Tag: Sexual Harassment Case

  • ಸ್ವಾಮಿ ಚೈತನ್ಯಾನಂದಗೆ ಸಹಕರಿಸುವಂತೆ ವಿದ್ಯಾರ್ಥಿನಿಯರಿಗೆ ಒತ್ತಡ – ಮೂವರು ಸಹಾಯಕಿಯರು ಅರೆಸ್ಟ್‌

    ಸ್ವಾಮಿ ಚೈತನ್ಯಾನಂದಗೆ ಸಹಕರಿಸುವಂತೆ ವಿದ್ಯಾರ್ಥಿನಿಯರಿಗೆ ಒತ್ತಡ – ಮೂವರು ಸಹಾಯಕಿಯರು ಅರೆಸ್ಟ್‌

    ನವದೆಹಲಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ (Sexual Harassment Case) ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿಯ (Swami Chaitanyananda) ಮೂವರು ಆಪ್ತ ಸಹಾಯಕಿಯರನ್ನು ದೆಹಲಿಯ ವಸಂತ್ ಕುಂಜ್ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಮೂವರು ಮಹಿಳಾ ಸಹಾಯಕಿಯರನ್ನು ಶ್ವೇತಾ ಶರ್ಮಾ (ಅಸೋಸಿಯೇಟ್ ಡೀನ್), ಭಾವನಾ ಕಪಿಲ್ (ಕಾರ್ಯನಿರ್ವಾಹಕ ನಿರ್ದೇಶಕಿ) ಹಾಗೂ ಕಾಜಲ್ (ಹಿರಿಯ ಅಧ್ಯಾಪಕಿ) ಎಂದು ಗುರುತಿಸಲಾಗಿದೆ. ಈ ಮೂವರು ಸ್ವಾಮೀಜಿ ನಿರ್ದೇಶನದ ಮೇಲೆ ವಿದ್ಯಾರ್ಥಿನಿಯರ ಮೇಲೆ ಒತ್ತಡ ಹಾಕುತ್ತಿದ್ದರು. ಶಿಸ್ತು ಮತ್ತು ಸಮಯಪಾಲನೆ ನೆಪದಲ್ಲಿ ಒತ್ತಡ ಹೇರುವ ಪ್ರಯತ್ನ ಮಾಡಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ಅಪರಾಧ ಕೃತ್ಯಕ್ಕೆ ಪ್ರಚೋದನೆ, ದೂರುದಾರರಿಗೆ ಬೆದರಿಕೆ, ಸಾಕ್ಷ್ಯಗಳನ್ನು ನಾಶಪಡಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದರ ನಡುವೆ ವಿದ್ಯಾರ್ಥಿನಿಯರೊಂದಿಗೆ ಸ್ವಾಮೀಜಿ ತಂಗಿದ್ದರು ಎನ್ನಲಾದ ಉತ್ತರಾಖಂಡದ ಅಲ್ಮೋರಾದಲ್ಲಿರುವ ಅತಿಥಿ ಗೃಹಕ್ಕೆ ಪೊಲೀಸರ ತಂಡ ಭೇಟಿ ನೀಡಿ ಪರಿಶಿಲನೆ ನಡೆಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್‌ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ

  • ಕೊನೆಗೂ ಮುರುಘಾ ಶ್ರೀ ಬಂಧನ

    ಕೊನೆಗೂ ಮುರುಘಾ ಶ್ರೀ ಬಂಧನ

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಬ್ಯಾರಿಕೇಡ್‌ ಹಾಕುವ ಜೊತೆಗೆ ಎಲ್ಲ ಕಡೆಯೂ ಬಿಗಿ ಬಂದೋಬಸ್ತ್‌ ಮಾಡಲಾಗುತ್ತಿದೆ. ಹೆಚ್ಚಿನ ಭದ್ರತೆಯಾಗಿ ದಾವಣಗೆರೆಯಿಂದ ಸಿಪಿಐ ಮತ್ತು ಮೇಲಿನ ಅಧಿಕಾರಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ರೇಪ್‌ ಕೇಸ್‌ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌, ಪತ್ನಿಗೆ ಜಾಮೀನು

    ಇಂದು ಎರಡನೇ ಆರೋಪಿ ರಶ್ಮಿ ಅವರ ವಿಚಾರಣೆ ನಡೆದಿದ್ದು,  ಪ್ರಕರಣ ದಾಖಲಾದ 6 ದಿನದ ಬಳಿಕ  ಶ್ರೀಗಳನ್ನು ಬಂಧನ ಮಾಡಲಾಗಿದೆ. ಇದನ್ನೂ ಓದಿ: ಸ್ವಾಮೀಜಿಗಳ ಲೈಂಗಿಕ ದೌರ್ಜನ ಆರೋಪದ ಕೇಸನ್ನು ಸಿಬಿಐಗೆ ಒಪ್ಪಿಸಿ: ಹಿಂದುಸ್ತಾನ್ ಜನತಾ ಪಕ್ಷ ಒತ್ತಾಯ

    ಸದ್ಯ ಲೈಂಗಿಕ ದೌರ್ಜನ್ಯ ಆರೋಪ, ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಈಗಾಗಲೇ ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಈ ಬೆನ್ನಲ್ಲೇ ಶ್ರೀಗಳನ್ನು ವಶಕ್ಕೆ ಪಡೆಯುವ ಸಿದ್ಧತೆಯೂ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • CBI ತನಿಖೆ ಮಾಡಿದ್ರೆ ಮುರುಘಾ ಮಠದ ಇನ್ನಷ್ಟು ಕೇಸ್ ಬೆಳಕಿಗೆ ಬರುತ್ತೆ – ಒಡನಾಡಿ ಸಂಸ್ಥೆ

    CBI ತನಿಖೆ ಮಾಡಿದ್ರೆ ಮುರುಘಾ ಮಠದ ಇನ್ನಷ್ಟು ಕೇಸ್ ಬೆಳಕಿಗೆ ಬರುತ್ತೆ – ಒಡನಾಡಿ ಸಂಸ್ಥೆ

    ಮೈಸೂರು: ಮುರುಘಾ ಮಠದ ಶ್ರೀಗಳ ಮೇಲೆ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಿದ್ರೆ ಈ ಮಠದಲ್ಲಿನ ಮತ್ತಷ್ಟು ಇಂತಹ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರಲಿವೆ ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ಟ್ಯಾನ್ಲಿ, ಈ ಪ್ರಕರಣದಲ್ಲಿ ಮಕ್ಕಳಿಗೆ ಸಾಕಷ್ಟು ಒತ್ತಡವಿದೆ. ಶೇ.90 ರಷ್ಟು ಜನ ಸ್ವಾಮೀಜಿ ಪರವಾಗಿಯೇ ಇದ್ದಾರೆ ಎನ್ನುವುದು ಅವರಿಗೆ ಗೊತ್ತಾದ್ರೆ ಮತ್ತಷ್ಟು ಆತಂಕಕ್ಕೆ ಒಳಗಾಗುತ್ತಾರೆ. ಮಕ್ಕಳು ಈಗ ನಮ್ಮ ಮುಂದೆ ಏನೂ ಹೇಳಿಕೆ ಕೊಟ್ಟಿದ್ದರೋ ಅದೇ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆಯೂ ಕೊಟ್ಟಿರುತ್ತಾರೆ ಎಂಬ ವಿಶ್ವಾಸ ನಮಗಿದೆ. ಅವರಿಗೆ ಸೂಕ್ತ ನ್ಯಾಯ ಸಿಗಬೇಕು. ಆರೋಪಿಯ ಸ್ಥಾನ-ಮಾನ ನೋಡಿಕೊಂಡು ಕ್ರಮ ಜರುಗಿಸುವುದಾದರೆ ಅಂತಹ ಕಾನೂನಿಗೆ ಮರ್ಯಾದೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರೇಪ್‌ ಕೇಸ್‌ – ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್‌, ಪತ್ನಿಗೆ ಜಾಮೀನು

    ಕುಟುಂಬಕ್ಕೆ ಭದ್ರತೆ ಕಲ್ಪಿಸಿ: ಈಗಾಗಲೇ ನನಗೆ ಮತ್ತು ಪರಶುರಾಮ್ ಅವರಿಗೆ ಸಂಧಾನದ ಆಫರ್‌ಗಳು, ಬೆದರಿಕೆ ಕರೆಗಳು ಬರುತ್ತಿವೆ. ಆದ್ದರಿಂದ ರಾಜ್ಯ ಸರ್ಕಾರ ನಮ್ಮ ಒಡನಾಡಿ ಸಂಸ್ಥೆ ಹಾಗೂ ನಮ್ಮ ಕುಟುಂಬಗಳಿಗೆ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

    ಹಿಂದೂಸ್ತಾನ್ ಜನತಾ ಪಕ್ಷದಿಂದಲೂ ಒತ್ತಾಯ: ಈಗಾಗಲೇ ಮುರುಘಾ ಮಠದ ಶ್ರೀಗಳ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆ ಸೂಕ್ತ ಮಟ್ಟದಲ್ಲಿ ನಡೆಯುತ್ತಿಲ್ಲ ಎನ್ನುವುದು ಸಾರ್ವಜನಿಕರಲ್ಲಿ ಅನುಮಾನ ವ್ಯಕ್ತವಾಗುತ್ತಿದೆ. ಆದ್ದರಿಂದ ಈ ಕೇಸನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಹಿಂದೂಸ್ತಾನ್ ಜನತಾ ಪಕ್ಷದಿಂದ ಒತ್ತಾಯಿಸಿದೆ. ಇದನ್ನೂ ಓದಿ: ಮುರುಘಾ ಶ್ರೀಗೆ ಸದ್ಯಕ್ಕಿಲ್ಲ ರಿಲೀಫ್‌ – ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಹರೀಶ್, ನನಗೆ ತಿಳಿದಿರುವ ಹಾಗೆ ಯಾವುದೇ ಕೇಸ್‌ನಲ್ಲಿ ಆಪಾದನೆ ಬಂದ ಕೂಡಲೇ ಆಪಾದಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಆಮೇಲೆ ವಿಚಾರಣೆಗೆ ಒಳಪಡಿಸುತ್ತಾರೆ. ಆದರೆ ಇಂದಿಗೆ 7 ದಿನ ಆದರೂ ಸ್ವಾಮೀಜಿಯ ಬಂಧನವಾಗಿಲ್ಲ, ವಿಚಾರಣೆಯೂ ನಡೆದಿಲ್ಲ. ಪ್ರತಿಷ್ಠಿತ ದೊಡ್ಡ ಸಮಾಜದ ಮಠದ ಸ್ವಾಮೀಜಿ ಎಂದು ಅಂಜಿಕೆಯೇ? ಅಥವಾ ಆ ಸಮಾಜದ ವೋಟ್ ಬ್ಯಾಂಕನ್ನು ಕಳೆದುಕೊಳ್ಳುತ್ತೇವೆ ಎನ್ನುವ ಭಯವೇ ಎಂದು ಪ್ರಶ್ನಿಸಿದ್ದಾರೆ.

    ಕನ್ನಡಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳು ಸಣ್ಣ ಪುಟ್ಟ ವಿಚಾರಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡುತ್ತವೆ. ರಾಜ್ಯದಲ್ಲಿ ನಡೆದಿರುವಂತಹ ಇಂತಹ ದೊಡ್ಡ ದೌರ್ಜನ್ಯದ ಹಗರಣದ ವಿರುದ್ಧ ಯಾಕೆ ಗಟ್ಟಿ ಹೋರಾಟ ಮಾಡುತ್ತಿಲ್ಲ ಎನ್ನುವುದು ನಮ್ಮ ಪ್ರಶ್ನೆ. ಆದ್ದರಿಂದ ಪ್ರತಿಷ್ಠಿತ ರಾಜಕಾರಣಿಗಳು, ವಿರೋಧ ಪಕ್ಷಗಳು ಸ್ವಾಮೀಜಿಗೆ ಬೆಂಬಲ ನೀಡುತ್ತಿವೆ. ಇಂತಹ ಸಂದರ್ಭದಲ್ಲಿ ನಾವು ಅನಾಥ, ದಲಿತ ಹೆಣ್ಣು ಮಕ್ಕಳ ಪರವಾಗಿ ಧ್ವನಿ ಎತ್ತಬೇಕು ಕರೆ ನೀಡಿವೆ.

    Live Tv
    [brid partner=56869869 player=32851 video=960834 autoplay=true]