Tag: Shasikumar

  • ಶಶಿಕುಮಾರ್ ಪುತ್ರನ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ : ‘ರಾಶಿ’ಗೆ ಆದಿತ್ಯ ಹೀರೋ

    ಶಶಿಕುಮಾರ್ ಪುತ್ರನ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ : ‘ರಾಶಿ’ಗೆ ಆದಿತ್ಯ ಹೀರೋ

    ಧುವನ್ ಫಿಲಂಸ್ ಲಾಂಛನದಲ್ಲಿ  ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ (Shasikumar) ಅವರ ಪುತ್ರ ಆದಿತ್ಯ (Aditya) ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸುಂದರ ಪ್ರೇಮ ಕಥಾನಕಕ್ಕೆ “ರಾಶಿ” (Rashi) ಎಂದು ಹೆಸರಿಡಲಾಗಿದೆ. ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ. ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರಾದ ಜಿ.ಎಸ್.ಚಂದ್ರಶೇಖರ್, ನಟ ಶಶಿಕುಮಾರ್, ಬೆಂಗಳೂರು ಪೊಲೀಸ್ ಉಪ ಆಯುಕ್ತರಾದ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಎಸ್ ಚಿದಂಬರ್ ಸೇರಿದಂತೆ ಮುಂತಾದ ಗಣ್ಯರು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ‌ ಎಂದು ಮಾತನಾಡಿದ ನಾಯಕ ಆದಿತ್ಯ ಶಶಿಕುಮಾರ್, ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ನನ್ನ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ ಎಂದರು.

    ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಅವರು ನನ್ನನ್ನು ಕರೆದು ಈ ಚಿತ್ರವನ್ನು ನಿರ್ದೇಶಿಸಬೇಕೆಂದರು.  ಅಖಿಲೇಶ್ ಅವರೆ ಈ ಚಿತ್ರದ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ. “ಟ್ರಿಗರ್” ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ಇನ್ನು ಈ ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ‌, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನವಿದೆ. ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಈ ಪ್ರೇಮ ಕಥಾನಕಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ವಿಜಯ್ ಪಾಳೇಗಾರ್ ತಿಳಿಸಿದರು.

    ಚಿತ್ರದ ನಾಯಕಿ ಸಮೀಕ್ಷ, ನಿರ್ಮಾಪಕ ಅಖಿಲೇಶ್,  ಕಲಾವಿದರಾದ ಕರಿಸುಬ್ಬು, ಉಗ್ರಂ ರವಿ, ಹುಲಿ ಕಾರ್ತಿಕ್ ಮುಂತಾದವರು “ರಾಶಿ” ಚಿತ್ರದ ಬಗ್ಗೆ ‌ಮಾತನಾಡಿದರು.

  • ನರೇಂದ್ರ ಮೋದಿ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾದ ನಟ ಶಶಿಕುಮಾರ್

    ನರೇಂದ್ರ ಮೋದಿ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾದ ನಟ ಶಶಿಕುಮಾರ್

    ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಅಲ್ಲಿಂದ ಹೊರ ಬಂದಿದ್ದ ನಟ ಶಶಿಕುಮಾರ್ (Shashikumar), ಇಂದು ಬೆಂಗಳೂರಿನಲ್ಲಿ ಬಿಜೆಪಿ ಪಕ್ಷ ಸೇರಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai), ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಮ್ಮುಖದಲ್ಲಿ ಬಿಜೆಪಿ ಸೇರಿಕೊಂಡಿರುವ ಶಶಿಕುಮಾರ್, ತಾವು ನರೇಂದ್ರ ಮೋದಿ (Narendra Modi) ಅವರ ಕಾರ್ಯವೈಖರಿ ಮೆಚ್ಚಿ ಈ ಪಕ್ಷವನ್ನು ಸೇರಿರುವುದಾಗಿ ಹೇಳಿದ್ದಾರೆ.

    ಸಿನಿಮಾ ರಂಗದ ಜೊತೆ ಜೊತೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಶಶಿಕುಮಾರ್, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಮತ್ತು ಗೆಲುವನ್ನೂ ಕಂಡಿದ್ದಾರೆ. ಇದೀಗ ಮತ್ತೆ ಸಕ್ರೀಯವಾಗಿ ರಾಜಕಾರಣದಲ್ಲೇ ಉಳಿಯುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಇಂದು ಬಿಜೆಪಿ ಪಕ್ಷ ಸೇರ್ಪಡೆಗೊಂಡ ನಂತರ ತಮ್ಮ ರಾಜಕೀಯ ನಿಲುವುಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ಇದನ್ನೂ ಓದಿ:ಡಯಟ್ ಕಾರಣದಿಂದಾಗಿ ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ?

    ಬಿಜೆಪಿ (BJP) ಸೇರ್ಪಡೆಗೊಂಡ  ನಂತರ ಮಾಧ್ಯಮಗಳ ಜೊತೆ ಮಾತನಾಡಿರುವ ಶಶಿಕುಮಾರ್, ‘ನಾನು ಇಲ್ಲಿ ಟಿಕೆಟ್ ಕೇಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಬಗ್ಗೆ ಮೆಚ್ಚಿ ಬಂದಿದ್ದೇನೆ. ಸಿಎಂ ಕೂಡ SC, ST ಸಮುದಾಯಕ್ಕೆ ನೀಡಿದ ಕೊಡುಗೆ ನೋಡಿ ಬಂದೆ. ಮೀಸಲಾತಿ ವಿಚಾರವಾಗಿ ಬಹು ವರ್ಷದ ಬೇಡಿಕೆ ಈಡೇರಿಸಿದ್ದಾರೆ ಮುಖ್ಯಮಂತ್ರಿಗಳು ಎಂದಿದ್ದಾರೆ.

    ಅಲ್ಲದೇ ಶಶಿಕುಮಾರ್ ಚಳ್ಳಕೆರೆ ವಿಧಾನಸಭೆ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದ್ದು, ಈ ಕುರಿತೂ ಅವರು ಪ್ರತಿಕ್ರಿಯೆ ನೀಡಿದ್ದು, ‘ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಸನ್ಯಾಸಿಯಲ್ಲ, ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಟಿಕೆಟ್ ಕೊಟ್ರೆ ಸ್ಪರ್ಧಿಸುವ ಉತ್ಸಾಹ ಇದೆ’ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ತಾವು ಚಳ್ಳಕೆರೆ ಟಿಕೆಟ್ ಆಕಾಂಕ್ಷಿ ಎನ್ನುವುದನ್ನೂ ಪರೋಕ್ಷವಾಗಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]