Tag: Shashikant Gatti

  • ಕುತೂಹಲ ಮೂಡಿಸುವ ನೈಜಘಟನೆ ಆಧಾರಿತ ‘ರಾಂಚಿ’ ಚಿತ್ರದ ಟೀಸರ್

    ಕುತೂಹಲ ಮೂಡಿಸುವ ನೈಜಘಟನೆ ಆಧಾರಿತ ‘ರಾಂಚಿ’ ಚಿತ್ರದ ಟೀಸರ್

    ರುದ್ರಾನಂದ ಆರ್ ಎನ್ ಹಾಗೂ ಅರುಣ್ ಕುಮಾರ್ ಎನ್ ನಿರ್ಮಾಣ‌ದ, ಶಶಿಕಾಂತ್ ಗಟ್ಟಿ (Shashikant Gatti) ನಿರ್ದೇಶನದ, ನೈಜಘಟನೆ ಆಧಾರಿತ  “ರಾಂಚಿ” (Ranchi) ಚಿತ್ರದ ಟೀಸರ್ (Teaser) ಬಿಡುಗಡೆಯಾಗಿದೆ. ನಾನು ಐ ಪಿ ಸಿ ಸೆಕ್ಷನ್ 300 ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದೆ. ಆಗ ನನಗೆ “ರಾಂಚಿ”ಯಿಂದ ಒಂದು ಕರೆ ಬರುತ್ತದೆ. ನೀವು ರೈಲ್ವೆ ಇಲಾಖೆ ಕುರಿತು ಒಂದು ಡಾಕ್ಯುಮೆಂಟರಿ ಮಾಡಿಕೊಡಬೇಕು. ರಾಂಚಿಗೆ ಬನ್ನಿ. ಅವರ ಪರಿಶುದ್ಧ ಹಿಂದಿ ಭಾಷೆ ಕೇಳಿ,   ಇದು ಸರ್ಕಾರದಿಂದ ಬಂದಿರುವ ಕರೆ ಎಂದು ತಿಳಿದು ಸಂತೋಷವಾಯಿತು. ಆಮೇಲೆ ಯೋಚನೆ ಮಾಡಿದೆ. ಸರ್ಕಾರ ಇಂತಹ ವಿಷಯವನ್ನು ಟೆಂಡರ್ ಮೂಲಕ ಕರೆಯುತ್ತಾರೆ. ಇದು ಸುಳ್ಳು ಇರಬಹುದು ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಫೋನ್ ಮಾಡಿ ಈ ಬಗ್ಗೆ ಕೇಳಿದೆ. ಅವರು ಇದೆಲ್ಲಾ ಸುಳ್ಳು. ನೀವು ಇಲ್ಲಿಗೆ ಬರಬೇಡಿ ಎಂದರು. ಈ ರೀತಿ ಸಾಕಷ್ಟು ನಿರ್ದೇಶಕರು, ನಿರ್ಮಾಪಕರು ಈ ರೀತಿಯ ಕರೆಯಿಂದ ಮೋಸ ಹೋಗಿದ್ದಾರೆ. ಈ ವಿಷಯವನ್ನಿಟ್ಟುಕೊಂಡೆ “ರಾಂಚಿ” ಸಿನಿಮಾ ಮಾಡಿದ್ದೇವೆ.

    ನಾಯಕ ಪ್ರಭು ಮುಂಡ್ಕರ್ (Prabhu Mundkar) ಕಥೆ ಕೇಳಿ ನಟಿಸಲು ಒಪ್ಪಿದರು. ರುದ್ರಾನಂದ ಹಾಗೂ ಅರುಣ್‌ ಕುಮಾರ್ ನಿರ್ಮಾಣಕ್ಕೆ ಮುಂದಾದರು. ನೈಜಘಟನೆ ಆಧಾರಿತ ಸಿನಿಮಾ‌ವಿದು. “ರಾಂಚಿ”ಯಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ‌. 2020 ರಲ್ಲೇ ಸೆನ್ಸಾರ್ ಆಗಿತ್ತು. ಕೊರೋನ ಕಾರಣದಿಂದ ಬಿಡುಗಡೆ ವಿಳಂಬವಾಯಿತು.  ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ. ದಿವ್ಯ ಉರುಡಗ (Divya Urudaga), ಟೋಟ ರಾಯ್ ಚೌಧರಿ, ಆರತಿ ನಾಯರ್, ಲಕ್ಷ್ಮಣ್ ಗೌಡ, ಸುರೇಶ್ ಹೆಬ್ಳೀಕರ್, ಉಷಾ ಭಂಡಾರಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ ಎಂದು ಚಿತ್ರದ ಕುರಿತು ನಿರ್ದೇಶಕ ಶಶಿಕಾಂತ್ ಗಟ್ಟಿ ಮಾಹಿತಿ ನೀಡಿದರು. ಇದನ್ನೂ ಓದಿ:‘ಅರ್ಧಂಬರ್ಧ ಪ್ರೇಮಕಥೆ’ಯಲ್ಲಿ ಅರವಿಂದ್-ದಿವ್ಯಾ ಉರುಡುಗ ಜೋಡಿ

    ಕೋವಿಡ್ ನಂತರ ಜನ ಸಿನಿಮಾ ನೋಡುವ ರೀತಿ ಬದಲಾಗಿದೆ. ಜನರ  ನಿರೀಕ್ಷೆ ಬೇರೆ ತರಹ ಇದೆ. ” ಕೆ.ಜಿ.ಎಫ್”, “ಚಾರ್ಲಿ”, ” ಕಾಂತಾರ” ದಂತಹ ಚಿತ್ರಗಳ ಗೆಲುವು ಇದಕ್ಕೆ ಸಾಕ್ಷಿ. ನಾನು ಸೈಂಟಿಸ್ಟ್ ಆಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಆನಂತರ ಚಿತ್ರರಂಗಕ್ಕೆ ಬಂದೆ. ನಾನು “ಡಬಲ್ ಇಂಜಿನ್” ಚಿತ್ರದಲ್ಲಿ ನಟಿಸಬೇಕಾದರೆ ಶಶಿಕಾಂತ್ ಈ ಚಿತ್ರದ ಕಥೆ ಹೇಳಿದರು. ನನಗೂ ನೈಜಘಟನೆ ಆಧಾರಿತ ಚಿತ್ರದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಆ ಸಮಯದಲ್ಲಿ ಈ ಕಥೆ ಕೇಳಿ, ನಟಿಸಲು ಒಪ್ಪಿದೆ ಎಂದರು ನಟ ಪ್ರಭು ಮುಂಡ್ಕರ್.

    ಪ್ರಭು ಅವರ ಮೂಲಕ ನಿರ್ದೇಶಕ ಶಶಿಕಾಂತ್ ಗಟ್ಟಿ ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಆರತಿ ನಾಯರ್, ಲಕ್ಷ್ಮಣ್ ಗೌಡ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಿರ್ದೇಶಕ ಶಶಿಕಾಂತ್ ಗಟ್ಟಿ ಚಿತ್ರದಲ್ಲಿ ವಿಜಯ ರಾಘವೇಂದ್ರ

    ನಿರ್ದೇಶಕ ಶಶಿಕಾಂತ್ ಗಟ್ಟಿ ಚಿತ್ರದಲ್ಲಿ ವಿಜಯ ರಾಘವೇಂದ್ರ

    ಟ ವಿಜಯ ರಾಘವೇಂದ್ರ ಶಶಿಕಾಂತ್ ಗಟ್ಟಿ ನಿರ್ದೇಶನದ ನೂತನ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ‘ರಿಂಗ ರಿಂಗ ರೋಸಸ್’ ಎಂದು ಟೈಟಲ್ ಫಿಕ್ಸ್ ಆಗಿದ್ದು, ಐಪಿಸಿ ಸೆಕ್ಷನ್ 300 ನಂತರ ಮತ್ತೊಮ್ಮೆ ಶಶಿಕಾಂತ್ ಗಟ್ಟಿ ಜೊತೆ ಕೆಲಸ ಮಾಡುತ್ತಿರೋದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ ಚಿನ್ನಾರಿ ಮುತ್ತಾ.

    ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿರುವ ವಿಜಯ ರಾಘವೇಂದ್ರ ಸಿನಿಮಾ ನಿರ್ಮಾಣಕ್ಕೂ ಶಶಿಕಾಂತ್ ಗಟ್ಟಿ ಮುಂದಾಗಿರೋದಕ್ಕೆ ಶುಭ ಕೋರಿದ್ದಾರೆ. ರಾಂಚಿ, ಐಪಿಸಿ ಸೆಕ್ಷನ್ 300 ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದ ಶಶಿಕಾಂತ್ ಗಟ್ಟಿ ಆರು ವರ್ಷ ಸಮಯ ತೆಗೆದುಕೊಂಡು ‘ರಿಂಗ ರಿಂಗ ರೋಸಸ್’ ಕಥೆ ಹೆಣೆದಿದ್ದಾರೆ. ಚಿತ್ರ ಗ್ಯಾಂಗ್‍ಸ್ಟರ್ ಕಥಾನಕ ಹೊಂದಿದ್ದು, ವಿಭಿನ್ನ ಹಾಗೂ ಹೊಸತನದಿಂದ ‘ರಿಂಗ ರಿಂಗ ರೋಸಸ್’ ಸಿನಿಮಾ ಕೂಡಿರಲಿದೆ ಎಂದು ನಿರ್ದೇಶಕ ಶಶಿಕಾಂತ್ ಗಟ್ಟಿ ತಿಳಿಸಿದ್ದಾರೆ.

    ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನದ ಜೊತೆ ಮೊದಲ ಬಾರಿ ತಮ್ಮದೇ ಬ್ಯಾನರ್ ಮೂಲಕ ಸಿನಿಮಾ ನಿರ್ಮಾಣವನ್ನು ಮಾಡುತ್ತಿದ್ದಾರೆ ಶಶಿಕಾಂತ್ ಗಟ್ಟಿ. ರೆಗ್ಯುಲರ್ ಸಿನಿಮಾಗಳ ಹೀರೋ ಹೀರೋಯಿನ್ ಕಾನ್ಸೆಪ್ಟ್ ಗಿಂತಲೂ ಭಿನ್ನವಾದ ಕಥಾನಕ ಹಾಗೂ ಚಿತ್ರಕಥೆ ಚಿತ್ರದಲ್ಲಿ ನೀಡಲು ನಿರ್ದೇಶಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಒಬ್ಬ ಸಿನಿಮಾ ಹೀರೋಯಿನ್ ಜೀವನದಲ್ಲಾಗುವ ಘಟನೆಗಳ ಸುತ್ತ ‘ರಿಂಗ ರಿಂಗ ರೋಸಸ್’ ಸಿನಿಮಾ ಕಥೆ ಸುತ್ತಲಿದ್ದು, ಚಿತ್ರದಲ್ಲಿ ಐದು ಜನ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ವಿಜಯ್ ರಾಘವೇಂದ್ರ, ಸತ್ಯ, ರಘು ಭಟ್, ಕಾವ್ಯ ಗೌಡ, ತ್ರಿಪುರಾರಿ ಯಾದವ್, ವಿಶಾಲ್ ಹೆಗ್ಡೆ, ಸ್ನೇಕ್ ಅರುಣ್ ತಾರಾಬಳಗದಲ್ಲಿದ್ದು, ನಟ ವಿಜಯ ರಾಘವೇಂದ್ರ ಚಿತ್ರದಲ್ಲಿ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ.

    ಶಶಿಕಾಂತ್ ಮೋಷನ್ ಪಿಕ್ಚರ್ಸ್ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ಮೂಲಕ ‘ರಿಂಗ ರಿಂಗ ರೋಸಸ್’ ಸಿನಿಮಾ ನಿರ್ಮಾಣವಾಗುತ್ತಿದ್ದು, ಮಾರ್ಚ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಗೌತಮ್ ಶ್ರೀವತ್ಸ ಸಂಗೀತ, ವಿನೋದ್ ರಾಜ್ ಛಾಯಾಗ್ರಹಣ `ರಿಂಗ ರಿಂಗ ರೋಸಸ್’ ಚಿತ್ರಕ್ಕಿದೆ.