ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಅವರ ರಾಜೀನಾಮೆ ವಿಷಯ ಭಾರೀ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್ ಪಾಟೀಲ್ (Dr.Sharan Prakash Patil) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉಪರಾಷ್ಟ್ರಪತಿ ಅನಿರೀಕ್ಷಿತ ರಾಜೀನಾಮೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಬಿಜೆಪಿ (BJP) ಆರೋಗ್ಯ ಚೆನ್ನಾಗಿಲ್ಲದಿರುವುದೇ ಇದಕ್ಕೆ ಕಾರಣ. ಬಿಜೆಪಿಯಲ್ಲಿರುವ ಸರ್ವಾಧಿಕಾರ ಧೋರಣೆಯೇ ಜಗದೀಪ್ ಧನಕರ್ ಅವರ ರಾಜೀನಾಮೆಗೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ತೆಲಂಗಾಣ; ಮಗಳಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿ ತಂದೆ ಕ್ರೌರ್ಯ
ಇಡೀ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಿದರೆ ಬಿಜೆಪಿಯಲ್ಲಿ ಏನೋ ಸರಿಯಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಇಡೀ ಪಕ್ಷ ಇಬ್ಬರ ಕೈಯಲ್ಲಿದೆ. ಸರ್ವಾಧಿಕಾರ ಹೆಚ್ಚಾಗಿರುವುದರಿಂದ ಬೇರೆ ಯಾವ ನಾಯಕರೂ ಮಾತನಾಡದೇ ಸುಮ್ಮನಿದ್ದಾರೆ. ಜನರಿಗೆ ಇದು ಗೊತ್ತಾಗುವುದಿಲ್ಲ ಎಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಆದರೆ ಇಡೀ ಪ್ರಕರಣದಿಂದ ಬಿಜೆಪಿಯ ಬಣ್ಣ ಸಂಪೂರ್ಣ ಬಯಲಾಗಿದೆ ಎಂದು ದೂರಿದರು. ಇದನ್ನೂ ಓದಿ: ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ
ಬಿಜೆಪಿಯಲ್ಲಿ ಪ್ರಜಾಪ್ರಭುತ್ವ, ನೀತಿ-ನಿಯಮಗಳು ಇಲ್ಲ. ಕೇಂದ್ರ ಸರ್ಕಾರ ಕೂಡ ಸಂವಿಧಾನ ಪಾಲನೆ ಮಾಡುತ್ತಿಲ್ಲ. ಸರ್ಕಾರವನ್ನು ಮುನ್ನಡೆಸುತ್ತಿರುವವರು ಇದುವರೆಗೂ ಒಂದಾದರೂ ಸುದ್ದಿಗೋಷ್ಠಿ ಮಾಡಿದ್ದಾರಾ? ಏಕಪಕ್ಷೀಯ ನಿರ್ಧಾರಗಳೇ ಹೆಚ್ಚಾಗಿ ತೆಗೆದುಕೊಳ್ಳಲಾಗುತ್ತದೆ. ಇಂಥ ಅಪಸವ್ಯಗಳಿಂದಲೇ ಬಿಜೆಪಿಯಲ್ಲಿ ಅನಾರೋಗ್ಯ ಪರಿಸ್ಥಿತಿ ಇದೆ ಎಂದು ಟೀಕಿಸಿದರು. ಇದನ್ನೂ ಓದಿ: ತಾಂತ್ರಿಕ ಸಮಸ್ಯೆಯಿಂದ ದೋಹಾಗೆ ಹೊರಟಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕ್ಯಾಲಿಕಟ್‌ಗೆ ವಾಪಸ್
ಬೆಂಗಳೂರು: ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ (Skill Development Department) ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ (Sharan Prakash Patil) ಘೋಷಿಸಿದರು.
ವಿಕಾಸಸೌಧದಲ್ಲಿ ಗುರುವಾರ ಸಂಜೆ ನಡೆದ ಇಲಾಖಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ, ಸಚಿವರು, ಹೊಸ ವ್ಯವಸ್ಥೆಗೆ ಸಮಗ್ರ ಮಾರ್ಗಸೂಚಿಗಳನ್ನು ರೂಪಿಸುವಂತೆ ಕೌಶಲ್ಯ ಅಭಿವೃದ್ಧಿ ಕಾರ್ಯದರ್ಶಿ ಏಕ್ರೂಪ್ ಕೌರ್ ಅವರಿಗೆ ಸೂಚಿಸಿದರು.
ಸಚಿವಾಲಯದ ಅಡಿಯಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆ (ಡಿಇಟಿ) ಅತಿ ಹೆಚ್ಚು ಉದ್ಯೋಗಸ್ಥರನ್ನು ಹೊಂದಿದೆ. ಪ್ರಭಾವ ಮತ್ತು ಶಿಫಾರಸುಗಳ ಮೂಲಕ ಆಗುತ್ತಿದ್ದ ವರ್ಗಾವಣೆ ಪ್ರಕ್ರಿಯೆಗಳಿಗೆ ಕೊನೆ ಹಾಡಬೇಕಾಗಿದೆ. ಎಲ್ಲಾ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಬೇಕು. ಇದು ಸಿಬ್ಬಂದಿಗೆ ಆದ್ಯತೆಯ ಸ್ಥಳಗಳಲ್ಲಿ ಹುದ್ದೆಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು. ಇದನ್ನೂ ಓದಿ: ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮವಿವಾಹ – ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ನವಜೋಡಿ
ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳಿಗೆ ರಾಜ್ಯ ಸರ್ಕಾರವು ಜೂನ್ 16 ಗಡುವು ನಿಗದಿಪಡಿಸಿದೆ ಎಂದು ಸಚಿವರು ತಿಳಿಸಿದರು. ಸರ್ಕಾರಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿರುವ ಹಿರಿಯ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಶೋಕಾಸ್ ನೋಟಿಸ್‌ಗಳನ್ನು ಹೊರಡಿಸಲು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ವಿಳಂಬವಿಲ್ಲದೆ ವರ್ಗಾಯಿಸಲು ಇದೇ ಸಂದರ್ಭದಲ್ಲಿ ಇಲಾಖಾ ಕಾರ್ಯದರ್ಶಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್‌ನವ್ರಿಗೆ ಪಾಕ್ ಫ್ರೀ ವೀಸಾ ಕೊಡುತ್ತೆ, ಮಂಜುನಾಥ್ ನೋಡ್ಕೊಂಡು ಬರಲಿ: ಯತ್ನಾಳ್ ಕಿಡಿ
ಯುವಜನರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಸಾಧಿಸಲು ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC), ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (KGTTI) ಮತ್ತು ರಾಷ್ಟ್ರೀಯ ಜೀವನೋಪಾಯ ಮಿಷನ್ (NLM) ನಂತಹ ಸಂಸ್ಥೆಗಳಿಗೆ ಯುವನಿಧಿ ಯೋಜನೆ ಮತ್ತು ಉದ್ಯೋಗ ಮೇಳಗಳಿಗೆ ಅರ್ಜಿಗಳನ್ನು ಸಲ್ಲಿಸಲು ಅಲ್ಪಾವಧಿಯ ಮತ್ತು ದೀರ್ಘಾವಧಿಯ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಅಳವಡಿಸಲು ಸಚಿವರು ನಿರ್ದೇಶಿಸಿದರು.
ಪದವೀಧರರಾಗಿದ್ದರೂ, ಉದ್ಯೋಗ ಮೇಳಗಳಲ್ಲಿ ಅನೇಕ ಅಭ್ಯರ್ಥಿಗಳು ತಾಂತ್ರಿಕ ಕೌಶಲ್ಯಗಳ ಕೊರತೆಯಿಂದಾಗಿ ತಿರಸ್ಕರಿಸಲ್ಪಡುತ್ತಾರೆ. ಈ ಅಂತರವನ್ನು ತರಬೇತಿಯೊಂದಿಗೆ ಕಡಿಮೆಗೊಳಿಸಲು ನಾವು ಯುವನಿಧಿ ಆಕಾಂಕ್ಷಿಗಳು ಮತ್ತು ಉದ್ಯೋಗ ಮೇಳ ಅರ್ಜಿದಾರರ ವಿಶಾಲ ಡೇಟಾಬೇಸ್ ಅನ್ನು ಬಳಸಬೇಕು ಎಂದು ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.
– ಕರ್ನಾಟಕದ ಕೌಶಲ್ಯಪೂರ್ಣ ಕಾರ್ಯಪಡೆಯತ್ತ ಕಣ್ಣು ನೆಟ್ಟ ಜಪಾನ್
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕದ ಕೌಶಲ್ಯಪೂರ್ಣ ವೃತ್ತಿಪರರ ಅಗತ್ಯವಿದೆ ಎಂದು ಜಪಾನ್ ಮನವಿ ಮಾಡಿದೆ. ಈ ನಿಟಿನಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಜಪಾನ್ ಜೊತೆ ಸಹಕಾರಕ್ಕೆ ಬದ್ಧ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್(Sharan Prakash Patil) ತಿಳಿಸಿದರು.
ಬುಧವಾರ ಬೆಂಗಳೂರಿನ(Bengaluru) ವಿಕಾಸ ಸೌಧದಲ್ಲಿ ಜಪಾನ್‌ನ ಕಾನ್ಸುಲ್-ಜನರಲ್(Consul General of Japan) ನಕೇನ್ ಸ್ಟಮೊ ಅವರೊಂದಿಗೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ತಾಂತ್ರಿಕ ಮತ್ತು ವಿಶೇಷ ಕೋರ್ಸ್ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ: ಸಿಎಂ ಕಿಡಿ
ನಮ್ಮ ಸರ್ಕಾರವು ಈಗಾಗಲೇ ಕೇಂದ್ರೀಕೃತ ಕೌಶಲ್ಯವರ್ಧನೆಯ ಮೂಲಕ ಐಟಿಐ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಮುಂದಾಗಿದೆ. ಜಾಗತಿಕ ಉದ್ಯೋಗ(Global Employment) ಅವಕಾಶಗಳ ಮೇಲೆ ಒತ್ತು ನೀಡುವ ಮೂಲಕ ಜಪಾನೀಸ್, ಜರ್ಮನ್ ಮತ್ತು ಇಂಗ್ಲಿಷ್ ಸೇರಿದಂತೆ ವಿದೇಶಿ ಭಾಷಾ ತರಬೇತಿಯನ್ನು ಪರಿಚಯಿಸುವ ಯೋಜನೆಯನ್ನು ಘೋಷಿಸಿದೆ. ಇಲಾಖೆಯ ನಿಯೋಗವು ಶೀಘ್ರದಲ್ಲೇ ಜಪಾನ್‌ಗೆ ಭೇಟಿ ನೀಡಿ ಅದರ ಕಾರ್ಯಪಡೆಯ ಮಾದರಿಯನ್ನು ಅಧ್ಯಯನ ಮಾಡಲಿದೆ ಎಂದರು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್ – 31 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಜಪಾನ್‌ನ ಕಾನ್ಸುಲ್-ಜನರಲ್ ನಕೇನ್ ಸ್ಟಮೊ ಅವರು ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ವೃತ್ತಿಪರರರು, ನರ್ಸ್ಗಳ ಅಗತ್ಯವಿದೆ. ಜಪಾನ್‌ನಲ್ಲಿ ಕಾರ್ಯಪಡೆಯ ಕೊರತೆ ಇದೆ. ವಿಶೇಷವಾಗಿ ಆರೋಗ್ಯ ರಕ್ಷಣೆ, ಐಟಿ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಕೌಶಲ್ಯಗಾರರ ಅಗತ್ಯವಿದೆ. ರಾಜ್ಯದಿಂದ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಉತ್ಸುಕವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತ ಕೆಣಕಿ ಹೋಳಾದ ಪಾಕಿಸ್ತಾನ – ಸ್ವತಂತ್ರ ದೇಶ ಘೋಷಿಸಿಕೊಂಡ ಬಲೂಚಿಸ್ತಾನ
ಜಪಾನ್‌ನಲ್ಲಿ ಈಗ ವಯಸ್ಸಾದವರ ಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆ ಕ್ಷೀಣಿಸುತ್ತಿದೆ. 2030ರ ವೇಳೆಗೆ, ಐಟಿ ವಲಯದಲ್ಲಿ 7,90,000 ವೃತ್ತಿಪರರ ಕೊರತೆ ಎದುರಾಗುವ ನಿರೀಕ್ಷೆಯಿದೆ. ವೈಟ್-ಕಾಲರ್ ತಜ್ಞರ ಜೊತೆ ಕೌಶಲ್ಯಪೂರ್ಣ ತಂತ್ರಜ್ಞರ ಅಗತ್ಯವಿದೆ. ದಾದಿಯರ ಅಗತ್ಯವೂ ಹೆಚ್ಚುತ್ತಿದೆ ಎಂದರು. ಇದನ್ನೂ ಓದಿ: ಸೋಫಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ
ಬೆಂಗಳೂರಿನಲ್ಲಿ ಜಪಾನ್‌ನ ಕಂಪನಿಗಳು ಸ್ಥಳೀಯ ನರ್ಸಿಂಗ್ ಪದವೀಧರರ ಸುಗಮ ಉದ್ಯೋಗಕ್ಕೆ ಅನುಕೂಲವಾಗುವಂತೆ ಸಿಎಸ್‌ಆರ್ ಉಪಕ್ರಮಗಳ ಅಡಿಯಲ್ಲಿ ಜಪಾನೀಸ್ ಭಾಷೆ ಮತ್ತು ಕೌಶಲ್ಯ ತರಬೇತಿಯನ್ನು ನೀಡಲು ಸಿದ್ಧವಾಗಿವೆ. ಕೈಗಾರಿಕಾ ಉತ್ಪಾದನೆ, ನಿರ್ಮಾಣ, ಹಡಗು ನಿರ್ಮಾಣ, ಯಂತ್ರೋಪಕರಣಗಳ ನಿರ್ವಹಣೆ, ಆಟೋ ದುರಸ್ತಿ, ವಾಯುಯಾನ, ಆತಿಥ್ಯ, ಸಾರಿಗೆ, ರೈಲ್ವೆ, ಕೃಷಿ, ಮೀನುಗಾರಿಕೆ, ಜಲಚರ ಸಾಕಣೆ, ಆಹಾರ ಸೇವೆಗಳು, ಅರಣ್ಯ ಮತ್ತು ಮರ ಸಂಸ್ಕರಣೆ ಮುಂತಾದ ಕ್ಷೇತ್ರಗಳಲ್ಲಿ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: Boycott Turkey – ಸೇಬು, ಚೆರ‍್ರಿ, ಮಾರ್ಬಲ್‌ಗಳ ಆಮದು ಬ್ಯಾನ್‌ಗೆ ನಿರ್ಧಾರ
ಈ ನಿಟ್ಟಿನಲ್ಲಿ ಕರ್ನಾಟಕದೊಂದಿಗೆ ಜಪಾನ್ ಸಹಕರಿಸಲು ಸಿದ್ಧವಾಗಿದೆ. ಕಾರ್ಯಪಡೆಯ ಅಭಿವೃದ್ಧಿಯಲ್ಲಿ ಎಲ್ಲಾ ರೀತಿಯ ಬೆಂಬಲವನ್ನು ನೀಡಲಾಗುವುದು ಎಂದರು.
ಬೆಂಗಳೂರು : 10 ಲಕ್ಷ ಅಭ್ಯರ್ಥಿಗಳಿಗೆ ಯುವನಿಧಿ (Yuva Nidhi) ಯೋಜನೆ ಅಡಿ ಸಹಾಯ ಮಾಡುವುದು ಸರ್ಕಾರದ ಗುರಿ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ (Sharan Prakash Patil) ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಿ.ಎಸ್. ಅರುಣ್ ಯುವನಿಧಿ ಯೋಜನೆ ಬಗ್ಗೆ ಪ್ರಶ್ನೆ ಕೇಳಿದ್ರು.
ಡಿ.ಎಸ್. ಅರುಣ್ ಮಾತಾಡಿ ಯುವನಿಧಿ ಯೋಜನೆ ಅಡಿ ಐದೂವರೆ ಲಕ್ಷ ಅಭ್ಯರ್ಥಿಗಳಿಗೆ 450 ಕೋಟಿ ಹಣ ಖರ್ಚು ಮಾಡೋದಾಗಿ ಸರ್ಕಾರ ಹೇಳಿತ್ತು. ಆದರೆ 5.5 ಲಕ್ಷ ವಿದ್ಯಾರ್ಥಿಗಳು ಪೈಕಿ 2.5 ಲಕ್ಷ ಜನ ಮಾತ್ರ ಅರ್ಜಿ ಹಾಕಿದ್ದಾರೆ. ಅದರಲ್ಲೂ 1.74 ಲಕ್ಷ ಅರ್ಜಿಗಳಿಗೆ ಮಾತ್ರ ಹಣ ಹಾಕಲಾಗಿದೆ. ಯುವನಿಧಗೆ ಅರ್ಜಿ ಹಾಕೋದು ಹೇಗೆ ಅಂತ ಅಭ್ಯರ್ಥಿಗಳಿಗೆ ಗೊತ್ತಿಲ್ಲ. ಯುವನಿಧಿ ಯೋಜನೆ ಅಡಿ ಕೊಟ್ಟ ಹಣ ಸರಿಯಾಗಿ ಉಪಯೋಗ ಆಗ್ತಿದೆಯಾ ಅಂತ ಮೌಲ್ಯಮಾಪನ ಆಗಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಯೋಜನೆ ಬಗ್ಗೆ ಮಾಹಿತಿ ಇಲ್ಲ.ಅರ್ಜಿ ತುಂಬೋವಾಗ ಸಮಸ್ಯೆ ಅಂತ ಬರ್ತಿದೆ. ಅನೇಕ ವಿವಿಗಳಲ್ಲಿ ಅಂಕಪಟ್ಟಿ ಕೊಡ್ತಿಲ್ಲ. ಅಂಕಪಟ್ಟಿ ಇಲ್ಲದೆ ಹೋದ್ರೆ ಯೋಜನೆಗೆ ಅರ್ಜಿ ಹಾಕಲು ಆಗೊಲ್ಲ. ಈ ಬಗ್ಗೆ ಕ್ರಮವಾಗಬೇಕು ಅಂತ ಒತ್ತಾಯ ಮಾಡಿದರು. ಇದನ್ನೂ ಓದಿ: ಕೇವಲ 1 ಪಂದ್ಯವಾಡಿ 869 ಕೋಟಿ ನಷ್ಟ – ಭಾರೀ ಸಂಕಷ್ಟದಲ್ಲಿ ಪಾಕ್ ಬೋರ್ಡ್
ಇದಕ್ಕೆ ಸಚಿವ ಶರಣು ಪ್ರಕಾಶ್ ಪಾಟೀಲ್ ಉತ್ತರ ನೀಡಿ, ಯುವನಿಧಿ ಯೋಜನೆ ಅಡಿ ಈವರೆಗೆ 2,62,20,7 ಅಭ್ಯರ್ಥಿಗಳು ನೋಂದಣಿ ಮಾಡಿದ್ದಾರೆ. ಇದರಲ್ಲಿ 1,74,170 ಫಲಾನುಭವಿಗಳಗೆ ಯುವನಿಧಿ ಹಣ ಹಾಕಲಾಗಿದೆ. 16,648 ಫಲಾನುಭವಿಗಳಿಗೆ ಹಣ ಹಾಕೋದು ಬಾಕಿ ಇದೆ. ಎಷ್ಟೇ ಜನ ನೋಂದಣಿ ಆದರು ನಾವು ಅವರಿಗೆ ಹಣ ಕೊಡ್ತೀವಿ. ಯುವನಿಧಿ ಈಗ ಪ್ರಾರಂಭಿಕ ಹಂತದಲ್ಲಿ ಇದೆ. ನಮ್ಮ ಟಾರ್ಗೆಟ್ 10 ಲಕ್ಷ ಅಭ್ಯರ್ಥಿಗಳಿಗೆ ಕೊಡಬೇಕು ಅಂತ ಇದೆ. ಅರ್ಜಿ ಹಾಕೋಕೆ ಮುಕ್ತ ಅವಕಾಶ ಇದ್ದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಹಾಕಬಹುದು ಅಂತ ತಿಳಿಸಿದರು.
1,74,170 ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆ ಅಡಿ ಹಣ ಹಾಕಲಾಗ್ತಿದೆ. ಡಿಗ್ರಿ ಮುಗಿಸಿ 6 ತಿಂಗಳು ಆಗಬೇಕು. ಆದಾದ ನಂತರ ಹಣ ಪಾವತಿ ಆಗಲಿದೆ. ಯುವನಿಧಿ ಯೋಜನೆ ಅಡಿ ಕೊಡ್ತಿರೋ ಹಣ ಸರಿಯಾಗಿ ಬಳಕೆ ಆಗ್ತಿದೆಯಾ ಅಂತ ಮೌಲ್ಯಮಾಪನ ಮಾಡಲಾಗ್ತಿದೆ. ಮೌಲ್ಯಮಾಪನಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ಅಭ್ಯರ್ಥಿಗಳು ಹಣ ಬೇಕಾ ಬೇಡಾ ಅಂತ ಮಾಹಿತಿ ಕೊಡಲು ಈ ಹಿಂದೆ ಪ್ರತಿ ತಿಂಗಳು ಮಾಹಿತಿ ಕೊಡಬೇಕಾಗಿತ್ತು. ಈ ತಿಂಗಳಿಂದ 3 ತಿಂಗಳಿಗೊಮ್ಮೆ ಅಭ್ಯರ್ಥಿಗಳು ಮಾಹಿತಿ ಅಪ್ ಲೋಡ್ ಮಾಡಲು ಅವಕಾಶ ಕೊಡಲಾಗ್ತಿದೆ. ನಮ್ಮ ಸರ್ಕಾರದ ಬದ್ದತೆ ಇದೆ. ನಾವು ಕೊಟ್ಟಂತೆ ಯುವನಿಧಿ ಯೋಜನೆ ಅನುಷ್ಠಾನ ಮಾಡ್ತೀವಿ ಅಂತ ತಿಳಿಸಿದರು.
– ಬಿಮ್ಸ್ ಒಂದರಲ್ಲೇ 150 ಪ್ರಕರಣ ವರದಿ – ಮಕ್ಕಳ ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ
ಕಲಬುರಗಿ: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ ಬ್ರೇಕ್ ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ.
ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು (Elderly Parents) ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ (Hospital) ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಬೀದರ್‌ನಲ್ಲಿ ಏಕಾಏಕಿ ಕಾಗೆಗಳ ಸರಣಿ ಸಾವು – ಹಕ್ಕಿ ಜ್ವರದ ಆತಂಕ?
ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ.
ಈ ಸಂಬಂಧ ಸಚಿವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಲವು ವಿಷಯಗಳನ್ನು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ಈ ಕುರಿತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದ್ದಾರೆ.
ತಮ್ಮ ಮಕ್ಕಳು ನಮ್ಮನ್ನು ನೋಡಿಕೊಳ್ಳಲು ಆಗದೇ, ತೊರೆದಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳಿಂದ ನಮ್ಮನ್ನು ಇಲ್ಲಿ ಬಿಟ್ಟಿದ್ದಾರೆ. ನಮ್ಮ ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ ಮಕ್ಕಳು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಸೇರಿಸಿ ಹೊರಟುಹೋಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಆಶಯ ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂಥ ಪರಿತ್ಯಕ್ತ ಹಿರಿಯ ನಾಗರಿಕರನ್ನು ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ.
ಹಿರಿಯ ನಾಗರಿಕರ ಕಾಯ್ದೆಯಡಿ ಕಾನೂನು ಕ್ರಮ
ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
“ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ” ಎಂದು ಡಾ. ಪಾಟೀಲ್ ಹೇಳಿದ್ದಾರೆ.
ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಲಾಗಿದೆ.
ಬೆಳಗಾವಿ: ಪ್ರತಿ ತಿಂಗಳು ಎಷ್ಟು ಮಂದಿ ಪದವೀಧರರ ಕೈಗೆ ಯುವನಿಧಿ (Yuva Nidhi) ಹಣ ಸೇರುತ್ತಿದೆ ಎಂಬ ಮಾಹಿತಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ (Sharan Prakash Patil) ಪರಿಷತ್‌ನಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ (Vidhana Parishad) ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನವೀನ್ ಅವರು ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 8 ಲಕ್ಷ ವಿದ್ಯಾರ್ಥಿಗಳು ಪದವಿ ಮುಗಿಸಿದ್ದಾರೆ. ಆದರೆ ಯುವನಿಧಿಗೆ ನೋಂದಣಿ ಆಗಿರೋದು ಕಡಿಮೆ ಆಗಿದೆ ಯಾಕೆ? ಯುವನಿಧಿಗೆ ಪ್ರತಿ ತಿಂಗಳು ಹಣ ಕೊಡ್ತಿದ್ದೀರಾ? ಎಷ್ಟು ಹಣ ಕೊಡ್ತಿದ್ದೀರಾ ಅಂತ ಪ್ರಶ್ನೆ ಮಾಡಿದರು.
ಇದಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್, ಈವರೆಗೆ 1,81,699 ಪದವೀಧರು ಯುವನಿಧಿಗೆ ನೋಂದಣಿ ಮಾಡಿಕೊಂಡಿದ್ದಾರೆ. ಇವರ ಪೈಕಿ 1,45,978 ಪದವೀಧರಿಗೆ ಹಣ ಕೊಡಲಾಗಿದೆ ಎಂದು ಉತ್ತರಿಸಿದರು. ಇದನ್ನೂ ಓದಿ: ಮೊದಲ ದಿನವೇ ಬಿಜೆಪಿ ಶಾಸಕರಲ್ಲಿ ಸಮನ್ವಯದ ಕೊರತೆ
ನಮ್ಮ ಗ್ಯಾರಂಟಿಯಲ್ಲಿ 2023-24 ರ ಅವಧಿಯಲ್ಲಿ ವಿದ್ಯಾರ್ಥಿಗಳು ಪದವಿ ಮುಗಿಸಿರಬೇಕು. ಉದ್ಯೋಗ ಸಿಗದೇ 6 ತಿಂಗಳು ಆಗಿದ್ದವರಿಗೆ ಮಾತ್ರ ಈ ಯೋಜನೆ ಅನ್ವಯ ಅಗುತ್ತದೆ. ಯುವನಿಧಿಗೆ ಅವರೇ ಅರ್ಜಿ ಹಾಕಬೇಕು. ಅರ್ಜಿ ಹಾಕಿದವರಿಗೆ ಯುವನಿಧಿ ಕೊಡುತ್ತಿದ್ದೇವೆ ಎಂದರು.
1,81,669 ಪದವೀಧರ ಪೈಕಿ 1,45,978 ಪದವೀಧರಿಗೆ ಹಣ ಪಾವತಿ ಮಾಡಲಾಗಿದೆ. ಉಳಿದವರ ದಾಖಲೆ ಪರಿಶೀಲನೆ ಆಗಿಲ್ಲ. ಉಳಿದವರು ಉನ್ನತ ಶಿಕ್ಷಣಕ್ಕೆ ಹೋಗಿದ್ದಾರೆ. ಹೀಗಾಗಿ ಉಳಿದವರಿಗೆ ಹಣ ಹಾಕಿಲ್ಲ. ಪ್ರತಿ ತಿಂಗಳು ಯುವನಿಧಿ ಹಣ ಹೋಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅನುದಾನ ಕೊಟ್ಟವರ ಕಡೆ ನಾನು: ಕಾಂಗ್ರೆಸ್ ಪರ ಎಸ್‌ಟಿಎಸ್ ಬ್ಯಾಟಿಂಗ್
ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಯವನಿಧಿಯನ್ನು ಪ್ರಕಟಿಸಲಾಗಿತ್ತು. ಪದವೀಧರರಿಗೆ ಪ್ರತಿತಿಂಗಳು 3,000 ರೂ. ಡಿಪ್ಲೋಮಾ ಪದವೀಧರರಿಗೆ 1,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಘೋಷಿಸಿತ್ತು.
ಚಿತ್ರದುರ್ಗ: ಸರ್ಕಾರಿ ಕಾಲೇಜಲ್ಲಿ ಸೀಟು ಸಿಕ್ಕರೆ ಎಲ್ಲಾ ಉಚಿತ ಅನ್ನೋ ಮಾತಿದೆ. ಆದರೆ ಚಿತ್ರದುರ್ಗದ ಸರ್ಕಾರಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪಾಠ ಕೇಳಲು ಕಟ್ಟಡವೇ ಇಲ್ಲ. ಹೀಗಾಗಿ ಇಷ್ಟಪಟ್ಟು ನರ್ಸಿಂಗ್ ಮಾಡಲು ಬಂದ ವಿದ್ಯಾರ್ಥಿಗಳು ಕಿಷ್ಕಿಂದೆಯಂತಹ ಕೊಠಡಿಯಲ್ಲಿ ಹರಸಾಹಸಪಟ್ಟು ಓದೋದೇ ದೊಡ್ಡ ಸವಾಲಾಗಿದೆ.
ಚಿತ್ರದುರ್ಗ (Chitradurga) ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಬಿಎಸ್ಸಿ ನರ್ಸಿಂಗ್ ಕಾಲೇಜಲ್ಲಿ ಕಳೆದ ಮೂರು ವರ್ಷಗಳಿಂದಲೂ ಸೂಕ್ತ ಮೂಲಭೂತ ಸೌಕರ್ಯಗಳಿಲ್ಲ. ಸುಸಜ್ಜಿತ ಕಟ್ಟಡ, ಕೊಠಡಿ, ಲ್ಯಾಬ್ ವ್ಯವಸ್ಥೆಯೂ ಇಲ್ಲ. ಬಿಎಸ್‌ಸಿ ನರ್ಸಿಂಗ್ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಒಂದೇ ಕಟ್ಟಡದಲ್ಲಿ ನಡೆಯುತ್ತಿದೆ. ಸುಮಾರು 240 ವಿದ್ಯಾರ್ಥಿಗಳು ಒಂದೇ ಕೊಠಡಿಯೊಳಗೆ ಕುಳಿತು ಪಾಠ ಕೇಳುತ್ತಿದ್ದಾರೆ. ಇದನ್ನೂ ಓದಿ: ಒಂದೇ ದಿನ ಮೂವರು ಗರ್ಭಿಣಿಯರು ಸಾವು – ಇನ್ನೂ ಬಳ್ಳಾರಿಗೆ ಮುಖ ಮಾಡದ ಜಮೀರ್
ಈ ಬಗ್ಗೆ ಕ್ಷೇತ್ರದ ಶಾಸಕ ವೀರೇಂದ್ರ, ಡಿಸಿ ವೆಂಕಟೇಶ್ ಹಾಗು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ (Sharan Prakash Patil) ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಲಿಲ್ಲ. ಇದರಿಂದ ಮನನೊಂದ ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆ ಸರ್ಜನ್‌ಗೆ ಕೇಳಿದರೆ ಎಲ್ಲೋ ಒಂದು ಮೂಲೆಯಲ್ಲಿ ಸುಮ್ಮನೆ ಪಾಠ ಕೇಳಿ ಅಂತಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಈ ಕಾಲೇಜಿನಲ್ಲಿ ಓದುವ ವಿದ್ಯಾರ್ಥಿಗಳನ್ನು ಕೇವಲ ಉಚಿತ ಸೇವೆಗಾಗಿ ಬಳಸಿಕೊಳ್ಳುವ ಆರೋಗ್ಯ ಇಲಾಖೆ, ಇವರ ಸಂಕಷ್ಟ ಬಗೆಹರಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಸರ್ಜನ್ ಡಾ.ರವಿಂದ್ರ ಅವರನ್ನು ಕೇಳಿದರೆ ಹೊಸ ಮೆಡಿಕಲ್ ಕಾಲೇಜು ಕಾಮಗಾರಿ ಭರದಿಂದ ಸಾಗಿದೆ. ಹೀಗಾಗಿ ತಾತ್ಕಾಲಿಕವಾಗಿ ಆಸ್ಪತ್ರೆಯಲ್ಲಿ ಕಾಲೇಜು ನಡೆಸಲಾಗುತ್ತಿದೆ. ಆದರೆ ವಿದ್ಯಾರ್ಥಿಗಳು ಇದನ್ನು ಸಹಿಸಿಕೊಂಡು ಓದಲಾಗದೇ ಸಮಸ್ಯೆ ಸೃಷ್ಟಿಸಿದ್ದಾರೆಂದು ಕಾರಣ ಹೇಳುತ್ತಾರೆ. ಇದನ್ನೂ ಓದಿ: ವಿದೇಶಿ ಸ್ವತ್ತು, ಆದಾಯ ಘೋಷಿಸದಿದ್ರೆ 10 ಲಕ್ಷ ರೂ. ದಂಡ – ಕೊನೇ ದಿನ ಯಾವಾಗ?
ಬೆಂಗಳೂರು: ಮಂಕಿಪಾಕ್ಸ್ ಕಾಯಿಲೆಗೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಬೆಡ್ ಹಾಸಿಗೆ ಮೀಸಲು ಇಡಲಾಗಿದೆ ಎಂದು ವೈದ್ಯಕೀಯ ಸಚಿವ ಶರಣ ಪ್ರಕಾಶ್ ಪಾಟೀಲ್ (Dr Sharan Prakash Patil) ತಿಳಿಸಿದ್ದಾರೆ.
ಜನರು ಯಾರು ಆತಂಕ ಪಡುವ ಅಗತ್ಯ ಇಲ್ಲ. ಮಂಕಿಪಾಕ್ಸ್ ನಮ್ಮ ದೇಶ ಮತ್ತು ನಮ್ಮ ರಾಜ್ಯದಲ್ಲಿ ಪತ್ತೆ ಆಗಿಲ್ಲ. ಹೀಗಿದ್ದರೂ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಹಾಸಿಗೆ ಮೀಸಲು ಇರಿಸಲಾಗಿದೆ. ತೀವ್ರ ನಿಗಾ ಘಟಕ (ಐಸಿಯು) ಬೆಡ್ ಸಿದ್ಧತೆಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಉಪ ಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು- ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ಆಯೋಜನೆ
ಈಗಾಗಲೇ ವಿಕ್ಟೋರಿಯಾದಲ್ಲಿ ಕಾಯಿಲೆ ಟೆಸ್ಟ್ ಮಾಡುವುದಕ್ಕೆ ವ್ಯವಸ್ಥೆ ಇದೆ. ಟೆಸ್ಟ್ ಜೊತೆಗೆ ಐಸೋಲೇಟ್‌ಗೆ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಏರ್ಪೋರ್ಟ್ ಗಳಲ್ಲಿ ಕ್ರಮಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಕ್ರಮವಹಿಸಲಿದೆ. ಸದ್ಯ 50 ಬೆಡ್ ಮೀಸಲು ಇಟ್ಟಿದ್ದು ಅಗತ್ಯ ಬಿದ್ದರೆ ಹೆಚ್ಚುವರಿ ಬೆಡ್ ಕೂಡ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುವೆ: ಡಿಸಿಎಂ ಟಾಂಗ್
ಬೆಂಗಳೂರು: ಕಡಿಮೆ ಬೆಲೆಯ ಜನೌಷಧಿ (Janaushadhi) ಕೇಂದ್ರದ ವಿಚಾರದಲ್ಲಿ ರಾಜಕೀಯ ಆರಂಭವಾಯಿತೇ? ಮೋದಿ ವಿರೋಧಿಸೋ ಸಲುವಾಗಿಯೇ ಜನೌಷಧಿ ಕೇಂದ್ರಕ್ಕೆ ಸರ್ಕಾರ ಬ್ರೇಕ್ ಹಾಕಲು ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.
ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ (Sharan Prakash Patil) ಅವರು ನೀಡಿದ ಒಂದು ಹೇಳಿಕೆಯಿಂದ ಈ ಪ್ರಶ್ನೆ ಈಗ ಎದ್ದಿದೆ. ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ (Government Hospital) ಹೊಸ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳು ಉಚಿತವಾಗಿ ಸಿಗುವಾಗ ಜನೌಷಧಿ ಕೇಂದ್ರ ಯಾಕೆ ಬೇಕು? ಇದರಿಂದ ಆಸ್ಪತ್ರೆಯ ಒಳಗಡೆ ವರ್ತುಲ ಸೃಷ್ಟಿಯಾಗುತ್ತದೆ. ಹಿಂದೆ ಯಾರು ಅನುಮತಿ ಕೊಟ್ಟಿದ್ದಾರೋ ಗೊತ್ತಿಲ್ಲ. ನಾನು ಹೊಸ ಜನೌಷಧಿ ಕೇಂದ್ರ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಖಡಕ್ ಆಗಿಯೇ ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲೇ ಉಚಿತವಾಗಿ ಮಾತ್ರೆ ಕೊಡುತ್ತೇವೆ. ಹೀಗಾಗಿ ಜನರು ದುಡ್ಡು ನೀಡಿ ಮಾತ್ರೆ ಖರೀದಿ ಮಾಡುವುದು ಯಾಕೆ ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ (Medical Education Department) ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1,200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharan Prakash Patil) ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ಬುಧವಾರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‌ಗಳ (Nurse) ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ ವೈದ್ಯಕೀಯ ಕಾಲೇಜು ಸಂಸ್ಥೆಗಳ ಮುಖ್ಯಸ್ಥರು ನೇಮಕಾತಿ ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಸಚಿವರು, ಮುಂಬರುವ ಗ್ರೂಪ್-ಎ ಮತ್ತು ದಾದಿಯರ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ಪಾಟೀಲ್ ನಿರ್ದೇಶನ ನೀಡಿದರು. ಇದನ್ನೂ ಓದಿ: ತಲೆಗೂದಲು ಕಟ್, ರಕ್ತ ಹೊರತೆಗೆತ, ಕಠಿಣ ವ್ಯಾಯಾಮ, ಆಹಾರದಿಂದ ದೂರ – ತೂಕ ಇಳಿಸಲು ಏನೆಲ್ಲಾ ಮಾಡಿದ್ರು ವಿನೇಶ್?
ರಾಜ್ಯಾದ್ಯಂತ 22 ವೈದ್ಯಕೀಯ ಕಾಲೇಜುಗಳು ಮತ್ತು 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುತ್ತಿವೆ. ಈ ಹುದ್ದೆಗಳನ್ನು ನಿಯಮದಂತೆ ಯಾವುದೇ ಮುಲಾಜಿಗೊಳಗಾಗದೇ ಭರ್ತಿ ಮಾಡಬೇಕೆಂದು ಸಚಿವರು ತಾಕೀತು ಮಾಡಿದರು.
ಕೆಇಎ ಮೂಲಕ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಸರ್ಕಾರ ಕಳೆದೆರಡು ವರ್ಷಗಳ ಹಿಂದೆಯೇ ಕಳುಹಿಸಿತ್ತು. ಆದಾಗ್ಯೂ, ಸರಿಯಾದ ಸಿ ಅಂಡ್ ಆರ್ ನಿಯಮಗಳು, ರೋಸ್ಟರ್ ಸಿಸ್ಟಮ್ ಇಲ್ಲದಿದ್ದಲ್ಲಿ ಪರೀಕ್ಷೆಯನ್ನು ನಡೆಸುವುದು ಕಷ್ಟ ಎಂದು ಕೆಇಎ ಉತ್ತರಿಸಿದೆ ಎಂಬ ಮಾಹಿತಿಯನ್ನು ಸಭೆಯಲ್ಲಿ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ದಾದಿಯರ ನೇಮಕಾತಿಗೆ ಅನ್ವಯವಾಗುವ ಸಿ ಮತ್ತು ಆರ್ ನಿಯಮಗಳನ್ನು ಅನುಸರಿಸುವಂತೆ ಸಚಿವರು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಜಂಟಿ ಕಾರ್ಯದರ್ಶಿಗೆ ಸೂಚಿಸಿದರು.
ನೇಮಕಾತಿ ನಿಲುವಳಿಯನ್ನು ಕೆಇಎಗೆ ಹಸ್ತಾಂತರಿಸುವ ಸುಗಮ ಪ್ರಕ್ರಿಯೆಗಾಗಿ, ಪರೀಕ್ಷೆಗಳನ್ನು ನಡೆಸಲು ಕೆಇಎಗೆ ಪಠ್ಯಕ್ರಮಕ್ಕಾಗಿ ತಜ್ಞರ ಸಮಿತಿಯನ್ನು ರಚಿಸುವಂತೆ ಸಚಿವರು ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಅವರಿಗೆ ಸೂಚಿಸಿದರು.