Tag: sexually harrassment

  • 142 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಾಂಶುಪಾಲ ಅರೆಸ್ಟ್

    142 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಾಂಶುಪಾಲ ಅರೆಸ್ಟ್

    ಚಂಡೀಗಢ: ಬರೋಬ್ಬರಿ 142 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಾಂಶುಪಾಲರನ್ನು ಬಂಧಿಸಲಾಗಿದೆ.

    ಈ ಘಟನೆ ಹರಿಯಾಣದ (Hariyana) ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯ ಪ್ರಿನ್ಸಿಪಲ್ ಮೇಲೆ ಈ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ಪ್ರಾಂಶುಪಾಲರನ್ನು ಬಂಧಿಸಲಾಗಿದೆ. ಆರಂಭದಲ್ಲಿ 60 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ (Sexual Harassment) ಆರೋಪ ಹೊರಿಸಿದ್ದರು. ಆದರೆ ಇದೀಗ ಅದರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.

    ಆರೋಪವೇನು..?: 55 ವರ್ಷದ ಪ್ರಾಂಶುಪಾಲರು ಮೊದಲು ನಮ್ಮನ್ನು ಆಫೀಸಿಗೆ ಕರೆಯುತ್ತಾರೆ. ಬಳಿಕ ತಮ್ಮ ಜೊತೆ ಅಶ್ಲೀಲವಾಗಿ ನಡೆದುಕೊಳ್ಳುತ್ತಾರೆ ಎಂದು ಸಂತ್ರಸ್ತೆಯರು ದೂರಿರುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ದೇಶದಲ್ಲಿ ‘ಖೇಲೋ ಇಂಡಿಯಾ ಪ್ಯಾರಾ ಗೇಮ್ಸ್‌’ ಆಯೋಜನೆ: ಅನುರಾಗ್‌ ಠಾಕೂರ್‌

    ಹರಿಯಾಣ ಪೊಲೀಸರು ನವೆಂಬರ್ 6 ರಂದು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ. ಹರಿಯಾಣ ರಾಜ್ಯ ಮಹಿಳಾ ಆಯೋಗವು ಪೊಲೀಸರಿಗೆ ಅಲ್ಟಿಮೇಟಮ್ ನಂತರ ಬಂಧನ ನಡೆದಿದೆ. ಜಿಂದ್ ಜಿಲ್ಲಾಧಿಕಾರಿ ಪ್ರಕರಣವನ್ನು ಖಚಿತಪಡಿಸಿದ್ದಾರೆ. ಈ ಕುರಿತು ವಿವಿಧ ಇಲಾಖೆಗಳಿಂದ ತನಿಖೆ ನಡೆಯುತ್ತಿದೆ.

    ಶಾಲೆಯ ಕೆಲವು ವಿದ್ಯಾರ್ಥಿನಿಯರಿಂದ ಪ್ರಾಥಮಿಕ ದೂರನ್ನು ಹರಿಯಾಣ ರಾಜ್ಯ ಮಹಿಳಾ ಆಯೋಗವು ಸೆಪ್ಟೆಂಬರ್ 14 ರಂದು ಪೊಲೀಸರಿಗೆ ರವಾನಿಸಿತು ಆದರೆ ಅಕ್ಟೋಬರ್ 30 ರಂದು ಮಾತ್ರ ಕ್ರಮ ತೆಗೆದುಕೊಳ್ಳಲಾಯಿತು. ನಂತರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಲಾಗಿತ್ತು. ಶಿಕ್ಷಣ ಇಲಾಖೆ ಆರೋಪಿಯನ್ನು ಅಕ್ಟೋಬರ್ 27 ರಂದು ಅಮಾನತುಗೊಳಿಸಿದೆ.

  • 15ರ ಮಗಳ ಮೇಲೆ ಪೊಲೀಸಪ್ಪನಿಂದ ಲೈಂಗಿಕ ದೌರ್ಜನ್ಯ- ಶಾಕ್ ನಿಂದ ತಂದೆ ಸಾವು!

    15ರ ಮಗಳ ಮೇಲೆ ಪೊಲೀಸಪ್ಪನಿಂದ ಲೈಂಗಿಕ ದೌರ್ಜನ್ಯ- ಶಾಕ್ ನಿಂದ ತಂದೆ ಸಾವು!

    ಲಕ್ನೋ: ಪೊಲೀಸ್ ಪೇದೆಯೊಬ್ಬ ಅಪ್ತಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆಯೊಂದು ಉತ್ತರಪ್ರದೇಶದ ರೆಟೋ ಪ್ರದೇಶದಲ್ಲಿ ನಡೆದಿರುವ ಬಗ್ಗೆ ಇಂದು ಬೆಳಕಿಗೆ ಬಂದಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸ್ ಧರಮ್(38) ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕೆಲಸದಿಂದ ವಜಾ ಮಾಡಲಾಗಿದೆ.

    ಏನಿದು ಪ್ರಕರಣ?: ಶುಕ್ರವಾರ ರಾತ್ರಿ 15 ವರ್ಷದ ಬಾಲಕಿ ಮನೆಯಿಂದ ಹೊರಗಡೆ ಹೊಗಿದ್ದ ವೇಳೆ ಪೊಲೀಸಪ್ಪ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಬಾಲಕಿ ಕಿರುಚಿಕೊಂಡಿದ್ದಾಳೆ. ಬಾಲಕಿಯ ಧ್ವನಿ ಕೇಳುತ್ತಿದ್ದಂತೆಯೇ ಸಾರ್ವಜನಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾರ್ವಜನಿಕರು ಜಮಾಯಿಸುತ್ತಿದ್ದಂತೆಯೇ ಇತ್ತ ಪೊಲೀಸಪ್ಪ ಅಲ್ಲಿಂದ ಕಾಲ್ಕಿತ್ತಿದ್ದಾನೆ ಅಂತ ಎಎಸ್‍ಪಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಈ ಘಟನೆಯ ಬಳಿಕ ಬಾಲಕಿಯ ತಂದೆ ಮೃತಪಟ್ಟಿದ್ದಾರೆ. ತನ್ನ ಮಗಳ ಮೇಲಿನ ಲೈಂಗಿಕ ದೌರ್ಜನ್ಯದ ಸುದ್ದಿ ತಿಳಿದು ಅವರು ಮೃತಪಟ್ಟಿದ್ದಾರೆ ಅಂತ ಕುಟುಂಬ ಆರೋಪಿಸುತ್ತಿದೆ.ಸದ್ಯ ಬಾಲಕಿಯ ಪೋಷಕರು ಪೊಲೀಸಪ್ಪನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ.