Tag: Shahid Afridi

  • ಭಾರತದ ವಿರುದ್ಧ ವಿಷ ಕಾರುತ್ತಿದ್ದ ಅಫ್ರಿದಿ ಬಾಯಿ ಬಂದ್‌!

    ಭಾರತದ ವಿರುದ್ಧ ವಿಷ ಕಾರುತ್ತಿದ್ದ ಅಫ್ರಿದಿ ಬಾಯಿ ಬಂದ್‌!

    ನವದೆಹಲಿ: ಭಾರತದ (India) ವಿರುದ್ಧ ವಿಷಕಾರುತ್ತಿದ್ದ ಪಾಕಿಸ್ತಾನ ಕ್ರಿಕೆಟ್‌ (Pakistan) ಮಾಜಿ ನಾಯಕ ಶಾಹಿದ್‌ ಅಫ್ರಿದಿಗೆ (Shahid Afridi) ಕೇಂದ್ರ ಸರ್ಕಾರ ಬಿಸಿಮುಟ್ಟಿಸಿದೆ.

    ಸುಮಾರು 12 ಲಕ್ಷ ಚಂದದಾರನ್ನು ಹೊಂದಿದ್ದ ಖಾತೆಯನ್ನು ಭಾರತ ಸರ್ಕಾರ ಸೂಚನೆಯ ಮೇರೆಗೆ ಯೂಟ್ಯೂಬ್‌ (You Tube) ಭಾರತದ ಬ್ಲಾಕ್‌ ಮಾಡಿದೆ.

    ಶಾಹಿದ್‌ ಅಫ್ರಿದಿ ಚಾನೆಲ್‌ಗೆ ಕ್ಲಿಕ್‌ ಮಾಡಿದರೆ ರಾಷ್ಟ್ರೀಯ ಭದ್ರತೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಬಂದ ಆದೇಶದ ಕಾರಣ ಪ್ರಸ್ತುತ ಈ ಖಾತೆಯೂ ಭಾರತದಲ್ಲಿ ಲಭ್ಯವಿಲ್ಲ ಎಂಬ ಸಂದೇಶ ಬರುತ್ತಿದೆ. ಇದನ್ನೂ ಓದಿ: ಪಾಪಿ ಪಾಕಿಸ್ತಾನ – ಗಡಿಯಲ್ಲಿ ಸುರಂಗ ಕುತಂತ್ರ ತನಿಖೆಗೆ ಬಿಎಸ್‌ಎಫ್‌ಗೆ ನಿರ್ದೇಶನ

     

    ಭಾರತದ ವಿರುದ್ಧ ಮಾತನಾಡಿದ್ದ ಅಫ್ರಿದಿ ಖಾತೆಯನ್ನು ಬ್ಲಾಕ್‌ ಮಾಡಬೇಕೆಂದು ನೆಟ್ಟಿಗರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು. ಪಾಕಿಸ್ತಾನ ಬಹುತೇಕ ಯೂಟ್ಯೂಬ್‌ ಖಾತೆಗಳಿಗೆ ಆದಾಯ ಭಾರತದ ವೀಕ್ಷಕರಿಂದ ಬರುತ್ತಿದೆ. ಇವರಿಗೆ ಬರುವ ಆದಾಯವನ್ನು ನಿಲ್ಲಿಸಬೇಕಾದರೆ ಈ ಖಾತೆಗಳನ್ನು ಭಾರತದಲ್ಲಿ ಬಂದ್‌ ಮಾಡಬೇಕೆಂದು ಒತ್ತಾಯಿಸಿದ್ದರು. ಇದನ್ನೂ ಓದಿ: ನಿಗದಿಯಾಗಿದ್ದ ಮೋದಿ ರಷ್ಯಾ ಪ್ರವಾಸ ದಿಢೀರ್‌ ರದ್ದು!

    ಈ ಮೊದಲು ಪಾಕಿಸ್ತಾನ ಮಾಜಿ ಆಟಗಾರ, ವೇಗದ ಬೌಲರ್‌ ಶೋಯೆಬ್‌ ಅಕ್ತರ್‌ ಅವರ ಖಾತೆ ಸೇರಿದಂತೆ ಪಾಕಿಸ್ತಾನದ ಜನಪ್ರಿಯ ಸುದ್ದಿ ಮಾಧ್ಯಮಗಳ ಖಾತೆಯನ್ನು ಬ್ಲಾಕ್‌ ಮಾಡಿಸಿತ್ತು.

    ಅಫ್ರಿದಿ ಹೇಳಿದ್ದೇನು?
    ಭಾರತೀಯ ಸೇನೆ ನಿಷ್ಪ್ರಯೋಜಕ ಸೇನೆಯಾಗಿದೆ. ಪ್ರತಿಯೊಂದು ಅಪಘಾತಕ್ಕೂ ಭಾರತ ಪಾಕಿಸ್ತಾನವನ್ನು ಅನ್ಯಾಯವಾಗಿ ಹೊಣೆಗಾರರನ್ನಾಗಿ ಮಾಡುತ್ತದೆ. ಭಾರತದಲ್ಲಿ ಪಟಾಕಿ ಸಿಡಿದರೂ ಪಾಕಿಸ್ತಾನವನ್ನು ದೂಷಿಸಲಾಗುತ್ತದೆ. ಭಾರೀ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದರೂ ದಾಳಿ ತಡೆಯಲು ವಿಫಲವಾದ ಅಸಮರ್ಥ ಸೇನೆ ಎಂದು ಟೀಕಿಸಿದ್ದರು.

  • ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್‌ ಅಫ್ರಿದಿ

    ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್‌ ಅಫ್ರಿದಿ

    – ಪಹಲ್ಗಾಮ್‌ ಉಗ್ರರ ದಾಳಿಗೆ ಭಾರತದ ಭದ್ರತಾ ವೈಫಲ್ಯ ಕಾರಣ ಎಂದ ಮಾಜಿ ಕ್ರಿಕೆಟಿಗ

    ಇಸ್ಲಾಮಾಬಾದ್: ಭಾರತದಲ್ಲಿ ಪಟಾಕಿ ಸಿಡಿದರೂ, ಅದಕ್ಕೆ ಪಾಕಿಸ್ತಾನವನ್ನೇ ದೂಷಿಸುತ್ತಾರೆ ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್‌ ಅಫ್ರಿದಿ ಬೇಸರ ವ್ಯಕ್ತಪಡಿಸಿದ್ದಾರೆ. ಪಹಲ್ಗಾಮ್‌ ದಾಳಿಗೆ ಪಾಕಿಸ್ತಾನ ಕಾರಣ ಅಲ್ಲ ಎಂದು ತಿಳಿಸಿದ್ದಾರೆ.

    ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರು ಸಾವಿಗೆ ಕಾರಣವಾದ ಭೀಕರ ಭಯೋತ್ಪಾದಕ ದಾಳಿಯ ಹಿಂದೆ ಭಾರತೀಯ ಸೇನೆಯ ಭದ್ರತಾ ಲೋಪವಿದೆ ಎಂದು ಭಾರತೀಯ ಸೇನೆಯತ್ತ ಅಫ್ರಿದಿ ಬೊಟ್ಟು ಮಾಡಿ ತೋರಿಸಿದ್ದಾರೆ.

    ಕಾಶ್ಮೀರದಲ್ಲಿ 8,00,000 ಸೈನಿಕರು ಇದ್ದರೂ, ಇಂತಹ ದಾಳಿಗಳು ಇನ್ನೂ ಸಂಭವಿಸುತ್ತಿವೆ. ಜನರಿಗೆ ಭದ್ರತೆ ಒದಗಿಸಲು ಸಾಧ್ಯವಾಗದಿದ್ದರೆ, ನೀವು ಅಸಮರ್ಥರು ಮತ್ತು ನಿಷ್ಪ್ರಯೋಜಕರು ಎಂದರ್ಥ ಎಂದು ಅಫ್ರಿದಿ ಮಾತನಾಡಿದ್ದಾರೆ.

    ಭಾರತೀಯ ಮಾಧ್ಯಮಗಳು ಈ ಘಟನೆಯನ್ನು ವರದಿ ಮಾಡಿದ ರೀತಿಯನ್ನು ಅಫ್ರಿದಿ ಟೀಕಿಸಿದ್ದಾರೆ. ದಾಳಿ ನಡೆದ ಒಂದು ಗಂಟೆಯೊಳಗೆ ಭಾರತದ ಮಾಧ್ಯಮ ಬಾಲಿವುಡ್ ಆಗಿ ಬದಲಾಯಿತು ಎಂಬುದು ಆಶ್ಚರ್ಯಕರ ಎಂದಿದ್ದಾರೆ.

    ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ 26 ಪ್ರವಾಸಿಗರು ಹತ್ಯೆಯಾದರು. ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಅಲರ್ಟ್‌ ಆಗಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆ ಹೆಚ್ಚಿಸಿದೆ.

  • ಪಾಕ್ ಕ್ರಿಕೆಟಿಗ ಶಾಹೀನ್ ಶಾ ಅಫ್ರಿದಿಗೆ ಗಂಡು ಮಗು ಜನನ – `ತಾತ’ನಾದ ಪಾಕ್‌ನ ಹೊಡಿ ಬಡಿ ದಾಂಡಿಗ ಶಾಹಿದ್ ಅಫ್ರಿದಿ!

    ಪಾಕ್ ಕ್ರಿಕೆಟಿಗ ಶಾಹೀನ್ ಶಾ ಅಫ್ರಿದಿಗೆ ಗಂಡು ಮಗು ಜನನ – `ತಾತ’ನಾದ ಪಾಕ್‌ನ ಹೊಡಿ ಬಡಿ ದಾಂಡಿಗ ಶಾಹಿದ್ ಅಫ್ರಿದಿ!

    ಇಸ್ಲಾಮಾಬಾದ್:‌ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ (Shaheen Shah Afridi) ಮತ್ತು ಪತ್ನಿ ಅನ್ಶಾ ಅಫ್ರಿದಿ ದಂಪತಿ ಗಂಡು ಮಗುವಿಗೆ (ಅಲಿ ಯಾರ್) ಜನ್ಮ ನೀಡಿದ್ದಾರೆ. ಪಾಕ್‌ನ ಹೊಡಿ ಬಡಿ ದಾಂಡಿಗ ಶಾಹಿದ್ ಅಫ್ರಿದಿ ತಾತ ಆಗಿದ್ದಾರೆ.

    ಪಾಕಿಸ್ತಾನದ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ (Shahid Afridi) ಅವರ ಪುತ್ರಿ ಅನ್ಶಾ ಅಫ್ರಿದಿ (Ansha Afridi). ಇವರನ್ನು ಶಾಹೀನ್‌ಗೆ ಕೊಟ್ಟು ಮದುವೆ ಮಾಡಲಾಗಿತ್ತು. ಹಾಲಿ ಕ್ರಿಕೆಟಿಗ ತಂದೆಯಾದರೆ, ಮಾಜಿ ಕ್ರಿಕೆಟಿಗ ತಾತನಾಗಿದ್ದಾರೆ. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ ಉತ್ತೇಜಕ್ಕೆ 125 ಕೋಟಿ ಮೊತ್ತದ ನಿಧಿ ಸ್ಥಾಪನೆಗೆ ಐಸಿಸಿ ನಿರ್ಧಾರ – ಭಾರತ, ಆಸೀಸ್‌ಗಿಲ್ಲ ಲಾಭ ಏಕೆ?

    ಮಗು ಆಗಮನದ ನಿರೀಕ್ಷೆಯಲ್ಲಿದ್ದ ಶಾಹೀನ್‌ ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಆಡುವುದಿಲ್ಲ ಎಂಬ ಸುದ್ದಿ ಹರಡಿತ್ತು. ಆಗ ಪಾಕಿಸ್ತಾನದ ರೆಡ್ ಬಾಲ್ ತರಬೇತುದಾರ ಜೇಸನ್ ಗಿಲ್ಲೆಸ್ಪಿ, ವೃತ್ತಿಪರ ಬದ್ಧತೆಗಳಿಗಿಂತ ಕುಟುಂಬದ ಮಹತ್ವವನ್ನು ಒತ್ತಿ ಹೇಳಿದ್ದರು. ಈ ಮಹತ್ವದ ಕ್ಷಣದಲ್ಲಿ ಶಾಹೀನ್‌ಗೆ ತನ್ನ ಹೆಂಡತಿಯೊಂದಿಗೆ ಇರಲು ಸಮಯವನ್ನು ನೀಡಬಹುದು ಎಂದು ಸಲಹೆ ನೀಡಿದ್ದರು.

    ಶಾಹೀನ್ ಮತ್ತು ಅನ್ಶಾ ಜೋಡಿಗೆ 2021 ರಲ್ಲಿ ನಿಶ್ಚಿತಾರ್ಥವಾಗಿತ್ತು. ನಂತರ ಖಾಸಗಿ ನಿಕಾಹ್ ಸಮಾರಂಭದಲ್ಲಿ 2023ರ ಫೆಬ್ರವರಿಯಲ್ಲಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು. ಜುಲೈನಲ್ಲಿ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದನ್ನೂ ಓದಿ: ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್‌ ಧವನ್‌

    2018 ರಲ್ಲಿ ಶಾಹೀನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಬಳಿಕ ಉತ್ತಮ ಪ್ರದರ್ಶನದೊಂದಿಗೆ ಪಾಕಿಸ್ತಾನದ ಪ್ರಮುಖ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಎಡಗೈ ವೇಗಿ ಟೆಸ್ಟ್ ಮತ್ತು ODI ಎರಡರಲ್ಲೂ 100 ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.

    T20I ನಲ್ಲಿ 100 ತಲುಪಲು ಕೇವಲ ನಾಲ್ಕು ವಿಕೆಟ್‌ಗಳ ಅಗತ್ಯವಿದೆ. ಶಾಹೀನ್ ಪಾಕಿಸ್ತಾನದ ದೇಶೀಯ ಕ್ರಿಕೆಟ್ ಯಶಸ್ಸಿಗೆ ಕೊಡುಗೆ ನೀಡಿದ್ದಾರೆ. 2022 ಮತ್ತು 2023 ರಲ್ಲಿ ಪಾಕಿಸ್ತಾನ ಸೂಪರ್ ಲೀಗ್ (PSL) ಪ್ರಶಸ್ತಿಗಳನ್ನು ಲಾಹೋರ್ ಖಲಂದರ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಶೇಖ್‌ ಹಸೀನಾ, ಬಾಂಗ್ಲಾದ ಆಲ್‌ರೌಂಡರ್‌ ಶಕೀಬ್‌ ವಿರುದ್ಧ ಕೊಲೆ ಪ್ರಕರಣ ದಾಖಲು

  • ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

    ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

    ಇಸ್ಲಾಮಾಬಾದ್: ಮುಂಬರುವ ಏಷ್ಯಾಕಪ್ ಕ್ರಿಕೆಟ್ (Aisa Cup 2023) ಟೂರ್ನಿಗೆ ಪಾಕಿಸ್ತಾನದಲ್ಲಿ ಭಾರತ ತಂಡ ಕ್ರಿಕೆಟ್ ಆಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವಕಾಶ ಮಾಡಿಕೊಡಬೇಕು ಎಂದು ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ (Shahid Afridi) ಮನವಿ ಮಾಡಿದ್ದಾರೆ.

    ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ವೇಳೆ 2023ರ ಏಷ್ಯಾಕಪ್ ಟೂರ್ನಿ ಸಂಬಂಧ ಮಾತನಾಡಿದ ಅವರು, 2023ರ ಏಷ್ಯಾಕಪ್ ಟೂರ್ನಿಗೆ ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸುವಂತೆ ಮನವಿ ಮಾಡಿದ್ದಾರೆ. ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳಬೇಕು. ಆ ಮೂಲಕ ಉಭಯ ತಂಡಗಳ ನಡುವಣ ದ್ವಿಪಕ್ಷೀಯ ಸಂಬಂಧವನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 

    2023ರ ಏಷ್ಯಾಕಪ್ ಟೂರ್ನಿಯ ಆತಿಥ್ಯವನ್ನು ಪಾಕಿಸ್ತಾನಕ್ಕೆ ನೀಡಲಾಗಿದೆ. ಆದರೆ ಕಳೆದ ವರ್ಷ ಬಿಸಿಸಿಐ (BCCI) ಕಾರ್ಯದರ್ಶಿ ಜಯ್ ಶಾ ಅವರು, ಪಾಕಿಸ್ತಾನದಲ್ಲಿ ಏಷ್ಯಾ ಕಪ್ ಟೂರ್ನಿ ನಡೆದರೆ, ಭಾರತ ತಂಡವನ್ನು ಕಳುಹಿಸುವುದಿಲ್ಲ ಎಂದಿದ್ದರು. ಆ ಮೂಲಕ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸುವಂತೆ ಏಷ್ಯಾ ಕ್ರಿಕೆಟ್ ಕೌನ್ಸಿಲ್ ಬಳಿ ಮನವಿ ಸಲ್ಲಿಸಲಾಗುವುದು ಎಂದಿದ್ದರು. ಇದನ್ನೂ ಓದಿ: AisaCup ಕ್ರಿಕೆಟ್‌ಗೆ ಭಾರತ ಪಾಕಿಸ್ತಾನಕ್ಕೆ ಹೋಗಲ್ಲ: BCCI ಅಧಿಕೃತ ಪ್ರಕಟ

    ಈ ವಿಷಯವನ್ನು ಮತ್ತೊಮ್ಮೆ ಪ್ರಸ್ತಾಪಿಸಿರುವ ಅಫ್ರಿದಿ, ಭಾರತ ತಂಡ ಪಾಕಿಸ್ತಾನಕ್ಕೆ ಬಂದರೆ ನಿಜಕ್ಕೂ ಉತ್ತಮವಾಗಿರುತ್ತದೆ. ಆ ಮೂಲಕ ಭಾರತ ಹಾಗೂ ಪಾಕಿಸ್ತಾನ ನಡುವಣ ದ್ವಿಪಕ್ಷೀಯ ಕ್ರಿಕೆಟ್‌ಗೆ ಮೊದಲ ಹೆಜ್ಜೆಯಾಗಲಿದೆ. ಯುದ್ದ ಹಾಗೂ ದ್ವೇಷವನ್ನು ಈಗಿನ ಪೀಳಿಗೆ ಬಯಸುವುದಿಲ್ಲ. ನಮ್ಮ ನಡುವಣ ಸಂಬಂಧವನ್ನು ಉತ್ತಮ ಪಡಿಸುವುದು ಇದಾಗಿದೆ. ಬೇರೆಯವರ ರೀತಿ ನಾವು ಸ್ನೇಹಿತರಾಗಿದ್ದರೆ, ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಬಿಸಿಸಿಐ ಬಲಿಷ್ಠ ಮಂಡಳಿಯಾಗಿ ಉಳಿದಿದೆ. ಅದು ಶತ್ರುಗಳನ್ನ ಹುಟ್ಟುಹಾಕಬಾರದು, ಸ್ನೇಹಿತರನ್ನಾಗಿ ಮಾಡಿಕೊಳ್ಳುವತ್ತ ಗಮನಹರಿಸಬೇಕು. ಹೆಚ್ಚು ಮಂದಿಯನ್ನು ಸ್ನೇಹಿತರನ್ನಾಗಿ ಮಾಡಿಕೊಂಡರೆ, ನೀವು ಇನ್ನಷ್ಟು ಬಲಿಷ್ಠವಾಗಬಹುದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

    ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. 2008ರಲ್ಲಿ ಮುಂಬೈ ಮೇಲಿನ ದಾಳಿಯ ಬಳಿಕ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕೊನೆಯದ್ದಾಗಿ 2022ರ ಏಷ್ಯಾಕಪ್ ಟೂರ್ನಿ ಬಳಿಕ, ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಇತ್ತಂಡಗಳು ಮುಖಾಮುಖಿಯಾಗಿದ್ದವು.

  • ಅಭಿಮಾನಿಗಾಗಿ ಭಾರತದ ಬಾವುಟದ ಮೇಲೆ ಆಟೋಗ್ರಾಫ್ ಹಾಕಿದ ಅಫ್ರಿದಿ!

    ಅಭಿಮಾನಿಗಾಗಿ ಭಾರತದ ಬಾವುಟದ ಮೇಲೆ ಆಟೋಗ್ರಾಫ್ ಹಾಕಿದ ಅಫ್ರಿದಿ!

    ಬೆಂಗಳೂರು: ಶನಿವಾರ ನಡೆದ ಲೆಜೆಂಡ್ಸ್ ಲೀಗ್ (Legends League Cricket) ಎಲಿಮಿನೇಟರ್ ಪಂದ್ಯದಲ್ಲಿ ಏಷ್ಯಾ ಲಯನ್ಸ್, ಇಂಡಿಯಾ ಮಹಾರಾಜಾಸ್ (India Maharajas) ವಿರುದ್ಧ 85 ರನ್‌ಗಳ ಭರ್ಜರಿ ಜಯ ಸಾಧಿಸಿತು.

    ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕ್ರಿಕೆಟ್ ದಂಥಕತೆ ಶಾಹಿದ್ ಅಫ್ರಿದಿ (Shahid Afridi) ನಾಯಕತ್ವದ ಏಷ್ಯಾ ಲಯನ್ಸ್ (Asia Lions) ತಂಡವು 20 ಓವರ್‌ಗಳಲ್ಲಿ 191 ರನ್ ಬಾರಿಸಿತ್ತು. ಉಪುಲ್ ತರಂಗ 31 ಎಸೆತಗಳಲ್ಲಿ 50 ರನ್, ಮೊಹಮ್ಮದ್ ಹಫೀಜ್ 24 ಎಸೆತಗಳಲ್ಲಿ 38 ರನ್ ಗಳಿಸಿ ಮಿಂಚಿದ್ದರು. ಈ ಗುರಿ ಬೆನ್ನತ್ತಿದ್ದ ಇಂಡಿಯಾ ಮಹಾರಾಜಾಸ್ 106 ರನ್‌ಗಳಿಗೆ ಆಲೌಟ್ ಆಯಿತು. ಪರಿಣಾಮ ಏಷ್ಯಾ ಲಯನ್ಸ್ ತಂಡವು 85 ರನ್‌ಗಳ ಭರ್ಜರಿ ಜಯ ಸಾಧಿಸಿತು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಪಂದ್ಯದ ಬಳಿಕ ಅಭಿಮಾನಿಯೊಬ್ಬರು ಅಫ್ರಿದಿ ಬಳಿಬಂದು ಆಟೋಗ್ರಾಫ್ ಕೇಳಿದರು. ಒಂದು ಕ್ಷಣವೂ ಯೋಚಿಸದ ಅಫ್ರಿದಿ, ಗೌರವದಿಂದಲೇ ಅಭಿಮಾನಿಯಿಂದ ಭಾರತದ ರಾಷ್ಟ್ರಧ್ವಜ (Indian Flag) ಪಡೆದು ಅದರ ಮೇಲೆ ಆಟೋಗ್ರಾಫ್ ಹಾಕಿಕೊಟ್ಟರು. ಈ ವೀಡಿಯೋ ಇದೀಗ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಳಪೆ ಬ್ಯಾಟಿಂಗ್‌ – ಸೂರ್ಯನ ವಿರುದ್ಧ ಸಿಡಿದ ಅಭಿಮಾನಿಗಳು

    2022ರ ಏಷ್ಯಾಕಪ್ ಸಂದರ್ಭದಲ್ಲಿ ಏಷ್ಯಾಕಪ್ ಟೂರ್ನಿ ಕುರಿತು ಮಾತನಾಡಿದ್ದ ಅಫ್ರಿದಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2022ರ ಪಂದ್ಯದ ವೇಳೆ ನನ್ನ ಮಗಳು ಪಾಕಿಸ್ತಾನ ಧ್ವಜಕ್ಕಿಂತ ಭಾರತ ಧ್ವಜವನ್ನೇ ಹಿಡಿದು ಬೀಸುತ್ತಿದ್ದಳು ಎಂದು ಹೇಳಿಕೊಂಡಿದ್ದರು.

  • ಧೋನಿ ಇದ್ದಾಗ ಭಾರತಕ್ಕೆ ಪಾಕಿಸ್ತಾನ ಲೆಕ್ಕಕ್ಕಿರಲಿಲ್ಲ – ಅಫ್ರಿದಿ

    ಧೋನಿ ಇದ್ದಾಗ ಭಾರತಕ್ಕೆ ಪಾಕಿಸ್ತಾನ ಲೆಕ್ಕಕ್ಕಿರಲಿಲ್ಲ – ಅಫ್ರಿದಿ

    ಇಸ್ಲಾಮಾಬಾದ್: ಟೀಂ ಇಂಡಿಯಾ (Team India) ಮಾಜಿ ನಾಯಕ ಎಂ.ಎಸ್.ಧೋನಿ (MS Dhoni) ಇದ್ದಾಗ ಟೀಂ ಇಂಡಿಯಾಕ್ಕೆ ಪಾಕಿಸ್ತಾನ (Pakistan) ಲೆಕ್ಕಕ್ಕೇ ಇರಲಿಲ್ಲ. ಟೀಂ ಇಂಡಿಯಾ ಪಾಕಿಸ್ತಾನವನ್ನು ಸಂಪೂರ್ಣವಾಗಿ ಕಡೆಗಣಿಸಿತ್ತು ಎಂದು ಪಾಕಿಸ್ತಾನ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ (Shahid Afridi) ನೆನಪಿಸಿಕೊಂಡಿದ್ದಾರೆ.

    ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಕಡೆಗಣಿಸಿ, ದಕ್ಷಿಣ ಆಫ್ರಿಕಾ (South Africa), ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ನಂತಹ ತಂಡಗಳೊಂದಿಗೆ ಸ್ಪರ್ಧಿಸಲು ಪ್ರಾರಂಭಿಸಿತು. ಪಾಕಿಸ್ತಾನದ ವಿರುದ್ಧದ ಪಂದ್ಯಗಳನ್ನು ಸತತವಾಗಿ ಗೆಲ್ಲುತ್ತಿದ್ದರು. ಪ್ರತಿ ಬಾರಿ ಪಂದ್ಯ ಆಡುವಾಗಲೂ ಪಾಕಿಸ್ತಾನಕ್ಕೆ ಸೋಲು ಖಚಿತವಾಗಿರುತ್ತಿತ್ತು. ಭಾರತವು ಈಗ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ನೊಂದಿಗೆ ಹೆಚ್ಚು ಸ್ಪರ್ಧಿಸಲು ಪ್ರಾರಂಭಿಸಿದ್ದು, ಹಿಂದಿನಂತೆ ಭಿನ್ನವಾಗಿ ತಮ್ಮ ಮನಸ್ಥಿತಿ ಬದಲಾಯಿಸಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮಗಳ ಸಾವಿನ ನೋವಿನಲ್ಲೂ ಟೀಂ ಇಂಡಿಯಾ ವಿರುದ್ಧ ಹೋರಾಡಿದ ಮಿಲ್ಲರ್

    2021ರ T20 ವಿಶ್ವಕಪ್ (T20 WorldCup) ವರೆಗೆ, ಪಾಕಿಸ್ತಾನವು ವಿಶ್ವಕಪ್‌ಗಳಲ್ಲಿ ಭಾರತದ ವಿರುದ್ಧ ಒಂದೇ ಒಂದು ಪಂದ್ಯದಲ್ಲೂ ಗೆಲ್ಲಲು ಸಾಧ್ಯವಾಗಿರಲಿಲ್ಲ. ಸತತವಾಗಿ 7 ಏಕದಿನ ಪಂದ್ಯಗಳು ಮತ್ತು 5 T20 ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತ್ತು. ಇದನ್ನೂ ಓದಿ: ಶ್ರೇಯಸ್‌ ಅಯ್ಯರ್‌, ಇಶಾನ್‌ ಕಿಶನ್‌ ಭರ್ಜರಿ ಬ್ಯಾಟಿಂಗ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ

    1992ರಿಂದ 2021ರ ವರೆಗೆ ಪಾಕಿಸ್ತಾನಕ್ಕೆ ಭಾರತವನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಪಾಕಿಸ್ತಾನ ಏಷ್ಯಾಕಪ್‌ನಲ್ಲಿ (AisaCup 2022) ಒಂದು ಪಂದ್ಯದಲ್ಲಿ ಸೋತರೂ ಮತ್ತೊಂದು ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಗೆಲುವು ಸಾಧಿಸಿತು. ಕಳೆದ ವರ್ಷದ T20 ವಿಶ್ವಕಪ್‌ನಲ್ಲಿಯೂ ಭಾರತ ತಂಡದ ವಿರುದ್ಧ ಪಾಕಿಸ್ತಾನ 10 ವಿಕೆಟ್‌ಗಳ ಜಯ ಗಳಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ವಿಶ್ವಕಪ್ ಬಳಿಕ T20 ಆವೃತ್ತಿಗೆ ಕಿಂಗ್ ಕೊಹ್ಲಿ ವಿದಾಯ?

    ವಿಶ್ವಕಪ್ ಬಳಿಕ T20 ಆವೃತ್ತಿಗೆ ಕಿಂಗ್ ಕೊಹ್ಲಿ ವಿದಾಯ?

    ಮುಂಬೈ: ಟೀಂ ಇಂಡಿಯಾದ (Team India) ರನ್ ಮಿಷಿನ್ ಖ್ಯಾತಿ ವಿರಾಟ್‌ ಕೊಹ್ಲಿ (Virat Kohli) ಇದೇ ಅಕ್ಟೋಬರ್ ನಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ (T20 WorldCup) ಬಳಿಕ ಅಂತಾರಾಷ್ಟ್ರೀಯ ಟಿ20 (International T20) ಆವೃತ್ತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ಪಾಕಿಸ್ತಾನದ (Pakistan) ಮಾಜಿ ವೇಗಿ ಶೋಯೆಬ್ ಅಖ್ತರ್ ಭವಿಷ್ಯ ನುಡಿದಿದ್ದಾರೆ.

    ವಿರಾಟ್ ಕೊಹ್ಲಿ ಅವರು ಉತ್ತಮ ಲಯದಲ್ಲಿರುವಾಗಲೇ ನಿವೃತ್ತಿ ಘೋಷಿಸಲಿ ಎಂದು ಶಾಹಿದ್ ಅಫ್ರಿದಿ (Shahid Afridi) ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಮತ್ತೊಂದು ಹೇಳಿಕೆ ನೀಡಿರುವ ಶೋಯೆಬ್ ಅಖ್ತರ್ (Shoaib Akhtar) ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

    ಮುಂದಿನ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಬಳಿಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು. ಉಳಿದ ಎರಡು ಮಾದರಿಯ ಕ್ರಿಕೆಟ್‌ನಲ್ಲಿ ಹೆಚ್ಚು ಸಮಯ ಆಡುವ ಸಲುವಾಗಿ ವಿರಾಟ್ ಕೊಹ್ಲಿ, ಟಿ20-ಐ ಕ್ರಿಕೆಟ್ ಕೆರಿಯರ್‌ಗೆ ವಿದಾಯ ಹೇಳಲಿದ್ದಾರೆ. ನಾನು ಕೊಹ್ಲಿ ಸ್ಥಾನದಲ್ಲಿ ಇದ್ದಿದ್ದರೆ ಬೃಹತ್ ಮಟ್ಟದಲ್ಲಿ ಆಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಿದ್ದೆ ಅಖ್ತರ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

    ಈ ಬಾರಿ ಆಸ್ಟ್ರೇಲಿಯಾ ಆತಿಥ್ಯದಲ್ಲಿ ಟಿ20 ವಿಶ್ವಕಪ್ ನಡೆಯುತ್ತಿದ್ದು, ಅಕ್ಟೋಬರ್ 16 ರಿಂದ ನವೆಂಬರ್ 13ರ ವರೆಗೆ ನಡೆಯಲಿದೆ. ಅದಕ್ಕಾಗಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಾರಥ್ಯದ 15 ಆಟಗಾರರ ಪಟ್ಟಿಯನ್ನು ಬಿಸಿಸಿಐ ಈಗಾಗಲೇ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಭಾರತವನ್ನು ಅಂತಾರಾಷ್ಟ್ರೀಯ ಸಂಶೋಧನಾ ಕೇಂದ್ರವಾಗಿ ರೂಪಿಸಿ – ಗೆಹ್ಲೋಟ್

    ಏಷ್ಯಾಕಪ್‌ನೊಂದಿಗೆ ಉತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ 276 ರನ್‌ಗಳನ್ನು ಗಳಿಸಿದರು. ಅಫ್ಘಾನಿಸ್ತಾನದೊಂದಿಗೆ ಉತ್ತಮ ಇನ್ನಿಂಗ್ಸ್ ಆಡಿದ ಕಿಂಗ್ ಕೊಹ್ಲಿ ಭರ್ಜರಿ ಶತಕ ಸಿಡಿಸಿ 1,021 ದಿನಗಳ ಬಳಿಕ ಹೊಸ ದಾಖಲೆ ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ (Cricket) ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridi) ಭಾರತೀಯ ಕ್ರಿಕೆಟ್ ತಂಡದೊಂದಿಗೆ ವಿವಾದಗಳ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಗೌತಮ್ ಗಂಭೀರ್ ಮತ್ತು ಇತರ ಭಾರತೀಯ ಕ್ರಿಕೆಟಿಗರೊಂದಿಗೆ ಅನೇಕ ಬಾರಿ ಮುಖಾಮುಖಿಯಾಗಿದ್ದಾರೆ. ಆದರೆ ಅವರು ಮಾಧ್ಯಮದಲ್ಲಿ ನೀಡಿದ ಹೇಳಿಕೆಯೊಂದು ಭಾರತೀಯ ಕ್ರಿಕೆಟಿಗರಿಗೆ (Team India) ವಿಶ್ವದೆಲ್ಲೆಡೆ ಅಭಿಮಾನಿಗಳಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

    ಏಷ್ಯಾಕಪ್ ಟಿ20 (Aisa Cup T20) ಟೂರ್ನಿಯ ಕುರಿತು ಮಾತನಾಡಿರುವ ಅಫ್ರಿದಿ, ಭಾರತ ಮತ್ತು ಪಾಕಿಸ್ತಾನ (India Pakistan) ನಡುವಿನ ಏಷ್ಯಾ ಕಪ್ 2022ರ ಪಂದ್ಯದ ವೇಳೆ ನನ್ನ ಮಗಳು ಪಾಕಿಸ್ತಾನ ಧ್ವಜಕ್ಕಿಂತ ಭಾರತ ಧ್ವಜವನ್ನೇ ಹಿಡಿದು ಬೀಸುತ್ತಿದ್ದಳು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ

    ಸ್ಟೇಡಿಯಂನಲ್ಲಿ ಕೇವಲ ಪಾಕಿಸ್ತಾನಿ ಅಭಿಮಾನಿಗಳು ಶೇ.10 ರಷ್ಟು ಇದ್ದರೆ, ಶೇ.90 ರಷ್ಟು ಭಾರತದ ಅಭಿಮಾನಿಗಳೇ ತುಂಬಿದ್ದರು. ಭಾರತೀಯ ಅಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ವಿಷಯವನ್ನು ನನ್ನ ಹೆಂಡತಿ ನನಗೆ ಹೇಳಿದಳು ಎಂದು ಹೇಳಿಕೊಂಡಿದ್ದಾರೆ.

    ಪಾಕಿಸ್ತಾನದ ಧ್ವಜಗಳು ಅಲ್ಲಿ ಲಭ್ಯವಿರಲಿಲ್ಲ. ಆದ್ದರಿಂದ ನನ್ನ ಕಿರಿಯ ಮಗಳು ಭಾರತದ ಧ್ವಜವನ್ನು ಹಿಡಿದು ಬೀಸುತ್ತಿದ್ದಳು. ನಾನು ವೀಡಿಯೊವನ್ನು ಸ್ವೀಕರಿಸಿದ್ದೇನೆ. ಆದರೆ ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳಲು ಆಗಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ

    ಮೊದಲ ಪಂದ್ಯದಲ್ಲಿ 147 ರನ್‌ಗಳಿಸಿ ಭಾರತದ ಎದುರು ಸೋತ ಪಾಕಿಸ್ತಾನ, ಸೂಪರ್ ಫೋರ್ ಲೀಗ್‌ನಲ್ಲಿ 182 ರನ್‌ಗಳಿಸಿ ಭಾರತದ ವಿರುದ್ಧ ಗೆಲುವು ದಾಖಲಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‍ನನ್ನು ಬೆಂಬಲಿಸಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೀಟ್ ಮಾಡಿದ್ದಕ್ಕೆ ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಕಿಡಿಕಾರಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರವನ್ನು ಬೆಂಬಲಿಸಿದ್ದಕ್ಕಾಗಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬುಧವಾರ ನ್ಯಾಯಾಲಯವನ್ನು ಒತ್ತಾಯಿಸಿತ್ತು. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಈ ಬಗ್ಗೆ ಟ್ವೀಟ್ ಮಾಡಿದ್ದ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರಿ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ವಿಶ್ವಸಂಸ್ಥೆಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಇದಕ್ಕೆ ಪ್ರತ್ಯುತ್ತರವಾಗಿ, ಅಮಿತ್ ಮಿಶ್ರಾ ಅವರು ಟ್ವೀಟ್ ಮಾಡಿ, ಆತ್ಮೀಯ ಶಾಹಿದ್ ಅಫ್ರಿದಿ ಅವರೇ ಯಾಸಿನ್ ಮಲಿಕ್ ಸ್ವತಃ ನ್ಯಾಯಾಲಯದ ದಾಖಲೆಯಲ್ಲಿ ತಪ್ಪೋಪ್ಪಿಕೊಂಡಿದ್ದಾನೆ. ನಿಮ್ಮ ಜನ್ಮದಿನಾಂಕದಂತೆ ಎಲ್ಲವೂ ದಾರಿತಪ್ಪಿಸುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕೋರ್ಟ್ ವಿಚಾರಣೆಯಲ್ಲಿ ಕೃತ್ಯದ ಬಗ್ಗೆ ಯಸಿನ್ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಎನ್‍ಐಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

  • ಮತ್ತೆ ವಿಷ ಚಿಮ್ಮಿದ ಶಾಹಿದ್ ಅಫ್ರಿದಿ

    ಮತ್ತೆ ವಿಷ ಚಿಮ್ಮಿದ ಶಾಹಿದ್ ಅಫ್ರಿದಿ

    ಇಸ್ಲಾಮಾಬಾದ್: ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಶ್ಮೀರದ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್ ಪರ ಪಾಕಿಸ್ತಾನದ ಮಾಜಿ ಆಲ್‍ರೌಂಡರ್ ಆಟಗಾರ ಶಾಹಿದ್ ಅಫ್ರಿದಿ ಬ್ಯಾಟಿಂಗ್ ನಡೆಸಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ಯುಎನ್‍ (ವಿಶ್ವಸಂಸ್ಥೆ) ಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಕಠಿಣ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಸೇರಿದಂತೆ ವಿವಿಧ ಪ್ರಕರಣಗಳು ಯಾಸಿನ್ ಮಲಿಕ್ ಮೇಲೆ ದಾಖಲಾಗಿತ್ತು. ತನ್ನ ಮೇಲೆ ದಾಖಲಾದ ಆರೋಪಗಳ ಸಂಬಂಧ ಮೇ 10 ರಂದು ಕೋರ್ಟ್‍ನಲ್ಲಿ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕೋರ್ಟ್‍ಗೆ ಮನವಿ ಮಾಡಿತ್ತು. ಈ ಬಗ್ಗೆ ವಿಚಾರಣೆ ಪೂರ್ಣಗೊಳಿಸಿ ಇಂದು ರಾಷ್ಟ್ರೀಯ ತನಿಖಾದಳದ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10,00,000 ರೂ. ದಂಡ ವಿಧಿಸಿದೆ. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    https://twitter.com/SAfridiOfficial/status/1529357436733337600

    ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿದೆ.