Tag: Sharanprakash Patil

  • ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯಿಂದ ಬಿಮ್ಸ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ!

    ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯಿಂದ ಬಿಮ್ಸ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ!

    ಬೆಳಗಾವಿ: ಬಡವರಿಗೆ ಉಪಯೋಗವಾಗಲಿ ಅಂತ ಸರ್ಕಾರ ಕೊಟ್ಯಂತರ ರೂ. ಆಸ್ಪತ್ರೆಗಳ ಮೇಲೆ ಖರ್ಚು ಮಾಡ್ತಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಅಲ್ಲಿನ ಆಡಳಿತ ಮಂಡಳಿ ಹೇಗೆ ಕೆಲಸ ಮಾಡ್ತಿದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಬಿಮ್ಸ್‌ನಲ್ಲಿ (BIMS Hospital) 3 ತಿಂಗಳು ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೊಬ್ಬಳು ಯಾರಿಗೂ ಅನುಮಾನ ಬರದಂತೆ ಕೆಲಸ ಮಾಡಿದ್ದಾಳೆ.

    ಕಾರವಾರ (Karwar) ಮೂಲದ ಯುವತಿ ವೈದ್ಯರಿಗೆ ಗೊತ್ತಾಗದಂತೆ ಕಳೆದ ಮೂರು ತಿಂಗಳಿನಿಂದ ಇದೇ ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾಳೆ. ಇದಕ್ಕೆ ಯಾರು ಅವಕಾಶ ಕೊಟ್ರು? ಬರೊಬ್ಬರಿ ಈಕೆ ಮೂರು ತಿಂಗಳು ಕೆಲಸ ಮಾಡಿದ್ರೂ ಸಹ ಆಸ್ಪತ್ರೆ ವೈದ್ಯರಾಗಲಿ ಅಥವಾ ಆಡಳಿತ ಮಂಡಳಿಯಾಗಲಿ ಈಕೆ ಯಾರು ಎಲ್ಲಿಂದ ಬಂದಿದ್ದಾಳೆ, ಎಂದು ಪರಿಶೀಲನೆ ನಡೆಸದೆ ಅಸಡ್ಡೆ ತೋರಿಸಿದ್ದಾರೆ. ಬಡವರ ಆಸ್ಪತ್ರೆಗೆ ವೈಟ್ ಎಪ್ರಾನ್ ಹಾಕಿಕೊಂಡು ಬರೋರೆಲ್ಲ ವೈದ್ಯರಾಗಿ ಬಿಡಬಹುದು ಎಂದು ಜನ ಮಾತನಾಡಿಕೊಳ್ತಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ | ನಕಲಿ ಐಎಎಸ್ ಅಧಿಕಾರಿ ಅರೆಸ್ಟ್‌ – ಐಷಾರಾಮಿ ಕಾರುಗಳು ಸೀಜ್‌

    ವೈದ್ಯ ವಿದ್ಯಾರ್ಥಿನಿಗೆ ಆಸ್ಪತ್ರೆ ಸಿಬ್ಬಂದಿ ಹಲವು ಬಾರಿ ಪ್ರಶ್ನಿಸಲು ಮುಂದಾಗಿದ್ದರಂತೆ. ಆಗೆಲ್ಲ ಆಕೆ ಬಿಮ್ಸ್ ನಿರ್ದೇಶಕ ಅಶೋಕ್ ಶೆಟ್ಟಿಯವರ ಹೆಸರು ಹೇಳಿ ಹೆದರಿಸುತ್ತಿದ್ದಳಂತೆ. ಗುರುವಾರ (ಸೆ.4) ಚಿಕಿತ್ಸೆ ನೀಡುವಾಗಲೇ ಭದ್ರತಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಳು. ಈ ಮಾಹಿತಿಯನ್ನು ವೈದ್ಯರಿಗೆ ತಿಳಿಸಿದ್ದರು. ಬಳಿಕ ವಿಚಾರಿಸಿದಾಗ ಆಕೆಯೊಬ್ಬ ವಿದ್ಯಾರ್ಥಿನಿ ಎಂಬುದು ತಿಳಿದುಬಂದಿದೆ.

    ಈ ಬಗ್ಗೆ ಬಿಮ್ಸ್‌ ನಿರ್ದೇಶಕ ಅಶೋಕ್ ಶೆಟ್ಟಿಯಾಗಲಿ, ಆಸ್ಪತ್ರೆಯ ಆರ್‌ಎಂಒ ಆಗಲಿ ಈವರೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೇ ನೀಡಿಲ್ಲ. ಪ್ರತಿಕ್ರಿಯಿಸಿಸಲು ನಿರಾಕರಿಸಿದ್ದಾರೆ. ಈ ಕುರಿತು ಸಂಬಂಧಪಟ್ಟವರು ಮೇಲೆ ಕ್ರಮ ಆಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಸಂಬಂಧ `ಪಬ್ಲಿಕ್ ಟಿವಿ’ ವರದಿ ಬಳಿಕ ಆಡಳಿತ ಮಂಡಳಿ ಮೂವರ ಸಮಿತಿ ರಚಿಸಿ ತನಿಖೆಗೆ ಸೂಚಿಸಿದೆ. ಇದನ್ನೂ ಓದಿ: ಹೈದರಾಬಾದ್‌ | ಬೃಹತ್‌ ಮಾದಕ ವಸ್ತು ಜಾಲ ಪತ್ತೆ – ಬೆಂಗ್ಳೂರಲ್ಲಿ ಖರೀದಿಸಿ ಡೇಟಿಂಗ್‌ ಆ್ಯಪ್‌ನಲ್ಲಿ ಸೇಲ್‌ ಮಾಡ್ತಿದ್ದ ಆರೋಪಿ

  • ಕೊಡಗು | ಪಿಪಿಪಿ ಮಾದರಿಯಲ್ಲಿ ಕ್ಯಾತ್‌ ಲ್ಯಾಬ್‌ ಸ್ಥಾಪಿಸಲು ತಯಾರಿ

    ಕೊಡಗು | ಪಿಪಿಪಿ ಮಾದರಿಯಲ್ಲಿ ಕ್ಯಾತ್‌ ಲ್ಯಾಬ್‌ ಸ್ಥಾಪಿಸಲು ತಯಾರಿ

    ಮಡಿಕೇರಿ: ಕೊಡಗಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ PPP (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ (ಕ್ಯಾತ್‌ ಲ್ಯಾಬ್‌ – Cardiac Unit) ಸ್ಥಾಪಿಸಲು ತಯಾರಿ ನಡೆದಿದೆ.

    ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Sharanprakash Patil) ಅವರ ಅಧ್ಯಕ್ಷತೆಯಲ್ಲಿಂದು ವಿಕಾಸ ಸೌಧದಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬಂಧ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ (Mantar Gowda) ಅವರು ಪಾಲ್ಗೊಂಡು ಯೋಜನೆ ಕಾರ್ಯಗತಗೊಳಿಸುವ ಸಂಭಂಧ ಚರ್ಚಿಸಿದರು.

    ಇದಕ್ಕೆ ಸಚಿವರು ಯೋಜನೆ ಪ್ರಗತಿ ವಿವರ ಪರಿಶೀಲಿಸಿ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾತ್‌ಲ್ಯಾಬ್‌ ಸ್ಥಾಪಿಸುವ ಸಂಬಂಧ ಅಗತ್ಯ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಿ, ಟೆಂಡರ್ ಆಹ್ಚಾನಿಸಲು ಅಧಿಕಾರಿಗಳಿಗೆ ಸೂಚಿಸಿದರು.

    ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂಟಿ ಕಾರ್ಯದರ್ಶಿ ಡಾ. ವೆಂಕಟೇಶ್ ಮೂರ್ತಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕ ಡಾ.ಸುಜಾತ ರಾಥೋಡ್, ರಾಜ್ಯ ಪಿಪಿಪಿ ಕೋಶದ ನಿರ್ದೇಶಕ ಪುರುಷೋತ್ತಮ್ ಸಿಂಗ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಡಾ.ಎ.ಜೆ ಲೋಕೇಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

  • ಶರಣಬಸಪ್ಪ ಅಪ್ಪ ಲಿಂಗೈಕ್ಯ; ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

    ಶರಣಬಸಪ್ಪ ಅಪ್ಪ ಲಿಂಗೈಕ್ಯ; ಸಚಿವ ಶರಣಪ್ರಕಾಶ್ ಪಾಟೀಲ್ ಸಂತಾಪ

    ರಾಯಚೂರು: ಮಹಾದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ ಹಿನ್ನೆಲೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ (Sharanprakash Patil) ಸಂತಾಪ ಸೂಚಿಸಿದ್ದಾರೆ.

    ರಾಯಚೂರಿನಲ್ಲಿ (Raichur) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶರಣಬಸವೇಶ್ವರ ದೇವಸ್ಥಾನ ಅಂದ್ರೆ ಪೂಜ್ಯನೀಯ ಭಾವನೆ ಇದೆ. ಪೀಠಾಧಿಪತಿ ಶರಣಬಸಪ್ಪ ಅಪ್ಪ ಅವರು ಲಿಂಗೈಕ್ಯ ಆಗಿದ್ದರಿಂದ ದುಃಖ ತಂದಿದೆ. ಇಂದು ಅಂತಿಮ ವಿಧಿವಿಧಾನ ಜರುಗಲಿದ್ದು, ಸಂತಾಪ ಸೂಚಿಸುತ್ತಿದ್ದೇನೆ. ವಿಶೇಷವಾಗಿ ದೇವಸ್ಥಾನದ ಪ್ರಭಾವ ಈ ಭಾಗದಲ್ಲಿ ಬಹಳಷ್ಟು ಇದೆ ಎಂದಿದ್ದಾರೆ. ಇದನ್ನೂ ಓದಿ: ಶರಣಬಸಪ್ಪ ಅಪ್ಪ ಲಿಂಗೈಕ್ಯ – ಅಂತ್ಯಕ್ರಿಯೆಗೆ 1 ಲಕ್ಷಕ್ಕೂ ಅಧಿಕ ಬಿಲ್ವಪತ್ರೆ, 5050 ವಿಭೂತಿ ಸಿದ್ಧತೆ

    ಅನ್ನದಾಸೋಹ, ಶಿಕ್ಷಣ ದಾಸೋಹ ಮುಖಾಂತರ ನಾಡಿನ ಜನರ ಮನಸ್ಸನ್ನ ಶರಣಬಸಪ್ಪ ಅಪ್ಪಾ ಗೆದ್ದಿದ್ದಾರೆ. ಇನ್ನೂ ಆಧ್ಯಾತ್ಮದ ಕಡೆಗೆ ಜನರನ್ನು ಸೆಳೆಯುವಲ್ಲೂ ಅವರ ಅಪಾರ ಕೊಡುಗೆಯಿದೆ ಎಂದು ಹೇಳಿದ್ದಾರೆ.

  • ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

    ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

    – ಎದ್ದು ಹೊರ ನಡೆಯುವಂತೆ ಗದರಿದ ಶರಣಪ್ರಕಾಶ್ ಪಾಟೀಲ್

    ರಾಯಚೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಮೊಬೈಲ್ ನಲ್ಲಿ ರಮ್ಮಿ ಆಟದಲ್ಲಿ ಮಗ್ನರಾಗಿದ್ದರು. ಅಧಿಕಾರಿಯ ವರ್ತನೆಗೆ ಗರಂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

    ರಾಯಚೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ರಮ್ಮಿ ಆಟದಲ್ಲಿ ಮಗ್ನರಾಗಿದ್ದರು. ಸಚಿವ ಡಾ.ಶರಣಪ್ರಕಾಶ ಪಾಟೀಲ್ ನೇತೃತ್ವದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ರಮ್ಮಿ ಆಟವಾಡುತ್ತ ಕುಳಿತಿದ್ದರು. ಒಂದು ಕಡೆ ಶಾಸಕರು, ಸಚಿವರ ಮಧ್ಯೆ ಕೆಡಿಪಿ ಸಭೆಯಲ್ಲಿ ಬಿರುಸಿನ ಚರ್ಚೆ, ಆಕ್ರೋಶ, ಅಸಮಾಧಾನ, ಪ್ರತಿಭಟನೆ ನಡೆದಿತ್ತು. ಇನ್ನೊಂದೆಡೆ ಜಿಲ್ಲಾ ಮಟ್ಟದ ಅಧಿಕಾರಿ ರಮ್ಮಿ ಆಟದಲ್ಲಿ ಮುಳುಗಿದ್ದರು. ಸಭೆಯ ಆಗುಹೋಗುಗಳ ಬಗ್ಗೆ ಆಲಿಸದೇ ಆಟದಲ್ಲಿ ಮಗ್ನರಾಗಿದ್ದರು.

    ಬಳಿಕ ಮಾಹಿತಿ ತಿಳಿದು ಅಧಿಕಾರಿ ವರ್ತನೆಗೆ ಗರಂ ಆದ ಸಚಿವ ಶರಣಪ್ರಕಾಶ ಪಾಟೀಲ್ ತರಾಟೆಗೆ ತೆಗೆದುಕೊಂಡರು. ಸಭೆಯಿಂದ ಮೊದಲು ಹೊರ ನಡೆಯುವಂತೆ ಗದರಿದರು. ಕೂಡಲೇ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ಅಮಾನತ್ತಿಗೆ ಶಿಫಾರಸ್ಸು ಮಾಡಲು ಸಚಿವ ಶರಣಪ್ರಕಾಶ್ ಪಾಟೀಲ್ ಜಿಲ್ಲಾಧಿಕಾರಿ ನಿತೀಶ್ ‌ಗೆ ಸೂಚಿಸಿದ್ದಾರೆ.

  • ಶರಣಪ್ರಕಾಶ್ ಪಾಟೀಲ್ ನಿಯೋಗದಿಂದ ಜರ್ಮನಿ ಪ್ರವಾಸ

    ಶರಣಪ್ರಕಾಶ್ ಪಾಟೀಲ್ ನಿಯೋಗದಿಂದ ಜರ್ಮನಿ ಪ್ರವಾಸ

    – ಜರ್ಮನಿಯ ನಾರ್ತ್ ರೈನ್-ವೆಸ್ಟ್ಫಾಲಿಯಾ, ಡಸೆಲ್ಡಾರ್ಫ್‌ಗೆ ಭೇಟಿ
    – ಕೌಶಲ್ಯ ವಿನಿಯಮ ಒಪ್ಪಂದದ ನಿರೀಕ್ಷೆ

    ಬರ್ಲಿನ್: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Dr.SharanPrakash Patil) ನೇತೃತ್ವದ ನಿಯೋಗ ಜರ್ಮನಿ (Germany) ಪ್ರವಾಸ ಕೈಗೊಂಡಿದೆ.

    ಸಚಿವರ ನೇತೃತ್ವದ ನಿಯೋಗವು, ಜರ್ಮನಿಯ ನಾರ್ತ್ ರೈನ್-ವೆಸ್ಟ್ಫಾಲಿಯಾ (ಎನ್‌ಆರ್‌ಡಬ್ಲ್ಯೂ), ಡಸೆಲ್ಡಾರ್ಫ್ ಸೇರಿದಂತೆ ಜರ್ಮನಿಯ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ, ಕೌಶಲ್ಯಾಭಿವೃದ್ಧಿ ಹಾಗೂ ಕೌಶಲ್ಯ ವಿನಿಮಯ, ಉದ್ಯೋಗವಾಕಾಶ ಸೇರಿದಂತೆ ಹಲವಾರು ವಿಷಯಗಳ ಕುರಿತು ಅಲ್ಲಿನ ನಿಯೋಗಮಟ್ಟದ ಸಮಾಲೋಚನೆ ಸಭೆ ನಡೆಸಲಿದೆ. ಇದನ್ನೂ ಓದಿ: ಕುರ್ಚಿಯಾಟದಲ್ಲಿ ಸಿಎಂ, ಡಿಸಿಎಂ ಮೈಂಡ್ ಗೇಮ್ – ಟ್ರಿಕ್ಕಿ ಪಾಲಿಟಿಕ್ಸ್‌ನಲ್ಲಿ ಯಾರಾಗ್ತಾರೆ ವಿನ್?

    ಯಾಂತ್ರೀಕೃತ ಕೈಗಾರಿಕೆ, ಮೆಕಾಟ್ರಾನಿಕ್ಸ್ ಮತ್ತು ಸ್ಮಾರ್ಟ್ ಉತ್ಪಾದನೆಯಂತಹ ಕ್ಷೇತ್ರಗಳಲ್ಲಿ ಅಪ್ರೆಂಟಿಸ್‌ಶಿಪ್, ಕೌಶಲ್ಯ ಸಹಯೋಗದ ಕುರಿತು ಸಚಿವರ ನೇತೃತ್ವದ ನಿಯೋಗ ಅಧ್ಯಯನ ನಡೆಸಿ, ಕೆಲವು ಮಹತ್ವದ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆ ಇದೆ. ಇದನ್ನೂ ಓದಿ: ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರು – ಸಂಪುಟ ಸಭೆಯಲ್ಲಿ ಹಲವು ಐತಿಹಾಸಿಕ ನಿರ್ಣಯ

    ಷ್ನೇಯ್ಡರ್ ಎಲೆಕ್ಟ್ರಿಕ್, ಡಸೆಲ್ಡಾರ್ಫ್
    ಬೆಂಗಳೂರಿನ ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕ ವೈ.ಕೆ.ದಿನೇಶ್ ಕುಮಾರ್ ಮತ್ತು ಹಿರಿಯ ಅಧಿಕಾರಿಗಳ ನಿಯೋಗ ಡಸೆಲ್ಡಾರ್ಫ್ನಲ್ಲಿ ಜರ್ಮನ್ ನರ್ಸಿಂಗ್ ಅಪ್ರೆಂಟಿಶಿಪ್, ಕರ್ನಾಟಕ ಮತ್ತು ಎನ್‌ಆರ್‌ಡಬ್ಲ್ಯೂ ನಡುವೆ ರಚನಾತ್ಮಕ ಕೌಶಲ್ಯ ವಲಸೆ ಮಾರ್ಗವನ್ನು ರೂಪಿಸುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿತು. ಇದನ್ನೂ ಓದಿ: 5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

    ಜಿಟಿಟಿಸಿಯ ತಾಂತ್ರಿಕ ಪಠ್ಯಕ್ರಮವನ್ನು ಜರ್ಮನ್ ತರಬೇತಿ ಮಾನದಂಡಗಳೊಂದಿಗೆ ಅಳವಡಿಸಿಕೊಳ್ಳುವುದು, ಕರ್ನಾಟಕದ ಯುವಕರಿಗೆ ರಚನಾತ್ಮಕ ಪೂರ್ವ-ನಿರ್ಗಮನ ತರಬೇತಿಯನ್ನು ಪ್ರಾಯೋಗಿಕವಾಗಿ ನೀಡುವ ಬಗ್ಗೆ ಅಧಿಕಾರಿಗಳು ಸಮಾಲೋಚನೆ ನಡೆಸಿದರು.

    ಸನಾ ಕ್ಲಿನಿಕೆನ್
    ಕರ್ನಾಟಕದ ತರಬೇತಿ ಪಡೆದ ನರ್ಸಿಂಗ್ ವೃತ್ತಿಪರರಿಗೆ ಪ್ಫ್ಲೆಜ್ ಆಸ್‌ಬಿಲ್ಡಂಗ್ (ನರ್ಸಿಂಗ್ ಅಪ್ರೆಂಟಿಸ್‌ಶಿಪ್‌ಗಳು) ಮತ್ತು ನೈತಿಕ ವಲಸೆ ಚೌಕಟ್ಟುಗಳಿಗೆ ಮಾರ್ಗಗಳನ್ನು ಅನ್ವೇಷಿಸಲು ಸಚಿವರು ಆರೋಗ್ಯ ಕ್ಷೇತ್ರದ ಪ್ರತಿನಿಧಿಗಳನ್ನು ಸಹ ಭೇಟಿಯಾದರು. ಇದನ್ನೂ ಓದಿ: ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ

    ಕರ್ನಾಟಕ ಮತ್ತು ನಾರ್ತ್ ರೈನ್-ವೆಸ್ಟ್ಫಾಲಿಯಾ ನಡುವೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ದೀರ್ಘಕಾಲೀನ ಕೌಶಲ್ಯ ಪಾಲುದಾರಿಕೆ, ಕರ್ನಾಟಕದ ಸಾವಿರಾರು ಯುವಕರು ಜರ್ಮನಿಯಲ್ಲಿ ಉತ್ತಮ ಗುಣಮಟ್ಟದ ವೃತ್ತಿಪರ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಪಡೆಯಲು ಅನುವು ಮಾಡಿಕೊಡುವ ಕುರಿತು ಸಚಿವರು ಅಲ್ಲಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

  • ನೀಟ್ ಸೀಟು – ದಲ್ಲಾಳಿಗಳ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಶರಣಪ್ರಕಾಶ್ ಪಾಟೀಲ್

    ನೀಟ್ ಸೀಟು – ದಲ್ಲಾಳಿಗಳ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಶರಣಪ್ರಕಾಶ್ ಪಾಟೀಲ್

    ಕಲಬುರಗಿ: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharanprakash Patil) ಕರೆ ನೀಡಿದ್ದಾರೆ.

    ಈ ಬಗ್ಗೆ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿದ್ದು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು. ವೈದ್ಯಕೀಯ ಸೀಟು ಕೊಡಿಸುತ್ತೇವೆ. ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ. ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಲ್ಲತ್ತಗಿರಿ | ಪ್ರವಾಸಿಗರ ಕಾರಿನ ಮೇಲೆ ಬಿದ್ದ ಬೃಹತ್ ಮರ – ತಪ್ಪಿದ ಅನಾಹುತ

    ನೀಟ್ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು, ಈ ಪೈಕಿ 83,582 ಅರ್ಹತೆ ಪಡೆದುಕೊಂಡಿದ್ದಾರೆ. ಹೇಗಾದರೂ ಮಾಡಿ ಒಳ್ಳೆಯ ಕಾಲೇಜಿನಲ್ಲಿ ಸೀಟು ಪಡೆಯಬೇಕು ಎಂಬ ಆತುರಕ್ಕೆ ಬರಬೇಡಿ. ನಿಮ್ಮ ಆತಂಕವನ್ನು ದುರುಪಯೋಗಪಡಿಸಿಕೊಳ್ಳಲು ಮಧ್ಯವರ್ತಿಗಳು ಕಾದಿರುತ್ತಾರೆ. ಅವರ ಮೋಸದ ಜಾಲಕ್ಕೆ ಬೀಳಬೇಡಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಅಧ್ಯಯನ ಪ್ರವಾಸ: ಮಲೇಶಿಯಾದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್

    ಕೆಇಎಯಿಂದ ಸೀಟು ಹಂಚಿಕೆ
    ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದಲೇ ಸೀಟುಗಳ ಹಂಚಿಕೆ ಕ್ರಮಬದ್ಧವಾಗಿ ಆಗುತ್ತದೆ. ಅದರಂತೆ ನಿಯಮಗಳನ್ನು ಪಾಲಿಸಿ. ವಿದ್ಯಾರ್ಥಿಗಳು ಮತ್ತು ಪೋಷಕರು ಇದನ್ನು ತಪ್ಪದೇ ತಿಳಿದುಕೊಳ್ಳಬೇಕು. ಅತ್ಯುತ್ತಮ ಸಾಧನೆ ಮಾಡಿ, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಎಲ್ಲಾ ವಿದ್ಯಾರ್ಥಿಗಳ ಭವಿಷ್ಯವೂ ಉತ್ತಮವಾಗಿರಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಬ್ರೇಕ್ – ಒಂದೇ ದಿನದಲ್ಲಿ 103 ವಾಹನಗಳು ಸೀಜ್

    ದಲ್ಲಾಳಿಗಳಿಗೆ ಎಚ್ಚರಿಕೆ
    ಸೀಟು ಕೊಡಿಸುತ್ತೇನೆಂದು ವಿದ್ಯಾರ್ಥಿಗಳು ಅಥವಾ ಪೋಷಕರ ದಿಕ್ಕು ತಪ್ಪಿಸಿ ಮೋಸ ಮಾಡಿದವರು ಕಂಡುಬಂದರೆ, ಅಂತಹ ದಲ್ಲಾಳಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ. ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

  • ಗ್ರಾಮೀಣ ಯುವಸಮೂಹವನ್ನು ಸಬಲರನ್ನಾಗಿಸುವುದೇ ನಮ್ಮ ಗುರಿ: ಶರಣಪ್ರಕಾಶ್‌ ಪಾಟೀಲ್‌

    ಗ್ರಾಮೀಣ ಯುವಸಮೂಹವನ್ನು ಸಬಲರನ್ನಾಗಿಸುವುದೇ ನಮ್ಮ ಗುರಿ: ಶರಣಪ್ರಕಾಶ್‌ ಪಾಟೀಲ್‌

    ಸಿಎಕ್ಸ್‌ಒ ಸಮಾವೇಶ; ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ಸಚಿವರ ಘೋಷಣೆ

    ಬೆಂಗಳೂರು: ಗ್ರಾಮೀಣ ಯುವ ಸಮೂಹವನ್ನು ಸಬಲೀಕರಣಗೊಳಿಸಲು, ನಾವೀನ್ಯತೆ, ಸಮಾನತೆ ಮತ್ತು ಅಂತರ್ಗತ ಅಭಿವೃದ್ಧಿಗೆ ಮಾದರಿಯಾಗಿ ಉಳಿಯುವ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharanprakash Patil) ತಿಳಿಸಿದರು.

    ಬೆಂಗಳೂರಿನ ರಾಡಿಸನ್‌ ಬ್ಲೂನಲ್ಲಿ ನಡೆದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಾ (DDU-GKY) CXO ಸಮಾವೇಶ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಉದ್ದೇಶಿಸಿ ಸಚಿವರು ಮಾತನಾಡಿದರು. ಇದನ್ನೂ ಓದಿ: PGCET: ಐದು ಎಂಟೆಕ್ ಕೋರ್ಸ್‌ಗಳಿಗೆ ಪ್ರವೇಶ ಪರೀಕ್ಷೆ ಇಲ್ಲ- ಕೆಇಎ

    CXO ಸಮಾವೇಶ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆಯು ಸಹಯೋಗದ ಕ್ರಮ, ನಾವೀನ್ಯತೆ ಮತ್ತು ಬದ್ಧತೆಯ ಮೂಲಕ ಕರ್ನಾಟಕದ ಭವಿಷ್ಯವನ್ನು ರೂಪಿಸುವ ಪ್ರಮುಖ ಅವಕಾಶ ಕಲ್ಪಿಸುವ ವೇದಿಕೆಯಾಗಿದೆ ಎಂದರು.

    ನಮ್ಮ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮೂಲಕ ಗ್ರಾಮೀಣ ಯುವಕರನ್ನು ಸಬಲೀಕರಣಗೊಳಿಸುವ ಪರಿವರ್ತನಾತ್ಮಕ ಹಾದಿಯಲ್ಲಿದೆ. ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಒಂದು ಮೂಲಾಧಾರ ಮತ್ತು ಪ್ರಮುಖ ಉಪಕ್ರಮವಾಗಿದೆ. ಈ ಕಾರ್ಯಕ್ರಮವು ಗ್ರಾಮೀಣ ಯುವಜನರಿಗೆ ಜೀವನಾಡಿಯಾಗಿ ಹೊರಹೊಮ್ಮಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ್ ಕುಂಬ್ಳೆ: ಈಶ್ವರ್ ಖಂಡ್ರೆ

    ಉದ್ಯಮ-ಸಂಬಂಧಿತ ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ, ಯುವಕರು ಅರ್ಥಪೂರ್ಣ ಉದ್ಯೋಗವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಇದರಿಂದಾಗಿ ಅವರ ಜೀವನಮಟ್ಟ ಸುಧಾರಿಸುತ್ತದೆ ಮತ್ತು ಗ್ರಾಮೀಣ ಬಡತನವನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

    ನಮ್ಮ ಸರ್ಕಾರ ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸಲು, ಸುಸ್ಥಿರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ನಮ್ಮ ಹಳ್ಳಿಗಳಲ್ಲಿ ಆರ್ಥಿಕ ಸದೃಢತೆ ನಿರ್ಮಿಸುವ ಗುರಿ ಹೊಂದಿದೆ. ನಾವು ಕೇವಲ ಜೀವನೋಪಾಯ ನಿರ್ಮಿಸುತ್ತಿಲ್ಲ. ಕರ್ನಾಟಕಕ್ಕೆ ಉಜ್ವಲ, ಸಮಾನ ಭವಿಷ್ಯವನ್ನು ರೂಪಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ನಮ್ಮ ಸರ್ಕಾರದ ಮತ್ತೊಂದು ಮಹತ್ವದ ಹೆಜ್ಜೆ ಯುವನಿಧಿ. ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಆರ್ಥಿಕ ನೆರವು ನೀಡುವ ಯೋಜನೆ ಸಾವಿರಾರು ಮಂದಿಗೆ ಅನುಕೂಲವಾಗಿದೆ. ಯುವನಿಧಿ ಫಲಾನುಭವಿಗಳಿಗೆ ತರಬೇತಿ ನೀಡುವುದು ನಮ್ಮ ಪ್ರಾಥಮಿಕ ಆದ್ಯತೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಮಾಜದಲ್ಲಿ ಅಶಾಂತಿ, ಒಡಕು ಮೂಡಿಸೋದು ಬಿಜೆಪಿ ಉದ್ದೇಶ: ಶರಣಪ್ರಕಾಶ್ ಪಾಟೀಲ್

    ಸರ್ಕಾರ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ಹೊಸ ಅನ್ವೇಷಣೆ ಮಾಡೋಣ. ಮಹತ್ವಾಕಾಂಕ್ಷೆಯನ್ನು ಪೋಷಿಸೋಣ ಮತ್ತು ಕರ್ನಾಟಕದ ನಿಜವಾದ ಚೈತನ್ಯವನ್ನು ಪ್ರತಿಬಿಂಬಿಸುವ ಭವಿಷ್ಯವನ್ನು ರೂಪಿಸೋಣ ಎಂದು ಕರೆ ನೀಡಿದರು.

  • ಸಮಾಜದಲ್ಲಿ ಅಶಾಂತಿ, ಒಡಕು ಮೂಡಿಸೋದು ಬಿಜೆಪಿ ಉದ್ದೇಶ: ಶರಣಪ್ರಕಾಶ್ ಪಾಟೀಲ್

    ಸಮಾಜದಲ್ಲಿ ಅಶಾಂತಿ, ಒಡಕು ಮೂಡಿಸೋದು ಬಿಜೆಪಿ ಉದ್ದೇಶ: ಶರಣಪ್ರಕಾಶ್ ಪಾಟೀಲ್

    ಬೆಂಗಳೂರು: ಉರ್ದು ಭಾಷಾ ಅಭಿವೃದ್ಧಿಗೆ ಬಜೆಟ್‌ನಲ್ಲಿ 100 ಕೋಟಿ ಹಣ ಕೊಟ್ಟಿರುವ ಸರ್ಕಾರದ ನಡೆಯನ್ನು ಸಚಿವ ಶರಣಪ್ರಕಾಶ್ ಪಾಟೀಲ್ (Sharanprakash Patil) ಸಮರ್ಥನೆ ಮಾಡಿಕೊಂಡಿದ್ದಾರೆ.

    ಬಿಜೆಪಿ (BJP) ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರಿಗೆ ಇಂತಹ ವಿಷಯ ಬಿಟ್ಟು ಬೇರೆ ವಿಷಯ ಇಲ್ಲ. ಯಾವುದೋ ವಿಷಯಕ್ಕೆ ಬೇರೆ ರೀತಿಯಲ್ಲಿ ಮಾತನಾಡುತ್ತಾರೆ. ಲೋಕೋಪಯೋಗಿ, ಶಾಲಾ ಶಿಕ್ಷಣ, ಆರೋಗ್ಯ ಇಲಾಖೆಗೆ ಹಣ ಕೊಟ್ಟಿಲ್ಲ ಎಂದು ಕೇಳುತ್ತಿಲ್ಲ. ಇಂತಹ ಪ್ರಶ್ನೆ ಕೇಳುತ್ತಾರೆ. ಬಿಜೆಪಿ ಅವರು ಯಾವತ್ತೂ ಸಾರ್ವಜನಿಕ ಹಿತಾಸಕ್ತಿಯಿಂದ ಪ್ರಶ್ನೆ ಕೇಳಲ್ಲ. ಸಮಾಜದಲ್ಲಿ ಒಡಕು, ಅಶಾಂತಿ ಸೃಷ್ಟಿ ಮಾಡೋದು ಬಿಜೆಪಿ ಉದ್ದೇಶ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೈಸೂರು ರಾಜವಂಶಸ್ಥರಿಗೆ ಟಿಡಿಆರ್ – ಸಿಜೆಐ ಪೀಠಕ್ಕೆ ಪ್ರಕರಣ ವರ್ಗಾವಣೆ

    ಬಿಜೆಪಿಯವರ ಮಾತು ಜನ ಈಗ ಕೇಳಲ್ಲ. ಕರ್ನಾಟಕದ ಜನರು ಪ್ರಬುದ್ಧರು ಇದ್ದಾರೆ. ಹಲಾಲ್, ಹಿಜಾಬ್ ಎಲ್ಲವೂ ಮಾಡಿದ್ರು. ಜನರು ಬಿಜೆಪಿ ಅವರಿಗೆ ಈಗ ಶಿಕ್ಷೆ ಕೊಟ್ಟಿದ್ದಾರೆ. ಬಿಜೆಪಿಯವರು ಜನರ ಸಮಸ್ಯೆ ಬಗ್ಗೆ ಮಾತಾಡಲಿ. ಸರ್ಕಾರದ ತಪ್ಪು ಇದ್ದರೆ ಸರಿ ಮಾಡೋಣ. ಇಂತಹ ವರ್ತನೆ ಸರಿಯಲ್ಲ. ಇದು ಬಿಜೆಪಿ, ರಾಜ್ಯಕ್ಕೆ, ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲಾ ಎಂದು ಹರಿಹಾಯ್ದರು. ಇದನ್ನೂ ಓದಿ: ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಕೊರೊನಾ ಚಿಕಿತ್ಸೆ: ಶರಣಪ್ರಕಾಶ್ ಪಾಟೀಲ್

  • ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಕೊರೊನಾ ಚಿಕಿತ್ಸೆ: ಶರಣಪ್ರಕಾಶ್ ಪಾಟೀಲ್

    ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಕೊರೊನಾ ಚಿಕಿತ್ಸೆ: ಶರಣಪ್ರಕಾಶ್ ಪಾಟೀಲ್

    ಬೆಂಗಳೂರು: ಕೊರೊನಾ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳನ್ನ ಸಜ್ಜುಗೊಳಿಸಲಾಗಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ (SharanPrakash Patil) ತಿಳಿಸಿದರು.

    ಕೋವಿಡ್ (Covid) ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನ ಬರುವ ಎಲ್ಲಾ ಸರ್ಕಾರಿ ಮೆಡಿಕಲ್ ಕಾಲೇಜುಗಳ ನಿರ್ದೇಶಕರ ಜೊತೆ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು, ಕರ್ನಾಟಕ ಮತ್ತು ಬೆಂಗಳೂರಿನಲ್ಲಿ (Bengaluru) ಕೋವಿಡ್ ಕೇಸ್ ಜಾಸ್ತಿ ಆಗ್ತಿದೆ. ಇದಕ್ಕೆ ಮುನ್ನೆಚ್ಚರಿಕಾ ಕ್ರಮಕ್ಕಾಗಿ ಇಂದು ಸಭೆ ಆಗಿದೆ. ನಮಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಕೊಟ್ಟಿದೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಆರಂಭ : ಪರಮೇಶ್ವರ್‌ ಅಧಿಕೃತ ಘೋಷಣೆ

    ಗರ್ಭಿಣಿಯರು, ವಯಸ್ಸಾದವರು, ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಹಾಕಬೇಕು. ಶಾಲೆಗಳು ಪ್ರಾರಂಭ ಆಗ್ತಿದೆ. ಆರೋಗ್ಯ ಸಮಸ್ಯೆ ಇರೋರು ಶಾಲೆಗೆ ಬರಬಾರದು ಅಂತ ಹೇಳಿದ್ದಾರೆ. ಸಾರಿ ಕೇಸ್ ಟೆಸ್ಟ್ ಮಾಡೋಕೆ ಹೇಳಿದ್ದಾರೆ. ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಹೆಚ್ಚಳ, ಸದ್ಯಕ್ಕೆ ಮಾಸ್ಕ್ ಕಡ್ಡಾಯ ಇಲ್ಲ: ಸಿದ್ದರಾಮಯ್ಯ

    ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಆಸ್ಪತ್ರೆಗಳ ಸಭೆ ಮಾಡಿದ್ದೇನೆ. ಕೂಡಲೇ ಟೆಸ್ಟ್ ವ್ಯವಸ್ಥೆ ಸಿದ್ದ ಮಾಡಿಕೊಳ್ಳಬೇಕು. ಆರ್‌ಟಿಪಿಸಿಆರ್ ಕಿಟ್ ಸೇರಿ ಎಲ್ಲಾ ರೆಡಿ ಮಾಡಿಕೊಳ್ಳಬೇಕು. ಆಸ್ಪತ್ರೆಗೆ ಬರುವ ಸಿಬ್ಬಂದಿಗಳು, ವೈದ್ಯರು ಮಾಸ್ಕ್ ಹಾಕಬೇಕು. ಸಾರಿ ಕೇಸ್ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಬೆಡ್‌ಗಳು, ಆಕ್ಸಿಜನ್ ಬಗ್ಗೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. ವೆಂಟಿಲೇಟರ್, ಔಷಧಿ ಎಲ್ಲಾ ಸಿದ್ಧ ಮಾಡಿಕೊಳ್ಳಲು ಸೂಚನೆ ಕೊಡಲಾಗಿದೆ. ಏನಾದ್ರು ಕೊರತೆ ಇದ್ದರೆ ಕೂಡಲೇ ಮಾಹಿತಿ ನೀಡಲು ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ವ್ಯವಸ್ಥೆ ಇರಬೇಕು. ವೆಂಟಿಲೇಟರ್ ಇದೆಯಾ, ಇಲ್ವಾ ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಉಚ್ಚಾಟನೆಯನ್ನು ನಿರೀಕ್ಷಿಸಿದ್ದೆವು, ಒಳ್ಳೆಯದಾಯ್ತು: ಎಸ್‌ಟಿ ಸೋಮಶೇಖರ್

    ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡುವುದಿಲ್ಲ. ಸಾರಿ ಕೇಸ್, ಆರೋಗ್ಯ ಸಮಸ್ಯೆ ಇರೋರು, ಗರ್ಭಿಣಿಯರು, ವಯಸ್ಸಾದವರು ಮಾಸ್ಕ್ ಹಾಕಬೇಕು. ಬೇರೆಯವರಿಗೆ ಮಾಸ್ಕ್ ಸದ್ಯಕ್ಕೆ ಕಡ್ಡಾಯವಿಲ್ಲ. ನಮ್ಮ ಆಸ್ಪತ್ರೆಗಳಿಗೆ ಜನರು ಜಾಸ್ತಿ ಬರ್ತಾರೆ ಹೀಗಾಗಿ ಮಾಸ್ಕ್ ಕಡ್ಡಾಯವಾಗಿ ಹಾಕಬೇಕು ಅಂತ ಹೇಳಿದ್ದೇವೆ. ಎಲ್ಲಾ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ಕೊಡಬೇಕು ಎಂದಿದ್ದೇವೆ. ಪ್ರತ್ಯೇಕ ಕೊಠಡಿ ಅವಶ್ಯಕತೆ ಇದ್ದರೆ ಮಾಡಿಕೊಳ್ಳಲು ಎಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. ಔಷಧಿ, ಆಕ್ಸಿಜನ್, ಬೆಡ್ ಎಲ್ಲವೂ ನಮ್ಮ ಬಳಿ ಸಿದ್ಧ ಇದೆ. ಯಾವುದೇ ಕೊರತೆ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಇದು ನಿಮ್ಮ ಫೆಮಿನಿಸಂ?- ದೀಪಿಕಾ ಪಡುಕೋಣೆ ವಿರುದ್ಧ ಸಂದೀಪ್ ರೆಡ್ಡಿ ಆಕ್ರೋಶ

    ಬೆಂಗಳೂರಿನಲ್ಲಿ ಕೊರೊನಾ (Corona) ಕೇಸ್ ಜಾಸ್ತಿ ಆಗ್ತಿದೆ. ಅಷ್ಟು ದೊಡ್ಡ ಪ್ರಮಾಣದಲ್ಲಿ ಆಗಿಲ್ಲ. ಬಿಬಿಎಂಪಿ ಆಯುಕ್ತರಿಗೆ ಸೂಚನೆ ಕೊಡಲಾಗಿದೆ. ಬೆಂಗಳೂರು ಜನ ಆತಂಕ ಪಡೋದು ಬೇಡ. ಲಸಿಕೆ ಬಗ್ಗೆ ಚರ್ಚೆ ಆಗಿದೆ. ಕೇಂದ್ರದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಅವಶ್ಯಕತೆ ಇದ್ದರೆ, ಲಸಿಕೆ ತೆಗೆದುಕೊಳ್ಳೋಕೆ ಕೇಂದ್ರದ ಜೊತೆ ಸಂಪರ್ಕದಲ್ಲಿ ಇದ್ದೇವೆ ಎಂದು ಮಾಹಿತಿ ನೀಡಿದರು.

  • ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವರು ಭಾಗಿ – ಶರಣಪ್ರಕಾಶ್ ಪಾಟೀಲ್ ಬಾಂಬ್

    ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವರು ಭಾಗಿ – ಶರಣಪ್ರಕಾಶ್ ಪಾಟೀಲ್ ಬಾಂಬ್

    ಕಲಬುರಗಿ: ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ (Ranya Rao Gold Smuggling Case) ರಾಜ್ಯದ ಇಬ್ಬರು ಸಚಿವರು ಭಾಗಿಯಾಗಿದ್ದಾರೆ ಎಂಬುದು ಶುದ್ಧ ಸುಳ್ಳು. ಬಹುಶಃ ಕೇಂದ್ರ ಸಚಿವರು ಭಾಗಿಯಾಗಿರಬಹುದು ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharanprakash Patil) ಬಾಂಬ್‌ ಸಿಡಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರನ್ಯಾ ಭಾಗಿಯಾಗಿರುವ ಪ್ರಕರಣದಲ್ಲಿ ರಾಜ್ಯದ ಸಚಿವರ ಪಾತ್ರ ಹೇಗೆ ಇರಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ವಿಮಾನ ನಿಲ್ದಾಣಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಇರುತ್ತವೆ. ಹಾಗಾಗಿ, ಬಹುಶಃ ತಪ್ಪು ಅಂದಾಜಿನಿಂದ ಹಾಗೆ ಹೇಳಿರಬಹುದು ಎಂದರು.

    ವಿಮಾನ ನಿಲ್ದಾಣಗಳಲ್ಲಿ ಶಿಷ್ಟಾಚಾರದ ಜವಾಬ್ದಾರಿ ಕೇಂದ್ರ ಸರ್ಕಾರದ ಅಡಿ ಬರುತ್ತದೆ. ಹೀಗಾಗಿ ನಮ್ಮ ಸರ್ಕಾರದ ಯಾವುದೇ ಸಚಿವರು ಭಾಗಿಯಾಗಿರುವ ಸಾಧ್ಯತೆಗಳಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಅನೈತಿಕ ಸಂಬಂಧ ಮುಚ್ಚಿ ಹಾಕಲು ಪುತ್ರ, ಮೈದುನ ಪತ್ನಿಯ ಕೊಲೆ – ತಾಯಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

    ಶೀಘ್ರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ:
    ಮುಂದಿನ ಕೆಲವೇ ದಿನಗಳಲ್ಲಿ ಕಲಬುರಗಿ ನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಐಸಿಸಿ ಅಧ್ಯಕ್ಷರನ್ನು ಆಹ್ವಾನಿಸಲಾಗುವುದು. ಅದಕ್ಕಾಗಿ ಅವರ ಸಮಯ ಕೇಳಲಾಗಿದೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ

    ಇನ್ನೂ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಇಬ್ಬರ ಸಾವಿನ ಪ್ರಕರಣ ಕುರಿತು ಪ್ರಸ್ತಾಪಿಸಿದ ಅವರು, ಇದುವರೆಗೆ ಜಿಮ್ಸ್ ನಲ್ಲಿ ಇಂತಹ ಪ್ರಕರಣ ನಡೆದಿಲ್ಲ. ಮಾಧ್ಯಮಗಳ ಮೂಲಕ ತಮಗೆ ಗೊತ್ತಾಗಿದೆ. ಈ ನಿಟ್ಟಿನಲ್ಲಿ ಸಣ್ಣ ತಪ್ಪಾಗಿದ್ದರೂ ಸಹಿಸುವುದಿಲ್ಲ. ಈ ಬಗ್ಗೆ‌ ತನಿಖೆ ನಡೆಸಲಾಗುವುದು ಎಂದು ಖಾತ್ರಿಪಡಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಶುಲ್ಕ – ತಿಂಗಳಿಗೆ ವಸತಿ, ವಾಣಿಜ್ಯ ಕಟ್ಟಡಗಳಿಗೆ ಎಷ್ಟು?