Tag: Shariq

  • ಸಾವು-ಬದುಕಿನ ನಡುವೆ ಶಂಕಿತ ಉಗ್ರ ಶಾರೀಕ್ ನರಳಾಟ- ಪೊಲೀಸರಲ್ಲಿ ಆತಂಕ

    ಸಾವು-ಬದುಕಿನ ನಡುವೆ ಶಂಕಿತ ಉಗ್ರ ಶಾರೀಕ್ ನರಳಾಟ- ಪೊಲೀಸರಲ್ಲಿ ಆತಂಕ

    ಮಂಗಳೂರು: ಬಾಂಬ್ ಸ್ಫೋಟದ ಆರೋಪಿ ಉಗ್ರ ಶಾರೀಕ್ (Shariq) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಪೊಲೀಸರು ಆತನ ಚೇತರಿಕೆ ಕಾಯುತ್ತಿದ್ದು, ಯಾವಾಗ ಬಾಯಿ ಬಿಡ್ತಾನೆ ಅಂತ ಕಾದು ಕುಳಿತಿದ್ದಾರೆ. ಆ ಬಳಿಕವೇ ಉಗ್ರನ ಕೃತ್ಯದ ಆಳ ಅಗಲ ತಿಳಿಯಲಿದೆ. ಒಂದು ವೇಳೆ ಬದುಕುಳಿಯದೇ ಇದ್ರೆ ಎಲ್ಲವೂ ಆತನೊಂದಿಗೇ ಹೋಗುತ್ತೆ ಅನ್ನೋ ಆತಂಕ ಶುರುವಾಗಿದೆ.

    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ದ ರೂವಾರಿ ಶಂಕಿತ ಉಗ್ರ ಶಾರೀಕ್ ಶೇ. 45ರಷ್ಟು ಸುಟ್ಟಗಾಯಗಳೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ. ಮಾತನಾಡಲು ಆಗಲ್ಲ, ಒಂದು ಕಣ್ಣು ಕಾಣುತ್ತಿಲ್ಲ. ಇನ್ನೊಂದು ಕಣ್ಣು ಬಿಡೋಕೆ ಆಗ್ತಿಲ್ಲ. ಕೈ ಸುಟ್ಟಿರೋದ್ರಿಂದ ಬರೆಯೋಕು ಆಗ್ತಿಲ್ಲ. ಹೀಗಾಗಿ ಪೊಲೀಸರು ಘಟನೆ ಸಂಬಂಧ ಶಾರೀಕ್ ಹೇಳಿಕೆ ಪಡೆಯೋಕೆ ಆಗ್ತಿಲ್ಲ. ಆದರೆ ಆತ ಚೇತರಿಸಿಕೊಂಡರೆ ಸತ್ಯ ಕಕ್ಕಿಸಲು ಪೊಲೀಸರು ತುದಿಗಾಲಿನಲ್ಲಿ ನಿಂತಿದ್ದಾರೆ. ಇದನ್ನೂ ಓದಿ: ಶಾರೀಕ್‌ ಬಳಿಯಿದ್ದ ಕುಕ್ಕರ್‌ ಬಾಂಬ್‌ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು

    ಗಂಭೀರ ಸ್ಥಿತಿಯಲ್ಲಿರುವ ಶಾರೀಕ್ ಒಂದು ವೇಳೆ ಸಾವನ್ನಪ್ಪಿದ್ದರೆ ಆತನ ಉಗ್ರ ಚಟುವಟಿಕೆಗಳೂ ಆತನೊಂದಿಗೆ ಸಾಯಲಿದೆ. ಆತ ಈ ಹಿಂದೆ ಏನೆಲ್ಲಾ ಉಗ್ರ ಚಟುವಟಿಕೆ ಮಾಡಿದ್ದ, ಮುಂದೆ ಯಾವ ಪ್ಲಾನ್ ಮಾಡಿದ್ದ, ಆತನೊಂದಿಗಿರುವ ತಂಡ ಯಾವುದು. ಫಂಡಿಂಗ್ ಮಾಡಿದ್ಯಾರು..? ಯಾರೆಲ್ಲಾ ಆಶ್ರಯ ಕೊಟ್ಟಿದ್ದರು, ಉಗ್ರರ ಜೊತೆ ಸಂಪರ್ಕದಲ್ಲಿದ್ನಾ ಅನ್ನೋ ಸಾಕಷ್ಟು ಆಘಾತಕಾರಿ ಮಾಹಿತಿಗಳು ನಾಶವಾಗಲಿದೆ. ಹೀಗಾಗಿ ಆತನನ್ನು ಹೇಗಾದ್ರೂ ಮಾಡಿ ಬದುಕಿಸಲೇಬೇಕೆಂದು ಪೊಲೀಸರು ವೈದ್ಯರು ತಂಡಕ್ಕೆ ಸೂಚಿಸಿದ್ದಾರೆ. ವೈದ್ಯರೂ ಆತನ ಮೇಲೆ ವಿಶೇಷ ಗಮನ ಇಟ್ಟಿದ್ದು ಬದುಕಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನೂ ಓದಿ: ಪಂಪ್‌ವೆಲ್‌ ಫ್ಲೈ ಓವರ್‌ ಬಳಿ ಬಾಂಬ್‌ ಸ್ಟೋಟಿಸಲು ಮುಂದಾಗಿದ್ದ ಶಾರೀಕ್‌

    ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಶಾರಿಕ್ ತಂದಿದ್ದು ಅಂತಿಂಥ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್‍ಗೆ ಇಡೀ ಬಸ್ಸನ್ನೇ ಸ್ಫೋಟಿಸುವ ಪವರ್ ಇತ್ತಂತೆ. 3 ಲೀಟರ್ ಕುಕ್ಕರ್ ತುಂಬಾ ಸ್ಫೋಟಕದ ಜೆಲ್ ತಂದಿದ್ದ. ಡಿಟೋನೇಟರ್ ಕೂಡ ಇದ್ದು ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತಂತೆ, ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೆ ಶಾರ್ಟ್ ಸರ್ಕ್ಯೂಟ್ ಆಗಿ ಜೆಲ್‍ಗೆ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಒಂದ್ವೇಳೆ ಡಿಟೊನೇಟರ್ ಮತ್ತು ಜೆಲ್ ಎರಡೂ ಒಂದೇ ಬಾರಿಗೆ ಸ್ಫೋಟಿಸಿದರೆ ಭಯಾನಕ ಘಟನೆಯೇ ನಡೆದು ಹೋಗ್ತಿತ್ತು.

    ಶಾರೀಕ್ ಚೇತರಿಸಿಕೊಂಡರೆ ಮಂಗಳೂರು ಸ್ಫೋಟದ ಹಿಂದಿನ ರಹಸ್ಯ ಬಯಲಾಗಲಿದೆ. ಆದರೆ ಆಕಸ್ಮಾತ್ ಶಾರೀಕ್ ಸಾವನ್ನಪ್ಪಿದ್ರೇ ಆತನೊಂದಿಗೆ ರಹಸ್ಯವೂ ಸಮಾಧಿ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

    ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

    ಬೆಂಗಳೂರು: ಬಾಂಬ್ ಬ್ಲಾಸ್ಟ್ (Mangaluru Bomb Blast) ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

    ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ (Praveen Sood) ಹಾಗೂ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ – ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಬಾಂಬ್ ಸ್ಫೋಟ ಘಟನೆಯನ್ನು (Mangaluru Bomb Blast Case) ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳನ್ನು ಆಮೂಲಗ್ರಹವಾಗಿ ತನಿಖೆ ಮಾಡಿ, ದ್ರೋಹಿಗಳನ್ನು ಮಟ್ಟ ಹಾಕಲು ಪೋಲಿಸರು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳವೂ (NIA) ಇದಕ್ಕೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ: ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ

    ಈವರೆಗಿನ ಮಾಹಿತಿ ಆಧರಿಸಿ, ರಾಜ್ಯ ಪೊಲೀಸರು ಉಗ್ರಗಾಮಿ ಚಟುವಟಿಕೆಗಳಿಗೆ ಸಹಕರಿಸಿದವರ ವಿರುದ್ಧ ತನಿಖೆ ತೀವ್ರಗೊಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನಿಂದ ಇನ್ನೂ ಹೆಚ್ಚಿನ ಮಾಹಿತಿಗಳು ಹೊರಬರಬೇಕಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಂಪ್‌ವೆಲ್‌ ಫ್ಲೈ ಓವರ್‌ ಬಳಿ ಬಾಂಬ್‌ ಸ್ಟೋಟಿಸಲು ಮುಂದಾಗಿದ್ದ ಶಾರೀಕ್‌

    ಪಂಪ್‌ವೆಲ್‌ ಫ್ಲೈ ಓವರ್‌ ಬಳಿ ಬಾಂಬ್‌ ಸ್ಟೋಟಿಸಲು ಮುಂದಾಗಿದ್ದ ಶಾರೀಕ್‌

    ಮಂಗಳೂರು: ಸೆರೆಸಿಕ್ಕ ಶಾರೀಕ್‌(Shariq) ಪಂಪ್‌ವೆಲ್‌ ಫ್ಲೈ ಓವರ್‌(Pumpwell Flyover) ಬಳಿ ಕುಕ್ಕರ್‌ ಬಾಂಬ್‌ ಇಡಲು ಪ್ಲ್ಯಾನ್‌ ಮಾಡಿದ್ದ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

    ಪಂಪ್‌ವೆಲ್‌ ಯಾಕೆ?
    ಕೇರಳಕ್ಕೆ ಹೋಗುವ ವಾಹನಗಳ ಜೊತೆ ಹಾಸನ, ಕೊಡಗು, ಚಿಕ್ಕಮಗಳೂರು ಕಡೆಗೆ ಹೋಗುವ ವಾಹನಗಳು ಪಂಪ್‌ವೆಲ್‌ ಮೂಲಕವೇ ಸಾಗುತ್ತದೆ. ವಾಹನಗಳ ಮಂಗಳೂರು ನಗರದ ಪ್ರವೇಶ ಮತ್ತು ನಿರ್ಗಮನ ಈ ರಸ್ತೆಯ ಮೂಲಕವೇ ಆಗುತ್ತದೆ.

    ಮಂಗಳೂರಿಗೆ ಹಲವು ಬಾರಿ ಬಂದಿದ್ದ ಶಾರೀಕ್‌ ನಗರದಲ್ಲಿ ಎಲ್ಲಿ ಹೆಚ್ಚು ಜನರು ಸಂಚರಿಸುತ್ತಾರೆ ಎಂಬುದನ್ನು ತಿಳಿದಿದ್ದ. ಇಲ್ಲಿ ಯಾವುದೇ ಬಸ್‌ ಸ್ಟ್ಯಾಂಡ್‌ ಇಲ್ಲ. ಸಂಜೆಯ ವೇಳೆಗೆ ಜನ ಇಲ್ಲಿ ಬಸ್‌ ಹತ್ತಲು ನಿಂತಿರುತ್ತಾರೆ. ಅದರಲ್ಲೂ ಕೋಣಾಜೆ-ತೊಕ್ಕೊಟ್ಟು-ಉಳ್ಳಾಲ ಭಾಗಕ್ಕೆ ತೆರಳುವ ಜನರು ಅತಿ ಹೆಚ್ಚು ಸಂಖ್ಯೆಯಲ್ಲಿ ಇಲ್ಲಿ ಇರುತ್ತಾರೆ. ಈ ಕಾರಣಕ್ಕೆ ಶಾರೀಕ್‌ ಪಂಪ್‌ವೆಲ್‌ ಬಳಿಯೇ ಕುಕ್ಕರ್‌ ಬಾಂಬ್‌ ಇಡಲು ಪ್ಲ್ಯಾನ್‌ ಮಾಡಿದ್ದ. ಇದನ್ನೂ ಓದಿ: ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಗುರಿ- ಮಂಗಳೂರು ಸ್ಫೋಟಕ್ಕೆ ಬೆಂಗಳೂರು ಲಿಂಕ್

    ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ(Mangaluru) ನಾಗುರಿ ಕಡೆ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟಗೊಂಡಿತ್ತು. ದಾರಿ ಮಧ್ಯೆ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದ ಶಾರೀಕ್‌ ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ (Police) ಠಾಣೆಯ ಎದುರು ಆಟೋದ ಒಳಗೆ ಸ್ಫೋಟಗೊಂಡಿದ್ದು ಶಾರೀಕ್‌ ಕೈಯಲ್ಲಿದ್ದ ಕುಕ್ಕರ್ ಛಿದ್ರಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಸಹೋದರಿಯರ ಅಕೌಂಟ್‍ಗೆ ಲಕ್ಷ ಲಕ್ಷ ಟ್ರಾನ್ಸ್‌ಫರ್- ವಿದೇಶದಿಂದಲೇ ಶಾರಿಕ್‍ಗೆ ಸಂದಾಯವಾಗ್ತಿತ್ತಾ ಹಣ?

    ಸಹೋದರಿಯರ ಅಕೌಂಟ್‍ಗೆ ಲಕ್ಷ ಲಕ್ಷ ಟ್ರಾನ್ಸ್‌ಫರ್- ವಿದೇಶದಿಂದಲೇ ಶಾರಿಕ್‍ಗೆ ಸಂದಾಯವಾಗ್ತಿತ್ತಾ ಹಣ?

    ಬೆಂಗಳೂರು/ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರಿಗೆ ಮಹತ್ವದ ವಿಚರವೊಂದು ಸಿಕ್ಕಿದೆ. ಶಂಕಿತ ಶಾರೀಕ್‍ನಿಂದ ಸಹೋದರಿಯರ ಅಕೌಂಟ್‍ (Sisters Bank Account) ಗೆ ಲಕ್ಷ ಲಕ್ಷ ಹಣ ಹೋಗಿರುವುದು ಬಯಲಾಗಿದೆ.

    ಇಷ್ಟೊಂದು ಹಣ ಶಾರೀಕ್‍ಗೆ ಬರುತ್ತಿದ್ದಿದ್ದು ಎಲ್ಲಿಂದ..?, ಭಾರತವನ್ನು ಟಾರ್ಗೆಟ್ ಮಾಡಿ ವಿದೇಶದಿಂದ ಫಂಡಿಂಗ್ ಮಾಡಲಾಗ್ತಿದ್ಯಾ..?, ಶಾರೀಕ್‍ಗೂ ವಿದೇಶದಿಂದಲೇ ಫಂಡಿಂಗ್ ಎಂಬ ಅನುಮಾನ ಮೂಡಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.‌ ಇದನ್ನೂ ಓದಿ; ಮಂಗಳೂರಿನಲ್ಲಿ ದುಷ್ಕೃತ್ಯಕ್ಕೆ ಮಾಸ್ಟರ್ ಪ್ಲಾನ್- ಶಾರಿಕ್ ವಿಚಾರಣೆಗೆ ಎನ್‍ಐಎ ಸಿದ್ಧತೆ

    ಈಗಾಗಲೇ ಅರಾಫತ್ ಕೂಡ ದುಬೈ (Dubai) ನಲ್ಲಿ ನೆಲೆ ಊರಿದ್ದಾನೆ. ಭಾರತವನ್ನು ಟಾರ್ಗೆಟ್ ಮಾಡೋದಕ್ಕೆ ವಿದೇಶದಿಂದ ಮೊದಲಿಂದಲೂ ಫಡಿಂಗ್ ಆಗ್ತಿದೆ. ಈಗಲೂ ಕೂಡ ಅದೇ ವಿಚಾರದಲ್ಲಿ ಫಡಿಂಗ್ ಆಗಿದೆ ಅನ್ನೋ ಅನುಮಾನ ಶುರುವಾಗಿದೆ. ಹೀಗಾಗಿ ಪೊಲೀಸರು ಈ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.

    ಇತ್ತ ಮಂಗಳೂರಿನ ಆತ್ಮಾಹುತಿ ಬಾಂಬ್ ಹಿಂದಿನ ರಹಸ್ಯ ಬಯಲಾಗಿದ್ದು, ತನ್ನ ಸ್ನೇಹಿತ ಮಾಝ್ ಬಂಧನ ಸಹಿಸಲಾಗದೇ ಶಾರೀಕ್ ಈ ಕೃತ್ಯ ಎಸಗಿದ್ದಾನೆ. ಜಬೀವುಲ್ಲಾನ ಬಂಧನ ಬಳಿಕ ಯಾಸೀನ್, ಮಾಝ್‍ನನ್ನು ಬಂಧಿಸಲಾಗಿತ್ತು. ಈ ಮೂವರು ಸೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ರು. ಮಾಝ್ ಬಂಧನ ಬೆನ್ನಲ್ಲೇ ಶಾರೀಕ್ ಪ್ರತೀಕಾರಕ್ಕೆ ಇಳಿದಿದ್ದ. ಅಲ್ಲದೇ ಭಾರತವನ್ನು ಇಸ್ಲಾಂ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಈ ಮೂವರು ಹೊಂದಿದ್ದರು ಎಂಬುದಾಗಿ ತಿಳಿದುಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ ದುಷ್ಕೃತ್ಯಕ್ಕೆ ಮಾಸ್ಟರ್ ಪ್ಲಾನ್- ಶಾರಿಕ್ ವಿಚಾರಣೆಗೆ ಎನ್‍ಐಎ ಸಿದ್ಧತೆ

    ಮಂಗಳೂರಿನಲ್ಲಿ ದುಷ್ಕೃತ್ಯಕ್ಕೆ ಮಾಸ್ಟರ್ ಪ್ಲಾನ್- ಶಾರಿಕ್ ವಿಚಾರಣೆಗೆ ಎನ್‍ಐಎ ಸಿದ್ಧತೆ

    ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಶಾರಿಕ್ (Shariq) ಪ್ಲಾನ್ ಮಾಡಿದ್ದು, ಉಗ್ರನ ಚೈನ್ ಲಿಂಕ್ ಬಗ್ಗೆ ರಾಷ್ಟ್ರೀಯ ತನಿಖಾ ದಳಕ್ಕೆ ಗುಮಾನಿ ಬಂದಿದೆ. ಈತನೊಂದಿಗೆ ಮತ್ತಷ್ಟು ಯುವಕರು ಇರುವ ಸಾಧ್ಯತೆ ಇದ್ದು, ಎಲ್ಲಾ ಆಯಾಮಗಳ ತನಿಖೆ ಆರಂಭಗೊಂಡಿದೆ.

    ಬಾಂಬ್ ಸ್ಫೋಟಿಸಿದ ಉಗ್ರ ಶಾರಿಕ್ ಪೊಲೀಸ್ ವಶದಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ನಡುವೆ ಬಾಂಬ್ ಸ್ಫೋಟದ ಕೃತ್ಯ ಶಾರಿಕ್ ಒಬ್ಬನ ಪ್ಲ್ಯಾನ್ ಆಗಿರಲು ಸಾಧ್ಯವೇ ಇಲ್ಲ. ಈ ಸ್ಫೋಟದ ಹಿಂದೆ ದೊಡ್ಡ ಒಂದು ಜಾಲ ಇದೆ ಎಂಬ ಗುಮಾನಿ ಪೊಲೀಸರಿಗೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಪೊಲೀಸರು ಕೃತ್ಯದ ಬೆನ್ನು ಬಿದ್ದಿದ್ದಾರೆ.

    ಬಾಂಬ್ ತಯಾರಿಸಿ ಅಟ್ಟಹಾಸ ಮೆರೆಯುವುದು ಅಷ್ಟು ಸುಲಭದ ಕೆಲಸ ಅಲ್ಲ. ಇದರ ಹಿಂದೆ ಒಂದು ವ್ಯವಸ್ಥಿತವಾದ ಷಡ್ಯಂತ್ರ ಇದ್ದೇ ಇರುತ್ತದೆ. ದೊಡ್ಡ ಗುಂಪೊಂದು ಇದರ ಹಿಂದೆ ಕೆಲಸ ಮಾಡ್ತಿರುತ್ತದೆ. ದುಷ್ಕೃತ್ಯಕ್ಕೆ ಆರ್ಥಿಕ ಬಲವನ್ನ ತುಂಬಲಾಗಿರುತ್ತದೆ. ಬಾಂಬ್ ತಯಾರಿ, ಅದರ ಪ್ರಯೋಗ, ಎಲ್ಲಿ ಸ್ಫೋಟ ಮಾಡಬೇಕು ಎಂಬ ಬಗ್ಗೆ ವರ್ಷಗಳಿಗಿಂತ ಹೆಚ್ಚು ತಯಾರಿ ಬೇಕಾಗುತ್ತದೆ ಎಲ್ಲಾ ಆಯಾಮಗಳಲ್ಲಿ ರಾಷ್ಟ್ರೀಯ ತನಿಖಾದಳ ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಮುಂದೆ ಆಗಬಹುದಾದ ಸಂಭಾವ್ಯ ಅವಘಡಗಳನ್ನು ತಪ್ಪಿಸಲು ರಾಜ್ಯ ಹಾಗೂ ಕೇಂದ್ರ ಪೊಲೀಸ್ ಇಲಾಖೆ ರಾತ್ರಿ ಹಗಲು ಕೆಲಸ ಮಾಡುತ್ತಿದೆ.

    ಫಾದರ್ ಮುಲ್ಲರ್ಸ್ ಆಸ್ಪತ್ರೆ (Father Muller Hospital) ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಶಾರೀಕ್ ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲು ರಾಷ್ಟ್ರೀಯ ತನಿಖಾ ದಳ ಹೊಂಚು ಹಾಕಿ ಕುಳಿತಿದೆ. ಒಮ್ಮೆ ಡಿಸ್ಚಾರ್ಜ್ ಆದ್ರೆ ಹಲವಾರು ಆತಂಕಕಾರಿ ವಿಚಾರಗಳು ಉಗ್ರನ ಬಾಯಿಯಿಂದ ಹೊರ ಬೀಳಲಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್‌ಕುಮಾರ್

    Live Tv
    [brid partner=56869869 player=32851 video=960834 autoplay=true]

  • ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ – ಮುತಾಲಿಕ್

    ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ – ಮುತಾಲಿಕ್

    ಬೆಂಗಳೂರು: ಶಿವಮೊಗ್ಗದ (Shivamogga) ತೀರ್ಥಹಳ್ಳಿಯಲ್ಲಿರುವ ಗೃಹ ಸಚಿವರ (Home Minister) ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ ಎಂದು ಶ್ರೀರಾಮಸೇನೆ (Sri Ram Sena) ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿಂದು (Benagaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ (PFI) ಸಂಘಟನೆ ಬ್ಯಾನ್ ಮಾಡಿದ್ರೂ, ಮಾನಸಿಕತೆ ಬ್ಯಾನ್ ಆಗಿಲ್ಲ. ಕರಾವಳಿ ಭಾಗದಲ್ಲಿ ಉಗ್ರರ ಕೃತ್ಯ ಹೆಚ್ಚಾಗುತ್ತಿದೆ. ಅಲ್ಲಿಗೆ ವಿಶೇಷ ಪಡೆಯ ಅಗತ್ಯ ಕರಾವಳಿ ಭಾಗಕ್ಕೆ ಅಗತ್ಯವಿದೆ. ಪಿಎಫ್‌ಐ ಮಾತ್ರವಲ್ಲ ಎಸ್‌ಡಿಪಿಐ (SDPI) ಕೂಡ ಬ್ಯಾನ್ ಆಗ್ಬೇಕು. ಇವರು ಬ್ಯಾನ್ ಆದ್ರೂ ಬಾಲ ಬಿಚ್ಚೋದು ಕಡಿಮೆಯಾಗಿಲ್ಲ. ಹೀಗಾಗಿ ಪೊಲೀಸರು (Police) ಇದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇಂಡೋನೆಷ್ಯಾದಲ್ಲಿ ಭೂಕಂಪ 40ಕ್ಕೂ ಅಧಿಕ ಸಾವು – 300ಕ್ಕೂ ಹೆಚ್ಚು ಮಂದಿಗೆ ಗಾಯ

    ಮಂಗಳೂರಿನ ಈ ಪ್ರಕರಣ ಭಟ್ಕಳಕ್ಕೂ ಲಿಂಕ್ ಇದೆ. ತೀರ್ಥಹಳ್ಳಿ ಗೃಹ ಸಚಿವರ ಮನೆ ಸುತ್ತಮುತ್ತಲೇ ಉಗ್ರರು ಅಡಗಿ ಕುಳಿತಿದ್ದಾರೆ. ಗೃಹ ಮಂತ್ರಿಗಳ ತವರೇ ಉಗ್ರರ ಸೆಂಟರ್ ಆಗಿದೆ. ಈ ಹಿಂದೆ ಕಾಂಗ್ರೆಸ್ (Congress) ಅವಧಿಯಲ್ಲೂ ಹಿಂದೂ ಹುಡುಗಿಯ ಅತ್ಯಾಚಾರ, ಹತ್ಯೆಯಾಗಿದೆ. ಆ ಪ್ರಕರಣವನ್ನೂ ರೀ ಓಪನ್ ಮಾಡಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ – ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ

    ಪಿಎಫ್‌ಐ (PFI) ನಿಷೇಧವಾದ್ರೂ ಅವ್ರ ಕುಕೃತ್ಯಕ್ಕೆ ಬ್ರೇಕ್ ಬಿದ್ದಿಲ್ಲ. ಮಂಗಳೂರಿನ ಬಾಂಬ್ ಬ್ಲಾಸ್ಟ್ (Bomb Blast) ಸಿಎಂ ಕಾರ್ಯಕ್ರಮ ಅಥವಾ ಆರ್‌ಎಸ್‌ಎಸ್ ಮಕ್ಕಳ ಕಾರ್ಯಕ್ರಮ ಗುರಿಯಾಗಿತ್ತೇ ಅನ್ನೋದನ್ನ ತನಿಖೆ ನಡೆಸಬೇಕು. ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್‌ಕುಮಾರ್

    ಕುಕ್ಕರ್ ಬಾಂಬ್ ಬ್ಲಾಸ್ಟ್- ಜಾಗತಿಕ ಉಗ್ರ ಸಂಘಟನೆಯಿಂದ ಪ್ರಭಾವಿತನಾಗಿದ್ದ ಶಾರೀಕ್: ಅಲೋಕ್‌ಕುಮಾರ್

    – ಕುಟುಂಬಸ್ಥರಿಂದ್ಲೇ ಗುರುತು ಪತ್ತೆ
    – ಶಿವಮೊಗ್ಗದ ಪ್ರಕರಣದಲ್ಲೂ ಇದ್ದ

    ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ತೀರ್ಥಹಳ್ಳಿಯ ಶಾರೀಕ್ (Shariq) ಜಾಗತಿಕ ನೆಟ್ ವರ್ಕ್ ಹೊಂದಿರೋ ಉಗ್ರ ಸಂಘಟನೆಯಿಂದ (Terrorist Groups) ಪ್ರಭಾವಿತನಾಗಿ ಕೃತ್ಯ ಎಸಗಿದ್ದಾನೆ ಎಂದು ಎಡಿಜಿಪಿ ಅಲೋಕ್‌ಕುಮಾರ್ (ADGP Alok Kumar) ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಿಂದ ಪೊಲೀಸರು (Shivamogga) ಕರೆಸಿಕೊಂಡಿದ್ದ ಮಲತಾಯಿ ಶಬನಾ, ಸೋದರಿ ಆತಿಯಾ, ಚಿಕ್ಕಮ್ಮ ಯಾಸ್ಮಿನ್ ಅವರು ಶಾರೀಕ್‌ನನ್ನು ಗುರುತು ಹಿಡಿದಿದ್ದಾರೆ. ಈ ಹಿಂದೆ  ಶಿವಮೊಗ್ಗದ ಕೇಸ್‌ನಲ್ಲಿ ಇವನು ಇದ್ದ. ಪೊಲೀಸರ ದಾಳಿ ವೇಳೆ ಶಾರೀಕ್ ಉಳಿದುಕೊಂಡಿದ್ದ ಮೈಸೂರಿನ ಮನೆಯಲ್ಲಿಯೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಮ ದೈವಗಳೇ ನಮ್ಮ ಊರನ್ನು ಕಾಪಾಡಿವೆ- ಕುಕ್ಕರ್ ಬ್ಲಾಸ್ಟ್ ಆದ ಆಟೋ ಚಾಲಕನ ಸಹೋದರನ ಮಾತು

    ಕೊಯಮತ್ತೂರು, ತಮಿಳುನಾಡು (TamilNadu), ಕೇರಳ ಎಲ್ಲೆಡೆ ಸುತ್ತಾಡಿ ಮೈಸೂರಿಗೆ ಬಂದಿದ್ದ. ನಮಗೆ ಮತ್ತೆ ಅವನ ಫೋಟೋ ನೋಡಿ ಶಾರೀಕ್ ಅಂತಾ ಗೊತ್ತಾಗಿತ್ತು. ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಬ್ಲಾಸ್ಟ್‌ಗೆ ನಿಷೇಧಿತ PFI ಲಿಂಕ್ – ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್

    ನಾವು ಅರಾಫತ್ ಆಲಿ ಮತ್ತು ಮತೀನ್ ಮನೆಯಲ್ಲಿ ಶೋಧ ನಡೆಸಿದ್ದೇವೆ. ಅವರ ಕುಟುಂಬ ಸದಸ್ಯರ ವಿಚಾರಣೆಯನ್ನೂ ನಡೆಸಿದ್ದೇವೆ. ಆದರೆ ಶಾರೀಕ್‌ಗೆ ಯಾರು ಫಂಡಿಂಗ್ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. 2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿದೆ. ಎ1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದರಂತೆ. ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವರ ಮಾಹಿತಿ ಗೊತ್ತಾಗಿತ್ತು. ಮುನೀರ್ ಬಂಧನ ಬಳಿಕ ಶಾಕೀರ್ ಟ್ರಯಲ್ ಬ್ಲಾಸ್ಟ್ ಮಾಡಿದ್ದು ಗೊತ್ತಾಗಿದೆ. ಆದರೆ ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕನಿಗೆ ಗೊತ್ತಿಲ್ಲ. ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರಿಗೆ ಒಬ್ಬನೇ ಬಂದಿದ್ದಾನೆ. ನಾವು ಕೊಯಮತ್ತೂರು ಮತ್ತು ತಮಿಳುನಾಡು ಪೊಲೀಸರ ಜೊತೆ ಸಂಪರ್ಕ ಇದ್ದೇವೆ. ಕೊಯಮತ್ತೂರು ಸ್ಪೋಟಕ್ಕೆ ಸಂಪರ್ಕ ಇದೆಯಾ ಅನ್ನೋ ಬಗ್ಗೆ ಸ್ಪಷ್ಟವಾಗಿಲ್ಲ. ಆದರೆ ಕೊಯಮತ್ತೂರು ಮತ್ತು ತಮಿಳುನಾಡಿನ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ ಆ ಸ್ಪೋಟ ಸಂಬಂಧ ಲಿಂಕ್ ಇದ್ಯಾ ಅನ್ನೋ ಬಗ್ಗೆಯೂ ತನಿಖೆ ಆಗುತ್ತೆ ಎಂದು ಹೇಳಿದ್ದಾರೆ.

    ಈಗಾಗಲೇ ಶಾರೀಕ್ ಸಹೋದರಿಯ ವಿಚಾರಣೆಯೂ ಆಗಿದೆ. ಮೈಸೂರಿನಲ್ಲಿ ಅವನ ಜೊತೆ ಸಂಪರ್ಕ ಇದ್ದ ಇಬ್ಬರನ್ನ ವಶಕ್ಕೆ ಪಡೆದಿದ್ದೇವೆ. ಈ ಕೇಸ್ ನಲ್ಲಿ ಮೈನ್ ಹ್ಯಾಂಡ್ಲರ್ ಮಾಝ್ ಮುನೀರ್ ಇದ್ದಾನ ಗೊತ್ತಿಲ್ಲ, ಏಕೆಂದರೆ ಅವನು ಜೈಲ್ ನಲ್ಲಿ ಇದ್ದಾನೆ. ಅದಕ್ಕೆ ಮೊದಲು ಟ್ರಯಲ್ ಬ್ಲಾಸ್ಟ್ ಜೊತೆಯಾಗಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಶಾರೀಕ್ ಬಾಂಬ್ ಅನ್ನ ಸರಿಯಾಗಿ ಜೋಡಿಸಿರಲಿಲ್ಲ, ಅದರಲ್ಲಿ ಅವನು ಎಕ್ಸ್ ಪರ್ಟ್‌ ಆಗಿರಲೂ ಇಲ್ಲ.  ಅರ್ಧಂಬರ್ಧ ಬಾಂಬ್ ತಯಾರಿಸಿದ್ದ, ಸರಿಯಾಗಿ ಮಾಡಿಲ್ಲ. ಮೈಸೂರಿನಲ್ಲಿ ಮೊಬೈಲ್ ತಯಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದ ಶಾರಿಕ್, ಪೊಟ್ಯಾಸಿಯಮ್ ನೈಟ್ರೈಟ್‌, ಸೋಡಿಯಂ, ಅಮೋನಿಯಂ ನಂತಹ ಸ್ಪೋಟಕ ಇತ್ತು. ಇದಕ್ಕೆ ಕೆಲವೊಂದು ಐಟಮ್ ಆನ್ ಲೈನ್‌ನಲ್ಲಿ, ಕೆಲ ಐಟಂ ನೇರವಾಗಿ ಶಾಪ್ ನಲ್ಲಿ ತೆಗೊಂಡಿದ್ದಾನೆ. ಸಿಮ್ ಕಾರ್ಡ್ ಖರೀದಿಗಾಗಿ ಕೊಯಮತ್ತೂರು ಮೂಲದ ಒಬ್ಬರ ಆಧಾರ್ ಕಾರ್ಡ್ ಬಳಕೆ ಮಾಡಿದ್ದ. ಸದ್ಯ ಕಸ್ಟಡಿಯಲ್ಲಿ ನಾಲ್ಕು ಜನ ಇದ್ದಾರೆ. ಮೂವರು ವಶದಲ್ಲಿದ್ದು, ಒಬ್ಬನನ್ನ ಊಟಿಯಿಂದ ಕರೆ ತರ್ತಾ ಇದೀವಿ. ಇದು ಕರ್ನಾಟಕ ಪೊಲೀಸರ ಸ್ವತಂತ್ರ ತನಿಖೆ, ಆದರೆ ಕೇಂದ್ರ ತನಿಖಾ ದಳದ ಜೊತೆ ಸಂಪರ್ಕದಲ್ಲಿ ಇದ್ದೇವೆ ಎಂದು ವಿವರಿಸಿದ್ದಾರೆ.

    ಸದ್ಯ ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಮೂರು ತಿಂಗಳಿನಿಂದ ಕರಾವಳಿಯಲ್ಲಿ ಶಾಂತಿ ಇದೆ, ಬಾಂಬ್ ಬ್ಲಾಸ್ಟ್ ಆಗಿದ್ರೆ ಮತ್ತೆ ಕರಾವಳಿಯಲ್ಲಿ ತೊಂದರೆಯಾಗುತ್ತಿತ್ತು. ದೇವರ ದಯೆಯಿಂದ ತೊಂದರೆಯಾಗಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

    ಶಾರೀಕ್ ಪೂರ್ತಿ ಗುಣಮುಖ ಆಗುವ ಹಾಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಬಳಿಕ ಆತನ ಹೆಚ್ಚಿನ ಮಾಹಿತಿ ಸಿಗಬಹುದು. ಅಲ್ಲಿವರೆಗೆ ಆಟೋ ಚಾಲಕನಿಗೂ ಚೇತರಿಸಿಕೊಳ್ಳಲೂ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ವಿನಂತಿಸಿದ್ದೇವೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಬ್ಲಾಸ್ಟ್ – ಮೈಸೂರಿನಲ್ಲಿ ಮನೆ ಮಾಲೀಕ, ಮೊಬೈಲ್ ಕೊಟ್ಟವರು ವಶಕ್ಕೆ

    ಕುಕ್ಕರ್ ಬಾಂಬ್ ಬ್ಲಾಸ್ಟ್ – ಮೈಸೂರಿನಲ್ಲಿ ಮನೆ ಮಾಲೀಕ, ಮೊಬೈಲ್ ಕೊಟ್ಟವರು ವಶಕ್ಕೆ

    ಮೈಸೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಇದೀದ ಪ್ರಮುಖ ಆರೋಪಿ ಶಾರೀಕ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

    ಶಂಕಿತ ಉಗ್ರನಿಗೆ ಮೈಸೂರಿ (Mysuru) ನಲ್ಲಿ ರೂಂ ಬಾಡಿಗೆ ನೀಡಿದ್ದ ಮನೆ ಮಾಲೀಕನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕಿತ ಉಗ್ರನಿಗೆ ಮೊಬೈಲ್ (Mobile) ಗಳನ್ನು ನೀಡಿದ್ದ ಮೊಬೈಲ್ ಅಂಗಡಿ ಮಾಲೀಕ ಹಾಗೂ ಅಂಗಡಿಯಲ್ಲಿದ್ದ ಇನ್ನೊಬ್ಬ ನೌಕರ ಕೂಡ ವಶಕ್ಕೆ ಪಡೆಯಲಾಗಿದೆ. ಮೈಸೂರು ಪೊಲೀಸರು ಮೂವರನ್ನು ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರ ಪೋಲಿಸ್ ಆಯುಕ್ತ ರಮೇಶ್ ಮಂಗಳೂರಿಗೆ ತೆರಳಿದ್ದಾರೆ. ಇದನ್ನೂ ಓದಿ: ಗ್ರಾಮ ದೈವಗಳೇ ನಮ್ಮ ಊರನ್ನು ಕಾಪಾಡಿವೆ- ಕುಕ್ಕರ್ ಬ್ಲಾಸ್ಟ್ ಆದ ಆಟೋ ಚಾಲಕನ ಸಹೋದರನ ಮಾತು

    ಇತ್ತ ಶಾರಿಕ್ (Shariq) ಜೊತೆಗೆ ನಿರಂತರ ಸಂಪರ್ಕ ಇದ್ದ ಮೂವರು ಶಂಕಿತರು ವಶಕ್ಕೆ ಪಡೆಯಲಾಗಿದ್ದು, ಏನೆಲ್ಲಾ ಮಾತನಾಡಿದ್ರು. ಬೇರೆ ಏನಾದ್ರು ವಿಚಾರಗಳು ತಿಳಿದಿವೆಯಾ ಎಂದು ವಿಚಾರಣೆ ನಡೆಸಲಗುತ್ತಿದೆ. ಶಾರಿಕ್ ಜೊತೆಗೆ ಯಾಕೆ ನಿರಂತರ ಸಂಪರ್ಕದಲ್ಲಿ ಇದ್ದರು. ಏನಾದ್ರು ಸಹಾಯ ಮಾಡಲಾಗಿದೆಯಾ…? ಹೀಗೆ ಬೇರೆ ಬೇರೆ ಆಯಾಮದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಶಿವಮೊಗ್ಗ ಕೇಸ್ ಹಾಗೂ ಮಂಗಳೂರು ಬ್ಲಾಸ್ಟ್ ಕೇಸ್ ಎರಡೂ ಇಂಟರ್ ಲಿಂಕ್ ಆಗಿದೆ. ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಮೂರು ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಬ್ಲಿಕ್ ಟಿವಿಗೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರು ಬಾಂಬ್ ಬ್ಲಾಸ್ಟ್‌ಗೆ ನಿಷೇಧಿತ PFI ಲಿಂಕ್ – ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್

    ಮಂಗಳೂರು ಬಾಂಬ್ ಬ್ಲಾಸ್ಟ್‌ಗೆ ನಿಷೇಧಿತ PFI ಲಿಂಕ್ – ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್

    ಮಂಗಳೂರು: ನಗರದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ (Mangaluru) ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಹಲವು ಸ್ಫೋಟಕ ಮಾಹಿತಿಗಳು ಹೊರಬರುತ್ತಿವೆ.

    ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಮಾಡಿದವರು ಯಾರು, ಏಕೆ? ಮಂಗಳೂರು ಟಾರ್ಗೆಟ್‌ಗೆ ಕಾರಣವೇನು? ಪೊಲೀಸ್ (Police) ವಶದಲ್ಲಿ ಇರೋ ಶಂಕಿತರ ಬಾಯ್ಬಿಟ್ಟ ಸತ್ಯವೇನು? ಮಂಗಳೂರಿನಲ್ಲಿ ಭಯ ಹುಟ್ಟಿಸಬೇಕು ಅನ್ನೋ ಮುಖ್ಯ ಅಜೆಂಡಾವಾಗಿತ್ತಾ? ಅನ್ನೋ ಹಲವು ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ. ಇದನ್ನೂ ಓದಿ: ಮದುವೆಯಾದ್ಮೇಲೂ ಅಕ್ರಮ ಸಂಬಂಧ – ಮಾಜಿ ಪ್ರೇಯಸಿಯನ್ನ ಕತ್ತರಿಸಿ, ಅರೆಬೆತ್ತಲಾಗಿ ಬಿಸಾಡಿ ವಿಕೃತಿ

    ನಿಷೇಧಿತ ಪಿಎಫ್‌ಐ ಸಂಘಟನೆ ಈ ಬ್ಲಾಸ್ಟ್‌ ರೂವಾರಿಗಳಾಗಿದ್ದು, ಬ್ಲಾಸ್ಟ್ ಮೂಲಕ ಜನರಿಗೆ ಭಯ ಹುಟ್ಟಿಸಬೇಕು ಅನ್ನೋ ಸಂಚು ರೋಪಿಸಿತ್ತು ಎನ್ನಲಾಗಿದೆ. ಇದನ್ನೂ ಓದಿ: ಶಾರೀಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಹೆತ್ತವರು

    ನಮ್ಮ ಸಹವಾಸಕ್ಕೆ ಯಾರೂ ಬರಬಾರದು ಅನ್ನೋದು ಮುಖ್ಯ ಅಜೆಂಡಾವಾಗಿತ್ತು. ಪಿಎಫ್‌ಐ ಬ್ಯಾನ್ ಮಾಡಿದ ಕೋಪವೂ ಇತ್ತು ಶಂಕಿತರಿಗೆ ಇತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವ ಹುನ್ನಾರ ಇತ್ತೆಂದು ಹೇಳಲಾಗುತ್ತಿದೆ. ಇದಕ್ಕೆ ಮೂಲ ಕಾರಣಗಳನ್ನು ಪತ್ತಹೆಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಾರೀಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಹೆತ್ತವರು

    ಶಾರೀಕ್ ಗುರುತು ಪತ್ತೆ ಹಚ್ಚಲು ಮಂಗಳೂರಿಗೆ ಆಗಮಿಸಿದ ಹೆತ್ತವರು

    ಮಂಗಳೂರು: ಮಂಗಳೂರಿನ (Mangaluru) ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್  (Cooker Blast) ಪ್ರಕರಣದ ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ತಡರಾತ್ರಿ ಶಿವಮೊಗ್ಗದಿಂದ (Shivamogga) ಮಂಗಳೂರಿಗೆ ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ.

    ಮಂಗಳೂರಿನ ಕಂಕನಾಡಿ ಆಸ್ಪತ್ರೆಯಲ್ಲಿ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಶೇ.40 ರಷ್ಟು ಶಾರೀಕ್ (Shariq) ದೇಹ ಸುಟ್ಟು ಹೋಗಿದ್ದು, ಮಂಗಳೂರಿನ ಕಂಕನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾನೆ. ಮುಖ ಬಾವು ಬಂದಿದ್ದ ಕಾರಣ ಪೊಲೀಸರಿಗೆ ಗುರುತು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅನುಮಾನದ ಹಿನ್ನೆಲೆಯಲ್ಲಿ ಶಾರೀಕ್ ಹೆತ್ತವರನ್ನು ಕರೆಸಿದ್ದಾರೆ. ಪೋಚಕರಿಗೂ ಶಾರೀಕ್ ಗುರುತು ಪತ್ತೆಯಾಗಲಿಲ್ಲ ಎಂದರೆ ಕೊನೆಗೆ ಡಿಎನ್‍ಎ ಟೆಸ್ಟ್ ಮಾಡಿಸುವ ಸಾಧ್ಯತೆ ಇದೆ.  ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ- ISIS ಉಗ್ರ ಪರ ಗೋಡೆ ಬರಹ ಬರೆದಿದ್ದ ಆರೋಪಿಯಿಂದ ಕೃತ್ಯ

    ಸದ್ಯ ಮಂಗಳೂರಿನಲ್ಲೇ ಬೀಡು ಬಿಟ್ಟಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು, ಶಾರೀಕ್ ಹೆತ್ತವರನ್ನೂ ವಿಚಾರಣೆ ನಡೆಸಲಿದ್ದಾರೆ. ನಿನ್ನೆಯಿಂದ ಶಾರೀಕ್ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಇದೀಗ ಮಾತನಾಡುವ ಸ್ಥಿತಿಯಲ್ಲಿ ಶಾರೀಕ್ ಇದ್ದಾನೆ. ಹೀಗಾಗಿ ಇಂದು ಪೊಲೀಸರಿಂದ ಶಾರೀಕ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಲಷ್ಕರ್ ಎ ತೋಯ್ಬಾ ಪರ ಗೋಡೆ ಬರಹ ಬರೆದಿದ್ದ ಶಾರೀಕ್, ಇತ್ತೇಚೆಗೆ ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನವಾದ ಬಳಿಕ ತಲೆಮರೆಸಿಕೊಂಡಿದ್ದನು.

    ಮತ್ತೊಂದೆಡೆ ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಹಿನ್ನೆಲೆ ತೀರ್ಥಹಳ್ಳಿಯ ಸೊಪ್ಪುಗಡ್ಡೆಯಲ್ಲಿರುವ ಶಾರೀಖ್ ನಿವಾಸ ಹಾಗು ಶಾರೀಕ್ ಸಂಬಂಧಿಕರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇಲ್ಲಿವರೆಗೂ ಸುಮಾರು ಒಟ್ಟು 4 ಮನೆಗಳ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಚಿನ್ನದ ವ್ಯಾಪಾರಿಗೆ ಪೊಲೀಸರಿಂದಲೇ ಧಮ್ಕಿ!

    Live Tv
    [brid partner=56869869 player=32851 video=960834 autoplay=true]