Tag: Sharadamba Temple

  • ನಾಳೆ ರಕ್ತ ಚಂದ್ರ ಗ್ರಹಣ – ಶೃಂಗೇರಿ ಶಾರದೆ, ಹೊರನಾಡು ಅನ್ನಪೂರ್ಣೆಗೆ ನಿರಂತರ ಜಲಾಭಿಷೇಕ

    ನಾಳೆ ರಕ್ತ ಚಂದ್ರ ಗ್ರಹಣ – ಶೃಂಗೇರಿ ಶಾರದೆ, ಹೊರನಾಡು ಅನ್ನಪೂರ್ಣೆಗೆ ನಿರಂತರ ಜಲಾಭಿಷೇಕ

    – ಕಿಗ್ಗಾದ ಋಷ್ಯಶೃಂಗೇಶ್ವರ, ಕಳಸದ ಕಳಸೇಶ್ವರನಿಗೂ ವಿಶೇಷ ಪೂಜೆ

    ಚಿಕ್ಕಮಗಳೂರು: ಭಾನುವಾರ (ಸೆ.6) ನಡೆಯಲಿರುವ ರಕ್ತ ಚಂದ್ರ ಗ್ರಹಣ (Blood Moon Eclipse) ಹಿನ್ನೆಲೆ ಶೃಂಗೇರಿ ಶಾರದಾಂಭೆ (Sringeri Sharadamba Temple), ಹೊರನಾಡು ಅನ್ನಪೂರ್ಣೆಶ್ವರಿ ದೇವಸ್ಥಾನ (Horanadu Annapoorneshwari Temple) ಸೇರಿದಂತೆ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ನಿರಂತರ ಜಲಾಭಿಷೇಕ ನೆರವೇರಲಿದೆ.

    ಶೃಂಗೇರಿ ದೇಗುಲದಲ್ಲಿ ಮಧ್ಯಾಹ್ನ ಊಟ ಇರಲಿದೆ. ರಾತ್ರಿ ವೇಳೆ ಇರುವುದಿಲ್ಲ. ಪೂಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಗ್ರಹಣ ಆರಂಭವಾದಾಗಿನಿಂದ ಅಂತ್ಯದವರೆಗೂ ನಿರಂತರ ಜಲಾಭಿಷೇಕ ನಡೆಯಲಿದೆ. ಇದನ್ನೂ ಓದಿ: ನಾಳೆ ರಕ್ತಚಂದ್ರಗ್ರಹಣ – ಕೌತುಕದ ಬಗ್ಗೆ ವಿಜ್ಞಾನಿಗಳು ಹೇಳೋದೇನು?

    ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಮಧ್ಯಾಹ್ನ ಊಟ ಇರಲಿದೆ. ರಾತ್ರಿ ವೇಳೆ ಇರುವುದಿಲ್ಲ. ಪೂಜೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಗ್ರಹಣ ಆರಂಭವಾದಾಗಿನಿಂದ ಅಂತ್ಯದವರೆಗೂ ನಿರಂತರ ಜಲಾಭಿಷೇಕ ನಡೆಯಲಿದೆ.

    ಕಿಗ್ಗಾದ ಋಷ್ಯಶೃಂಗೇಶ್ವರ ಹಾಗೂ ಕಳಸದ ಕಳಸೇಶ್ವರ ದೇಗುಲದಲ್ಲೂ ವಿಶೇಷ ಪೂಜೆ ನಡೆಯಲಿದೆ. ಪ್ರಸಾದ ಇರುವುದಿಲ್ಲ. ಗ್ರಹಣದ ವೇಳೆ ಈಶ್ವರನಿಗೆ ನಿರಂತರ ಜಲಾಭಿಷೇಕ ನಡೆಯಲಿದೆ. ನಾಲ್ಕು ಪ್ರಮುಖ ದೇವಾಲಯದಲ್ಲೂ ಗ್ರಹಣ ಆರಂಭದಿಂದ ಅಂತ್ಯದವರೆಗೆ ನಿರಂತರ ಜಲಾಭಿಷೇಕ ನಡೆಯಲಿದೆ. ಇದನ್ನೂ ಓದಿ: ಸೆ.7 ರಕ್ತಚಂದ್ರಗ್ರಹಣ – ಗರ್ಭಿಣಿಯರು ಏನು ಮಾಡಬೇಕು? ತಜ್ಞ ವೈದ್ಯರ ಸಲಹೆಗಳೇನು?

  • ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

    ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

    ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಶಾರದಾಂಬೆ ದೇಗುಲದ (Sringeri Sharadamba Temple) ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಶ್ರೀಗಳು ಕಾಶ್ಮೀರದ (Kashmir) ತಿತ್ವಾಲ್‌ಗೆ (Titwal) ಭೇಟಿ ನೀಡಿದ್ದಾರೆ.

    ಶತಮಾನಗಳ ಹಿಂದೆ ಶಂಕರಾಚಾರ್ಯರು ಕಾಶ್ಮೀರದ ತಿತ್ವಾಲ್‌ನಲ್ಲಿ ಸ್ಥಾಪಿಸಿದ್ದ ಶಾರದಾಂಬೆ ದೇಗುಲ 1948ರಲ್ಲಿ ಸಂಪೂರ್ಣ ಹಾಳಾಗಿತ್ತು. ಕಾಶ್ಮೀರಿ ಪಂಡಿತರು 2-3 ಬಾರಿ ಶೃಂಗೇರಿಗೆ ಭೇಟಿ ನೀಡಿ, ಕಾಶ್ಮೀರದ ದೇಗುಲವನ್ನು ಪುನರ್ ಪ್ರತಿಷ್ಠಾಪಿಸಲು ಸಹಕಾರ ನೀಡುವಂತೆ ಮನವಿ ಮಾಡಿದ್ದರು. ಕಾಶ್ಮೀರಿ ಪಂಡಿತರ ಮನವಿಯಂತೆ ಶೃಂಗೇರಿ ಜಗದ್ಗುರುಗಳು ತಿತ್ವಾಲ್‌ನಲ್ಲಿ ಶೃಂಗೇರಿ ಶಾರದಾಂಬೆಯ ದೇಗುಲವನ್ನು ಪುನರ್ ಪ್ರತಿಷ್ಠಾಪಿಸಲು ಸಹಕಾರ ನೀಡಿದ್ದರು. ಅದರಂತೆ ಶೃಂಗೇರಿಯಿಂದಲೇ ಪಂಚಲೋಹದ ಶಾರದಾಂಬೆ ಮೂರ್ತಿ ನಿರ್ಮಾಣಗೊಂಡು ಕಾಶ್ಮೀರ ತಲುಪಿದೆ.

    ಇದೇ ಜನವರಿ 24ರಂದು ಶೃಂಗೇರಿಯಿಂದ ಹೊರಟ ಶಾರದಾಂಬೆ ವಿಗ್ರಹದ ರಥಯಾತ್ರೆಗೆ ಚಾಲನೆ ನೀಡಿದ್ದರು. 4,000 ಕಿ.ಮೀ ದೂರದ ತಿತ್ವಾಲ್‌ನಲ್ಲಿನ ಶೃಂಗೇರಿ ಶಾರದಾಂಬೆಗೆ ಸೋಮವಾರ ಶೃಂಗೇರಿಯ ಕಿರಿಯ ಶ್ರೀಗಳಾದ ವಿಧುಶೇಖರ ಶ್ರೀಗಳು ಪೂಜೆ ಸಲ್ಲಿಸಲಿದ್ದಾರೆ.

    ವಿಶೇಷ ವಿಮಾನದ ಮೂಲಕ ಕಾಶ್ಮೀರಕ್ಕೆ ಭೇಟಿ ನೀಡಿರುವ ವಿಧುಶೇಖರ ಶ್ರೀಗಳು ಅಲ್ಲಿಂದ ಕಾರಿನ ಮೂಲಕ ತಿತ್ವಾಲ್‌ನಲ್ಲಿನ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಇಂದು ವಿಧುಶೇಖರ ಶ್ರೀಗಳು ಶಾರದಾಂಬೆ ಮೂರ್ತಿಗೆ ಪೂಜೆ ಸಲ್ಲಿಸಲಿದ್ದಾರೆ. ವಿಧುಶೇಖರ ಶ್ರೀಗಳನ್ನು ಕಾಶ್ಮೀರಿ ಪಂಡಿತರಾದ ರವೀಂದ್ರ ಪಂಡಿತ್, ಪುರೋಹಿತ ಮೋಕಾಶಿ, ರವೀಂದ್ರ ಟಿಕ್ಕು ಮೋತಿಲಾಲ್ ಪೂರ್ಣಕುಂಭದ ಮೂಲಕ ಬರಮಾಡಿಕೊಂಡರು. ಇದನ್ನೂ ಓದಿ: ಗ್ಯಾರಂಟಿ ಜಾರಿಗೆ ಇಂದೇ ಗೈಡ್‍ಲೈನ್ಸ್- ಉಚಿತ ವಿದ್ಯುತ್ ಗ್ಯಾರಂಟಿ ಬಗ್ಗೆ ಮಾರ್ಗಸೂಚಿ?

    ಶಾರದಾಂಬೆ ವಿಗ್ರಹದ ಪುನರ್ ಪ್ರತಿಷ್ಠಾಪನೆಗೆ ಶೃಂಗೇರಿ ಮಠದಿಂದಲೇ ಋತ್ವಿಜರ ತಂಡವನ್ನು ಕಳಿಸಲಾಗಿದೆ. ವಾಸ್ತುಹೋಮ, ಕಲಾ ಹೋಮ ಸೇರಿದಂತೆ ತಿತ್ವಾಲ್‌ನ ಶಾರದಾಂಬೆ ದೇಗುಲದಲ್ಲಿ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭಗೊಂಡು ವಿಧುಶೇಖರ ಶ್ರೀಗಳ ಸಮ್ಮುಖದಲ್ಲಿ ಶಾರದಾಂಬೆ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಕುಂಭಾಭಿಷೇಕ ಹಾಗೂ ಕಲಶೋತ್ಸವ ಕಾರ್ಯಕ್ರಮ ನಡೆಯಲಿದೆ.

    ದೇಶದ ತುದಿ ಹಾಗೂ ಗಡಿಯಲ್ಲಿ 75 ವರ್ಷಗಳ ಬಳಿಕ ಶಾರದಾಂಬೆ ದೇಗುಲ ಪುನರ್ ಪ್ರತಿಷ್ಠಾಪನೆಯಾಗಿರುವುದು ಐತಿಹಾಸಿಕ ಘಟನೆ ಎಂದು ಶಾರದಾಂಬೆ ಭಕ್ತರು ಹಾಗೂ ಹಿಂದೂ ಸಮುದಾಯ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಅಭಿಷೇಕ್ ಮದುವೆಗೆ ಬಂದು ಶುಭ ಹಾರೈಸಿದ ರಜನಿಕಾಂತ್

  • ಶೃಂಗೇರಿಯ ಕಪ್ಪೆ ಶಂಕರ ದೇವಾಲಯ, ಗಾಂಧಿ ಮೈದಾನ ಮುಳುಗಡೆ

    ಶೃಂಗೇರಿಯ ಕಪ್ಪೆ ಶಂಕರ ದೇವಾಲಯ, ಗಾಂಧಿ ಮೈದಾನ ಮುಳುಗಡೆ

    ಚಿಕ್ಕಮಗಳೂರು : 48 ಗಂಟೆಗಳ ರೆಡ್‌ ಅಲರ್ಟ್‌ ಘೋಷಣೆಯ ಬೆನ್ನಲ್ಲೇ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ.

    ಶೃಂಗೇರಿಯ ಗಾಂಧಿ ಮೈದಾನ, ಕಪ್ಪೆ ಶಂಕರ ದೇವಾಲಯ ಮುಳುಗಡೆಯಾಗಿದೆ. ಪ್ರವಾಸಿಗರ ವಾಹನ ನಿಲುಗಡೆಯ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ.

    ಮೂಡಿಗೆರೆ ತಾಲೂಕಿನ ಕೆಂಬತ್ ಮಕ್ಕಿಯಲ್ಲಿ ಮಳೆಗೆ 6 ಎಕರೆ ಬಾಳೆ ತೋಟ ಸಂಪೂರ್ಣ ನಾಶವಾಗಿದೆ. ಜಿಲ್ಲೆಯಲ್ಲಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಪಾತ್ರದ ಜನರಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಲಾಗಿದೆ.

    ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಭದ್ರಾ ನದಿ ಬೋರ್ಗರೆದು ಹರಿಯುತ್ತಿದೆ. ಮೂಡಿಗೆರೆ ತಾಲೂಕಿನ ಕಳಸ- ಹೊರನಾಡು ಸಂಪರ್ಕ ಸೇತುವೆಯಾಗಿರುವ ಹೆಬ್ಬಾಳೆ ಸೇತುವೆ ಮುಳುಗಡೆ ಭೀತಿ ಎದುರಿಸುತ್ತಿದೆ. ಸೇತುವೆ ಮುಳುಗಡೆಗೆ 1 ಅಡಿಯಷ್ಟೇ ಬಾಕಿಯಿದೆ.

    ಕೊಪ್ಪ ತಾಲ್ಲೂಕಿನಲ್ಲಿ ಭಾರೀ ಮಳೆ‌ಯಾಗುತ್ತಿದ್ದು ಮಳೆ‌-ಗಾಳಿಯಿಂದ ನೆಲಕ್ಕೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಭಾರೀ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು ರಸ್ತೆ ಸಂಪರ್ಕ ಕಡಿತಗೊಂಡಿದೆ. ರಸ್ತೆಗೆ ಅಡ್ಡಾಲಾಗಿ ಬಿದ್ದ ಪರಿಣಾಮ ಕೊಪ್ಪ ಶೃಂಗೇರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಮರ ತೆರವು ಕಾರ್ಯ ನಡೆಯುತ್ತಿದೆ.