ಭೋಪಾಲ್: 10ನೇ ತರಗತಿಯ ವಿದ್ಯಾರ್ಥಿಯೊಬ್ಬ 8 ವರ್ಷದ ನೆರೆಯ ಮನೆಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಧ್ಯಪ್ರದೇಶದ (MadhyaPradesh) ಭೀಂಡ್ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತೆಯ ನೆರೆಯ ಮನೆಯಲ್ಲೇ ವಾಸಿಸುತ್ತಿದ್ದ ಆರೋಪಿಯು, ಆಕೆ ಒಬ್ಬಂಟಿಯಾಗಿದ್ದಾಗ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಸಂತ್ರಸ್ತೆಯ ಆರೋಗ್ಯ ಸ್ಥಿರವಾಗಿದ್ದು, ಆಕೆ ಪೋಷಕರೊಂದಿಗೆ ಮನೆಯಲ್ಲಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಮುಖೇಶ್ ಕುಮಾರ್ ಶಕ್ಯಾ ತಿಳಿಸಿದ್ದಾರೆ. ಇದನ್ನೂ ಓದಿ: ವಕ್ಫ್ ಕಾಯ್ದೆ ವಿರುದ್ಧ ಪ್ರತಿಭಟನೆ – ಪ್ರತಿಭಟನಾಕಾರರಿಗೆ ಎಸಿಪಿ ಕಾರಿನಲ್ಲೇ ಡ್ರಾಪ್ ಆರೋಪ
ಆರೋಪಿಯು ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ವೇಳೆ ಆಕೆ ಜೋರಾಗಿ ಕಿರುಚಿಕೊಂಡಿದ್ದಾಳೆ. ಸಾರ್ವಜನಿಕರು ಆರೋಪಿಯಿಂದ ಸಂತ್ರಸ್ತೆಯನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗುಂಡು ತಗುಲಿ ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು
ಪೊಲೀಸರು (Police) ವರ್ಷದ ಬಾಲಕಿಯ ಮೇಲೆ 10ನೇ ತರಗತಿ ವಿದ್ಯಾರ್ಥಿಯಿಂದ ಲೈಂಗಿಕ ದೌರ್ಜನ್ಯ ಅಪ್ರಾಪ್ತ ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಾಲಾಪರಾಧ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಬೆಂಗಳೂರು: ಕ್ಯಾಬ್ ಬುಕ್ ಮಾಡಿದ್ದ ಯುವತಿಯ ಮೇಲೆ ಇಬ್ಬರು ಕಾಮುಕರು ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ (Bengaluru) ಕಮ್ಮನಹಳ್ಳಿಯಲ್ಲಿ (Kammanahalli)) ನಡೆದಿದೆ.
ಜ.27ರಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಯುವತಿಯೊಬ್ಬಳು ಕಮ್ಮನಹಳ್ಳಿಯಿಂದ ವೈಟ್‌ಫೀಲ್ಡ್‌ಗೆ ಉಬರ್ ಕ್ಯಾಬ್ ಬುಕ್ ಮಾಡಿದ್ದಳು. ಕ್ಯಾಬ್ ಬರುತ್ತಿದ್ದಂತೆ ಯುವತಿ ಕಾರಿನೊಳಗೆ ಕುಳಿತುಕೊಂಡಿದ್ದಾಳೆ. ಇದೇ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಕಾರಿನೊಳಗೆ ಕೂತಿದ್ದಾರೆ.ಇದನ್ನೂ ಓದಿ: ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ
ಆಗ ಭಯಗೊಂಡ ಯುವತಿ ಕಾರಿನಿಂದ ಇಳಿದು ಓಡಿದ್ದಾಳೆ. ಆಕೆಯ ಬೆನ್ನಟ್ಟಿ ಹೋದ ಕಾಮುಕರು ಕುತ್ತಿಗೆ ಹಿಡಿದು ನೆಲಕ್ಕೆ ಬೀಳಿಸಿದ್ದಾರೆ. ಮತ್ತೊಬ್ಬ ಬಟ್ಟೆ ಬಿಚ್ಚಲು ಯತ್ನಿಸಿ, ಯುವತಿಯ ಎದೆಭಾಗ ಮುಟ್ಟಿ ಕಿರುಕುಳ ನೀಡಿದ್ದಾನೆ. ಯುವತಿ ಜೋರಾಗಿ ಕಿರುಚಿಕೊಳ್ಳುತ್ತಿದಂತೆ ಅಕ್ಕಪಕ್ಕದಲ್ಲಿದ್ದ ಜನರು ಬಂದಿದ್ದಾರೆ. ಬರುವಷ್ಟರಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಪರಾರಿಯಾಗಿದ್ದಾರೆ.
2012ರಲ್ಲಿ ಬೆಂಗಳೂರಿನಲ್ಲಿ ಬಾವುತ್ತಿಯುದೆ ನಮತ್ತಿಲ್ ಎಂಬ ಮಮ್ಮುಟಿ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಸಿನಿಮಾದಲ್ಲಿ ರಂಜಿತ್ ಎಂಬುವವರು ಕೆಲಸ ಮಾಡುತ್ತಿದ್ದರು. ರಂಜಿತ್‌ಗೆ ಯುವಕನೊಬ್ಬ ಪರಿಚಯವಾಗಿದ್ದ. ಸಿನಿಮಾದಲ್ಲಿ ಅವಕಾಶಕೊಡಿಸುವುದಾಗಿ ಕೇಳಿ ನಂಬರ್ ಕೂಡ ಪಡೆದುಕೊಂಡಿದ್ದ.
ಬಳಿಕ ಒಂದು ದಿನ ಕರೆ ಮಾಡಿ, ಬೆಂಗಳೂರು ಏರ್‌ಪೋರ್ಟ್ ಬಳಿಯ ತಾಜ್ ಹೋಟೆಲ್‌ಗೆ ಬರಲು ತಿಳಿಸಿದ್ದ. ಹೋಟೆಲ್‌ಗೆ ಕರೆಸಿ ಯುವಕನ ಮೇಲೆ ಆರೋಪಿ ರಂಜಿತ್ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ದೂರುದಾರ ಹೇಮಾ ಕಮಿಟಿ ಮುಂದೆ ಹೇಳಿದ್ದ. ಇದಕ್ಕೆ ಸಂಬಂಧಿಸಿದಂತೆ ಕೇರಳದ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಗರ್ತಲಾ: ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ 5ನೇ ತರಗತಿ ಬಾಲಕಿ ಮೇಲೆ ಕಾಮುಕರ ಗ್ಯಾಂಗ್‌ವೊಂದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತ್ರಿಪುರಾದ ದಕ್ಷಿಣಭಾಗದ (Tripura South District) ಜಿಲ್ಲೆಯೊಂದರಲ್ಲಿ ನಡೆದಿದೆ.
ಇತ್ತೀಚಿಗಷ್ಟೇ ತ್ರಿಪುರಾದ ಉತ್ತರ ಭಾಗದ ಜಿಲ್ಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ (Gang Rape) ನಡೆದ ಪ್ರಕರಣ ಬೆಳಿಕಿಗೆ ಬಂದಿತ್ತು. ಇದಾದ ಮಾರನೇ ದಿನವೇ ಘಟನೆ ನಡೆದಿದೆ.ಇದನ್ನೂ ಓದಿ: 7 ತಿಂಗಳ ಹಿಂದಷ್ಟೇ ನಾನು ಬ್ರೇಕಪ್ ಮಾಡಿಕೊಂಡೆ: ಮೃಣಾಲ್ ಠಾಕೂರ್
ಶಾಲೆಯಿಂದ ಮಗಳು ಹಿಂದಿರುಗದೇ ಇದ್ದಾಗ ಸಂತ್ರಸ್ತ ಬಾಲಕಿಯ ಪೋಷಕರು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಿದ್ದಾರೆ. ಎಷ್ಟೇ ಹುಡುಕಿದರೂ ಸಿಗದೇ ಇದ್ದಾಗ ತ್ರಿಪುರಾದ ಬೆಲೊನಿಯಾ ಮಹಿಳಾ ಪೊಲೀಸ್ (Belonia Women Police Station) ಠಾಣೆಯಲ್ಲಿ ದೂರು ನೀಡಿದ್ದಾರೆ.
ಬೆಲೊನಿಯಾ ಠಾಣೆಯ ಓರ್ವ ಅಧಿಕಾರಿ ಮಾತನಾಡಿ, ಶಾಲೆಗೆ ಹೋದ ಮಗಳು ಮನೆಗೆ ಬರಲಿಲ್ಲ ಎಂಬ ದೂರಿನ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಿದಾಗ ಶನಿವಾರ ಸಂಜೆ ಸಂತ್ರಸ್ತ ಬಾಲಕಿಯ ಮನೆ ಹತ್ತಿರದಲ್ಲಿ ಆಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಾಲಕಿಯ ಪರಿಚಯಸ್ಥನೊಬ್ಬ ಮನೆ ಬಳಿ ಬಿಟ್ಟು ಹೋಗಿರುವುದು ನಂತರ ಗೊತ್ತಾಗಿದೆ. ತನಿಖೆ ಮಾಡಿದಾಗ ಆತ ಅದೇ ಬಡಾವಣೆಯ 22 ವರ್ಷದ ಹುಡುಗ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.
ಇಲ್ಲಿಯವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ ಆದರೆ ಆರೋಪಿಯ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಪೋಕ್ಸೋ ಕಾಯ್ದೆ ಹಾಗೂ ಬೇರೆ ಬೇರೆ ಸೆಕ್ಷನ್‌ಗಳಡಿಯಲ್ಲಿ ಆರೋಪಿಸಲಾಗುವುದು ಎಂದು ತಿಳಿಸಿದ್ದಾರೆ.
ಶುಕ್ರವಾರ ತ್ರಿಪುರಾದ ಉತ್ತರ ಭಾಗದ ಜಿಲ್ಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಆರೋಪ ಕೇಳಿಬಂದಿತ್ತು. ಅದಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ. ಸಂಜೆ ಹೊತ್ತಲ್ಲಿ ಅಂಗಡಿಗೆ ಎಂದು ಬಂದ ಬಾಲಕಿಯನ್ನು ಹತ್ತಿರದ ಕಾಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಬಾಲಕಿಯನ್ನು ಕಂಡ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು, ಪೋಷಕರಿಗೆ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್‌ನಲ್ಲಿರುವ ಟಾಪ್ -5 ಕಲಿಗಳು ಯಾರು?
ಕಳೆದ ತಿಂಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆ ತ್ರಿಪುರಾ ದಕ್ಷಿಣ ಭಾಗದ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಚ್ಚಿ: ಮಲಯಾಳಂನ ಬೆಂಗಳೂರು ಡೇಸ್, ಪ್ರೇಮಂ ಮೊದಲಾದ ಹಿಟ್ ಸಿನೆಮಾಗಳ ನಾಯಕ ನಟ ನಿವಿನ್ ಪೌಲಿ (Nivin Pauly) ವಿರುದ್ಧ ಲೈಂಗಿಕ ದೌರ್ಜನ್ಯ (Sexual Assault) ದೂರು ದಾಖಲಾಗಿದೆ. ಸಿನೆಮಾದಲ್ಲಿ ಚಾನ್ಸ್ ಕೊಡಿಸುತ್ತೇನೆ ಎಂದು ನಂಬಿಸಿ ನನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂದು ಎರ್ನಾಕುಳಂ ಜಿಲ್ಲೆಯ ನೇರ್ಯಮಂಗಲಂ ನಿವಾಸಿ ಯುವತಿ ಊನ್ನುಕ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ದಾಖಲಾಗುತ್ತಿದ್ದಂತೆ ಈ ಪ್ರಕರಣ ಎಸ್‌ಐಟಿಗೆ (SIT) ವರ್ಗಾವಣೆಯಾಗಿದೆ. ಹೇಮಾ ಕಮಿಷನ್ (Hema Committee Report) ವರದಿ ಬಹಿರಂಗಗೊಂಡ ಬಳಿಕ ತನಿಖೆಗೆ ನೇಮಕಗೊಂಡ ವಿಶೇಷ ತನಿಖಾ ತಂಡ ಈ ಪ್ರಕರಣದ ವಿಚಾರಣೆ ನಡೆಸಲಿದೆ. ವರದಿ ಬಹಿರಂಗವಾದ ಬಳಿಕ ಇದುವರೆಗೆ 11 ಪ್ರಕರಣ ದಾಖಲಾಗಿದೆ.
ಒಟ್ಟು 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ನಿವಿನ್ ಪೌಲಿ 6ನೇ ಆರೋಪಿಯಾಗಿದ್ದಾರೆ.
ದೂರಿನಲ್ಲಿ ಏನಿದೆ?
2023ರ ನವೆಂಬರ್ ತಿಂಗಳಲ್ಲಿ ದುಬೈನ ಹೋಟೆಲೊಂದರಲ್ಲಿ ಈ ಘಟನೆ ನಡೆದಿದೆ. ದೂರು ನೀಡಿದ ಯುವತಿ ಬೇರೆ ಕೆಲಸದ ನಿಮಿತ್ತ ದುಬೈಗೆ ತೆರಳಿದ್ದರು. ಯುವತಿಯ ಸ್ನೇಹಿತೆ ಮೂಲಕ ಈಕೆ ಚಿತ್ರ ತಂಡದ ಬಳಿಗೆ ತೆರಳಿದ್ದರು ಎನ್ನಲಾಗಿದೆ.
ಯುವತಿ ತನ್ನನ್ನು ಕರೆದೊಯ್ದ ಮಹಿಳೆಯನ್ನು ಮೊದಲ ಆರೋಪಿ ಎಂದು ದೂರಿನಲ್ಲಿ ಹೇಳಿದ್ದಾರೆ. ಎಕೆ ಸುನಿಲ್, ಬಿನು, ಬಶೀರ್, ಕುಟ್ಟನ್ ಹಾಗೂ 6ನೇ ಆರೋಪಿ ನಿವಿನ್ ಪೌಲಿ ಎಂದು ದೂರು ದಾಖಲಿಸಿದ್ದಾರೆ.
ಮಾದಕದ್ರವ್ಯ ನೀಡಿ ದೌರ್ಜನ್ಯ ನಡೆಸಿದ್ದಾರೆ. 6 ದಿನಗಳ ಕಾಲ ಹೋಟೆಲ್‌ನಲ್ಲಿ ಕೂಡಿ ಹಾಕಿ ಈ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಸೃಷ್ಟಿ ಮಾಡಿರೋ ಹೇಮಾ ವರದಿ (Hema Committee), ಇದೀಗ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯ (Sexual Assault) ಕುರಿತಂತೆ ಬಹಿರಂಗವಾಗಿ ನಟಿಯರು ಮಾತಾಡುತ್ತಿದ್ದಾರೆ. ಜೊತೆಗೆ ದೂರುಗಳು ದಾಖಲಾಗುತ್ತಿವೆ. ಈವರೆಗೂ ಪೊಲೀಸರು 17 ದೂರುಗಳನ್ನು ದಾಖಲಿಸಿಕೊಂಡಿದ್ದಾರಂತೆ.
ವರದಿಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರದ ನಡೆಯನ್ನು ಅಲ್ಲಿನ ರಾಜಕೀಯ ಪಕ್ಷಗಳು ಪ್ರಶ್ನೆ ಮಾಡುತ್ತಿವೆ. ಈವರೆಗೂ ಬಹಿರಂಗವಾಗದ ವರದಿಯನ್ನು ಈಗ ಆರ್.ಟಿ.ಐ ಅಡಿಯಲ್ಲಿ ಕೊಟ್ಟಿದ್ದು ಯಾಕೆ ಎಂದು ಪ್ರಶ್ನೆ ಮಾಡಲಾಗುತ್ತಿದೆ. ಪ್ರತಿಭಟನೆಗಳು ಕೂಡ ನಡೆದಿವೆ. ಈ ನಡುವೆ ನಟಿಯರು ದೂರುಗಳನ್ನು ದಾಖಲಿಸುತ್ತಿದ್ದಾರೆ.
ಮಲಯಾಳಂ ಸಿನಿಮಾ ರಂಗದಲ್ಲಿ ಸಹ ಕಲಾವಿದೆಯಾಗಿ ಗುರುತಿಸಿಕೊಂಡಿರೋ ನಟಿ ಸೋನಿಯಾ ಮಲಹಾರ್ ಸೇರಿದಂತೆ ಅನೇಕ ನಟಿಯರು ಮುಂದೆ ಬಂದು, ದೂರುಗಳನ್ನು ದಾಖಲಿಸುತ್ತಿದ್ದಾರೆ. ಇನ್ನೂ ಹಲವರು ದೂರು ನೀಡಲು ಚಿಂತನೆ ಕೂಡ ನಡೆಸಿದ್ದಾರಂತೆ. ಹಾಗಾಗಿ ನಟಿಯರು ಒತ್ತಡದಲ್ಲಿದ್ದಾರೆ ಅನ್ನುವ ಮಾಹಿತಿಯೂ ಇದೆ.
ಧ್ವನಿ ಎತ್ತಿದ ಹೆಸರಾಂತ ನಟ ಪೃಥ್ವಿರಾಜ್ ಸುಕುಮಾರನ್
ಜಸ್ಟಿಸ್ ಹೇಮಾ ಸಲ್ಲಿಸಿದ ವರದಿಯಲ್ಲಿನ ಕೆಲವು ಅಂಶಗಳು ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿವೆ. ಈಗಾಗಲೇ ಕೆಲವರ ತಲೆದಂಡ ಕೂಡ ಆಗಿದೆ. ಅನೇಕ ನಟಿಯರು ಬಹಿರಂಗ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಆದರೆ, ಈ ವರದಿ ಕುರಿತಂತೆ ಪ್ರಮುಖ ನಟರಾರೂ ಬಹಿರಂಗವಾಗಿ ಮಾತಾಡಿರಲಿಲ್ಲ. ಮೊದಲ ಬಾರಿಗೆ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಮಾತಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿರಾಜ್ (Prithviraj Sukumaran) , ಹೇಮಾ ವರದಿಯಲ್ಲಿನ ಹೆಸರುಗಳನ್ನು ಸರ್ಕಾರವೇ ಬಹಿರಂಗ ಪಡಿಸಬೇಕು. ಚಿತ್ರೀಕರಣದ ಸ್ಥಳದಲ್ಲಿನ ಸುರಕ್ಷತೆಯ ಬಗ್ಗೆ ಗಮನ ಹೆರಿಸಬೇಕು. ಏಕರೂಪದ ಮಾರ್ಗಸೂಚಿಯನ್ನು ತಯಾರಿಸಬೇಕು. ತಪ್ಪು ಯಾರೇ ಮಾಡಿದ್ದರೂ ಅವರ ಮೇಲೆ ತನಿಖೆ ಆಗಿ ಶಿಕ್ಷೆಯಾಗಬೇಕು. ಮಹಿಳೆಯರು ಈ ವಿಷ್ಯದಲ್ಲಿ ಸುಳ್ಳು ಹೇಳಿದ್ದರೂ ಅವರಿಗೆ ಶಿಕ್ಷೆ ಆಗಲಿ ಎಂದಿದ್ದಾರೆ.
ಆರಂಭಿಕ ಹಂತಗಳಲ್ಲಿ ಕೆಲವು ತಪ್ಪುಗಳು ಆಗಿರಬಹುದು. ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯದ ಘಟನೆಗಳ ಬಗ್ಗೆ ಸಂಪೂರ್ಣ ಮತ್ತು ವಿವರವಾದ ತನಿಖೆಯ ಅಗತ್ಯವಿದೆ. ಆರೋಪಿಗಳು ತನಿಖೆಯನ್ನು ಎದುರಿಸಲೇಬೇಕು. ಮತ್ತು ತನಿಖೆ ಎದುರಿಸುವಾಗ ತಮ್ಮ ಸ್ಥಾನದಿಂದ ಕೆಳಗೆ ಇಳಿದಿರಬೇಕು ಎಂದು ಪೃಥ್ವಿರಾಜ್ ಮಾತನಾಡಿದ್ದಾರೆ.
ಮಲಯಾಳಂ ಸಿನಿಮಾ ರಂಗದ ಗುಂಪುಗಾರಿಕೆಯ ಕುರಿತಂತೆಯೂ ಪೃಥ್ವಿರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಗುಂಪುಗಾರಿಕೆಯನ್ನು ನಾನು ವಿರೋಧಿಸುತ್ತೇನೆ. ಇಂತಹ ಗುಂಪುಗಳು ಯಾವುದೇ ಸಿನಿಮಾ ರಂಗದಲ್ಲಿ ಇರಬಾರದು ಎಂದಿದ್ದಾರೆ. ಹೇಮಾ ಸಮಿತಿ ವರದಿ ಬಿಡುಗಡೆ ಆದ ನಂತರ ಯಾರೂ ಈ ಕುರಿತಂತೆ ಬಹಿರಂಗವಾಗಿ ಮಾತನಾಡಿರಲಿಲ್ಲ. ಪೃಥ್ವಿರಾಜ್ ಆಡಿದ ಮಾತೂ ಕೂಡ ವೈರಲ್ ಆಗ್ತಿವೆ.
ಮಲಯಾಳಂ (Malayalam) ಸಿನಿಮಾ ರಂಗದಲ್ಲಿ 2017ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳಾ ಲೈಂಗಿಕ ದೌರ್ಜನ್ಯದ ಕುರಿತಂತೆ ವರದಿ ನೀಡಲು ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು (Hema Report) ರಚಿಸಿತ್ತು. ಈ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದ್ದು, ಈಗ ಆರ್ಟಿಐ ಮೂಲಕ ವರದಿಯು ಬಹಿರಂಗಗೊಂಡಿದೆ. ವರದಿಯಲ್ಲಿ ಉಲ್ಲೇಖವಾಗಿರೋ ಅಂಶಗಳು ಚಿತ್ರೋದ್ಯಮದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿವೆ.
ಮಲಯಾಳಂ ಸಿನಿಮಾ ರಂಗ (Film Industry) ಕೆಲವು ಪುರುಷ ಹಿಡಿತದಲ್ಲಿದ್ದು, ಅವರು ಹೇಳಿದಂತೆ ಕೇಳದೇ ಇದ್ದರೆ, ಯಾವ ನಟಿಯರಿಗೂ ಅಲ್ಲಿ ಅವಕಾಶ ಸಿಗುವುದಿಲ್ಲ. ಮಹಿಳೆಯರು ಚಿತ್ರೋದ್ಯಮದಲ್ಲಿ ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡಬೇಕು, ಇಲ್ಲ ಚಿತ್ರೋದ್ಯಮವನ್ನು ತೊರೆಯಬೇಕು ಅನ್ನು ಅಂಶಗಳನ್ನು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಚಿತ್ರೋದ್ಯಮದಲ್ಲಿ ಮಾಫಿಯಾ ಎಂಟ್ರಿ ಕೊಟ್ಟಿದೆ ಅನ್ನೋ ಅಂಶವೂ ಸೇರ್ಪಡೆಯಾಗಿದೆ. ವರದಿಯ ಅಧ್ಯಯನದ ಸಂದರ್ಭದಲ್ಲಿ ಮಲಯಾಳಂ ಚಿತ್ರೋದ್ಯಮವು ಕೆಲ ನಿರ್ಮಾಪಕರ, ನಿರ್ದೇಶಕರ ಹಾಗೂ ನಟರ ಹಿಡಿತದಲ್ಲಿರುವುದು ಕಂಡು ಬಂದಿದೆ. ಇದಿಷ್ಟೇ ಜನರು ಮಲಯಾಳಂ ಚಿತ್ರೋದ್ಯಮವನ್ನ ನಿಯಂತ್ರಿಸುತ್ತಿದ್ದಾರೆ. ಈ ಉದ್ಯಮವು ಅಪರಾಧಿಗಳ ಮತ್ತು ಸ್ತ್ರೀ ದ್ವೇಷಿಗಳಿಂದ ಹೆಚ್ಚು ಪ್ರಭಾವಿತವಾಗಿದೆ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಮಹಿಳೆಯರು ಚಿತ್ರೋದ್ಯಮಕ್ಕೆ ಹಣ ಮಾಡಲು ಬರುತ್ತಿದ್ದಾರೆ. ಹಾಗಾಗಿ ಅವರು ಎಲ್ಲದಕ್ಕೂ ರೆಡಿ ಆಗಿರುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದು ನಿಜವಾದದ್ದು ಅಲ್ಲ. ಕಲೆ ಮತ್ತು ನಟನೆಯ ಮೇಲಿನ ಆಸಕ್ತಿ ಕಾರಣದಿಂದಾಗಿ ಮಹಿಳೆಯರು ಸಿನಮಾ ರಂಗಕ್ಕೆ ಬರುತ್ತಿದ್ದಾರೆ. ಕೆಲವರು ಅವಕಾಶ ಪಡೆಯಲು ಅಡ್ಡದಾರಿಯನ್ನೂ ಹಿಡಿದಿದ್ದಾರೆ ಎಂದಿದೆ ವರದಿ. ಇದರ ಜೊತೆಗೆ ತಮ್ಮ ನಿಯಮಗಳಿಗೆ ಒಪ್ಪುವಂಥ ಮಹಿಳೆಯರ ಗುಂಪು ಕೂಡ ಅಲ್ಲಿ ರಚನೆಯಾಗಿದ್ದು, ಅವರನ್ನು ಕೋಡ್‍್ ಹೆಸರುಗಳಿಂದ ಉಲ್ಲೇಖಿಸಲಾಗುತ್ತದೆ. ಎಷ್ಟೋ ಮಹಿಳಯರು ಪಾತ್ರಗಳಿಗಾಗಿ ಈ ರೀತಿ ಗುಂಪಿಗೆ ಸೇರಿದ್ದಾರೆ ಅನ್ನೋ ಆತಂಕಕಾರಿ ಅಂಶ ಕೂಡ ವರದಿಯಲ್ಲಿದೆ. ನಟಿಯೊಬ್ಬಳು ನಟನಿಂದ ದೌರ್ಜನ್ಯಕ್ಕೆ ಒಳಗಾಗಿ, ಮರುದಿನವೇ ಆಕೆ ಆತನೊಂದಿಗೆ ಪತ್ನಿಯಾಗಿ ಸಿನಿಮಾದಲ್ಲಿ ನಟಿಸಬೇಕಿತ್ತು. ಆಘಾತದಲ್ಲಿದ್ದ ನಟಿಯು ಆ ದೃಶ್ಯವನ್ನು ಎದುರಿಸೋಕೆ ಆಗದೇ 17 ಟೇಕ್ ಗಳನ್ನು ತೆಗೆದುಕೊಂಡಳು. ಮತ್ತು ಅವನನ್ನು ಎದುರಿಸೋಕೆ ಆಗದೇ ದೃಶ್ಯ ಮುಗಿಸಲು ಹರಸಾಹಸ ಪಟ್ಟಳು. ಆ ದೃಶ್ಯದಲ್ಲಿ ಒಬ್ಬರನ್ನೊಬ್ಬರು ತಬ್ಬಿಕೊಳ್ಳುವಂಥ ದೃಶ್ಯವಿತ್ತು. ನಿಜಕ್ಕೂ ಅದು ಭಯಾನಕ ಆಗಿತ್ತು ಎಂದು ಆ ನಟಿ ಹೇಳಿಕೊಂಡಿದ್ದಾಳೆ.
ಮಲಯಾಳಂ ಸಿನಿಮಾ ರಂಗದಲ್ಲಿ ನಟಿಯರ ಮನೆ ಬಾಗಿಲುಗಳು ಅಥವಾ ತಂಗಿದ ಸ್ಥಳಗಳ ಬಾಗಿಲುಗಳು ಬಡಿದುಕೊಳ್ಳುತ್ತಲೇ ಇರುತ್ತವೆ. ನಟಿಯರು ಸ್ಪಂದಿಸದೇ ಹೋದರೆ, ಬಾಗಿಲು ಬಡಿತ ಇನ್ನೂ ಜೋರಾಗುತ್ತವೆ ಎಂದು ಮತ್ತೋರ್ವ ನಟಿಯೊಬ್ಬರು ಸಮಿತಿಯ ಮುಂದೆ ಕರಾಳತೆಯನ್ನು ಬಿಚ್ಚಿಟ್ಟಿದ್ದಾರೆ. ಜೀವಭಯ ಕಾರಣದಿಂದಾಗಿ ಪೊಲೀಸರನ್ನು ಸಂಪರ್ಕಿಸಲು ಸಾಕಷ್ಟು ಜನರು ಹಿಂದೇಟು ಹಾಕಿದ್ದಾರೆ ಅಂತಿದೆ ವರದಿ. ಧೈರ್ಯದಿಂದ ದೂರು ನೀಡಿದರೆ, ಆ ನಟಿಯ ಬದುಕೇ ಮುಗಿದು ಹೋಗುತ್ತದೆ ಅನ್ನೋ ಅಂಶ ಕೂಡ ಉಲ್ಲೇಖವಾಗಿದೆ. ನಟಿಯ ವೃತ್ತಿ ಜೀವನ ಮುಗಿಸುವುದರ ಜೊತೆಗೆ ಆ ಕುಟುಂಬಗಳನ್ನು ಗುರಿಯಾಗಿಸಿ ನಿತ್ಯ ಬೆದರಿಕೆ ಹಾಕಲಾಗುತ್ತದೆ ಎನ್ನುವುದನ್ನೂ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಕುಟುಂಬಕ್ಕೆ ಬೆದರಿಕೆ ಜೊತೆಗೆ ಮತ್ತೆ ಅವಕಾಶ ಸಿಗುವುದಿಲ್ಲ ಅನ್ನೋ ಕಾರಣಕ್ಕೆ ಅನೇಕ ನಟಿಯರು ಮೌನಕ್ಕೆ ಜಾರಿದ್ದಾರಂತೆ.
ಜ್ಯೂನಿಯರ್ ಆರ್ಟಿಸ್ಟ್ ಕುರಿತಂತೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಲೈಂಗಿಕ ಹೊಂದಾಣಿಕೆ ಇರದೇ ಹೋದರೆ ಜ್ಯೂನಿಯರ್ ಕಲಾವಿದರಿಗೆ ಅವಕಾಶವೇ ಸಿಗೋದಿಲ್ಲ ಅಂತಿದೆ ವರದಿ. ವಾಟ್ಸಪ್ ಗ್ರೂಪ್ ಗಳನ್ನು ಮಾಡಿಕೊಂಡು ಜ್ಯೂನಿಯರ್ ಆರ್ಟಿಸ್ಟ್ ಸಂಯೋಜಕರು ಮತ್ತು ಮ್ಯಾನೇಜರ್ ಗಳು ನಿತ್ಯ ಕಿರುಕುಳ ನೀಡುತ್ತಲೇ ಇರುತ್ತಾರೆ. ಕೆಲಸ ಬೇಕು ಅಂದರೆ ಸಹಕರಿಸಲೇಬೇಕು ಅಂತಿದೆ ವರದಿ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕರಾಗಿರುವ ಪ್ರೀತಂ ಗೌಡಗೆ (Preetham Gowda) ಎಸ್‍ಐಟಿ ಅಧಿಕಾರಿಗಳು ನೊಟೀಸ್ ನೀಡುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಪೆನ್‍ಡ್ರೈವ್ (Prajwal Pendrive Case) ಖರೀದಿ ಮಾಡಿಸಿದ್ದು ಪ್ರೀತಂ ಗೌಡ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪ್ರೀತಂಗೌಡ ವಿರುದ್ಧ ಸಿಐಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಸಂತ್ರಸ್ತೆಯಿಂದ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಎಸಗಿರುವ ವೀಡಿಯೋ ಮಾಡಿ ಶೇರ್ ಮಾಡಿರುವ ಆರೋಪ ಶಾಸಕರ ಮೇಲಿದೆ. ಹೀಗಾಗಿ ಪ್ರಜ್ವಲ್ ಜೊತೆಗೆ ಹಾಸನ ಮಾಜಿ ಶಾಸಕ ಪ್ರೀತಂ ಗೌಡ, ಚೇತನ್ ಹಾಗೂ ಕ್ವಾಲಿಟಿ ಬಾರ್ ಶರತ್ ವಿರುದ್ಧ ಕೂಡ ಕಳೆದ ವಾರ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲಿನ ದೌರ್ಜನ್ಯ) , ಐಟಿ ಆಕ್ಟ್ 66ಇ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ವಿಡೀಯೋ ಹಂಚಿಕೆ ಸಂಬಂಧ ದಾಖಲಾಗಿರುವ ಎಫ್ ಐ ಆರ್ ನಲ್ಲಿ ಪ್ರೀತಮ್ ಗೌಡ ನಾಲ್ಕನೆ ಆರೋಪಿಯಾಗಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಮಾಜಿ ಶಾಸಕ ಪ್ರೀತಂ ಗೌಡಗೆ ಎಸ್‍ಐಟಿ ನೊಟೀಸ್ ನೀಡುವ ಸಾಧ್ಯತೆಗಳಿವೆ. ಬಳಿಕ 66ಇ ಸೆಕ್ಷನ್ (ಗೌಪ್ಯತೆಯ ಉಲ್ಲಂಘನೆ) ಅಡಿ ಬಂಧನ ಮಾಡಿ ವಿಚಾರಣೆ ಮಾಡುವ ಸಾಧ್ಯತೆಗಳಿವೆ. ಇದನ್ನೂ ಓದಿ: ಸೂರಜ್ ರೇವಣ್ಣಗೆ ಇಂದೂ ಮೆಡಿಕಲ್ ಟೆಸ್ಟ್ – ಲಿಂಗತ್ವ ಪರೀಕ್ಷೆ ಸಾಧ್ಯತೆ!
ತಮ್ಮ ವಿರುದ್ಧ ಎಫ್‍ಐಆರ್ ದಾಖಲಾದ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿದ್ದ ಅವರನ್ನು ಮಾಧ್ಯಮವರು ಈ ಬಗ್ಗೆ ಕೇಳಿದಾಗ, ಪ್ರಕರಣ ದಾಖಲಾದ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ತಿಳಿದುಕೊಳ್ಳುತ್ತೇನೆ. ಆ ಬಳಿಕ ಬಂದು ಮತ್ತೆ ಮಾತಾಡ್ತೇನೆ ಎಂದು ಹೇಳಿ ತರಾತುರಿಯಲ್ಲಿ ಕಾರು ಹತ್ತಿ ಹೊರಟರು.
ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಅವರನ್ನ ಪೊಲೀಸರು ಬಂಧಿಸಿದ್ದಾರೆ.
ಹಾಸನದ ಸೆನ್ ಪೊಲೀಸ್ ಠಾಣೆಯಲ್ಲಿಯೇ (SEN Police Hassan) ಪೊಲೀಸರು ಬಂಧಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‌ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ವೆಬ್ ಆಪ್ ಬಳಸಿ ಮಾತನಾಡಿರೋ ಆರೋಪಿಗಳು- ರಿಮ್ಯಾಂಡ್ ಕಾಪಿಯಲ್ಲಿ ಸ್ಫೋಟಕ ಅಂಶ ಬಯಲು
ಸೂರಜ್ ಲಾಕ್ ಆಗಿದ್ದು ಹೇಗೆ?
ಶನಿವಾರ ರಾತ್ರಿ ತನ್ನ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಸಂತ್ರನ ವಿರುದ್ಧ ಪ್ರತಿದೂರು ನೀಡಲು ಸಂಜೆ 6 ಗಂಟೆ ವೇಳೆಗೆ ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ಬಂಧಿಸಿದ್ದ ಪೊಲೀಸರು ರಾತ್ರಿ ಸುಮಾರು 11:30ರ ವರೆಗೂ ವಿಚಾರಣೆ ನಡೆಸಿದ್ದರು. ಬಳಿಕ ಸೂರಜ್ ಜೊತೆಗೆ ನಿಗೂಢ ಸ್ಥಳಕ್ಕೆ ತೆರಳಿದ್ದ ಪೊಲೀಸರು ತಡರಾತ್ರಿ 1:30ರ ವರೆಗೂ ವಿಚಾರಣೆ ಮುಂದುವರಿಸಿದ್ದರು. ಪ್ರಕರಣದ ತನಿಖಾಧಿಕಾರಿ ಆಗಿರುವ ಸಕಲೇಶಪುರ ಡಿವೈಎಸ್‌ಪಿ ಪ್ರಮೋದ್ ಕುಮಾರ್ ಅವರು ಸೂರಜ್ ರೇವಣ್ಣ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿದ್ದರು.
ಸಂತ್ರಸ್ತನ ದೂರಿನಲ್ಲಿ ಏನಿತ್ತು?
ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ದರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ನನ್ನ ನಂಬರನ್ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ತಲೆಕೆಡಿಸಿಕೊಳ್ಳಬೇಡಿ ಸರ್- ಜೈಲುಪಾಲಾದ ದರ್ಶನ್‌ಗೆ ಧೈರ್ಯ ಹೇಳಿದ ಅಭಿಮಾನಿ
ಶುಕ್ರವಾರ ಡಿಜಿ ಕಛೇರಿಯಲ್ಲಿ ಸಂತ್ರಸ್ತ ದೂರು ನೀಡಿದ್ದ. ಅಲ್ಲದೇ ಹಾಸನ ಎಸ್‌ಪಿಗೂ ದೂರಿನ ಪ್ರತಿ ಮೇಲ್ ಮಾಡಿದ್ದ. ಇದೀಗ ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಸಂತ್ರಸ್ತ ದೂರು: ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್‍ನ್ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.