Tag: Shankar Patil Muneenakoppa

  • ಬಜೆಟ್‍ನಲ್ಲಿ ಮಂಡ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

    ಬಜೆಟ್‍ನಲ್ಲಿ ಮಂಡ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ: ಶಂಕರ್ ಪಾಟೀಲ್ ಮುನೇನಕೊಪ್ಪ

    ಮಂಡ್ಯ: ಈ ಬಾರಿಯ ಬಜೆಟ್‍ನಲ್ಲಿ ನಗರದ ಜನರಿಗೆ ಸಿಹಿ ಸುದ್ದಿ ಸಿಗಲಿದ್ದು, ಸಕ್ಕರೆ ನಾಡಿನಲ್ಲಿ ಆದಷ್ಟು ಬೇಗ ಮೈಶುಗರ್ ಕಾರ್ಖಾನೆ ಪ್ರಾರಂಭವಾಗುತ್ತೆ ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಆಶ್ವಾಸನೆ ನೀಡಿದರು.

    ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಖಾನೆ ಪ್ರಾರಂಭಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ಸುಕರಾಗಿದ್ದಾರೆ. ಕಾರ್ಖಾನೆಯು ರೈತರಿಗೆ ಅನುಕೂಲವಾಗಬೇಕು ಎಂಬುದೆ ನಮ್ಮ ಉದ್ದೇಶವಾಗಿದೆ. ಈಗಾಗಲೇ ಕಾರ್ಖಾನೆಯ ಕುರಿತು ತಾಂತ್ರಿಕ ಸಮಿತಿ ರಚನೆಯಾಗಿದೆ ಎಂದರು. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

    ಸಮಿತಿಯು ನೀಡುವ ಸಲಹೆಗಳ ಆಧಾರದ ಮೇಲೆ ಕಾರ್ಖಾನೆ ಆರಂಭಿಸುತ್ತೇವೆ. ಈ ಬಾರಿ ಬಜೆಟ್‍ನಲ್ಲಿ ಮಂಡ್ಯದ ಜನರಿಗೆ ಸಿಹಿ ಸುದ್ದಿ ಸಿಗಲಿದೆ. ಇದು ಖಾಸಗಿ ಸಹಭಾಗಿತ್ವದಲ್ಲಿ ಮಾಡಬೇಕೇ ಅಥವಾ ಸರ್ಕಾರಿ ಸ್ವಾಮ್ಯದಲ್ಲಿ ಆರಂಭಿಸಬೇಕೇ ಎಂಬುದು ತಾಂತ್ರಿಕ ಸಮಿತಿ ನೀಡುವ ವರದಿ ಆಧಾರದ ಮೇಲೆ ನಿರ್ಧಾರವಾಗುತ್ತೆ ಎಂದು ತಿಳಿಸಿದರು.

  • ಜವಳಿ ಇಲಾಖೆಯಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ: ಶಂಕರ್ ಪಾಟೀಲ್ ಮುನೇನಕೊಪ್ಪ

    ಜವಳಿ ಇಲಾಖೆಯಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ: ಶಂಕರ್ ಪಾಟೀಲ್ ಮುನೇನಕೊಪ್ಪ

    ಬಳ್ಳಾರಿ: ಜವಳಿ ಇಲಾಖೆಯಲ್ಲಿ 12 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.

    ಬಳ್ಳಾರಿ ಜಿ.ಪಂ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಳ್ಳಾರಿ ವಿಭಾಗ(ಉತ್ತರ ವಲಯ) ಮಟ್ಟದ ಕೈಮಗ್ಗ ಮತ್ತು ಜವಳಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನ್ಯಾಷನಲ್ ಹ್ಯಾಂಡಲೂಮ್ ಡೆವಲಪ್‍ಮೆಂಟ್ ಪ್ರೋಗ್ರಾಂ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದರಿಂದ ನಮ್ಮ ರಾಜ್ಯಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ

    ರಾಜ್ಯದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 132 ಕೋಟಿ ರೂ. ಸಬ್ಸಿಡಿ ಹಣ ಅರ್ಹ ಫಲಾನುಭವಿಗಳಿಗೆ ನೀಡಿದ್ದು, ಪರಿಶಿಷ್ಟ ವರ್ಗಗಳ ಹೊರತುಪಡಿಸಿ 2020-21 ನೇ ಸಾಲಿನಲ್ಲಿ 121 ಕೋಟಿ ಸಾಲಮನ್ನಾ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಆರಂಭಕ್ಕೆ ಚಿಂತನೆ ನಡೆದಿದೆ ಎಂದು ಹೇಳಿದರು.

    ಜವಳಿ ಇಲಾಖೆಯು ನೇಕಾರ ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿದೆ. ನ್ಯಾಷನಲ್ ಹ್ಯಾಂಡಲೂಮ್ ಡೆವಲಪ್‍ಮೆಂಟ್ ಪ್ರೋಗ್ರಾಂ ಎಂಬ ಮಹತ್ವಾಕಾಂಕ್ಷಿ ಯೋಜನೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಈ ಯೋಜನೆಯ ಮೂಲಕ ಕೈಮಗ್ಗ ಮತ್ತು ಜವಳಿ ಇಲಾಖೆಗೆ 10 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದೆ. ಇದರಿಂದ ಇಲಾಖೆಯ ಪುನಶ್ಚೇತನವಾಗಲಿದೆ ಎಂದರು. ಇದನ್ನೂ ಓದಿ: ಮುತ್ಯಾಲಮಡುವು ಗಡಿಭಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ

    ಜವಳಿ ಇಲಾಖೆ ಶೇ.90 ರಷ್ಟು ಸಬ್ಸಿಡಿ ನೀಡುವ ಮೂಲಕ ನೇಕಾರ ಸಮುದಾಯದ ನೆರವಿಗೆ ನಿಲ್ಲುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಎಲ್ಲರಿಗೂ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಬ್ಸಿಡಿ ಹೆಚ್ಚಿಸಲಾಗಿದೆ. ಆಯುಷ್ಮಾನ ಯೋಜನೆಯ ಮುಖಾಂತರ ಬಿಪಿಎಲ್ ಪಡಿತರ ಚೀಟಿ ಹೊಂದಿದವರೆಗೆ ಉಚಿತ ಆರೋಗ್ಯ ಸೇವೆ ನಿಡಲಾಗುತ್ತದೆ. ಇದರ ಕುರಿತು ಹಲವರಿಗೆ ಮಾಹಿತಿಯ ಕೊರತೆಯಿದೆ. ಇದರ ಕುರಿತು ಅರಿವು ಮೂಡಿಸುವ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.