Tag: Shankar Guru

  • ‘ಅಣ್ಣ ಫ್ರಂ ಮೆಕ್ಸಿಕೋ’ ಚಿತ್ರದ ಶೂಟಿಂಗ್‌ನಲ್ಲಿ ಡಾಲಿ ಭಾಗಿ

    ‘ಅಣ್ಣ ಫ್ರಂ ಮೆಕ್ಸಿಕೋ’ ಚಿತ್ರದ ಶೂಟಿಂಗ್‌ನಲ್ಲಿ ಡಾಲಿ ಭಾಗಿ

    ನ್ನಡದ ಸ್ಟಾರ್ ನಟ ಡಾಲಿ ಧನಂಜಯ್ (Actor Dhananjay) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಉತ್ತರಕಾಂಡ’ ಚಿತ್ರದ ಶೂಟಿಂಗ್ ಬಳಿಕ ‘ಅಣ್ಣ ಫ್ರಂ ಮೆಕ್ಸಿಕೋ’ (Anna From Mexico) ಚಿತ್ರೀಕರಣದಲ್ಲಿ ಡಾಲಿ ಭಾಗಿಯಾಗಿದ್ದಾರೆ. ಶೂಟಿಂಗ್ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ.

    ಇದೀಗ ‘ಅಣ್ಣ ಫ್ರಂ ಮೆಕ್ಸಿಕೋ’ ಆ್ಯಕ್ಷನ್ ಭಾಗದ ಚಿತ್ರೀಕರಣ ನಡೆಯಲಿದ್ದು, ಮೇ 13ರಿಂದ ಟಾಕಿ ಭಾಗಗಳು ಆರಂಭ ಆಗಲಿದೆ. ಅಣ್ಣ ಫ್ರಂ ಮೆಕ್ಸಿಕೋ ಸೆಟ್‌ನಲ್ಲಿ ಡಾಲಿ ಬಿಳಿ ಅಂಗಿ ಮತ್ತು ಪಂಚೆಯನ್ನು ಧರಿಸಿ ಗ್ರಾಮೀಣ ಭಾಗದ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, ಈ ಚಿತ್ರದಲ್ಲಿ ಡಾಲಿ ಜೊತೆ ನಾಗಭೂಷಣ್, ರಂಗಾಯಣ ರಘು, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

     

    View this post on Instagram

     

    A post shared by Daali Dhananjaya (@dhananjaya_ka)

    ‘ಬಡವ ರಾಸ್ಕಲ್’ ಚಿತ್ರದ ಡೈರೆಕ್ಟರ್ ಶಂಕರ್ ಗುರು (Director Shankar Guru) ಇದೀಗ ಮತ್ತೊಮ್ಮೆ ಡಾಲಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಮತ್ತೆ ‘ಬಡವ ರಾಸ್ಕಲ್’ ಕಾಂಬಿನೇಷನ್ ಈ ಚಿತ್ರದ ಮೂಲಕ ಒಂದಾಗುತ್ತಿದೆ. ಸೂಪರ್ ಹಿಟ್ ಕೊಟ್ಟ ಜೋಡಿ ಮತ್ತೆ ಹೊಸ ಕಥೆ ಹೇಳಲು ಹೊರಟಿರುವುದು ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

    ಜೀಬ್ರಾ, ‘ಪುಷ್ಪ 2’ (Pushpa 2) ಸೇರಿದಂತೆ ಹಲವು ಸಿನಿಮಾಗಳು ಧನಂಜಯ್ ಕೈಯಲ್ಲಿವೆ. ವಿದ್ಯಾಪತಿ, ಜೆಸಿ-ದಿ ಯೂನಿವರ್ಸಿಟಿ ಎಂಬ ಚಿತ್ರಗಳನ್ನು ಡಾಲಿ ನಿರ್ಮಾಣ ಮಾಡುತ್ತಿದ್ದಾರೆ.

  • ಬಡವ ರಾಸ್ಕಲ್ ಟೀಮ್: ‘ಅಣ್ಣ From Mexico’ ಚಿತ್ರಕ್ಕೆ ಮುಹೂರ್ತ

    ಬಡವ ರಾಸ್ಕಲ್ ಟೀಮ್: ‘ಅಣ್ಣ From Mexico’ ಚಿತ್ರಕ್ಕೆ ಮುಹೂರ್ತ

    ಡವ ರಾಸ್ಕಲ್ ಬಳಗ ಮತ್ತೆ ಒಂದಾಗಿರುವುದು ಗೊತ್ತೇ ಇದೆ. ನಟರಾಕ್ಷಸ ಡಾಲಿ ಧನಂಜಯ್ (Dhananjay) ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ಅಣ್ಣ From Mexico (Anna From Mexico) ಚಿತ್ರತಂಡವೀಗ ಸದ್ದಿಲ್ಲದೇ ಮುಹೂರ್ತ ಮುಗಿಸಿ ಶೂಟಿಂಗ್ ಅಖಾಡಕ್ಕೆ ಹೆಜ್ಜೆ ಇಡಲು ತಯಾರಾಗಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಧನು ಹಾಗೂ ಶಂಕರ್ ಗುರು ಜೋಡಿಯ ಅಣ್ಣ From Mexico ಸಿನಿಮಾದ ಮುಹೂರ್ತ ನೆರವೇರಿದೆ. ರಾಯಲ ಸ್ಟುಡಿಯೋಸ್ ನ ಪಾಲುದಾರರಾದ ಜಾನ್ವಿ ರಾಯಲ ಕ್ಲ್ಯಾಪ್ ಮಾಡಿದ್ದು, ನಿರ್ದೇಶಕ ಶಂಕರ್ ಗುರು (Shankar Guru) ತಾಯಿ ಕ್ಯಾಮೆರಾಗೆ ಚಾಲನೆ ನೀಡಿದರು. ಸ್ನೇಹಿತ ಹಾಗು ಹಿತೈಷಿಗಳಾದ ಮೃಣಾಲ್ ಹೆಬ್ಬಾಳ್ಕರ್ ರವರು ಸಿನಿಮಾದ ಮುಹೂರ್ತಕ್ಕೆ ಆಗಮಿಸಿ ಶುಭ ಹಾರೈಸಿದ್ದಾರೆ.

    2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ.

    ’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದ್ದು, ದಿ ರಾಯಲ ಸ್ಟುಡಿಯೋಸ್  ಅಡಿಯಲ್ಲಿ ಸತ್ಯ ರಾಯಲ  ನಿರ್ಮಿಸುತ್ತಿದ್ದು. ಐರಾ ಫಿಲ್ಮ್ಸ್ ಕೂಡ ಜೊತೆಯಾಗಿ ಕೈ ಜೋಡಿಸಿದೆ.

    ಈ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡುತ್ತಿದ್ದು. ಜನವರಿ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದೆ, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

    ಇನ್ನು, ಡಾಲಿ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಉತ್ತರಕಾಂಡ, ಪುಷ್ಪ-2, ಝೀಬ್ರಾ ಹಾಗೂ ಚಿತ್ರದಲ್ಲಿ ಧನು ನಟಿಸುತ್ತಿದ್ದಾರೆ. ಜೊತೆಗೆ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ.

  • ’ಬಡವ ರಾಸ್ಕಲ್’ ತಂಡದಿಂದ ಮತ್ತೊಂದು ಸಿನಿಮಾ ಘೋಷಣೆ: ಡಾಲಿಗೆ ಗಿಫ್ಟ್

    ’ಬಡವ ರಾಸ್ಕಲ್’ ತಂಡದಿಂದ ಮತ್ತೊಂದು ಸಿನಿಮಾ ಘೋಷಣೆ: ಡಾಲಿಗೆ ಗಿಫ್ಟ್

    ಟರಾಕ್ಷಸ ಡಾಲಿ ಧನಂಜಯ್ (Dolly Dhananjay) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಧನು ಜನ್ಮದಿನದ ಅಂಗವಾಗಿ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್  motion ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ’ಅಣ್ಣ From Mexico’  (Anna Farm Mexico)ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

    2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು (Shankar Guru) ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:ಚಂದ್ರಯಾನ ವ್ಯಂಗ್ಯ: ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

    ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, suite ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ. ’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ.

     

    ಸತ್ಯ ರಾಯಲ್ (Satya Royal) ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು, ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Exclusive: ‘ಬಡವ ರಾಸ್ಕಲ್’ ನಿರ್ದೇಶಕನ ಜೊತೆ ಡಾಲಿ ಹೊಸ ಸಿನಿಮಾ

    Exclusive: ‘ಬಡವ ರಾಸ್ಕಲ್’ ನಿರ್ದೇಶಕನ ಜೊತೆ ಡಾಲಿ ಹೊಸ ಸಿನಿಮಾ

    ಡಾಲಿ ಧನಂಜಯ (Daali Dhananjay) ಇತ್ತೀಚಿಗೆ ‘ಹೊಯ್ಸಳ’ನಾಗಿ (Hoysala) ಅಬ್ಬರಿಸಿದ್ದರು. ಗುರುದೇವ್ ಹೊಯ್ಸಳ ಪಾತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಡಾಲಿ ಮುಂದಿನ ಸಿನಿಮಾ ಯಾವುದು? ಯಾರ ಜೊತೆ ಸಿನಿಮಾ ಮಾಡ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

    ನಟ, ವಿಲನ್, ನಿರ್ಮಾಪಕ, ಲಿರಿಕ್ಸ್ ರೈಟರ್ ಆಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಡಾಲಿಗೆ ಕನ್ನಡ ಮತ್ತು ತೆಲುಗು, ತಮಿಳು ಚಿತ್ರರಂಗದಲ್ಲಿ ಭರ್ಜರಿ ಡಿಮ್ಯಾಂಡ್‌ಯಿದೆ. ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಧನಂಜಯ ನಟಿಸಿ ಸೈ ಎನಿಸಿಕೊಂಡಿದ್ದಾರೆ.

    ಲಾಕ್‌ಡೌನ್ ಬಳಿಕ ‘ಬಡವ ರಾಸ್ಕಲ್’ (Badava Rascal) ಸಿನಿಮಾ ಬಾಕ್ಸಾಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. 16 ಕೋಟಿ ವೆಚ್ಚದಲ್ಲಿ ತಯಾರಾದ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಫ್ರೆಂಡ್‌ಶಿಪ್- ಪ್ರೀತಿ ಎರಡರ ಮೌಲ್ಯವನ್ನ ನಿರ್ದೇಶಕ ಶಂಕರ್ ಗುರು (Shankar Guru) ಅದ್ಭುತವಾಗಿ ತೋರಿಸಿದ್ದರು. ಡಾಲಿ- ಅಮೃತಾ ಅಯ್ಯಂಗಾರ್ (Amrutha Iyengar) ಜೋಡಿ ಬೆಳ್ಳಿಪರದೆಯಲ್ಲಿ ಮೋಡಿ ಮಾಡಿತ್ತು. ನಿರ್ದೇಶಕ ಶಂಕರ್ ಗುರು- ಡಾಲಿ ಕಾಂಬೋ ಸಿನಿಮಾ ವರ್ಕ್ ಆಗಿತ್ತು. ಇದೀಗ ಇದೇ ಜೋಡಿ ಕಮಾಲ್ ಮಾಡಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದನ್ನೂ ಓದಿ:60ರ ದಶಕದ ಕಥೆ ಹೇಳಲು ರೆಡಿಯಾದ ನೆನಪಿರಲಿ ಪ್ರೇಮ್

    ‘ಬಡವ ರಾಸ್ಕಲ್’ ನಿರ್ದೇಶಕ ಶಂಕರ್ ಗುರು- ಧನಂಜಯ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ ಬರಲಿದೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಮೂಲಗಳ ಪ್ರಕಾರ, ಶಂಕರ್ ಗುರು ರೆಡಿ ಮಾಡಿರುವ ಸ್ಕ್ರಿಪ್ಟ್ ಕೇಳಿ, ಖುಷಿಯಿಂದ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರು ಒಟ್ಟಿಗೆ ಸಿನಿಮಾ ಮಾಡ್ತಿರುವ ಸುದ್ದಿ ಅದೆಷ್ಟರ ಮಟ್ಟಿಗೆ ನಿಜ? ಎಂಬುದನ್ನ ಮುಂದಿನ ದಿನಗಳಲ್ಲಿ ಡಾಲಿ-ಶಂಕರ್ ಅಧಿಕೃತ ಅಪ್‌ಡೇಟ್‌ಗೆ ಕಾದುನೋಡಬೇಕಿದೆ.

    ‘ಉತ್ತರಾಕಾಂಡ’ (Uttarakanda) ಸಿನಿಮಾಗೆ ಈಗಾಗಲೇ ತಯಾರಿ ನಡೆಯುತ್ತಿದೆ. ಡಾಲಿ, ರಮ್ಯಾ, ಶಿವಣ್ಣ ಕಾಂಬಿನೇಷನ್‌ನಲ್ಲಿ ಉತ್ತರ ಕರ್ನಾಟಕದ ಸೊಗಡಿನಲ್ಲಿ ಈ ಚಿತ್ರ ಮೂಡಿ ಬರಲಿದೆ.

    ಶ್ರುತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್‌ 

  • ಡಾ.ರಾಜ್ ಕುಟುಂಬದೊಂದಿಗೆ ಮತ್ತೊಂದು ಸಿನಿಮಾ ಘೋಷಣೆ ಮಾಡಿದ ಜೇಮ್ಸ್ ನಿರ್ಮಾಪಕ

    ಡಾ.ರಾಜ್ ಕುಟುಂಬದೊಂದಿಗೆ ಮತ್ತೊಂದು ಸಿನಿಮಾ ಘೋಷಣೆ ಮಾಡಿದ ಜೇಮ್ಸ್ ನಿರ್ಮಾಪಕ

    ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಜೇಮ್ಸ್ ನಿರ್ಮಾಣ ಮಾಡಿದ್ದ ಕಿಶೋರ್ ಪತ್ತೆಕೊಂಡ ಇದೀಗ ಡಾ.ರಾಜ್ ಕುಟುಂಬದ ಜತೆಯೇ ಮತ್ತೊಂದು ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ರಾಜ್ ಕುಮಾರ್ ಪುತ್ರಿ ಪೂರ್ಣಿಮಾ ರಾಮ್ ಕುಮಾರ್ ಪುತ್ರ ಧಿರೇನ್ ರಾಮ್ ಕುಮಾರ್ ಅವರಿಗಾಗಿ ಸಿನಿಮಾವೊಂದನ್ನು ನಿರ್ಮಾಣ ಮಾಡುತ್ತಿದ್ದಾರೆ. ಇಂದು ಧೀರೇನ್ ಅವರ ಹುಟ್ಟು ಹಬ್ಬ. ಈ ದಿನದಂದು ಕಿಶೋರ್ ಪ್ರೊಡಕ್ಷನ್‌ ಲಾಂಛನದಲ್ಲಿ ಮೂಡಿ ಬರಲಿರುವ ಎರಡನೇ ಸಿನಿಮಾದ ಘೋಷಣೆ ಮಾಡಲಿದ್ದಾರೆ.

    Dheeren ramkumar,

    ಈಗಾಗಲೇ ಧೀರೇನ್ ‘ಶಿವ 143’ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ನಂತರ ಪತ್ತೆಕೊಂಡ ನಿರ್ಮಾಣದ ಸಿನಿಮಾದಲ್ಲಿ ಭಾಗಿಯಾಗಲಿದ್ದಾರೆ. ಈ ಹಿಂದೆ ಧನಂಜಯ್ ಅವರಿಗಾಗಿ ಬಡವ ರಾಸ್ಕಲ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಶಂಕರ್ ಗುರು ಈ ಸಿನಿಮಾದ ನಿರ್ದೇಶಕ. ಧೀರೆನ್‌ಗಾಗಿ ಹೊಸ ಬಗೆಯ ಕಥೆಯನ್ನು ಹೆಣೆದಿದ್ದಾರಂತೆ.  ಇದನ್ನೂ ಓದಿ: ಕೆಜಿಎಫ್-2 ಸಿನಿಮಾ ವೀಕ್ಷಿಸಿದ ಇಳಯರಾಜ, ಕಮಲ್ ಹಾಸನ್

    ಹೊಸ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಆದರೆ, ಧೀರೇನ್ ಹುಟ್ಟು ಹಬ್ಬಕ್ಕಾಗಿ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದೆ. ಸದ್ಯದಲ್ಲೇ ಈ ಸಿನಿಮಾದ ಇತರ ಮಾಹಿತಿಯನ್ನು ಚಿತ್ರತಂಡ ಹಂಚಿಕೊಳ್ಳಲಿದೆ.

    ಕಿಶೋರ್ ಪತ್ತೆಕೊಂಡ ಡಾ.ರಾಜ್ ಕುಟುಂಬದ ಸಿನಿಮಾದೊಂದಿಗೆ ಚಿತ್ರೋದ್ಯಮಕ್ಕೆ ಕಾಲಿಟ್ಟವರು, ಆ ನಂಟಿನಿಂದಾಗಿ ಎರಡನೇ ಸಿನಿಮಾವನ್ನು ಅದೇ ಕುಟುಂಬದೊಂದಿಗೆ ಮುಂದುವರೆಸಿದ್ದು ವಿಶೇಷ. ಇದನ್ನೂ ಓದಿ: ಒಂದೇ ಪ್ರಾಜೆಕ್ಟ್‌ನಲ್ಲಿ ವಿಕ್ಕಿ ಕೌಶಲ್- ಪೂಜಾ ಹೆಗ್ಡೆ?