Tag: Shakunthala

  • ಮುಖ ತೊಳೆಯಲು, ಬಟ್ಟೆ ಬದಲಿಸಲೂ ಅವಕಾಶ ಕೊಡಲಿಲ್ಲ: ಪೊಲೀಸರ ನಡೆಗೆ ಬಿಜೆಪಿ ಕಾರ್ಯಕರ್ತೆ ಆಕ್ರೋಶ

    ಮುಖ ತೊಳೆಯಲು, ಬಟ್ಟೆ ಬದಲಿಸಲೂ ಅವಕಾಶ ಕೊಡಲಿಲ್ಲ: ಪೊಲೀಸರ ನಡೆಗೆ ಬಿಜೆಪಿ ಕಾರ್ಯಕರ್ತೆ ಆಕ್ರೋಶ

    – ಉಟ್ಟ ಬಟ್ಟೆಯಲ್ಲೇ ಬೆಂಗಳೂರಿಗೆ ಕರೆದುಕೊಂಡು ಹೋದ್ರು ಅಂತ ಗರಂ

    ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddarmaiah) ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ಹಾಕಿ ಬಂಧನಕ್ಕೊಳಗಾಗಿ ನಂತರ ಬಿಡುಗಡೆಯಾದ ಬಿಜೆಪಿ ಕಾರ್ಯಕರ್ತೆ (BJP Worker) ಶಕುಂತಲಾ ನಟರಾಜ್‌ (Shakunthala) ಈಗ ಪೊಲೀಸರ ವಿರುದ್ಧ ಕಿಡಿಕಾರಿದರು.

    ತುಮಕೂರಿನ ವಿಜಯನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನನ್ನ ಮನೆಗೆ ಬಂದು ಪೊಲೀಸರು ಅಮಾನುಷವಾಗಿ ನಡೆದುಕೊಂಡರು. ಮುಖ ತೊಳೆಯಲೂ ಅವಕಾಶ ಕೊಟ್ಟಿಲ್ಲ. ಬಟ್ಟೆ ಬದಲಾಯಿಸಲೂ ಬಿಟ್ಟಿಲ್ಲ. ಉಟ್ಟ ಬಟ್ಟೆಯಲ್ಲೇ ಬೆಂಗಳೂರಿಗೆ ಕರೆದುಕೊಂಡು ಹೋದರು ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಉಡುಪಿ ವೀಡಿಯೋ ಕೇಸ್‌ – ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

    ರಾಜ್ಯ ಕಾಂಗ್ರೆಸ್ ಸರ್ಕಾರ ಹಿಟ್ಲರ್ ರೀತಿ ವರ್ತನೆ ಮಾಡುತ್ತಿದೆ. ಪ್ರಶ್ನೆ ಮಾಡುವ ಹಕ್ಕನ್ನು ಕಿತ್ತುಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷ ಉಡುಪಿ ಘಟನೆಯನ್ನು ಮಕ್ಕಳಾಟ ಎಂದು‌ ಟ್ವೀಟ್ ಮಾಡಿತ್ತು. ಇದನ್ನ ನಾನು ಪ್ರಶ್ನೆ ಮಾಡಿದ್ದೇ ಅಷ್ಟೇ ಅದರಲ್ಲಿ ಸುಳ್ಳು ಸುದ್ದಿ ಏನಿತ್ತು, ಅವಮಾನ ಏನಿತ್ತು? ಕಾಂಗ್ರೆಸ್ ಸರ್ಕಾರ ಪೋಲಿಸ್ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

    ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಅವರ ಮನೆ ಹಾಳಾಗ ಅಂತ ಸಿದ್ದರಾಮಯ್ಯರು ಹೇಳಿದ್ದರು. ಆಗ ಸಿದ್ದರಾಮಯ್ಯರಿಗೆ ಅವಮಾನ ಅನಿಸಲೇ ಇಲ್ವಾ? ಆದರೆ ಇದು ತುಘಲಕ್ ಸರ್ಕಾರ ಆಗಿದೆ. ಉಡುಪಿ ವಿಚಾರ ಹಾಗೂ ನನ್ನ ವಶಕ್ಕೆ ಪಡೆದ ವಿಚಾರದಲ್ಲಿ ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಂ ಹೆಣ್ಣುಮಕ್ಕಳ ಮಾನಸಿಕತೆಯೂ ಜಿಹಾದಿ ಕಡೆಗೆ ಹೊರಟಿರೋದು ಸಮಾಜಕ್ಕೆ ಮಾರಕ: ಸುನೀಲ್ ಕುಮಾರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ವೀಡಿಯೋ ಕೇಸ್‌ – ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

    ಉಡುಪಿ ವೀಡಿಯೋ ಕೇಸ್‌ – ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

    ಬೆಂಗಳೂರು: ಉಡುಪಿ (Udupi) ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವ ಭರದಲ್ಲಿ ಸಿಎಂ ವಿರುದ್ಧ ಅವಾಚ್ಯ ಪದಗಳನ್ನು ಬಳಸಿ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ (Shakunthala) ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಟ್ವಿಟ್ಟರ್‌ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್‌ ಹಾಕಿದ್ದ ಬಿಜೆಪಿ (BJP) ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.  ಇದನ್ನೂ ಓದಿ: ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ: ಯಶ್‍ಪಾಲ್ ಸುವರ್ಣ ಹೊಸ ಬಾಂಬ್

    ಶಕುಂತಲಾ ಅವರನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿ ಸ್ಟೇಷನ್ ಬೇಲ್ ಮೇಲೆ ರಿಲೀಸ್ ಮಾಡಿದ್ದಾರೆ. ಠಾಣೆಯಿಂದ ನೇರವಾಗಿ ಬಿಜೆಪಿ ಕಚೇರಿ ತೆರಳಿ ತಮ್ಮ ಪಕ್ಷದ ನಾಯಕರೊಂದಿಗೆ ಅವರು ಚರ್ಚೆ ನಡೆಸಿದರು.

    ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ಶೌಚಾಲಯದಲ್ಲಿ ಕೆಲ ವಿದ್ಯಾರ್ಥಿನಿಯರು ಮೊಬೈಲ್‌ ಇಟ್ಟು ಮತ್ತೊಬ್ಬ ವಿದ್ಯಾರ್ಥಿನಿಯ ವೀಡಿಯೋ ಸೆರೆ ಹಿಡಿದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾರ್ಥಿನಿಯರ ಮೊಬೈಲ್‌ಗಳನ್ನು ಎಫ್‌ಎಸ್‌ಎಲ್‌ಗೆ ತನಿಖೆಗೆ ರವಾನಿಸಲಾಗಿದೆ.

    ವೀಡಿಯೋ ಚಿತ್ರೀಕರಣ ವಿಚಾರ ಕಾಲೇಜು ಆಡಳಿತ ಮಂಡಳಿಗೆ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಕರೆಸಿ ಬುದ್ದಿಮಾತು ಹೇಳಿ, ವೀಡಿಯೋ ಡಿಲೀಟ್‌ ಮಾಡಿಸಲಾಗಿದೆ. ಅಷ್ಟೇ ಅಲ್ಲದೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಕಾಲೇಜು ತಿಳಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವ್ಯಾಪಕ ಪ್ರತಿಭಟನೆ ನಡೆಸುತ್ತಿದೆ. ಇದನ್ನೂ ಓದಿ: ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಡ್ರೈವರ್ ಅಮಾನತು

    ಬಿಜೆಪಿ ಕಚೇರಿಯಿಂದ ಎಸ್‌ಪಿ ಕಚೇರಿ ವರೆಗೂ ಶಾಸಕ ಯಶ್‌ಪಾಲ್‌ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಬೇಕು. ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]