Tag: session

  • ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಿ: ಯತೀಂದ್ರ

    ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಿ: ಯತೀಂದ್ರ

    ಬೆಂಗಳೂರು: ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಬೇಕು ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah)  ಮನವಿ ಮಾಡಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಚರ್ಚಿಸಿದ ಅವರು, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮತ್ತೆ ಜಾರಿ ಮಾಡಬೇಕು. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಯೋಜನೆಯಡಿ 1 ಲಕ್ಷ ರೂ.ನಲ್ಲಿ 20 ಕುರಿ ಅಥವಾ ಮೇಕೆ ತೆಗೆದುಕೊಳ್ಳುವ ಯೋಜನೆ ಇದಾಗಿದೆ. 20 ಕುರಿ, ಮೇಕೆಗೆ ಹಣ ಕೊಡಲು ಆಗದೇ ಹೋದರೆ 10 ಕುರಿ ಅಥವಾ ಮೇಕೆಗೆ ಆದರೂ ರಾಜ್ಯ ಸರ್ಕಾರವೇ ಹಣ ಕೊಟ್ಟು ಯೋಜನೆ ಪ್ರಾರಂಭ ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಗಂಗಾ ಕಲ್ಯಾಣ ಗದ್ದಲ – ಡಿಕೆಶಿ ಕರ್ಮ ಕಳೆಯಲು ಗಂಗಾಸ್ನಾನ: ಅಶೋಕ್

    ಇದಕ್ಕೆ ಸಚಿವ ವೆಂಕಟೇಶ್ ಪ್ರತಿಕ್ರಿಯಿಸಿ, ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಲ್ಲಿ ಫಲಾನುಭವಿಗಳು ಹಣ ಮರುಪಾವತಿ ಮಾಡಿರಲಿಲ್ಲ. ಹೀಗಾಗಿ ಆರ್ಥಿಕ ಇಲಾಖೆ ಯೋಜನೆ ಸ್ಥಗಿತ ಮಾಡಲು ಸೂಚನೆ ಕೊಟ್ಟಿತ್ತು. ಹೀಗಾಗಿ ಯೋಜನೆ ರದ್ದು ಮಾಡಿದ್ದೇವೆ. ಯೋಜನೆ ಮತ್ತೆ ಪ್ರಾರಂಭ ಮಾಡಲು ಸಿಎಂ ಅವರಿಗೆ ಮನವಿ ಮಾಡಿದ್ದೇವೆ. ಸಿಎಂ ಒಪ್ಪಿಗೆ ಕೊಟ್ಟರೆ ಯೋಜನೆ ಮತ್ತೆ ಪ್ರಾರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: 40 ಬಾರಿ ದುಬೈಗೆ ಹೋಗಿದ್ದ ರನ್ಯಾ ಅಧಿಕಾರಿಗಳ ಬಲೆಗೆ ಬಿದ್ದಿದ್ದೆ ರೋಚಕ

  • ಶಾಸಕರಿಗಾಗಿ ವಿಧಾನಸೌಧಕ್ಕೆ ಬಂತು ರಿಕ್ಲೈನರ್‌, ಮಸಾಜ್ ಚೇರ್‌ಗಳು – ಬೆಲೆ ಎಷ್ಟು?

    ಶಾಸಕರಿಗಾಗಿ ವಿಧಾನಸೌಧಕ್ಕೆ ಬಂತು ರಿಕ್ಲೈನರ್‌, ಮಸಾಜ್ ಚೇರ್‌ಗಳು – ಬೆಲೆ ಎಷ್ಟು?

    ಬೆಂಗಳೂರು: ಮಂಗಳವಾರದಿಂದ ವಿಧಾನಸೌಧದ (Vidhana Soudha) ಲಾಂಜ್‌ನಲ್ಲಿ ಶಾಸಕರಿಗೆ 17 ಆರಾಮ ಆಸನಗಳ ಸೌಲಭ್ಯ ಸಿಗಲಿದೆ.

    ಸ್ಪೀಕರ್‌ ಯುಟಿ ಖಾದರ್‌ (Speaker UT Khader) ಆದೇಶದಂತೆ ವಿಧಾನಸಭೆಯ ಮೊಗಸಾಲೆಯಲ್ಲಿ 15 ರಿಕ್ಲೈನರ್‌ (Recliner Chair) ಮತ್ತು 2 ಮಸಾಜ್ ಚೇರ್‌ಗಳನ್ನು (Massage Chair) ವಿಧಾನಸಭೆ ಸಚಿವಾಲಯ ಅಳವಡಿಸಿದೆ.

    ಈ ಚೇರ್‌ಗಳನ್ನು ಬಾಡಿಗೆಗೆ ತರಲಾಗಿದೆ. 1 ರಿಕ್ಲೈನರ್‌ ಚೇರ್‌ಗೆ ದಿನಕ್ಕೆ 1,200 ರೂ. ಇದ್ದರೆ 1 ಮಸಾಜ್ ಚೇರ್‌ಗೆ 10 ಸಾವಿರ ರೂ. ದರ ನಿಗದಿ ಮಾಡಲಾಗಿದೆ. 15 ದಿನದಲ್ಲಿ ಇದಕ್ಕೆಂದು 5.70 ಲಕ್ಷ ರೂಪಾಯಿ ವೆಚ್ಚ ಮಾಡಲಿದೆ. ಇದನ್ನೂ ಓದಿ: ಶಾಸಕರ ಸಂಬಳ ಹೆಚ್ಚಳಕ್ಕೆ ತೀರ್ಮಾನ – ಈಗ ಎಷ್ಟಿದೆ? ಎಷ್ಟು ಏರಿಕೆ ಆಗುತ್ತೆ?

     

    ವಿಧಾನಭೆಯ ಸ್ಪೀಕರ್‌ ಯುಟಿ ಖಾದರ್‌ ಅವರು ವಿಧಾನಸಭೆ ಅಧಿವೇಶನದಲ್ಲಿ ಮಧ್ಯಾಹ್ನದ ಬಳಿಕ ಶಾಸಕರ ಹಾಜರಾತಿ ಕಡಿಮೆ ಇರುತ್ತದೆ. ಅವರು ಕೆಲ ಕಾಲ ವಿಶ್ರಾಂತಿ ಪಡೆದು ಕಲಾಪಕ್ಕೆ ಹಾಜರಾಗಿ ಸದನಕ್ಕೆ ಹಾಜರಾಗುವಂತೆ ಮಾಡಲು ರಿಕ್ಲೈನರ್‌ ಕುರ್ಚಿಗಳನ್ನು ಬಾಡಿಗೆ ಪಡೆಯುವ ತೀರ್ಮಾನವನ್ನು ಕೈಗೊಂಡಿದ್ದರು.

    ಈ ಬಗ್ಗೆ ಖಾದರ್‌ ಪ್ರತಿಕ್ರಿಯಿಸಿ, ಶಾಸಕರಾಗಿ ಶಾಸಕರಿಗೆ ಸೌಲಭ್ಯಗಳನ್ನು ಒದಗಿಸುವುದು ನನ್ನ ಜವಾಬ್ದಾರಿ. ರೆಕ್ಲೈನರ್ ಕುರ್ಚಿ ಐಷಾರಾಮಿ ಅಲ್ಲ, ಅದು ಅವಶ್ಯಕತೆಯಾಗಿದೆ. ಎಲ್ಲಾ ಶಾಸಕರು ಚಿಕ್ಕವರಲ್ಲ ಮತ್ತು ಎಲ್ಲರೂ ಆರೋಗ್ಯವಂತರಲ್ಲ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು. ಟೀಕಿಸುವವರು ಶಾಸಕರು ಅಥವಾ ಸಂಸದರನ್ನು ಶತ್ರುಗಳಂತೆ ನೋಡಬಾರದು, ಅವರನ್ನು ತಮ್ಮ ಕುಟುಂಬದ ಸದಸ್ಯರಂತೆ ನೋಡಿಕೊಳ್ಳಬೇಕು. ಬಿಜೆಪಿ ಶಾಸಕರಿಂದಲೂ ಈ ಬೇಡಿಕೆ ಬಂದಿತ್ತು ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

     

  • ದ್ರೌಪದಿ ಮುರ್ಮುಗೆ Poor Lady ಎಂದ ಸೋನಿಯಾ – ಮುಗಿಬಿದ್ದ ಬಿಜೆಪಿ ನಾಯಕರು

    ದ್ರೌಪದಿ ಮುರ್ಮುಗೆ Poor Lady ಎಂದ ಸೋನಿಯಾ – ಮುಗಿಬಿದ್ದ ಬಿಜೆಪಿ ನಾಯಕರು

    ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ (Sonia Gandhi) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಬಗ್ಗೆ ಮಾತನಾಡಿದ ಒಂದು ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

    ಬಜೆಟ್‌ ಅಧಿವೇಶನದ (Union Budget Session) ಮುನ್ನ ದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿದರು.

    ರಾಷ್ಟ್ರಪತಿಗಳ ಭಾಷಣ ಮುಕ್ತಾಯದ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಮಾಧ್ಯಮಗಳು ಮಾತನಾಡಿಸಿವೆ. ಇದನ್ನೂ ಓದಿ: Economic Survey 2025| ಜಿಡಿಪಿ 6.3-6.8% ನಿರೀಕ್ಷೆ – ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? ಯಾವ ವಲಯದ ಸಾಧನೆ ಎಷ್ಟಿದೆ?

    ಈ ವೇಳೆ ಸೋನಿಯಾ ಗಾಂಧಿ, Poor Lady, ಭಾಷಣ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಹುಲ್‌ ಗಾಂಧಿ ಭಾಷಣ ತುಂಬಾ ಬೋರ್‌ ಆಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


    ಸೋನಿಯಾ ಗಾಂಧಿ ದ್ರೌಪತಿ ಮುರ್ಮು ಅವರನ್ನು Poor Lady ಎಂದು ಕರೆದಿದ್ದಕ್ಕೆ ಬಿಜೆಪಿ (BJP) ನಾಯಕರು ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದಿದ್ದಾರೆ. ಬುಡಕಟ್ಟು ಮಹಿಳೆ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ್ದನ್ನು ಸಹಿಸಲು ಕಾಂಗ್ರೆಸ್‌ಗೆ ಆಗುತ್ತಿಲ್ಲ. ಕೂಡಲೇ ಸೋನಿಯಾ ಗಾಂಧಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

  • ಬೆಳಗಾವಿ ಅಧಿವೇಶನ- ಒಂದೇ ದಿನ 15 ಗಂಟೆ ವಿಧಾನಸಭಾ ಕಲಾಪ

    ಬೆಳಗಾವಿ ಅಧಿವೇಶನ- ಒಂದೇ ದಿನ 15 ಗಂಟೆ ವಿಧಾನಸಭಾ ಕಲಾಪ

    – ಬೆಳಗ್ಗೆ 10:40ಕ್ಕೆ ಆರಂಭ ಮಧ್ಯರಾತ್ರಿ 12:53ಕ್ಕೆ ಅಂತ್ಯ

    ಬೆಳಗಾವಿ: ಸೋಮವಾರ ಸುವರ್ಣ ಸೌಧದಲ್ಲಿ (Suvarna Soudha) ನಡೆದ ವಿಧಾನಸಭಾ (Vidhasbaha) ಕಲಾಪ ಬಹುತೇಕ 15 ಗಂಟೆಗಳ ಕಾಲ ನಡೆದಿದೆ. ಬೆಳಗ್ಗೆ 10:40ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 12.53ರವರೆಗೆ ನಡೆಯಿತು. ಮಧ್ಯ ರಾತ್ರಿ 1 ಗಂಟೆವರೆಗೆ ವರೆಗೆ ಒಟ್ಟಾಗಿ ಸ್ಪೀಕರ್ ಹಾಗೂ ಡೆಪ್ಯೂಟಿ ಸ್ಪೀಕರ್ ಕಲಾಪ ನಡೆಸಿದರು.

    ಬೆಳಗಾವಿಯಲ್ಲಿ 10 ದಿನಗಳ ಕಾಲ ನಡೆಯಬೇಕಿದ್ದ ಅಧಿವೇಶನ ಕನ್ನಡಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ 9 ದಿನಕ್ಕೆ ಮೊಟಕುಗೊಳಿಸಲಾಗಿದೆ. ಇದರ ಜೊತೆ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನದಿಂದಾಗಿ ಕಳೆದ ಮಂಗಳವಾರ ಇಡೀ ದಿನ ಸಂತಾಪ ಸೂಚನೆಗೆ ಮಾತ್ರ ಸೀಮಿತವಾಗಿತ್ತು. ಬುಧವಾರ ಸರ್ಕಾರಿ ರಜೆ ಘೋಷಣೆಯಿಂದಾಗಿ ಕಲಾಪ ನಡೆಯಲಿಲ್ಲ. ಹೀಗಾಗಿ ಅಧಿವೇಶನ 8 ದಿನಕ್ಕೆ ಇಳಿಕೆಯಾಗಿತ್ತು.

    ವಿಧಾನಸಭೆಯ ಕಲಾಪವನ್ನು ಪೂರ್ಣಗೊಳಿಸುವ ಉದ್ದೇಶದಿಂದಾಗಿ ಕಳೆದ ಗುರುವಾರ ರಾತ್ರಿ 10:15ರವರೆಗೆ ನಡೆಸಲಾಗಿತ್ತು. ಸೋಮವಾರ ಈ ಅವಧಿಯನ್ನೂ ಮೀರಿ ಬೆಳಗ್ಗೆ 10: 40ಕ್ಕೆ ಆರಂಭವಾದ ಕಲಾಪ ಮಧ್ಯರಾತ್ರಿ 12:53 ವರೆಗೂ ನಡೆಸಲಾಯಿತು. ಮಧ್ಯಾಹ್ನ ಭೋಜನ ವಿರಾಮ ಮತ್ತು ಸಂಜೆ ಕಲಾಪದಲ್ಲಿ ನಡೆದ ಗದ್ದಲದಿಂದಾಗಿ 30 ನಿಮಿಷ ಕಲಾಪ ಮುಂದೂಡಿಕೆಯಾಗಿದ್ದು ಬಿಟ್ಟರೆ ದಿನದಲ್ಲಿ 12 ಗಂಟೆ ಕಲಾಪ ನಡೆಯಿತು. ಇದನ್ನೂ ಓದಿ: ಹಾವು ಕಡಿತಕ್ಕೆ ಮುಕ್ತಿ ನೀಡಲು ಸರ್ಕಾರ ಬದ್ಧ – ಚಿಕಿತ್ಸಾ ವ್ಯವಸ್ಥೆ ಸಮಪರ್ಕ ಜಾರಿಗೆ ರಾಜ್ಯಗಳಿಗೆ ಸೂಚನೆ!

    ಕೆಲ ಶಾಸಕರು ಕಲಾಪದಿಂದ ಹೊರಗು ತೆರಳಲು ಮುಂದಾದಾಗ ಸ್ಪೀಕರ್‌ ಅರ್ಧಗಂಟೆಯಲ್ಲಿ ಮುಗಿಯುತ್ತದೆ ಎಂದು ಹೇಳಿ ಕೂರಿಸುತ್ತಿದ್ದರು. ಅಧ್ಯಕ್ಷರೇ ಬಹಳ ಸಮಯ ಆಯ್ತು ಎಂದು ಕೆಲ ಶಾಸಕರು ಹೇಳಿದಾಗ, ಕ್ರಿಕೆಟ್‌ ಪಂದ್ಯ ಇದ್ದಾಗ ರಾತ್ರಿಯವರೆಗೆ ನೀವು ಕುಳಿತು ವೀಕ್ಷಣೆ ಮಾಡುತ್ತೀರಿ ಅಲ್ವೇ? ಅದೇ ರೀತಿಯಾಗಿ ಇಲ್ಲೂ ಕುಳಿತುಕೊಳ್ಳಿ ಎಂದು ಹೇಳಿ ಸಮ್ಮನಾಗಿಸುತ್ತಿದ್ದರು.

    ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಶಾಸಕರು ಬೆಂಬಲ ನೀಡಿದ್ದರಿಂದ ಕಲಾಪ ಮಧ್ಯರಾತ್ರಿಯವರೆಗೂ ನಡೆಯಿತು.

     

  • ನಬಾರ್ಡ್ ನೆರವು ಕಡಿತದಿಂದ ರೈತರಿಗೆ ಸಂಕಷ್ಟ – ಜಿ.ಕುಮಾರ್ ನಾಯಕ್ ಕಳವಳ

    ನಬಾರ್ಡ್ ನೆರವು ಕಡಿತದಿಂದ ರೈತರಿಗೆ ಸಂಕಷ್ಟ – ಜಿ.ಕುಮಾರ್ ನಾಯಕ್ ಕಳವಳ

    ನವದೆಹಲಿ: ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ಕರ್ನಾಟಕಕ್ಕೆ ಒದಗಿಸಿರುವ ನಬಾರ್ಡ್ (NABARD) ನೆರವು ಕಡಿತಗೊಳಿಸಿರುವುದರಿಂದ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ತುರ್ತು ಗಮನ ಹರಿಸಬೇಕು ಎಂದು ರಾಯಚೂರು (Raichuru) ಸಂಸದ ಜಿ.ಕುಮಾರ್ ನಾಯಕ್ (G Kumar Naik) ಕಳವಳ ವ್ಯಕ್ತಪಡಿಸಿದರು.

    ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಹಣಕಾಸು ಸಚಿವರಿಗೆ ಸೋಮವಾರ ಪ್ರಶ್ನೆ ಕೇಳಿದ ಅವರು, ರಾಷ್ಟ್ರೀಕೃತ ಬ್ಯಾಂಕ್‌ಗಳು ನಗರ ಪ್ರದೇಶದ ಜನರಿಗೆ ಹೆಚ್ಚು ಸಾಲ ಕೊಡುತ್ತವೆ. ಅವುಗಳ ಬಡ್ಡಿ ದರ ಹೆಚ್ಚು ಇರುತ್ತವೆ. ಆದರೆ, ಕೃಷಿಕರಿಗೆ ಸಾಲ ನೀಡಲು ಹಿಂದೇಟು ಹಾಕುತ್ತವೆ. ನಬಾರ್ಡ್ ನೆರವು ಕಡಿತದಿಂದ ಕಲ್ಯಾಣ ಕರ್ನಾಟಕ, ಅಭಿವೃದ್ಧಿ ಆಕಾಂಕ್ಷಿ ಹಾಗೂ ಹಿಂದುಳಿದ ಜಿಲ್ಲೆಗಳ ರೈತರಿಗೆ ಭಾರಿ ತೊಂದರೆ ಆಗಿದೆ ಎಂದು ಗಮನಸೆಳೆದರು.ಇದನ್ನೂ ಓದಿ: PUBLiC TV Impact | ಬಾಣಂತಿಯರ ಸಾವಿನ ವರದಿ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ – ಆಸ್ಪತ್ರೆಗೆ ಅಧಿಕಾರಿಗಳು ಭೇಟಿ

    2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರವು 35 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ. ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿ ಹೊಂದಿದೆ. 2023-24ರಲ್ಲಿ ರಾಜ್ಯಕ್ಕೆ ನಬಾರ್ಡ್ 5,600 ಕೋಟಿ ರೂ. ಸಾಲ ಕೊಟ್ಟಿತ್ತು. ಈ ವರ್ಷ ಅದನ್ನು 2400 ಕೋಟಿ ರೂ.ಗೆ ಇಳಿಸಲಾಗಿದೆ. ಸಣ್ಣ ರೈತರಿಗೆ ಸಾಲ ಸಿಗದ ಸ್ಥಿತಿ ನಿರ್ಮಾಣವಾಗಿದೆ ಎಂದರು.

    ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಉತ್ತರಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಈ ಪ್ರಕ್ರಿಯೆ ಸುಗಮವಾಗಿ ನಡೆಯುತ್ತಿದೆ. ಸಣ್ಣ ರೈತರ ಉನ್ನತಿಗೆ ಸರ್ಕಾರ ಗಮನ ಹರಿಸಿದೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ‘ಯುಐ’ ಚಿತ್ರದ ಭಾಗವಾಗಿರೋದು ನನ್ನ ಅದೃಷ್ಟ: ನಿಧಿ ಸುಬ್ಬಯ್ಯ

  • ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ – ಅದಾನಿ ಹಗರಣ, ವಕ್ಫ್, ಮಣಿಪುರ ಗದ್ದಲ ಅಸ್ತ್ರ ಪ್ರಯೋಗ

    ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ – ಅದಾನಿ ಹಗರಣ, ವಕ್ಫ್, ಮಣಿಪುರ ಗದ್ದಲ ಅಸ್ತ್ರ ಪ್ರಯೋಗ

    – ನ.25 ರಿಂದು ಡಿ.20ರ ವರೆಗೆ ಕಲಾಪ,
    – 16 ಮಸೂದೆಗಳ ಮಂಡನೆಗೆ ಪಾರ್ಲಿಮೆಂಟ್ ಸಜ್ಜು

    ನವದೆಹಲಿ: ಇಂದಿನಿಂದ (ನ.25) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಆಡಳಿತಾರೂಡ ಎನ್‌ಡಿಎ (NDA) ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ (INDIA) ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿವೆ.

    ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ (Parliament Winter Session) ಚಾಲನೆ ಸಿಗಲಿದ್ದು, ಡಿ.20ರ ವರೆಗೆ ಕಲಾಪ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಇವುಗಳ ಪೈಕಿ ವಕ್ಫ್ (Waqf) ತಿದ್ದುಪಡಿ ಮಸೂದೆ ಮಂಡನೆ ಖಚಿತವಾಗಿದೆ. ಜೊತೆಗೆ ಸರ್ಕಾರದ ಇನ್ನೊಂದು ಪ್ರಮುಖ ಯೋಜನೆಯಾಗಿರುವ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ಬಗ್ಗೆ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ. ಆದರೆ ಅದನ್ನು ಕೂಡ ಯಾವುದೇ ಹಂತದಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಲಿವ್‌-ಇನ್‌ ಗೆಳತಿಯನ್ನ ಸುಟ್ಟು ಕೊಂದು ಬೆಂಕಿ ಅವಘಡ ಅಂತ ನಾಟಕವಾಡಿದ್ದ ಉದ್ಯಮಿ ಅಂದರ್‌

    ಈ ನಡುವೆ ಸುಗಮ ಕಲಾಪದ ನಿಟ್ಟಿನಲ್ಲಿ ವಿಪಕ್ಷಗಳ ಸಹಕಾರ ಕೋರಲು ಸರ್ಕಾರ ಭಾನುವಾರ ಸರ್ವಪಕ್ಷಗಳ ಸಭೆ ಆಯೋಜಿಸಿತ್ತು. ಈ ವೇಳೆ ವಿಪಕ್ಷಗಳು, ಅಧಿವೇಶನದ ಅವಧಿಯಲ್ಲಿ ಅದಾನಿ ಹಗರಣದ (Adani Scam) ಕುರಿತು ತನಿಖೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿವೆ. ಇದರ ಜೊತೆಗೆ ಇತ್ತೀಚಿನ ಮಣಿಪುರ ಗಲಭೆ ವಿಷಯ, ಆಹಾರ ಧಾನ್ಯಗಳ ಬೆಲೆ ಏರಿಕೆ ಮತ್ತಿತರೆ ವಿಷಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ಈ ಮೂಲಕ ಮುಂದಿನ ಅಧಿವೇಶನ ಯಾವ ರೀತಿಯಲ್ಲಿ ಸಾಗಬಹುದು ಎನ್ನುವ ಕುರಿತು ಸುಳಿವು ನೀಡಿದಂತಾಗಿದ್ದು, ಮೊದಲ ದಿನದಿಂದಲೇ ಕಲಾಪಗಳು ಕಾವೇರುವ ನಿರೀಕ್ಷೆಯಿದೆ.

    ಅದಾನಿ ವಿಷಯವೇ ಪ್ರಮುಖ ಅಸ್ತ್ರ:
    ಭಾರತದ ನಂ.1 ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಅವರು ತಮ್ಮ ಕಂಪನಿ ಉತ್ಪಾದಿಸಿದ ಸೌರ ವಿದ್ಯುತ್ ಮಾರಾಟಕ್ಕೆ ಕೆಲ ರಾಜ್ಯ ಸರ್ಕಾರಗಳ ಅಧಿಕಾರಿಗಳಿಗೆ 2,100 ಕೋಟಿ ರೂ. ಲಂಚ ನೀಡಿದ್ದರು ಎಂದು ಅಮೆರಿಕದಲ್ಲಿ ದೋಷಾರೋಪ ಹೊರಿಸಲಾಗಿದೆ. ಹೀಗಾಗಿ ಅದಾನಿಗೆ ಪ್ರಧಾನಿ ನರೇಂದ್ರ ಮೋದಿಯವರು ಶ್ರೀರಕ್ಷೆಯಾಗಿದ್ದಾರೆ ಎಂದು ಆರೋಪಿಸಿ ವಿಪಕ್ಷಗಳು ಗದ್ದಲ ಎಬ್ಬಿಸುವ ಸಂಭವವಿದೆ.

    ಮಂಡನೆ/ಅಂಗೀಕಾರ ಆಗಲಿರುವ ಮಸೂದೆ:
    1. ವಕ್ಫ್ ತಿದ್ದುಪಡಿ ಮಸೂದೆ
    2. ಕರಾವಳಿ ನೌಕಾಯಾನ ಮಸೂದೆ
    3. ಒಂದು ದೇಶ ಒಂದು ಚುನಾವಣೆ
    4. ಭಾರತೀಯ ವಾಯುಯಾನ ಮಸೂದೆ
    5. ಮರ್ಚಂಟ್ ಶಿಪ್ಪಿಂಗ್ ಮಸೂದೆ
    6. ಸಹಕಾರ ವಿವಿ ಸ್ಥಾಪನೆ ಮಸೂದೆ
    7. ಪಂಜಾಬ್ ನ್ಯಾಯಾಲಯಗಳ ಮಸೂದೆ
    8. ರೈಲ್ವೆ ತಿದ್ದುಪಡಿ ಮಸೂದೆ
    9. ಬ್ಯಾಂಕಿಂಗ್ ತಿದ್ದುಪಡಿ ಮಸೂದೆ ಇದನ್ನೂ ಓದಿ: ಗಲ್ಫ್, ಸಿಂಗಾಪುರಕ್ಕೆ ಹೋಲಿಸಿದರೆ ಭಾರತದಲ್ಲಿ ಚಿನ್ನ ಅಗ್ಗವಾಗಿರಲು ಕಾರಣವೇನು?

  • ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ: ಹೆಚ್.ಡಿ.ತಮ್ಮಯ್ಯ

    ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ: ಹೆಚ್.ಡಿ.ತಮ್ಮಯ್ಯ

    – 20 ದಿನದಲ್ಲಿ 30 ಲಕ್ಷ ಮೌಲ್ಯದ ಬೆಳೆ ನಾಶ!

    ಚಿಕ್ಕಮಗಳೂರು: ತಾಲೂಕಿನ (Chikkamagaluru) ಕೆಲವೆಡೆ ಬೀಟಮ್ಮ ಗ್ಯಾಂಗಿನ (Wild Elephant) ಹಾವಳಿಗೆ ಮಲೆನಾಡಿನ ಜನ ಕಂಗಾಲಾಗಿದ್ದಾರೆ. 20 ದಿನದಲ್ಲಿ ಆನೆಗಳ ಹಿಂಡಿನಿಂದ 30 ಲಕ್ಷ ರೂ. ಮೌಲ್ಯಕ್ಕೂ ಹೆಚ್ಚಿನ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

    ಜನ ಮನೆಯಿಂದ ಹೊರಬರಲು ಸಹ ಹಿಂದೇಟು ಹಾಕುತ್ತಿದ್ದಾರೆ. ಮಾಲೀಕರು-ಕಾರ್ಮಿಕರು ತೋಟಗಳಿಗೂ ಹೋಗುತ್ತಿಲ್ಲ. 4 ಮರಿ ಆನೆ ಇರುವುದರಿಂದ ಆನೆಗಳನ್ನ ಓಡಿಸುವುದು ಅರಣ್ಯ ಇಲಾಖೆಗೆ ಕಷ್ಟವಾಗಿದೆ. ಇದರಿಂದ ಹಳ್ಳಿಗರು ಆತಂಕದಲ್ಲಿದ್ದಾರೆ. ಅಧಿಕಾರಿಗಳು ಸಹ ಸಂದಿಗ್ಧ ಸ್ಥಿತಿಯಲ್ಲಿದ್ದಾರೆ.

    ಆನೆಗಳಿಂದ ಬೆಳೆ ಹಾನಿಗೊಳಗಾಗದ ಪ್ರದೇಶಗಳಿಗೆ ಚಿಕ್ಕಮಗಳೂರು ಶಾಸಕ ಹೆಚ್.ಡಿ.ತಮ್ಮಯ್ಯ (H. D. Thammaiah) ಶನಿವಾರ ಭೇಟಿ ನೀಡಿದ್ದರು. ಈ ವೇಳೆ ಮೂಗ್ತಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ದುಂಬಗೆರೆ, ಎಂಎಂಡಿ ಹಳ್ಳಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಗ್ರಾಮಗಳ ಮುಖಂಡರ ಜೊತೆ ತೆರಳಿ ಬೆಳೆಹಾನಿ ಪರಿಶೀಲನೆ ನಡೆಸಿದರು. ಇದೇ ವೇಳೆ, ರೈತರ ಬೆಳೆಗಳ ಹಾನಿಗೆ ಹೆಚ್ಚುವರಿ ಪರಿಹಾರ ಕೊಡುವಂತೆ ಹಾಗೂ ಶೀಘ್ರ ಆನೆಗಳನ್ನು ಓಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಕಾಡಾನೆಗಳು ಬೀಡು ಬಿಟ್ಟಿರುವ ಪ್ರದೇಶಗಳ ಸುತ್ತಮುತ್ತ ಇರುವ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದಕ್ಕೆ ಶಾಸಕ ತಮ್ಮಯ್ಯ ಮೆಸ್ಕಾಂ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಆನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸಭೆ ನಡೆಸಿದ್ದು, ಗಂಭೀರ ಚರ್ಚೆ ಆಗಿದೆ. ಬೆಳಗಾವಿ ಅಧಿವೇಶನದಲ್ಲಿ (Session) ಹಾಗೂ ಅರಣ್ಯ ಸಚಿವರ ಜೊತೆ ಸಭೆ ನಡೆಸಿ ಆನೆ ಹಾವಳಿಗೆ ಶಾಶ್ವತ ಪರಿಹಾರ ಕೊಡಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

  • Jammu Kashmir | 6 ವರ್ಷದ ನಂತರ ನಡೆದ ಅಧಿವೇಶನದ ಮೊದಲ ದಿನವೇ ಗದ್ದಲ

    Jammu Kashmir | 6 ವರ್ಷದ ನಂತರ ನಡೆದ ಅಧಿವೇಶನದ ಮೊದಲ ದಿನವೇ ಗದ್ದಲ

    ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ (Jammu Kashmir) ಒಮರ್ ಅಬ್ದುಲ್ಲ (Omar Abdullah) ನೇತೃತ್ವದಲ್ಲಿ ಎನ್‌ಸಿ ಸರ್ಕಾರ ರಚನೆಯಾದ ಬಳಿಕ ಮೊದಲ ಅಧಿವೇಶನ (Session) ನಡೆದಿದೆ. ಅಧಿವೇಶನ ಮೊದಲ ದಿನವೇ ರಾಜ್ಯತ್ವ ಮರುಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾಹಲ ಏರ್ಪಟ್ಟಿದೆ.

    ಅಧಿವೇಶನದ ಮೊದಲ ದಿನವೇ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಶಾಸಕ ವಹೀದ್ ಪಾರಾ ಅವರು ಆರ್ಟಿಕಲ್ 370 ರದ್ದತಿಯನ್ನು ವಿರೋಧಿಸಿ ಮತ್ತು ಕೇಂದ್ರಾಡಳಿತ ಪ್ರದೇಶದ ವಿಶೇಷತೆಯನ್ನು ಮರುಸ್ಥಾಪಿಸುವಂತೆ ನಿರ್ಣಯವನ್ನು ಮಂಡಿಸಿದರು.

     

    ಅಜೆಂಡಾದ ಭಾಗವಾಗಿಲ್ಲದಿದ್ದರೂ ಅಧಿವೇಶನದಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ವಿನಂತಿಸಿದರು, ಸದನದ ಕಾರ್ಯಸೂಚಿಯನ್ನು ಅಂತಿಮಗೊಳಿಸಲಾಗಿದ್ದರೂ ಸ್ಪೀಕರ್ ಆಗಿ ನಿಮ್ಮ ಅಧಿಕಾರವು ನಿರ್ಣಯವನ್ನು ಸೇರಿಸಲು ಅವಕಾಶ ನೀಡುತ್ತದೆ ಎಂದು ನಾವು ನಂಬುತ್ತೇವೆ. ಏಕೆಂದರೆ ಇದು ಜನರ ಭಾವನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಮನವಿಯಲ್ಲಿ ಹೇಳಿದರು.

    ನಿರ್ಣಯವನ್ನು ಸಲ್ಲಿಸಿದ ಬೆನ್ನಲ್ಲೇ 28 ಮಂದಿ ಬಿಜೆಪಿ ಶಾಸಕರು ಈ ಕ್ರಮವನ್ನು ವಿರೋಧಿಸಲು ಎದ್ದು ನಿಂತರು. ಇದು ವಿಧಾನಸಭೆಯೊಳಗೆ ಗದ್ದಲಕ್ಕೆ ಕಾರಣವಾಯಿತು. ವಿಧಾನಸಭೆ ನಿಯಮಗಳನ್ನು ಉಲ್ಲಂಘಿಸಿ ನಿರ್ಣಯ ತಂದಿದ್ದಕ್ಕಾಗಿ ಪಾರಾ ಅವರನ್ನು ಅಮಾನತುಗೊಳಿಸುವಂತೆ ಬಿಜೆಪಿ ಶಾಸಕ ಶಾಮ್ ಲಾಲ್ ಶರ್ಮಾ ಒತ್ತಾಯಿಸಿದರು. ಪ್ರತಿಭಟನಾ ನಿರತ ಸದಸ್ಯರಿಗೆ ಆಸನಗಳಲ್ಲಿ ಕುಳಿತುಕೊಳ್ಳುವಂತೆ ಸ್ಪೀಕರ್ ಪದೇ ಪದೇ ಮನವಿ ಮಾಡಿದರೂ ಅವರು ಧರಣಿ ಮುಂದುವರಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶ, ಕೇರಳ, ಪಂಜಾಬ್ ಉಪಚುನಾವಣೆ ದಿನಾಂಕ ಬದಲು – ನ.20ರಂದುಮತದಾನ

     

    ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ನಿರ್ಣಯಕ್ಕೆ ಯಾವುದೇ ಪ್ರಾಮುಖ್ಯತೆ ಇಲ್ಲ ಮತ್ತು ಇದು ಕ್ಯಾಮೆರಾಗಳಿಗೆ ಮಾತ್ರ ಎಂದು ಹೇಳಿದರು. ಸದನವು ಈ ವಿಷಯವನ್ನು ಹೇಗೆ ಚರ್ಚಿಸುತ್ತದೆ ಎಂಬುದನ್ನು ಯಾವುದೇ ಒಬ್ಬ ಸದಸ್ಯರು ನಿರ್ಧರಿಸುವುದಿಲ್ಲ. ನಿರ್ಣಯದ ಹಿಂದೆ ಸರಿಯಾದ ಉದ್ದೇಶವಿದ್ದರೆ ಅವರು ಮೊದಲು ನಮ್ಮೊಂದಿಗೆ ಚರ್ಚಿಸುತ್ತಿದ್ದರು ಎಂದು ಅವರು ಹೇಳಿದರು.

    370 ನೇ ವಿಧಿಯನ್ನು ರದ್ದುಪಡಿಸಿದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ಒಪ್ಪುವುದಿಲ್ಲ ನನ್ನ ಸರ್ಕಾರವು ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ. ಇದು ನಮ್ಮ ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಜನರು ಇಟ್ಟಿರುವ ನಂಬಿಕೆಯ ಪ್ರತಿಫಲವಾಗಿದೆ ಎಂದು ಒಮರ್ ಅಬ್ದುಲ್ಲ ಹೇಳಿದರು.

     

  • ಮುಡಾ ಸೈಟ್ ಕೋಲಾಹಲ – ವಿಧಾನಸೌಧದಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

    ಮುಡಾ ಸೈಟ್ ಕೋಲಾಹಲ – ವಿಧಾನಸೌಧದಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

    – ಮೈಸೂರಿಗೆ ಪಾದಯಾತ್ರೆಗೆ ಮುಂದಾದ ಮೈತ್ರಿ ನಾಯಕರು
    – ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ವಿವರಣೆ

    ಬೆಂಗಳೂರು: ವಿಧಾನಸಭೆ ಮಳೆಗಾಲ ಅಧಿವೇಶನ (Vidhan Sabha Session) ಅಂತ್ಯಕ್ಕೆ ಇನ್ನು ಎರಡು ದಿನ ಬಾಕಿ ಇರುವಂತೆಯೇ ಸದನದಲ್ಲಿ ಮೂಡಾ ಹಗರಣ (MUDA Scam) ಕೋಲಾಹಲ ಎಬ್ಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಸಂಬಂಧ ಬಿಜೆಪಿ (BJP) ಹೋರಾಟವನ್ನು ತೀವ್ರಗೊಳಿಸಿದೆ.

    ವಿಧಾನಸಭೆಯಲ್ಲಿ ಬೆಳಗ್ಗೆ ಚರ್ಚೆಗೆ ಅವಕಾಶ ನೀಡದ್ದಕ್ಕೆ ಸಿಟ್ಟಾಗಿರುವ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಈಗ ವಿಧಾನಸಭೆ-ಪರಿಷತ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ. ಈ ಹಗರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಬಯಸಿರುವ ಬಿಜೆಪಿ, ಶನಿವಾರದ ನಂತರ ಮೈಸೂರಿಗೆ ಪಾದಯಾತ್ರೆ (Mysuru Padayatra) ನಡೆಸುವ ಬಗ್ಗೆಯೂ ಆಲೋಚಿಸಿದೆ.

     

    ಸದನದ ಹೊರಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B. Y. Vijayendra) ಮಾತನಾಡಿ, ವಾಲ್ಮೀಕಿ-ಮುಡಾ ಹಗರಣಗಳ ಸಂಬಂಧ ಹೋರಾಟಕ್ಕೆ ಆಡಳಿತ ಪಕ್ಷದಿಂದಲೇ ಒತ್ತಡ ಇದೆ. ಇಷ್ಟು ದೊಡ್ಡ ಹಗರಣ ನಡೆದಿದೆ. ನೀವೇನೂ ಹೋರಾಟ ಮಾಡುದಿಲ್ಲವೇ ಎಂದು ನಮ್ಮನ್ನು ಕೇಳುತ್ತಿದ್ದಾರೆ ಎಂದು ಹೇಳಿದರು.

    ಈ ಮಧ್ಯೆ, ಮುಡಾ ಹಗರಣದ ಬಗ್ಗೆ ವಿವರಣೆ ನೀಡುವಂತೆ ಮುಖ್ಯಕಾರ್ಯದರ್ಶಿಗೆ ರಾಜ್ಯಪಾಲರು ಸೂಚಿಸಿದ್ದ ಹಿನ್ನೆಲೆಯಲ್ಲಿ ರಾಜಭವನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಸುಮಾರು 40 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ.

    ಬಿಜೆಪಿ ಅಹೋರಾತ್ರಿ ಧರಣಿ ಸದನದಲ್ಲಿ ಅಂಕಿತವಾದ ವಿಧೇಯಕಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೆಗೆದುಕೊಂಡ 3 ನಿರ್ಣಯಗಳ ಬಗ್ಗೆ ಚರ್ಚಿಸಿದ್ದಾರೆ ಅಂತ ತಿಳಿದು ಬಂದಿದೆ.

    ವಿಧಾನಸಭೆಯಲ್ಲಿ ವಾಕ್ಸಮರ
    ಇದಕ್ಕೂ ಮುನ್ನ ಬೆಳಗ್ಗೆ ವಿಧಾನಸಭೆಯಲ್ಲಿ ವಾಕ್ಸಮರ ನಡೆಯಿತು. ನಿಲುವಳಿ ಸೂಚನೆಗೆ ವಿಪಕ್ಷ ನಾಯಕ ಅಶೋಕ್ (R Ashok) ಮುಂದಾದರು. ಮುಖ್ಯಮಂತ್ರಿಗಳೇ ನೇರವಾಗಿ ಪಾಲುದಾರರು. ಇದು ತುರ್ತು ವಿಷಯ. ಚರ್ಚೆಗೆ ಅವಕಾಶ ಕೊಡಿ ಎಂದು ಆಗ್ರಹಿಸಿದರು. ಅಶೋಕ್‌ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್‌ ಖಾದರ್‌, ಅಷ್ಟು ಅರ್ಜೆಂಟ್ ಇದ್ದರೆ ಕಳೆದ ವಾರವೇ ಪ್ರಸ್ತಾಪ ಮಾಡಬೇಕಿತ್ತು. ಪ್ರಶ್ನೋತ್ತರ ಮುಗಿದ ಬಳಿಕ ತೆಗೆದುಕೊಳ್ಳೋಣ ಎಂದು ಹೇಳಿದರು.

    ಪ್ರಶ್ನೋತ್ತರ ಅವಧಿ ಬಿಡಿ ಮುಡಾ ಅಕ್ರಮದ ಚರ್ಚೆಗ ತೆಗೆದುಕೊಳ್ಳಿ ಅಂತ ಬಿಜೆಪಿಗರು ಒತ್ತಾಯಿಸಿದ್ರು. ಎದ್ದು ನಿಂತ ಸಚಿವ ಬೈರತಿ ಸುರೇಶ್, ಬಿಜೆಪಿಗರ ಭ್ರಷ್ಟಾಚಾರವೂ ಇದೆ. ಚರ್ಚೆ ನಡೆಯಲಿ ಎಂದರು.

    ಈ ವೇಳೆ ಬಸನ ಗೌಡ ಪಾಟೀಲ್‌ ಯತ್ನಾಳ್ ಮಧ್ಯ ಪ್ರವೇಶಿಸಿ, ಕ್ಲೀನ್ ಇಂಡಿಯಾ, ಕ್ಲೀನ್ ಕರ್ನಾಟಕ. ಕ್ಲೀನ್ ಆಲ್ ಪಾರ್ಟಿ ಆಗಬೇಕು. ಸಿದ್ದರಾಮಯ್ಯ ಒಬ್ಬರನ್ನೇ ಟಾರ್ಗೆಟ್ ಮಾಡೋದಲ್ಲ; ಅಡ್ಜಸ್ಟ್ಮೆಂಟ್. ಮ್ಯಾಚ್ ಫಿಕ್ಸಿಂಗ್ ಎಲ್ಲವೂ ಬರಲಿ ಎಂದು ಹೇಳಿದರು.

    ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಎದ್ದುನಿಂತು ವಿಚಾರಣಾ ಆಯೋಗ ರಚನೆ ಆಗಿದೆ. ಈಗ ನಿಲುವಳಿ ನೀಡಿರುವುದು ನಿಯಮಬಾಹಿರ, ಚರ್ಚೆಗೆ ಅವಕಾಶ ಇಲ್ಲ ಎಂದರು.

    ಮುಖ್ಯಮಂತ್ರಿಗಳ ಮನೆಯವರಿಗೆ 14 ಸೈಟ್‌ಗಳನ್ನು ಕೊಟ್ಟಿದ್ದಾರೆ ಅಂತ ಬೆಲ್ಲದ್ ಆರೋಪಕ್ಕೆ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕೋಲಾಹಲ ಉಂಟಾಯಿತು.

    ನಿಲುವಳಿ ತಿರಸ್ಕಾರ ಮಾಡಿದ ಸ್ಪೀಕರ್ ಚರ್ಚೆಗೆ ಅವಕಾಶ ಕೊಡದೇ ರೂಲಿಂಗ್ ಕೊಟ್ಟು, ಸದನ ಮುಂದೂಡಿದರು. ಬಿಜೆಪಿಗರು ಶೇಮ್ ಶೇಮ್ ಅಂತ ಛೇಡಿಸಿದ್ರು.

     

     

     

  • ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

    ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

    ನವದೆಹಲಿ: 18ನೇ ಲೋಕಸಭೆಯ (18th Lok Sabaha) ಮೊದಲ ಅಧಿವೇಶನ (Session) ಜೂನ್‌ 24 ರಂದು ಆರಂಭವಾಗಿ  ಜುಲೈ 3 ರಂದು ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ಬುಧವಾರ ತಿಳಿಸಿದ್ದಾರೆ.

    9 ದಿನಗಳ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ (Speaker) ಅವರನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಹೊಸ ಸಂಸದರು (MP) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಸಭಾ ಅಧಿವೇಶನ ಜೂನ್‌ 26 ರಂದು ಆರಂಭವಾಗಿ ಜುಲೈ 3 ರಂದು ಕೊನೆಯಾಗಲಿದೆ. ಇದನ್ನೂ ಓದಿ: ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧಿಸುತ್ತಿದ್ರೆ ಮೋದಿ 2-3 ಲಕ್ಷ ಮತಗಳಿಂದ ಸೋಲ್ತಿದ್ರು: ರಾಹುಲ್‌ ಗಾಂಧಿ

    ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.