Tag: Shamshabad

  • ಗುಡಿಸಲಿನಲ್ಲಿ ಮಲಗಿದ್ದ 1 ವರ್ಷದ ಮಗುವನ್ನ ಕೊಂದು ತಿಂದ ಬೀದಿ ನಾಯಿಗಳು

    ಗುಡಿಸಲಿನಲ್ಲಿ ಮಲಗಿದ್ದ 1 ವರ್ಷದ ಮಗುವನ್ನ ಕೊಂದು ತಿಂದ ಬೀದಿ ನಾಯಿಗಳು

    ಹೈದರಾಬಾದ್: ತಂದೆ ಜೊತೆ ಗುಡಿಸಲಿನಲ್ಲಿ (Hut)  ಮಲಗಿದ್ದ ಒಂದು ವರ್ಷ ಮಗು ಮೇಲೆ ಬೀದಿ ನಾಯಿಗಳು  (Street Dogs) ದಾಳಿ ಮಾಡಿ ತಿಂದಿರುವ ಘಟನೆ ತೆಲಂಗಾಣದ (Telangana)  ಶಂಶಾಬಾದ್‌ನಲ್ಲಿ ನಡೆದಿದೆ.

    ಕೆ. ನಾಗರಾಜು (1) ಮೃತಪಟ್ಟ ಮಗು. ಮಗುವಿನ ತಂದೆ ಸೂರ್ಯಕುಮಾರ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾನೆ. ಶಂಶಾಬಾದ್‌ನ ರಾಜೀವ್ ಗೃಹಕಲ್ಪ ಸಂಕೀರ್ಣದ ಬಳಿ ಗುಡಿಸಲಿನಲ್ಲಿ ಹಿರಿಯ ಮಗನಾದ ನಾಗರಾಜು ಮತ್ತು 20 ದಿನದ ಮಗುವಿನ ಜೊತೆ ಮಲಗಿದ್ದ. ಈ ವೇಳೆ ಬೀದಿ ನಾಯಿಗಳ ಗುಂಪು ಗುಡಿಸಲಿಗೆ ನುಗ್ಗಿ ಮಕ್ಕಳ ಮೇಲೆ ದಾಳಿ ನಡೆಸಿವೆ. ಇದನ್ನೂ ಓದಿ: ಮೋದಿ ಜೊತೆ ಹೋದರೂ ನಾನು ಕೇಸರಿ ಶಾಲು ಹಾಕಲ್ಲ, ಕುಮಾರಸ್ವಾಮಿಯೂ ಹಾಕಬಾರದಿತ್ತು – ಹೆಚ್‌ಡಿಡಿ

    ತಡರಾತ್ರಿ 1:30 ರ ಹೊತ್ತಿಗೆ ಸೂರ್ಯಕುಮಾರ್‌ನನ್ನು ಸ್ಥಳೀಯರು ಎಬ್ಬಿಸಿ ಬೀದಿ ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ನಡೆಸಿ ತಿನ್ನುತ್ತಿದ್ದವು ಎಂದು ತಿಳಿಸಿದ್ದಾರೆ. ವಿಷಯ ತಿಳಿದ ಸೂರ್ಯ ಹೋಗಿ ನೋಡಿದಾಗ ಮಗು ನಾಯಿಗಳ ಪಾಲಾಗಿತ್ತು. ಇದನ್ನೂ ಓದಿ: ಎರಡನೇ ಐಫೋನ್‌ ಘಟಕ ತೆರೆಯಲು ಮಾತುಕತೆ ಆರಂಭಿಸಿದ ಟಾಟಾ

    ಈವರೆಗೂ ಮಕ್ಕಳ ಮೇಲೆ ನಡೆದ ದಾಳಿಯಲ್ಲಿ ಇದು ಒಂಬತ್ತನೇ ಗಂಭೀರ ಪ್ರಕರಣವಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 5 ದಿನ ಇಡಿ ಕಸ್ಟಡಿಗೆ ಹೇಮಂತ್ ಸೋರೆನ್

  • ಕೊರೊನಾ ಭಯದಿಂದ ಗ್ರಾಮಕ್ಕೆ ಮರಳುತ್ತಿದ್ದವ್ರು ಮಸಣ ಸೇರಿದ್ರು

    ಕೊರೊನಾ ಭಯದಿಂದ ಗ್ರಾಮಕ್ಕೆ ಮರಳುತ್ತಿದ್ದವ್ರು ಮಸಣ ಸೇರಿದ್ರು

    – ಲಾರಿ ಡಿಕ್ಕಿ ರಭಸಕ್ಕೆ 4 ಜನ ಅಪ್ಪಚ್ಚಿ, ಸಾವಿನ ಸಂಖ್ಯೆ 7ಕ್ಕೆ
    – 4 ಜನರ ಸ್ಥಿತಿ ಚಿಂತಾಜನಕ

    ರಾಯಚೂರು: ಕೊರೊನಾ ವೈರಸ್ ಭಯದಿಂದ ಲಾಕ್‍ಡೌನ್ ಮಧ್ಯ ತಮ್ಮ ಗ್ರಾಮಗಳಿಗೆ ಮರಳುತ್ತಿದ್ದ ರಾಯಚೂರು ಜಿಲ್ಲೆಯ 30 ಜನರಿದ್ದ ಮಿನಿ ಟ್ರಕ್‍ಗೆ ಲಾರಿ ಡಿಕ್ಕಿ ಹೊಡೆದು ಏಳ ಜನ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ಸುರಪೂರ ತಾಲೂಕಿನ ಕಕ್ಕೇರಿ ಗ್ರಾಮದ ಬಸಮ್ಮ, ಹನುಮಂತ, ಲಿಂಗಸ್ಗೂರು ತಾಲೂಕಿನ ರಾಯದುರ್ಗ ಗ್ರಾಮದ ಶ್ರೀದೇವಿ, ರಂಗಪ್ಪ, ಶರಣಪ್ಪ, ಅಮರಪ್ಪ ಹಾಗೂ ಚಿಂಚರಕಿ ಗ್ರಾಮದ ಕೊಳ್ಳಪ್ಪ ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹೈದರಾಬಾದ್‍ನ ಉಸ್ಮಾನಿಯಾ ಆಸ್ಪತ್ರೆಯಲ್ಲಿ  ದಾಖಲಿಸಲಾಗಿದೆ.

    ಆಗಿದ್ದೇನು?:
    ಕೊರೊನಾ ವೈರಸ್‍ನಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ರಾಯಚೂರಿನ ರಸ್ತೆ ನಿರ್ಮಾಣ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಜೊತೆಗೆ ಕೊರೊನಾ ಭಯಕ್ಕೆ ಸೂರ್ಯಪೇಟೆಯಿಂದ 30 ಜನರು ತಮ್ಮ ಗ್ರಾಮಗಳಿಗೆ ಮಿನಿ ಟ್ರಕ್‍ನಲ್ಲಿ ಸಾಗಿಸುತ್ತಿದ್ದರು. ಶಂಶಾಬಾದ್ ಬಳಿ ವೇಗವಾಗಿ ಬಂದ ಲಾರಿ ಚಾಲಕ ನಿಯಂತ್ರಣ ತಪ್ಪಿ ಹಿಂಬದಿಯಿಂದ ಮಿನಿ ಟ್ರಕ್‍ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಮಿನಿ ಟ್ರಕ್‍ನಲ್ಲಿದ್ದ ನಾಲ್ವರು ಸ್ಥಳದಲ್ಲಿ ಪ್ರಾಣಬಿಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದರು.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಶಂಶಾಬಾದ್ ಗ್ರಾಮೀಣ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಆರ್.ವೆಂಕಟೇಶ್ ಅವರು ಪರಿಶೀಲನೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡವರನ್ನು ಶಂಶಾಬಾದ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಗಾಯಾಳುಗಳನ್ನು ಹೈದರಾಬಾದ್‍ನ ಉಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರಿಗೆ ಇನ್ನೂ ಚಿಕಿತ್ಸೆ ಕೊಡಲಾಗುತ್ತದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಯಚೂರು ಎಸ್‍ಪಿ, ತೆಲಂಗಾಣದಕ್ಕೆ ಗುಳೆ ಹೋಗಿದ್ದ ರಾಯಚೂರಿನ ಜನರು ಕೊರೊನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ತಮ್ಮ ಗ್ರಾಮಗಳಿಗೆ ಮಾರ್ಚ್ 27ರಂದು ಬೆಳಗಿನ ಜಾವ 12ಗಂಟೆ ಸುಮಾರಿಗೆ ವಾಪಸ್ ಆಗುತ್ತಿದ್ದರು. ಆದರೆ ಶಂಶಾಬಾದ್ ರಿಂಗ್ ರೋಡ್‍ನಲ್ಲಿ ಕಾರ್ಮಿಕರಿದ್ದ ಮಿನಿ ಟ್ರಕ್ ಕೆಟ್ಟು ನಿಂತಿತ್ತು. ಅದನ್ನು ರಿಪೇರಿ ಮಾಡುತ್ತಿದ್ದಾಗ ಹಿಂದುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ಸ್ಥಳದಲ್ಲಿಯೇ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಮೂವರು ಉಸ್ಮಾನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

  • ಕೂಲಿ ಕಾರ್ಮಿಕರಿದ್ದ ಮಿನಿ ಟ್ರಕ್‌ಗೆ ಲಾರಿ ಡಿಕ್ಕಿ – ಐವರು ಸಾವು

    ಕೂಲಿ ಕಾರ್ಮಿಕರಿದ್ದ ಮಿನಿ ಟ್ರಕ್‌ಗೆ ಲಾರಿ ಡಿಕ್ಕಿ – ಐವರು ಸಾವು

    – ಟ್ರಕ್‍ನಲ್ಲಿದ್ದ 30 ಜನರಲ್ಲಿ  6 ಜನರಿಗೆ ಗಂಭೀರ ಗಾಯ

    ರಾಯಚೂರು: ಲಾರಿ ಹಾಗೂ ಕೂಲಿ ಕಾರ್ಮಿಕರಿದ್ದ ಮಿನಿ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ರಾಯಚೂರು ಜಿಲ್ಲೆಯ 5 ಜನ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೆಲಂಗಾಣದ ಶಂಶಾಬಾದ್ ಬಳಿ ಘಟನೆ ನಡೆದಿದೆ.

    ಘಟನೆಯಲ್ಲಿ ಮೂವರು ಮಹಿಳೆಯರು, ಬಾಲಕಿ, ಬಾಲಕ ಸೇರಿ ಒಟ್ಟು ಐವರು ಮೃತಪಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಂಶಾಬಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಚಾಲಕ ನಿರ್ಲಕ್ಷದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

    ಕೊರೊನಾ ವೈರಸ್‍ನಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ರಾಯಚೂರಿನ ರಸ್ತೆ ನಿರ್ಮಾಣ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಸೂರ್ಯಪೇಟೆಯಿಂದ 30 ಜನರು ತಮ್ಮ ಗ್ರಾಮಗಳಿಗೆ KA 36 B 8264  ನಂಬರಿನ ಮಿನಿ ಟ್ರಕ್‍ನಲ್ಲಿ ಸಾಗಿಸುತ್ತಿದ್ದರು. ಶಂಶಾಬಾದ್ ಬಳಿ ವೇಗವಾಗಿ ಬಂದ GJ 06 BT 0823 ನಂಬರಿನ ಲಾರಿ ಚಾಲಕ ನಿಯಂತ್ರಣ ತಪ್ಪಿ ಹಿಂಬದಿಯಿಂದ ಮಿನಿ ಟ್ರಕ್‍ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಐವರು ಸ್ಥಳದಲ್ಲಿ ಪ್ರಾಣಬಿಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಶಂಶಾಬಾದ್ ಗ್ರಾಮೀಣ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್‍ಆರ್.ವೆಂಕಟೇಶ್ ಅವರು ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.