Tag: Shaurya Chakra

  • ಮೇಜರ್ ಆಶಿಶ್ ದಹಿಯಾ ಸೇರಿ 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

    ಮೇಜರ್ ಆಶಿಶ್ ದಹಿಯಾ ಸೇರಿ 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

    ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಂದು ಉಗ್ರರ ವಿರುದ್ಧ ಹೋರಾಡಿ ವೀರ ಮರಣ ಹೊಂದಿದ್ದ ಮೇಜರ್ ಆಶೀಶ್ ದಹಿಯಾ ಸೇರಿದಂತೆ 33 ಮಂದಿಗೆ ಶೌರ್ಯ ಚಕ್ರ (Shaurya Chakra) ಹಾಗೂ ಮರಣೋತ್ತರವಾಗಿ ನಾಲ್ಕು ಸೇರಿದಂತೆ 6 ಕೀರ್ತಿ ಚಕ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

    ರಾಷ್ಟ್ರೀಯ ರೈಫಲ್ಸ್ 50ನೇ ಬೆಟಾಲಿಯನ್‌ನ ಧೀರ ಯೋಧ, ಜಮ್ಮು & ಕಾಶ್ಮೀರದಲ್ಲಿ ಭಯೋತ್ಪಾದಕರ ವಿರುದ್ಧ ಅಪ್ರತಿಮವಾಗಿ ಹೋರಾಡಿದ್ದರು. ನಾಲ್ವರು ಉಗ್ರರನ್ನು ಕೊಂದು, 3 ಐಇಡಿಗಳನ್ನು ನಿಷ್ಕ್ರಿಯಗೊಳಿಸಿದ್ದರು. 2022ರಿಂದ ಈವರೆಗೆ 5 ಅತ್ಯಂತ ಅಪಾಯಕಾರಿ ಆಪರೇಷನ್‌ಗಳಲ್ಲಿ ಭಾಗಿಯಾಗಿದ್ದರು. ಅವರ ಈ ಪಾತ್ರವನ್ನು ಗೌರವಿಸುವ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಶೌರ್ಯ ಚಕ್ರ ಪ್ರಶಸ್ತಿಯನ್ನು ನೀಡಿದ್ದಾರೆ.

    ಇನ್ನೂ ಕೀರ್ತಿ ಚಕ್ರವು (Kirti Chakra) ಭಾರತದ 2ನೇ ಅತ್ಯುನ್ನತ ಶಾಂತಿ ಶೌರ್ಯ ಪ್ರಶಸ್ತಿಯಾಗಿದೆ. ಸಿಖ್ ಲೈಟ್ ಇನ್‌ಫ್ಯಾಂಟ್ರಿಯ ಕರ್ನಲ್ ಮನ್ಪ್ರೀತ್ ಸಿಂಗ್, ರಾಷ್ಟ್ರೀಯ ರೈಫಲ್ಸ್‌ನ ಇತರ ಇಬ್ಬರು ಸೇನಾ ಸಿಬ್ಬಂದಿ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಗೆ ಮರಣೋತ್ತರವಾಗಿ ಕೀರ್ತಿ ಚಕ್ರವನ್ನು ನೀಡಲಾಗಿದೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪುರಸ್ಕಾರ ಸಮಾರಂಭದಲ್ಲಿ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ ಮುರ್ಮು ಅವರು 6 ಮರಣೋತ್ತರ ಸೇರಿದಂತೆ 33 ಶೌರ್ಯ ಚಕ್ರ ಪ್ರಶಸ್ತಿಗಳನ್ನು ಸಶಸ್ತ್ರ ಪಡೆಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರ ಸಿಬ್ಬಂದಿಗೆ ಪ್ರದಾನ ಮಾಡಿದರು ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

    56 ರಾಷ್ಟ್ರೀಯ ರೈಫಲ್ಸ್‌ನ ಮರಾಠಾ ಲೈಟ್ ಇನ್‌ಫ್ಯಾಂಟ್ರಿಯ ಮೇಜರ್ ಮಲ್ಲ ರಾಮ ಗೋಪಾಲ್ ನಾಯ್ಡು ಮತ್ತು 22 ರಾಷ್ಟ್ರೀಯ ರೈಫಲ್ಸ್‌ನ ಪಂಜಾಬ್ ರೆಜಿಮೆಂಟ್‌ನ ಮೇಜರ್ ಮಂಜಿತ್ ಅವರು ಕೀರ್ತಿ ಚಕ್ರವನ್ನು ಪಡೆದಿದ್ದಾರೆ.

  • ಉಗ್ರರ ವಿರುದ್ಧ ಹೋರಾಡಿ ಹುತಾತ್ಮನಾಗಿದ್ದ ಕಾನ್ಸ್‌ಟೇಬಲ್ ತಾಯಿ ಗಡೀಪಾರಿಲ್ಲ

    ಉಗ್ರರ ವಿರುದ್ಧ ಹೋರಾಡಿ ಹುತಾತ್ಮನಾಗಿದ್ದ ಕಾನ್ಸ್‌ಟೇಬಲ್ ತಾಯಿ ಗಡೀಪಾರಿಲ್ಲ

    – ಶೌರ್ಯ‌ ಚಕ್ರ ಪ್ರಶಸ್ತಿ ಪಡೆದಿದ್ದ ಮುದಾಸಿರ್

    ನವದೆಹಲಿ: ಪಹಲ್ಗಾಮ್‌ ದಾಳಿ (Pahalgam Attack) ಬಳಿಕ ಪಾಕಿಸ್ತಾನದ (Pakistan) ವೀಸಾ ಸ್ಥಗಿತಗೊಳಿಸಿರುವ ಕಾರಣ ಭಾರತದಲ್ಲಿದ್ದ (India) ಪಾಕಿಸ್ತಾನೀಯರು ತಮ್ಮ ದೇಶಕ್ಕೆ ವಾಪಸ್‌ ಆಗುತ್ತಿದ್ದಾರೆ. ಇನ್ನೂ ಪಾಕ್‌ಗೆ ಗಡೀಪಾರಾಗುವ ಭೀತಿ ಎದುರಿಸಿದ್ದ ಕಾಶ್ಮೀರದ ಶೌರ್ಯ ಚಕ್ರ (Shaurya Chakra) ಪ್ರಶಸ್ತಿ ಪುರಸ್ಕೃತ ಪೊಲೀಸ್ ಪೇದೆಯ ತಾಯಿಯನ್ನು ಈ ಕ್ರಮದಿಂದ ಕೈಬಿಡಲಾಗಿದೆ.

    ಕೇಂದ್ರದ ಆದೇಶದಿಂದ ಮರಣೋತ್ತರ ಶೌರ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಪೇದೆ ಮುದಾಸಿರ್ ಅಹ್ಮದ್ ಶೇಖ್ ಅವರ ತಾಯಿ ಶಮೀಮಾ ಅಖ್ತರ್‌ ಅವರು ಗಡೀಪಾರು ಕ್ರಮಕ್ಕೆ ಒಳಗಾಗಿದ್ದರು. ಈಗ ಸರ್ಕಾರ ಅವರಿಗೆ ಭಾರತದಲ್ಲಿಯೇ ಇರಲು ಅನುಮತಿ ನೀಡಿದೆ. ಇದರಿಂದ ಶಮೀಮಾ ಮನೆಗೆ ಮರಳಿದ್ದಾರೆ. 1990ರಲ್ಲಿ ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳು ಭುಗಿಲೇಳುವುದಕ್ಕೂ ಮುನ್ನವೇ ಶಮೀಮಾ ಕಾಶ್ಮೀರದ ವ್ಯಕ್ತಿಯನ್ನು ಮದುವೆಯಾಗಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ನೇತೃತ್ವದಲ್ಲಿಂದು 4 ಹೈವೋಲ್ಟೇಜ್ ಸರಣಿ ಸಭೆ – ಪಾಕ್ ಬಗ್ಗುಬಡಿಯೋಕೆ ಮಾಸ್ಟರ್ ಪ್ಲ್ಯಾನ್‌!

    2022ರ ಮೇನಲ್ಲಿ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪೊಲೀಸ್‌ ಪೇದೆಯಾಗಿದ್ದ ಶಮೀಮಾ ಅವರ ಮಗ ಮುದಾಸಿರ್ ಸಾವನ್ನಪ್ಪಿದ್ದರು. ಮಗನ ಶೌರ್ಯ‌ ಚಕ್ರ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶಮೀಮಾ ಅವರು ಸ್ವೀಕರಿಸಿದ್ದರು.

    ಇಲ್ಲಿಯವರೆಗೆ ಕಾಶ್ಮೀರದಿಂದ 60 ಪಾಕಿಸ್ತಾನಿಯರನ್ನು ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಉಗ್ರರ ವಿರುದ್ಧ ಪ್ರತೀಕಾರಕ್ಕೆ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟ ಮೋದಿ

  • ಕುಟುಂಬದವರೊಂದಿಗೆ ಶೌರ್ಯ ಚಕ್ರ ಪ್ರಶಸ್ತಿ ಸಂಭ್ರಮಾಚರಿಸಿಕೊಳ್ಳಲು ಬಯಸಿದ್ರು ವರುಣ್‌ ಸಿಂಗ್‌!

    ಕುಟುಂಬದವರೊಂದಿಗೆ ಶೌರ್ಯ ಚಕ್ರ ಪ್ರಶಸ್ತಿ ಸಂಭ್ರಮಾಚರಿಸಿಕೊಳ್ಳಲು ಬಯಸಿದ್ರು ವರುಣ್‌ ಸಿಂಗ್‌!

    ನವದೆಹಲಿ: ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಮಡಿದ ಐಎಎಫ್‌ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರು, ತಾವು ಶೌರ್ಯ ಚಕ್ರ ಪ್ರಶಸ್ತಿ ಪಡೆದ ಸಂಭ್ರಮವನ್ನು ಇಂದೋರ್‌ನಲ್ಲಿ ಪತ್ನಿಯ ಕುಟುಂಬದವರೊಂದಿಗೆ ಆಚರಿಸಿಕೊಳ್ಳಲು ಬಯಸಿದ್ದರಂತೆ.

    ಇದೇ ಡಿಸೆಂಬರ್‌ ತಿಂಗಳ ಕೊನೆಯ ವಾರದಲ್ಲಿ ವರುಣ್‌ ಸಿಂಗ್‌ ಅವರು, ಇಂದೋರ್‌ನಲ್ಲಿರುವ ಪತ್ನಿ ಗೀತಾಂಜಲಿ ಅವರ ಪೋಷಕರ ಮನೆಗೆ ತೆರಳಿ ಸಂಭ್ರಮ ಕೂಟವನ್ನು ಏರ್ಪಡಿಸಲು ನಿರ್ಧರಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಶೌರ್ಯ, ಶೌರ್ಯೇತರ ಪ್ರಶಸ್ತಿ ಪಡೆದ ಯೋಧರ ಅನುದಾನ ಹೆಚ್ಚಳಕ್ಕೆ ಸಿಎಂ ಅಸ್ತು

    ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಈ ವರ್ಷದ ಸ್ವಾತಂತ್ರ್ಯ ದಿನದಂದು, 2020 ರಲ್ಲಿ ವೈಮಾನಿಕ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಎಲ್‍ಸಿಎ ತೇಜಸ್ ಯುದ್ಧ ವಿಮಾನವನ್ನು ಸಮರ್ಥವಾಗಿ ಲ್ಯಾಂಡಿಂಗ್ ಮಾಡಿ ಅದರಲ್ಲಿದ್ದ ಯೋಧರ ಪ್ರಾಣ ಉಳಿಸಿದಕ್ಕಾಗಿ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗಿತ್ತು. ಲೈಟ್ ಕಾಂಬ್ಯಾಟ್ ಏರ್‍ಕ್ರಾಫ್ಟ್ ಸ್ಕ್ವಾಡ್ರನ್‍ನಲ್ಲಿ ಪೈಲಟ್ ಆಗಿದ್ದ ವಿಂಗ್ ಕಮಾಂಡರ್ ವರುಣ್ ಸಿಂಗ್, ಅವರ ಅಸಾಧಾರಣ ಶೌರ್ಯಕ್ಕಾಗಿ ಭಾರತದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯನ್ನು ಈ ವರ್ಷದ ಆಗಸ್ಟ್ 15 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೀಡಿ ಗೌರವಿಸಿದ್ದರು.

    ಈ ಸಂಭ್ರಮವನ್ನು ತನ್ನ ಪತ್ನಿಯೊಂದಿಗೆ ಅವರ ಪೋಷಕರ ಮನೆಗೆ ತೆರಳಿ ಆಚರಿಸಿಕೊಳ್ಳಲು ವರುಣ್‌ ಸಿಂಗ್‌ ನಿರ್ಧರಿಸಿದ್ದರು. ಆದರೆ ಡಿಸೆಂಬರ್‌ 8ರಂದು ಸಿಡಿಎಸ್‌ ಜನರಲ್‌ ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ವರುಣ್‌ ಸಿಂಗ್‌ ಗಂಭೀರ ಗಾಯಗೊಂಡು ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನಿಧನರಾದರು. ಇದನ್ನೂ ಓದಿ: ಕುಲ್ಗಾಮ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

    ವರುಣ್‌ ಸಿಂಗ್‌ 2008ರಲ್ಲಿ ಗೀತಾಂಜಲಿ ಅವರೊಂದಿಗೆ ವಿವಾಹವಾದರು. ಇವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.

  • ಬೆಂಗಳೂರಿನ ಅನಿಲ್ ಅರಸ್ ಸೇರಿ ನಾಲ್ವರು ಯೋಧರಿಗೆ ಶೌರ್ಯ ಚಕ್ರ

    ಬೆಂಗಳೂರಿನ ಅನಿಲ್ ಅರಸ್ ಸೇರಿ ನಾಲ್ವರು ಯೋಧರಿಗೆ ಶೌರ್ಯ ಚಕ್ರ

    – ಪೊಲೀಸ್, ಯೋಧರು ಸೇರಿ 926 ಜನರಿಗೆ ಶೌರ್ಯ ಪದಕ

    ನವದೆಹಲಿ: ಮೂಲತಃ ಬೆಂಗಳೂರಿನವರಾದ ಮೇಜರ್ ಅನಿಲ್ ಅರಸ್ ಅವರಿಗೆ ಶೌರ್ಯ ಚಕ್ರ ಸಿಕ್ಕಿದೆ.

    ದೇಶಕ್ಕಾಗಿ ಹೋರಾಡುವ ಮೂಲಕ ಸೇವೆಯಲ್ಲಿ ಧೈರ್ಯ, ಸಾಹಸ ಪ್ರದರ್ಶಿಸಿದ ನಾಲ್ವರು ಯೋಧರಿಗೆ ‘ಶೌರ್ಯ ಚಕ್ರ’ ಪ್ರಶಸ್ತಿ ನೀಡುವ ಕೇಂದ್ರ ಸರ್ಕಾರದ ಪ್ರಸ್ತಾವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದು, ಇದರಲ್ಲಿ ಬೆಂಗಳೂರಿನವರಾದ ಅನಿಲ್ ಅರಸ್ ಅವರ ಹೆಸರು ಸಹ ಇದೆ.

    ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಮೇಲೆ ಕಣ್ಣಿಡುವ ಗುಪ್ತಚರ ದಳದಲ್ಲಿ ಮೇಜರ್ ಅನಿಲ್ ಅರಸ್ ಕಾರ್ಯನಿರ್ವಹಿಸುತ್ತಿದ್ದಾರೆ.

    ಈ ಕುರಿತು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದ್ದು, ಜಮ್ಮು-ಕಾಶ್ಮೀರದಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಹೋರಾಡುವ ಮೂಲಕ ಸಾಹಸ ತೋರಿದ ಪ್ಯಾರಾಚೂಟ್ ರೆಜಿಮೆಂಟ್ ನ ಲೆಫ್ಟಿನೆಂಟ್ ಕರ್ನಲ್ ಕ್ರಿಷನ್ ಸಿಂಗ್ ರಾವತ್, 4 ಮರಾಠಾ ಲೈಟ್ ಇನ್‍ಫೆಂಟ್ರಿಯ ಮೇಜರ್ ಅನಿಲ್ ಅರಸ್, ರಜಪೂತ್ ರೆಜಿಮೆಂಟ್ ನ ಹವಾಲ್ದಾರ್ ಅಲೋಕ್ ಕುಮಾರ್ ದುಬೆ ಹಾಗೂ ವಾಯುಪಡೆಯ ವಿಂಗ್ ಕಮಾಂಡರ್ ವಿಶಾಕ್ ನಾಯರ್ ಅವರಿಗೆ ‘ಶೌರ್ಯ ಚಕ್ರ’ ಪ್ರಕಟಿಸಲಾಗಿದೆ.

    ಇವರು ಜಮ್ಮು-ಕಾಶ್ಮೀರದಲ್ಲಿ ವಿವಿಧ ಉಗ್ರ ನಿಗ್ರಹ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ದೇಶಕ್ಕಾಗಿ ಹಾಗೂ ಸಿಬ್ಬಂದಿ ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡಿದ್ದಾರೆ. ಇವರ ಸಾಹಸವನ್ನು ಮೆಚ್ಚಿ ಶೌರ್ಯ ಚಕ್ರ ನೀಡಲಾಗಿದೆ.

    ಯೋಧರು ಮಾತ್ರವಲ್ಲ ಸಾಹಸ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಸಿ ಧೈರ್ಯ, ಸಾಹಸ ಪ್ರದರ್ಶಿಸಿದ ಪೊಲೀಸ್ ಹಾಗೂ ಸೇನಾಪಡೆಗಳಿಗೆ ಒಟ್ಟು 926 ಶೌರ್ಯ ಪದಕವನ್ನು ಘೋಷಿಸಲಾಗಿದೆ. ಸಾಹಸ ಮೆರೆದ 21 ಪೊಲೀಸರಿಗೆ ‘ಶೌರ್ಯ ಪದಕ’, ಅತ್ಯುತ್ತಮ ಸೇವೆಗಾಗಿ 80 ಪೊಲೀಸರಿಗೆ ರಾಷ್ಟ್ರಪತಿಗಳ ಪೊಲೀಸ್ ಪದಕ ಹಾಗೂ ಪ್ರಶಂಸಾ ಸೇವೆಗಾಗಿ 631 ಸಿಬ್ಬಂದಿಗೆ ಪ್ರಶಂಸಾ ಪದಕ ನೀಡಿ ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

    ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆ ಅತಿ ಹೆಚ್ಚು 81 ಪದಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದಿದೆ. ಸಿಆರ್ಪಿಎಫ್ 55 ಪದಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆ 23, ದೆಹಲಿ ಪೊಲೀಸ್ ಇಲಾಖೆ 16, ಆಂಧ್ರ ಪ್ರದೇಶ ಪೊಲೀಸ್ ಇಲಾಖೆ ತಲಾ 16, ಮಹಾರಾಷ್ಟ್ರ ಪೊಲೀಸ್ ಇಲಾಖೆ, ತೆಲಂಗಾಣ ಪೊಲೀಸ್ ಇಲಾಖೆ ತಲಾ 14 ಹಾಗೂ ಜಾರ್ಖಂಡ್ ಪೊಲೀಸ್ ಇಲಾಖೆ 12 ಪದಕಗಳನ್ನು ಪಡೆದಿವೆ.

  • ಮೇಜರ್ ಆದಿತ್ಯ ಕುಮಾರ್, ರೈಫಲ್‍ಮ್ಯಾನ್ ಔರಂಗಜೇಬ್‍ಗೆ ಶೌರ್ಯ ಚಕ್ರ ಪುರಸ್ಕಾರ

    ಮೇಜರ್ ಆದಿತ್ಯ ಕುಮಾರ್, ರೈಫಲ್‍ಮ್ಯಾನ್ ಔರಂಗಜೇಬ್‍ಗೆ ಶೌರ್ಯ ಚಕ್ರ ಪುರಸ್ಕಾರ

    ನವದೆಹಲಿ: ಬುಧವಾರ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ಭಾಗವಾಗಿ ನೀಡುವ ಮರಣೋತ್ತರ ಶೌರ್ಯ ಪ್ರಶಸ್ತಿಯ ಗೌರವಕ್ಕೆ ಮೇಜರ್ ಆದಿತ್ಯ ಕುಮಾರ್, ರೈಫಲ್‍ಮ್ಯಾನ್ ಔರಂಗಜೇಬ್ ಪಾತ್ರರಾಗಿದ್ದಾರೆ.

    ಜಮ್ಮು ಕಾಶ್ಮೀರದಲ್ಲಿ ಸೇವೆಗೆ ನಿಯೋಜನೆಗೊಂಡು ಅಪ್ರತಿಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜನವರಿ 27 ರಂದು ನಡೆದ ಕಲ್ಲು ತೂರಾಟ ಘಟನೆಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದರು. ಈ ವೇಳೆ ಮೇಜರ್ ಆದಿತ್ಯನಾಥ್ ಅವರು ಆರೋಪ ಎದುರಿಸಿದ್ದರು. ಬಳಿಕ ಅವರ ಹೆಸರು ಎಫ್‍ಐಆರ್ ನಲ್ಲಿ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿತ್ತು.

    ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ರೈಫಲ್ ಮ್ಯಾನ್ ಔರಂಗಜೇಬ್‍ರನ್ನು ಉಗ್ರರು ಅಪರಹಣ ಮಾಡಿ ಹತ್ಯೆ ಮಾಡಿದ್ದರು. ರಂಜಾನ್ ಹಬ್ಬಕ್ಕೆ ರಜೆಗೆ ತೆರಳಿದ್ದ ವೇಳೆ ಔರಂಗಜೇಬ್‍ರನ್ನು ಅಪರಹಣ ಮಾಡಲಾಗಿತ್ತು.

    ಔರಂಗಜೇಬ್ ಅವರು ಲೈಟ್ ಇನ್‍ಫ್ಯಾಂಟ್ರಿನ್ ನಾಲ್ಕನೇ ಪಡೆಗೆ ಸೇರಿದ್ದರು. ಈ ಪಡೆಯನ್ನು ಕಾಶ್ಮೀರದ ಶೋಪಿಯಾನ್ ಶಾದಿಮಾರ್ಗ್ ನಲ್ಲಿ ನೀಯೋಜಿಸಲಾಗಿತ್ತು. ಅಲ್ಲದೇ ಈ ಪಡೆಯಲ್ಲಿ ಮೇಜರ್ ರೋಹಿತ್ ಶುಕ್ಲಾ ಇದ್ದು, ಹಿಜ್ಜುಲ್ ಮಜಾಹಿದೀನ್ ಉಗ್ರ ಸಮೀರ್ ಟೈಗರ್ ನನ್ನು ಎನ್‍ಕೌಂಟರ್ ಮಾಡಿತ್ತು. ಈ ದಾಳಿಯ ಪ್ರತಿಕಾರವಾಗಿಯೇ ಅಪಾರ ಶಸ್ತ್ರ ಹೊಂದಿದ್ದ ಉಗ್ರ ತಂಡ ಔರಂಗಬೇಜ್‍ರನ್ನು ಅಪಹರಣ ಮಾಡಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

    ಪಠಾಣ್‍ಕೋಟ್ ಹುತಾತ್ಮ ಯೋಧ ನಿರಂಜನ್‍ಗೆ ರಾಜ್ಯ ಸರ್ಕಾರದಿಂದ ಅವಮಾನ

    ಬೆಂಗಳೂರು: ಕರುನಾಡ ಮಣ್ಣಿನ ವೀರ ಯೋಧ ಹುತಾತ್ಮ ಲೆಫ್ಟಿನೆಂಟ್ ಕರ್ನಲ್ ನಿರಂಜನ್ ಸಮಾಧಿಯಲ್ಲೂ ರಾಜಕೀಯದಾಟ, ರಸ್ತೆಗೆ ಯೋಧನ ಹೆಸರಿಡಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸಚಿವರೇ ಅಡ್ಡ, ಬೆಂಗಳೂರಿನ ವೀರ ಯೋಧನಿಗೆ ಕನ್ನಡ ಮಣ್ಣಿನಲ್ಲೇ ಅವಮಾನ.

    ಹೌದು. ಪಂಜಾಬಿನಲ್ಲಿರುವ ವಾಯುನೆಲೆ ಪಠಾಣ್ ಕೋಟ್‍ನಲ್ಲಿ ಲೆಫ್ಟಿನೆಂಟ್ ನಿರಂಜನ್ ಎದೆಯುಬ್ಬಿಸಿ ಉಗ್ರರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ್ದರು. ಕನ್ನಡ ಮಣ್ಣಿನ ಯೋಧ, ನಮ್ಮ ಬೆಂಗಳೂರಿನ ಹೆಮ್ಮೆಯ ನಿರಂಜನ್ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟರು.

    ಆದರೆ ನಮ್ಮ ನೀಚ ರಾಜಕೀಯ ವ್ಯವಸ್ಥೆ ನಿರಂಜನ್ ಹೆಸರನ್ನು ರಸ್ತೆಗೆ ಇಡುವುದಕ್ಕೆ ರಾಜಕೀಯದಾಟ ಆಡುತ್ತಿದೆ. ದೊಡ್ಡ ಬೊಮ್ಮಸಂದ್ರ ಹೆಬ್ಬಾಗಿಲಿನಿಂದ ವಿದ್ಯಾರಣ್ಯಪುರದ ನಂಜಪ್ಪ ವೃತ್ತದವರೆಗಿನ ಮುಖ್ಯರಸ್ತೆಗೆ ನಿರಂಜನ್ ಹೆಸರು ಇಡೋದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ರು. ಅಂತಿಮ ತೀರ್ಮಾನವೂ ಆಗಿತ್ತು.

    ಈ ಮಧ್ಯೆ ಇದಕ್ಕಿದ್ದ ಹಾಗೆ ಕೃಷಿ ಸಚಿವ ಕೃಷ್ಣಬೈರೇಗೌಡರು ಯೋಧನ ಹೆಸರು ಬೇಡ, ಸ್ವಾತಂತ್ರ್ಯ ಹೋರಾಟಗಾರ ಪೇಟಾ ಸಿದ್ದಪ್ಪನ ಹೆಸರು ಇಡಿ ಎಂದು ಬಿಬಿಎಂಪಿಗೆ ಆದೇಶ ಕೊಟ್ಟು ಪತ್ರ ಬರೆದಿದ್ದಾರೆ. ಅಸಲಿಗೆ ಈ ಹೆಸರಿನ ಸ್ವಾತಂತ್ರ್ಯ ಹೋರಾಟಗಾರರು ಯಾರು ಇಲ್ಲ ಎಂದು ದೊರೆಸ್ವಾಮಿಯೇ ಹೇಳಿದ್ದಾರಂತೆ. ಆದ್ರೆ ಮಿನಿಸ್ಟರ್ ಮಾತನ್ನು ಪಾಲಿಸೋದಕ್ಕೆ ಮೇಯರ್ ಅವರು ಮುಂದಾಗುತ್ತಿದ್ದಾರೆ ಎಂದು ನಿರಂಜನ್ ಸ್ನೇಹಿತ ಶಶಾಂಕ್ ಹೇಳಿದ್ದಾರೆ.

    ಶೌರ್ಯ ಚಕ್ರ ಪ್ರಶಸ್ತಿ ವಾಪಾಸ್:
    ಹರ್ಯಾಣ ಸರ್ಕಾರ ನಿರಂಜನ್ ಅವರ ಹೆಸರಿನಲ್ಲಿ ಆಡಿಟೋರಿಯಂ ಸ್ಥಾಪನೆ ಮಾಡಿದೆ. ಆದರೆ ಇಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಚಿವರಿಗೆ ನಿಜಕ್ಕೂ ಮಾನ ಮರ್ಯಾದೆ ಇಲ್ಲ, ನಿರಂಜನ್ ಹೆತ್ತವರು ಈ ಬೆಳವಣಿಗೆ ನೋಡಿ ಕಣ್ಣೀರಿಡುತ್ತಿದ್ದಾರೆ. ಕೇಂದ್ರ ಸರ್ಕಾರ ನಿರಂಜನ್‍ಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಿದೆ. ಆದ್ರೇ ನಮ್ಗೆ ಈಗ ಬೇಸರವಾಗಿದೆ, ಇದನ್ನು ವಾಪಾಸ್ ಮಾಡುವ ಬಗ್ಗೆಯೂ ಯೋಚನೆ ಮಾಡುತ್ತೇವೆ ಅಂತಾ ಶಶಾಂಕ್ ಹೇಳಿದ್ದಾರೆ.

    ನಿರಂಜನ್ ಯಾರು?
    2016ರ ಜನವರಿ 1 ಮತ್ತು 2ರ ನಡುರಾತ್ರಿಯಲ್ಲಿ ಉಗ್ರರು ಪಠಾಣ್‍ಕೋಟ್ ವಾಯುನೆಲೆ ಮೇಲೆ ದಾಳಿ ನಡೆಸಿದಾಗ, ಎನ್‍ಎಸ್‍ಜಿ ಯೋಧರನ್ನು ಅಲ್ಲಿಗೆ ಕಳುಹಿಸಲಾಯಿತು. ಎನ್‍ಎಸ್‍ಜಿ ತಂಡದಲ್ಲಿ ಕರ್ನಾಟಕದ ನಿರಂಜನ್ ಅವರೂ ಇದ್ದರು. ದಾಳಿ ಎಸಗಿದ್ದ ಉಗ್ರನ ಬಳಿಯಿದ್ದ ಗ್ರೆನೇಡ್ ನಿಷ್ಕ್ರಿಯಗೊಳಿಸಲು ನಿರಂಜನ್ ಮುಂದಾಗಿದ್ದ ವೇಳೆ ಅದು ಸ್ಫೋಟಗೊಂಡಿತ್ತು. ಗ್ರೆನೇಡ್ ಸ್ಫೋಟದಿಂದಾಗಿ ಅವರ ಶ್ವಾಸಕೋಶಗಳು ಒಡೆದಿದ್ದವು. ಆಸ್ಪತ್ರೆಗೆ ಸಾಗಿಸುವ ಮುನ್ನವೇ ನಿರಂಜನ್ ಹುತಾತ್ಮರಾಗಿದ್ದರು. ನಿರಂಜನ್ ಅವರು ಅಮೆರಿಕದ ಎಫ್‍ಬಿಐನಿಂದ ತರಬೇತಿ ಪಡೆದಿದ್ದರು. ಪಾಲಕ್ಕಾಡ್ ಜಿಲ್ಲೆಯ ಮುನ್ನರಾರ್ ಕಾಡ್ ಮೂಲದ ನಿರಂಜನ್, ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲೇ. 40 ವರ್ಷದ ಹಿಂದೆಯೇ ಅವರ ಕುಟುಂಬವು ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿತ್ತು.