Tag: Shabarimale

  • ಕೇರಳ ಉದ್ವಿಗ್ನ- KSRTC ಬಸ್ ಮೇಲೆ ಕಲ್ಲು ತೂರಾಟ, ಸಂಚಾರ ಸ್ಥಗಿತ

    ಕೇರಳ ಉದ್ವಿಗ್ನ- KSRTC ಬಸ್ ಮೇಲೆ ಕಲ್ಲು ತೂರಾಟ, ಸಂಚಾರ ಸ್ಥಗಿತ

    ಬೆಂಗಳೂರು: ಶಬರಿಮಲೆ ವಿಚಾರದಲ್ಲಿ ಕೇರಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಕೇರಳಕ್ಕೆ ಸಂಚರಿಸುತ್ತಿದ್ದ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‍ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

    ಬೆಂಗಳೂರಿನಿಂದ 3 ಬಸ್, ಮಂಗಳೂರಿನಿಂದ ಕೇರಳಕ್ಕೆ ಸಂಚಾರ ಮಾಡುತ್ತಿದ್ದ 40ಕ್ಕೂ ಹೆಚ್ಚು ಬಸ್ ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೇರಳಕ್ಕೆ ಹೋಗಬೇಕಿದ್ದ 20 ಬಸ್‍ಗಳ ಸೇವೆಯನ್ನು ಕೆಎಸ್‌ಆರ್‌ಟಿಸಿ ನಿಲ್ಲಿಸಿದೆ.

    ಕೆಎಸ್‌ಆರ್‌ಟಿಸಿ ಬಸ್‍ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ತ್ರಿಶೂರ್ ನಲ್ಲಿ ಅಂಬಾರಿ ಬಸ್‍ಗೆ ಕಲ್ಲು ಹೊಡೆದ ಪರಿಣಾಮ ಹಿಂಭಾಗದ ಗಾಜು ಪುಡಿ ಪುಡಿಯಾಗಿದೆ. ಅಲ್ಲದೆ ತಿರುವನಂತಪುರಂನ ಪಳ್ಳಿಪುರಂ ಎಂಬಲ್ಲಿ ಇನ್ನೊಂದು ಕೆಎಸ್‌ಆರ್‌ಟಿಸಿ ಬಸ್ ಮೇಲೂ ಕಲ್ಲು ತೂರಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಸ್ ಮೈಸೂರು ಡಿಪೋ ಸೇರಿದ್ದು, ಮೈಸೂರು-ತಿರುವನಂತಪುರಂ ರೂಟ್‍ನಲ್ಲಿ ಸಾಗುತ್ತಿತ್ತು. ಒಟ್ಟು ಕರ್ನಾಟಕದ 2 ಬಸ್‍ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಹಾಗೆಯೇ ಕೇರಳ ಸಾರಿಗೆಯ 79 ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

    ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

    ತಿರುವನಂತಪುರಂ: 50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇವಾಲಯವನ್ನು ಇಂದು ಬೆಳಗ್ಗೆ ಪ್ರವೇಶಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮಹಿಳೆಯರಿಗೆ ಸಮವಸ್ತ್ರ ಧರಿಸಿದ್ದ ಪೊಲೀಸರು ರಕ್ಷಣೆ ನೀಡಿದ್ದಾರೆ.

    ಡಿಸೆಂಬರ್ ನಲ್ಲಿ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿಲು ಪ್ರಯತ್ನ ನಡೆಸಿದ್ದರು. ಆದರೆ ಈ ವೇಳೆ ಭಾರೀ ಪ್ರತಿಭಟನೆ ನಡೆದ ಪರಿಣಾಮ ದೇವಾಲಯ ಪ್ರವೇಶಿಸುವ ನಿರ್ಧಾರದಿಂದ ಮಹಿಳೆಯರು ಹಿಂದಕ್ಕೆ ಸರಿದಿದ್ದರು.

    ಸುಪ್ರೀಂ ಕೋರ್ಟ್ ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿದ ನಂತರ ಸಾಕಷ್ಟು ಹೋರಾಟಗಳು ನಡೆದಿತ್ತು. ಹಿಂದೂ ಸಂಘಟನೆಗಳು ತೀರ್ಪನ್ನು ವಿರೋಧಿಸಿ ಕೇರಳ ರಾಜ್ಯದಲ್ಲಿ ಪ್ರತಿಭಟನೆ ನಡೆಸಿದ್ದರೆ, ಮಹಿಳಾ ಪರ ಸಂಘಟನೆಗಳು ತೀರ್ಪನ್ನು ಸ್ವಾಗತಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

    ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

    ತಿರುವನಂತಪುರಂ: ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಲು ಬಿಡುವುದಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದ್ದಾರೆ.

    ಬುಧವಾರದಿಂದ ಕೇರಳದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ, ಸದನದಲ್ಲೇ ಪ್ರತಿಭಟನೆ ನಡೆಸಿದ್ದರು.

    ಪ್ರತಿಪಕ್ಷಗಳ ಹೋರಾಟಕ್ಕೆ ಮಣಿಯದ ಸಿಎಂ ಪಿಣರಾಯ್, ಶಬರಿಮಲೆಯಲ್ಲಿ ಜಾರಿಮಾಡಲಾಗಿರುವ ನಿಷೇಧಾಜ್ಞೆಯನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸುವುದಿಲ್ಲ. ನಾವು ಸುಪ್ರೀಂ ನ್ಯಾಯಾಲಯದ ತೀರ್ಪನ್ನು ಪಾಲಿಸಬೇಕಾಗಿದೆ. ಶಬರಿಮಲೆಯಲ್ಲಿ ಜಾರಿಯಲ್ಲಿರುವ ಆದೇಶದ ಬಗ್ಗೆ ಹೈ ಕೋರ್ಟ್ ಕೂಡ ಸಮ್ಮತಿ ಸೂಚಿಸಿದೆ. ಹೀಗಾಗಿ ನಿಷೇಧಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

    ಕಾಂಗ್ರೆಸ್ ಬೆಂಬಲದೊಂದಿಗೆ ಸಂಘ ಪರಿವಾರದವರು ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ. ಹೀಗಾಗಿ ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಿ ಮಾಡಲು ಬಿಡುವುದಿಲ್ಲವೆಂದು ಖಡಕ್ ಆಗಿ ಉತ್ತರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಬರಿಮಲೆ ವಿಚಾರವನ್ನು ದೇವರೇ ನೋಡಿಕೊಳ್ಳಲಿ: ಜಯಮಾಲಾ

    ಶಬರಿಮಲೆ ವಿಚಾರವನ್ನು ದೇವರೇ ನೋಡಿಕೊಳ್ಳಲಿ: ಜಯಮಾಲಾ

    ಉಡುಪಿ: ಶಬರಿಮಲೆ ಮಹಿಳೆಯರ ಪ್ರವೇಶದ ವಿಚಾರವನ್ನು ದೇವರೇ ನೋಡಿಕೊಳ್ಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃ ತಿ ಇಲಾಖೆ ಸಚಿವೆ ಜಯಮಾಲಾ ಹೇಳಿದ್ದಾರೆ.

    ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಆತ್ಮಮುಟ್ಟಿಕೊಮಡು ವಿಚಾರ ಮಾಡಲಿ. ಈ ದೇಶ ಎಲ್ಲವನ್ನೂ ಗಮನಿಸುತ್ತಿದೆ. ಅರ್ಧ ಆಕಾಶ, ಅರ್ಧ ಭೂಮಿ ಇದ್ದಂತೆ. ದೇಶದಲ್ಲಿ ಅರ್ಧದಷ್ಟು ಹೆಣ್ಣುಮಕ್ಕಳಿದ್ದಾರೆ. ದೇವರು ನನಗೆ ನಂಬಿಕೆ ಮತ್ತು ನನ್ನ ಬದುಕು. ದೇವರನ್ನೇ ಟಾರ್ಗೆಟ್ ಮಾಡುವವರ ಬಗ್ಗೆ ನಾನೂ ಏನೂ ಹೇಳಲ್ಲ. ನಮಗೆ ಜೀವನದ ಗೆರೆ ಹಾಕಿಕೊಟ್ಟದ್ದು ದೇವರ ನಂಬಿಕೆ. ಹೀಗಾಗಿ ದೇವಸ್ಥಾನವೇ ನನ್ನ ಉಸಿರು. ಅಲ್ಲದೇ ಶಬರಿಮಲೆ ವಿಚಾರದ ಪರ ಹಾಗೂ ವಿರೋಧದ ಬಗ್ಗೆ ಏನನ್ನೂ ಹೇಳಲ್ಲ. ಎಲ್ಲವನ್ನೂ ದೇವರೇ ನೋಡಿಕೊಳ್ಳುತ್ತಾನೆ. ಕೊನೆಗೆ ದೇವರೆ ಒಂದು ತೀರ್ಮಾನಕ್ಕೆ ಬರುತ್ತಾನೆಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಸಿಎಂ ಕುಮಾರಸ್ವಾಮಿ ಹೇಳಿಕೆಯ ಪರ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಾತನಾಡಿರುವುದನ್ನು ನಾನು ಕೇಳಿದ್ದೇನೆ. ಅವರ ಮಾತಿನ ಅರ್ಥ, ಭಾವನೆ ಮಹಿಳೆಯ ವಿರುದ್ಧ ಇರಲಿಲ್ಲ. ಅವರು ಹೋರಾಟ ಮಾಡಿದ ರೈರ ಮಹಿಳೆಗೆ ಅವಮಾನ ಮಾಡಿಲ್ಲ. ಆದರೆ ಎಲ್ಲರೂ ಅವರವರ ಭಾವಕ್ಕೆ ತಕ್ಕಂತೆ ಮಾತನಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಗೂಡಾರ್ಥ ಇಟ್ಟುಕೊಂಡು ಮಾತನಾಡಿಲ್ಲ. ಹೆಣ್ಣುಮಕ್ಕಳನ್ನು ತಾಯಿ ಎಂದೇ ಗೌರವದಿಂದ ಕರೆದಿದ್ದಾರೆಂದು ಹೇಳಿದರು.

    ಶಬರಿಮಲೆ ಜಯಾಮಲಾ ವಿವಾದ:
    ಹೆಸರಾಂತ ಜ್ಯೋತಿಷಿ ಪಿ. ಉಣ್ಣಿಕೃಷ್ಣನ್ ಪಣಿಕ್ಕರ್ ತಂಡವು ಶಬರಿಮಲೆ ದೇವಸ್ಥಾನದಲ್ಲಿ 2006ರ ಜೂನ್‍ನಲ್ಲಿ ನಾಲ್ಕು ದಿನಗಳ ವರೆಗೆ `ದೇವಪ್ರಶ್ನೆ’ ಕೇಳಿ, ದೇವಸ್ಥಾನದ ಗರ್ಭಗುಡಿಯೊಳಗೆ ಮಹಿಳೆಯೊಬ್ಬರು ಪ್ರವೇಶಿಸಿದ್ದರು ಎಂದು ಹೇಳಿತ್ತು. `ದೇವಪ್ರಶ್ನೆ’ ಬಳಿಕ ನಟಿ ಜಯಮಾಲಾ 1987ರಲ್ಲಿ ತಾವು ಈ ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದ್ದಾಗಿ ಹೇಳಿಕೊಂಡಿದ್ದರು. ಪಣಿಕ್ಕರ್ ಅವರಿಗೆ ಪ್ರಚಾರಗೊಳಿಸುವುದಕ್ಕಾಗಿ ಜಯಮಾಲಾ ದೇವಸ್ಥಾನ ಪ್ರವೇಶಿಸಿದ್ದಾರೆ ಎಂಬ ಆರೋಪಗಳು ಅಂದು ಕೇಳಿ ಬಂದಿದ್ದವು.

    ಜಯಮಾಲಾ ದೇವಸ್ಥಾನ ಪ್ರವೇಸಿಸುವ ಮೂಲಕ ರಾಜ್ಯದ ಜನರ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ ಆರೋಪದ ಮೇಲೆ ಪೊಲೀಸರು ಪಣಿಕ್ಕರ್, ಅವರ ಸಹಾಯಕ ರಘುಪತಿ ಹಾಗೂ ನಟಿ ಜಯಮಾಲಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ವಜಾಗೊಳಿಸುವಂತೆ ಈ ಮೂವರು ಕೇರಳ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಇದು ಮುಗಿದ ಅಧ್ಯಾಯವಾಗಿದ್ದು, ಆರೋಪಿಗಳ ವಿರುದ್ಧ ಹೊರಿಸಲಾಗಿರುವ ಆರೋಪ ಕಾನೂನು ಬದ್ಧ ಎಲ್ಲ ಅರ್ಜಿಯನ್ನು ವಜಾಗೊಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

     

  • ಶಬರಿಮಲೆ ಭಕ್ತರಿಗೆ ಜಯ: ತೃಪ್ತಿ ದೇಸಾಯಿಂದ ಪುಣೆಗೆ ರಿಟರ್ನ್ ಟಿಕೆಟ್ ಬುಕ್

    ಶಬರಿಮಲೆ ಭಕ್ತರಿಗೆ ಜಯ: ತೃಪ್ತಿ ದೇಸಾಯಿಂದ ಪುಣೆಗೆ ರಿಟರ್ನ್ ಟಿಕೆಟ್ ಬುಕ್

    ಕೊಚ್ಚಿ: ಶಬರಿಮಲೆ ದೇವಾಲಯವನ್ನು ಪ್ರವೇಶಿಸಿಯೇ ಸಿದ್ಧ ಎಂದು ಹಠ ಹಿಡಿದಿದ್ದ ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಭಕ್ತರ ಪ್ರತಿಭಟನೆಗೆ ಮಣಿದು ಪುಣೆಗೆ ಮರಳುವುದಾಗಿ ಹೇಳಿದ್ದಾರೆ. ಈ ಮೂಲಕ ಸತತ 18 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದ ಭಕ್ತರಿಗೆ ಜಯ ಸಿಕ್ಕಿದೆ.

    ಎಷ್ಟು ದಿನವಾದರೂ ಪರವಾಗಿಲ್ಲ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಿಯೇ ನೀಡುತ್ತೇನೆ. ಅದಕ್ಕಾಗಿ ಮರಳಿ ಟಿಕೆಟ್ ಬುಕ್ ಮಾಡಿಲ್ಲ ಎಂದು ಹೇಳಿದ್ದ ತೃಪ್ತಿ ದೇಸಾಯಿ ಶುಕ್ರವಾರ ಬೆಳಗ್ಗೆ 4.30ಕ್ಕೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

    ತೃಪ್ತಿ ಬರುತ್ತಿದ್ದಾರೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಕೊಚ್ಚಿ ವಿಮಾನ ನಿಲ್ದಾಣದ ಹೊರ ಆವರಣದಲ್ಲಿ ಶಬರಿಮಲೆಯ ಭಕ್ತರು, ಬಿಜೆಪಿ, ಆರ್‍ಎಸ್‍ಎಸ್, ಹಿಂದೂಪರ ಸಂಘಟನೆಯ ಸದಸ್ಯರು ಹೊರ ಆವರಣದಲ್ಲಿ ಪ್ರತಿಭಟನೆ ಆರಂಭಿಸಿದ್ದರು.

    ಯಾವುದೇ ಕಾರಣಕ್ಕೆ ನಾವು ತೃಪ್ತಿ ದೇಸಾಯಿ ಅವರನ್ನು ನಿಲ್ದಾಣದಿಂದ ಹೊರ ಬರಲು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ದಿಗ್ಭಂದನ ಹಾಕಿದ್ದರು. ಈ ಸಮಯದಲ್ಲಿ ತೃಪ್ತಿ ಅವರು ಶಬರಿಮಲೆಗೆ ತೆರಳಲು ಟ್ಯಾಕ್ಸಿ ಬುಕ್ ಮಾಡಿದ್ದರೂ ಟ್ಯಾಕ್ಸಿ ಚಾಲಕರು ಸಹ ಶಬರಿಮಲೆಗೆ ಬರುವುದಿಲ್ಲ ಎಂದು ಹೇಳಿದ್ದರು.

    ನಾವು ತೃಪ್ತಿ ದೇಸಾಯಿ ಅವರನ್ನು ಕರೆದುಕೊಂಡು ಹೋಗುವುದಿಲ್ಲ. ಬೇಕಾದರೆ ಪೊಲೀಸ್ ಭದ್ರತೆಯಲ್ಲಿ ಅಥವಾ ಸ್ವಂತ ವಾಹನದಲ್ಲಿ ಹೋಗಲಿ ಎಂದು ತಿಳಿಸಿದ್ದರು. ಈ ನಡುವೆ ಕೊಚ್ಚಿ ತಹಶೀಲ್ದಾರ್ ಅವರು ತೃಪ್ತಿ ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದರೂ ಅದು ಫಲ ನೀಡಲಿಲ್ಲ.

    ಭಕ್ತರ ಪ್ರತಿಭಟನೆ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ತೃಪ್ತಿ ಮತ್ತು ಅವರ ತಂಡ ಕಾನೂನು ತಜ್ಞರ ಜೊತೆ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಮಾಡಲು ಮುಂದಾದರೆ ಹೇಗೆ ಎಂದು ಚರ್ಚಿಸಿದರು. ತೃಪ್ತಿ ವಿಮಾನ ನಿಲ್ದಾಣದಿಂದ ತೆರಳುವವರೆಗೂ ನಾವು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತ ಕಾರಣ ಅನಿವಾರ್ಯವಾಗಿ ಸಿಐಎಸ್‍ಎಫ್(ಕೇಂದ್ರ ಗೃಹ ಕೈಗಾರಿಕಾ ಭದ್ರತಾ ಪಡೆ) ಅಧಿಕಾರಿಗಳು ಮಧ್ಯಪ್ರವೇಶಿಸಿದ್ದರು.

    ವಿಮಾನ ನಿಲ್ದಾಣದ ಆವರಣದಲ್ಲಿ ಕಳೆದ 13 ಗಂಟೆಯಿಂದ ಪ್ರತಿಭಟನೆ ನಡೆಯುತ್ತಿದೆ. ಇದರಿಂದಾಗಿ ಇಲ್ಲಿಗೆ ಆಗಮಿಸುವ ಮತ್ತು ಇಲ್ಲಿಂದ ತೆರಳುವ ಪ್ರಯಾಣಿಕರಿಗೆ ಭಾರೀ ತೊಂದರೆಯಾಗುತ್ತಿದೆ. ಹೀಗಾಗಿ ಶಬರಿಮಲೆಗೆ ತೆರಳುವ ತಮ್ಮ ನಿರ್ಧಾರವನ್ನು ಪರಿಶೀಲಿಸುವುದು ಉತ್ತಮ ಎಂದು ಸಿಐಎಸ್‍ಎಫ್ ಅಧಿಕಾರಿಗಳು ಸಲಹೆ ನೀಡಿದ್ದರು. ಕೊನೆಗೆ ತಮ್ಮ ನಿರ್ಧಾರದಿಂದ ಹಿಂದೆ ಸರಿದ ತೃಪ್ತಿ ಮರಳಿ ಪುಣೆಗೆ ತೆರಳಲು ಟಿಕೆಟ್ ಬುಕ್ ಮಾಡಿದ್ದಾರೆ. ಇಂದು ರಾತ್ರಿ 9.25ರ ಏರ್ ಇಂಡಿಯಾ 055 ವಿಮಾನದಲ್ಲಿ ತೃಪ್ತಿ ಮತ್ತು ಅವರ ತಂಡ ಪುಣೆಗೆ ಹೋಗಲು ಟಿಕೆಟ್ ಬುಕ್ ಆಗಿದೆ.

    ಪುಣೆ ಮೂಲದ ಭೂ ಮಾತಾ ಬ್ರಿಗೇಡ್ ಸಂಘಟನೆ ನಡೆಸುತ್ತಿರುವ ತೃಪ್ತಿ ದೇಸಾಯಿ ಮಹಿಳಾ ಹಕ್ಕುಗಳ ಪರ ಹೋರಾಟ ನಡೆಸುತ್ತಿದ್ದಾರೆ. ಅಹಮದ್ ನಗರ ಜಿಲ್ಲೆಯ ಶನಿ ಶಿಂಘ್ನಪುರ ದೇವಾಲಯ, ಕೊಲ್ಲಾಪುರ ಜಿಲ್ಲೆಯ ಮಹಾಲಕ್ಷ್ಮೀ ದೇವಾಲಯ ಮತ್ತು ನಾಸಿಕ್ ಜಿಲ್ಲೆಯ ತ್ರಿಯಂಬಕ್ ಶಿವಾ ದೇವಾಲಯ ಮತ್ತಿತರ ಕಡೆಗಳಲ್ಲಿ ಮಹಿಳೆಯರ ವಿರುದ್ಧ ತಾರಾತಮ್ಯ ವಿರುದ್ಧ ಹೋರಾಟ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಶಬರಿಮಲೆ ಮಹಿಳಾ ಪ್ರವೇಶ ವಿವಾದ: ಮರುಪರಿಶೀಲನೆಗೆ ಸುಪ್ರೀಂ ಅಸ್ತು!

    ಶಬರಿಮಲೆ ಮಹಿಳಾ ಪ್ರವೇಶ ವಿವಾದ: ಮರುಪರಿಶೀಲನೆಗೆ ಸುಪ್ರೀಂ ಅಸ್ತು!

    ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

    ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕೊಟ್ಟಿದ್ದ ಆದೇಶವನ್ನು ಪ್ರಶ್ನಿಸಿ, ಒಟ್ಟು 49 ಮರು ಪರಿಶೀಲನಾ ಅರ್ಜಿಗಳು ಸವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆಯನ್ನು ಜನವರಿ 22 ರಿಂದ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ.

    ಈ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಹಾಗೂ ನ್ಯಾಯಮೂರ್ತಿಗಳಾದ ಎನ್. ನಾರಿಮನ್, ಎ.ಎಂ.ಖನ್ವೀರ್ ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಅವರನ್ನು ಒಳಗೊಂಡ ಪಂಚ ಸದಸ್ಯ ಪೀಠ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

    ಈ ಮೊದಲು ಸುಪ್ರೀ ಕೋರ್ಟ್ ಹೇಳಿದ್ದೇನು?
    ಸೆಪ್ಟೆಂಬರ್ 28 ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠದಲ್ಲಿ 4:1 ರಂತೆ ಶಬರಿಮಲೆ ದೇಗುಲಕ್ಕೆ ಎಲ್ಲಾ ಮಹಿಳೆಯ ಪ್ರವೇಶಕ್ಕೆ ಅಸ್ತು ಎಂದು ತೀರ್ಪು ಪ್ರಕಟಿಸಿತ್ತು.

    ಸುಪ್ರೀಂ ತೀರ್ಪು ಪ್ರಕಟವಾಗುತ್ತಿದ್ದಂತೆ, ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರು ಮುಂದಾಗಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರು ಮಹಿಳೆಯರಿಗೆ ಯಾವುದೇ ಕಾರಣಕ್ಕೂ ಮಣಿಕಂಠನ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯು ಉಗ್ರ ಸ್ವರೂಪ ಪಡೆದುಕೊಂಡು ಲಾಠಿ ಚಾರ್ಜ್ ಗಳು ಆಗಿದ್ದವು. ಇಷ್ಟಾದರೂ ಭಕ್ತರು ಮಾತ್ರ ಮಹಿಳೆಯ ಪ್ರವೇಶಕ್ಕೆ ಅವಕಾಶ ಮಾಡಿಕೊಡಲೇ ಇಲ್ಲ. ಅಲ್ಲದೇ ಇದನ್ನು ವಿರೋಧಿಸಿ ಪ್ರಭಾವಿ ನಾಯರ್ ಸಮಾಜ, ಹಿಂದೂಪರ ಸಂಘಟನೆಗಳು, ಬಿಜೆಪಿ ಹಾಗೂ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹೆಲಿಕಾಪ್ಟರ್ ಮೂಲಕ ಮಹಿಳೆಯರನ್ನು ಶಬರಿಮಲೆಗೆ ಕಳುಹಿಸಲು ಮುಂದಾದ ಕೇರಳ ಪೊಲೀಸರು?

    ಹೆಲಿಕಾಪ್ಟರ್ ಮೂಲಕ ಮಹಿಳೆಯರನ್ನು ಶಬರಿಮಲೆಗೆ ಕಳುಹಿಸಲು ಮುಂದಾದ ಕೇರಳ ಪೊಲೀಸರು?

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ಮುಂದಾಗಿರುವ ಮಹಿಳೆಯರನ್ನು ಹೆಲಿಕಾಪ್ಟರ್ ಮೂಲಕ ಕಳುಹಿಸಿಕೊಡುವ ಬಗ್ಗೆ ಕೇರಳ ಪೊಲೀಸರ ಚಿಂತನೆ ನಡೆಸಿದ್ದಾರೆ.

    ಹೌದು. ಇದೇ ತಿಂಗಳ 17ನೇ ತಾರೀಖಿನಿಂದ ‘ಮಂಡಲಂ ಮಕರವಿಳಕ್ಕು’ ಪೂಜೆ ನಿಮಿತ್ತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಇಲ್ಲಿಂದ 41 ದಿನಗಳ ಕಾಲ ಅಯ್ಯಪ್ಪ ಸ್ವಾಮಿ ಭಕ್ತರಿಗೆ ದರ್ಶನ ನೀಡಲಿದ್ದಾನೆ. ಹೀಗಾಗಿ ದೇಗುಲ ಪ್ರವೇಶಕ್ಕೆ ನೂರಾರು ಮಹಿಳೆಯರು ಆಸಕ್ತಿ ತೋರಿದ್ದಾರೆ. ಆದರೆ ‘ಶಬರಿಮಲೆ ರಕ್ಷಿಸಿ’ ಅಭಿಯಾನದ ಮೂಲಕ ಸಾವಿರಾರು ಭಕ್ತರು ದೇವಾಲಯಕ್ಕೆ ತೆರಳುವ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸುತ್ತಾರೆಂದು ಹೇಳಲಾಗುತ್ತಿದೆ.

    ಪ್ರತಿಭಟನೆಯಿಂದಾಗಿ ಈ ಬಾರಿಯೂ ಸಹ ಮಹಿಳೆಯ ಪ್ರವೇಶಕ್ಕೆ ಅಡ್ಡಿಯುಂಟಾಗುತ್ತದೆ ಎನ್ನುವ ನಿರೀಕ್ಷೆಯಿದೆ. ಹೀಗಾಗಿ ಕೇರಳ ಪೊಲೀಸರು ಮಹಿಳೆಯರ ಭದ್ರತೆಯ ದೃಷ್ಟಿಯಿಂದ ಅವರನ್ನು ಕೊಚ್ಚಿ ಹಾಗೂ ತಿರುವನಂತಪುರಂನಿಂದ ನೇರವಾಗಿ ಶಬರಿಮಲೆ ಬೆಟ್ಟಕ್ಕೆ ಹೆಲಿಕಾಪ್ಟರ್ ಮೂಲಕ ತಲುಪಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಈಗಾಗಲೇ ತುರ್ತು ಸನ್ನಿವೇಶಗಳಲ್ಲಿ ಭಕ್ತರ ರಕ್ಷಣೆಗಾಗಿ ಸಿದ್ಧವಾಗಿರುವ ಹೆಲಿಪ್ಯಾಡ್‍ಗಳಲ್ಲಿ ಹೆಲಿಕಾಪ್ಟರ್ ಗಳನ್ನು ಇಳಿಸುವ ಮೂಲಕ ಮಹಿಳೆಯರನ್ನು ಕರೆತರುವ ಬಗ್ಗೆ ಯೋಚಿಸಿದ್ದಾರೆ. ಆದರೆ ಶಬರಿಮಲೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹೆಲಿಪ್ಯಾಡ್ ನಲ್ಲಿ ಹೆಲಿಕಾಪ್ಟರ್ ಗಳನ್ನು ಇಳಿಸಲು ಅರಣ್ಯ ಇಲಾಖೆಯ ಅನುಮತಿ ಬೇಕು. ಹೀಗಾಗಿ ಕೇರಳ ಪೊಲೀಸರು ಈ ಬಾರಿ ಮಹಿಳೆಯರನ್ನು ಹೇಗೆ ದೇಗುಲದ ಪ್ರವೇಶಕ್ಕೆ ಅನುವು ಮಾಡಿಕೊಡುತ್ತಾರೆಂದು ಕಾದು ನೋಡಬೇಕಿದೆ.

    ಶಬರಿಮಲೆ ಪ್ರವೇಶಕ್ಕೆ 560 ಮಹಿಳೆಯರ ನೋಂದಣಿ:
    ವಿಶೇಷ ಪೂಜೆ ನಿಮಿತ್ತ 10ರಿಂದ 50 ವರ್ಷದೊಳಗಿನ 560 ಮಹಿಳೆಯರು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಬರಿಮಲೆ ದೇಗುಲದ ವೆಬ್‍ಸೈಟ್ ನಲ್ಲಿ ಮಾಹಿತಿ ಬಿಡುಗಡೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಶಬರಿಮಲೆ ಪ್ರತಿಭಟನೆಯಿಂದ ಹುಂಡಿ ಆದಾಯಕ್ಕೆ ಭಾರೀ ಹೊಡೆತ: ಕಳೆದ ವರ್ಷ ಎಷ್ಟು? ಈ ಬಾರಿ ಎಷ್ಟು ಸಂಗ್ರಹವಾಗಿದೆ?

    ಶಬರಿಮಲೆ ಪ್ರತಿಭಟನೆಯಿಂದ ಹುಂಡಿ ಆದಾಯಕ್ಕೆ ಭಾರೀ ಹೊಡೆತ: ಕಳೆದ ವರ್ಷ ಎಷ್ಟು? ಈ ಬಾರಿ ಎಷ್ಟು ಸಂಗ್ರಹವಾಗಿದೆ?

    ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ನಡೆಸಿದ್ದ ಪ್ರತಿಭಟನೆ ಈಗ ದೇವಾಲಯದ ಆದಾಯದ ಮೇಲೆ ಪರಿಣಾಮ ಬೀರಿದೆ.

    ಹೌದು, ಶಬರಿಮಲೆ ದೇಗುಲಕ್ಕೆ ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಪ್ರವೇಶ ಕಲ್ಪಿಸಿತ್ತು. ಸುಪ್ರಿಂ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಭಕ್ತರು ಮಹಿಳೆಯರನ್ನು ಯಾವುದೇ ಕಾರಣಕ್ಕೂ ದೇವಾಲಯಕ್ಕೆ ಬಿಡುವುದಿಲ್ಲವೆಂದು ಉಗ್ರವಾಗಿಯೇ ಪ್ರತಿಭಟಿಸಿದ್ದರು. ಅಲ್ಲದೇ ದೇವಾಲಯದ ಹುಂಡಿಗೆ ಯಾವೊಬ್ಬ ಹಿಂದುವೂ ಹಣ ಹಾಕಬಾರದೆಂಬ ಚಳುವಳಿಯನ್ನು ಸಹ ಪ್ರಾರಂಭಿಸಿದ್ದರು.

    ಚಳುವಳಿ ಆರಂಭಿಸಿದ್ದರ ಪರಿಣಾಮ ಶಬರಿಮಲೆ ದೇವಾಲಯದ ಆದಾಯದಲ್ಲಿ ಭಾರೀ ಕುಸಿತ ಕಂಡಿದೆ. ದೇವಾಲಯದ ಹುಂಡಿಗಳಲ್ಲಿ ಭಕ್ತರು `ಶಬರಿಮಲೆ ರಕ್ಷಿಸಿ’ ಹಾಗೂ `ಸ್ವಾಮಿಯೇ ಶರಣಂ ಅಯ್ಯಪ್ಪ’ ಎನ್ನುವ ಚೀಟಿಗಳನ್ನು ಹುಂಡಿಗಳಲ್ಲಿ ತುಂಬಿಸಿದ್ದರಿಂದ ಸಂಗ್ರಹವಾಗಬೇಕಾಗಿದ್ದ ಹಣದ ಮೊತ್ತ ಕುಸಿತಗೊಂಡಿದೆ.

    ಯಾವ ದಿನ ಎಷ್ಟು ಆದಾಯ?
    ಕಳೆದ ಬಾರಿಗೆ ಹೋಲಿಸಿದರೆ ಒಟ್ಟು 44.5 ಲಕ್ಷ ರೂಪಾಯಿಗಳಷ್ಟು ಆದಾಯ ಕಡಿಮೆಯಾಗಿದೆ. ಕಳೆದ ವರ್ಷ ಮೊದಲ ದಿನವೇ ಬರೊಬ್ಬರಿ 8.42 ಲಕ್ಷ ರೂ. ಸಂಗ್ರಹವಾಗಿದ್ದರೆ, ಈ ಬಾರಿ 4.83 ಲಕ್ಷ ರೂ. ಸಂಗ್ರಹವಾಗಿದೆ. ಈ ಬಾರಿ ಎರಡನೇ ದಿನ 19.30 ಲಕ್ಷ ರೂ. ಸಂಗ್ರಹವಾಗಿದ್ದರೆ, ಕಳೆದ ಬಾರಿ ಈ ದಿನ 45.59 ಲಕ್ಷ ರೂ. ಸಂಗ್ರವಾಗಿತ್ತು. 2017ರಲ್ಲಿ ಮೂರನೇ ದಿನ 32.3 ಲಕ್ಷ ರೂ. ಸಂಗ್ರಹವಾಗಿದ್ದರೆ, ಈ ವರ್ಷ ಕೇವಲ 17.51 ಲಕ್ಷ ರೂ. ಮಾತ್ರ ಸಂಗ್ರಹವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸುಖಾಸುಮ್ಮನೆ ಕರ್ನಾಟಕವನ್ನು ಕೆಣಕಿದರೇ ಕಮಲ್ ಹಾಸನ್?

    ಸುಖಾಸುಮ್ಮನೆ ಕರ್ನಾಟಕವನ್ನು ಕೆಣಕಿದರೇ ಕಮಲ್ ಹಾಸನ್?

    ಸುಮ್ಮನಿರಲಾರದೆ ಇರುವೆ ಬಿಟ್ಟುಕೊಂಡರು ಅಂತಾರಲ್ಲಾ? ಅದು ಈ ಸೆಲೆಬ್ರಿಟಿಗಳಿಗೆ ಹೆಚ್ಚು ಅನ್ವಯವಾಗುತ್ತೆ. ಇದನ್ನಿಲ್ಲಿ ಯಾಕೆ ಹೇಳಬೇಕಾಯ್ತೆಂದರೆ, ಖ್ಯಾತ ನಟ ಕಮಲ್ ಹಾಸನ್ ಕೂಡಾ ಇದೀಗ ಅಂಥಾದ್ದದೇ ಕೆಲಸ ಮಾಡಿಕೊಂಡಿದ್ದಾರೆ!

    ಮಾಧ್ಯಮದ ಮಂದಿ ಕೇಳಿದ್ದೇ ಒಂದು ಪ್ರಶ್ನೆ, ಕಮಲ್ ಹೇಳಿದ್ದೇ ಮತ್ತೊಂದು ಉತ್ತರ. ಅದು ಕರ್ನಾಟಕವನ್ನು ಕೆಣಕುವಂಥಾ ಉತ್ತರ!

    ಶಬರಿಮಲೆಗೆ ಮಹಿಳೆಯರಿಗೂ ಪ್ರವೇಶ ನೀಡಿ ಸುಪ್ರೀಂ ಕೋರ್ಟ್ ನೀಡಿರೋ ತೀರ್ಪು ಇದೀಗ ವಿವಾದದ ಅಲೆಯೆಬ್ಬಿಸಿದೆ. ಇಲ್ಲಿನ ಧಾರ್ಮಿಕ ವಲಯ ಸುಪ್ರೀಂ ತೀರ್ಪಿಗೇ ಸೆಡ್ಡು ಹೊಡೆದಿದೆ. ಈ ವಿದ್ಯಮಾನದ ಬಗ್ಗೆ ಏನಂತೀರಿ ಅಂತ ಮಾಧ್ಯಮ ಮಂದಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿರೋ ಕಮಲ್, ‘ಕೇರಳ ಸರ್ಕಾರ ಸುಪ್ರೀಂ ತೀರ್ಪನ್ನು ಗೌರವಿಸಿದೆ. ಅದಕ್ಕೆ ಪೂರಕವಾಗಿಯೇ ಕಾರ್ಯ ನಿರ್ವಹಿಸುತ್ತಿದೆ. ಆದರೆ ಕರ್ನಾಟಕ ಸರ್ಕಾರ ಮಾತ್ರ ನ್ಯಾಯಾಲಯದ ತೀರ್ಪಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಕಾವೇರಿ ನದಿ ನೀರಿನ ವಿಚಾರವಾಗಿ ತಮಿಳುನಾಡಿಗೆ ಅನ್ಯಾಯ ಮಾಡುತ್ತಿದೆ’ ಎಂಬರ್ಥದಲ್ಲಿ ಮಾತಾಡಿದ್ದಾರೆ.

    ಇದರಲ್ಲಿ ಕರ್ನಾಟಕವನ್ನು ಎಳೆತರುವ ಯಾವ ದರ್ದೂ ಕೂಡಾ ಕಮಲ್ ಹಾಸನ್ ಅವರಿಗಿರಲಿಲ್ಲ. ಆದರೂ ಕೂಡಾ ಅವರು ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಶಬರಿಮಲೆ ವಿವಾದದಲ್ಲಿ ಕರ್ನಾಟಕವನ್ನು ಎಳೆತಂದು ಕನ್ನಡಿಗರನ್ನು ಕೆಣಕಿದ್ದಾರೆ!

    ಕಮಲ್ ಹಾಸನ್ ಅವರ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಯತ್ನ: ರೆಹನಾ ಫಾತಿಮಾ ಇಸ್ಲಾಂನಿಂದ ಉಚ್ಚಾಟನೆ!

    ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಯತ್ನ: ರೆಹನಾ ಫಾತಿಮಾ ಇಸ್ಲಾಂನಿಂದ ಉಚ್ಚಾಟನೆ!

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಯತ್ನಿಸುವ ಮೂಲಕ ಹಿಂದೂ ಧರ್ಮದ ನಂಬಿಕೆಗಳಿಗೆ ಧಕ್ಕೆ ತರಲು ಯತ್ನಿಸಿದ ರೆಹನಾ ಫಾತಿಮಾರನ್ನು ಕೇರಳ ಮುಸ್ಲಿಂ ಮಂಡಳಿ  ಇಸ್ಲಾಂ ಧರ್ಮದಿಂದ ಉಚ್ಚಾಟಿಸಿದೆ.

    ರೆಹನಾ ಫಾತಿಮಾ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರವೇಶಕ್ಕೆ ಯತ್ನಿಸಿ, ಕೇರಳ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೇ ಈ ಬಗ್ಗೆ ಖುದ್ದು ಕೇರಳ ಮುಸ್ಲಿ ಜಮಾ-ಅಥ್ ಕೌನ್ಸಿಲ್ ಸಹ ರೆಹನಾ ವಿರುದ್ಧ ಕ್ರಮಕೈಗೊಳ್ಳುವ ತೀರ್ಮಾನ ಕೈಗೊಂಡಿತ್ತು.

    ಈ ಕುರಿತು ಶನಿವಾರ ಹೇಳಿಕೆ ಬಿಡುಗಡೆ ಮಾಡಿದ ಕೌನ್ಸಿಲ್ ಅಧ್ಯಕ್ಷ ಎ.ಪೂನ್ಕುಂಜು, ರೆಹನಾ ಫಾತಿಮಾ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರವೇಶಕ್ಕೆ ವಿರೋಧವಿದ್ದರೂ, ದೇವಾಲಯದ ಪ್ರವೇಶಕ್ಕೆ ಯತ್ನಿಸಿ ಹಿಂದೂ ಧರ್ಮದ ನಂಬಿಕೆಗಳಿಗೆ ಧಕ್ಕೆ ತರಲು ಯತ್ನಸಿದ್ದಾರೆ. ಹೀಗಾಗಿ ಆಕೆ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಇಸ್ಲಾಂ ಧರ್ಮದಿಂದ ಹೊರಹಾಕಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವೇಶಿಸಿದ್ರೆ ಶಬರಿಮಲೆ ಗರ್ಭಗುಡಿ ಬಂದ್: ಅರ್ಚಕರ ಪ್ರತಿಭಟನೆಗೆ ಮಣಿದು ಪ್ರವೇಶದಿಂದ ಹಿಂದಕ್ಕೆ ಸರಿದ ಮಹಿಳೆಯರು

    ಶುಕ್ರವಾರ ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರ ವಿರೋಧ ನಡುವೆಯೂ, ಮಹಿಳಾ ಕಾರ್ಯಕರ್ತೆ ರೆಹನಾ ಫಾತಿಮಾ ಪೊಲೀಸರ ಬಿಗಿ-ಭದ್ರತೆಯೊಂದಿಗೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಿದ್ದರು. ಆದರೆ ಇನ್ನೇನು ದೇವಾಲಯ ಪ್ರವೇಶ ಮಾಡಬೇಕು ಎನ್ನುವಷ್ಟರಲ್ಲಿ, ತಂತ್ರಿಗಳು ಒಂದು ವೇಳೆ ಆಕೆ ದೇವಾಲಯದ ಪ್ರವೇಶಕ್ಕೆ ಮುಂದಾದರೆ, ದೇವಾಲಯದ ಗರ್ಭಗುಡಿಯನ್ನು ಮುಚ್ಚಿ, ರಾಜಮನೆತನದ ಸುಪರ್ದಿಗೆ ನೀಡುತ್ತೇವೆ ಎಂದು ಎಚ್ಚರಿಸಿದ್ದರು. ಇದರಿಂದಾಗಿ ರೆಹನಾ ಫಾತಿಮಾ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯದೇ ಹಿಂದಿರುಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv