Tag: Shankar family

  • ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- 9 ತಿಂಗಳ ಕಂದಮ್ಮನನ್ನು ಕತ್ತು ಹಿಸುಕಿ ಕೊಂದಿದ್ದ ತಾಯಿ

    ನಾಲ್ವರು ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- 9 ತಿಂಗಳ ಕಂದಮ್ಮನನ್ನು ಕತ್ತು ಹಿಸುಕಿ ಕೊಂದಿದ್ದ ತಾಯಿ

    – ಮಗುವನ್ನು ಕೊಂದು ಬಳಿಕ ತಾನು ಆತ್ಮಹತ್ಯೆ

    ಬೆಂಗಳೂರು: ನಾಲ್ವರು ಆತ್ಮಹತ್ಯೆ ಹಾಗೂ ಒಂದು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಗೆದಷ್ಟು ಮಾಹಿತಿ ಲಭ್ಯವಾಗುತ್ತಿದೆ. ತಾಯಿ ಸಿಂಧು ರಾಣಿಯೇ 9 ತಿಂಗಳ ತನ್ನ ಮಗುವನ್ನು ಕತ್ತುಹಿಸುಕಿ ಕೊಲೆ ಮಾಡಿ, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.


    ತಿಗಳರಪಾಳ್ಯದಲ್ಲಿ ಸಾಮೂಹಿಕ ಆತ್ಮಹತ್ಯೆ ಕೇಸ್ ಬೆಚ್ಚಿ ಬೀಳಿಸಿತ್ತು. ಒಬ್ಬೊಬ್ಬರು ಒಂದೊಂದು ಕಾರಣ ನೀಡಿ ಕುಟುಂಬಸ್ಥರು ಸಾಯಲು ನಿರ್ಧರಿಸಿದ್ದರು. ಒಬ್ಬ ಅಪ್ಪ ಸರಿ ಇಲ್ಲ ಅಂದ, ಮತ್ತಿಬ್ಬಿರು ಗಂಡ ಸರಿ ಇಲ್ಲ ಅಂದಿದ್ದರು. ಹೀಗೆ ಒಂದೀಡಿ ಕುಟುಂಬವೇ ಸಾವನ್ನಪ್ಪಿತ್ತು. ಆದರೆ ಇದೀಗ ಸತ್ತವಳ ಕಟುಕುತನ ಹೇಗಿತ್ತು ಎಂಬುದು ಅನಾವರಣ ಆಗಿದೆ. ಸಿಂಧು ರಾಣಿ ತಾನು ಸಾಯುವ ಮೊದಲು 9 ತಿಂಗಳ ತನ್ನ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎಂಬುದು ಇದೀಗ ಬಹಿರಂಗವಾಗಿದೆ. ಇದನ್ನೂ ಓದಿ: ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್


    ಮಗುವಿನ ಕತ್ತಿನ ಬಳಿ ಹುಳು ಬಂದಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣ ಆಗಿತ್ತು. ಅನುಮಾನ ಈಗ ದೃಢ ಆಗಿದ್ದು, ವೈದ್ಯಕೀಯ ಮೂಲಗಳು ಇದು ಕೊಲೆ ಎಂದು ಮಾಹಿತಿ ನೀಡಿವೆ. ಪೊಲೀಸರಿಗೆ ಈ ಮಾಹಿತಿ ಮೌಖಿಕವಾಗಿ ಬಂದಿದ್ದು, ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಐವರು ಆತ್ಮಹತ್ಯೆ ಪ್ರಕರಣ- ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಎರಡು ಕೆಜಿಯಷ್ಟು ಚಿನ್ನಾಭರಣ ಪತ್ತೆ


    ವೈದ್ಯಕೀಯ ಮಾಹಿತಿ ಏನು?
    ಘಟನೆ ಬೆಳಕಿಗೆ ಬರುವುದಕ್ಕೂ ಮೊದಲು ಐದು ದಿನದ ಹಿಂದೆಯೇ ಮಗು ಸಾವನ್ನಪ್ಪಿದೆ. ಸಿಂಧು ರಾಣಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಮಗುವಿನ ಕತ್ತು ಹಿಸುಕಿ, ಉಸಿರುಗಟ್ಟಿಸಿ ಕೊಲೆ ಮಾಡಿರೋದು ಸಾಬೀತಾಗಿದೆ. ಕತ್ತಿನ ಭಾಗದಲ್ಲಿ ಹುಳು ಬಿದ್ದಿದ್ದು, ಇದರ ಆಧಾರದ ಮೇಲೆ ವೈದ್ಯಕೀಯ ತಂಡ ಮಗುವಿನ ಕೊಲೆ ಆಗಿರುವುದನ್ನು ಪತ್ತೆ ಹಚ್ಚಿದೆ. ಮನುಷ್ಯನ ಸಾವಿನ ಬಳಿಕ ದೇಹದಲ್ಲಿ ಕಾಣಿಸುವ ಹುಳುಗಳ ಆಧಾರದ ಮೇಲೆ ಎಷ್ಟು ದಿನದ ಹಿಂದೆ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ

  • ಐವರು ಆತ್ಮಹತ್ಯೆ ಪ್ರಕರಣ- ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಎರಡು ಕೆಜಿಯಷ್ಟು ಚಿನ್ನಾಭರಣ ಪತ್ತೆ

    ಐವರು ಆತ್ಮಹತ್ಯೆ ಪ್ರಕರಣ- ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಎರಡು ಕೆಜಿಯಷ್ಟು ಚಿನ್ನಾಭರಣ ಪತ್ತೆ

    ಬೆಂಗಳೂರು: ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇಂದು ಸ್ಥಳ ಮಹಜರನ್ನು ಸಹ ಮಾಡಿದ್ದಾರೆ. ಈ ವೇಳೆ 15 ಲಕ್ಷ ರೂ.ನಗದು ಹಾಗೂ ಬರೋಬ್ಬರಿ ಎರಡು ಕೆ.ಜಿ.ಯಷ್ಟು ಚಿನ್ನಾಭರಣ ಪತ್ತೆಯಾಗಿವೆ.

    ತಿಗಳರಪಾಳ್ಯದ ಮನೆಯಲ್ಲಿ ಪೊಲೀಸರು ಇಂದು ಸ್ಥಳ ಮಹಜರು ನಡೆಸಿದ್ದು, ಮೂವರ ಡೆತ್ ನೋಟ್ ಪತ್ತೆಯಾಗಿವೆ. ಈ ವೇಳೆ ಹುಡುಕಾಟ ನಡೆಸಿದಾಗ 15 ಲಕ್ಷ ರೂ.ನಗದು, ಎರಡು ಕೆ.ಜಿ.ಯಷ್ಟು ಚಿನ್ನಾಭರಣ ಇರುವುದು ಬೆಳಕಿಗೆ ಬಂದಿದೆ.

    ಎಸಿಪಿ, ಇನ್‍ಸ್ಪೆಕ್ಟರ್ ಗಳ ನೇತೃತ್ವದಲ್ಲಿ ಸ್ಥಳ ಮಹಜರು ನಡೆದಿದ್ದು, ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮನೆ ಮಾಲೀಕ ಶಂಕರ್, ಇಬ್ಬರು ಅಳಿಯಂದಿರು, ಒಬ್ಬ ಸಂಬಂಧಿಕ ಸಹ ಜೊತೆಗಿದ್ದರು. ಮಹಜರು ವೇಳೆ ಈ ಸಂಪತ್ತು ಪತ್ತೆಯಾಗಿದೆ. 15 ಲಕ್ಷ ರೂ.ನಗದು, 2 ಕೆ.ಜಿ. ಚಿನ್ನಾಭರಣ ಪತ್ತೆಯಾಗಿವೆ. ಪೊಲೀಸರು ಕೀ ಮೇಕರ್ ನನ್ನು ಕರೆಸಿ, ಲಾಕರ್ ತೆಗೆಸಿದ್ದಾರೆ. ಅಲ್ಲದೆ ಮನೆಯ ರೂಮ್‍ಗಳಲ್ಲಿ ಅಲ್ಲಲ್ಲಿ ನೋಟುಗಳು ಹರಿದು ಬಿದ್ದಿದ್ದವು ಎನ್ನಲಾಗಿದೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ

    ಸ್ಥಳ ಮಹಜರು ವೇಳೆ ತಾನು ಉಪಸ್ಥಿತನಿರಬೇಕೆಂದು ಶಂಕರ್ ಬಯಸಿದ್ದರು. ಆತ್ಮಹತ್ಯೆ ಗೂ ಮುನ್ನ ಮಗ ಮಧುಸಾಗರ್ ಡೆತ್ ನೋಟ್ ಬರೆದಿಟ್ಟಿರುತ್ತಾನೆ. ಹೀಗಾಗಿ ಹಿರಿಯ ಅಧಿಕಾರಿಗಳು ನನ್ನ ಸಮ್ಮುಖದಲ್ಲೇ ಮಹಜರು ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದ. ಹೀಗಾಗಿ ಪೊಲೀಸರು ಶಂಕರ್ ಹಾಗೂ ಸಂಬಂಧಿಕರನ್ನು ಜೊತೆಯಲ್ಲೇ ಕರೆದೊಯ್ದಿದ್ದರು. ಇದೀಗ ಸಾವಿನ ಸಂಬಂಧ ಒಂದೊಂದೇ ಮಾಹಿತಿಗಳು ಸಿಗುತ್ತಿವೆ. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಾಧ್ಯತೆ

    ಇನ್ನೂ ಕೆಲ ಸಾಕ್ಷ್ಯಗಳು ಲ್ಯಾಪ್ ಟಾಪ್ ನಲ್ಲಿ ಇರುವ ಶಂಕೆ ಇದೆ. ಹೀಗಾಗಿ ಅವುಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂವರು ಡೆತ್ ನೋಟ್ ಬರೆದಿದ್ದು, ಎಲ್ಲರೂ ಶಂಕರ್ ಮೇಲೆಯೇ ಆರೋಪ ಮಾಡಿದ್ದಾರೆ. ಅಪ್ಪನಿಗೆ ಅನೈತಿಕ ಸಂಬಂಧ ಇತ್ತು, ಸರಿಯಿಲ್ಲ ಎಂದು ದೂರಿದ್ದಾರೆ. ಹೀಗಾಗಿ ಮನೆ ಮಾಲೀಕ ಶಂಕರ್ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪಡಿ ಕೇಸ್ ದಾಖಲಾಗುವ ಸಾಧ್ಯತೆ ಹೆಚ್ಚಿದೆ. 9 ತಿಂಗಳ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಸಿಂಧುರಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಹ ಸಾಕ್ಷ್ಯ ಲಭ್ಯವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್

  • ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ

    ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ

    – ಸ್ಥಳ ಮಹಜರು ಮಾಡಿದ ಪೊಲಿಸರು

    ಬೆಂಗಳೂರು: ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಸ್ಥಳ ಮಹಜರು ಮಾಡಿದ್ದು, ಈ ವೇಳೆ ಮೂರು ಜನ ಬರೆದಿರುವ ಡೆತ್ ನೋಟ್‍ಗಳು ಪತ್ತೆಯಾಗಿವೆ. ಮೂವರೂ ತಮ್ಮ ತಂದೆ ಶಂಕರ್ ವಿರುದ್ಧವೇ ಆರೋಪ ಮಾಡಿದ್ದಾರೆ.

    ತಿಗಳರಪಾಳ್ಯದ ಮನೆಯಲ್ಲಿ ಎಸಿಪಿ, ಇನ್‍ಸ್ಪೆಕ್ಟರ್ ಗಳ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಲಾಗಿದ್ದು, ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮನೆ ಮಾಲೀಕ ಶಂಕರ್, ಇಬ್ಬರು ಅಳಿಯಂದಿರು, ಒಬ್ಬ ಸಂಬಂಧಿಕ ಸಹ ಇದ್ದರು. ಪರಿಶೀಲನೆ ವೇಳೆ ಮಧುಸಾಗರ್, ಸಿಂಚನ, ಸಿಂಧುರಾಣಿ ಮೂವರ ಡೆತ್ ನೋಟ್ ಗಳು ಪತ್ತೆಯಾಗಿವೆ. ಮೂವರು ಸಹ ಅಪ್ಪನ ವಿರುದ್ಧ ಆರೋಪ ಮಾಡಿದ್ದು, ತಂದೆಯ ಅನೈತಿಕ ಸಂಬಂಧ, ದೌರ್ಜನ್ಯ ನಡೆಸಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

    ಸಾವಿನ ಸಂಬಂಧ ಇನ್ನೂ ಕೆಲ ಸಾಕ್ಷ್ಯಗಳು ಲ್ಯಾಪ್ ಟಾಪ್ ನಲ್ಲಿ ಇರುವ ಶಂಕೆ ಇದೆ. ಹೀಗಾಗಿ ಅವುಗಳನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. 9 ತಿಂಗಳ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಸಿಂಧುರಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಹ ಸಾಕ್ಷ್ಯ ಲಭ್ಯವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಾಧ್ಯತೆ

    ಮನೆಯ ರೂಮ್‍ಗಳಲ್ಲಿ ಅಲ್ಲಲ್ಲಿ ನೋಟುಗಳು ಹರಿದು ಬಿದ್ದಿದ್ದವು. ಬಹುತೇಕ ಎಲ್ಲರೂ ಶಂಕರ್ ಮೇಲೆಯೇ ಆರೋಪ ಮಾಡಿದ್ದಾರೆ. ಅಪ್ಪ ಸರಿಯಿಲ್ಲ ಎಂದು ದೂರಿದ್ದಾರೆ. ಹೀಗಾಗಿ ಮನೆ ಮಾಲೀಕ ಶಂಕರ್ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪಡಿ ಕೇಸ್ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

    ಡೆತ್ ನೋಟ್‍ನಲ್ಲಿ ಏನಿದೆ?
    ಅಪ್ಪನಿಗೆ ಅನೈತಿಕ ಸಂಬಂಧ ಇತ್ತು, ಇದರಿಂದ ಸಂಸಾರದಲ್ಲಿ ಗಲಾಟೆಗಳು ನಡೆಯುತ್ತಿದ್ದವು. ಅಪ್ಪ ಸರಿಯಾಗಿ ಇದ್ದಿದ್ದರೆ ನಾವ್ಯಾಕೆ ಸಾಯುವ ಯೋಚನೆ ಮಾಡಬೇಕಿತ್ತು. ನಾವೆಲ್ಲ ಸಾಯುವುದಕ್ಕೆ ಅಪ್ಪ ಅಕ್ರಮ ಸಂಬಂಧ ಹೊಂದಿರುವುದೇ ಕಾರಣ ಎಂದು ಮಧುಸಾಗರ್ ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್

    ಅಪ್ಪ ಮತ್ತು ಪತಿಯಂದಿರು ಕಿರುಕುಳ ಕೊಡುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದೆವು. ಗಂಡನ ಮನೆಯಲ್ಲೂ ಸುಖ ಸಿಗಲಿಲ್ಲ, ತವರು ಮನೆಯಲ್ಲೂ ಸುಖ ಸಿಗಲಿಲ್ಲ, ಇನ್ಯಾವ ಖುಷಿಗೆ ಬದುಕಬೇಕು. ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳು ಇಲ್ಲಿಗಾದ್ರೂ ಕೊನೆಯಾಗಲಿ ಎಂದು ಸಿಂಚನ, ಸಿಂಧುರಾಣಿ ಡೆತ್ ನೋಟ್ ಆರೋಪಿಸಿದ್ದಾರೆ.