Tag: Shahrukh Khan

  • 59ರಲ್ಲೂ 20ರ ಲುಕ್‌ – ʻಕಿಂಗ್‌ʼ ಫಿಟ್ನೆಸ್ ಗುಟ್ಟೇನು?

    59ರಲ್ಲೂ 20ರ ಲುಕ್‌ – ʻಕಿಂಗ್‌ʼ ಫಿಟ್ನೆಸ್ ಗುಟ್ಟೇನು?

    ಭಿಮಾನಿಗಳಿಂದ್‌ ಕಿಂಗ್ ಖಾನ್ (Shahrukh Khan) ಎಂದು ಕರೆಸಿಕೊಂಡಿರುವ ಶಾರುಖ್ ಖಾನ್, 59 ವರ್ಷ ವಯಸ್ಸಿನಲ್ಲೂ 20ರ ಹರೆಯದ ಯುವಕನಂತೆ ಸಕ್ರಿಯರಾಗಿದ್ದಾರೆ. ಈ ವಯಸ್ಸಿನಲ್ಲಿಯೂ ಅವರು ಹೇಗೆ ಇಷ್ಟೊಂದು ದಣಿವರಿಯದೆ ಕೆಲಸ ಮಾಡ್ತಾರೆ ಅಂತ ಅಭಿಮಾನಿಗಳಲ್ಲಿ ಒಂದು ಪ್ರಶ್ನೆಯಂತೂ ಮನೆ ಮಾಡಿರುತ್ತೆ.

    ಹಿಂದೆ ಸಂದರ್ಶನವೊಂದರಲ್ಲಿ ಶಾರುಖ್ ಖಾನ್ ತಮ್ಮ ಊಟದ ಶೈಲಿಯ ಬಗ್ಗೆ ಹೇಳಿಕೊಂಡಿದ್ದರು. ನಾನು ದಿನಕ್ಕೆ ಎರಡು ಬಾರಿ ಮಾತ್ರ ಊಟ ಮಾಡುತ್ತೇನೆ. ಬೆಳಿಗ್ಗೆ ತಿಂಡಿ ಮಾಡುವುದಿಲ್ಲ. ಮಧ್ಯಾಹ್ನ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಆಹಾರ ತಿನ್ನುವುದಿಲ್ಲ. ನನಗೆ ಸರಳ ಆಹಾರ ಇಷ್ಟ ಎಂದು ಹೇಳಿಕೊಂಡಿದ್ದರು. ಇದನ್ನೂ ಓದಿ: ದೀಕ್ಷಿತ್ ಶೆಟ್ಟಿ ನಿರ್ಮಾಣದ ‘ವಿಡಿಯೋ’ ಚಿತ್ರದ ಟೀಸರ್ ರಿಲೀಸ್

    ಮೊಳಕೆ ಕಾಳುಗಳು, ಬೇಯಿಸಿದ ಕೋಳಿ ಮಾಂಸ ಮತ್ತು ಬ್ರೊಕೊಲಿಯನ್ನು ತಿನ್ನುತ್ತೇನೆ. ನಾನು ಕೆಲವು ವರ್ಷಗಳಿಂದ ಪ್ರತಿದಿನ ಒಂದೇ ರೀತಿಯ ಆಹಾರವನ್ನು ಸೇವಿಸುತ್ತೇನೆ. ತಿನ್ನುವ ಆಹಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ ನಾನು ಅತಿಯಾಗಿ ತಿನ್ನುವವನಲ್ಲ ಎಂದಿದ್ದರು.

    ವಿಮಾನದಲ್ಲಿ ಪ್ರಯಾಣಿಸುವಾಗ ಅಥವಾ ಪಾರ್ಟಿಗೆ ಯಾರಾದ್ದಾದರೂ ಮನೆಗೆ ಹೋದಾಗ, ಅವರು ನನಗೆ ಬಡಿಸುವ ಯಾವುದೇ ಆಹಾರವನ್ನು ನಾನು ತಿನ್ನುತ್ತೇನೆ. ಅದು ಬಿರಿಯಾನಿಯಾಗಿರಲಿ, ಚಪಾತಿಯಾಗಿರಲಿ, ಪರೋಟಾ ಆಗಿರಲಿ, ತುಪ್ಪವಾಗಲಿ, ಲಸ್ಸಿಯಾಗಿರಲಿ, ಏನೇ ಕೊಟ್ಟರೂ ನಾನು ಬೇಡ ಎನ್ನದೇ ತಿನ್ನುತ್ತೇನೆ ಎಂದಿದ್ದರು.

    ಶಾರುಖ್ ಖಾನ್ ಮಾತ್ರವಲ್ಲ, ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಕೂಡ ತಮ್ಮ ಆಹಾರದ ಬಗ್ಗೆ ಬಹಳ ಜಾಗ್ರತೆ ವಹಿಸುತ್ತಾರೆ. ಸರಳವಾದ ಆಹಾರವನ್ನು ಮಾತ್ರ ತಿನ್ನುತ್ತಾರೆ. ರಜನಿಕಾಂತ್ ಹೆಚ್ಚು ಎಣ್ಣೆ ಅಥವಾ ಉಪ್ಪು ಇರುವ ಆಹಾರಗಳಿಂದ ದೂರ ಇರ್ತಾರೆ. ಬಹುಶಃ ಇದಕ್ಕೆ ಇರ್ಬೇಕು ರಜನಿಕಾಂತ್ 74 ನೇ ವಯಸ್ಸಿನಲ್ಲೂ ರೆಸ್ಟ್‌ ಇಲ್ದೆ ಸಿನಿಮಾ ಮಾಡೋದು! ರಜನಿಕಾಂತ್‌ ಅವರ ಜೊತೆ ನಡೆಯೋಕಾಗಲ್ಲ.. ಅವರು ನಡಿತಾ ಇದ್ರೆ ನಾವು ಓಡ್ತಾ ಇರ್ಬೇಕು ಅಂತ, ಕೀರ್ತಿ ಸುರೇಶ್ ಸೇರಿದಂತೆ, ಅನೇಕ ಯುವ ಕಲಾವಿದರು ಹೇಳಿಕೊಂಡಿದ್ದಾರೆ. ಇಷ್ಟಕ್ಕೆಲ್ಲ ಊಟವೇ ಕಾರಣ.. ಅಷ್ಟಿಲ್ದೇ ಹಿರಿಯರು ಹೇಳ್ತಾರಾ, ಊಟ ಬಲ್ಲವನಿಗೆ ರೋಗ ಇಲ್ಲ ಅಂತ!

    ಶಾರುಖ್ ಖಾನ್, ತಮ್ಮ ಪುತ್ರಿ ಸುಹಾನಾ ಜೊತೆ ಕಿಂಗ್‌ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಮತ್ತು ರಾಣಿ ಮುಖರ್ಜಿ ನಟಿಸುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕಾನ್ 2025: ನನಗೆ ಫಹಾದ್ ಫಾಸಿಲ್ ಆ್ಯಕ್ಟಿಂಗ್ ಇಷ್ಟ – ಆಲಿಯಾ ಭಟ್ ಗುಣಗಾನ

  • ಶಾರುಖ್ ಖಾನ್‌ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಶಾರುಖ್ ಖಾನ್‌ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಬಾಲಿವುಡ್ (Bollywood) ನಟ ಶಾರುಖ್ ಖಾನ್ (Sharukh Khan) ಆರೋಗ್ಯದಲ್ಲಿ ಏರುಪೇರಾಗಿದೆ. ಐಪಿಎಲ್‌ನ ಮೊದಲ ಪ್ಲೈ ಆಫ್ ಪಂದ್ಯದ ನಂತರ ಹೀಟ್ ಸ್ಟ್ರೋಕ್ ಒಳಗಾಗಿದ್ದು, ಶಾರುಖ್ ಖಾನ್‌ರನ್ನು ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ತೆಲುಗು ನಟ ನಾಗಚೈತನ್ಯ

    ಪಠಾಣ್ ನಟ ಶಾರುಖ್ ಖಾನ್ ಅವರು ಆಸ್ಪತ್ರೆಗೆ ದಾಖಲಾಗಿರುವುದನ್ನು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ. ಆದರೆ ಯಾವ ಕಾರಣಕ್ಕಾಗಿ ಅವರು ಅಡ್ಮಿಟ್ ಆಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ಡಿಹೈಡ್ರೇಷನ್ ಮತ್ತು ಹೀಟ್ ಸ್ಟ್ರೋಕ್ ಕಾರಣದಿಂದ ಶಾರುಖ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

    ಗುಜರಾತ್‌ನಲ್ಲಿ ಈಗ ಬಿಸಿಗಾಳಿ ಬೀಸುತ್ತಿದೆ. ಕಾರಣಕ್ಕಾಗಿ ಅವರು ಆರೋಗ್ಯ ಸಮಸ್ಯೆಗೆ ಒಳಗಾಗಿದ್ದರು. ಸದ್ಯ ಚಿಕಿತ್ಸೆ ಪಡೆದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಶಾರುಖ್ ಕುಟುಂಬ ಅಧಿಕೃತ ಮಾಹಿತಿ ನೀಡುವವರೆಗೂ ಕಾಯಬೇಕಿದೆ.


    ನಟ ಶಾರುಖ್ ಖಾನ್ ಒಡೆತನದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಐಪಿಲ್ 2024ರಲ್ಲಿ ಫೈನಲ್ ತಲುಪಿದೆ. ಮೇ 21ರಂದು ಸನ್ ರೈಸರ್ಸ್ ಹೈದರಾಬಾದ್ ತಂಡದ ಎದುರು ಕೋಲ್ಕತ್ತ ನೈಟ್ ರೈಡರ್ಸ್ ತಂಡ ಫೈನಲ್ ತಲುಪಿದೆ.

  • ಕನ್ನಡದ ಕಿರುತೆರೆಯಲ್ಲಿ ಶಾರುಖ್ ನಟನೆಯ ‘ಜವಾನ್’ ಸಿನಿಮಾ

    ಕನ್ನಡದ ಕಿರುತೆರೆಯಲ್ಲಿ ಶಾರುಖ್ ನಟನೆಯ ‘ಜವಾನ್’ ಸಿನಿಮಾ

    ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಕನ್ನಡದ ಕಿರುತೆರೆ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಸಿನಿಮಾ ಕನ್ನಡಕ್ಕೆ ಡಬ್ ಆಗಿದ್ದು, ಮುಂದಿನ ದಿನಗಳಲ್ಲಿ ಜೀ ಕನ್ನಡ ವಾಹಿನಿಯಲ್ಲಿ (TV) ಪ್ರಸಾರವಾಗಲಿದೆ. ಈಗಾಗಲೇ ವಾಹಿನಿಯು ಪ್ರೋಮೋ ಕೂಡ ರಿಲೀಸ್ ಮಾಡಿದೆ.

    ಜವಾನ್ ಸಿನಿಮಾ ಒಟ್ಟು ಕಲೆಕ್ಷನ್ 1103.27 ಕೋಟಿ ರೂಪಾಯಿ ಎಂದು ಸ್ವತಃ ನಿರ್ಮಾಣ ಸಂಸ್ಥೆಯೇ ಘೋಷಣೆ ಮಾಡಿದೆ. ಶಾರುಖ್ ಖಾನ್ ಅವರ ರೆಡ್ ಚಿಲ್ಲಿ ಎಂಟರ್ ಟೇನ್ಮೆಂಟ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೊಂದನ್ನು ಹಂಚಿಕೊಳ್ಳುವ ಮೂಲಕ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ. ಇದು ವಿಶ್ವದಾದ್ಯಂತ ಬಂದ ಒಟ್ಟು ಕಲೆಕ್ಷನ್ ಆಗಿದೆ.

    ವಿಶ್ವದಾದ್ಯಂತ ‘ಜವಾನ್’ ಸಿನಿಮಾ ದಾಖಲೆ ರೀತಿಯಲ್ಲಿ ಕಲೆಕ್ಷನ್ (Collection) ಮಾಡಿದರೆ, ಭಾರತದಲ್ಲೇ ಅದು ಗಳಿಸಿದ ಒಟ್ಟು ಮೊತ್ತ ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಆಗಿದೆ. ಈ ಪ್ರಮಾಣದಲ್ಲಿ ಹಣ ಗಳಿಕೆ ಮಾಡಿದ ಮೊದಲ ಹಿಂದಿ ಸಿನಿಮಾ ಎನ್ನುವ ದಾಖಲೆ ಕೂಡ ಬರೆದಿದೆ. ಇದೆಲ್ಲವೂ ಅಧಿಕೃತ ಘೋಷಣೆ ಎನ್ನುವುದು ವಿಶೇಷ.

    ಸಿನಿಮಾ ಭರ್ಜರಿ ಗೆಲುವು ಕಾಣುತ್ತಿದ್ದಂತೆಯೇ ಸಿನಿಮಾ ನಿರ್ದೇಶಕ ಅಟ್ಲಿ (Atli) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.

     

    ಜವಾನ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಾವಿರಾರು ಕೋಟಿ ಬ್ಯುಸಿನೆಸ್ ಮಾಡಿದೆ. ಈ ಖುಷಿಯಲ್ಲೇ ಅಟ್ಲಿ ಜವಾನ್ 2 ಸಿನಿಮಾ ಘೋಷಣೆ ಮಾಡಿದ್ದಾರೆ. ಜೊತೆಗೆ ಶಾರುಖ್ ಖಾನ್ ಮತ್ತು ವಿಜಯ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮಾಡುವ ಆಲೋಚನೆಯನ್ನೂ ಅವರು ಹೇಳಿಕೊಂಡಿದ್ದಾರೆ.

  • ನಟ ಶಾರುಖ್ ಖಾನ್ ಗೂ ಹೆಚ್ಚಿದ ಭದ್ರತೆ

    ನಟ ಶಾರುಖ್ ಖಾನ್ ಗೂ ಹೆಚ್ಚಿದ ಭದ್ರತೆ

    ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಮನೆ ಮುಂದೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಬಾಲಿವುಡ್ ಅನೇಕ ನಟರಿಗೆ ನಡುಕು ಶುರುವಾಗಿದೆ. ಸಲ್ಮಾನ್ ಅವರಿಗೆ ಜೀವ ಬೆದರಿಕೆಯ ಕಾರಣದಿಂದಾಗಿ ಸರಕಾರ ಸಾಕಷ್ಟು ಭದ್ರತೆಯನ್ನು (Security) ನೀಡಲಾಗಿದೆ. ಅದೇ ರೀತಿ ಈಗ ಶಾರುಖ್ ಖಾನ್ ಗೂ ಹೆಚ್ಚಿನ ಭದ್ರತೆ ನೀಡಲಾಗಿದೆ.

    ಐಪಿಎಲ್ ಕಾರಣದಿಂದಾಗಿ ಶಾರುಖ್ ಖಾನ್ (Shahrukh Khan) ನಾನಾ ಕಡೆ ಪ್ರವಾಸ ಮಾಡುತ್ತಿದ್ದಾರೆ. ಹಾಗಾಗಿ ರಕ್ಷಣೆಯನ್ನು ಹೆಚ್ಚು ಮಾಡಲಾಗಿದೆ. ಹೆಚ್ಚಿನ ಕಾಳಜಿಯನ್ನು ತೆಗೆದುಕೊಳ್ಳುವಂತೆ ಅವರಿಗೆ ತಿಳಿಸಲಾಗಿದೆ. ಶಾರುಖ್ ಖಾನ್ ಕೂಡ ಖಾಸಗಿ ಭದ್ರತೆಯನ್ನು ಇಟ್ಟುಕೊಂಡಿದ್ದಾರೆ.

     

    ಜೀವ ಬೆದರಿಕೆ ಇದ್ದರೂ ಸಲ್ಮಾನ್ ದುಬೈಗೆ ಹಾರಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಪ್ರಯಾಣ  ಬೆಳೆಸಿದ್ದಾರೆ. ಈ ಸಂದರ್ಭದಲ್ಲೂ ಅವರಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗಿತ್ತು.

  • ಸೋಲಿನ ವಿಷಯದಲ್ಲಿ ಶಾರುಖ್ ಎಳೆತಂದ ಕಂಗನಾ ರಣಾವತ್

    ಸೋಲಿನ ವಿಷಯದಲ್ಲಿ ಶಾರುಖ್ ಎಳೆತಂದ ಕಂಗನಾ ರಣಾವತ್

    ದ್ಯ ಲೋಕಸಭಾ ಅಖಾಡದಲ್ಲಿ ಕಸರತ್ತು ಮಾಡುತ್ತಿದ್ದಾರೆ ನಟಿ ಕಂಗನಾ ರಣಾವತ್. ಇದೇ ವೇಳೆಯಲ್ಲಿ ಮಾಧ್ಯಮಗಳ ಜೊತೆಯೂ ಅವರು ಮಾತನಾಡಿದ್ದಾರೆ. ಸಾಲು ಸಾಲು ಸಿನಿಮಾಗಳ ಸೋಲಿನ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ, ಸೂಪರ್ ಸ್ಟಾರ್ ಅನಿಸಿಕೊಂಡ ಶಾರುಖ್ (Shahrukh Khan) ಕೂಡ ಹತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ಸೋಲುಂಡಿದ್ದಾರೆ. ನಾನು ಮತ್ತು ಶಾರುಖ್ ಈ ಯುಗದ ಕೊನೆಯ ಸೂಪರ್ ಸ್ಟಾರ್ಸ್ ಎಂದು ಬಣ್ಣಿಸಿಕೊಂಡಿದ್ದಾರೆ.

    ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಮಿಂಚಿನ ಸಂಚಾರವನ್ನೂ ಕಂಗನಾ ಕೈಗೊಂಡಿದ್ದಾರೆ.  ಸಖತ್ ಚುರುಕಾಗಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಭೇಟಿ ಮಾಡಿ ತಮ್ಮ ಕ್ಷೇತ್ರದ ಬಗ್ಗೆ ಹಾಗೂ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಮಾಹಿತಿಯನ್ನು ಸ್ವತಃ ಅವರೇ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಕೂಡ ಮಾಡಿಕೊಂಡಿದ್ದಾರೆ.

    ಬಿಜೆಪಿ ತನ್ನ ಲೋಕಸಭಾ (Lok Sabha) ಚುನಾವಣೆಯ 5ನೇ ಪಟ್ಟಿ ಘೋಷಣೆ ಮಾಡಿ, ಈ ಪಟ್ಟಿಯಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut)ಗೆ ತವರು ರಾಜ್ಯ ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿನ  ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ಕೂಡ ಆಡುತ್ತಿದ್ದಾರೆ.

     

    ಹಲವು ತಿಂಗಳುಗಳಿಂದ ಕಂಗನಾ ರಣಾವತ್ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿ ಇತ್ತು. ಅವರು ಕೂಡ ಕೃಷ್ಣ ಕಣ್ಬಿಟ್ಟರೆ ರಾಜಕೀಯಕ್ಕೆ ಬರೋದು ದೊಡ್ಡ ವಿಷಯವೇ ಅಲ್ಲ ಎಂದೂ ಹೇಳಿದ್ದರು. ಜೊತೆಗೆ ರಾಜಕೀಯ ಮುಖಂಡರನ್ನು ಭೇಟಿ ಮಾಡುವ ಮೂಲಕ ಟಿಕೆಟ್ ಬೇಡಿಕೆಯನ್ನೂ ಇಟ್ಟಿದ್ದರು.

  • ಒಟಿಟಿಗೆ ಬಂತು ಶಾರುಖ್ ಖಾನ್ ನಟನೆಯ ಡಂಕಿ

    ಒಟಿಟಿಗೆ ಬಂತು ಶಾರುಖ್ ಖಾನ್ ನಟನೆಯ ಡಂಕಿ

    ಡಿಸೆಂಬರ್ 21 ರಂದು ವಿಶ್ವದಾದ್ಯಂತ ರಿಲೀಸ್ ಆಗಿದ್ದ ಶಾರುಖ್ ಖಾನ್ (Shahrukh Khan) ನಟನೆಯ ಡಂಕಿ ಸಿನಿಮಾ ಇದೀಗ ಒಟಿಟಿಗೂ (OTT)  ಪ್ರವೇಶ ಮಾಡಿದೆ. ಪ್ರೇಮಿಗಳ ದಿನದಂದು ಮಧ್ಯ ರಾತ್ರಿ 12 ಗಂಟೆಯಿಂದ ನೆಟ್ ಫ್ಲಿಕ್ಸ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಥಿಯೇಟರ್ ನಲ್ಲಿ ಅಷ್ಟೇನೂ ಸದ್ದು ಮಾಡದ ಡಂಕಿಗೆ ಒಟಿಟಿಯಲ್ಲಿ ಹೇಗೆ ಪ್ರತಿಕ್ರಿಯೆ ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

    ಡಂಕಿ (Dunki) ಕ್ಲಾಸ್​ ಸಿನಿಮಾ ಆದ್ದರಿಂದ ಬಾಕ್ಸ್ ಆಫೀಸಿನಲ್ಲಿ ನಿಧಾನಗತಿಯಲ್ಲಿ ಕಲೆಕ್ಷನ್​ ಮಾಡಿತ್ತು. ಬಿಡುಗಡೆಯಾದ ಏಳು ದಿನಗಳಲ್ಲಿ ಈ ಸಿನಿಮಾದ ಕಲೆಕ್ಷನ್​  305 ಕೋಟಿ ರೂಪಾಯಿ ಆಗಿದ್ದು, ಭಾರತದಲ್ಲಿಯೇ 150 ಬಾಚಿಕೊಂಡಿತ್ತು. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿತ್ತು. ಶಾರುಖ್ ಈ ಹಿಂದಿನ ಸಿನಿಮಾಗಳಾದ ಪಠಾಣ್ ಹಾಗೂ ಜವಾನ್ ಸಿನಿಮಾಗಳು ಭರ್ಜರಿ ಕಲೆಕ್ಷನ್ ಮಾಡಿದ್ದವು. ಈ ಎರಡು ಚಿತ್ರಗಳು 1000 ಕೋಟಿ ಕ್ಲಬ್ ಸೇರಿದ್ದವು.

    ‘ಡಂಕಿ’ ಸಿನಿಮಾದಲ್ಲಿ ಶಾರುಖ್​​ ಖಾನ್​ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್​, ಬೊಮನ್​ ಇರಾನಿ, ವಿಕ್ರಂ ಕೊಚ್ಚರ್​, ಅನಿಲ್​ ಗ್ರೋವರ್​ ಮುಂತಾದವರು ನಟಿಸಿದ್ದಾರೆ. ರಾಜ್​ಕುಮಾರ್​ ಹಿರಾನಿ ಅವರು ಪ್ರತಿ ಸಿನಿಮಾದಲ್ಲೂ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ. ಅಕ್ರಮವಾಗಿ ದೇಶಗಳ ಗಡಿ ದಾಟುವವರ ಬಗ್ಗೆ ‘ಡಂಕಿ’ ಸಿನಿಮಾದಲ್ಲಿ ತೋರಿಸಲಾಗಿದೆ

    ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ರಾಜ್ ಕುಮಾರ್ ಹಿರಾನಿ ಹಾಗೂ ಶಾರುಖ್ ಕಾಂಬಿನೇಷನ್ ಅಲ್ಪಮಟ್ಟಿಗೆ  ವರ್ಕೌಟ್ ಆಗಿತ್ತು.

  • ಪೈರಸಿಗೆ ‘ಡಂಕಿ’ ಬಲಿ: ಮೊದಲ ದಿನವೇ ಚಿತ್ರತಂಡಕ್ಕೆ ಶಾಕ್

    ಪೈರಸಿಗೆ ‘ಡಂಕಿ’ ಬಲಿ: ಮೊದಲ ದಿನವೇ ಚಿತ್ರತಂಡಕ್ಕೆ ಶಾಕ್

    ಶಾರುಖ್ ಖಾನ್ (Shahrukh Khan) ನಟನೆಯ ಡಂಕಿ (Dunki) ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ನೆಚ್ಚಿನ ನಟನ ಸಿನಿಮಾವನ್ನು ಶಾರುಖ್ ಅಭಿಮಾನಿಗಳು ಕಣ್ತುಂಬಿಕೊಳ್ಳುತ್ತಿದ್ದಾರೆ. ಎಲ್ಲ ಕಡೆ ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಈ ನಡುವೆ ಡಂಕಿ ಸಿನಿಮಾ ಪೈರಸಿಗೆ (Piracy) ತುತ್ತಾಗಿದೆ. ಹಲವು ವೆಬ್ ಸೈಟ್ ಗಳಲ್ಲಿ ಡಂಕಿ ಸಿನಿಮಾದ ಪೈರಸಿಯನ್ನು ಅಪ್ ಲೋಡ್ ಮಾಡುವ ಮೂಲಕ ಚಿತ್ರತಂಡಕ್ಕೆ ಶಾಕ್ ನೀಡಲಾಗಿದೆ.

    ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿದ್ದು ಮಾತ್ರವಲ್ಲ, ಮುಕ್ಕಾಲು ಭಾಗ ಸಿನಿಮಾವನ್ನು ಎಕ್ಸ್ (ಟ್ವೀಟರ್) ನಲ್ಲಿ ಲೈವ್ ಕೂಡ ಮಾಡಿರುವ ವಿಷಯ ಹರಿದಾಡುತ್ತಿದೆ. ಹೀಗಾಗಿ ಸಹಜವಾಗಿಯೇ ಚಿತ್ರತಂಡಕ್ಕೆ ಹೊಡೆತ ಬಿದ್ದಿದೆ. ಪೈರಸಿಯನ್ನು ತೆಗೆದು ಹಾಕಿಸುವಲ್ಲಿ ನಿರ್ಮಾಪಕರು ಹರಸಾಹಸ ಪಡುತ್ತಿದ್ದಾರೆ.

    ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ (Raj Kumar Hirani) ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳಿದ್ದಾರೆ. ಒಂದೊಳ್ಳೆ ಸಂದೇಶದ ಜೊತೆಗೆ ಮನರಂಜನಾತ್ಮಕ ಅಂಶಗಳನ್ನು ಬೆರೆಸಿ ಸಿನಿಮಾ ಮಾಡಿದ್ದಾರೆ.

     

    ಶಾರುಖ್ ಖಾನ್ ನಾಯಕನಾಗಿ ನಟಿಸಿದ್ದು, ಬೊಮನ್ ಇರಾನಿ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ತಾರಾಬಳಗದಲ್ಲಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು JIO ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಡಿ ರಾಜ್‌ಕುಮಾರ್ ಹಿರಾನಿ ಮತ್ತು ಗೌರಿ ಖಾನ್ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ.

  • ‘ಡಂಕಿ’ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಹುಟ್ಟು ಹಬ್ಬದ ಸ್ಪೆಷಲ್ ಏನು?

    ‘ಡಂಕಿ’ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಹುಟ್ಟು ಹಬ್ಬದ ಸ್ಪೆಷಲ್ ಏನು?

    ಬಾಲಿವುಡ್ ಕಂಡ ಅಪರೂಪದ ಸಿನಿಮಾ ಮೇಕರ್ಸ್..ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿಗಿಂದು (Rajkumar Hirani) ಜನ್ಮದಿನದ ಶುಭಾಶಯ. ಮುನ್ನಾ ಬಾಯ್ ಎಂಬಿಬಿಎಸ್, ತ್ರಿ ಇಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವು ಹಿರಾನಿ ಡಂಕಿ (Dunki) ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.

    ಸಾಮಾನ್ಯವಾಗಿ ರಾಜ್ ಕುಮಾರ್ ಹಿರಾನಿ ಚಿತ್ರಗಳು ಮನರಂಜನೆ ಜೊತೆಗೆ ಒಂದೊಳ್ಳೆ ಸಂದೇಶಗಳನ್ನು ಒಳಗೊಂಡಿರುತ್ತದೆ. ಫ್ಯಾಮಿಲಿ ಕುಳಿತು ನೋಡುವ ಸಿನಿಮಾಗಳಾಗಿರುತ್ತವೆ. ಇಂತಹ ಸ್ಟಾರ್ ಡೈರೆಕ್ಟರ್ ಶಾರುಖ್ ಖಾನ್ ಗೆ ಡಂಕಿ ಎಂಬ ಸಿನಿಮಾ ಅನೌನ್ಸ್ ಮಾಡಿರುವುದು ಗೊತ್ತೇ ಇದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

    ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ (Shahrukh Khan), ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

    ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ.  ನಾಯಕನಾಗಿ ಶಾರುಖ್ ಖಾನ್ ನಟಿಸಿದ್ದು, ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಅತೀ ದೊಡ್ಡ ತಾರಾಬಳಗದ `ಡಂಕಿ’ ಸಿನಿಮಾ ವಿಶ್ವದಾದ್ಯಂತ ಕಣಕ್ಕಿಳಿಯಲು ಸಜ್ಜಾಗಿದ್ದು, `ಸಲಾರ್’ ಎದುರು ಸ್ಪರ್ಧಿಸಲು ಸಿದ್ದವಾಗಿದೆ. ಇದೇ ಡಿಸೆಂಬರ್ 22ರಂದು ಮೋಸ್ಟ್ ಅವೈಟೆಡ್ ಡಂಕಿ ತೆರೆಗಪ್ಪಳಿಸಲಿದೆ.

  • ಶಾರುಖ್ ಅಭಿಮಾನಿಗಳಿಗೆ ಗಿಫ್ಟ್ : ದೀಪಾವಳಿಗೆ ‘ಡಂಕಿ’ ಹೊಸ ಪೋಸ್ಟರ್

    ಶಾರುಖ್ ಅಭಿಮಾನಿಗಳಿಗೆ ಗಿಫ್ಟ್ : ದೀಪಾವಳಿಗೆ ‘ಡಂಕಿ’ ಹೊಸ ಪೋಸ್ಟರ್

    ಬಾಲಿವುಡ್ ಕಿಂಗ್ ಖಾನ್ ನಟನೆಯ ಡಂಕಿ (Dunki) ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ (Shahrukh Khan) ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ದೀಪಾವಳಿ ಹಬ್ಬದ ಸ್ಪೆಷಲ್ ಡಂಕಿ ಸಿನಿಮಾದ ಎರಡು ಹೊಸ ಪೋಸ್ಟರ್ (Poster) ರಿಲೀಸ್ ಮಾಡಲಾಗಿದೆ.

    ಪ್ರೀತಿ, ನಗು ಹಾಗೂ ಸ್ನೇಹ ತುಂಬಿರುವ ಎರಡು ಹೊಸ ಪೋಸ್ಟರ್ ನಲ್ಲಿ ಶಾರುಖ್ ಸ್ನೇಹ ಬಳಗವನ್ನು ಪರಿಚಯ ಮಾಡಿಕೊಡಲಾಗಿದೆ. ಕಿಂಗ್ ಖಾನ್ ಜೊತೆ ತಾಪ್ಸಿ ಪನ್ನು, ವಿಕ್ಕಿ ಕೌಶಲ್, ವಿಕ್ರಮ್ ಕೊಚ್ಚರ್ ಹಾಗೂ ಅನಿಲ್ ಗ್ರೋವರ್ ಒಟ್ಟಿಗೆ ನಿಂತು ನಗು ಬೀರಿದ್ದಾರೆ. ಎರಡು ಪೋಸ್ಟರ್ಸ್ ಆಕರ್ಷಕವಾಗಿವೆ.

    ರಾಜ್ ಕುಮಾರ್ ಹಿರಾನಿ, ಅಭಿಜತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್ , ಮನು ಪಾತ್ರದಲ್ಲಿ ತಾಪ್ಸಿ ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ.

    ರಾಜಕುಮಾರ್ ಹಿರಾನಿ ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ (Rajkumar Hirani) ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ.  ಈ ಕ್ರಿಸ್‌ಮಸ್‌  ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ

    ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ.

  • ‘ಡಂಕಿ’  ಅತಿ ಹೆಚ್ಚು ವೀವ್ಸ್ ಕಂಡ ಟೀಸರ್: ಶಾರುಖ್ ನಟನೆಯ ಸಿನಿಮಾ

    ‘ಡಂಕಿ’ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್: ಶಾರುಖ್ ನಟನೆಯ ಸಿನಿಮಾ

    ಬಾಲಿವುಡ್ ಸ್ಟಾರ್ ಶಾರುಖ್ ಖಾನ್ (Shahrukh Khan) ಬ್ಯಾಕ್ ಟು ಬ್ಯಾಕ್ ಎರಡು ಗೆಲುವು ಕಂಡಿದ್ದಾರೆ. ಈ ವರ್ಷದಲ್ಲಿ ಪಠಾಣ್ ಮತ್ತು ಜವಾನ್‌ ಎರಡು ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ್ದಾರೆ. ಮೇಲಾಗಿ ಆ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲೂ ಸಾವಿರಾರು ಕೋಟಿ ಕಮಾಯಿ ಮಾಡಿವೆ. ಈ ಎರಡು ಸಿನಿಮಾಗಳ ಬಳಿಕ ಮತ್ತೊಂದು ವಿಭಿನ್ನ ಅವತಾರದಲ್ಲಿ ಎದುರಾಗಿ ಮನರಂಜನೆ ನೀಡಲು ಶಾರುಖ್‌ ಖಾನ್‌ ಸಿದ್ಧರಾಗಿದ್ದಾರೆ. ರಾಜ್ ಕುಮಾರ್ ಹಿರಾನಿ ಸಾರಥ್ಯದ ಡಂಕಿ ಸಿನಿಮಾದ ಟೀಸರ್ ನಿನ್ನೆ ಕಿಂಗ್ ಖಾನ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿತ್ತು. ಮಾಸ್ ಅವತಾರದಲ್ಲಿ ಅಬ್ಬರಿಸ್ತಿದ್ದ ಶಾರುಖ್ ಡಂಕಿ (Dunki) ಮೂಲಕ ಕ್ಲಾಸ್ ಅವತಾರದಲ್ಲಿ ದರ್ಶನ‌ ಕೊಟ್ಟಿದ್ದು, ಟೀಸರ್ (Teaser)  4 ಕೋಟಿ‌ ಮಿಲಿಯನ್ ಅಧಿಕ ವೀವ್ಸ್ ಕಂಡಿದೆ.   ಈ ವರ್ಷದಲ್ಲಿ ಅತಿ ಹೆಚ್ಚು ವೀವ್ಸ್ ಕಂಡ ಟೀಸರ್ ಇದಾಗಿದೆ.

    ನಿನ್ನೆ ಮುಂಬೈನಲ್ಲಿ ನಡೆದ ಡಂಕಿ ಸುದ್ದಿ ಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ಶಾರುಖ್ ಖಾನ್,  ಪಠಾಣ್ ಹಾಗೂ ಜವಾನ್ ಸಿನಿಮಾಗಿಂತ ಡಂಕಿ ಸಿನಿಮಾ ಅತಿ ಹೆಚ್ಚು ಮನರಂಜನೆ ನೀಡಲಿದೆ. ರಾಜ್ ಕುಮಾರ್ ಹಿರಾನಿ (Rajkumar Hirani) ಅವರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವಾಗಿದೆ.  ಹಿರಾನಿ ಚಿತ್ರಗಳಲ್ಲಿ ಯಾವುದೇ ‌ನಿರ್ದಿಷ್ಟ ನಟನಿಗಿಂತ ಕಥೆಯೇ ನಾಯಕತ್ವ ವಹಿಸುತ್ತದೆ. ಶೀಘ್ರದಲ್ಲೇ ಡ್ರಾಪ್ 2 ಮತ್ತು ಡ್ರಾಪ್ 3 ವಿಡಿಯೋ ರಿಲೀಸ್ ಮಾಡುವುದಾಗಿ ತಿಳಿಸಿದರು.

    ರಾಜ್ಕುಮಾರ್ ಹಿರಾನಿ ಅವರು ‘ಡಂಕಿ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ಭಾವನೆಗಳಿಗೆ, ಹಾಸ್ಯಕ್ಕೆ ಹೆಚ್ಚು ಪ್ರಾಧಾನ್ಯತೆ ಇರುತ್ತದೆ. ಎಂತಹುದೇ ಮಾಸ್ ಹೀರೋ ಆದರೂ ಅವರಿಗೆ ಬೇರೆಯದೇ ಗೆಟಪ್ ನೀಡುತ್ತಾರೆ. ‘ಡಂಕಿ’ ಚಿತ್ರದಲ್ಲೂ ಅದು ಮುಂದುವರಿದಿದೆ. ಶಾರುಖ್ ಖಾನ್ ಅವರು ಕ್ಲಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.

    ಶಾರುಖ್ ಖಾನ್ ಜೊತೆ ಈ ಚಿತ್ರದಲ್ಲಿ ತಾಪ್ಸೀ ಪನ್ನು, ಬೋಮನ್ ಇರಾನಿ, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ನಟಿಸಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]