Tag: Sharan Pumpwell

  • ಹೈಕೋರ್ಟ್‌ ಆದೇಶ ಉಲ್ಲಂಘನೆ – ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ ವೆಲ್‌ಗೆ 2 ಲಕ್ಷ ದಂಡ

    ಹೈಕೋರ್ಟ್‌ ಆದೇಶ ಉಲ್ಲಂಘನೆ – ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್ ವೆಲ್‌ಗೆ 2 ಲಕ್ಷ ದಂಡ

    ಚಿತ್ರದುರ್ಗ: ಹೈಕೋರ್ಟ್‌ ಆದೇಶ ಉಲ್ಲಂಘನೆ ಹಿನ್ನೆಲೆ ವಿಶ್ವ ಹಿಂದೂ ಪರಿಷತ್​​ ಸಹ ಕಾರ್ಯದರ್ಶಿ ಶರಣ್ ಪಂಪ್​​ವೆಲ್​​ಗೆ (Sharan Pumpwell) ಹೈಕೋರ್ಟ್ 2 ಲಕ್ಷ ರೂ. ದಂಡ (Court Fine) ವಿಧಿಸಿದೆ.

    ರಾಜ್ಯ ಲೀಗಲ್ ಸರ್ವೀಸ್ ಅಥಾರಿಟಿಗೆ 1 ಲಕ್ಷ ರೂ, ಮತ್ತು ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 1 ಲಕ್ಷ ರೂ ನೀಡಲು ಬುಧವಾರ ಕೋರ್ಟ್‌ (Karnataka Highcourt) ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಗೆಳೆಯನ ಬರ್ತ್‌ಡೇ ಸಂಭ್ರಮದಲ್ಲಿದ್ದ ಯುವಕ ಹೊಳೆಗೆ ಕಾಲುಜಾರಿ ಬಿದ್ದು ನೀರುಪಾಲು 

    ಇತ್ತೀಚೆಗೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನಲೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ಶರಣ್ ಪಂಪ್​​ವೆಲ್​​ಗೆ ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ಪ್ರಶ್ನಸಿ ಶರಣ್ ಪಂಪ್​​ವೆಲ್​​ ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೆಲ ಷರತ್ತು ವಿಧಿಸಿ ಜಿಲ್ಲಾಡಳಿತದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿತ್ತು. ಇದನ್ನೂ ಓದಿ: `ಬಿಗ್ ಬಾಸ್’ಗೆ ರಿಲೀಫ್ ಕೊಡುತ್ತಾ ಸರ್ಕಾರ? – ಜಿಲ್ಲಾಡಳಿತಕ್ಕೆ ಜಾಲಿವುಡ್ ಕೊಟ್ಟ ಅರ್ಜಿಯಲ್ಲಿ ಏನಿದೆ..?

    ಸೆ.13ರಂದು ಮಹಾಗಣಪತಿ ಶೋಭಾಯಾತ್ರೆ ವೇಳೆ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಅಂದು ಬೆಳಗ್ಗೆ 10:30 ರಿಂದ 12:30ರ ವರೆಗೆ ದರ್ಶನಕ್ಕೆ ಕೋರ್ಟ್‌ ಅವಕಾಶ ಕಲ್ಪಿಸಿತ್ತು. ಆದ್ರೆ ಪಂಪ್‌ವೆಲ್‌ 12:45ರ ವರೆಗೆ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು. ಅಲ್ಲದೇ ಶೋಭಾಯಾತ್ರೆಯಲ್ಲಿ ಭಾಷಣ ಕೂಡ ಮಾಡಿದ್ದರು. ಇದರಿಂದ ಆದೇಶ ಉಲ್ಲಂಘನೆ ಬಗ್ಗೆ ಪೊಲೀಸರು ಹೈಕೋರ್ಟ್‌ ಗಮನಕ್ಕೆ ತಂದಿದ್ದರು. ಬಳಿಕ ಆದೇಶ ಉಲ್ಲಂಘಿಸಿದ್ದಕ್ಕೆ ಹೈಕೋರ್ಟ್ ದಂಡ ವಿಧಿಸಿ ಆದೇಶ ಹೊರಡಿಸಿತು. ಇದನ್ನೂ ಓದಿ: ಬಿಗ್‌ ಬಾಸ್‌ ತಂಡಕ್ಕೆ ಮತ್ತೆ ಶಾಕ್‌ – ಕೆಲವೇ ಹೊತ್ತಲ್ಲಿ ಈಗಲ್‌ಟನ್ ರೆಸಾರ್ಟ್‌ನಿಂದ 17 ಸ್ಪರ್ಧಿಗಳು ಶಿಫ್ಟ್ ಬೇರೆಡೆಗೆ ಶಿಫ್ಟ್‌

  • ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಬಂಧನ – ಜಾಮೀನು

    ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಬಂಧನ – ಜಾಮೀನು

    -ಕದ್ರಿ ಪೊಲೀಸ್‌ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಜಮಾವಣೆ

    ಮಂಗಳೂರು: ಸುಹಾಸ್ ಶೆಟ್ಟಿ (Suhas Shetty) ಹತ್ಯೆ ದಿನ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ (Sharan Pumpwell) ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ.

    ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಕದ್ರಿ ಠಾಣೆಯಲ್ಲಿ (Kadri Police Station) ಎಫ್‌ಐಆರ್ ದಾಖಲಾಗಿತ್ತು. ಶರಣ್ ಪಂಪ್‌ವೆಲ್ ಬಂಧನ ಬೆನ್ನಲ್ಲೇ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ. ಸದ್ಯ ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ಕದ್ರಿ ಠಾಣೆಯಿಂದ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಮಾನ್ಸೂನ್ ಅಬ್ಬರ – ಕೇರಳದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    ಈ ಕುರಿತು ವಿಹೆಚ್‌ಪಿ ಮುಖಂಡ ಪ್ರದೀಪ್ ಸರಿಪಲ್ಲ ಮಾಧ್ಯಮಗಳೊಂದಿಗೆ ಮಾತನಾಡಿ, ಮುಸ್ಲಿಮರನ್ನು ಓಲೈಕೆ ಮಾಡೋಕೆ ಸರ್ಕಾರ ಪೊಲೀಸರಿಗೆ ಒತ್ತಡ ತಂದಿದೆ. ಸುಹಾಸ್ ಹತ್ಯೆಯ ದಿನ ಬಂದ್‌ಗೆ ಕರೆ ನೀಡಿರೋದಕ್ಕೆ ಕೇಸ್ ಆಗಿತ್ತು. ಕೇಸ್ ಆಗಿ 20 ದಿನಗಳೇ ಕಳೆದುಹೋಗಿದೆ. ಈಗ ಬಂಧನ ಮಾಡಿರೋದು ಯಾಕೆ? ಇವತ್ತಿನ ಘಟನೆ ಹಿನ್ನೆಲೆ ಮುಸ್ಲಿಮರನ್ನು ಓಲೈಕೆ ಮಾಡೋಕೆ ಬಂಧನ ಮಾಡಿದ್ದಾರೆ. ಇದು ಜಾಮೀನಾಗುವ ಕೇಸ್. ಜೈಲಿಗೆ ಹಾಕಲ್ಲ ಎಂದು ಕಮಿಷನರ್ ಹೇಳಿದ್ದಾರೆ. ಶರಣ್ ಪಂಪ್ ವೆಲ್‌ನನ್ನು ಜೈಲಿಗೆ ಹಾಕಿದರೆ ಮುಂದೆ ಆಗುವ ಘಟನೆಗೆ ಸರ್ಕಾರವೇ ನೇರ ಹೊಣೆ ಎಂದು ಸರ್ಕಾರ ಮತ್ತು ಪೊಲೀಸರಿಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: 1200 ರೂ. ಬೆಲೆಯ ಟಿಕೆಟ್‌ 6000ಕ್ಕೆ ಸೇಲ್‌ – ಐಪಿಎಲ್‌ ಟಿಕೆಟ್‌ ಮಾರುತ್ತಿದ್ದ ಟೆಕ್ಕಿ ಬಂಧನ

    ಶರಣ್ ಪಂಪ್‌ವೆಲ್ ಬಂಧಿಸಿದ ಪೊಲೀಸರು ಮಂಗಳೂರಿನ ಬೋಂದೆಲ್‌ನ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಶರಣ್ ಪಂಪ್‌ವೆಲ್‌ಗೆ ಜಾಮೀನು ನೀಡಿದ್ದಾರೆ.

  • ಮಸೀದಿ, ಮದರಸಾಗಳಲ್ಲಿ ಎನ್‍ಐಎ ದಾಳಿ ನಡೆಸಿದ್ರೆ ರಾಮೇಶ್ವರಂ ಕೆಫೆ ಸ್ಫೋಟ ಆರೋಪಿ ಪತ್ತೆಯಾಗಬಹುದು: ಶರಣ್ ಪಂಪ್‍ವೆಲ್

    ಮಸೀದಿ, ಮದರಸಾಗಳಲ್ಲಿ ಎನ್‍ಐಎ ದಾಳಿ ನಡೆಸಿದ್ರೆ ರಾಮೇಶ್ವರಂ ಕೆಫೆ ಸ್ಫೋಟ ಆರೋಪಿ ಪತ್ತೆಯಾಗಬಹುದು: ಶರಣ್ ಪಂಪ್‍ವೆಲ್

    ಮಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಸ್ಫೋಟ ಪ್ರಕರಣದಲ್ಲಿ ಆರೋಪಿ ಪತ್ತೆಗೆ ವಿಶ್ವ ಹಿಂದೂ ಪರಿಷತ್ ಸಾಥ್ ಕೊಡಲಿದೆ ಎಂದು ಪರಿಷತ್‍ನ (Vishwa Hindu Parishad) ಕಾರ್ಯದರ್ಶಿ ಶರಣ್ ಪಂಪ್‍ವೆಲ್ (Sharan Pumpwell) ಹೇಳಿದ್ದಾರೆ.

    ಮಂಗಳೂರಿನಲ್ಲಿ (Mangaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಹಿಂದೂ ಪರಿಷತ್ ಆರೋಪಿಯ ಪತ್ತೆಗಾಗಿ ಪೊಲೀಸರಿಗೆ ಸಹಕಾರ ನೀಡಲಿದೆ. ನಮ್ಮ ಸೋಶಿಯಲ್ ಮೀಡಿಯಾದಲ್ಲಿ ಆರೋಪಿ ಫೋಟೊ ಪ್ರಕಟಿಸುತ್ತೇವೆ. ಈ ಮೂಲಕ ಅಧಿಕಾರಗಳ ಕೆಲಸಕ್ಕೆ ನಾವು ಸಹಕಾರ ನೀಡಲಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ- ಕಲಬುರಗಿಯಲ್ಲೇ ಬೀಡುಬಿಟ್ಟಿರೋ NIA

    ಆರೋಪಿ ಬಳ್ಳಾರಿಗೆ ಹೋಗಿ ಮಸೀದಿಗೆ ಹೋಗಿರುವುದು ಪತ್ತೆಯಾಗಿದೆ. ಮಸೀದಿ ಬಳಿ ಬಟ್ಟೆ ಬದಲಿಸಿ ಬಳಿಕ ಭಟ್ಕಳಕ್ಕೆ ಬಂದಿರುವುದು ಪತ್ತೆಯಾಗಿದೆ. ಹೀಗಾಗಿ ಭಟ್ಕಳ ಸೇರಿ ರಾಜ್ಯದಾದ್ಯಂತ ಮದರಸಾ, ಮಸೀದಿಗಳಲ್ಲಿ ತನಿಖೆ ನಡೆಸಿ ಶೋಧ ನಡೆಸಬೇಕು. ಭಟ್ಕಳದ ಮಸೀದಿಗಳಲ್ಲಿ ತನಿಖೆ ಮಾಡಿದರೆ ಬಾಂಬರ್ ಬಗ್ಗೆ ಮಾಹಿತಿ ಸಿಗಬಹುದು. ಭಟ್ಕಳದಲ್ಲಿ ಭಯೋತ್ಪಾದಕರಿಗೆ ಸಂಪರ್ಕ ಇರುವುದು ಬಹಳಷ್ಟು ಬಾರಿ ದೃಢವಾಗಿದೆ ಎಂದಿದ್ದಾರೆ.

    ಭಯೋತ್ಪಾದಕರಿಗೆ ಮಸೀದಿ, ಮದರಸಾಗಳೇ ತಾಣವಾಗುತ್ತಿದೆ. ಮದರಸಾ, ಮಸೀದಿಗಳಿಗೆ ಎನ್‍ಐಎ ದಾಳಿ ನಡೆಸಿದರೆ ಆರೋಪಿ ಪತ್ತೆಯಾಗಬಹುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹೊಸದಾಗಿ ಮಂಡ್ಯದ ಗಂಡು ರೆಡಿ ಮಾಡಿದ್ದೇವೆ: ಡಿಕೆಶಿ

  • 2 ತಿಂಗಳ ಹಿಂದೆಯೇ ಚೈತ್ರಾ ಕುಂದಾಪುರ ವಿಚಾರ ನನ್ನ ಗಮನಕ್ಕೆ ಬಂದಿತ್ತು: ಶರಣ್ ಪಂಪ್‍ವೆಲ್

    2 ತಿಂಗಳ ಹಿಂದೆಯೇ ಚೈತ್ರಾ ಕುಂದಾಪುರ ವಿಚಾರ ನನ್ನ ಗಮನಕ್ಕೆ ಬಂದಿತ್ತು: ಶರಣ್ ಪಂಪ್‍ವೆಲ್

    ಮಂಗಳೂರು: ಚೈತ್ರಾ ಕುಂದಾಪುರ (Chaitra Kundapura) ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ (Sharan Pumpwell) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದು ಹೇಳಿದರು.

    ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಚೈತ್ರಾ ಕುಂದಾಪುರ ನಮ್ಮ ಸಂಘಟನೆಯವರಲ್ಲ. ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು. ಇಂತಹ ಘಟನೆಗಳಿಗೆ ನಮ್ಮ ಸಂಘಟನೆ ಆಸ್ಪದ ಕೊಡೋದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮೀನು ಮಾರುತ್ತಿದ್ದ ಅಮ್ಮನಿಗೆ ಸರ್ಪ್ರೈಸ್ ಕೊಟ್ಟ ಮಗ- ಕಣ್ಣೀರಾಕಿದ ತಾಯಿ!

    ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದ್ದು, ಸೆಪ್ಟೆಂಬರ್ 25 ಕ್ಕೆ ಚಿತ್ರದುರ್ಗದಲ್ಲಿ ಚಾಲನೆ ಸಿಗಲಿದೆ. ಅಕ್ಟೋಬರ್ 10 ರಂದು ಉಡುಪಿಯಲ್ಲಿ ಸಮಾರೋಪ ನಡೆಯಲಿದೆ. 2 ಸಾವಿರ ಇರುವ ಬಜರಂಗದಳ ಘಟಕವನ್ನು 5 ಸಾವಿರ ಮಾಡೋ ಗುರಿ ಇದಾಗಿದೆ. ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಜೊತೆಗೆ ವಿವಿಧ ಉದ್ದೇಶದಿಂದ ಈ ರಥಯಾತ್ರೆ ಕೈಗೊಳ್ಳಲಾಗಿದೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿಯಲ್ಲಿ ಪ್ರಚೋದನಕಾರಿ ಭಾಷಣ – ಶರಣ್ ಪಂಪ್‍ವೆಲ್ ವಿರುದ್ಧ ಕೇಸ್

    ಉಡುಪಿಯಲ್ಲಿ ಪ್ರಚೋದನಕಾರಿ ಭಾಷಣ – ಶರಣ್ ಪಂಪ್‍ವೆಲ್ ವಿರುದ್ಧ ಕೇಸ್

    ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಇಬ್ಬರು ಹಿಂದೂ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.

    ವಿಶ್ವ ಹಿಂದೂ ಪರಿಷತ್ ಮುಖಂಡ (VHP) ಶರಣ್ ಪಂಪ್ ವೆಲ್ (Sharan Pumpwell) ಹಾಗೂ ಬಜರಂಗದಳ (Bajarang Dal) ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದ ಪಾಕಿರ್ಂಗ್ ಏರಿಯಾದಲ್ಲಿ ಗುರುವಾರ ವಿಹೆಚ್‍ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮಾತನಾಡಿದ್ದ ಈ ಇಬ್ಬರು ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ ವೆಲ್ ಕರೆ ನೀಡಿದ್ದರು. ಬಳಿಕ ಉಡುಪಿ (Udupi) ಕಾಲೇಜಿನ ಪ್ರಕರಣವನ್ನು ಉಲ್ಲೇಖಿಸಿ ದಿನೇಶ್ ಮೆಂಡನ್ ಸಹ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಇಬ್ಬರ ವಿರುದ್ಧ ಉಡುಪಿ ನಗರ ಠಾಣಾ ಎಸ್‍ಐ ಪುನೀತ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿವಾದಾತ್ಮಕ ಭಾಷಣ – ಶರಣ್ ಪಂಪ್‌ವೆಲ್‌ ವಿರುದ್ಧ FIR ದಾಖಲು

    ವಿವಾದಾತ್ಮಕ ಭಾಷಣ – ಶರಣ್ ಪಂಪ್‌ವೆಲ್‌ ವಿರುದ್ಧ FIR ದಾಖಲು

    ತುಮಕೂರು: ಬಜರಂಗದಳ ಶೌರ್ಯ ಸಂಚಲನ ಕಾರ್ಯಕ್ರಮದಲ್ಲಿ ವಿವಾದಾತ್ಮಕ ಭಾಷಣ ಮಾಡಿದ್ದ ವಿಎಚ್‌ಪಿ (VHP) ಮುಖಂಡ  ಶರಣ್ ಪಂಪ್‌ವೆಲ್‌ (Sharan Pumpwell) ವಿರುದ್ಧ ತುಮಕೂರು (Tumakuru) ನಗರದ ತಿಲಕ್ ಪಾರ್ಕ್ ಪೊಲೀಸ್ (Police) ಠಾಣೆಯಲ್ಲಿ ಎಫ್‍ಐಆರ್ (FIR) ದಾಖಲಾಗಿದೆ.

    ತುಮಕೂರು ನಗರದ ಬಾರ್ ಲೈನ್ ರೋಡ್ ನಿವಾಸಿ ಸೈಯದ್ ಬುರ್ಹಾನ್ ಉದ್ದೀನ್ ಎಂಬುವರು ಶರಣ್ ಪಂಪ್‌ವೆಲ್‌ ವಿರುದ್ಧ ತಿಲಕ್ ಪಾರ್ಕ್ ಠಾಣೆ ಹಾಗೂ ಎಸ್‍ಪಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತಿಲಕ್ ಪಾರ್ಕ್ ಪೊಲೀಸರು ಶರಣ್ ಪಂಪ್ ವೆಲ್‌ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ: ಉಮಾಭಾರತಿ

    ಕಳೆದ ಜ.28 ರಂದು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಶೌರ್ಯ ಸಂಚಲನ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶರಣ್ ಪಂಪ್‌ವೆಲ್‌, ಹಿಂದೂಗಳು ಶಕ್ತಿ ಹೀನರಲ್ಲ. ಏಟಿಗೆ ಎದುರೇಟು ಕೊಟ್ಟಿರುವ ಹಲವಾರು ಉದಾಹರಣೆಗಳು ಇವೆ ಎಂದಿದ್ದರು. ಅಲ್ಲದೇ 59 ಜನ ಕರಸೇವಕರು ಪ್ರಯಾಣಿಸುತಿದ್ದ ರೈಲಿಗೆ ಬೆಂಕಿಹಾಕಿ ಅವರನ್ನು ಜೀವಂತ ಸುಡಲಾಗಿತ್ತು. ಅದಕ್ಕೆ ಪ್ರತಿಕಾರ ಎಂಬಂತೆ ಗುಜರಾತ್ ಗಲಭೆ ನಡೆಯಿತು. ಇದು ಹಿಂದೂಗಳ ಶೌರ್ಯದ ಪ್ರತೀಕ ಎಂದು ವಿವಾದಾತ್ಮಕ ಭಾಷಣ ಮಾಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah)  ಮಂಗಳೂರನ್ನು (Mangaluru) ಹಿಂದೂತ್ವದ ಫ್ಯಾಕ್ಟರಿ ಅಂತಾರೆ, ಅದೇ ರೀತಿ ತುಮಕೂರು ಹಾಗೂ ಇಡೀ ಕರ್ನಾಟಕವನ್ನು ಹಿಂದೂತ್ವದ ಫ್ಯಾಕ್ಟರಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ದೇವರ ಮಾತು ಕೇಳಿ ಹೆಂಡತಿ ಬಿಟ್ಟ ಗಂಡ – ನ್ಯಾಯಾಲಯದಲ್ಲಿ ಮತ್ತೆ ಒಂದಾದರು

    ಈ ಭಾಷಣದ ತುಣುಕು ಮಾಧ್ಯಮಗಳಲ್ಲಿ ಪ್ರಸಾರವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಶರಣ್ ಪಂಪ್‌ವೆಲ್‌ ತುಮಕೂರಿನಲ್ಲಿ ಶಾಂತಿಕದಡಲು ಯತ್ನಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಯದ್ ಬುರ್ಹಾನ್ ಉದ್ದೀನ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶರಣ್ ಪಂಪ್‌ವೆಲ್‌ ವಿರುದ್ಧ ಕಲಾಂ 157, ಸಿಆರ್‌ಪಿಸಿ (a)(b) ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k