Tag: Shiggaavi

  • ಹೆದ್ದಾರಿ ಬದಿ ನಿಂತಿದ್ದವರ ಮೇಲೆ ಹರಿದ ಕಾರು – ಇಬ್ಬರು ದುರ್ಮರಣ

    ಹೆದ್ದಾರಿ ಬದಿ ನಿಂತಿದ್ದವರ ಮೇಲೆ ಹರಿದ ಕಾರು – ಇಬ್ಬರು ದುರ್ಮರಣ

    ಹಾವೇರಿ: ಊರಿಗೆ ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದು ಇಬ್ಬರು ಭೀಕರವಾಗಿ ಮೃತಪಟ್ಟ ಘಟನೆ ಜಿಲ್ಲೆಯ ಶಿಗ್ಗಾಂವಿ (Shiggaavi) ತಾಲೂಕಿನ ನೀರಲಗಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

    ಮೃತರನ್ನು ವಿರುಪಾಕ್ಷಪ್ಪ ಕಾಳಿ (60) ಮತ್ತು ಚಿದಾನಂದ ಕುರುಬರ (53) ಎಂದು ಗುರುತಿಸಲಾಗಿದೆ. ಇಬ್ಬರೂ ನೀರಲಗಿ ಗ್ರಾಮದಿಂದ ಶಿಗ್ಗಾಂವಿ ಪಟ್ಟಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಂತಿದ್ದರು. ಆಗ ವೇಗವಾಗಿ ಬಂದ ಕಾರು ಇಬ್ಬರ ಮೇಲೆ ಹರಿದು ದುರ್ಘಟನೆ ಸಂಭವಿಸಿದೆ.

    ವಿರುಪಾಕ್ಷಪ್ಪ ಕಾಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಗಂಭೀರವಾಗಿ ಗಾಯಗೊಂಡಿದ್ದ ಚಿದಾನಂದ ಕುರುಬರ ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಾರದ ಕಾರಣ ಮೃತಪಟ್ಟಿದ್ದಾರೆ. ಅಪಘಾತದ ನಂತರ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬಾರದ್ದರಿಂದ ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್‌ಪೆಕ್ಟರ್ ಅನುಮಾನಾಸ್ಪದ ಸಾವು

    ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ತಡಸ ಠಾಣೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ: ಹಿಟ್ ಆ್ಯಂಡ್ ರನ್ ಕೇಸ್‌ಗೆ ತಂದೆ, ಮಗ ಬಲಿ – ಮತ್ತೋರ್ವನ ಸ್ಥಿತಿ ಗಂಭೀರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೊಮ್ಮಾಯಿ ಪರ ಕಿಚ್ಚ ಸುದೀಪ್ ಕ್ಯಾಂಪೇನ್ – ಶಿಗ್ಗಾಂವಿ ಕ್ಷೇತ್ರದಲ್ಲಿ ಇಂದು ಮಿಂಚಿನ ಸಂಚಾರ

    ಬೊಮ್ಮಾಯಿ ಪರ ಕಿಚ್ಚ ಸುದೀಪ್ ಕ್ಯಾಂಪೇನ್ – ಶಿಗ್ಗಾಂವಿ ಕ್ಷೇತ್ರದಲ್ಲಿ ಇಂದು ಮಿಂಚಿನ ಸಂಚಾರ

    ಹಾವೇರಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಹೀಗಾಗಿ ಹೈವೋಲ್ಟೇಜ್ ಕ್ಷೇತ್ರವಾದ ಸಿಎಂ ಬಸವರಾಜ ಬೊಮ್ಮಾಯಿಯ (Basavaraj Bommai) ಶಿಗ್ಗಾಂವಿ (Shiggaavi) ಕ್ಷೇತ್ರಕ್ಕೆ ನಟ ಕಿಚ್ಚ ಸುದೀಪ್ (Sudeep) ಆಗಮಿಸಲಿದ್ದಾರೆ. ಸುದೀಪ್ ಆಗಮನ ಬೊಮ್ಮಾಯಿಗೆ ಬಲವನ್ನು ತಂದುಕೊಡಲಿದೆ.

    ಶಿಗ್ಗಾಂವಿ ಪಟ್ಟಣದ ನಗರದ ಪ್ರಮುಖ ಬೀದಿಗಳಲ್ಲಿ ಕಿಚ್ಚ ಸುದೀಪ್ 1 ಗಂಟೆ 15 ನಿಮಿಷಗಳ ಕಾಲ ರೋಡ್ ಶೋ (Road Show) ನಡೆಸಲಿದ್ದಾರೆ. ಬೆಳಗ್ಗೆ 10:45ಕ್ಕೆ ಹುಬ್ಬಳ್ಳಿಯಿಂದ ಶಿಗ್ಗಾಂವಿ ಹೆಲಿಪ್ಯಾಡ್‌ಗೆ ಆಗಮಿಸಿ, 11 ಗಂಟೆಗೆ ಬೊಮ್ಮಾಯಿ ಪರ ಬೃಹತ್ ರೋಡ್ ಶೋದಲ್ಲಿ ಕಿಚ್ಚ ಸುದೀಪ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗವಹಿಸಲಿದ್ದಾರೆ.

    ಶಿಗ್ಗಾಂವಿ ಪಟ್ಟಣದ ಸಂತೆಮೈದಾನದಿಂದ ಬೃಹತ್ ರೋಡ್ ಶೋ ಪ್ರಾರಂಭ ಆಗಲಿದೆ. ಚೆನ್ನಮ್ಮ ವೃತ್ತ, ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ತಾಲೂಕು ಕ್ರೀಡಾಂಗಣವರೆಗೆ ಸುಮಾರು 2 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. 12:15ಕ್ಕೆ ಶಿಗ್ಗಾಂವಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದೆ. 2023 ರ ಚುನಾವಣೆಯಲ್ಲಿ ಬೊಮ್ಮಾಯಿ ಹೇಳಿದವರಿಗೆ ಬೆಂಬಲಿಸುತ್ತೇನೆ ಎಂದು ಹೇಳಿದ್ದ ಬಳಿಕ ಇಂದು ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಸುದೀಪ್ ಧುಮುಕಲಿದ್ದಾರೆ.

    ಸುದೀಪ್ ಪ್ರಚಾರದಿಂದ ಬೊಮ್ಮಾಯಿಗೆ ಯಾವ ರೀತಿ ಲಾಭ?
    * ಹೆಸರಾಂತ ನಟನ ನೋಡಲು ಸಾಗರೋಪಾದಿಯಲ್ಲಿ ಸೇರಲಿರುವ ಜನರು.
    * ಅದ್ದೂರಿ ರೋಡ್ ಶೋಗೆ ಸ್ಟಾರ್ ಪ್ರಚಾರಕನಿಂದ ಮೆರಗು.
    * ಸುದೀಪ್ ರೋಡ್ ಶೋದಿಂದ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿ.
    * ಕಿಚ್ಚನ ಪ್ರಚಾರದಿಂದ ಜಾತಿ ಲೆಕ್ಕಾಚಾರದಲ್ಲೂ ಮತಬುಟ್ಟಿ ತುಂಬುವ ನಿರೀಕ್ಷೆ.
    * ವಾಲ್ಮೀಕಿ ಸಮಾಜಕ್ಕೆ ಸೇರಿದ ಸುದೀಪ್ ಪ್ರಚಾರದಿಂದ ವಾಲ್ಮೀಕಿ ಮತಗಳು ಬೊಮ್ಮಾಯಿ ಕಡೆ ವಾಲುವ ನಿರೀಕ್ಷೆ. ಇದನ್ನೂ ಓದಿ: ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ – ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

    ಬೊಮ್ಮಾಯಿ ಕ್ಷೇತ್ರದಲ್ಲಿ ನಟ ಕಿಚ್ಚ ಸುದೀಪ್ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಲಿದ್ದಾರೆ. ವಾಲ್ಮೀಕಿ ಸಮುದಾಯದ ಮತ ಹಾಗೂ ಅಭಿಮಾನಿಗಳ ವೋಟ್ ಬಿಜೆಪಿ ಪರ ವಾಲುತ್ತದೋ ಇಲ್ಲವೋ ಅನ್ನೋದು ಕಾದು ನೋಡಬೇಕಾಗಿದೆ. ನಟ ಸುದೀಪ್ ಪ್ರಚಾರದಿಂದ ಹೀಗೆ ನೂರೆಂಟು ಲೆಕ್ಕಾಚಾರ ರಾಜಕೀಯ ಪಡಸಾಲೆಯಲ್ಲಿ ನಡೆದಿದೆ. ಇದರಿಂದ ಬೊಮ್ಮಾಯಿ ಗೆಲುವಿಗೆ ಬಹಳಷ್ಟು ಸಹಕಾರಿ ಆಗಲಿದೆ. ಇದನ್ನೂ ಓದಿ: ಎನ್‌ಸಿಪಿ ಲೋಗೋ ತೆಗೆದ ಅಜಿತ್‌ ಪವಾರ್‌ – ಮಹಾ ಬಿಜೆಪಿ ಜತೆ ಮೈತ್ರಿಗೆ 40 ಶಾಸಕರ ಸಮ್ಮತಿ?

  • ಶೆಟ್ಟರ್‌ಗೆ ಟಿಕೆಟ್ ತಪ್ಪಲು ನಾನೇ ಕಾರಣ ಅನ್ನೋದು ಸುಳ್ಳು: ಬೊಮ್ಮಾಯಿ

    ಶೆಟ್ಟರ್‌ಗೆ ಟಿಕೆಟ್ ತಪ್ಪಲು ನಾನೇ ಕಾರಣ ಅನ್ನೋದು ಸುಳ್ಳು: ಬೊಮ್ಮಾಯಿ

    – ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

    ಹಾವೇರಿ/ಹುಬ್ಬಳ್ಳಿ: ಶಿಗ್ಗಾಂವಿ (Shiggaavi) ಮತಕ್ಷೇತ್ರದಿಂದ ಸ್ಪರ್ಧಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿಯವರು (Basavaraj Bommai) ಶನಿವಾರ ಶಿಗ್ಗಾಂವಿಗೆ ತೆರಳಿ ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

    ಬೊಮ್ಮಾಯಿ ನಾಮಪತ್ರ (Nomination Paper) ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ (Hubballi) ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪಟ್ಟಣದ ಪುರಸಭೆ ಬಳಿ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಗ್ರಾಮ ದೇವತೆಯ ದರ್ಶನ ಪಡೆದು, ಅಂಬೇಡ್ಕರ್ ಮೂರ್ತಿಗೆ ಹಾರ ಹಾಕಿದ ಸಿಎಂ ಬಳಿಕ ತಮ್ಮ ಕುಟುಂಬಸ್ಥರು ಹಾಗೂ ಮುಖಂಡರೊಡನೆ ನಾಮಪತ್ರ ಸಲ್ಲಿಕೆಗೆ ತಹಸೀಲ್ದಾರ್ ಕಚೇರಿಗೆ ತೆರಳಿದರು. ಸಿಎಂಗೆ ಬೆಂಬಲ ನೀಡಲು 50ಕ್ಕೂ ಹೆಚ್ಚು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತೆರಳಿದ್ದರು.

    ಸಂಸದ ಶಿವಕುಮಾರ್ ಉದಾಸಿ, ಸಚಿವ ಸಿಸಿ ಪಾಟೀಲ್, ಸಿಎಂ ಪುತ್ರ ಭರತ್ ಬೊಮ್ಮಾಯಿ, ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಹಿರಿಯ ಮುಖಂಡರು ಬೊಮ್ಮಾಯಿಗೆ ಸಾಥ್ ನೀಡಿದರು. ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಕೆ ಮಾಡಿದ ಬಳಿಕ ಮಾತನಾಡಿದ ಸಿಎಂ, ಜನರು ಈ ಹಿಂದಿಗಿಂತಲೂ ಹೆಚ್ಚಿನ ಬೆಂಬಲ ನೀಡುತ್ತಾರೆ. ಆಡಳಿತ ಪಕ್ಷ ಹಲವು ಹಾಲಿ ಶಾಸಕರನ್ನು ತೆಗೆದಾಗ ಬಂಡಾಯ ಸಹಜ. ಚುನಾವಣೆ ಎಂದರೆ ಕುಸ್ತಿ, ಎದುರಾಳಿ ಯಾರೇ ಬಂದರೂ ಎದುರಿಸುತ್ತೇವೆ ಎಂದಿದ್ದಾರೆ.

    ಇದಕ್ಕೂ ಮುನ್ನ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು ಹುಬ್ಬಳ್ಳಿಯಲ್ಲಿ ಇಳಿದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಇಂದು ಒಳ್ಳೆಯ ಮುಹೂರ್ತ ಇದ್ದಿದ್ದರಿಂದ ಸಾಂಕೇತಿಕವಾಗಿ ಮೊದಲ ಹಂತದ ನಾಮಪತ್ರ ಸಲ್ಲಿಸಲಿದ್ದೇನೆ. ಏಪ್ರಿಲ್ 19ರಂದು ಜನ ಸೇರಿಸಿ ನಾಮಪತ್ರ ಸಲ್ಲಿಸುತ್ತೇನೆ. ಇಂದು ಇಡೀ ದಿನ ಕ್ಷೇತ್ರದಲ್ಲಿ ಇರುತ್ತೇನೆ ಎಂದು ತಿಳಿಸಿದರು.

    ರಾಜ್ಯದಲ್ಲಿ ಚುನಾವಣಾ ಕಣ ಸಿದ್ಧವಾಗಿದೆ. ನಮಗೆ ಆತ್ಮವಿಶ್ವಾಸ ಇದೆ. ಸಂಪೂರ್ಣ ಬಹುಮತ ಬರುತ್ತದೆ. ಉಳಿದ ಕ್ಷೇತ್ರಗಳಿಗೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಆಗಲಿದೆ. 12 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಕೇಂದ್ರ ಚುನಾವಣೆ ಸಮಿತಿ ತೀರ್ಮಾನ ಮಾಡುತ್ತದೆ ಎಂದರು.

    ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಜಗದೀಶ್ ಶೆಟ್ಟರ್ ಮನವೊಲಿಕೆ ಪ್ರಯತ್ನ ಮಾಡಿದ್ದೇವೆ. ಇವತ್ತಿಗೂ ಪ್ರಯತ್ನ ನಡೆಯುತ್ತಿದೆ. ನಿನ್ನೆ ಧರ್ಮೇಂದ್ರ ಪ್ರಧಾನ ಬಳಿ ಚರ್ಚೆ ಮಾಡಿದ್ದೇನೆ. ಶೆಟ್ಟರ್ ಜನಸಂಘ ಕಾಲದ ಮನೆತನ. ಬಿಜೆಪಿಗೆ ಶೆಟ್ಟರ್ ಅತ್ಯಂತ ನಿಷ್ಠರು. ಅವರು ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಬೇಕೆಂದು ಹೇಳಿದ್ದೇನೆ. ಅತ್ಯಂತ ಅವಶ್ಯ ಇರೋ ನಾಯಕನನ್ನು ಉಳಿಸಿಕೊಳ್ಳುವ ವಿಶ್ವಾಸವಿದೆ. ಈ ಬಗ್ಗೆ ಜೆಪಿ ನಡ್ಡಾ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಶಾಸಕ ಅನಿಲ್ ಬೆನಕೆಗೆ ಬಿ.ಎಲ್ ಸಂತೋಷ್ ಬುಲಾವ್

    ಶೆಟ್ಟರ್‌ಗೆ ಟಿಕೆಟ್ ತಪ್ಪಲು ಕಾರಣ ಬೊಮ್ಮಾಯಿ ಎನ್ನಲಾಗುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಸುಳ್ಳು ವದಂತಿ, ಯಾರೂ ಅದನ್ನು ನಿರೀಕ್ಷೆ ಮಾಡಬಾರದು. ಅತ್ಯಂತ ಪ್ರಾಮಾಣಿಕವಾಗಿ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಹೇಳೋರು ನೂರಾರು ಹೇಳುತ್ತಾರೆ. ಶೆಟ್ಟರ್ ನಮ್ಮ ಆತ್ಮೀಯರು ಎಂದು ನುಡಿದರು. ಇದನ್ನೂ ಓದಿ: ಸೋಮಣ್ಣ ಹೊರಗಿನವ, ವರುಣಾದಲ್ಲಿ ಒಂದು ಮತವೂ ಬೀಳಲ್ಲ: ಸಿದ್ದು

  • ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ – ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

    ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ – ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

    ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು (Basavaraj Bommai) ವಿಧಾನಸಭಾ ಚುನಾವಣೆಗೆ (Assembly Election) ಹಾವೇರಿ (Haveri) ಜಿಲ್ಲೆಯ ಶಿಗ್ಗಾಂವಿಯಲ್ಲಿ (Shiggaavi) ಸ್ಪರ್ಧಿಸಲಿದ್ದಾರೆ. ಈ ಹಿನ್ನೆಲೆ ಸಿಎಂ ಶನಿವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

    ಈಗಾಗಲೇ ಬೊಮ್ಮಾಯಿಯವರು ತಮ್ಮ ನಾಮಪತ್ರ ಸಲ್ಲಿಸಲು ಶಿಗ್ಗಾಂವಿ ಪ್ರಯಾಣದಲ್ಲಿದ್ದಾರೆ. ಬೆಂಗಳೂರಿನ ಆರ್‌ಟಿ ನಗರ ನಿವಾಸದಿಂದ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಅವರು ತೆರಳಿದ್ದಾರೆ. ವಿಶೇಷ ವಿಮಾನದ ಮೂಲಕ ಸಿಎಂ ಹುಬ್ಬಳ್ಳಿಗೆ ತೆರಳಲಿದ್ದು, ಬಳಿಕ ಅಲ್ಲಿಂದ ಶಿಗ್ಗಾಂವಿಗೆ ರಸ್ತೆ ಮಾರ್ಗದ ಮೂಲಕ ತೆರಳಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಅಭ್ಯರ್ಥಿ ಬಾಬುರಾವ್‌ ಚಿಂಚನಸೂರ್‌ ಕಾರು ಅಪಘಾತ – ಮಾಜಿ ಸಚಿವ ಆಸ್ಪತ್ರೆಗೆ ದಾಖಲು

    ಸಿಎಂ 11 ಗಂಟೆ ವೇಳೆಗೆ ತಮ್ಮ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಕೆಯ ಬಳಿಕ ಬೊಮ್ಮಾಯಿ ಶಿಗ್ಗಾಂವಿಯ ತಮ್ಮ ನಿವಾಸದಲ್ಲಿ ಸಂಜೆ ವರೆಗೂ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

  • ನಾನು ಸತ್ತರೆ ಇದೇ ಮಣ್ಣಿನಲ್ಲಿ ಹೂಳಬೇಕು – ಸಿಎಂ ಬೊಮ್ಮಾಯಿ ಭಾವುಕ

    ನಾನು ಸತ್ತರೆ ಇದೇ ಮಣ್ಣಿನಲ್ಲಿ ಹೂಳಬೇಕು – ಸಿಎಂ ಬೊಮ್ಮಾಯಿ ಭಾವುಕ

    ಹಾವೇರಿ: ಯಾವ ಜನ್ಮದ ಋಣವೋ ನನಗೆ ಗೊತ್ತಿಲ್ಲ, ನಾನು ಬಂದಾಗ ಪ್ರೀತಿ ವಿಶ್ವಾಸ ತೋರಿಸಿದ್ದೀರಿ. ನಾನು ಸತ್ತ ಮೇಲೆ ನನ್ನ ಅಂತ್ಯಕ್ರಿಯೆ ಇದೇ ಕ್ಷೇತ್ರದಲ್ಲಿ ಮಾಡಬೇಕು, ಇದೇ ಮಣ್ಣಿನಲ್ಲಿ ಹೂಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭಾವುಕ ನುಡಿಗಳನ್ನಾಡಿದರು.

    ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaavi) ಬಾಡ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ (Grama Vastavya) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಆಯುರ್ವೇದ ಕಾಲೇಜು, ಟೈಕ್ಸಟೈಲ್ ಪಾರ್ಕ್ (Textile Park) ನಿರ್ಮಾಣ ಮಾಡಲಾಗಿದೆ. ಮನೆ-ಮನೆಗೆ ಹೋಗಿ ಕಂದಾಯ ದಾಖಲೆಗಳನ್ನ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರ್.ಅಶೋಕ್ ಗ್ರಾಮದ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಒಂದು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ತ್ಯಾಗ – ರಾಮನಗರದಿಂದ ನಿಖಿಲ್‌ ಸ್ಪರ್ಧೆ

    ಇಷ್ಟು ದೊಡ್ಡ ಸಂಖ್ಯೆಯಲ್ಲಿ ತಾವೆಲ್ಲಾ ಸೇರಿದ್ದೀರಿ. ಎಲ್ಲಾ ಕಾರ್ಯಕ್ರಮಗಳ ಫಲಾನುಭವಿಗಳು ಇಂದು ಇಲ್ಲಿ ಬಂದಿದ್ದೀರಿ. ಎಲ್ಲಾ ಫಲಾನುಭವಿಗಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಾನು ಈ ಜಿಲ್ಲೆಗೆ ಹೋಗುತ್ತಿದ್ದೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ (R Ashoka) ಅವರು ಹೇಳುತ್ತಿದ್ದರು. ಅದಕ್ಕೆ ನಮ್ಮ ಕ್ಷೇತ್ರಕ್ಕೆ ಬರುವುದಿಲ್ಲವೇನಪ್ಪಾ ಎಂದು ಕೇಳಿದೆ. ಉತ್ತರ ಕರ್ನಾಟಕದ (Uttar Karnataka) ನಮ್ಮ ಜನ ಹೃದಯ ಶ್ರೀಮಂತರು, ಅವರು ಬಹಳ ಪ್ರೀತಿ ತೋರಿಸುತ್ತಾರೆ. ಬನ್ನಿ ಎಂದು ಕರೆದೆ. ಇಂದು ಕಂದಾಯ ಸಚಿವರು ನಮ್ಮ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಹೊಗಳಿದರು.

    ಇಂದು 30 ಸಾವಿರ ಜನರಿಗೆ ಸರ್ಕಾರದ ಪರಿಹಾರದ ಹಣ, ಪ್ರಮಾಣ ಪತ್ರ ಕೊಡುತ್ತಿದ್ದೇವೆ. 6 ಸಾವಿರ ಮನೆಗಳಿಗೆ ಹಣ ಬಿಡುಗಡೆ ಮಾಡುತ್ತಿದ್ದೇವೆ. ಒಂದೇ ದಿನ 30 ಸಾವಿರ ಜನರಿಗೆ ಕೊಡುತ್ತಿದ್ದೇವೆ. ಕನಕದಾಸರ ಮಹಿಮೆ ಪ್ರಾರಂಭವಾಗಿದ್ದೇ ಈ ಬಾಡ ಗ್ರಾಮದಲ್ಲಿ. ಇದೊಂದು ಪರಿವರ್ತನೆಯ ಭೂಮಿ, ಪುಣ್ಯ ಭೂಮಿ ಇದು. ಇಲ್ಲಿಂದ ಶಿಗ್ಗಾಂವಿಯ (Shiggaavi) ಭವಿಷ್ಯ ಮತ್ತಷ್ಟು ಉಜ್ವಲವಾಗಲಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ನಾನು ಕನಸಿನಲ್ಲೂ ಯೋಚನೆ ಮಾಡಿರಲಿಲ್ಲ: ನಿಖಿಲ್‌ ಕುಮಾರಸ್ವಾಮಿ

    ನಾನು ದಿನನಿತ್ಯ ಎರಡ್ಮೂರು ಕ್ಷೇತ್ರಗಳಿಗೆ ಹೋಗುತ್ತಿರುತ್ತೇನೆ. ಅಲ್ಲಿ ಜನ ಬಹಳ ಪ್ರೀತಿಯಿಂದ ಸ್ವಾಗತ ಕೋರುತ್ತಾರೆ. ಆಗ ನನಗೆ ನೀವೇ ನೆನಪಾಗುತ್ತೀರಿ. ಈ ಸ್ಥಾನ, ಗೌರವ ನನಗೆ ಸೇರಬೇಕಾಗಿದ್ದಲ್ಲ, ಈ ಕ್ಷೇತ್ರದ ಜನರಾದ ನಿಮಗೆ ಸೇರಬೇಕು. ಬಂಧುಗಳೇ ನಾನು ನಿಮ್ಮ ಋಣದಲ್ಲಿದ್ದೇನೆ. ನನ್ನ ಜೀವನದ ಕೊನೆಯ ಉಸಿರಿರುವವರೆಗೆ ನಿಮ್ಮ ಸೇವೆ ಮಾಡುತ್ತೇನೆ. ಏನಪ್ಪಾ, ನಮ್ಮ ಸಾಹೇಬರು ದೂರ ಆಗಿಬಿಟ್ಟರು ಎಂದು ನಿಮಗೆ ಅನ್ನಿಸಿರಬಹುದು. ಆದರೆ ನನ್ನ ಹೃದಯ ಇಲ್ಲೇ ಇರುತ್ತದೆ ಎಂದು ಬೊಮ್ಮಾಯಿ ಅವರು ಭಾವುಕರಾದರು.

    ಡಿಸೆಂಬರ್ 31ರೊಳಗೆ ಮನೆ ಕಳೆದುಕೊಂಡ ಬಡವರಿಗೆ ನಾನೇ ಬಂದು ಧನಸಹಾಯ ಕೊಡುತ್ತೇನೆ. ಶಾಲೆಯ ಮಕ್ಕಳಿಗಾಗಿಯೇ ವಿಶೇಷ ಬಸ್ ಕೊಡುತ್ತೇವೆ. ನನ್ನ ಕ್ಷೇತ್ರದ ಪ್ರತಿ ಹಳ್ಳಿಯ ಹೊಲಗಳಿಗೆ ಹೋಗುವ ಎಲ್ಲಾ ರಸ್ತೆಗಳನ್ನು ನಿರ್ಮಿಸಲು ಆಜ್ಞೆ ಮಾಡುತ್ತೇನೆ. ನಮ್ಮ ಸರ್ಕಾರ ಒಂದೇ ವರ್ಷದಲ್ಲಿ 8 ಸಾವಿರ ಶಾಲೆಗಳನ್ನು ನಿರ್ಮಾಣ ಮಾಡುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ನಿರ್ಮಾಣ ಮಾಡುತ್ತಿದೆ. ಶಿಗ್ಗಾಂವಿಯಲ್ಲಿ 250 ಬೆಡ್‌ಗಳ ಆಸ್ಪತ್ರೆ ನಿರ್ಮಿಸುತ್ತಿದ್ದೇವೆ. ಹಿಂದಿನ ಯಾವ ಸರ್ಕಾರಗಳೂ ಈ ಕೆಲಸ ಮಾಡಿಲ್ಲ ಎಂದು ತಮ್ಮ ಸರ್ಕಾರದ ಸಾಧನೆಯನ್ನು ಕೊಂಡಾಡಿದರು.

    Live Tv
    [brid partner=56869869 player=32851 video=960834 autoplay=true]