ಹಾವೇರಿ: ಶಿಗ್ಗಾಂವಿಯಲ್ಲಿ (Shiggaon) ನಡೆದಿದ್ದ ಗುತ್ತಿಗೆದಾರನ (Contractor) ಹತ್ಯೆ ಪ್ರಕರಣದ ಎ1 ಆರೋಪಿ ಮನೆಗೆ ಬೆಂಕಿ ಹಾಕಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಮನೆಗೆ ಬೆಂಕಿ ಹಾಕಿದ್ದ ಹತ್ಯೆಯಾದ ಶಿವಾನಂದ ಕುನ್ನೂರು ಕುಟುಂಬದ 6 ಜನ ಸದಸ್ಯರನ್ನು ಬಂಧಿಸಲಾಗಿದೆ. ಹತ್ಯೆಯಾದ ರಾತ್ರಿಯೇ ಪ್ರಕರಣದ ಆರೋಪಿ ನಾಗರಾಜ್ ಸವದತ್ತಿ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಾಕಲಾಗಿತ್ತು. ಮನೆಯಲ್ಲಿ ಯಾರೂ ಇಲ್ಲದೇ ಇದ್ದಿದ್ದರಿಂದ ಸಾವುನೋವು ಸಂಭವಿಸಿರಲಿಲ್ಲ. ಇದನ್ನೂ ಓದಿ: ಗುತ್ತಿಗೆದಾರನ ಹತ್ಯೆ ಕೇಸ್ – ಆರೋಪಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕುಟುಂಬಸ್ಥರು
ಬಂಧಿತ ಆರೋಪಿಗಳನ್ನು ಲಿಂಗರಾಜ್ ಕುನ್ನೂರು, ಧರ್ಮಣ್ಣ ಕುನ್ನೂರು, ಶ್ರೀಧರ್, ಪ್ರಕಾಶ್ ಕುನ್ನೂರು, ಶಂಕ್ರಪ್ಪ, ಪ್ರಕಾಶ್ ಎಂದು ಗುರುತಿಸಲಾಗಿದೆ. ಕಳೆದ ಜೂ.24 ರಂದು ಶಿಗ್ಗಾಂವಿಯಲ್ಲಿ ಶಿವಾನಂದ ಕುನ್ನೂರು ಹತ್ಯೆ ನಡೆದಿತ್ತು. ಸೈಟ್ ವಿಚಾರವಾಗಿ ಈ ಕೊಲೆ ನಡೆದಿತ್ತು. ಹತ್ಯೆಯಾದ ದಿನವೇ ಆರೋಪಿಗಳು ನಾಗರಾಜ್ ಮನೆಗೆ ಬೆಂಕಿ ಹಾಕಿದ್ದರು.
ಹಾವೇರಿ: ಕೊಳಗೇರಿ ನಿವಾಸಿಗಳಿಗೆ ಕಳೆದ ಎರಡು ವರ್ಷಗಳಿಂದ ಸ್ಲಂ ಬೋರ್ಡ್‌ನಿಂದ (Slum Board) ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅದರೆ ಸ್ಲಂ ಬೋರ್ಡ್‌ನ ಅಧಿಕಾರಿಗಳ ಮತ್ತು ಗುತ್ತಿಗೆದಾರ ಹಣದಾಹದಿಂದ ಮನೆಗಳು ಅರ್ಧಕ್ಕೆ ನಿಂತಿದ್ದು, ಫಲಾನುಭವಿಗಳು ಕಣ್ಣೀರು ಹಾಕುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಒಂದು ಸ್ವಂತ ಸೂರು ಇರಬೇಕು ಎನ್ನುವ ಕನಸು ಇರುತ್ತೆ. ಈ ಕನಸು ನನಸು ಮಾಡಲು ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಮುಂದಾಗಿತ್ತು. ಆದರೆ ಅಧಿಕಾರಿಗಳ ಹಣದಾಹದಿಂದ ಆ ಕನಸು ನುಚ್ಚುನೂರಾಗಿದೆ.
ಶಿಗ್ಗಾಂವಿ (Shiggaon) ತಾಲೂಕಿನ ಬಂಕಾಪುರದಲ್ಲಿ (Bankapura) ಹಿಂದೆ ಸ್ಲಂ ಬೋರ್ಡ್‌ನಿಂದ ಮನೆ ಮಂಜುರಾಗಿತ್ತು. ಆದರೆ ಗುತ್ತಿಗೆದಾರ ಅರ್ಧ ಮನೆ ನಿರ್ಮಾಣ ಮಾಡಿ ನಾಪತ್ತೆ ಆಗಿದ್ದಾನೆ. ಹೀಗಾಗಿ ಜನರೇ ಹಣ ಹಾಕಿ ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗಿದ್ದಾರೆ. ಸರ್ಕಾರದಿಂದ ಮನೆ ನಿರ್ಮಾಣ ಮಾಡಲು ಪ್ರತಿ ಮನೆಗಳಿಗೆ 7 ಲಕ್ಷದ 20 ಸಾವಿರ ರೂ. ಹಣ ಬಿಡುಗಡೆ ಮಾಡಿದೆ. ಅದರೆ ಸ್ಲಂ ಬೋರ್ಡ್ ಅಧಿಕಾರಿಗಳು ಮತ್ತು ಗುತ್ತಿಗೆದಾರರ 50% ರಷ್ಟು ಜಲ್ಲಿಕಲ್ಲು, ಕಬ್ಬಿಣ ಮತ್ತು ಸಿಮೆಂಟ್ ನೀಡಿ ಕೈತೊಳೆದುಕೊಂಡಿದ್ದಾರೆ. ಇದನ್ನೂ ಓದಿ: ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR
ಬಂಕಾಪುರ ಪಟ್ಟಣದಲ್ಲಿಯೇ 27.76 ಕೋಟಿ ರೂ. ವೆಚ್ಚದಲ್ಲಿ 454 ಮನೆಗಳ ಮಂಜೂರು ಮಾಡಲಾಗಿದೆ. ಸರಿಯಾದ ಮೂಲಭೂತ ಸೌಕರ್ಯಗಳ ಕೊರತೆ ದೂರು ನೀಡಿದ ಹಿನ್ನಲೆ ಸವಣೂರು ಉಪವಿಭಾಗಾಧಿಕಾರಿ ನೇತೃತ್ವದಲ್ಲಿ 7 ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಜಿಲ್ಲಾಡಳಿತಕ್ಕೆ ವರದಿಯ ನೀಡಲಾಗಿದೆ. ಮನೆಯ ನಿರ್ಮಾಣಕ್ಕಾಗಿ ಇಟ್ಟಿಗೆ ಸಿಮೆಂಟ್, ಕಬ್ಬಿಣವನ್ನು 50% ಮಾತ್ರ ನೀಡಿದ್ದಾರೆ. ಮನೆ ಕಟ್ಟಿದ ಕಾರ್ಮಿಕರ ಕೂಲಿಯನ್ನೂ ನೀಡಿಲ್ಲ ಎಂದು ಫಲಾನುಭವಿಗಳು ಆಕ್ರೋಶ ಹೊರಹಾಕಿದ್ದಾರೆ. ಕಳಪೆ ಗುಣಮಟ್ಟದ ವಸ್ತುಗಳ ಬಳಕೆ ಮಾಡಿದ್ದರಿಂದ ಮನೆಗಳು ಮಳೆಯಿಂದ ಸೋರುತ್ತಿವೆ. ಮನೆಯಲ್ಲಿದ್ದವರ ಬಂಗಾರ ಮಾರಾಟ ಮಾಡಿ ಮನೆ ಕಟ್ಟಲು ಹಾಕಿದರೂ ಮನೆ ಮುಕ್ತಾಯ ಆಗಿಲ್ಲ ಎಂದು ಜನ ಬೇಸರ ಹೊರಹಾಕಿದ್ದಾರೆ.
ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ 43 ಕೋಟಿ ರೂ. ವೆಚ್ಚದಲ್ಲಿ 696 ಮನೆಗಳು ಮಂಜೂರು, ಶಿಗ್ಗಾಂವಿ 46 ಕೋಟಿಯಲ್ಲಿ 850 ಮನೆಗಳು ಮಂಜೂರಾಗಿವೆ. ಕಳೆದ ಎರಡು ವರ್ಷಗಳಿಂದ 20% ರಷ್ಟು ಮನೆಗಳು ಮಾತ್ರ ಪೂರ್ಣಗೊಂಡಿದ್ದು, ಇನ್ನೂ 60% ಮನೆಗಳು ಪ್ರಗತಿ ಹಂತದಲ್ಲಿವೆ. ಸ್ಥಳ ಪರಿಶೀಲನೆ ವೇಳೆ 50% ರಷ್ಟು ಮಾತ್ರ ಮನೆಗಳಿವೆ. ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲ ಹಾಗೂ ಮನೆಯ ನಿರ್ಮಾಣ ಮಾಡಿದ ಲೇಬರ್ ಹಣ ಬಿಡುಗಡೆ ಮಾಡಿಲ್ಲ ಎಂಬುದನ್ನು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಕೆಲವು ಫಲಾನುಭವಿಗಳಿಗೆ ಬಂಗಾರ ಮಾರಾಟ ಮಾಡಿ ಮನೆಯನ್ನ ಕಟ್ಟಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವು ಫಲಾನುಭವಿಗಳು ಜಮೀನು ಅಡವಿಟ್ಟು ಮನೆ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಈ ವರದಿಯನ್ನು ಸ್ಲಂ ಬೋರ್ಡ್ ಕೇಂದ್ರ ಕಚೇರಿಗೆ ಕಳಿಸಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ್ ಹೇಳಿದ್ದಾರೆ.
ಸ್ಲಂ ಬೋರ್ಡ್‌ನಿಂದ ಸರ್ಕಾರ ಬಡವರಿಗೆ ಕೋಟ್ಯಂತರ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾಗಿತ್ತು. ಆದರೆ ಅಧಿಕಾರಿಗಳ ಮತ್ತು ಗುತ್ತಿಗೆದಾರ ಹಣದಾಹದಿಂದ ಫಲಾನುಭವಿಗಳಿಗೆ ಇದು ನೆರವೇರಿಲ್ಲ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು, ಉಳಿದ ಅನುದಾನ ಬಿಡುಗಡೆ ಮಾಡಿ ಮನೆಗಳನ್ನ ಪೂರ್ಣಗೊಳಸಬೇಕು ಎಂದು ಫಲಾನುಭವಿಗಳು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹಲವು ಮಹಿಳೆಯರ ಜೊತೆ ಅಫೇರ್ ಇಟ್ಕೊಂಡಿದ್ದ – ಯಶ್ ದಯಾಳ್ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ
ಹಾವೇರಿ: ಗುತ್ತಿಗೆದಾರನನ್ನು (Contractor) ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯ ಮನೆಗೆ ಬೆಂಕಿ ಹಚ್ಚಿ ಕುಟುಂಬಸ್ಥರು ಆಕ್ರೋಶ ಹೊರಹಾಕಿದ ಘಟನೆ ಶಿಗ್ಗಾಂವಿಯಲ್ಲಿ (Shiggaon) ನಡೆದಿದೆ.
ಪ್ರಕರಣ ಎ-1 ಆರೋಪಿ ನಾಗರಾಜ್ ಸವದತ್ತಿ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಇದರಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಈ ಘಟನೆ ನಡೆದಿದೆ. ಇದರಿಂದ ಆರೋಪಿಯ ಮನೆಯ ಸದಸ್ಯರು ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಡಾಬಾಗೆ ನುಗ್ಗಿ ಮೂವರನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು
ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎಂಬವರನ್ನು ಮಂಗಳವಾರ (ಜೂ.24) ಹಾಡಹಗಲೇ ಮಾರಕಾಸ್ತ್ರಗಳಿಂದ ಹೊಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಹತ್ಯೆಗೆ ಆರೋಪಿ ನಾಗರಾಜ್ ಸಂಚು ರೂಪಿಸಿದ್ದ ಎನ್ನಲಾಗಿದೆ. ಸ್ಥಳೀಯರು ಕೃತ್ಯದ ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ವಿಡಿಯೋದಲ್ಲಿ ನಾಗರಾಜ್ ಸವದತ್ತಿ, ಹನುಮಂತ, ಅಶ್ರಪ್, ಸುದೀಪ್ ಮತ್ತು ಸುರೇಶ್ ಹತ್ಯೆ ಮಾಡಿರುವುದು ಸೆರೆಯಾಗಿತ್ತು. ಹತ್ಯೆಯ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆಸ್ತಿ ವಿಚಾರದಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಈ ಐವರ ವಿರುದ್ಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂರು ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಇದನ್ನೂ ಓದಿ: ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ
ಹುಬ್ಬಳ್ಳಿ ತಾಲೂಕಿನ ಚೆನ್ನಾಪುರ ಗ್ರಾಮದ ಎರಡೂವರೆ ವರ್ಷದ ರುಕ್ಸಾನಾ ಬಾನು ಶೇಖ್ ಸನದಿ ಮೃತ ಬಾಲಕಿ. ಕಳೆದ ಐದು ದಿನಗಳ ಹಿಂದೆ ಮನೆಯವರೊಂದಿಗೆ ಮದುವೆಗೆಂದು ಹಾವೇರಿ (Haveri) ಜಿಲ್ಲೆಯ ಶಿಗ್ಗಾವಿ (Shiggaon) ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ಹೋಗಿದ್ದ ಸಂದರ್ಭ ಬಾಲಕಿ ಮೈಮೇಲೆ ಕುದಿಯುವ ಸಾಂಬಾರ್ ಬಿದ್ದಿತ್ತು. ಇದನ್ನೂ ಓದಿ: ತಮ್ಮ ತಪ್ಪು ಅರಿವಾದರೆ ಯಾರೇ ಆದರೂ ಪಕ್ಷಕ್ಕೆ ಮರಳಬಹುದು: ವಿಜಯೇಂದ್ರ ಮುಕ್ತ ಆಹ್ವಾನ
ಕೂಡಲೇ ಬಾಲಕಿಯನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲು ಮಾಡಲಾಗಿತ್ತು. ಎರಡು ದಿನದ ಹಿಂದಷ್ಟೇ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಇಂದು ಮತ್ತೆ ಮೈಮೇಲೆ ಗುಳ್ಳೆಗಳು ಎದ್ದಿದ್ದವು. ಹೀಗಾಗಿ ಮತ್ತೆ ಕಿಮ್ಸ್ಗೆ ಬಾಲಕಿಯನ್ನು ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಆರ್‌ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ
ಹಾವೇರಿ: ಕೆರೆಗೆ (Lake) ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaon) ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಎಂದು ಗುರುತಿಸಲಾಗಿದೆ. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು ಈಜಲು ತೆರಳಿದ್ದಾರೆ. ನೀರಿಗಿಳಿದ ಸಂದರ್ಭ ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೆರೆಯ ದಡದಲ್ಲಿ ಸೈಕಲ್ ಹಾಗೂ ಬಟ್ಟೆಗಳು ಇರುವುದನ್ನು ಗಮನಿಸಿದ ಸ್ಥಳೀಯರು ಕೆರೆಯಲ್ಲಿ ಬಾಲಕರು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಓರ್ವ ಬಾಲಕನ ಮೃತದೇಹ ಕೆರೆಯಿಂದ ಹೊರತೆಗೆದಿದ್ದಾರೆ. ಇದನ್ನೂ ಓದಿ: ನಾನು, ಟ್ರಂಪ್, ಮೋದಿ ಒಂದಾದ್ರೆ ಪ್ರಜಾಸತ್ತೆಗೆ ಬೆದರಿಕೆ ಹೇಗಾಗುತ್ತೆ?: ಮೆಲೋನಿ ಪ್ರಶ್ನೆ
ಘಟನಾ ಸ್ಥಳಕ್ಕೆ ಶಿಗ್ಗಾಂವಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿ ಪ್ರಜ್ವಲ್ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವ ಬಾಲಕನ ಮೃತದೇಹ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹುಲಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇದನ್ನೂ ಓದಿ: ಭಾರತದಲ್ಲಿ ಮತದಾನಕ್ಕೆ ಅಮೆರಿಕ ದೇಣಿಗೆ ನೀಡಿಲ್ಲ, 7 ಯೋಜನೆಗಳಿಗಷ್ಟೇ ಧನಸಹಾಯ – ಹಣಕಾಸು ಸಚಿವಾಲಯ
ಹಾವೇರಿ: ಸತ್ತನೆಂದು ಆಸ್ಪತ್ರೆಯಿಂದ ಊರಿಗೆ ಕರೆತರುವಾಗ ಬದುಕಿದ್ದ ವ್ಯಕ್ತಿ, ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ (Shiggaon) ತಾಲೂಕಿನ ಬಂಕಾಪುರ (Bankapura) ಗ್ರಾಮದಲ್ಲಿ ನಡೆದಿದೆ.
ಬಿಷ್ಟಪ್ಪ ಅಶೋಕ್ ಗುಡಿಮನಿ (45) ಮೃತ ವ್ಯಕ್ತಿ. ಕಳೆದ 15 ದಿನಗಳ ಹಿಂದೆ ಕಾಮಾಲೆ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡಿದ ವೈದ್ಯರು ಸಾವನ್ನಪ್ಪಿದ್ದಾರೆ, ಊರಿಗೆ ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದರು. ಊರಿಗೆ ವಾಪಸ್ ಬರುತ್ತಿದ್ದ ವೇಳೆ, ಅವರ ಇಷ್ಟವಾದ ಡಾಬಾದ ಬಳಿ, ಡಾಬಾ ಬಂತು ನೋಡು ಊಟ ಮಾಡುತ್ತೀಯಾ ಎಂದು ಗೋಳಾಡಿ ಪತ್ನಿ ಕಣ್ಣೀರಿಟ್ಟಾಗ ಮೃತಪಟ್ಟ ವ್ಯಕ್ತಿ ಉಸಿರು ಬಿಟ್ಟಿದ್ದರು. ಇದನ್ನೂ ಓದಿ: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ: ಅಶ್ವಿನಿ ವೈಷ್ಣವ್
ಕೂಡಲೇ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ನಿರಂತರವಾಗಿ ಒಂದು ವಾರ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಶನಿವಾರ) ನಿಧನರಾಗಿದ್ದಾರೆ. ಸ್ವಗ್ರಾಮ ಬಂಕಾಪುರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಸ್ವಗ್ರಾಮದ ರೇಷ್ಮೆ ಬೆಳೆಗಾರರ ಸಹಕಾರ ಸಂಘ ಚುನಾವಣೆಯಲ್ಲಿ ಡಿಕೆಶಿ ಮತದಾನ
ಹಾವೇರಿ: ಗೊಟಗೋಡಿಯಲ್ಲಿರುವ ಜಾನಪದ ವಿವಿ ಘಟಿಕೋತ್ಸವದಲ್ಲಿ (Janapada University Convocation) ಶಿಗ್ಗಾಂವಿಯ ನೂತನ ಕಾಂಗ್ರೆಸ್ ಶಾಸಕ ಯಾಸಿರ್ ಅಹಮದ್ ಖಾನ್ ಪಠಾಣ್ (Yasir Ahmad Kha Patan) ಹಾಗೂ ಬೆಂಬಲಿಗರು ದರ್ಪ ತೋರಿದ್ದಾರೆ.
ಘಟಿಕೋತ್ಸವದ ಹಿನ್ನೆಲೆಯಲ್ಲಿ ಜಾನಪದ ವಿವಿ ಆವರಣದಲ್ಲಿ ಜಾನಪದ ಶೈಲಿಯಲ್ಲಿ ಮೆರವಣಿಗೆ ಆರಂಭವಾಯಿತು. ಮೆರವಣಿಗೆಯಲ್ಲಿ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಪಾಲ್ಗೊಂಡಿದ್ದರು.
ಮೆರವಣಿಗೆ ವೇದಿಕೆಯತ್ತ ಸಾಗುತ್ತಿದ್ದಾಗ ಸ್ಥಳಕ್ಕೆ ಶಾಸಕರು ಆಗಮಿಸಿದ್ದಾರೆ. ಮುಂದೆ ಹೋಗಿ ಸಚಿವರನ್ನು ಭೇಟಿಯಾಗಿ ಬಳಿಕ ಹಿಂದೆ ಬಂದ ಶಾಸಕರು ಬೆಂಬಲಿಗರೊಂದಿಗೆ ಗುಂಪು ಸೇರಿ ಘಟಿಕೋತ್ಸವದ ವೇದಿಕೆ ಮುಂದೆ ಆಗಮಿಸಿ ನನ್ನನ್ನು ವೇದಿಕೆ ಕರೆದಿಲ್ಲ. ನಾನು ವಿವಿಗೆ ಬಂದರೂ ಯಾರೂ ಸ್ವಾಗತಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು ಮತ್ತು ಸಭಿಕರು ಏನಿದು? ವಿಶ್ವವಿದ್ಯಾಲಯಗಳ ಘಟಿಕೋತ್ಸವಕ್ಕೆ ಶಾಸಕರಿಗೆ ಆಹ್ವಾನ ಇಲ್ಲ ಎಂಬ ಕನಿಷ್ಟ ಶಿಷ್ಟಾಚಾರದ ತಿಳುವಳಿಕೆ ಇಲ್ಲ ಎಂದು ಮಾತನಾಡತೊಡಗಿದರು.
ವಿಶ್ವವಿದ್ಯಾಲಯ ಸಿಬ್ಬಂದಿ ಶಿಷ್ಟಾಚಾರದ ಪ್ರಕಾರವೇ ನಡೆದುಕೊಂಡ ವಿಚಾರ ಗೊತ್ತಾದ ಬಳಿಕ ಶಾಸಕರು, ಬೆಂಬಲಿಗರಿಗೆ ಶಿಷ್ಟಾಚಾರದ ಬಗ್ಗೆ ಗೊತ್ತಿರಲಿಲ್ಲ. ಬೆಂಬಲಿಗರು ತಿಳಿಯದೇ ತಪ್ಪು ಮಾಡಿದ್ದಾರೆ. ಬೆಂಬಲಿಗರಿಗೆ ತಿಳಿ ಹೇಳುತ್ತೇನೆ. ಇಲ್ಲಿ ಸಮಸ್ಯೆಗಳು ಇದ್ದರೆ ಹೇಳಿ ಎಂದು ಮನವಿ ಮಾಡಿ ತೆರಳಿದರು.
ಬೆಂಗಳೂರು: ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಬಸವರಾಜ ಬೊಮ್ಮಾಯಿ ಹಾಗೂ ಈ. ತುಕಾರಾಮ್ ಅವರ ರಾಜೀನಾಮೆಯಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ (By Election) ನಡೆದರೂ ರಾಜ್ಯದ ಮಟ್ಟಿಗೆ ಹೆಚ್ಚು ಸದ್ದು ಮಾಡಿದ್ದು, ಹೈವೋಲ್ಟೇಜ್ ಕಣ ಚನ್ನಪಟ್ಟಣ.
ಅಂತಿಮವಾಗಿ ಎಲ್ಲರ ಲೆಕ್ಕಾಚಾರ ತಲೆಕೆಳಗು ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ (CP Yogeshwar) ಗೆಲುವಿನ ನಗಾರಿ ಬಾರಿಸಿದ್ದಾರೆ. ಕಾಂಗ್ರೆಸ್ ರೂಪಿಸಿದ ಚಕ್ರವ್ಯೂಹ ಬೇಧಿಸುವಲ್ಲಿ ನಿಖಿಲ್ ಕುಮಾರಸ್ವಾಮಿ 3ನೇ ಬಾರಿಯೂ ವಿಫಲರಾಗಿದ್ದಾರೆ. ಈ ಪ್ರತಿಷ್ಠೆಯ ರಾಜಕೀಯ ಆಟದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಕೈ ಮೇಲಾಗಿದೆ. ಇದನ್ನೂ ಓದಿ: ಜೈಲರ್ ಬಾಕ್ಸ್‌ನಿಂದ ಬ್ಯಾಲೆಟ್ ಬಾಕ್ಸ್‌ವರೆಗೆ – ಒಂದೇ ವರ್ಷದಲ್ಲಿ 2ನೇ ಬಾರಿ ಹೇಮಂತ್ ಸೊರೆನ್ ಸಿಎಂ
ಸ್ವಂತ ಕ್ಷೇತ್ರದಲ್ಲಿ ಪುತ್ರನನ್ನು ಗೆಲ್ಲಿಸಲಾಗದೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮುಜುಗರ ಅನುಭವಿಸಿದ್ದಾರೆ. ದೇವೇಗೌಡರು ನಿರಂತರ 10 ದಿನ ಪ್ರಚಾರ ನಡೆಸಿ ಅಬ್ಬರಿಸಿದರೂ, ಬಿಜೆಪಿ ನಾಯಕರು ಬಂದು ಸಂಘಟಿತವಾಗಿ ಪ್ರಚಾರ ನಡೆಸಿದ್ರೂ, ಅದು ನಿಖಿಲ್‌ಗೆ ಗೆಲುವು ತಂದುಕೊಡಲಿಲ್ಲ. ಮತ ಎಣಿಕೆಯ ಮೊದಲ 6 ಸುತ್ತಿನ ವರೆಗೂ ಹಾವು – ಏಣಿ ಆಟ ನಡೆದಿತ್ತು. ಆದ್ರೆ 6ನೇ ಸುತ್ತಿನ ಬಳಿಕ ಫಲಿತಾಂಶದ ದಿಕ್ಕೇ ಬದಲಾಯಿತು. ಯೋಗೇಶ್ವರ್ ಸತತ ಮುನ್ನಡೆ ಸಾಧಿಸುತ್ತಾ ಹೋದ್ರು, ಇದರಿಂದ ಗೆಲುವು ʻಕೈʼ ಪಾಲಾಯಿತು.
ಮೂರು ಕ್ಷೇತ್ರಗಳ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಲ್ಲಿ ಮುಳುಗಿದ್ರೆ, ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಮೌನಕ್ಕೆ ಶರಣಾದ್ರು. ಸೋಲು ಗೆಲುವಿನ ಬಗ್ಗೆ ಎಂದಿನಂತೆ ರಾಜಕಾರಣಿಗಳು ಮಾತಾಡಿದರು. ಗೌಡರ ಒಕ್ಕಲಿಗ ನಾಯಕತ್ವವನ್ನು ಜನ ಕಿತ್ಕೊಂಡಿದ್ದಾರೆ ಎಂದು ಯೋಗೇಶ್ವರ್ ವ್ಯಾಖ್ಯಾನಿಸಿದರು. ಇದನ್ನೂ ಓದಿ: ಬೊಂಬೆನಗರಿಯಲ್ಲಿ ಯೋಗೇಶ್ವರ್ ಮ್ಯಾಜಿಕ್ ಹೇಗಾಯ್ತು? ಹಿಂದೆ ಯಾವ ಪಕ್ಷದಿಂದ ಯಾವಾಗ ಗೆದ್ದಿದ್ದರು?
ಚನ್ನಪಟ್ಟಣ ಫಲಿತಾಂಶ – ಯಾರಿಗೆ ಎಷ್ಟು ಮತ?
* ಯೋಗೇಶ್ವರ್ – ಕಾಂಗ್ರೆಸ್ – ಗೆಲುವು – 1,12,642 ಮತ
* ನಿಖಿಲ್ – ಎನ್‌ಡಿಎ – ಸೋಲು – 87,229 ಮತ
* ಕಾಂಗ್ರೆಸ್ ಗೆಲುವಿನ ಅಂತರ – 25,413 ಮತ
ಚನ್ನಪಟ್ಟಣ ಫಲಿತಾಂಶ ಟ್ರೆಂಡ್ಸ್ ಹೇಗಿತ್ತು?
* 1ನೇ ಸುತ್ತು – ಯೋಗೇಶ್ವರ್‌ಗೆ 49 ಮತಗಳ ಮುನ್ನಡೆ (ಗ್ರಾಮೀಣ)
* 2ನೇ ಸುತ್ತು – ನಿಖಿಲ್‌ಗೆ 135 ಮತಗಳ ಮುನ್ನಡೆ (ಗ್ರಾಮೀಣ)
* 5ನೇ ಸುತ್ತು – ನಿಖಿಲ್‌ಗೆ 1,306 ಮತಗಳ ಮುನ್ನಡೆ (ಗ್ರಾಮೀಣ)
* 6ನೇ ಸುತ್ತು – ಯೋಗೇಶ್ವರ್‌ಗೆ 783 ಮತಗಳ ಮುನ್ನಡೆ (ಟೌನ್)
* 10ನೇ ಸುತ್ತು – ಯೋಗೇಶ್ವರ್‌ಗೆ 19,799 ಮತಗಳ ಮುನ್ನಡೆ (ಟೌನ್)
* 20ನೇ ಸುತ್ತು – 25,515 ಮತಗಳ ಅಂತರದಿಂದ ಯೋಗೇಶ್ವರ್ ಗೆಲುವು
ಚನ್ನಪಟ್ಟಣ ಫಲಿತಾಂಶ ವಿಶ್ಲೇಷಣೆ
* ಯೋಗೇಶ್ವರ್ ಕೈ ಹಿಡಿದ ಮುಸ್ಲಿಂ ಮತ
* ಯೋಗೇಶ್ವರ್ ಕೈ ಹಿಡಿದ `ಪಟ್ಟಣ’ದ ಮತ
* ಒಕ್ಕಲಿಗ ಮತ ವಿಭಜನೆ- ನಿಖಿಲ್ ಸೋಲು
* ಯೋಗೇಶ್ವರ್ ಕೈ ಹಿಡಿದ `ಗೃಹಲಕ್ಷ್ಮಿ’ಯರ `ಶಕ್ತಿ’
* ಸಿಪಿವೈ ವೈಯಕ್ತಿಕ ವರ್ಚಸ್ಸು – 2 ಸೋಲಿನ ಅನುಕಂಪ
* ಬಿಜೆಪಿಯ `ವಕ್ಫ್’ ವಿರೋಧಿ ನೀತಿ-ನಿಖಿಲ್‌ಗೆ ಹೊಡೆತ
* ಕಾಂಗ್ರೆಸ್‌ಗೆ ಪ್ಲಸ್ ಆದ ಜಮೀರ್ ವಿವಾದಿತ ಮಾತು
* ಕೈಗೂಡದ ದೇವೇಗೌಡರು- ಹೆಚ್‌ಡಿಕೆ ರಣತಂತ್ರ
ಶಿಗ್ಗಾಂವಿಯಲ್ಲಿ 3 ದಶಕದ ಬಳಿಕ ʻಕೈʼ ಮೇಲು:
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಎಲ್ಲರ ನಿರೀಕ್ಷೆ ಮೀರಿ ಮತಪ್ರಭುಗಳು ಅಚ್ಚರಿಯ ತೀರ್ಪು ನೀಡಿದ್ದಾರೆ. ಬಿಜೆಪಿಯ ಭದ್ರಕೋಟೆ ಛಿದ್ರವಾಗಿದೆ. 1994ರ ಬಳಿಕ ಇದೇ ಮೊದಲ ಬಾರಿಗೆ ಶಿಗ್ಗಾಂವಿ ಕಾಂಗ್ರೆಸ್ ಕೈ ಹಿಡಿದಿದೆ. ತಾವೇ ಕಟ್ಟಿರುವ ಕೋಟೆಯಲ್ಲಿ ಮಗನನ್ನು ಪ್ರತಿಷ್ಠಾಪಿಸಲು ಬೊಮ್ಮಾಯಿ ವಿಫಲರಾಗಿದ್ದಾರೆ. ಜನಾದೇಶ ಭರತ್ ಬೊಮ್ಮಾಯಿ ವಿರುದ್ಧ ಬಂದಿದೆ. ಮೊದಲ 7 ಸುತ್ತಿನವರೆಗೆ ಭರತ್ ಬೊಮ್ಮಾಯಿ ಲೀಡ್‌ನಲ್ಲಿದ್ದರು. ಆದ್ರೆ 8ನೇ ಸುತ್ತಿನ ನಂತ್ರ ಚಿತ್ರಣ ಬದಲಾಯ್ತು. ಅಂತಿಮವಾಗಿ ಕಾಂಗ್ರೆಸ್ ಜನಾದೇಶ ಕಾಂಗ್ರೆಸ್ ಪರ ಬಂತು. ಪರಿಣಾಮ ಯಾಸೀರ್ ಪಠಾಣ್ ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡ್ತಿದ್ದಾರೆ. ಕಾಂಗ್ರೆಸ್ ಹಣ ಹರಿಸಿದ್ದು, ಮುಸ್ಲಿಮರು, ಕುರುಬರು ಕಾಂಗ್ರೆಸ್ ಪರ ನಿಂತಿದ್ದು ನಮ್ಮ ಸೋಲಿಗೆ ಕಾರಣ ಎಂದು ಬಿಜೆಪಿ ಆರೋಪಿಸಿದೆ. ನಾನು ಡಿಸಿಎಂ ಅಲ್ದೇ ಇದ್ರೂ ಗೆಲ್ಸಿದ್ದೀನಿ ನೋಡಿ ಎನ್ನುತ್ತಾ ಡಿಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಟವೆಲ್ ಹಾಕಿದ್ದಾರೆ. ಬೆಳಗಾವಿಯಲ್ಲಿ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಘೋಷಣೆ ಮೊಳಗಿವೆ.
ಶಿಗ್ಗಾಂವಿ ಫಲಿತಾಂಶ ಹೇಗಿದೆ?
* ಯಾಸೀರ್ ಪಠಾಣ್ – ಕಾಂಗ್ರೆಸ್ – ಗೆಲುವು – 1,00,756 ಮತ
* ಭರತ್ ಬೊಮ್ಮಾಯಿ – ಬಿಜೆಪಿ – ಸೋಲು – 87,308 ಮತ
* ಕಾಂಗ್ರೆಸ್ ಗೆಲುವಿನ ಅಂತರ – 13,448 ಮತ
ಶಿಗ್ಗಾಂವಿ ಫಲಿತಾಂಶ ವಿಶ್ಲೇಷಣೆ
* ಕಾಂಗ್ರೆಸ್ ಕೈಹಿಡಿದ ಅಹಿಂದ ಮತ
* ಕುರುಬ, ಮುಸ್ಲಿಂ ಮತ ಚದುರದಂತೆ ಸಿಎಂ ಕಾರ್ಯತಂತ್ರ
* ಯಾಸೀರ್‌ಗೆ ವರವಾದ ಗ್ಯಾರಂಟಿ ಮತ
* ತಳಮಟ್ಟದಲ್ಲಿ ಸತೀಶ್ ಜಾರಕಿಹೊಳಿ ಸಂಘಟನೆ
* ಫಲ ಕೊಡದ ಬೊಮ್ಮಾಯಿ ಕಾರ್ಯತಂತ್ರ
* ಕುಟುಂಬ ರಾಜಕೀಯ ಒಪ್ಪದ ಮತದಾರ
ಸಂಡೂರು ಕ್ಷೇತ್ರಕ್ಕೆ ಮೊದಲ ಮಹಿಳಾ ಶಾಸಕಿ:
ಇನ್ನೂ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. 19 ಸುತ್ತುಗಳ ಮತ ಎಣಿಕೆಯಲ್ಲಿ ಆರಂಭದಿಂದ ಅನ್ನಪೂರ್ಣ, ಬಂಗಾರು ಹನುಮಂತು ನಡ್ವೆ ತುರುಸಿನ ಪೈಪೋಟಿ ಕಂಡುಬಂದಿತ್ತು. ಆದ್ರೆ 6 ಮತ್ತು 7ನೇ ಸುತ್ತು ಹೊರತು ಪಡಿಸಿದ್ರೆ, ಉಳಿದಂತೆ ಅನ್ನಪೂರ್ಣ ಎಲ್ಲೂ ಹಿನ್ನಡೆ ಕಾಣಲಿಲ್ಲ. ನಿಧಾನಕ್ಕೆ ಮತಗಳ ಅಂತರವನ್ನು ಹೆಚ್ಚಿಸಿಕೊಳ್ಳುತ್ತಾ, ಸುಲಭ ಜಯ ಗಳಿಸಿದ್ರು. ಈ ಮೂಲಕ ಸಂಡೂರಿನಿಂದ ವಿಧಾನಸಭೆ ಪ್ರವೇಶ ಮಾಡ್ತಿರುವ ಮೊದಲ ಮಹಿಳಾ ಶಾಸಕಿ ಅನ್ನೋ ಹೆಗ್ಗಳಿಕೆಗೂ ಪಾತ್ರರಾದ್ರು.
ಸಂಡೂರು ಫಲಿತಾಂಶ ಹೇಗಿದೆ?
* ಅನ್ನಪೂರ್ಣ – ಕಾಂಗ್ರೆಸ್ – ಗೆಲುವು – 93,616 ಮತ
* ಬಂಗಾರು ಹನುಮಂತು – ಬಿಜೆಪಿ – ಸೋಲು – 83,967 ಮತ
(ಕಳೆದ ಬಾರಿ ಬಿಜೆಪಿ ಪಡೆದ ಮತ 49,700 )
* ಕಾಂಗ್ರೆಸ್ ಗೆಲುವಿನ ಅಂತರ – 9649 ಮತ
ಸಂಡೂರು ರಿಸಲ್ಟ್ ಟ್ರೆಂಡ್ಸ್ ಹೇಗಿದೆ?
* 1ನೇ ಸುತ್ತು – ಅನ್ನಪೂರ್ಣಗೆ 2,586 ಮತಗಳ ಮುನ್ನಡೆ
* 6ನೇ ಸುತ್ತು – ಬಂಗಾರುಗೆ 262 ಮತಗಳ ಮುನ್ನಡೆ
* 8ನೇ ಸುತ್ತು – ಅನ್ನಪೂರ್ಣಗೆ 33 ಮತಗಳ ಮುನ್ನಡೆ
* 19ನೇ ಸುತ್ತು – ಅನ್ನಪೂರ್ಣಗೆ 9,649 ಮತಗಳ ಗೆಲುವು
ಸಂಡೂರು ಫಲಿತಾಂಶ ವಿಶ್ಲೇಷಣೆ
* ಕಾಂಗ್ರೆಸ್‌ನ ಭದ್ರಕೋಟೆ
* ಸಂಸದ ತುಕಾರಾಂ ಸಾಫ್ಟ್ ಇಮೇಜ್
* ಸಂತೋಷ್ ಲಾಡ್ ಸಂಘಟನೆ
* ಕಾಂಗ್ರೆಸ್ ಕೈಹಿಡಿದ `ಗ್ಯಾರಂಟಿ’
* ಜನಾರ್ದನರೆಡ್ಡಿ ರಣತಂತ್ರ ಫೇಲ್
* ಬಿಜೆಪಿಯಲ್ಲಿ ಹೊಂದಾಣಿಕೆ ಕೊರತೆ
* ಬಂಗಾರು ಹೊರಗಿನವರು ಎಂಬ ಆರೋಪ
– ಸ್ವಾಭಿಮಾನ ಇದ್ದರೆ ವಿಜಯೇಂದ್ರ ರಾಜೀನಾಮೆ ನೀಡಬೇಕು – ನಿಖಿಲ್ ಕುಮಾರಸ್ವಾಮಿ ಸೋಲು ದುರ್ದೈವ
ಚಿಕ್ಕೋಡಿ: ಯಡಿಯೂರಪ್ಪ ಮತ್ತು ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ. ಇನ್ನಾದರೂ ಹೈಕಮಾಂಡ್ ಈ ಬಗ್ಗೆ ಗಂಭೀರ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಪಚುನಾವಣೆ ಸೋಲಿಗೆ ಬೇಸರ ವ್ಯಕ್ತಪಡಿಸಿದರು.
ಕಬ್ಬೂರು ಗ್ರಾಮದಲ್ಲಿ ‘ಪಬ್ಲಿಕ್ ಟಿವಿ’ಗೆ ಹೇಳಿಕೆ ನೀಡಿದ ಯತ್ನಾಳ್, ಯಡಿಯೂರಪ್ಪ ಮತ್ತು ಪುತ್ರ ವ್ಯಾಮೋಹದಿಂದ ಬಿಜೆಪಿ ಸೋತಿದೆ. ಇನ್ನಾದರೂ ಹೈಕಮಾಂಡ್ ಗಂಭೀರ ಚರ್ಚೆ ಮಾಡಬೇಕು. ಹೈಕಮಾಂಡ್‌ಗೆ ಸರಿಯಾದ ಮಾಹಿತಿ ನೀಡುವ ಉಸ್ತುವಾರಿಗಳನ್ನ ಕಳಿಸಬೇಕು ಎಂದು ಸಲಹೆ ನೀಡಿದರು.
ವಿಜಯೇಂದ್ರ ನಾಯಕತ್ವವನ್ನ ಜನ ತಿರಸ್ಕಾರ ಮಾಡಿದ್ದಾರೆ. ವಿಜಯೇಂದ್ರ ಅವರಿಗೆ ಸ್ವಾಭಿಮಾನ ಇದ್ದರೆ ಅವರೇ ರಾಜೀನಾಮೆ ನೀಡಬೇಕು. ವಿಜಯೇಂದ್ರ ನಾಚಿಕೆಗೇಡಾಗಿದ್ದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿ ಎಂದು ಹರಿಹಾಯ್ದರು.
ಭರತ ಬೊಮ್ಮಾಯಿ ಸೋಲು ನಿಜಕ್ಕೂ ಆಘಾತ ತಂದಿದೆ. ರೌಡಿಯನ್ನ ಜನ ಆಯ್ಕೆ ಮಾಡಿದ್ದಾರೆ. ಜನರ ತೀರ್ಪು ಬಿಜೆಪಿ ನಾಯಕತ್ವ ಬದಲಾವಣೆ ಆಗಬೇಕು ಎನ್ನುವುದಿದೆ. ಹೊಸ ನಾಯಕತ್ವ ರಾಜ್ಯಕ್ಕೆ ಮತ್ತು ಬಿಜೆಪಿಗೆ ಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಸಾರ್ವತ್ರಿಕ ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ ಎಂದು ಗುಡುಗಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಸೋಲು ದುರ್ದೈವ. ಯೋಗೇಶ್ವರ ಅವರಿಗೆ ಟಿಕೆಟ್ ಕೊಡುವಂತೆ ನಾನು ಹೇಳಿದ್ದೆ. ಪಾಪ ಕೊನೆಯ ವರೆಗೂ ಯೋಗೇಶ್ವರ್ ಬಿಜೆಪಿ ಪರ ಒಲವು ತೋರಿದ್ದರು. ಜನ ಯೋಗೇಶ್ವರ್ ಕೆಲಸ ಮಾಡಿದ್ದನ್ನ ನೋಡಿ ಗೆಲ್ಲಿಸಿದ್ದಾರೆ. ಕುಮಾರಸ್ವಾಮಿ ಅವರು ಮುಂದೆ ಯೋಚನೆ ಮಾಡಿ ಪಕ್ಷ ಸಂಘಟನೆ ಮಾಡಬೇಕು. ಇನ್ನಾದರೂ ಬಿಜೆಪಿ, ಜೆ.ಪಿ.ನಡ್ಡಾ ಅವರು ಕಣ್ಣು ತೆರೆಯಬೇಕು ಎಂದು ಹೇಳಿದರು.
ವಕ್ಫ್ ಹೋರಾಟ ಈಗ ಆರಂಭವಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲಿ ಜಾಗೃತಿ ಮೂಡಿಸುತ್ತೇವೆ. ಕಾಂಗ್ರೆಸ್ ಗೆದ್ದರೆ ಮುಂದೆ ರೈತರ ಜಮೀನು ಕೂಡ ಹೋಗುತ್ತವೆ. ಹೈಕಮಾಂಡ್ ಬಳಿ ವಿಜಯೇಂದ್ರ ವಿರುದ್ಧ ನಿಯೋಗ ತೆರಳುತ್ತಿವೆ. ಕೇವಲ ವಿಜಯೇಂದ್ರ, ಯಡಿಯೂರಪ್ಪ ಅವರಿಗೆ ಅಪಾಯಿಟ್‌ಮೆಂಟ್ ಕೊಟ್ಟರೆ ಹೀಗೆ ಆಗೋದು. ಬಿಜೆಪಿ ಹೈಕಮಾಂಡ್ ಬಳಿ ಅಪ್ಪ-ಮಕ್ಕಳ ಬಗ್ಗೆ ಹೇಳುತ್ತೇವೆ ಎಂದು ಹರಿಹಾಯ್ದರು.
– ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿ 200ಕ್ಕೂ ಹೆಚ್ಚು ಸ್ಥಾನ ಗೆದ್ದಿದ್ದೇವೆ
ಬೆಂಗಳೂರು: ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಸೋಲನುಭವಿಸಿರುವುದಕ್ಕೆ ನಮಗೆ ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದರು.
ಮಹಾರಾಷ್ಟ್ರದಲ್ಲಿ ಎನ್‍ಡಿಎ ನಮ್ಮ ನಿರೀಕ್ಷೆಗೂ ಮೀರಿ 200 ಸೀಟುಗಳ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಎನ್‍ಡಿಎ ಹೊಸ ಇತಿಹಾಸವನ್ನು ಸೃಷ್ಟಿಸಿವೆ. ಮಹಾರಾಷ್ಟ್ರದ ಮಹಾಜನತೆ ಮತ್ತೊಮ್ಮೆ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ವಿಶ್ವಾಸ ಇಟ್ಟು ಒಂದು ಐತಿಹಾಸಿಕ ಗೆಲುವು ನೀಡಿದ್ದು ತುಂಬ ಸಂತಸ ತಂದಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು- ಈ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆದಿದೆ. 3 ಕ್ಷೇತ್ರಗಳಲ್ಲೂ ನಮಗೆ ಹಿನ್ನಡೆ ಆಗಿದೆ. ಚನ್ನಪಟ್ಟಣದಲ್ಲಿ ನಮ್ಮ ಮಿತ್ರ ಪಕ್ಷ ಜೆಡಿಎಸ್ ಪಕ್ಷ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದೆವು. ಆದರೆ, ನಮಗೆ ನಿರಾಸೆ ಆಗಿರುವುದು ಸತ್ಯ ಎಂದು ನುಡಿದರು. ಹಿನ್ನಡೆಯ ಕಾರಣ ಏನು? ಯಾತಕ್ಕೋಸ್ಕರ ನಮಗೆ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ ಎಂಬ ಬಗ್ಗೆ ಎರಡೂ ಪಕ್ಷಗಳ ಮುಖಂಡರು ಕುಳಿತು ಚರ್ಚೆ ಮಾಡಲಿದ್ದೇವೆ. ತಪ್ಪನ್ನು ಸರಿಪಡಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ತಿಳಿಸಿದರು.
ನಮಗೆ ಈಗ ಕೇವಲ ಫಲಿತಾಂಶ ಸಿಕ್ಕಿದೆ. ಮೊದಲ ಬಾರಿ ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಸುಮಾರು 80 ಸಾವಿರ ಮತಗಳನ್ನು ಪಡೆದಿದೆ. ನಾವು ಇಲ್ಲಿ ಎಂಟ್ಹತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನಮಗಿತ್ತು. ಆ ರೀತಿಯ ಎಲ್ಲ ಶ್ರಮವನ್ನು ಹಾಕಿದ್ದೆವು ಎಂದು ಪ್ರಶ್ನೆಗೆ ಉತ್ತರಿಸಿದರು. ಅದರ ನಡುವೆ ನಮಗೆ ಗೆಲ್ಲಲು ಸಾಧ್ಯವಾಗಿಲ್ಲ; ಸಂಡೂರಿನ ಫಲಿತಾಂಶವನ್ನು ಹಿನ್ನಡೆ ಎಂದು ನಾವು ಭಾವಿಸುವುದಿಲ್ಲ. ಉತ್ತಮ ಮತಗಳನ್ನು ನಾವು ಪಡೆದಿದ್ದೇವೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಕುಳಿತು ಹಿನ್ನಡೆಗೆ ಕಾರಣಗಳೇನು ಎಂದು ಚರ್ಚಿಸುತ್ತೇವೆ ಎಂದು ನುಡಿದರು.
ಶಿಗ್ಗಾಂವಿ ಫಲಿತಾಂಶ ಆಘಾತ ತಂದಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸುಪುತ್ರ ಅಲ್ಲಿ ಬಿಜೆಪಿ ಸ್ಪರ್ಧಿಯಾಗಿದ್ದರು. ಬಿಜೆಪಿಯ ಎಲ್ಲ ಕಾರ್ಯಕರ್ತರು ಅಲ್ಲಿ ಹಗಲು- ರಾತ್ರಿ ಶ್ರಮವನ್ನು ಹಾಕಿದ್ದರು. ಬೊಮ್ಮಾಯಿಯವರು ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜನರು ಇವತ್ತು ಆಡಳಿತಪಕ್ಷದ ಕಡೆ ವಾಲಿದ್ದಾರೆ. ಇದೆಲ್ಲವನ್ನೂ ನಾವು ಹಿರಿಯರು ಕುಳಿತು ಸೋಲಿನ ವಿಮರ್ಶೆ ಮಾಡುತ್ತೇವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.