Tag: Sharad Yadav

  • ಮಾಜಿ ಕೇಂದ್ರ ಸಚಿವ ಶರದ್‌ ಯಾದವ್‌ ನಿಧನ

    ಮಾಜಿ ಕೇಂದ್ರ ಸಚಿವ ಶರದ್‌ ಯಾದವ್‌ ನಿಧನ

    ನವದೆಹಲಿ: ಮಾಜಿ ಕೇಂದ್ರ ಸಚಿವ ಮತ್ತು ಮಾಜಿ ಜೆಡಿಯು(JDU) ಪಕ್ಷದ ಅಧ್ಯಕ್ಷ ಶರದ್ ಯಾದವ್(75) ನಿಧನರಾಗಿದ್ದಾರೆ.

    ಶರದ್ ಯಾದವ್ (Sharad Yadav) ಪುತ್ರಿ ಸುಭಾಷಿಣಿ ಶರದ್ ಯಾದವ್ ಪಾಪಾ ನಹೀ ರಹೇ (ತಂದೆ ಇನ್ನಿಲ್ಲ) ಎಂದು ಟ್ವೀಟ್‌ ಮಾಡುವ ಮೂಲಕ ಸುದ್ದಿಯನ್ನು ತಿಳಿಸಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶರದ್‌ ಯಾದವ್‌ ಅವರನ್ನು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ನಿಧನರಾಗಿದ್ದಾರೆ.

    ಬಿಹಾರದ ನಾಯಕರಾಗಿದ್ದ ಶರದ್ ಯಾದವ್ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. 2003ರಲ್ಲಿ ಜೆಡಿಯು (JDU) ಅಧ್ಯಕ್ಷರಾಗಿದ್ದರು. 2004ರ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನಿತೀಶ್ ಕುಮಾರ್ ಸಹಕಾರದಿಂದ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

    ನಿತೀಶ್‌ ಕುಮಾರ್‌ ಅವರ ಜೊತೆಗಿನ ಸಂಬಂಧ ಹಾಳಾಗಿದ್ದರಿಂದ ಅವರು 2018ರಲ್ಲಿ ತಮ್ಮದೇ ಆದ ಲೋಕತಾಂತ್ರಿಕ್‌ ಜನತಾ ದಳ ಸ್ಥಾಪಿಸಿದ್ದರು. ಮಾರ್ಚ್ 2022 ರಲ್ಲಿ ಎಲ್‌ಜೆಡಿಯನ್ನು ಆರ್‌ಜೆಡಿ ಜೊತೆ ವಿಲೀನಗೊಳಿಸಿದರು. ಈ ಮೂಲಕ ಮೂರು ದಶಕಗಳ ಬಳಿಕ ಲಾಲು ಪ್ರಸಾದ್ ಮತ್ತು ಶರದ್ ಯಾದವ್ ಒಂದಾಗಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

    ಜೆಡಿಯು ರಾಜ್ಯಸಭಾ ನಾಯಕ ಸ್ಥಾನದಿಂದ ಶರದ್ ಯಾದವ್ ವಜಾ

     

    ನವದೆಹಲಿ: ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೃತ್ರಿ ಮಾಡಿಕೊಳ್ಳುವ ಪಕ್ಷದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಶರದ್ ಯಾದವ್‍ರನ್ನು ಜೆಡಿಯು ರಾಜಸಭ್ಯಾ ನಾಯಕ ಸ್ಥಾನದಿಂದ ವಜಾ ಮಾಡಿ, ಅವರ ಸ್ಥಾನಕ್ಕೆ ಪಕ್ಷದ ಹಿರಿಯ ಮುಖಂಡ ಆರ್‍ಸಿಪಿ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

    ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನ ಸಂಸದರು ಭೇಟಿ ಮಾಡಿ ಮೇಲ್ಮನೆಯಲ್ಲಿ ಜೆಡಿಯು ನಾಯಕರಾಗಿ ಸಿಂಗ್ ಅವರನ್ನ ನೇಮಿಸಿರುವ ಬಗ್ಗೆ ಪತ್ರ ನೀಡಿದ್ದಾರೆ. ಆರ್‍ಸಿಪಿ ಸಿಂಗ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಂಬಿಕಸ್ಥ ನಾಯಕರಾಗಿದ್ದಾರೆ.

    ರಾಜ್ಯಸಭೆಯಲ್ಲಿ ಜಡಿಯು 10 ಸದಸ್ಯರನ್ನ ಹೊಂದಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆದಿದ್ದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿದ ಕಾರಣ ಕಳೆದ ರಾತ್ರಿ ಪಕ್ಷದ ರಾಜ್ಯಸಭಾ ಸದಸ್ಯ ಅನಿಲ್ ಅನ್ವರ್ ಅನ್ಸಾರಿ ಅವರನ್ನ ಅಮಾನತು ಮಾಡಲಾಗಿತ್ತು.

    ಬಿಜಾರದಲ್ಲಿ ಕಳೆದ ತಿಂಗಳು ನಿತೀಶ್ ಕುಮಾರ್ ಸರ್ಕಾರ ರಚಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ನಂತರ ಶರದ್ ಯಾದವ್ ಮತ್ತು ನಿತೀಶ್ ಕುಮಾರ್ ಅವರ ನಡುವೆ ಅಂತರ ಶುರುವಾಗಿತ್ತು.

    ಸದ್ಯ ಬಿಹಾರ ಪ್ರವಾಸದಲ್ಲಿರುವ ಶರದ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾನು ಇನ್ನೂ ಆರ್‍ಜೆಡಿ ಹಾಗೂ ಕಾಂಗ್ರೆಸ್ ಮಹಾಮೃತ್ರಿಯ ಭಾಗವಾಗಿದ್ದೇನೆ ಎಂದು ನಂಬಿದ್ದೇನೆ. ಜೆಡಿಯು ಕೇವಲ ನಿತೀಶ್ ಕುಮಾರ್ ಪಕ್ಷವಲ್ಲ. ನನ್ನ ಪಕ್ಷವೂ ಹೌದು ಎಂದಿದ್ದಾರೆ.

    ಮತ್ತೊಂದು ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿತೀಶ್ ಕುಮಾರ್ ಅವರನ್ನ ಎನ್‍ಡಿಎಗೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

     

  • ರಾಷ್ಟ್ರಪತಿ ರೇಸಲ್ಲಿ ಮಣ್ಣಿನ ಮಗ ದೇವೇಗೌಡ್ರ ಹೆಸರು- ಗೌಡ್ರಿಗೆ ಒಲಿಯುತ್ತಾ ಪ್ರಥಮ ಪ್ರಜೆ ಪಟ್ಟ?

    ರಾಷ್ಟ್ರಪತಿ ರೇಸಲ್ಲಿ ಮಣ್ಣಿನ ಮಗ ದೇವೇಗೌಡ್ರ ಹೆಸರು- ಗೌಡ್ರಿಗೆ ಒಲಿಯುತ್ತಾ ಪ್ರಥಮ ಪ್ರಜೆ ಪಟ್ಟ?

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರಿಗೆ ರಾಷ್ಟ್ರಪತಿ ಹುದ್ದೆ ಒಲಿದು ಬರುತ್ತಾ? ಇಂತಹ ಒಂದು ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಎನ್‍ಡಿಎ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಬೆಂಬಲದೊಂದಿಗೆ ದೇವೇಗೌಡರನ್ನ ಸರ್ವಸಮ್ಮತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ ಎಂಬ ಸುದ್ದಿ ದೆಹಲಿ ಮಟ್ಟದಲ್ಲಿ ವ್ಯಾಪಕವಾಗಿದೆ.

    ಇಂತಹ ಒಂದು ಸುದ್ದಿ ಹಿಂದೊಮ್ಮೆ ಬಂದಾಗ ದೇವೇಗೌಡರು ರಾಷ್ಟ್ರಪತಿ ಅಭ್ಯರ್ಥಿ ಆಗುವ ಸಾಧ್ಯತೆಯನ್ನ ಸಾರಾಸಗಟಾಗಿ ತಳ್ಳಿಹಾಕಿದ್ರು. ಹಾಗಿದ್ದರೂ ಕೂಡ ದೇವೇಗೌಡರನ್ನ ಎನ್‍ಡಿಎ ವಿರುದ್ಧ ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಆಶಯವನ್ನ ಬಿಜೆಪಿ ವಿರೋಧಿ ಗುಂಪು ರಾಷ್ಟ್ರಮಟ್ಟದಲ್ಲಿ ವ್ಯಕ್ತಪಡಿಸುತ್ತಿದೆ. ದೇವೇಗೌಡರು ಒಪ್ಪದಿದ್ದರೆ ಜೆಡಿಯು ಮುಖಂಡ ಶರದ್ ಯಾದವ್‍ರನ್ನ ಕಣಕ್ಕಿಳಿಸುವ ಸಾಧ್ಯತೆಯಿದೆ.

    ಈ ಬಗ್ಗೆ ಈಗಾಗಲೇ ಎಡರಂಗ ಹಾಗೂ ಜನತಾ ಪರಿವಾರದ ಮುಖಂಡರು ಸೋನಿಯಾ ಗಾಂಧಿ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮತ್ತೊಮ್ಮೆ ಕಣಕ್ಕಿಳಿಯಲು ಒಪ್ಪಿದ್ರೆ ಅವರನ್ನೇ ಅಭ್ಯರ್ಥಿಯಾಗಿ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.