Tag: shahapura

  • ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ – 2.62 ಲಕ್ಷ ಮೌಲ್ಯದ ಅಕ್ಕಿ ಜಪ್ತಿ, ಓರ್ವ ಅರೆಸ್ಟ್

    ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ – 2.62 ಲಕ್ಷ ಮೌಲ್ಯದ ಅಕ್ಕಿ ಜಪ್ತಿ, ಓರ್ವ ಅರೆಸ್ಟ್

    -ಗುರುಮಠಕಲ್ ಪ್ರಕರಣದ ಬೆನ್ನಲ್ಲೇ ಶಹಾಪುರದಲ್ಲೂ ಅಕ್ರಮ ಮಾರಾಟ ಜಾಲ ಪತ್ತೆ

    ಯಾದಗಿರಿ: ಜಿಲ್ಲೆಯ ಶಹಾಪುರ (Shahapura) ತಾಲೂಕಿನಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆಯೊಂದು ಬೆಳಕಿಗೆ ಬಂದಿದೆ. ಪೊಲೀಸರು 2.62 ಲಕ್ಷ ರೂ. ಮೌಲ್ಯದ ಅಕ್ಕಿ, ಗೂಡ್ಸ್ ವಾಹನವೊಂದನ್ನು ಸೀಜ್ ಮಾಡಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ರಾಜು ಪವಾರ್ ಎಂಬಾತನನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿ ದೇವರಾಜ ರಾಠೋಡ್ ಪರಾರಿಯಾಗಿದ್ದಾನೆ.ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

    ಯಾದಗಿರಿ (Yadagiri) ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸ್ವಕ್ಷೇತ್ರದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಶಹಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದಲ್ಲಿ ಪಡಿತರ ಕಾರ್ಡ್‌ದಾರರಿಂದ ಅಕ್ಕಿ ಖರೀದಿಸಿ ಸಾಗಾಟ ಮಾಡಲಾಗ್ತಿತ್ತು. ಈ ವೇಳೆ ಆಹಾರ ನಿರೀಕ್ಷಕ ಬಸವರಾಜ್ ಹಾಗೂ ಪಿಎಸ್‌ಐ ದೇವಿಂದ್ರರೆಡ್ಡಿ ಅವರು ದಾಳಿ ನಡೆಸಿದ್ದಾರೆ. ತೆಲಂಗಾಣ ಪಾಸಿಂಗ್ ಹೊಂದಿರುವ ಗೂಡ್ಸ್ ವಾಹನದಲ್ಲಿ 2.62 ಲಕ್ಷ ರೂ. ಮೌಲ್ಯದ 158 ಚೀಲಗಳಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ.

    ಪೊಲೀಸರು ಅಕ್ಕಿ ಸಹಿತ ಗೂಡ್ಸ್ ವಾಹನವನ್ನು ಜಪ್ತಿ ಮಾಡಿಕೊಂಡಿದ್ದು, ಗೋಗಿ ಠಾಣೆಯಲ್ಲಿ ಈ ಬಗ್ಗೆ ಕೇಸ್ ದಾಖಲಾಗಿದೆ. ಇನ್ನೂ ಚಾಮನಾಳ ತಾಂಡಾದ ವ್ಯಾಪ್ತಿಯ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿರುವ ಪಡಿತರ ಅಕ್ಕಿ ಖರೀದಿ ಮಾಡಿ, ಗೂಡ್ಸ್ ವಾಹನದಲ್ಲಿ ಸಾಗಾಟ ಮಾಡಲಾಗ್ತಿತ್ತು ಎಂದು ತಿಳಿದುಬಂದಿದೆ.

    ಇತ್ತೀಚಿಗೆ ಗುರುಮಠಕಲ್‌ನಲ್ಲಿಯೂ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆಯಾಗಿತ್ತು. ಅಲ್ಲದೇ ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ ಎಂದು ತಿಳಿದುಬಂದಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದರೂ ಕೂಡ ಜಿಲ್ಲೆಯಲ್ಲಿ ಅಕ್ಕಿ ಸಾಗಾಟ ದಂಧೆ ನಿಲ್ಲುತ್ತಿಲ್ಲ ಎನ್ನುವ ಪ್ರಶ್ನೆ ಮೂಡಿದೆ.ಇದನ್ನೂ ಓದಿ: ಯಾದಗಿರಿ | ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ – 1.17 ಕೋಟಿ ಮೌಲ್ಯದ 4,108 ಕ್ವಿಂಟಾಲ್ ಸೀಜ್

  • ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸ್ತಿದ್ದ ಇಬ್ಬರು ಅರೆಸ್ಟ್ – 3 ಮೊಬೈಲ್ ಸೇರಿ 6.99 ಲಕ್ಷ ರೂ. ನಗದು ಜಪ್ತಿ

    ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸ್ತಿದ್ದ ಇಬ್ಬರು ಅರೆಸ್ಟ್ – 3 ಮೊಬೈಲ್ ಸೇರಿ 6.99 ಲಕ್ಷ ರೂ. ನಗದು ಜಪ್ತಿ

    ಯಾದಗಿರಿ: ಐಪಿಎಲ್ ಬೆಟ್ಟಿಂಗ್ (IPL Betting) ದಂಧೆ ನಡೆಸುತ್ತಿದ್ದ ಇಬ್ಬರನ್ನು ಶಹಾಪುರ ಪೋಲಿಸರು (Shahapura Police) ಬಂಧಿಸಿದ್ದು, ಮೂರು ಮೊಬೈಲ್ ಸೇರಿ 6.99 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ.

    ಸುರಪುರ (Surpura) ತಾಲೂಕಿನ ಕಕ್ಕಸಗೇರಾ ತಾಂಡಾದ ಪುಂಡಲೀಕ, ಏವೂರು ತಾಂಡಾದ ಹರಿಪ್ರಸಾದ್ ಇಬ್ಬರು ಬಂಧಿತ ಆರೋಪಿಗಳು.ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಹಗರಣ – ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅರೆಸ್ಟ್

    ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ಪಟ್ಟಣದ ಮಡಿವಾಳೇಶ್ವರ ಏರಿಯಾದಲ್ಲಿ ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು. ಈ ವೇಳೆ ಇನ್ಸ್ಪೆಕ್ಟರ್ ಎಸ್.ಎಂ.ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇಬ್ಬರು ದಂಧೆಕೋರರನ್ನು ಬಂಧಿಸಿದ್ದಾರೆ.

    ಕ್ರಿಕ್365ಡೇ ಆಪ್‌ನಲ್ಲಿ ಇಬ್ಬರು ಬೆಟ್ಟಿಂಗ್ ನಡೆಸುತ್ತಿದ್ದು, ಸದ್ಯ ಪೊಲೀಸರು ಆರೋಪಿಗಳ ಬಳಿಯಿದ್ದ 3 ಮೊಬೈಲ್ ಹಾಗೂ 6.99 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ (Shahapura Police Station) ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: 3.5 ಕೆಜಿ ಚಿನ್ನಾಭರಣ ದರೋಡೆ ಕೇಸ್ – ಐವರು ಅರೆಸ್ಟ್, ಓರ್ವ ಆರೋಪಿ ನೇಣಿಗೆ ಶರಣು

  • ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ

    ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಇಬ್ಬರು ಪ್ರಯಾಣಿಕರ ಸಾವು, 7 ಮಂದಿ ಗಂಭೀರ

    ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಮೃತಪಟ್ಟು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ (Shahapura) ತಾಲೂಕಿನ ಹತ್ತಿಗುಡೂರು ಬಳಿ ನಡೆದಿದೆ.

    ಕಲಬುರಗಿಯಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಬಸ್‌ನಲ್ಲಿ (Bus) 37 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಹತ್ತಿಗುಡೂರು ಬಳಿಯ ಹಳ್ಳದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಘಟನೆಯ ಪರಿಣಾಮ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯ ಎಚ್ಚರಿಕೆ

    ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸುರಪುರ ಪೊಲೀಸರು ಬಸ್‌ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನ ಬಸ್‌ನಿಂದ ಹೊರತೆಗೆದು ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕೆಲ ಗಾಯಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: ಸೋಮವಾರದಿಂದ ಅಮುಲ್‌ ಹಾಲಿನ ದರದಲ್ಲಿ 2 ರೂ. ಹೆಚ್ಚಳ

  • ಹೃದಯಾಘಾತದಿಂದ ಪೊಲೀಸ್ ಕಾನ್ಸ್‌ಟೇಬಲ್ ಸಾವು

    ಹೃದಯಾಘಾತದಿಂದ ಪೊಲೀಸ್ ಕಾನ್ಸ್‌ಟೇಬಲ್ ಸಾವು

    ಯಾದಗಿರಿ: ರಜೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ (Police Constable) ಹೃದಯಾಘಾತದಿಂದ (Heart Attack) ಮೃತಪಟ್ಟಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯಲ್ಲಿ ನಡೆದಿದೆ.

    ಯಾದಗಿರಿ ಜಿಲ್ಲೆಯ ಶಹಾಪುರ (Shahapura) ತಾಲೂಕಿನ ಗೋಗಿ ಠಾಣೆಯ ಕಾನ್ಸ್‌ಟೇಬಲ್ ದೇವೇಂದ್ರಪ್ಪ (40) ಮೃತ ದುರ್ದೈವಿ. ದೇವೇಂದ್ರಪ್ಪಗೆ ಕಳೆದ ಮೂರು ತಿಂಗಳುಗಳಿಂದ ಜ್ವರ ಬಾಧಿಸುತ್ತಿದ್ದ ಕಾರಣ ಜೂನ್‌ನಿಂದ ರಜೆಯಲ್ಲಿದ್ದರು. ಹೀಗಾಗಿ ಬುಧವಾರ ಬೆಂಗಳೂರಿನ (Bengaluru) ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗೆಂದು ಹೋಗುವ ಸಂದರ್ಭ ಮಾರ್ಗಮಧ್ಯೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯ ಆರೋಪ- 5 ವರ್ಷದ ಬಾಲಕಿ ಸಾವು

    ಮೂಲತಃ ಕಲಬುರಗಿ (Kalaburagi) ಜಿಲ್ಲೆಯ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮದ ದೇವೇಂದ್ರಪ್ಪ ಕಳೆದ 16 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಅಗಲಿಕೆಗೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಸೇರಿದಂತೆ ಪೊಲೀಸ್ ಇಲಾಖೆಯಿಂದ ಸಂತಾಪ ಸೂಚಿಸಲಾಗಿದೆ. ಇದನ್ನೂ ಓದಿ: ಕುಡಿದು ಬಂದು ಮದುವೆ ಮಾಡಿಸುವಂತೆ ಕಿರಿಕ್ – ತಂದೆಯಿಂದಲೇ ಮಗನ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಹಾಪುರದಲ್ಲಿ 20 ಟನ್ ಪಡಿತರ ಅಕ್ಕಿ ಕಳ್ಳತನ ಪ್ರಕರಣ – ಖಾಲಿ ಲಾರಿ ಬಿಟ್ಟು ಖದೀಮರು ಪರಾರಿ

    ಶಹಾಪುರದಲ್ಲಿ 20 ಟನ್ ಪಡಿತರ ಅಕ್ಕಿ ಕಳ್ಳತನ ಪ್ರಕರಣ – ಖಾಲಿ ಲಾರಿ ಬಿಟ್ಟು ಖದೀಮರು ಪರಾರಿ

    ಯಾದಗಿರಿ: ಜಿಲ್ಲೆಯ ಶಹಾಪುರ (Shahapura) ನಗರದ ಎಪಿಎಂಸಿ ಬಳಿ ಅನ್ನಭಾಗ್ಯ ಅಕ್ಕಿ (Ration Rice) ಲೋಡ್ ಆಗಿದ್ದ ಲಾರಿಯನ್ನು (Lorry) ಮೇ. 29ರಂದು ರಾತ್ರಿ ಕಳ್ಳರು ಕದ್ದು ಪರಾರಿಯಾಗಿದ್ದರು. ಇದೀಗ ತಾಲೂಕಿನ ಹೊರ್ತಿ ಗ್ರಾಮದ ಹೊರವಲಯದಲ್ಲಿ ಖಾಲಿ ಲಾರಿ ಪತ್ತೆಯಾಗಿದೆ.

    ಲಾರಿಯಲ್ಲಿ ಲೋಡ್ ಆಗಿದ್ದ 7.50 ಲಕ್ಷ ರೂ. ಮೌಲ್ಯದ 20 ಟನ್ ಸರ್ಕಾರದ ಪಡಿತರ ಅಕ್ಕಿಯನ್ನು ಮಾತ್ರ ಎಗರಿಸಿರುವ ಕಳ್ಳರು ಖಾಲಿ ಲಾರಿಯನ್ನು ನಿಲ್ಲಿಸಿ ಪರಾರಿಯಾಗಿದ್ದಾರೆ. ಶಹಾಪುರ ಪೊಲೀಸರು ಇದೀಗ ವಿಶೇಷ ತಂಡ ರಚಿಸಿ ಚಾಲಾಕಿ ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ.

    ಕಳ್ಳತನವಾಗಿದ್ದ ಲಾರಿ ಬಿಟ್ಟು ಹೋದದ್ದನ್ನು ನೋಡಿದರೆ ಇದು ಕಳ್ಳರು ಮಾಡಿದ ಕೆಲಸವಲ್ಲ. ಪಡಿತರ ಅಕ್ಕಿಯ ದಂಧೆಕೋರರ ಕೈವಾಡ ಈ ಕೃತ್ಯದ ಹಿಂದಿದೆ ಇದೆ ಎನ್ನುವ ಅನುಮಾನ ದಟ್ಟವಾಗಿ ಕಾಡಲಾರಂಭಿಸಿದೆ. ಇದನ್ನೂ ಓದಿ: ಪ್ರತಾಪ್ ಸಿಂಹ ಅಣ್ಣನವರು ಸರ್ವಜ್ಞ ಇದ್ದಂತೆ: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಅಕ್ಕಿ ಲಾರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಶಾಸಕ ಹಾಗೂ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪ ದರ್ಶನಾಪುರ ಪ್ರತಿಕ್ರಿಯಿಸಿ, ಈಗಾಗಲೇ ಖಾಲಿ ಲಾರಿ ಸಿಕ್ಕಿದೆ. ಅನ್ನಭಾಗ್ಯ ಅಕ್ಕಿ ಸಾಗಿಸುವ ಲಾರಿಗೆ ಜಿಪಿಎಸ್ ಅಳವಡಿಸಿರಬೇಕು. ಈ ವಿಷಯದಲ್ಲಿ ಅಧಿಕಾರಿಗಳ ನಿರ್ಲಕ್ಷ ಇದೆಯೋ, ಗುತ್ತಿಗೆದಾರರು ನಿಯಮ ಉಲ್ಲಂಘನೆ ಮಾಡಿದ್ದಾರೋ ಎಲ್ಲವನ್ನು ಕೂಡ ಕೂಲಕುಂಷವಾಗಿ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

  • 20 ಟನ್ ಪಡಿತರ ಅಕ್ಕಿ ತುಂಬಿದ್ದ ಲಾರಿ ಕಳ್ಳತನ – ಅಧಿಕಾರಿಗಳು ಕಂಗಾಲು

    20 ಟನ್ ಪಡಿತರ ಅಕ್ಕಿ ತುಂಬಿದ್ದ ಲಾರಿ ಕಳ್ಳತನ – ಅಧಿಕಾರಿಗಳು ಕಂಗಾಲು

    ಯಾದಗಿರಿ: ಬರೋಬ್ಬರಿ 20 ಟನ್ ಪಡಿತರ ಅಕ್ಕಿಯನ್ನು (Ration Rice) ತುಂಬಿದ್ದ ಲಾರಿಯನ್ನೇ (Lorry) ಖದೀಮರು ಎಗರಿಸಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ವಿವಿಧ ಗ್ರಾಮಗಳ ಪಡಿತರ ಕೇಂದ್ರಗಳಿಗೆ ವಿತರಿಸಲೆಂದು ಲಾರಿಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ತುಂಬಿಕೊಂಡು ಹೋಗಲಾಗುತ್ತಿತ್ತು. ನಗರದ ಎಪಿಎಂಸಿ ಬಳಿ ನಿಲ್ಲಿಸಿದ್ದ ಲಾರಿಯನ್ನು ಅಕ್ಕಿ ಸಮೇತ ಕಳವು ಮಾಡಲಾಗಿದೆ.

    ಎಪಿಎಂಸಿಯಲ್ಲಿ ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ 4 ಲಾರಿಗಳನ್ನು ನಿಲ್ಲಿಸಲಾಗಿತ್ತು. ಅದರಲ್ಲಿ 1 ಲಾರಿಯಲ್ಲಿ 420 ಮೂಟೆಯ 20 ಟನ್ ಅಕ್ಕಿ ಇತ್ತು. ಚಾಲಕ ಕೀಯನ್ನು ಲಾರಿಯಲ್ಲೇ ಬಿಟ್ಟು ನಿರ್ಲಕ್ಷ್ಯವಹಿಸಿದ್ದ. ಆತ ರಾತ್ರಿ ಲಾರಿಯಲ್ಲಿ ಮಲಗುವುದನ್ನು ಬಿಟ್ಟು ತನ್ನ ಸ್ವಗ್ರಾಮ ಸುರಪುರಕ್ಕೆ ಹೋಗಿದ್ದ. ಇದನ್ನೂ ಓದಿ: ರಾಜ್ಯದಲ್ಲಿ ವರುಣಾರ್ಭಟ – ರಾಜಧಾನಿಗೆ 2 ದಿನ ಯೆಲ್ಲೋ ಅಲರ್ಟ್

    ಚಾಲಕ ಊರಿನಿಂದ ಬೆಳಗ್ಗೆ ವಾಪಸ್ ಬಂದು ನೋಡಿದರೆ ನಿಲ್ಲಿಸಿದ್ದ ಜಾಗದಲ್ಲಿ ಲಾರಿಯೇ ಇರಲಿಲ್ಲ. ಎಪಿಎಂಸಿ ಸೇರಿ ಇಡೀ ಪಟ್ಟಣದಲ್ಲಿ ಲಾರಿಯನ್ನು ಹುಡುಕಿದರೂ ಎಲ್ಲಿಯೂ ಅದರ ಸುಳಿವೇ ಸಿಕ್ಕಿಲ್ಲ.

    ಅಕ್ಕಿ ತುಂಬಿದ್ದ ಲಾರಿ ಎಲ್ಲಿಯೂ ಸಿಗದ ಹಿನ್ನೆಲೆಯಲ್ಲಿ ಘಟನೆ ಕುರಿತಂತೆ ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಪಿಐ ಚೆನ್ನಯ್ಯ ಹಿರೇಮಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಲಾರಿಯನ್ನು ಹುಡಕಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೋಲಿಸ್ ತನಿಖೆಯೂ ಚುರುಕುಗೊಂಡಿದೆ. ನಗರದ ಎಲ್ಲ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ

  • ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

    ಡೀಸೆಲ್ ಟ್ಯಾಂಕರ್ ಪಲ್ಟಿ- ಬಕೆಟ್, ಡಬ್ಬಿಗಳಲ್ಲಿ ಡೀಸೆಲ್ ತುಂಬಿಕೊಂಡು ಹೋದ್ರು ಜನ

    ಯಾದಗಿರಿ: ಡೀಸೆಲ್ ಹೊತ್ತೊಯ್ಯುತ್ತಿದ್ದ  ಟ್ಯಾಂಕರೊಂದು ಪಲ್ಟಿಯಾದ ಘಟನೆ ಶಹಾಪೂರ ತಾಲೂಕಿನ ಹುಲಕಲ್ ಗ್ರಾಮದ ಬಳಿ ನಡೆದಿದೆ.

    ಭಾರತ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದೆ. ಈ ಸಮಯದಲ್ಲಿ ಯಾವುದೇ ವಾಹನಗಳು ಸಂಚರಿಸಿದ ಕಾರಣ ಭಾರೀ ದುರಂತ ತಪ್ಪಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಟ್ಯಾಂಕರ್ ನಲ್ಲಿದ್ದ ಡಿಸೇಲ್ ಸೊರಿಕೆಯಾಗುತ್ತಿರುವುದನ್ನು ಕಂಡ ಗ್ರಾಮಸ್ಥರು ಡಬ್ಬಿ ಹಾಗೂ ಬಕೆಟ್ ಗಳಲ್ಲಿ ಡಿಸೇಲ್ ತುಂಬಿಕೊಂಡು ಹೋಗುತ್ತಿದ್ದ ದೃಶ್ಯ ಕಂಡು ಬಂತು.

    ಭೀಮರಾಯನ ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.