ಬೆಂಗಳೂರು: ದಾಖಲೆಯಿಲ್ಲದ 76 ಲಕ್ಷ ರೂ.ಹಣವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ರಾತ್ರಿ 76 ಲಕ್ಷ ರೂ. ನಗದಿನೊಂದಿಗೆ ಇಬ್ಬರು ವ್ಯಕ್ತಿಗಳು ಶಾಂತಿ ನಗರ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಖಚಿತ ಮಾಹಿತಿ ಅಧಾರಿಸಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – ತಲೆ ಸವರಿ ಭಾವುಕರಾದ ಸಿಎಂ
ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗ ಹಣದ ಮೂಲದ ಬಗ್ಗೆ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ನಿಂದ ತೀವ್ರ ಹಲ್ಲೆಗೊಳಗಾಗಿ ಅಸ್ಪತ್ರೆ ಸೇರಿರುವ ವಿದ್ವತ್‍ಗೆ ಮಲ್ಯ ಅಸ್ಪತ್ರೆಯಲ್ಲಿ ನಾಲ್ಕನೇ ದಿನವೂ ಚಿಕಿತ್ಸೆ ಮುಂದುವರೆದಿದೆ.
ತೀವ್ರ ನಿಗಾ ಘಟಕದಲ್ಲಿ ವಿದ್ವತ್‍ಗೆ ಚಿಕಿತ್ಸೆ ನೀಡುತ್ತಿದ್ದು, ಮುಖದ ಊತ ಸ್ವಲ್ಪ ಮಟ್ಟಿಗೆ ನಿಯಂತ್ರಣಕ್ಕೆ ಬಂದಿದೆ. ಅಲ್ಲದೇ ಗಾಯದ ನೋವು ಜಾಸ್ತಿ ಇರುವುದರಿಂದ ವಿದ್ವತ್‍ಗೆ 102 ಡಿಗ್ರಿ ಜ್ವರ ಇತ್ತು. ಇದೀಗ 101 ಡಿಗ್ರಿಗೆ ಜ್ವರ ಇಳಿಮುಖವಾಗಿದ್ದು, ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡ್ತಿದ್ದಾರೆ. ಅಲ್ಲದೇ ಇನ್ನೂ ಮೂರ್ನಾಲ್ಕು ದಿನ ವಿದ್ವತ್‍ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲೂ ಮುಂದುವರಿದ ನಲಪಾಡ್ ಪುಂಡಾಟ- ನಿನ್ನಿಂದ ನಾವು ಜೈಲು ಸೇರುವಂತಾಯ್ತು ಎಂದ ಸ್ನೇಹಿತ ಅಬ್ರಾಸ್ ಮೇಲೆ ಹಲ್ಲೆ
ವಿದ್ವತ್ ಮುಖ, ಕಣ್ಣು, ಮೂಗು, ಹಾಗೂ ಪಕ್ಕೆಲುಬುಗಳ ಮೂಳೆ ಮುರಿದಿದ್ದರಿಂದ ವಿದ್ವತ್ ಮೊದಲಿನಂತಾಗಲು ತಿಂಗಳಿಗೂ ಹೆಚ್ಚು ಕಾಲ ಬೇಕಾಗುತ್ತೆ ಎನ್ನಲಾಗಿದೆ. ಇನ್ನು ಎದೆಯ ಪಕ್ಕೆಯ ಮೂಲೆಗಳು ಮುರಿದಿರೋ ಹಿನ್ನೆಲೆ ಕೂರಲೂ ಆಗದ ಸ್ಥಿತಿಯಲ್ಲಿರುವ ವಿದ್ವತ್ ಇನ್ನೂ ಚೇತರಿಸಕೊಳ್ಳದ ಹಾಗೂ ಜ್ವರದಿಂದ ಬಳಲುತ್ತಿರೋ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪೂರಕ್ಕೆ ಕರೆದೊಯ್ಯಲು ಕುಟುಂಬ ಚಿಂತನೆ ನೆಡಸಿದೆ ಎಂದು ಸಹೋದರ ಸಾತ್ವಿಕ್ ಲೋಕನಾತ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!
ವಿದ್ವತ್ ಅರೋಗ್ಯ ವಿಚಾರಿಸಲು ರಾಘವೇಂದ್ರ ರಾಜ್‍ಕುಮಾರ್ ಅವರ ಮಗ ಗುರುರಾಜ್ ಕುಮಾರ್ ಅಗಮಿಸಿದ್ದರು. ಇದೇ ವೇಳೆ ರಾಘವೇಂದ್ರ ರಾಜ್‍ಕುಮಾರ್ ಮನೆಯಿಂದ ಊಟ ಸಹ ತಂದು ಕೊಟ್ಟಿದ್ದು, ವಿದ್ವತ್ ಶೀಘ್ರ ಗುಣವಾಗಲೀ ಅಂತ ಹಾರೈಸಿದ್ರು.
ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಯುವಕ ವಿದ್ವತ್ ನನ್ನು ನಟ ಪುನೀತ್ ರಾಜ್ ಕುಮಾರ್ ಇಂದು ಭೇಟಿ ಮಾಡಿದ್ದಾರೆ.
ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದರು. ಇದನ್ನೂ ಓದಿ: ನಲಪಾಡ್ ಗೆ ಋಣ ಸಂದಾಯ – ಕಬ್ಬನ್ ಪಾರ್ಕ್ ಪೊಲೀಸರ ಮತ್ತೊಂದು ಅವಾಂತರ ಬಟಾಬಯಲು!
ಸದ್ಯ ವಿದ್ವತ್ ಮೂಗಿನ ಹೊಳ್ಳೆಗಳು ಒಡೆದಿದ್ದು, ಮೂಗು ಫ್ರಾಕ್ಚರ್ ಆಗಿದೆ. ಬಲಭಾಗದ 5 ಪಕ್ಕೆಲುಬುಗಳು ಮುರಿದಿದ್ದು, ಎಡಭಾಗದ 4 ಪಕ್ಕೆಲುಬುಗಳು ಮುರಿದಿವೆ. ಆದ್ದರಿಂದ ವಿದ್ವತ್ ಸ್ಥಿತಿ ಗಂಭೀರವಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ವಿಚಾರಕ್ಕಿಂತ ಸಂತೋಷ್ ವಿಚಾರದ ಬಗ್ಗೆ ಬಿಜೆಪಿಯವರು ಮಾತನಾಡಲಿ. ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ ಎಂದು ಪ್ರಶ್ನಿಸಿ ಬಿಜೆಪಿ ನಾಯಕರ ವಿರುದ್ಧ ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಕಿಡಿಕಾರಿದ್ದಾರೆ.
ವಿಧಾನಸೌಧದದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಸ್ವತಃ ವಿನಯ್ ಹಲ್ಲೆಗೊಳಗಾಗಿದ್ದಾರೆ. ಅವರ ಪತ್ನಿ ಪತ್ರ ಬರೆದರೂ ಬಿಎಸ್ ವೈ ಪ್ರತಿಕ್ರಿಯೆ ಕೊಟ್ಟಿಲ್ಲ. ಊರೆಲ್ಲ ಸುತ್ತುವ ಇವರಿಗೆ ಠಾಣೆಗೆ ಬರಲು ವಯಸ್ಸಿನ ಸಮಸ್ಯೆ. ಮೊದಲು ಸಂತೋಷ್ ಪ್ರಕರಣದ ಬಗ್ಗೆ ಬಿಜೆಪಿಯವರು ಮಾತನಾಡಲಿ. ಮಗ ತಪ್ಪು ಮಾಡಿದ್ರೆ ಅಪ್ಪನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್ ನಲ್ಲಿದೆ ಅಂತ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕೆಆರ್ ಪುರಂ ಬಿಬಿಎಂಪಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪೆಟ್ರೋಲ್ ಸುರಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಇಲ್ಲ. ತಪ್ಪು ಯಾರೇ ಮಾಡಿದ್ರೂ ತಪ್ಪೇ. ಪೊಲೀಸರು ಆ ಬಗ್ಗೆ ಕ್ರಮ ತೆಗೆದುಕೊಳ್ತಾರೆ ಎಂದರು.
ರಾಜ್ಯ ಸರ್ಕಾರ ಶೇ.10 ಪರ್ಸೆಂಟ್ ಗಿಂತ ಹೆಚ್ಚಿನ ಕಮೀಷನ್ ಸರ್ಕಾರ ಎಂಬ ಪ್ರಧಾನಿ ಮೋದಿ ಆರೋಪದ ವಿಚಾರದ ಕುರಿತು ಮಾತನಾಡಿದ ಅವರು, ಮೋದಿಯವರು ಬಿಜೆಪಿಯ ಪ್ರಧಾನಿ ಅಲ್ಲ. ಬದಲಾಗಿ ಅವರು ದೇಶದ ಪ್ರಧಾನಿ. ಪ್ರಧಾನಿ ಹುದ್ದೆಯಲ್ಲಿದ್ದುಕೊಂಡು ಈ ರೀತಿ ಹೇಳಿಕೆ ನೀಡಿದ್ದು ಸರಿ ಅಲ್ಲ. ನೋಟ್ ಬ್ಯಾನ್ ನಂತಹ ಜನರಿಗೆ ತೊಂದರೆ ಕೊಡುವ ಕಾರ್ಯಕ್ರಮ ಮಾಡಿದ್ರು ಹೊರತು ಬೇರೆ ಇಲ್ಲ. ಗುಜರಾತಿನಲ್ಲಿ ಪೆಟ್ರೋ ಕೆಮಿಕಲ್ಸ್ ಯೋಜನೆಯಿಂದ 20 ಸಾವಿರ ಕೋಟಿ ರೂ. ನಷ್ಟವಾಯಿತು. ಇದಕ್ಕೆ ಹೊಣೆ ಯಾರು? ಈ ನಷ್ಟವನ್ನು ಮೋದಿಯವರು ಕೇಂದ್ರ ಸರಕಾರದ ಸಬ್ಸಿಡಿಯಿಂದ ಭರ್ತಿ ಮಾಡ್ಕೋತಿದ್ದಾರೆ. ಪ್ರಧಾನಿಯಾಗಿ ಅವರು 4 ವರ್ಷ ಸಾಧನೆ ಮಾಡಿಲ್ಲ. ಅದಕ್ಕಾಗಿ ಮೋದಿಯವರು ರಾಜ್ಯ ಸರಕಾರದ ಮೇಲೆ ಸುಳ್ಳು ಆರೋಪ ಮಾಡ್ತಿದ್ದಾರೆ. ಎಲ್ಲ ರಾಜ್ಯಗಳಿಗೂ ಬಂದು ಸುಳ್ಳು ಆರೋಪಗಳ ಮೂಲಕ ಮೋದಿಯವರು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬರುವಂತೆ ಮಾತಾಡುವುದು ಸರಿಯಲ್ಲ ಅಂತ ಹೇಳಿದ್ರು.
ಮೈಸೂರಿನಿಂದ ಬೆಂಗಳೂರಿಗೆ ಬಂದ ಸಿದ್ದರಾಮಯ್ಯ ದಾರಿತಪ್ಪಿದ್ದಾರೆ ಎನ್ನುವ ಮೋದಿ ಹೇಳಿಕೆಗೆ, ಮೈಸೂರಿಂದ ಬಂದ ಹಲವರು ರಾಜಕಾರಣದಲ್ಲಿ ಸಾಧನೆ ಮಾಡಿದ್ದಾರೆ. ಆ ವಿಷಯ ಮೋದಿಯವರಿಗೆ ಗೊತ್ತಿಲ್ಲ ಎಂದು ಹೇಳಿದರು.