೆ ಬರುತ್ತಿದ್ದ ಗೂಡ್ಸ್ ಆಟೋ, ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಜಮ್ಮು, ಕಾಶ್ಮೀರದಲ್ಲಿ ಪ್ರವಾಹ- ಐವರ ದುರ್ಮರಣ

    ಘಟನೆಯಿಂದ ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್ ಮುರಿದು ಬಿದ್ದು ವಾಹನಗಳು ಜಖಂ ಆಗಿದ್ದು, ದ್ವಿಚಕ್ರ ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಅಪಘಾತ ಹಿನ್ನೆಲೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ 9 ಮಂದಿ ನಕ್ಸಲರ ಹತ್ಯೆ

  • ದಶಪಥ ಹೆದ್ದಾರಿಯಲ್ಲಿ ಮತ್ತೆ ಮಳೆ ಅವಾಂತರ – ಸಾಧಾರಣ ಮಳೆಗೆ ಕೆರೆಯಂತಾದ ಸರ್ವಿಸ್ ರಸ್ತೆ

    ದಶಪಥ ಹೆದ್ದಾರಿಯಲ್ಲಿ ಮತ್ತೆ ಮಳೆ ಅವಾಂತರ – ಸಾಧಾರಣ ಮಳೆಗೆ ಕೆರೆಯಂತಾದ ಸರ್ವಿಸ್ ರಸ್ತೆ

    ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Expressway) ಅವೈಜ್ಞಾನಿಕ ಕಾಮಗಾರಿ ಎಂಬ ಆರೋಪಕ್ಕೆ ಪುಷ್ಠಿ ನೀಡುವಂತೆ ಸಾಧಾರಣ ಮಳೆಗೆ ಹೆದ್ದಾರಿಯ ಸರ್ವಿಸ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಇಂದು (ಶನಿವಾರ) ಸಂಜೆ ಸುರಿದ ಮಳೆಯಿಂದಾಗಿ (Rain) ಸರ್ವಿಸ್ ರಸ್ತೆ (Service Road) ಕೆರೆಯಂತಾಗಿ ವಾಹನ ಸವಾರರು ಪರದಾಡಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಪ್ರತಿಬಾರಿ ಮಳೆಬಂದಾಗಲೂ ಅವ್ಯವಸ್ಥೆಯ ಆಗರವಾಗುವ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಮತ್ತೆ ಜಲಾವೃತವಾಗಿ ಅವೈಜ್ಞಾನಿಕ ಕಾಮಗಾರಿಗೆ ಕನ್ನಡಿ ಹಿಡಿದಿದೆ. ಶುಕ್ರವಾರ ಸುರಿದ ಸಾಧಾರಣ ಮಳೆಯಿಂದಾಗಿ ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕೆರೆಯಂತಾಗಿದೆ. ರಾಮನಗರ (Ramanagara) ಸಮೀಪದ ಕೆಂಪನಹಳ್ಳಿ ಗೇಟ್‌ನಿಂದ, ಕಲ್ಲುಗೋಪಹಳ್ಳಿ, ದಾಸಪ್ಪನದೊಡ್ಡಿ ಬಳಿ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದ್ವಿಚಕ್ರ ಹಾಗೂ ಇತರ ಸಣ್ಣಪುಟ್ಟ ವಾಹನಗಳು ರಸ್ತೆ ದಾಟಲಾಗದೇ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದನ್ನೂ ಓದಿ: ಹೆಣ್ಣುಮರಿಗೆ ಜನ್ಮ ನೀಡಿದ ಸಕ್ರೆಬೈಲಿನ ಭಾನುಮತಿ ಆನೆ

    ಬೆಂಗಳೂರು-ಮೈಸೂರು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾದಾಗಿನಿಂದಲೂ ಇದೇ ಸಮಸ್ಯೆ ಇದೆ. ಕಳೆದ ವರ್ಷ ಮಳೆಗಾಲದಲ್ಲಿ ಭಾರೀ ಪ್ರಮಾಣದ ನೀರು ಹೆದ್ದಾರಿ ಮತ್ತು ಸರ್ವಿಸ್ ರಸ್ತೆ ಎರಡೂ ಕಡೆ ನೀರು ನಿಂತು, ವಾಹನಗಳು ಸಹ ಜಲಾವೃತಗೊಂಡಿದ್ದವು. ಇದೀಗ, ಅಕಾಲಿಕ ಮಳೆಗೆ ಸರ್ವಿಸ್ ರಸ್ತೆಯಲ್ಲಿ ನೀರು ನಿಂತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ವಿಸ್ ರಸ್ತೆ ಸಂಪೂರ್ಣ ಅವೈಜ್ಞಾನಿಕ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕನಕಪುರ ಪೊಲೀಸರ ಕಾರ್ಯಾಚರಣೆ – ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ

    ಒಟ್ಟಾರೆ ಪ್ರತಿಬಾರಿ ಮಳೆ ಬಂದಾಗಲೂ ಸರ್ವಿಸ್ ರಸ್ತೆಯ ಸಂಚಾರ ಅಪಾಯಕ್ಕೆ ಆಹ್ವಾನ ನೀಡುತ್ತದೆ. ದುಬಾರಿ ಟೋಲ್ ವಸೂಲಿ ಮಾಡೋ ಹೆದ್ದಾರಿ ಪ್ರಾಧಿಕಾರ ಸರ್ವಿಸ್ ರಸ್ತೆಯನ್ನು ಸಂಪೂರ್ಣ ಮರೆತಂತಿದೆ. ಇದನ್ನೂ ಓದಿ: ಆಸ್ತಿ ವಿವಾದಕ್ಕೆ ಅಣ್ಣನ ಮಗನನ್ನು ಗುಂಡಿಟ್ಟು ಕೊಂದ ಚಿಕ್ಕಪ್ಪ

  • ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ಹೈವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ

    ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ಹೈವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ

    – ಸರ್ವಿಸ್ ರಸ್ತೆ ಬಳಕೆಗೆ ಅವಕಾಶ

    ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಅಪಘಾತ ಪ್ರಕರಣ ಹೆಚ್ಚಳ ಹಿನ್ನೆಲೆ ಅಪಘಾತಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಬೈಕ್, ಆಟೋ, ಟ್ರ್ಯಾಕ್ಟರ್‌ಗಳು ಮಂಗಳವಾರದಿಂದ ಸರ್ವಿಸ್ ರಸ್ತೆಯಲ್ಲೇ (Service Road) ಸಂಚಾರ ಮಾಡಬೇಕಾಗಿದೆ.

    ಮೋಟಾರು ವಾಹನ ಕಾಯ್ದೆ 2002ರ ಅನ್ವಯ ಹೆದ್ದಾರಿ ಪ್ರಾಧಿಕಾರವು ಜುಲೈ 12ರಂದೇ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ವೇಗೆ ಹೊಸ ನಿಯಮ ಅನ್ವಯವಾಗಲಿದೆ. ಮಂಗಳವಾರದಿಂದ ಬೈಕ್, ಆಟೋ, ಇ-ಕಾರ್ಟ್, ಮೋಟಾರ್ ರಹಿತ ವಾಹನಗಳು, ಟ್ರ್ಯಾಕ್ಟರ್‌ಗಳು, ಕೃಷಿ ಯಂತ್ರಗಳು, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ವಾಹನಗಳು, ಕ್ವಾಡ್ರಿ ಸೈಕಲ್‌ಗಳು ಹೆದ್ದಾರಿಯಲ್ಲಿ ಸಂಚರಿಸುವಂತಿಲ್ಲ. ಬದಲಿಗೆ ಸರ್ವಿಸ್ ರಸ್ತೆಯಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ನಿಯಮ ಉಲ್ಲಂಘಿಸಿ ಹೆದ್ದಾರಿ ಪ್ರವೇಶ ಮಾಡಿದರೆ ಪೊಲೀಸ್ ಇಲಾಖೆ ದುಬಾರಿ ದಂಡ (Penalty) ವಿಧಿಸುವ ಕುರಿತು ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: 2 ದಿನಗಳ ಕಾಲ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ

    ಇನ್ನೂ ಹೆದ್ದಾರಿ ಪ್ರಾಧಿಕಾರದ ನಡೆಗೆ ವಾಹನ ಸವಾರರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಸರ್ವಿಸ್ ರಸ್ತೆ ಸಮರ್ಪಕವಾಗಿ ನೀಡದೇ ದ್ವಿಚಕ್ರ ವಾಹನಕ್ಕೆ ನಿಷೇಧ ಮಾಡಿರುವುದು ಸರಿಯಲ್ಲ. ಹಲವು ಕಡೆಗಳಲ್ಲಿ ಸರ್ವಿಸ್ ರಸ್ತೆ ಕಾಮಗಾರಿ ಮುಗಿದಿಲ್ಲ. ಬೇಕಾದರೆ ಕಾರ್‌ನಂತೆ ಬೈಕ್‌ಗಳಿಗೂ ಟೋಲ್ ನಿಗದಿ ಮಾಡಿ. ಸ್ಪೀಡ್ ಲಿಮಿಟ್ ಹಾಗೂ ಟ್ರ‍್ಯಾಕ್ ಗುರುತು ಮಾಡಿ ಬೈಕ್ ಸಂಚರಿಸಲು ಅವಕಾಶ ನೀಡಿ ಎಂದು ಕೆಲವರು ಮನವಿ ಮಾಡಿದ್ದಾರೆ. ಮತ್ತೆ ಕೆಲವರು ಹೆದ್ದಾರಿ ಪ್ರಾಧಿಕಾರದ ನಿರ್ಧಾರವನ್ನು ಸ್ವಾಗತಿಸಿದ್ದು, ಅಪಘಾತ ತಡೆಯಲು ಬೈಕ್ ನಿಷೇಧ ಉತ್ತಮ ಕ್ರಮ ಎಂದಿದ್ದಾರೆ. ಇದನ್ನೂ ಓದಿ: ಮತ್ತೆ ಟೊಮೆಟೋ ದರ ಭಾರೀ ಏರಿಕೆ – ಗ್ರಾಹಕರು ಕಂಗಾಲು

    ಒಟ್ಟಾರೆ ಆಗಸ್ಟ್ 1ರಿಂದ ದಶಪಥ ಹೆದ್ದಾರಿಗೆ ಹೊಸ ನಿಯಮ ಅನ್ವಯವಾಗಲಿದ್ದು ಬೈಕ್ ಹಾಗೂ ಆಟೋ ಸರ್ವಿಸ್ ರಸ್ತೆ ಬಳಸಬೇಕಿದೆ. ನಿಯಮ ಉಲ್ಲಂಘಿಸಿದರೆ ದುಬಾರಿ ದಂಡ ತೆರಬೇಕಾಗುತ್ತದೆ. ಇದನ್ನೂ ಓದಿ: ಮೂವರಿಂದ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಆರೋಪಿಗಳು ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]