Tag: Sexsual Assualt

  • ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ 7 ವರ್ಷ ಜೈಲು

    ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ 7 ವರ್ಷ ಜೈಲು

    ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ತುಮಕೂರಿನ 3 ನೇ ಅಧಿಕ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

    2016ರಲ್ಲಿ 50 ವರ್ಷದ ರಮೇಶ್ ಎಂಬಾತ ವಸತಿ ಶಾಲೆಯಿಂದ ಬಾಲಕಿಯೋರ್ವಳನ್ನು ಕರೆದುಕೊಂಡು ಹೋಗಿ ಲಾಡ್ಜ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದನು. ಲೈಂಗಿಕ ದೌರ್ಜನ್ಯ ಎಸೆಗುವ ವೇಳೆ ವಿಡಿಯೋ ಮಾಡಿಕೊಂಡಿದ್ದ ರಮೇಶ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು. ವಿಷಯ ತಿಳಿದ ಬಾಲಕಿ ತಾಯಿ 2017ರಲ್ಲಿ ತುಮಕೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದರು.

    ದೂರು ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಮೇಶ್‍ನನ್ನು ಬಂಧಿಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣ ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಕೇವಲ 6 ತಿಂಗಳಲ್ಲಿ ತೀರ್ಪು ನೀಡಿದೆ. ಅಪರಾಧಿ ರಮೇಶ್‍ನಿಗೆ 7 ವರ್ಷ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ.