Tag: Shankara Patil Muneenakoppa

  • ಮೂರನೇ ಬಾರಿಯೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಜಗದೀಶ್ ಶೆಟ್ಟರ್

    ಮೂರನೇ ಬಾರಿಯೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಜಗದೀಶ್ ಶೆಟ್ಟರ್

    ಹುಬ್ಬಳ್ಳಿ: ಬಿಜೆಪಿ ಮತ್ತೊಮ್ಮೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ. 60ಕ್ಕೂ ಹೆಚ್ಚು ಸ್ಥಾನ ಗೆಲುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

    ನಗರದಲ್ಲಿಂದು ಪಾಲಿಕೆ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಚುನಾವಣಾ ವಿಚಾರದಲ್ಲಿ ಮಂಚೂಣಿಯಲ್ಲಿ ಕ್ರೀಯಾಶೀಲವಾಗಿ ಕೆಲಸ ಕಾರ್ಯ ಮಾಡುತ್ತಿದೆ. ಹೀಗಾಗಲೇ ಹಲವಾರು ವಾರ್ಡ್‍ಗಳಲ್ಲಿ ಪ್ರಚಾರ ಕಾರ್ಯಗಳು ನಡೆಯುತ್ತಿವೆ. 82 ಸೀಟು ಹಂಚಿಕೆ ಸವಾಲಾಗಿತ್ತು. ಎರಡು ಬಾರಿ ಆಡಳಿತ ನಡೆಸಿದ್ದೇವೆ. ಘೋಷಣೆ ಅತೀ ಬೇಗ ಆಗಿದೆ. ಅಭ್ಯರ್ಥಿಗಳಲ್ಲಿ ಪೈಪೋಟಿ ನಡುವೆ ಟಿಕೆಟ್ ಹಂಚಲಾಗಿದೆ. ಆದರೂ ಕೆಲವರಲ್ಲಿ ಅಸಮಾಧಾನವಿದೆ. ಒಳ್ಳೆ ಬೆಂಬಲ ಜನರಿಂದ ಸಿಗುತ್ತಿದೆ. ಸಾಕಷ್ಟು ಕೆಲಸ ಕಾರ್ಯಗಳು ನಡೆಯುತ್ತಿದ್ದು, ಮಾದರಿ ನಗರ ಮಾಡಲು ಬಿಜೆಪಿ ಪಣತೊಟ್ಟಿದೆ ಎಂದರು.

    ಬಿಜೆಪಿ ಪದವೀಧರ, ಎಂಕಾಂ, ಎಂಬಿಬಿಎಸ್ ಸೇರಿದಂತೆ ವಿದ್ಯಾವಂತರಿಗೆ ಟಿಕೆಟ್ ನೀಡಿದ್ದು, ಮೂರನೇ ಬಾರಿಗೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. 60ಕ್ಕೂ ಹೆಚ್ಚು ಸ್ಥಾನ ಗೆಲುವ ವಿಶ್ವಾಸವಿದೆ. ಎಎಪಿ ತಮ್ಮ ಅಭ್ಯರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸುಳ್ಳು ಅಪಾದನೆ ಮಾಡಿದ್ದಾರೆ. ದೂರು ನೀಡುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಯಾವುದೇ ಗುಂಡಾ ರಾಜಕೀಯ ಮಾಡಿಲ್ಲ ಎಂದರು. ಇದನ್ನೂ ಓದಿ: ಅಧಿಕಾರಕ್ಕಾಗಿ ಹೊಡೆದಾಡುವುದನ್ನು ಬಿಟ್ಟು ಆಡಳಿತದತ್ತ ಗಮನ ಹರಿಸಿ: ಯತೀಂದ್ರ ಸಿದ್ದರಾಮಯ್ಯ

    ಬಿಜೆಪಿ ನಗರ ಅಧ್ಯಕ್ಷ ಅರವಿಂದ ಬೆಲ್ಲದ ಅವರು ಪಾಲಿಕೆ ಚುನಾವಣಾ ಪ್ರಚಾರದಲ್ಲಿ ಯಾಕೆ ಭಾಗಿಯಾಗುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯರ ನೀಡಲು ನಿರಾಕರಿಸಿದ ಶೆಟ್ಟರ್ ಅವರು, ಪ್ರಶ್ನೆ ಪಾಸ್ ಮಾಡಿ, ಮುಂದೆ ಏನಾದರೂ ಬೇರೆ ಪ್ರಶ್ನೆ ಇದ್ದರೆ ಕೇಳಿ ಎಂದು ಹೇಳುವ ಮೂಲಕ ಬೆಲ್ಲದ ಅನುಮಪಸ್ಥಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

    ಈ ವೇಳೆ ಮಾತನಾಡಿದ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು, ಪಾಲಿಕೆಯಲ್ಲಿ ಹೆಚ್ಚಿನ ಸ್ಥಾನ ಗೆಲುವ ವಿಶ್ವಾಸವಿದೆ. ಅವಳಿ ನಗರದ ಅಭಿವೃದ್ಧಿಗೆ ಪ್ರಹ್ಲಾದ್ ಜೋಶಿ ಹಾಗೂ ಜಗದೀಶ್ ಶೆಟ್ಟರ್ ಅವರು ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಕೊರೊನಾದಿಂದ ಕಾಮಗಾರಿ ವಿಳಂಭವಾಗಿದೆ. ಮುಂದಿನ ದಿನಗಳಲ್ಲಿ ಅವಳಿನಗರದ ಹೆಚ್ಚಿನ ಅಭಿವೃದ್ಧಿ ಮಾಡುವ ಗುರಿಯನ್ನು ಬಿಜೆಪಿ ಹೊಂದಿದ್ದು, ಮತ್ತೊಮ್ಮೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಪಾಲಿಕೆ ಚುನಾವಣೆಯಲ್ಲಿ ಗೆಲುವು ನಿಶ್ಚಿತ: ಶಂಕರ್ ಪಾಟೀಲ್ ಮುನೇನಕೊಪ್ಪ

    ಪಾಲಿಕೆ ಚುನಾವಣೆಯಲ್ಲಿ ಗೆಲುವು ನಿಶ್ಚಿತ: ಶಂಕರ್ ಪಾಟೀಲ್ ಮುನೇನಕೊಪ್ಪ

    ಹುಬ್ಬಳ್ಳಿ: ಈ ಬಾರಿಯ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಪಾಲಿಕೆ ಚುನಾವಣೆಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಬಾರಿಯೂ ಪಕ್ಷದ ಎಲ್ಲ ಕಾರ್ಯಕರ್ತರು ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲಿಸುವಲ್ಲಿ ಶ್ರಮಿಸಲಾಗುವುದು ಎಂದರು.  ಇದನ್ನೂ ಓದಿ: ಕಲುಷಿತ ಗಾಳಿಯನ್ನು ಶುದ್ಧಗೊಳಿಸುವ ಹೊಗೆ ಗೋಪುರ- ದೇಶದಲ್ಲೇ ಮೊದಲು

     ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜನರಿಗೆ ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಕಿಟ್, ಬೆಡ್ ಒದಗಿಸುವುದು ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಪಕ್ಷ ನೋಡದೇ ಎಲ್ಲರಿಗೂ ಸರ್ಕಾರದ ಯೋಜನೆಯನ್ನು ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಿದ್ದೇವೆ. ಜನರಿಗೆ ಬಿಜೆಪಿ ಪಕ್ಷದ ನಂಬಿಕೆ ಇದೆ. ಅವರು ಪಾಲಿಕೆ ಚುನಾವಣೆಯಲ್ಲಿ ಆರ್ಶೀವಾದ ಮಾಡಲಿದ್ದಾರೆ ಎಂದರು.

    ಹುಬ್ಬಳ್ಳಿ-ಧಾರವಾಡ ಮಹಾನಗರ ಅಭಿವೃದ್ಧಿಯ ಪಕ್ಷದ ಪ್ರಣಾಳಿಕೆ ತಯಾರಿಸಲಾಗುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು. ಈ ವೇಳೆ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಬಸವರಾಜ್ ಕುಂದಗೋಳಮಠ, ಎಮ್. ಆರ್.ಪಾಟೀಲ್ ಗಣ್ಯರು ಸೇರಿದಂತೆ ಕಾರ್ಯಕರ್ತರು ಮುಂತಾದವರು ಇದ್ದರು.

  • ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲ ಬೇಡ : ಶಂಕರ ಪಾಟೀಲ್ ಮುನೇನಕೊಪ್ಪ

    ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲ ಬೇಡ : ಶಂಕರ ಪಾಟೀಲ್ ಮುನೇನಕೊಪ್ಪ

    – ಮಹದಾಯಿ ಹೋರಾಟದಿಂದ ಇಂದು ಅಧಿಕಾರದಲ್ಲಿದ್ದೇವೆ

    ಹುಬ್ಬಳ್ಳಿ: ಮಹಾದಾಯಿ ಹೋರಾಟದಲ್ಲಿ ನಾವೆಲ್ಲಾ ಪಾಲ್ಗೊಂಡಿದ್ದೇವೆ. ನಾನು ಸಹ ಕಳಸಾ ಬಂಡೂರಿ ಹೋರಾಟದಿಂದಲೇ ಬಂದವನು. ಮಹದಾಯಿ ಹೋರಾಟದಲ್ಲಿ ನಾವೆಲ್ಲಾ ಪಾಲ್ಗೊಂಡಿದ್ದಕ್ಕೆ ಇಂದು ಅಧಿಕಾರದಲ್ಲಿದ್ದೇವೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.

    ನೂತನ ಸಚಿವರಾದ ಮೇಲೆ ಮೊದಲ ಬಾರಿಗೆ ಹುಬ್ಬಳ್ಳಿಗೆ ಶಂಕರಪಾಟೀಲ್ ಮುನೇನಕೊಪ್ಪ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲದ ಹೇಳಿಕೆ ಬೇಡವೆಂದು ತಿಳಿಸಿದ್ದಾರೆ.

    ಮಹಾದಾಯಿ ಹೋರಾಟ ವಿಚಾರದಲ್ಲಿ ಈಗಾಗಲೇ ಟ್ರಿಮಿನಲ್ ಆದೇಶ ಆಗಿದೆ. 4 ಟಿಎಂಸಿ ಕುಡಿಯುವ ನೀರಿನ ಆದೇಶ ದೊರೆತಿದೆ. ಸಣ್ಣ ಪುಟ್ಟ ತೊಡಕುಗಳನ್ನು ಬಗೆಹರಿಸಿ ಯೋಜನೆಯನ್ನು ಜಾರಿ ಮಾಡುತ್ತೇವೆ. ಈ ವಿಚಾರದಲ್ಲಿ ಮೂರು ರಾಜ್ಯಗಳ ಸಹಕಾರ ಅಗತ್ಯವಾಗಿದೆ. ಗೊಂದಲಗಳು ಆಗಬಾರದು 330 ಹಳ್ಳಿಗಳಿಗೂ ನೀರು ಕೊಡುವ ಯೋಜನೆ ಮಾಡುತ್ತಿದ್ದೇವೆ. ಹೀಗಾಗಿ ಕಳಸಾ ಬಂಡೂರಿ ವಿಚಾರದಲ್ಲಿ ಗೊಂದಲದ ಹೇಳಿಕೆ ನೀಡುವುದು ಬೇಡವೆಂದು ಮನವಿ ಮಾಡಿದರು. ಅಲ್ಲದೇ ಇನ್ನೂ 60 ದಿನಗಳಲ್ಲಿ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದ್ದಾರೆ.

    ಪಕ್ಷ ಬಹು ದೊಡ್ಡ ಜವಾಬ್ದಾರಿಯಿಂದ ನನಗೆ ಸ್ಥಾನ ಕೊಟ್ಟಿದೆ. ಹೀಗಾಗಿ ಮುಖ್ಯ ಮಂತ್ರಿಗಳು ಯಾವ ಸ್ಥಾನ ನೀಡಿದರೂ ಸಮರ್ಥವಾಗಿ ನಿಭಾಯಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ಓಕೆ: ಮುರುಗೇಶ್ ನಿರಾಣಿ

  • ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ಓಕೆ: ಮುರುಗೇಶ್ ನಿರಾಣಿ

    ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ಓಕೆ: ಮುರುಗೇಶ್ ನಿರಾಣಿ

    ಹುಬ್ಬಳ್ಳಿ: ನೂತನ ಸಚಿವ ಸಂಪುಟದಲ್ಲಿ ಪ್ರಬಲ ಖಾತೆಗಾಗಿ ಪೈಪೋಟಿ ಶುರುವಾಗಿದೆ. ವಲಸಿಗ ಸಚಿವರಂತೂ ತಮಗೆ ಇದೇ ಖಾತೆ ಬೇಕು ಅಂತಾ ಪಟ್ಟು ಹಿಡಿದಿದ್ದಾರೆ. ಆದರೆ ಎಲ್ಲರೂ ಬಿಟ್ಟಿರುವ ಖಾತೆ ಕೊಟ್ಟರೂ ನಾನು ನಿಭಾಯಿಸುವೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

    ನೂತನವಾಗಿ ಸಚಿವರಾದ ಮೇಲೆ ಕ್ಷೇತ್ರಕ್ಕೂ ತೆರಳುವ ಮುನ್ನ ಸಚಿವ ಶಂಕರಪಾಟೀಲ್, ಮುನೇನಕೊಪ್ಪ ಜೊತೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುರುಗೇಶ್ ನಿರಾಣಿ, ನೂತನವಾಗಿ ಮಂತ್ರಿ ಮಂಡಲ ರಚನೆಯಾಗಿದೆ. ನಾನು ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಮುನೇನಕೊಪ್ಪ ಇಬ್ಬರು ಬರುವ ದಿನಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

    ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪರ ನೇತೃತ್ವದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತೇವೆ. ಎಲ್ಲರೂ ಬಿಟ್ಟಿರುವ ಖಾತೆಯನ್ನು ನನಗೆ ಕೊಟ್ಟರೂ ನಾನು ನಿರ್ವಹಿಸುತ್ತೇನೆ ಎಂದು ಹೇಳುವ ಮೂಲಕ ಮುರುಗೇಶ್ ನಿರಾಣಿ ಅಚ್ಚರಿ ಮೂಡಿಸಿದ್ದಾರೆ.  ಇದನ್ನೂ ಓದಿ:ಪವರ್ ಫುಲ್ ಖಾತೆಗಳಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ – ರೆಬಲ್‍ಗಳ ರಹಸ್ಯ ಸಭೆ!