Tag: Shehbaz Sharif

  • ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

    ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

    ಇಸ್ಲಮಾಬಾದ್: ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ, ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.

    ಸದನದ ನೂತನ ನಾಯಕರ ಆಯ್ಕೆ ಪ್ರಕ್ರಿಯೆ ಭಾನುವಾರ ಆರಂಭವಾಗಿತ್ತು. ರವಿವಾರದ ಪ್ರಮುಖ ಬೆಳವಣಿಗೆಯಾಗಿ ಬಿಲಾವಲ್ ಭುಟ್ಟೋ ನೇತೃತ್ವದ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮತ್ತು ವಿಪಕ್ಷಗಳ ಇತರ ಮುಖಂಡರೆಲ್ಲ ಸೇರಿ ಶೆಹಬಾಜ್ ಷರೀಫ್ ಅವರನ್ನು ಮೈತ್ರಿಕೂಟದ ಮುಖಂಡರನ್ನಾಗಿ ಆಯ್ಕೆ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಮುಂದಾದ ಅರುಣ್ ಸಿಂಗ್, ಬಿಎಸ್‍ವೈ

    ಶನಿವಾರ ರಾತ್ರಿ ಪಾಕಿಸ್ತಾನದ ನ್ಯಾಶನಲ್ ಅಸೆಂಬ್ಲಿಯಲ್ಲಿ ನಡೆದ ಅವಿಶ್ವಾಸ ಮತ ಮಂಡನೆ ಮತದಾನದಲ್ಲಿ ಇಮ್ರಾನ್ ಖಾನ್ ಸೋಲನುಭವಿಸಿದ್ದರು. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

    ಇಮ್ರಾನ್ ಖಾನ್ ಹೇಳಿದ್ದೇನು?: 16 ಸಾವಿರ ಕೋಟಿ ರೂಪಾಯಿ ಮತ್ತು 8 ಸಾವಿರ ಕೋಟಿ ರೂಪಾಯಿಯ ಭ್ರಷ್ಟಾಚಾರದ ಕೇಸ್ ಹೊಂದಿರುವ ವ್ಯಕ್ತಿ ಆ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ. ದೇಶಕ್ಕೆ ಅದಕ್ಕಿಂತ ದೊಡ್ಡ ಅವಮಾನ ಇರಲಾರದು. ರಾಷ್ಟ್ರೀಯ ಅಸೆಂಬ್ಲಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಇಮ್ರಾನ್ ಖಾನ್ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

    ಶಹಬಾಜ್ ಷರೀಫ್ ಯಾರು?: ಮೂರು ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಸಹೋದರನಾಗಿರುವ ಶೆಹಬಾಜ್ ಷರೀಫ್, ದೇಶದ ಹೊರಗೆ ಅಷ್ಟೊಂದು ಪ್ರಸಿದ್ದರಲ್ಲದಿದ್ದರೂ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿದ್ದ ಪಾಕಿಸ್ತಾನದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. 1999 ರಲ್ಲಿ ಪಾಕಿಸ್ತಾನದಲ್ಲಿ ಮಿಲಿಟರಿ ದಂಗೆಯ ನಂತರ ಶಹಬಾಜ್ ಜೈಲಿನಲ್ಲಿದ್ದರು, ಬಳಿಕ ಸೌದಿ ಅರೇಬಿಯಾಕ್ಕೆ ಗಡಿಪಾರಾಗಿದ್ದರು. 2007 ರಲ್ಲಿ ದೇಶಕ್ಕೆ ಮರಳಿದ ಅವರು, ಪನಾಮ ಪೇಪರ್ಸ್ ಲೀಕ್ ಸಂಬಂಧಿಸಿದ ಆಸ್ತಿಯನ್ನು ಮರೆಮಾಚುವ ಆರೋಪದ ಮೇಲೆ 2017 ರಲ್ಲಿ ನವಾಜ್ ಷರೀಫ್ ತಪ್ಪಿತಸ್ಥರೆಂದು ಸಾಬೀತಾದ ನಂತರ ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಿದರು. ನವಾಜ್ ಷರೀಫ್‍ಗಿಂತ ಭಿನ್ನವಾಗಿ, ಶಹಬಾಜ್ ಅವರು ಪಾಕಿಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ವಿದೇಶಿ ಮತ್ತು ರಕ್ಷಣಾ ನೀತಿಯನ್ನು ನಿಯಂತ್ರಿಸುವ ಪಾಕಿಸ್ತಾನದ ಮಿಲಿಟರಿಯೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ.

  • ಶೆಹಬಾಜ್ ಷರೀಫ್ ಪಾಕ್ ಪ್ರಧಾನಿಯಾಗುವಂತೆ ಭಾರತದ ಹಳ್ಳಿಯಲ್ಲಿ ಪ್ರಾರ್ಥನೆ

    ಶೆಹಬಾಜ್ ಷರೀಫ್ ಪಾಕ್ ಪ್ರಧಾನಿಯಾಗುವಂತೆ ಭಾರತದ ಹಳ್ಳಿಯಲ್ಲಿ ಪ್ರಾರ್ಥನೆ

    ಚಂಡೀಗಢ: ಇತ್ತೀಚಿನ ದಿನಗಳಲ್ಲಿ ಭಾರತ ಮೂಲದ ಹಲವು ವ್ಯಕ್ತಿಗಳು ಪ್ರಪಂಚದಾದ್ಯಂತ ರಾಜಕೀಯ ವ್ಯವಹಾರಗಳಲ್ಲಿ ಚುಕ್ಕಾಣಿ ಹಿಡಿದಿರುವುದನ್ನು ನಾವು ನೋಡಿದ್ದೇವೆ. ಅಮೆರಿಕ ಸಂಯುಕ್ತ ಸಂಸ್ಥಾನದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೇರಿದಂತೆ ಹಲವರು ಉನ್ನತ ಮಟ್ಟದ ಸ್ಥಾನವನ್ನು ಏರಿದ್ದಾರೆ. ಇದೀಗ ಭಾರತೀಯ ಮೂಲದ ವ್ಯಕ್ತಿ ಪಾಕಿಸ್ತಾನವನ್ನು ಮುನ್ನಡೆಸಲಿದ್ದಾರೆ ಎಂದು ನಿರೀಕ್ಷಿಸಲಾಗುತ್ತಿದೆ.

    ಪಾಕಿಸ್ತಾನದ ಪ್ರಧಾನಿ ಪಟ್ಟದಿಂದ ಇಮ್ರಾನ್ ಖಾನ್ ಪದಚ್ಯುತಿಗೊಂಡ ಬಳಿಕ ಶೆಹಬಾಜ್ ಷರೀಫ್ ನೂತನ ಪ್ರಧಾನಿಯಾಗಲಿದ್ದಾರೆ ಎಂದು ವರದಿಯಾಗಿದೆ. ಭಾರತದಲ್ಲೂ ಇವರೇ ಪಾಕಿಸ್ತಾನದ ಪ್ರಧಾನಿಯಾಗಬೇಕೆಂದು ಈ ಪುಟ್ಟ ಹಳ್ಳಿಯೊಂದರಲ್ಲಿ ಪ್ರಾರ್ಥನೆ ಮಾಡಲಾಗುತ್ತಿದೆ. ಮುಂದಿನ ಪ್ರಧಾನಿ ಇವರೇ ಎಂದು ಸಂಭ್ರಮಾಚರಣೆಯೂ ನಡೆಯುತ್ತಿದೆ. ಇದಕ್ಕೆ ಕಾರಣ ಶೆಹಬಾಜ್ ಷರೀಫ್ ಒಬ್ಬ ಭಾರತದೊಂದಿಗೆ ಸಂಪರ್ಕವುಳ್ಳ ವ್ಯಕ್ತಿ.

    ಭಾರತ ಹಾಗೂ ಪಾಕಿಸ್ತಾನದ ಸಂಬಂಧ ಸೌಹಾರ್ದಯುತವಾಗಿಲ್ಲದಿದ್ದರೂ ಅಮೃತಸರದ ಗಡಿ ಗ್ರಾಮ ಜಟಿ ಉಮ್ರಾದಲ್ಲಿ ಶೆಹಬಾಜ್ ಷರೀಫ್ ಮುಂದಿನ ಪ್ರಧಾನಿಯಾಗಲಿ ಎಂದು ಸ್ಥಳೀಯರು ಇಲ್ಲಿನ ಗುರುದ್ವಾರದಲ್ಲಿ ಪ್ರಾರ್ಥನೆ ನಡೆಸುತ್ತಿದ್ದಾರೆ. ಇದಕ್ಕೆ ಕಾರಣ ಈ ಪುಟ್ಟ ಗ್ರಾಮ ಷರೀಫ್ ಕುಟುಂಬದ ಪೂರ್ವಜರ ಊರು. ಇದನ್ನೂ ಓದಿ: ಚೌಕಿದಾರ್ ಚೋರ್ ಹೇ ಎಂದ ಪಾಕಿಸ್ತಾನಿ ಪ್ರತಿಭಟನಾಕಾರರು

    ತಮ್ಮ ಮಣ್ಣಿಗೆ ಸಂಬಂಧ ಪಟ್ಟವರು ಉನ್ನತ ಹುದ್ದೆಗೆ ಬಂದರೆ ಅದು ಆ ಗ್ರಾಮಕ್ಕೆ ಹೆಮ್ಮೆಯ ವಿಚಾರ. ಅವಿಭಜಿತ ಭಾರತದ ಪಂಜಾಬ್‌ನಲ್ಲಿರುವ ಈ ಗ್ರಾಮ ಹಿಂದೂ ಬಹುಸಂಖ್ಯಾತ ಗ್ರಾಮವಾಗಿತ್ತು. ಭಾರತ-ಪಾಕಿಸ್ತಾನ ವಿಭಜನೆಯ ಬಳಿಕ ಷರೀಫ್ ಕುಟುಂಬ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಆದರೂ ಷರೀಫ್ ಇನ್ನೂ ಈ ಗ್ರಾಮದೊಂದಿಗೆ ಸಂಪರ್ಕದಲ್ಲಿದ್ದಾರೆ.

    ವಾಸ್ತವವಾಗಿ ಷರೀಫ್ ಕುಟುಂಬ ಕಾಶ್ಮೀರ ಮೂಲದವರು. ಅವರ ತಂದೆ ಅನಂತನಾಗ್‌ನಿಂದ ಪಂಜಾಬ್‌ನ ಈ ಹಳ್ಳಿಗೆ ಬಂದಿದ್ದರು. ಅವರ ತಾಯಿ ಪುಲ್ವಾಮಾಗೆ ಸೇರಿದವರು. ವಿಭಜನೆಯ ಬಳಿಕ ಕುಟುಂಬ ಪಾಕಿಸ್ತಾನಕ್ಕೆ ತೆರಳಲು ನಿರ್ಧರಿಸಿತು. ಬಳಿಕ ಲಾಹೋರ್‌ನಲ್ಲಿ ವ್ಯಾಪಾರ ಪ್ರಾರಂಭಿಸಿದ ಷರೀಫ್ ತಂದೆ ಉನ್ನತಿ ಪಡೆದರು. ಪ್ರಸ್ತುತ ಷರೀಫ್ ಅವರ ಇತ್ತೆಫಾಕ್ ಗ್ರೂಪ್ ಪಾಕಿಸ್ತಾನದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ಇಂದಿನಿಂದ ಪಾಕಿಸ್ತಾನದಲ್ಲಿ ಮತ್ತೆ ಸ್ವಾತಂತ್ರ್ಯ ಹೋರಾಟ ಪ್ರಾರಂಭ: ಇಮ್ರಾನ್ ಖಾನ್

    ಶೆಹಬಾಜ್ ಷರೀಫ್ ಹಾಗೂ ಅವರ ಸಹೋದರ ನವಾಜ್ ಷರೀಫ್ ಭಾರತದ ಗ್ರಾಮದಲ್ಲಿ ಹುಟ್ಟಿರಲಿಲ್ಲ. ಇಬ್ಬರೂ ಸ್ವಾತಂತ್ರ್ಯದ ಬಳಿಕ ಲಾಹೋರ್‌ನಲ್ಲಿ ಜನಿಸಿದರು. ಆದರೆ ಷರೀಫ್ ಕುಟುಂಬ ಇಂದಿಗೂ ಈ ಹಳ್ಳಿಯೊಂದಿಗೆ ಸಂಬಂಧ ಇಟ್ಟುಕೊಂಡಿದೆ. ಹಲವು ಬಾರಿ ಷರೀಫ್ ತಮ್ಮ ಪೂರ್ವಜರ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ಗ್ರಾಮದಲ್ಲಿ ಈಗಲೂ ಇರುವ ಏಕೈಕ ಮುಸಲ್ಮಾನ ಮನೆ ಎಂದರೆ ಅದು ಷರೀಫ್ ಕುಟುಂಬದ್ದು.

  • ಸೇಡು ತೀರಿಸಿಕೊಳ್ಳಲ್ಲ, ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತೆ: ಶೆಹಬಾಜ್ ಷರೀಫ್

    ಸೇಡು ತೀರಿಸಿಕೊಳ್ಳಲ್ಲ, ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತೆ: ಶೆಹಬಾಜ್ ಷರೀಫ್

    ಇಸ್ಲಾಮಾಬಾದ್: ವಿಶ್ವಾಸಮತ ಗಳಿಸುವಲ್ಲಿ ವಿಫಲರಾದ ಇಮ್ರಾನ್ ಖಾನ್ ಅಧಿಕಾರ ಅಂತ್ಯವಾಗಿದ್ದು, ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಲು ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ ಮುಖ್ಯಸ್ಥ ಶೆಹಬಾಜ್ ಷರೀಫ್ ಸಿದ್ಧರಾಗಿದ್ದಾರೆ.

    ಇಮ್ರಾನ್ ಖಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ ನಂತರ ಶೆಹಬಾಜ್ ಷರೀಫ್ ಅವರು ರಾಷ್ಟ್ರವನ್ನುದ್ದೇಶಿಸಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ಕಳೆದ ರಾತ್ರಿ ನಡೆದ ಹೈಡ್ರಾಮಾದ ನಂತರ ಪಾಕಿಸ್ತಾನವು ಗಂಭೀರ ಬಿಕ್ಕಟ್ಟಿನಿಂದ ಹೊರಬಂದಿದೆ. ಹೊಸ ಉದಯಕ್ಕೆ ಪಾಕಿಸ್ತಾನಿ ರಾಷ್ಟ್ರಕ್ಕೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

    ಹೊಸ ಸರ್ಕಾರದ ಅಡಿಯಲ್ಲಿ ರಾಜಕೀಯ ವಿರೋಧಿಗಳ ವಿರುದ್ಧ ಯಾವುದೇ ಪ್ರತೀಕಾರ ತೀರಿಸಿಕೊಳ್ಳಲ್ಲ ಎಂದು ಭರವಸೆ ನೀಡಿದ ಅವರು, ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪಿಎಂ ಸ್ಥಾನದಿಂದ ಇಮ್ರಾನ್ ಕೆಳಗಿಳಿದ್ರೆ ಪಾಕ್‌ನ ಮುಂದಿನ ಪ್ರಧಾನಿ ಇವರೇ

    ನಾವು ಯಾರ ಮೇಲೂ ಸೇಡು ತೀರಿಸಿಕೊಳ್ಳುವುದಿಲ್ಲ, ಯಾರಿಗೂ ಅನ್ಯಾಯ ಮಾಡುವುದಿಲ್ಲ ಮತ್ತು ಯಾರನ್ನೂ ಜೈಲಿಗೆ ಹಾಕುವುದಿಲ್ಲ, ಕಾನೂನು ತನ್ನದೇ ದಾರಿ ಹಿಡಿಯುತ್ತದೆ ಎಂದರು.

    ಇಮ್ರಾನ್ ಖಾನ್ ಅವರನ್ನು ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರದಿಂದ ವಜಾಗೊಳಿಸಿದ ನಂತರ ನೂತನ ಪ್ರಧಾನಿಯನ್ನು ಆಯ್ಕೆ ಮಾಡಲು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯು ಏಪ್ರಿಲ್ 11 ರಂದು ಮಧ್ಯಾಹ್ನ 2ಗಂಟೆಗೆ ಪುನಃ ಸೇರಲಿದೆ. ಸಂಯೋಜಿತ ವಿರೋಧ ಪಕ್ಷವು ಈಗಾಗಲೇ ಪಿಎಂಎಲ್‍ಎನ್ ಅಧ್ಯಕ್ಷ ಶೆಹಬಾಜ್ ಷರೀಫ್ ಅವರನ್ನು ಜಂಟಿ ಅಭ್ಯರ್ಥಿಯಾಗಿ ಹೆಸರಿಸಿದೆ.

  • ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

    ವಿಶ್ವಾಸಮತ ಗಳಿಸುವಲ್ಲಿ ವಿಫಲ- ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್

    ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್‍ನಲ್ಲಿ ಶನಿವಾರ ತಡರಾತ್ರಿ ದೊಡ್ಡ ಹೈಡ್ರಾಮಾವೇ ನಡೆಯಿತು. ವಿಶ್ವಾಸಮತ ಗಳಿಸುವಲ್ಲಿ ವಿಫಲರಾದ ಇಮ್ರಾನ್ ಖಾನ್ ಅಧಿಕಾರ ಅಂತ್ಯವಾಗಿದೆ.

    ಅಧಿಕಾರ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಕಸರತ್ತು ನಡೆಸಿದ್ದ ಇಮ್ರಾನ್ ಖಾನ್ ಅವರ 4 ವರ್ಷಗಳ ಅಧಿಕಾರವನ್ನು ಕಳೆದುಕೊಂಡಿದ್ದಾರೆ. ಈ ಮೂಲಕ ಇಮ್ರಾನ್ ಖಾನ್ ಅವರು ಅವಿಶ್ವಾಸ ಮತದಲ್ಲಿ ಸೋತ ಪಾಕಿಸ್ತಾನದ ಮೊದಲ ಪ್ರಧಾನಿಯಾಗಿದ್ದಾರೆ. ಸದನದಲ್ಲಿ ಹಾಜರಿದ್ದ ಪ್ರತಿಪಕ್ಷಗಳ 176 ಹಾಗೂ ಆಡಳಿತ ಪಕ್ಷದ 22 ಸದಸ್ಯರು ನಿರ್ಣಯದ ಪರವಾಗಿ ಮತ ಹಾಕಿದರು.

    ಇದಕ್ಕೂ ಮುನ್ನ ದಿನವಿಡೀ ಪಾಕಿಸ್ತಾನದಲ್ಲಿ ಹೈಡ್ರಾಮವೇ ನಡೆದಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಲು ಸ್ಪೀಕರ್ ನಿರಾಕರಿಸಿದರು. ಅದೇ ವೇಳೆ, ಸ್ಪೀಕರ್ ಕ್ರಮದಿಂದ ಸಿಟ್ಟಿಗೆದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾತ್ರೋರಾತ್ರಿ ಕಲಾಪ ಆರಂಭಿಸಿ, ಸ್ಪೀಕರ್ ಹಾಗೂ ಪ್ರಧಾನಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲು ಮುಂದಾದರು.

    ಸಿಜೆ ನೇತೃತ್ವದ ಪಂಚ ಸದಸ್ಯರ ಪೀಠದ ಆದೇಶದಂತೆ ಶನಿವಾರ ಅವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕಬೇಕಿತ್ತು. ಅದರಂತೆ ಶನಿವಾರ ಮಧ್ಯಾಹ್ನ ರಾಷ್ಟ್ರೀಯ ಅಸೆಂಬ್ಲಿ ಕಲಾಪ ಆರಂಭವಾಯಿತು. ಪ್ರತಿಪಕ್ಷ ನಾಯಕ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಬಿಲಾವಲ್ ಭುಟ್ಟೊ ಜರ್ದಾರಿ ಅವರು ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಸ್ಪೀಕರ್ ಅಸಾದ್ ಕ್ವೈಸಾರ್ ಮತ ಹಾಕಲು ನಿರಾಕರಿಸಿದರು. ಹಲವು ಸಲ ಕಲಾಪ ಮುಂದೂಡಲಾಯಿತಾದರೂ, ಇಫ್ತಿಹಾರ್ ಭೋಜನದ ಬಳಿಕ ರಾತ್ರಿ 10.30ಕ್ಕೆ ಕಲಾಪ ಆರಂಭಿಸಲು ನಿರ್ಧರಿಸಲಾಯಿತು.

    ಸ್ಪೀಕರ್ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿ ಪೀಠದಿಂದ ಕೆಳಗಿಳಿದರು. ಆ ಮೂಲಕ ನ್ಯಾಯಾಂಗ ನಿಂದನೆಯ ಆರೋಪದಿಂದ ಪಾರಾದರು. ಅದರ ಬೆನ್ನಲ್ಲಿಯೇ ಆಡಳಿತಾರೂಢ ಪಕ್ಷ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಸುಪ್ರೀಂ ಕೋರ್ಟ್ ಆದೇಶಕ್ಕೆ ಗೌರವ ನೀಡುತ್ತೇವೆ ಎಂದು ಘೋಷಿಸಿದ ಪ್ರತಿಪಕ್ಷಗಳು ಕಲಾಪ ಮುಂದುವರಿಸಲು ನಿರ್ಧರಿಸಿದವು.

    ಡೆಪ್ಯೂಟಿ ಸ್ಪೀಕರ್ ಖಾಸಿಮ್ ಸುರಿ ಗೈರಾಗಿದ್ದರು. ಹೀಗಾಗಿ ಸ್ಪೀಕರ್‌ಗಳ ಪ್ಯಾನೆಲ್ ಪಟ್ಟಿಯಲ್ಲಿ ಮೂರನೇಯವರಾದ ನವಾಜ್ ಷರೀಫ್ ಅವರ ಪಾಕಿಸ್ತಾನ ಮುಸ್ಲಿಂ ಲೀಗ್(ನವಾಜ್) ಪಕ್ಷದ ಹಿರಿಯ ಸದಸ್ಯ ಅಯಾಜ್ ಸಾದಿಕ್ ಅವರು ಹಂಗಾಮಿ ಸ್ಪೀಕರ್ ಆಗಿ ಆಯ್ಕೆಯಾದರು. ಹೊರ ಹೋಗಿರುವ ಆಡಳಿತ ಪಕ್ಷದ ಸದಸ್ಯರು ಒಳಬರಲು ಐದು ನಿಮಿಷ ಅವಕಾಶವನ್ನು ಸಾದಿಕ್ ನೀಡಿದ್ದರು.

    ವಿಶ್ವಾಸಮತ ಕಳೆದುಕೊಳ್ಳುತ್ತಿದ್ದಂತೆಯೇ ಇಮ್ರಾನ್ ಖಾನ್ ಅವರು ಪ್ರಧಾನಿ ಕಚೇರಿಯಿಂದ ನಿರ್ಗಮಿಸಿದರು. ನಾಳೆ ಹೊಸ ಪ್ರಧಾನಿ ಆಯ್ಕೆ ನಡೆಯಲಿದ್ದು, ಬಹುತೇಕ ಶಹಬಾಜ್ ಷರೀಫ್ ಮುಂದಿನ ಪ್ರಧಾನಿ ಆಗುವ ಸಾಧ್ಯತೆಗಳಿದೆ. ಇಮ್ರಾನ್ ಖಾನ್ ವಿರುದ್ಧ 174 ಮತಗಳು ಚಲಾವಣೆ ಆಗಿದೆ. ಇದನ್ನೂ ಓದಿ: ಪಿಎಂ ಸ್ಥಾನದಿಂದ ಇಮ್ರಾನ್ ಕೆಳಗಿಳಿದ್ರೆ ಪಾಕ್‌ನ ಮುಂದಿನ ಪ್ರಧಾನಿ ಇವರೇ

    ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕುವುದಿಲ್ಲ ಎನ್ನುವುದು ದೃಢಪಡುತ್ತಿದ್ದಂತೆಯೇ ಮುಖ್ಯ ನ್ಯಾಯಮೂರ್ತಿ ಉಮರ್ ಅವರು ರಾತ್ರಿ 12 ಗಂಟೆಗೆ ಸುಪ್ರೀಂ ಕೋರ್ಟ್ ಬಾಗಿಲು ತೆರೆಯುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಆರಂಭದಲ್ಲಿ ಸುಪ್ರೀ ಕೋರ್ಟ್ ಸ್ವಯಂಪ್ರೇರಿತವಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿತ್ತಾದರೂ, ನಂತರ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿತು. ಇತ್ತ ಸಂಸತ್ತಿನಲ್ಲಿ 12.20ಕ್ಕೆ ಮತದಾನ ಪ್ರಕ್ರಿಯೆ ಆರಂಭವಾದ ಕಾರಣ, ಕಲಾಪವನ್ನು 12.35ಕ್ಕೆ ಮುಂದೂಡಲಾಯಿತು.

    ಸರ್ಕಾರ ಪತನವಾಗುವುದು ಖಚಿತವಾಗುತ್ತಿದ್ದಂತೆಯೇ ದೇಶದ ವಿಮಾನ ನಿಲ್ದಾಣಗಳಲ್ಲಿ ಸೇನೆಯು ಕಟ್ಟೆಚ್ಚರ ವಹಿಸಿತು. ಯಾವೊಬ್ಬ ಅಧಿಕಾರಿಯೂ ದೇಶದಿಂದ ಹೊರಗೆ ಹೋಗುವಂತಿಲ್ಲ ಎಂಬ ಆದೇಶ ಹೊರಡಿಸಿತು. ಇದನ್ನೂ ಓದಿ: ಪಾಕ್‌ ಪ್ರಧಾನಿಯಾಗ್ತಾರೆ ಅಂತ ಭವಿಷ್ಯ ನುಡಿದಿದ್ದ ಬುಶ್ರಾ ಬೀಬಿಗೆ ಇಮ್ರಾನ್‌ ಈಗ ಡಿವೋರ್ಸ್‌ ನೀಡಬಹುದು: ತಸ್ಲೀಮಾ

  • ಪಿಎಂ ಸ್ಥಾನದಿಂದ ಇಮ್ರಾನ್ ಕೆಳಗಿಳಿದ್ರೆ ಪಾಕ್‌ನ ಮುಂದಿನ ಪ್ರಧಾನಿ ಇವರೇ

    ಪಿಎಂ ಸ್ಥಾನದಿಂದ ಇಮ್ರಾನ್ ಕೆಳಗಿಳಿದ್ರೆ ಪಾಕ್‌ನ ಮುಂದಿನ ಪ್ರಧಾನಿ ಇವರೇ

    ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಯಶಸ್ವಿಯಾದರೆ, ಮುಂದಿನ ಪ್ರಧಾನಿ ಯಾರು ಎಂಬ ಪ್ರಶ್ನೆಗೆ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರಿಫ್ ಹೆಸರು ವ್ಯಾಪಕವಾಗಿ ಕೇಳಿಬರುತ್ತಿದೆ.

    ಇಂದು ನಡೆಯಲಿರುವ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ಪಟ್ಟದ ನಿರ್ಧಾರವಾಗಲಿದೆ. ಒಂದು ವೇಳೆ ಇಮ್ರಾನ್ ಖಾನ್ ತನ್ನ ಸ್ಥಾನದಿಂದ ಕೆಳಗಿಳಿದರೆ ಶೆಹಬಾಜ್ ಷರೀಫ್ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ನಿರೀಕ್ಷಿಸಲಾಗುತ್ತಿದೆ.

    ಶಹಬಾಜ್ ಷರೀಫ್ ಯಾರು?
    70 ವರ್ಷದ ಶೆಹಬಾಜ್ ಷರೀಫ್ ಮೂರು ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಕಿರಿಯ ಸಹೋದರ. ಇವರು ಶ್ರೀಮಂತ ಷರೀಫ್ ರಾಜವಂಶದವರೂ ಹೌದು. ಪಾಕಿಸ್ತಾನಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆಯುಳ್ಳ ಪಂಜಾಬ್‌ನ ಮುಖ್ಯಮಂತ್ರಿಯಾಗಿದ್ದು, ಲಾಹೋರ್‌ನಲ್ಲಿ ಪಾಕಿಸ್ತಾನದ ಮೊದಲ ಆಧುನಿಕ ಸಮೂಹ ಸಾರಿಗೆ ವ್ಯವಸ್ಥೆ, ಹಲವಾರು ಮೂಲಸೌಕರ್ಯ ಮೆಗಾ-ಯೋಜನೆಗಳನ್ನು ಕಾರ್ಯಗತಗೊಳಿಸಿದ್ದಾರೆ. ಇದನ್ನೂ ಓದಿ: ಭಾರತವನ್ನು ಹೊಗಳಿದ ಇಮ್ರಾನ್ ಖಾನ್‍ಗೆ ಪಾಕ್ ಬಿಟ್ಟು ತೊರೆಯಿರಿ ಎಂದ ಷರೀಫ್ ಪುತ್ರಿ

    ಶೆಹಬಾಜ್ ಷರೀಫ್ ಪಾಕಿಸ್ತಾನದ ಮಿಲಿಟರಿಯೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದು, ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿದ್ದ ಅವಧಿಯಲ್ಲಿ ಇವರು ರಾಜಕೀಯವಾಗಿ ಭಾರತದತ್ತ ಧನಾತ್ಮಕ ಒಲವು ತೋರಿದ್ದಾರೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಪಾಕ್ ಅನ್ನು ಟಿಶ್ಯೂ ಪೇಪರ್ ಆಗಿ ಬಳಸಿ ಎಸೆಯಲಾಗಿದೆ: ಇಮ್ರಾನ್ ಕಿಡಿ

    ಶೆಹಬಾಜ್ ಷರೀಫ್ ಪಂಜಾಬ್‌ನಲ್ಲಿ ರಾಜಕೀಯ ಪ್ರವೇಶಿಸಿ 1997ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ಮಿಲಿಟರಿ ದಂಗೆಯ ಬಳಿಕ 2000 ಇಸವಿಯಲ್ಲಿ ಅವರನ್ನು ಗಡಿಪಾರು ಮಾಡಿ ಸೌದಿ ಅರೇಬಿಯಾದಲ್ಲಿ ಸೆರೆಮನೆಗೆ ಕಳುಹಿಸಲಾಯಿತು. 2007ರಲ್ಲಿ ದೇಶಭ್ರಷ್ಟತೆಯಿಂದ ಹಿಂದಿರುಗಿ ಮತ್ತೆ ಪಂಜಾಬ್‌ನಲ್ಲಿ ತಮ್ಮ ರಾಜಕೀಯ ವೃತ್ತಿಯನ್ನು ಪುನರಾರಂಭಿಸಿದರು.

    ಶೆಹಬಾಜ್ ಹಾಗೂ ಆವರ ಸಹೋದರ ನವಾಜ್ ಷರೀಫ್ ಹಲವಾರು ಭ್ರಷ್ಟಾಚಾರ ಪ್ರಕರಣವನ್ನು ಎದುರಿಸಿದ್ದಾರೆ. ಆದರೆ ಯಾವುದೇ ಆರೋಪದಲ್ಲಿಯೂ ಶೆಹಬಾಜ್ ತಪ್ಪಿತಸ್ಥರೆಂದು ಸಾಬೀತಾಗಿಲ್ಲ.

  • ಯಾರೀ ಶೆಹಬಾಜ್‌ ಷರೀಫ್‌- ಇವರೇ ಪಾಕಿಸ್ತಾನದ ಮುಂದಿನ ಪ್ರಧಾನಿ?

    ಯಾರೀ ಶೆಹಬಾಜ್‌ ಷರೀಫ್‌- ಇವರೇ ಪಾಕಿಸ್ತಾನದ ಮುಂದಿನ ಪ್ರಧಾನಿ?

    ಇಸ್ಲಾಮಾಬಾದ್‌: ಅವಿಶ್ವಾಸ ಗೊತ್ತುವಳಿ ಮಂಡನೆ ಬೆನ್ನಲ್ಲೇ ಇಮ್ರಾನ್‌ ಖಾನ್‌ ಅವರು ಪಾಕಿಸ್ತಾನದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಇದರ ನಡುವೆಯೇ ಶೆಹಬಾಜ್‌ ಷರೀಫ್‌ ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಲಿದ್ದಾರೆ ಎನ್ನಲಾಗುತ್ತಿದೆ.

    ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವ ಸಂದರ್ಭದಲ್ಲೇ ಶೆಹಬಾಜ್‌ ಷರೀಫ್‌ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾರೀ ಶೆಹಬಾಜ್‌ ಷರೀಫ್‌? ಅವರ ಹಿನ್ನೆಲೆ ಏನು? ಇಲ್ಲಿದೆ ನೋಡಿ ಮಾಹಿತಿ. ಇದನ್ನೂ ಓದಿ: ಇಮ್ರಾನ್ ಖಾನ್ ಕೊನೆಯ ಬಾಲ್ ವರೆಗೂ ಹೋರಾಡುತ್ತಾರೆ, ರಾಜೀನಾಮೆ ಕೊಡಲ್ಲ: ಪಾಕ್ ಸಚಿವ

    ಇಮ್ರಾನ್ ಖಾನ್ ಅವಿಶ್ವಾಸ ಮತದಲ್ಲಿ ಸೋತರೆ, ವಿರೋಧ ಪಕ್ಷದ ನಾಯಕ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಶೆಹಬಾಜ್ ಷರೀಫ್ ಅವರ ನೇತೃತ್ವದಲ್ಲಿ ಹೊಸ ಸರ್ಕಾರವನ್ನು ರಚಿಸಬಹುದು. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೊ ಜರ್ದಾರಿ ಬುಧವಾರ ಈ ಸೂಚನೆ ನೀಡಿದ್ದಾರೆ.

    ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಸಹೋದರ
    ಶೆಹಬಾಜ್‌ ಶರೀಫ್‌ 1951ರಲ್ಲಿ ಪಾಕಿಸ್ತಾನದ ಲಾಹೋರ್‌ನಲ್ಲಿ ಜನಿಸಿದರು. ಇವರು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ. ಶೆಹಬಾಜ್‌ ಶರೀಫ್‌ ಅವರಿಗೆ ಕಲ್ಸೂಮ್‌ ಹಾಯಿ, ತೆಹ್ಮಿನಾ ದುರ್ರಾನಿ, ಆಲಿಯಾ ಹೊನೇಯ್‌, ನರ್ಗಿಸ್‌ ಖೋಸಾ, ಬೆಗುಮ್‌ ನುಸ್ರತ್‌ ಶೆಹಬಾಜ್‌ ಎಂಬ ನಾಲ್ವರು ಪತ್ನಿಯರಿದ್ದಾರೆ.

    ವಿರೋಧ ಪಕ್ಷದ ನಾಯಕ
    ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್)ನ ಅಧ್ಯಕ್ಷರಾಗಿರುವ ಶೆಹಬಾಜ್‌ ಷರೀಫ್‌ ಅವರು ಪ್ರಸ್ತುತ ಪಾಕಿಸ್ತಾನ ಪಾರ್ಲಿಮೆಂಟ್‌ನಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇದನ್ನೂ ಓದಿ: ಅಲ್ಪಮತಕ್ಕೆ ಕುಸಿದ ಇಮ್ರಾನ್ ಖಾನ್ ಸರ್ಕಾರ- ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ಸಾಧ್ಯತೆ

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ ಮೂರು ಬಾರಿ ಸೇವೆ ಸಲ್ಲಿಸಿದ ಷರೀಫ್ ಅವರು ದೀರ್ಘಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಸೌದಿ ಅರೇಬಿಯಾಗೆ ಗಡಿಪಾರು
    ಷರೀಫ್‌ ಅವರು 1997 ರಲ್ಲಿ ಮೊದಲ ಬಾರಿಗೆ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾದರು. ಆದರೆ 1999 ರ ಜನರಲ್ ಪರ್ವೇಜ್ ಮುಷರಫ್ ಅವರ ದಂಗೆಯ ನಂತರ, ಅವರು ಪಾಕಿಸ್ತಾನವನ್ನು ತೊರೆದು ಮುಂದಿನ ಎಂಟು ವರ್ಷ ಸೌದಿ ಅರೇಬಿಯಾದಲ್ಲಿ ಕಾಲ ಕಳೆದರು.

    PAK

    ಶೆಹಬಾಜ್ ಷರೀಫ್ ಮತ್ತು ಅವರ ಸಹೋದರ 2007 ರಲ್ಲಿ ಪಾಕಿಸ್ತಾನಕ್ಕೆ ಮರಳಿದರು. 2008 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರ ಪಕ್ಷವು ಗೆದ್ದ ನಂತರ ಮತ್ತೆ ಪಂಜಾಬ್ ಮುಖ್ಯಮಂತ್ರಿಯಾದರು. ಪಂಜಾಬ್ ಮುಖ್ಯಮಂತ್ರಿಯಾಗಿ ಷರೀಫ್ ಅವರ ಮೂರನೇ ಅವಧಿಯು 2013 ರಲ್ಲಿ ಪ್ರಾರಂಭವಾಯಿತು. 2018 ರ ಚುನಾವಣೆಯ ನಂತರ ಅವರನ್ನು ವಿರೋಧ ಪಕ್ಷದ ನಾಯಕನಾಗಿ ನಾಮನಿರ್ದೇಶನ ಮಾಡಲಾಯಿತು. ಇದನ್ನೂ ಓದಿ: ಚೀನಾದ ಶಾಂಫೈನಲ್ಲಿ ಲಾಕ್‌ಡೌನ್ ಜಾರಿ – ಭಾರತದ ಮೇಲೆ ಪರಿಣಾಮ ಏನು?

    ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನ
    ಡಿಸೆಂಬರ್ 2019 ರಲ್ಲಿ, ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋ (NAB) ಶೆಹಬಾಜ್ ಷರೀಫ್ ಮತ್ತು ಅವರ ಮಗ ಹಮ್ಜಾ ಅವರಿಗೆ ಸೇರಿದ 23 ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮುಟ್ಟುಗೋಲು ಹಾಕಿತ್ತು. ಅವರನ್ನು 2020ರ ಸೆಪ್ಟೆಂಬರ್‌ನಲ್ಲಿ ಅದೇ ಪ್ರಕರಣದಲ್ಲಿ ಎನ್‌ಎಬಿ ಬಂಧಿಸಿತು. 2021ರ ಏಪ್ರಿಲ್‌ನಲ್ಲಿ ಲಾಹೋರ್ ಹೈಕೋರ್ಟ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.

  • ಇಮ್ರಾನ್ ಖಾನ್ ಬಳಿಕ ಪಾಕ್ ಪ್ರಧಾನಿ ಆಗ್ತಾರಾ ಶೆಹಬಾಜ್ ಷರೀಫ್?

    ಇಮ್ರಾನ್ ಖಾನ್ ಬಳಿಕ ಪಾಕ್ ಪ್ರಧಾನಿ ಆಗ್ತಾರಾ ಶೆಹಬಾಜ್ ಷರೀಫ್?

    ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಅಂಗೀಕಾರಗೊಂಡರೆ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ಮುಖ್ಯಸ್ಥ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆ ಮಾಡಲಿದೆ.

    ಈ ಕುರಿತಂತೆ ಇಸ್ಲಾಮಾಬಾದ್ ಹೈಕೋರ್ಟ್‍ನ ಹೊರಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿಎಂಎಲ್-ಎನ್ ಉಪಾಧ್ಯಕ್ಷೆ ಮರ್ಯಮ್ ನವಾಜ್ ಅವರು, ಪಾಕಿಸ್ತಾನದ ಪ್ರತಿಪಕ್ಷಗಳು ಪ್ರಧಾನ ಮಂತ್ರಿಯ ಮುಂದಿನ ಅಭ್ಯರ್ಥಿಯ ನೇಮಕಾತಿಯ ಬಗ್ಗೆ ಕುಳಿತು ಚರ್ಚಿಸಿ ನಿರ್ಧರಿಸುತ್ತದೆ. ಆದರೆ ಪಿಎಂಎಲ್-ಎನ್ ಶೆಹಬಾಜ್ ಷರೀಫ್ ಅವರನ್ನು ನಾಮನಿರ್ದೇಶನ ಮಾಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಮ್ರಾನ್‍ಖಾನ್ ಕುರ್ಚಿಗೆ ಇಕ್ಕಟ್ಟು: ಮಾರ್ಚ್ 28ಕ್ಕೆ ಭವಿಷ್ಯ ನಿರ್ಧಾರ

    ಇಮ್ರಾನ್ ಖಾನ್ ನಿಮ್ಮ ಆಟ ಮುಗಿದಿದೆ. ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುರಿದು ಬಿದ್ದಿದೆ. ಆಟದಲ್ಲಿ ಸೋತ ಬಳಿಕ ಯಾರೂ ತನ್ನ ರಕ್ಷಣೆಗೆ ಬರುವುದಿಲ್ಲ ಎಂದು ನಿಮಗೆ ತಿಳಿದಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ಇದೇ ವೇಳೆ ತನ್ನ ವಿರುದ್ಧ ಅಂತರರಾಷ್ಟ್ರೀಯ ಪಿತೂರಿ ಇದೆ ಎಂದು ಇಮ್ರಾನ್ ಖಾನ್ ಆರೋಪಿಸುತ್ತಿದ್ದಾರೆ. ಆದರೆ ನಿಜವಾಗಿಯೂ ಇಮ್ರಾನ್ ಖಾನ್ ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.