Tag: shabarimale issue

  • ಶಬರಿಮಲೆ ವಿಚಾರ ನಿರ್ಧರಿಸಲು ಜಾತ್ಯಾತೀತ ಸರ್ಕಾರಕ್ಕೆ ಹಕ್ಕಿಲ್ಲ: ಪೇಜಾವರ ಶ್ರೀ

    ಶಬರಿಮಲೆ ವಿಚಾರ ನಿರ್ಧರಿಸಲು ಜಾತ್ಯಾತೀತ ಸರ್ಕಾರಕ್ಕೆ ಹಕ್ಕಿಲ್ಲ: ಪೇಜಾವರ ಶ್ರೀ

    ಉಡುಪಿ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಪಟ್ಟಂತೆ ಧಾರ್ಮಿಕ ಮುಖಂಡರ ಸಭೆ ಕರೆಯಲಿ. ಅದನ್ನ ಬಿಟ್ಟು ಜಾತ್ಯಾತೀತ ಸರ್ಕಾರಕ್ಕೆ ಈ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳುವ ಹಕ್ಕಿಲ್ಲ ಎಂದು ಪೇಜಾವರ ಶ್ರೀಗಳು ಅಭಿಪ್ರಾಯ ಪಟ್ಟಿದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು, ಕೇರಳ ಸರ್ಕಾರ ಜನಮತಗಣತೆ ಮಾಡಬೇಕು. ಹಿಂದೂಗಳ ಅಭಿಪ್ರಾಯವನ್ನ ಪಡೆದುಕೊಳ್ಳಬೇಕು. ಅದಾಗದಿದ್ರೆ ಧಾರ್ಮಿಕ ಮುಖಂಡರ ಸಭೆ ಕರೆದು ಇತ್ಯರ್ಥ ಮಾಡಲಿ. ಅದನ್ನ ಬಿಟ್ಟು ಜಾತ್ಯಾತೀತ ಸರ್ಕಾರಕ್ಕೆ ದೇವರ ಮೇಲೆ ನಂಬಿಕೆ ಇಲ್ಲವೆಂದ ಮೇಲೆ ಅವರಿಗೆ ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ಅದ್ಯಾವ ಹಕ್ಕಿದೆ ಎಂದು ಪ್ರಶ್ನಿಸಿದ್ದಾರೆ.

    ಧಾರ್ಮಿಕವಾಗಿ ನಾನು ಹಲವಾರು ಪರಿವರ್ತನೆ ಮಾಡಿದ್ದೇನೆ. ಜೊತೆಗೆ ಹಲವಾರು ಸಂಪ್ರದಾಯವನ್ನು ಕೂಡ ಅನುಸರಿಸಿದ್ದೇನೆ. ಇದು ಸಂಪ್ರದಾಯ ಮತ್ತು ಶಾಸ್ತ್ರದ ತಿಕ್ಕಾಟ ಆಗಿರೋದ್ರಿಂದ ಜಾತ್ಯಾತೀತ ಸರ್ಕಾರ ಇದನ್ನ ತೀರ್ಮಾನ ಮಾಡಬಾರದು. ಧಾರ್ಮಿಕ ಮುಖಂಡರು ಹಾಗೂ ಹಿಂದೂ ಜನತೆ ಇದನ್ನ ತೀರ್ಮಾನ ಮಾಡಬೇಕು. ಮಹಿಳೆಯರು ಇದನ್ನ ಅವಮಾನ ಅಂತ ಭಾವಿಸಬಾರದು ಎಂದು ಪೇಜಾವರ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐವರು ಅಯ್ಯಪ್ಪ ಮಾಲಾಧಾರಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ..!

    ಜನಾಭಿಪ್ರಾಯಕ್ಕೆ ಮಣಿದು ಶ್ರೀ ರಾಮ ಸೀತೆಯನ್ನ ಕಾಡಿಗೆ ಕಳುಹಿಸಿದ ಅನ್ನೋದು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಾಗಿದೆ. ಹಾಗೆಯೇ ಕೇರಳ ಸರ್ಕಾರ ತನ್ನ ಹಠವನ್ನ ಬಿಟ್ಟು ಇದನ್ನೂ ಕೂಡ ಜನಾಭಿಪ್ರಾಯಕ್ಕೆ ಬಿಡಬೇಕು ಎಂದರು. ಹಾಗೆಯೇ ತಲಾಖ್ ವಿಚಾರವನ್ನ ಪ್ರಸ್ತಾಪಿಸಿದ ಶ್ರೀಗಳು, ತಲಾಖ್ ವಿಚಾರವನ್ನು ಶಬರಿಮಲೆಗೆ ತಳಕು ಹಾಕುವ ಅಗತ್ಯ ಇಲ್ಲ. ತಲಾಖ್ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆಗೆ ಸಮಾನ. ನಾನು ತಲಾಖ್ ವಿರುದ್ಧ ಕಾಯ್ದೆಗೆ ಬೆಂಬಲಿಸುತ್ತೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

    ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

    ತಿರುವನಂತಪುರಂ: 50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇವಾಲಯವನ್ನು ಇಂದು ಬೆಳಗ್ಗೆ ಪ್ರವೇಶಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮಹಿಳೆಯರಿಗೆ ಸಮವಸ್ತ್ರ ಧರಿಸಿದ್ದ ಪೊಲೀಸರು ರಕ್ಷಣೆ ನೀಡಿದ್ದಾರೆ.

    ಡಿಸೆಂಬರ್ ನಲ್ಲಿ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿಲು ಪ್ರಯತ್ನ ನಡೆಸಿದ್ದರು. ಆದರೆ ಈ ವೇಳೆ ಭಾರೀ ಪ್ರತಿಭಟನೆ ನಡೆದ ಪರಿಣಾಮ ದೇವಾಲಯ ಪ್ರವೇಶಿಸುವ ನಿರ್ಧಾರದಿಂದ ಮಹಿಳೆಯರು ಹಿಂದಕ್ಕೆ ಸರಿದಿದ್ದರು.

    ಸುಪ್ರೀಂ ಕೋರ್ಟ್ ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿದ ನಂತರ ಸಾಕಷ್ಟು ಹೋರಾಟಗಳು ನಡೆದಿತ್ತು. ಹಿಂದೂ ಸಂಘಟನೆಗಳು ತೀರ್ಪನ್ನು ವಿರೋಧಿಸಿ ಕೇರಳ ರಾಜ್ಯದಲ್ಲಿ ಪ್ರತಿಭಟನೆ ನಡೆಸಿದ್ದರೆ, ಮಹಿಳಾ ಪರ ಸಂಘಟನೆಗಳು ತೀರ್ಪನ್ನು ಸ್ವಾಗತಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv