Tag: Shepherd

  • ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    – ಕೃತ್ಯವೆಸಗಿದ ಕುರಿಗಾಹಿ ಅರೆಸ್ಟ್

    ರಾಮನಗರ: ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ (Fire) ಹಾಕಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಕನಕಪುರ (Kanakapura) ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.

    ಅರಣ್ಯಕ್ಕೆ ಬೆಂಕಿಹಾಕಿದ ಹೂಳ್ಯ ಗ್ರಾಮದ ರಾಜಪ್ಪ (42) ಎಂಬಾತನನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಸಂಗಮ ವನ್ಯಜೀವಿ ವಲಯದಲ್ಲಿ ಅರಣ್ಯ ಪ್ರದೇಶದಲ್ಲಿ ಕುರಿಗಾಹಿ ರಾಜಪ್ಪ ಮೇಕೆಗಳ ಮೇಯಿಸಲು ಹೋಗಿದ್ದ. ಅರಣ್ಯದಲ್ಲಿರುವ ಒಣ ಹುಲ್ಲು ಸುಟ್ಟರೆ ಹೊಸ ಹುಲ್ಲು ಚಿಗುರುತ್ತೆ. ಇದರಿಂದ ಕುರಿ, ಮೇಕೆಗಳಿಗೆ ಮೇವು ಸಿಗುತ್ತದೆ ಎಂಬ ಕಾರಣಕ್ಕೆ ಅರಣ್ಯಕ್ಕೆ ಬೆಂಕಿಹಚ್ಚಿದ್ದ. ಇದನ್ನೂ ಓದಿ: ಮೊನಾಲಿಸಾ ಸಿನಿಮಾ ವಿವಾದ – ಐವರ ವಿರುದ್ಧ ಬಿತ್ತು ಕೇಸ್‌

    ಅರಣ್ಯಕ್ಕೆ ಬೆಂಕಿಬಿದ್ದ ಹಿನ್ನೆಲೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಬಳಿಕ ಬೆಂಕಿನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಂಕಿನಂದಿಸುವಷ್ಟರಲ್ಲಿ ಸುಮಾರು 30 ಎಕರೆಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವೇಳೆ ಅಕ್ರಮವಾಗಿ ವನ್ಯಜೀವಿ ವಲಯಕ್ಕೆ ಎಂಟ್ರಿಯಾಗಿದ್ದ ರಾಜಪ್ಪನನ್ನ ಹಿಡಿದು ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಬೆಂಕಿಹಾಕಿದ್ದನ್ನ ರಾಜಪ್ಪ ಒಪ್ಪಿಕೊಂಡಿದ್ದಾನೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 300 ಮಕ್ಕಳ ಮೇಲೆ ವೈದ್ಯನಿಂದ ರೇಪ್ – ನಾನು `ಶಿಶುಕಾಮಿ’ ಎಂದು ತಪ್ಪೊಪ್ಪಿಕೊಂಡ ಆರೋಪಿ

    ಅರಣ್ಯಕ್ಕೆ ಬೆಂಕಿಹಾಕಿದ ಹಿನ್ನೆಲೆ ಕೆಲ ವನ್ಯಜೀವಿಗಳೂ ಸಹ ಸಾವನ್ನಪ್ಪಿದ್ದು, ಬೃಹತ್ ಗಾತ್ರದ ಹೆಬ್ಬಾವು ಸಹ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದೆ. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿ ಹಗರಣ – ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

  • ಹುಲಿ ದಾಳಿಗೆ ಕುರಿಗಾಹಿ ಬಲಿ

    ಹುಲಿ ದಾಳಿಗೆ ಕುರಿಗಾಹಿ ಬಲಿ

    ಚಾಮರಾಜನಗರ: ಹುಲಿ ದಾಳಿಗೆ (Tiger Attack) ಕುರಿಗಾಹಿಯೊಬ್ಬ (Shepherd) ಬಲಿಯಾದ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ (Bandipur) ವ್ಯಾಪ್ತಿಯ ಹಾಡಿನಕಣಿವೆ ಬಳಿ ನಡೆದಿದೆ.

    ಬಸವ (50) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಇವರು ಬುಡಕಟ್ಟು ಜೇನುಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ಕಾಡಂಚಿನಲ್ಲಿ ಇವರ ಮೃತದೇಹ ಅರ್ಧಂಬರ್ಧ ತಿಂದ ಸ್ಥಿತಿಯಲ್ಲಿ ದೊರೆತಿದೆ. ಬಸವ ಕುರಿ ಮೇಯಿಸಲು ಹೋಗಿದ್ದು, ಹಾಡಿಯ ಪಕ್ಕದಲ್ಲಿ ಕುರಿ ಮೇಯಿಸುತ್ತಿದ್ದರು. ಈ ವೇಳೆ ಹುಲಿ ದಾಳಿ ಮಾಡಿದೆ. ಇದನ್ನೂ ಓದಿ: ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ – ಮಹಿಳೆ ದಾರುಣ ಸಾವು

    ಹುಲಿ ಅರ್ಧ ಕಿಮೀ ದೂರ ಕುರಿಗಾಹಿಯನ್ನು ಎಳೆದೊಯ್ದಿದೆ. ಸ್ಥಳದಲ್ಲಿ ಬಂಡೀಪುರ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೃತದೇಹ ಕಾಡಿನಿಂದ ಹೊರತರಲೂ ಅಧಿಕಾರಿಗಳು ಮುಂದಾಗಿದ್ದಾರೆ. ಬಂಡೀಪುರದ ಕುಂದುಕೆರೆ ಅರಣ್ಯ ವಲಯದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಶಂಕೆ

  • ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್

    ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್

    ತುಮಕೂರು: ಕೊರೊನಾ ಶಂಕಿತ ವ್ಯಕ್ತಿಗಳನ್ನು ಇದುವರೆಗೂ ಕ್ವಾರಂಟೈನ್ ಮಾಡಲಾಗುತ್ತಿತ್ತು. ಇದೀಗ ಕುರಿಗಳಿಗೂ ಕೂಡ ಕ್ವಾರಂಟೈನ್ ಮಾಡಿ ಜೊತೆಗೆ ಅವುಗಳ ಸ್ವಾಬ್ ಮಾದರಿ ಸಹ ಪಡೆಯಲಾಗಿದೆ.

    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ 50 ಕುರಿಗಳನ್ನು ಒಂದೆಡೆ ಕೂಡಿ ಹಾಕಲಾಗಿದೆ. ಕುರಿಗಳಿಗೆ ಮೇಯಲು ಹೊರಗಡೆ ಬಿಡದಂತೆ ನಿರ್ಧರಿಸಲಾಗಿದೆ. ಕಾರಣ ಈ ಕುರಿಗಳನ್ನು ಮೇಯಿಸುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈಗಾಗಲೇ ಸೋಂಕಿತ ಕುರಿಗಾಹಿಯನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಈತ ಕಾಯುತ್ತಿದ್ದ ಕುರಿಗಳಲ್ಲಿ ಕೊರೊನಾ ವೈರಸ್ ವಿಭಿನ್ನ ಸ್ವರೂಪದಲ್ಲಿ ಇರುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತ ಕುರಿಗಾಹಿಯ 40 ಕ್ಕೂ ಹೆಚ್ಚು ಕುರಿಗಳ ಸ್ವಾಬ್ ಸಂಗ್ರಹಿಸಿದೆ. ಪಶುಸಂಗೋಪನ ಇಲಾಖೆ ಡಿಡಿ ಡಾ. ನಂದೀಶ್ ಅವರ ಮುಂದಾಳತ್ವದಲ್ಲಿ ಮುಂಜಾಗ್ರತಾ ಕ್ರಮವಾಗಿ ಕುರಿಗಳ ಸ್ವ್ಯಾಬ್ ತೆಗೆದು ಪರೀಕ್ಷೆಗಾಗಿ ಮಧ್ಯಪ್ರದೇಶದ ಭೋಪಾಲ್‍ನಲ್ಲಿರುವ ಲ್ಯಾಬ್‍ಗೆ ಕಳುಹಿಸಲಾಗಿದೆ.

    ಈ ನಡುವೆ ಚಿಕ್ಕನಾಯಕನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕುರಿ ಮಾಂಸವನ್ನು ಜನರು ಸೇವಿಸುವ ಮುನ್ನ ಪರೀಕ್ಷಿಸಿಕೊಳ್ಳಬೇಕು. ನಂತರವೇ ಅದನ್ನು ಬಳಸಬೇಕು ಎಂದು ಸೂಚಿಸಲಾಗಿದೆ. ಸಾಮಾನ್ಯವಾಗಿ ಕುರಿಗಳ ಮೂಲಕ ಕೊರೊನಾ ಸೋಂಕು ಹರಡುವುದಿಲ್ಲ ಎಂಬ ವಿಶ್ವಾಸವಿದೆ. ಆದರೂ ಕೂಡ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕುರಿಗಳ ಸ್ವ್ಯಾಬ್ ಸ್ಯಾಂಪಲ್ ಗಳ ವರದಿ ಬಂದ ನಂತರವೇ ಕುರಿಗಳನ್ನು ಮೇಯಲು ಗುಂಪಿನಲ್ಲಿ ಬಿಡಬೇಕು ಅಥವಾ ಬೇಡವೇ ಎಂಬುದನ್ನು ನಿರ್ಧರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.