Tag: Seshadripuram

  • ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿ ಒಂದು ಕೋಟಿಗೆ ಡಿಮ್ಯಾಂಡ್ – ತಿಹಾರ್‌ ಜೈಲಲ್ಲಿ ಫ್ರೆಂಡ್ಸ್‌ ಆಗಿದ್ದ ಗ್ಯಾಂಗ್‌ ಅಂದರ್‌!

    ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿ ಒಂದು ಕೋಟಿಗೆ ಡಿಮ್ಯಾಂಡ್ – ತಿಹಾರ್‌ ಜೈಲಲ್ಲಿ ಫ್ರೆಂಡ್ಸ್‌ ಆಗಿದ್ದ ಗ್ಯಾಂಗ್‌ ಅಂದರ್‌!

    ಬೆಂಗಳೂರು: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರಲ್ಲಿ ಉದ್ಯಮಿಗೆ ಬೆದರಿಕೆ ಹಾಕಿದ್ದ ನಾಲ್ವರನ್ನು ಶೇಷಾದ್ರಿಪುರಂ (Seshadripuram) ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಬೆಂಗಳೂರಿನ (Bengaluru) ಮಹಮ್ಮದ್ ರಫಿಕ್, ಉತ್ತರ ಪ್ರದೇಶದ ಶಿಶುಪಾಲ್ ಸಿಂಗ್, ವನ್ಷ್ ಸಚ್ ದೇವ್ ಮತ್ತು ಅಮಿತ್ ಚೌಧರಿ ಎಂದು ಗುರುತಿಸಲಾಗಿದೆ. ಜು.9 ರಂದು ಆರೋಪಿಗಳು ಉದ್ಯಮಿ ರಿಕಬ್ ಚಂದ್ ಸಿಂಘ್ವಿಗೆ ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ಕರೆ ಮಾಡಿ ಒಂದು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ರೆ ನಿನ್ನ ಮಗುವನ್ನು ಅಪಹರಿಸುತ್ತೇವೆ ಎಂದು ಬೆದರಿಕೆ ಹಾಕಲಾಗಿರುತ್ತದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಸ್ಟಂಟ್‌ಮೆನ್ ಸಾವು – ಚಿತ್ರನಿರ್ದೇಶಕ ಪ.ರಂಜಿತ್ ವಿರುದ್ಧ ಎಫ್‌ಐಆರ್

    ಬೆದರಿಕೆ ಕರೆ ಬಗ್ಗೆ ಉದ್ಯಮಿ ರಿಕಬ್ ಚಂದ್ ಸಿಂಘ್ವಿ ಶೇಷಾದ್ರಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕರೆ ಜಾಡು ಹಿಡಿದು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಒಂದು ತಂಡ ಕೆಲಸ ಮಾಡಿದ್ರೆ ಸಿಸಿಬಿ ಡಿಸಿಪಿ 2 ರಾಜ ಇಮಾಮ್ ಖಾಸಿಮ್ ನೇತೃತ್ವದಲ್ಲಿ ಒಂದು ತಂಡ ಕೆಲಸ ಮಾಡಿ 48 ಗಂಟೆಯಲ್ಲೇ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.

    ಆರೋಪಿಗಳು ತಿಹಾರ್ ಜೈಲಿನಲ್ಲಿದ್ದಾಗ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ಈ ವೇಳೆ ಕೆಲವೊಮ್ಮೆ ಲಾರೆನ್ಸ್ ಬಿಷ್ಣೋಯಿಯನ್ನು ನೋಡಿದ್ದರು. ಇನ್ನೂ ಆರೋಪಿಗಳ ಬಳಿ ಗನ್ ಕೂಡ ಸಿಕ್ಕಿದ್ದು, ಆರೋಪಿ ರಫೀಕ್ ಹಾಗೂ ದೂರುದಾರನಿಗೆ ಹಣದ ವ್ಯವಹಾರದಲ್ಲಿ ಇಬ್ಬರಿಗೂ ಮನಸ್ತಾಪ ಆಗಿದ್ದು, ಇದೇ ವಿಚಾರಕ್ಕೆ ಸಂಚು ಮಾಡಿ ರಫೀಕ್ ಒಂದು ಕೋಟಿ ಹಣ ಪಡೆಯಲು ಈ ರೀತಿ ಮಾಡಿದ್ದಾಗಿ ತಿಳಿದು ಬಂದಿದೆ. ಸದ್ಯ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪ ಕೇಸ್‌ – ಪರಸ್ಪರ ವಿಚ್ಛೇದನಕ್ಕೆ ಮುಂದಾದ ದಂಪತಿ

  • ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್ ವಿರುದ್ಧ ದೂರು

    ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್ ವಿರುದ್ಧ ದೂರು

    ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ (Chetan) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಟ ಚೇತನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ನಾಡಪ್ರಭು ಕೆಂಪೇಗೌಡರ (Kempegowda) ವಿರುದ್ಧ ಅವಮಾನ ಮಾಡುವಂತಹ ಪೋಸ್ಟ್ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ವಕೀಲ ಆರ್.ಎಲ್.ಎನ್ ಮೂರ್ತಿ ಎನ್ನುವವರು ಶೇಷಾದ್ರಿ ಪುರಂ (Seshadripuram) ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು (complaint) ನೀಡಿದ್ದಾರೆ.

    ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಚೇತನ್ ಬರೆದಿದ್ದರು.

    ಈ ಟ್ವೀಟ್ ಅನ್ನು ಆಧರಿಸಿ ಮೂರ್ತಿ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು ದಾಖಲಿಸಿದ್ದಾರೆ. ಚೇತನ್ ನೇರ ನಿಷ್ಠುರದ ಕಾರಣದಿಂದಾಗಿ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತಾರೆ. ಇಂತಹ ವಿಚಾರಗಳಿಗಾಗಿ ಹಲವಾರು ಬಾರಿ ಇವರ ಮೇಲೆ ದೂರುಗಳು ದಾಖಲಾಗಿವೆ.