Tag: Shiggaon

  • ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಜಯ ನಿಶ್ಚಿತ: ಎಂಡಿ ಲಕ್ಷ್ಮೀನಾರಾಯಣ

    ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳ ಜಯ ನಿಶ್ಚಿತ: ಎಂಡಿ ಲಕ್ಷ್ಮೀನಾರಾಯಣ

    ತುಮಕೂರು: ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ (By Election) ಎನ್‌ಡಿಎ (NDA) ಮೈತ್ರಿಕೂಟದ ಅಭ್ಯರ್ಥಿಗಳು ಜಯಗಳಿಸುವುದು ನಿಶ್ಚಿತ ಎಂದು ವಿಧಾನಪರಿಷತ್ ಮಾಜಿ ಸದಸ್ಯ, ನೇಕಾರ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಂಡಿ ಲಕ್ಷ್ಮೀನಾರಾಯಣ (MD Lakshminarayana) ತಿಳಿಸಿದರು.

    ತುರುವೇಕೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್ 13 ರಂದು ನಡೆಯುವ ಉಪಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತು ಹಾಗೂ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದರು. ಇದನ್ನೂ ಓದಿ: 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

    ಸರ್ಕಾರದ ಜನವಿರೋಧಿ, ಅಭಿವೃದ್ಧಿ ವಿರೋಧಿ ನೀತಿಗೆ ಜನತೆ ಈ ಮೂರು ಉಪಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದು, ಕಾಂಗ್ರೆಸ್ ಸರ್ಕಾರ ಮುಖಭಂಗ ಅನುಭವಿಸಲಿದೆ ಎಂದು ಹೇಳಿದರು. ಇದನ್ನೂ ಓದಿ: ಸ್ಥಳ ಮಹಜರ್‌ ವೇಳೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೊಲೆ ಆರೋಪಿ ಬಂಧನ

  • ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರು: ಬೊಮ್ಮಾಯಿ ಟೀಕೆ

    ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರು: ಬೊಮ್ಮಾಯಿ ಟೀಕೆ

    -ಸಿಎಂ ಗೌರವ ಕಡಿಮೆ ಆಗಿದೆ

    ಹುಬ್ಬಳ್ಳಿ: ಮುಡಾ ಕೇಸನ್ನು (MUDA Case) ಏಕಸದಸ್ಯ ಪೀಠ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರಾಗಿದ್ದು, ಸಿಎಂ ಗೌರವ ಕಡಿಮೆ ಆಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಟೀಕಿಸಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮುಡಾ ಪ್ರಕರಣದಲ್ಲಿ ಸಿಎಂಗೆ ವಿಚಾರಣೆ ಬಗ್ಗೆ ಮಾತನಾಡಿ, ಆ ಕೇಸನ್ನು ಏಕಸದಸ್ಯ ಪೀಠ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಕರ್ನಾಟಕದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸಿಎಂ ಆದವರು ಆರೋಪಿಯಾಗಿ ಹಾಜರಾಗಿದ್ದು, ಸಿಎಂ ಗೌರವ ಕಡಿಮೆ ಮಾಡಿದೆ. ಇತರ ಹಲವಾರು ಪ್ರಕರಣಗಳು ಇವೆ. ಸರ್ಕಾರಿ ನೌಕರರು ರಾಜಕೀಯ ಒತ್ತಡದಿಂದ ಕುಗ್ಗಿದ್ದಾರೆ. ಅವರಿಗೆ ಕಾನೂನುಬಾಹಿರ ಕೆಲಸ ಮಾಡಲು ಒತ್ತಡ ಇದೆ. ನಮ್ಮ ಶಿಗ್ಗಾಂವಿ ಕ್ಷೇತ್ರದಲ್ಲಿ ಸಹ ಹೀಗೆ ಆಗುತ್ತಿದೆ. ಶಾಲೆಯ ಶಿಕ್ಷಕರಿಗೆ ಮಂಥ್ಲಿ ಫಿಕ್ಸ್ ಮಾಡಲು ಹೊರಟಿದ್ದಾರೆ. ಇದಕ್ಕಿಂತ ಅಧಿಪತನ ಏನು ಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: US Election: ಗೆಲುವಿನ ಸನಿಹದಲ್ಲಿ ಟ್ರಂಪ್‌ – ಸ್ವಿಂಗ್‌ ರಾಜ್ಯಗಳಲ್ಲಿ ಕಮಲಾ ಹ್ಯಾರಿಸ್‌ಗೆ ಹಿನ್ನಡೆ

    ಗುತ್ತಿಗೆದಾರರು ನಮ್ಮ ಮೇಲೆ ಆರೋಪ ಮಾಡಿದ್ದರು. ಇವತ್ತಿನವರಗೆ ಏನೂ ಸಾಬೀತು ಮಾಡಲು ಆಗಲಿಲ್ಲ. ಅದನ್ನ ರಾಜಕೀಯವಾಗಿಯೂ ಬಳಕೆ ಮಾಡಿಕೊಂಡರು. ಈಗ ಲಿಕ್ಕರ್ ಅಸೋಸಿಯೇಷನ್ ಆರೋಪ ಮಾಡಿದೆ, ಸಿಎಂ ಉತ್ತರ ಕೊಡಬೇಕಲ್ಲಾ? ಸಿಎಂ ಅವರ ಕೈಯಲ್ಲಿ ನೇರವಾಗಿ ಫೈನಾನ್ಸ್ ಇದೆ. ಒಂದೊಂದು ಲಿಕ್ಕರ್ ಲೈಸೆನ್ಸ್ಗೆ ಎಷ್ಟು ದುಡ್ಡು ಹೋಗಿದೆ ಎಂದು ತನಿಖೆ ಆಗಬೇಕು. ಈಗ ಏನು ಹೇಳುತ್ತಾರೆ ಅವರು? ಪೇ ಸಿಎಂ ಅಂತಿದ್ರು, ಈಗ ಪೇ ಡಬಲ್ ಸಿಎಂ ಹಾಗೂ ಸಚಿವರಿಗೆ ಅನ್ನುತ್ತೇವೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರ ಮುಳುಗಿದೆ. ಯಾವ ಇಲಾಖೆಯಲ್ಲಿ ಕೇಳಿದರೂ ಭ್ರಷ್ಟಾಚಾರ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿಎಂಗೆ ಕೆಲ ನಿರ್ದಿಷ್ಟ ಪ್ರಶ್ನೆ ಕೇಳಲೇಬೇಕು, ಇಲ್ಲದಿದ್ದರೆ ತನಿಖಾಧಿಕಾರಿ ವಿರುದ್ಧವೇ ಕಾನೂನು ಹೋರಾಟ: ಸ್ನೇಹಮಯಿ ಕೃಷ್ಣ

    ಶಿಗ್ಗಾಂವಿ (Shiggaon) ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿ, ಜನ ಅನುಭವಿಸಿದ್ದಾರೆ, ಕಾಂಗ್ರೆಸ್ ಹಾಗೂ ಶಿಗ್ಗಾಂವಿ ಜನರ ಬಗ್ಗೆ ಬಹಳ ಅಂತರ ಇದೆ. ಕಾಂಗ್ರೆಸ್ ಸರ್ಕಾರ ಇದೆ, ಯಾವುದೇ ಕ್ಷೇತ್ರದಲ್ಲಿ ಏನಾಗಿದೆ ಎಂದು ನೋಡಲಿ. ಅವರು ಸವಣೂರಲ್ಲಿ 250 ಬೆಡ್ ಆಸ್ಪತ್ರೆ, ಶಿಗ್ಗಾಂವಿಯಲ್ಲಿ ಟ್ರೈನಿಂಗ್ ಸೆಂಟರ್, ಟೆಕ್ಸ್ಟೈಲ್ ಪಾರ್ಕ್, ಸವಣೂರಲ್ಲಿ ಆಯುರ್ವೇದ ಕಾಲೇಜ್ ಆಗಿದೆ ಅದನ್ನು ನೋಡಲಿ. 12 ಸಾವಿರ ಮನೆ ಕಟ್ಟಿದ್ದೇನೆ. ಇಲ್ಲಿ ಬೆಂಗಳೂರಿಗಿಂತ ಚೆನ್ನಾಗಿ ರಸ್ತೆ ಇದೆ. ಸಿಎಂ ಕಾರಿನಲ್ಲಿ ಹೋಗುವಾಗ ನಿದ್ದೆ ಮಾಡುತ್ತಾರೇನೋ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾರು, ಪಿಕಪ್ ವಾಹನ ಮುಖಾಮುಖಿ ಡಿಕ್ಕಿ- ಇಬ್ಬರು ಸಾವು

    ಕಾಂಗ್ರೆಸ್ (Congress) ನಾಯಕರು ಹತಾಶರಾಗಿದ್ದಾರೆ, ಎಲ್ಲ ಸಚಿವ ಶಾಸಕರು ಹಾಗೂ ಈ ಸರ್ಕಾರ ನನ್ನ ಮೇಲೆ ದಂಡೆತ್ತಿ ಬಂದಿದೆ. ನಾನು ಪ್ರಶ್ನೆ ಮಾಡುತ್ತೇನೆ, ನನ್ನ ಕ್ಷೇತ್ರದ ಅಭಿವೃದ್ಧಿ ಏನಾಗಿದೆ ಎಂದು ನಾನು ಹೇಳುತ್ತೇನೆ. ಸಿಎಂ ಕ್ಷೇತ್ರದ ವರುಣಾದಲ್ಲಿ ಏನು ಅಭಿವೃದ್ಧಿ ಆಗಿದೆ ಎಂದು ಹೇಳಲಿ. ಸಚಿವರು ತಮ್ಮ ಕ್ಷೇತ್ರದ ಬಗ್ಗೆ ಹೇಳಲಿ. ಅಲ್ಪಸಂಖ್ಯಾತರ ಬಗ್ಗೆ ಇಷ್ಟೆಲ್ಲಾ ಮಾತಾಡುತ್ತಾರಲ್ಲಾ ಮಸೀದಿ ದರ್ಗಾಗಳಿಗೆ 10 ಸಾವಿರ ರೂಪಾಯಿ ಕೊಟ್ಟಿದ್ದೇನೆ. ಇವರ ಸರ್ಕಾರ ಬಂದ ಮೇಲೆ ವಾಪಸ್ ತೆಗೆದುಕೊಂಡರಲ್ವಾ? ಹಾಲುಮತದ ಸಮಾಜದ ಬಗ್ಗೆ ಸಿಎಂಗೆ ಮಾತಾನಾಡಲು ಹಕ್ಕೇ ಇಲ್ಲಾ ಎಂದರು. ಇದನ್ನೂ ಓದಿ: ಗುರು ರಾಯರ ದರ್ಶನ ಪಡೆದ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಾಕ್

    ಕನಕದಾಸರ ಹುಟ್ಟುರು, ಕಾಗಿನೆಲೆ ಎರಡನ್ನೂ ಅಭಿವೃದ್ಧಿ ಮಾಡಿದ್ದು ಯಡಿಯೂರಪ್ಪ. ಕನಕಪೀಠದ ನಮ್ಮ ಗುರುಗಳಿಗೆ ಸಿಎಂ ಆಗಿ ದಾಷ್ಟದ ಮಾತನ್ನು ಆಡೋದು ಅವಮಾನವಾಗಿದೆ. ನಮ್ಮ ಗುರುಗಳು ಅವರು, ಇಲ್ಲಿ ಗುರು ಮತ್ತು ಭಕ್ತರ ಸಂಬಂಧ ಇದೆ. ಸೋಲಿನ ಭಯದಲ್ಲಿ ಇವರು ಗುರುಗಳನ್ನು ಎಳೆದು ತಂದಿದ್ದಾರೆ. ಸಿಎಂ ಅತ್ಯಂತ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: Gujarat| ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ- ಮೂವರು ಕಾರ್ಮಿಕರು ಸಾವು

  • ದೀಪಾವಳಿ ಬಳಿಕ ಜೋರಾಗಲಿದೆ ಶಿಗ್ಗಾಂವಿ ಉಪಸಂಗ್ರಾಮ – ನ.5ಕ್ಕೆ ಭರತ್ ಬೊಮ್ಮಾಯಿ ಪರ ವಿಜಯೇಂದ್ರ ಪ್ರಚಾರ

    ದೀಪಾವಳಿ ಬಳಿಕ ಜೋರಾಗಲಿದೆ ಶಿಗ್ಗಾಂವಿ ಉಪಸಂಗ್ರಾಮ – ನ.5ಕ್ಕೆ ಭರತ್ ಬೊಮ್ಮಾಯಿ ಪರ ವಿಜಯೇಂದ್ರ ಪ್ರಚಾರ

    – ನ.6ಕ್ಕೆ `ಕೈ’ ಅಭ್ಯರ್ಥಿ ಪರ ಸಿಎಂ, ಡಿಸಿಎಂ ಮತಯಾಚನೆ
    – ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಹೆಚ್‌ಡಿಕೆ ತಂತ್ರ

    ಹಾವೇರಿ: ದೀಪಾವಳಿ ಬಳಿಕ ಹಾವೇರಿ, ಚನ್ನಪಟ್ಟಣದಲ್ಲಿ ಉಪಚುನಾವಣೆ ಕಾವು ಹೆಚ್ಚಾಗಲಿದೆ. ಹಾವೇರಿಯ‌ (Haveri) ಶಿಗ್ಗಾಂವಿಯಲ್ಲಿ (Shiggaon) ಬಿಜೆಪಿ ಆಭ್ಯರ್ಥಿ ಪರ ವಿಜಯೇಂದ್ರ, ಯಡಿಯೂರಪ್ಪ ಪ್ರಚಾರಕ್ಕೆ ಪ್ಲ್ಯಾನ್ ನಡೆಸಿದ್ದಾರೆ. ಅತ್ತ ಕಾಂಗ್ರೆಸ್ ಅಭ್ಯರ್ಥಿ ಯಾಸಿನ್ ಪರ ಸಿಎಂ, ಡಿಸಿಎಂ ಪ್ರಚಾರ ನಡೆಸಲಿದ್ದಾರೆ.

    ದೀಪಾವಳಿ ಬಳಿಕ ಶಿಗ್ಗಾಂವಿ ಉಪಚುನಾವಣೆಯಲ್ಲಿ (By Election) ಪ್ರಚಾರ ಭರಾಟೆ ಜೋರಾಗಲಿದೆ. ದೊಡ್ಡ ದೊಡ್ಡ ರಾಜಕೀಯ ಘಟಾನುಘಟಿಗಳು ಪ್ರಚಾರದ ಅಖಾಡಕ್ಕೆ ಧುಮುಕಲಿದ್ದಾರೆ. ನವೆಂಬರ್ 5 ರಂದು ಭರತ್ ಬೊಮ್ಮಾಯಿ (Bharath Bommai) ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರಚಾರ ನಡೆಸಲಿದ್ದಾರೆ. ಇನ್ನು ನವೆಂಬರ್ 11 ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಈಗಾಗಲೇ ಬಿಎಸ್‌ವೈ ನೇತೃತ್ವದಲ್ಲಿ ಬೃಹತ್ ಸಮಾವೇಶ, ರೋಡ್ ಶೋಗೆ ಸಿದ್ಧತೆ ನಡೆಸಲಾಗಿದೆ. ಇತ್ತ ನವೆಂಬರ್ 6ರಂದು ಕೈ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ (Yasir Khan Patan) ಪರ ಸಿಎಂ ಸಿದ್ದರಾಮಯ್ಯ, ಡಿಕೆಶಿ ಎರಡನೇ ಸುತ್ತಿನ ಅದ್ಧೂರಿ ಪ್ರಚಾರ ನಡೆಸಲಿದ್ದಾರೆ. ಅಲ್ಲದೇ ಶಿಗ್ಗಾಂವಿಯಲ್ಲೇ ಕಾಂಗ್ರೆಸ್ ಸಚಿವರು, ಶಾಸಕರ ದಂಡು ಮೊಕ್ಕಾಂ ಹೂಡಲಿದ್ದಾರೆ. ಇದನ್ನೂ ಓದಿ: ದರ್ಶನ್ ಎಡಗಾಲಿಗೂ ಸಮಸ್ಯೆ – ಫಿಜಿಯೋಥೆರಪಿನಾ? ಆಪರೇಷನ್‌ನಾ?

    ಅತ್ತ ರಾಮನಗರದಲ್ಲೂ (Ramanagara) ಉಪಚುನಾವಣೆ ಪ್ರಚಾರ ಭರಾಟೆ ಜೋರಾಗಿದೆ. ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕುಮಾರಸ್ವಾಮಿ ತಂತ್ರ ರೂಪಿಸಿದ್ದಾರೆ. ಹೇಗಾದರೂ ದಲಿತ ಹಾಗೂ ಹಿಂದಳಿದ ವರ್ಗಗಳ ಮತ ಕ್ರೂಡೀಕರಣಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಮಾಜಿ ಶಾಸಕ ಅನ್ನದಾನಿ ನೇತೃತ್ವದಲ್ಲಿ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ವೇಳೆ ಎಸ್ಸಿ-ಎಸ್ಟಿ ಸಮುದಾಯ ನಿಖಿಲ್ ಕುಮಾರಸ್ವಾಮಿಗೆ (Nikhil Kumaraswamy) ಬೆಂಬಲ ನೀಡುವಂತೆ ಕರೆ ಕೊಡಲಾಗಿದ್ದು, ಯೋಗೇಶ್ವರ್ ಪದೇಪದೇ ಪಕ್ಷ ಬದಲಿಸುವ ವ್ಯಕ್ತಿ. ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವ ಯೋಗೇಶ್ವರ್ ನಂಬಬೇಡಿ. ಈ ಬಾರಿ ನಿಖಿಲ್ ಕುಮಾರಸ್ವಾಮಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾಳಿ ಪೂಜೆ ವೇಳೆ ಅಗ್ನಿ ಅವಘಡ – ಬೆಂಕಿ ಕೆನ್ನಾಲಿಗೆಗೆ ಮೂವರು ಮಕ್ಕಳು ಬಲಿ

    ಇನ್ನು ನಿಖಿಲ್ ವಿರುದ್ಧ ಕುಟುಂಬ ರಾಜಕಾರಣ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೂ ಮಾಜಿ ಶಾಸಕ ಅನ್ನದಾನಿ ಟಾಂಗ್ ಕೊಟ್ಟಿದ್ದಾರೆ. ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ ಕೂಡ ಕುಟುಂಬ ರಾಜಕಾರಣದಿಂದ ಬಂದವರು. ಉತ್ತರ ಪ್ರದೇಶದಲ್ಲಿ ಹುಟ್ಟಿದ್ದರೂ ಕೇರಳದ ವಯನಾಡಿನಲ್ಲಿ ಬಂದು ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಈ ಭಾಗದಲ್ಲಿ ಅಭಿವೃದ್ಧಿ ಮಾಡಿರೋ ನಾಯಕರ ಮಗ ಇಲ್ಲಿ ಸ್ಪರ್ಧೆ ಮಾಡೋದು ತಪ್ಪಾ ಎಂದು ಪ್ರಶ್ನೆ ಮಾಡಿ ಕಾಂಗ್ರೆಸ್ ವಿರುದ್ಧ ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಯಚೂರು| ಪಟಾಕಿ ಕಿಡಿ ತಗುಲಿ ಅಂಗಡಿಗೆ ಬೆಂಕಿ – ಅಂಗಡಿಯಲ್ಲಿದ್ದ ವಸ್ತುಗಳು ಭಸ್ಮ

    ಒಟ್ಟಾರೆ ಶಿಗ್ಗಾಂವಿಯಲ್ಲಿ ಘಟಾನುಘಟಿಗಳ ಅಭ್ಯರ್ಥಿಗಳ ಪರ ಪ್ರಚಾರ ಮಾಡೋದು ಒಂದೆಡೆ ಆದರೆ ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲಿಸಲು ಜೆಡಿಎಸ್ ಸಭೆ ಮೇಲೆ ಸಭೆ ನಡೆಸುತ್ತಿದೆ. ಗೆಲುವು ಯಾರಿಗೆ ಎಂಬುದು ಚುನಾವಣಾ ಫಲಿತಾಂಶದ ದಿನ ತಿಳಿಯಬೇಕಿದೆ. ಇದನ್ನೂ ಓದಿ: ದಶಕಗಳ ಬಳಿಕ ಅಪ್ಪಳಿಸಿದ ಭೀಕರ ಪ್ರವಾಹಕ್ಕೆ ಸ್ಪೇನ್‌ ತತ್ತರ – ಸಾವಿನ ಸಂಖ್ಯೆ 205ಕ್ಕೆ ಏರಿಕೆ

  • ಬುಧವಾರ ಜಮೀರ್ ಜೊತೆ ತೆರಳಿ ನಾಮಪತ್ರ ವಾಪಸ್ ಪಡೆಯುತ್ತೇನೆ: ಅಜ್ಜಂಪೀರ್ ಖಾದ್ರಿ

    ಬುಧವಾರ ಜಮೀರ್ ಜೊತೆ ತೆರಳಿ ನಾಮಪತ್ರ ವಾಪಸ್ ಪಡೆಯುತ್ತೇನೆ: ಅಜ್ಜಂಪೀರ್ ಖಾದ್ರಿ

    – ಶಿಗ್ಗಾಂವಿ ಕಾಂಗ್ರೆಸ್ ಬಂಡಾಯ ಶಮನ

    ಹುಬ್ಬಳ್ಳಿ: ನಾಳೆ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಜೊತೆಗೆ ತೆರಳಿ ನಾಮಪತ್ರ (Nomination Paper) ವಾಪಸು ಪಡೆಯುತ್ತೇನೆ ಎಂದು ಶಿಗ್ಗಾಂವಿ (Shiggaon) ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ (Ajjampir Khadri) ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕರು ನನ್ನ ಜೊತೆಗೆ ಮಾತನಾಡಿದ್ದಾರೆ. ಟಿಕೆಟ್ ಸಿಗದೇ ಇರುವ ಕಾರಣ ಅಸಮಾಧಾನ ಆಗಿದ್ದು ನಿಜ. ನಮ್ಮ ಅಭಿಮಾನಿಗಳು ನಾಮಪತ್ರ ಸಲ್ಲಿಕೆ ಮಾಡು ಅಂತ ಒತ್ತಾಯ ಮಾಡಿದ್ದರು. ಅದಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದೆ. ಆದರೆ ಸಿಎಂ, ಡಿಸಿಎಂ ನಮ್ಮ ಆಪ್ತರ ಜೊತೆಗೆ ಮಾತನಾಡಿದ್ದಾರೆ. ನಾನು ಸ್ಪರ್ಧೆ ಮಾಡಿದರೆ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ಸಲುವಾಗಿ ನಾನು ನಾಮಪತ್ರ ವಾಪಸು ಪಡೆಯುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಉಪಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ – ಯತ್ನಾಳ್, ಪ್ರತಾಪ್ ಸಿಂಹ, ಯದುವೀರ್, ಸುಮಲತಾಗೆ ಕೊಕ್

    ಇನ್ನೂ ಮುಂದೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವೆ. ಬಿಜೆಪಿ ಸೋಲಿಸಲು ಎಲ್ಲಾ ಪ್ರಯತ್ನ ಮಾಡುವೆ. ಈ ಬಾರಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: 500 ವರ್ಷಗಳಲ್ಲಿ ಮೊದಲ ಬಾರಿಗೆ ರಾಮ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿದ್ದಾನೆ – ಧನ್‌ತೇರಾಸ್‌ಗೆ ಮೋದಿ ಶುಭಾಶಯ

    ತೀವ್ರ ಪೈಪೋಟಿ ನಡುವೆ ಶಿಗ್ಗಾಂವಿ ಕಾಂಗ್ರೆಸ್ ಟಿಕೆಟ್ ಯಾಸಿರ್ ಅಹ್ಮದ್ ಖಾನ್ ಪಠಾಣ್ ಪಾಲಾಯಿತು. ಪಠಾಣ್ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತನಗೆ ಟಿಕೆಟ್ ಸಿಗಲಿಲ್ಲ ಎಂದು ಅಜ್ಜಂಪೀರ್ ಮುನಿಸಿಕೊಂಡಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ‘ಮೈತ್ರಿ’ ನಾಯಕರಿಗೆ ಡಿಕೆ ಬ್ರದರ್ಸ್ ಶಾಕ್ – ಚನ್ನಪಟ್ಟಣ ನಗರಸಭೆಯ 6 ಬಿಜೆಪಿ ಸದಸ್ಯರು ಕಾಂಗ್ರೆಸ್ ಸೇರ್ಪಡೆ

    ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳು ರೋಡ್‌ ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದು, ಭರ್ಜರಿ ಮತಯಾಚನೆ ಮಾಡುತ್ತಿದ್ದಾರೆ. ಬುಧವಾರ (ಅ.30) ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಇದನ್ನೂ ಓದಿ:  ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ

  • ಸ್ವಂತ ಕಾರಿಲ್ಲ, ಸಾಲ ಇಲ್ಲ – ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಆಸ್ತಿ ಎಷ್ಟಿದೆ?

    ಸ್ವಂತ ಕಾರಿಲ್ಲ, ಸಾಲ ಇಲ್ಲ – ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಯಾಸಿರ್‌ ಆಸ್ತಿ ಎಷ್ಟಿದೆ?

    ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌ ತಮ್ಮ ಆಸ್ತಿ ವಿವರ ಘೋಷಿಸಿಕೊಂಡಿದ್ದಾರೆ.

    ಚುನಾವಣಾಧಿಕಾರಿಗೆ ನಾಮಪತ್ರದೊಂದಿಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕುಟುಂಬದ ಆಸ್ತಿ ಘೋಷಣೆ ಮಾಡಿದ್ದಾರೆ. ಯಾಸಿರ್‌ ಅವರು ಒಟ್ಟು 3.04 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. 85 ಸಾವಿರ ನಗದು, 4.27 ಲಕ್ಷ ಮೌಲ್ಯದ 60 ಗ್ರಾಂ ಚಿನ್ನಾಭರಣ ಸೇರಿದಂತೆ 6.02 ಲಕ್ಷ ರೂ. ಮೌಲ್ಯದ ಚರಾಸ್ತಿಯಿದೆ.

    ಹಾನಗಲ್ಲ ತಾಲೂಕು ಬಾದಾಮಗಟ್ಟಿ, ಬೊಮ್ಮನಹಳ್ಳಿ, ನೆಲ್ಲಿಕೊಪ್ಪ, ಶಿಗ್ಗಾಂವಿ ತಾಲೂಕು ಹುಲಗೂರು ಗ್ರಾಮಗಳಲ್ಲಿ 14.35 ಲಕ್ಷ ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ 10,098 ಚದರಡಿ ವಿಸ್ತೀರ್ಣದ 28 ಲಕ್ಷ ಮೌಲ್ಯದ ಕೃಷಿಯೇತರ ಭೂಮಿ ಸೇರಿದಂತೆ 42.35 ಲಕ್ಷ ಮೌಲ್ಯದ ಸ್ಥಿರಾಸ್ತಿಯಿದೆ.

    ಕಾಂಗ್ರೆಸ್‌ ಅಭ್ಯರ್ಥಿ ಬಳಿ ಯಾವುದೇ ವಾಹನಗಳಿಲ್ಲ. ಸಾಲವನ್ನೂ ಹೊಂದಿಲ್ಲ. ಯಾಸಿರ್‌ ಅವರ ಪತ್ನಿ ಬಳಿ 3 ಲಕ್ಷ ನಗದು, 35.60 ಲಕ್ಷ ಮೌಲ್ಯದ 500 ಗ್ರಾಂ ಚಿನ್ನಾಭರಣ ಸೇರಿದಂತೆ 38.86 ಲಕ್ಷ ಮೌಲ್ಯದ ಚರಾಸ್ತಿಯಿದೆ. ಇವರು 24 ಲಕ್ಷ ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ಇವರ ಬಳಿ 1.93 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಸೇರಿದಂತೆ 2.17 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ. ದಂಪತಿಗೆ ಮೂವರು ಗಂಡು ಮಕ್ಕಳು ಮತ್ತು ಒಬ್ಬಳು ಹೆಣ್ಣುಮಗಳಿದ್ದಾಳೆ. ಅವರ ಹೆಸರಿನಲ್ಲಿ ಯಾವುದೇ ಆಸ್ತಿಯಿಲ್ಲ.

  • ಶಿಗ್ಗಾಂವಿ ಉಪಚುನಾವಣೆ – ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

    ಶಿಗ್ಗಾಂವಿ ಉಪಚುನಾವಣೆ – ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

    – ಅ.25 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ

    ಹಾವೇರಿ: ಶಿಗ್ಗಾಂವಿ (Shiggoan) ಕ್ಷೇತ್ರದ ಉಪಚುನಾವಣೆಗೆ ಮೊದಲ ದಿನವೇ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ.

    ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ (Ravikrishna Reddy) ಹಾಗೂ ಸೋಸಿಯಾಲಿಸ್ಟ್ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ್ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ್ ಹಿರೇಮಠ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ವಿದ್ಯುತ್ ಶಾಕ್ ತಗುಲಿ ಮಗನ ದಾರುಣ ಸಾವು – ತಾಯಿಯ ಆಕ್ರಂದನ

    ಅ.25 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಅ. 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ ಹಾಗೂ ಅ.30 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಇದನ್ನೂ ಓದಿ: ತಲಕಾವೇರಿಯಲ್ಲಿ ತೀಥೋದ್ಭವ ಬಳಿಕ ಹಾರಂಗಿ ಜಲಾಶಯಕ್ಕೆ ಎ ಮಂಜು, ಮಂಥರ್ ಗೌಡ ಬಾಗಿನ ಅರ್ಪಣೆ

  • ನಾವು ಗೆಲ್ಲಬೇಕು ಅಂದ್ರೆ ಸಿಪಿವೈ ಅವರಿಗೆ ಟಿಕೆಟ್ ಕೊಡಬೇಕು:  ಬೆಲ್ಲದ್ ಬ್ಯಾಟಿಂಗ್

    ನಾವು ಗೆಲ್ಲಬೇಕು ಅಂದ್ರೆ ಸಿಪಿವೈ ಅವರಿಗೆ ಟಿಕೆಟ್ ಕೊಡಬೇಕು: ಬೆಲ್ಲದ್ ಬ್ಯಾಟಿಂಗ್

    ಹುಬ್ಬಳ್ಳಿ: ನಾವು ಗೆಲ್ಲಬೇಕು ಅಂದ್ರೆ ಯೋಗೇಶ್ವರ್ ( C P Yogeshwar) ಅವರಿಗೆ ಟಿಕೆಟ್ ಕೊಡಬೇಕು. ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಮನಸ್ಸಿನಲ್ಲಿ ಯೋಗೇಶ್ವರ್ ಅಭ್ಯರ್ಥಿ ಆಗಬೇಕು ಅನ್ನೋ ಆಸೆ ಇದೆ. ಅವರೇ ಚನ್ನಪಟ್ಟಣ ಅಭ್ಯರ್ಥಿ ಆಗಬೇಕು. ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿ ಆಗಬೇಕು. ನಮ್ಮೆಲ್ಲರಿಗೂ ಯೋಗೇಶ್ವರ್ ಅವರನ್ನೇ ಅಭ್ಯರ್ಥಿ ಮಾಡಬೇಕು ಅನ್ನೋ ಒತ್ತಾಯ ಇದೆ. ನಾವೆಲ್ಲ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡುತ್ತೇವೆ. ಅಂತಿಮವಾಗಿ ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ. ಹಾಗೇ ನೋಡಿದರೆ ಕುಮಾರಸ್ವಾಮಿ ಅವರೇ ಯೋಗಿಶ್ವರ್ ಅವರನ್ನು ಕರೆದು ಟಿಕೇಟ್ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಹಣಕಾಸು ವಹಿವಾಟು ನಡೆದಿಲ್ಲ, ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ: ಡಿ.ಕೆ.ಸುರೇಶ್

    ನಾನು ಶಿಗ್ಗಾಂವಿ ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ (Basavaraj Bommai) ಕುಟುಂಬಕ್ಕೆ ಅವಕಾಶ ಕೊಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ಬೊಮ್ಮಾಯಿ ಬದ್ಧವಾಗಿರಬೇಕು. ಹೈಕಮಾಂಡ್ ಕೂಡಾ ಎಲ್ಲ ಆಯಾಮಗಳಲ್ಲಿ ಸರ್ವೆ ಮಾಡಿದೆ. ಕೋರ್ ಕಮಿಟಿಯಿಂದ ಮೂರ್ನಾಲ್ಕು ಹೆಸರು ಹೋಗಿರುವ ಬಗ್ಗೆ ಮಾಹಿತಿ ಇದೆ. ಪಕ್ಷ ಅಂದ ಮೇಲೆ ಭಿನ್ನಾಭಿಪ್ರಾಯ ಸಹಜ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

  • ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ – ಮುರುಗೇಶ್ ನಿರಾಣಿ

    ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ – ಮುರುಗೇಶ್ ನಿರಾಣಿ

    ನವದೆಹಲಿ: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ (ByElection) ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ. ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೆಸರು ಕೇಳಿ ಬಂದಿದೆ.

    ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ಶಿಗ್ಗಾಂವಿ (Shiggaon) ಕ್ಷೇತ್ರ ಸ್ಪರ್ಧೆಗೆ ನನ್ನ ಹೆಸರು ಕೇಳಿ ಬರುತ್ತಿದೆ. ಮತ್ತೊಂದು ಜಿಲ್ಲೆಗೆ ಹೋಗಿ ನಾನು ಸ್ಪರ್ಧೆ ಮಾಡುವುದು ಸರಿ ಅಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಭರತ್ ಬೊಮ್ಮಾಯಿ ಸೇರಿ 60 ಮಂದಿ ಸ್ಪರ್ಧೆಗೆ ಅರ್ಜಿ ಹಾಕಿದ್ದಾರೆ. ಆ ಕ್ಷೇತ್ರದಲ್ಲೂ ಪಂಚಮಸಾಲಿ ಸಮಾಜದವರು ಇದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಅಲ್ಲಿ ಇದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಕಲಬುರಗಿ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

    ಪಕ್ಷಕ್ಕಾಗಿ ದುಡಿದವರು ಅಲ್ಲಿದ್ದಾರೆ. ಹೀಗಾಗಿ ಪಕ್ಷದ ನಾಯಕರು ಅಥಾವ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ನಾನು ಅಲ್ಲಿಂದ ಸ್ಫರ್ಧೆ ಬಯಸುವುದಿಲ್ಲ, ಹೈಕಮಾಂಡ್ ಹಾಕುವ ಅಭ್ಯರ್ಥಿಯನ್ನು ಅಂತಿಮವಾಗಿ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನಮ್ಮದು, ನಾವು ಆ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

    ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದು, ನ.23 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಮದುವೆಯಾದ 12 ವರ್ಷಗಳ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ರಾಧಿಕಾ ಆಪ್ಟೆ

  • 25 ಲಕ್ಷ ರೂ.ಗೆ 2 ಕೆಜಿ ನಕಲಿ ಚಿನ್ನ ನೀಡಿ ವಂಚನೆ – ಇಬ್ಬರು ಅರೆಸ್ಟ್

    25 ಲಕ್ಷ ರೂ.ಗೆ 2 ಕೆಜಿ ನಕಲಿ ಚಿನ್ನ ನೀಡಿ ವಂಚನೆ – ಇಬ್ಬರು ಅರೆಸ್ಟ್

    ಹಾವೇರಿ: 25 ಲಕ್ಷ ರೂ.ಗೆ 2 ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬನಿಗೆ ವಂಚಿಸಿದ್ದ ಆರೋಪಿಗಳನ್ನು ಶಿಗ್ಗಾಂವ್ (Shiggaon) ಪೊಲೀಸರು (Police) ಬಂದಿಸಿದ್ದಾರೆ. ಆರೋಪಿಗಳು ಮೊದಲು ಎರಡು ಚಿನ್ನದ ನಾಣ್ಯಗಳನ್ನು ನೀಡಿ ಹಣ ಪಡೆದು, ಬಳಿಕ ನಕಲಿ ಚಿನ್ನವನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಕರಣ್ ಮತ್ತು ಪ್ರವೀಣ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೆಂಗಳೂರು (Bengaluru) ಮೂಲದ ಲಕ್ಷ್ಮಣ್ ಚೆನ್ನಬಸಯ್ಯ ಎಂಬವರಿಗೆ ಚಿನ್ನದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿದ್ದರು. ಮೊದಲಿಗೆ ಚಿನ್ನದ ನಾಣ್ಯ ನೀಡಿ 25 ಲಕ್ಷ ರೂ. ಪಡೆದು ಬಳಿಕ ನಕಲಿ ಚಿನ್ನದ ನಾಣ್ಯಗಳನ್ನು ನೀಡಿದ್ದರು. ಇದನ್ನೂ ಓದಿ: ನಾಗೋರ್ನೊ-ಕರಾಬಖ್ ಇಂಧನ ಡಿಪೋ ಸ್ಫೋಟ – 20 ಮಂದಿ ಸಾವು

    ಆರೋಪಿಗಳು ಚಿನ್ನದ ನಾಣ್ಯಗಳನ್ನು ನೀಡುವುದಾಗಿ ಹರಪನಹಳ್ಳಿಯ ಹೊಳಲು ಗ್ರಾಮದ ಬಳಿ ಲಕ್ಷ್ಮಣ್‍ನನ್ನು ಕರೆಸಿದ್ದರು. ಇಲ್ಲಿಯೇ ನಾಣ್ಯಗಳನ್ನು ನೀಡಿ ಹಣ ಪಡೆದಿದ್ದರು. ಬಳಿಕ ಇದನ್ನು ಪರೀಕ್ಷಿಸಿದಾಗ ನಕಲಿ ಎಂಬುದು ತಿಳಿದು ಬಂದಿತ್ತು.

    ಈ ಸಂಬಂಧ ಶಿಗ್ಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಂಧಿತ ಆರೋಪಿಗಳಿಂದ 12 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಸಂತೋಷ್ ಮತ್ತು ಪ್ರಕಾಶ್ ಎಂಬ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಉಗ್ರರಿಗೆ ಬೆಂಬಲ – ಇಬ್ಬರು ಮಹಿಳೆಯರು, ಓರ್ವ ಅಪ್ರಾಪ್ತ ಸೇರಿ ಆರು ಮಂದಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ: ಜನರಲ್ಲಿ ಸುದೀಪ್‌ ಮನವಿ

    ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ: ಜನರಲ್ಲಿ ಸುದೀಪ್‌ ಮನವಿ

    – ಒಬ್ಬ ಭಾರತೀಯನಾಗಿ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ

    ಹಾವೇರಿ: ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಿಚ್ಚ ಸುದೀಪ್‌ (Sudeep) ಶಿಗ್ಗಾಂವಿ (Shiggaon) ಮತದಾರರಲ್ಲಿ ಮನವಿ ಮಾಡಿದರು.

    ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommi) ಅವರ ರೋಡ್‌ ಶೋ ನಡೆಸಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವು ಅವರನ್ನು ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.

    ಮೊದಲ ಬಾರಿಗೆ ನಾನು ಈ ಊರಿಗೆ ಬಂದಿದ್ದೇನೆ. ಬಹಳ ಸುಂದರವಾಗಿ ನನ್ನನ್ನು ಸ್ವಾಗತ ಮಾಡಿದ್ದೀರಿ. ಸಂತ ಶಿಶುನಾಳ ಶರೀಫರ ಭೂಮಿಯಲ್ಲಿ ಪ್ರಚಾರ ಆರಂಭಿಸಿದ್ದು ಬಹಳ ಸಂತಸ ತಂದಿದೆ. ಗೆದ್ದೇ ಗೆಲ್ಲುವೆ ಒಂದು ದಿನ. ಅಭಿವೃದ್ಧಿ ಆಗಬೇಕೆಂದರೆ ಮತ್ತೆ ಬೊಮ್ಮಾಯಿ ಅವರಿಗೆ ಮತ್ತೊಂದು ಅವಕಾಶ ನೀಡಿ ಎಂದರು.  ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಶಾಕ್ – ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡದ ಸುಪ್ರೀಂ

    ನಿಮ್ಮ ಬೆಂಬಲ ಇದ್ದರೆ ಕೆಲಸ ಆಗುತ್ತದೆ. ನಾನು ಕೆಲಸ ಆಗುವವರ ಪರ ಇರುತ್ತೇನೆ . ನಾನು ಒಬ್ಬ ಭಾರತೀಯನಾಗಿ ಪ್ರಧಾನಿ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ವಿದೇಶದಲ್ಲಿ ಭಾರತದ ಬಗ್ಗೆ ಹೆಮ್ಮೆಯಿಂದ ಮಾತನಾಡುತ್ತಾರೆ ಎಂದು ಮೋದಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

    ನಾನು ಸುಮ್ನೆ ಪ್ರಚಾರಕ್ಕೆ ಇಳಿಯಲ್ಲ. ಗೆದ್ದೆ ಗೆಲ್ಲುವೆ ಒಂದು ದಿನ. ಗೆಲ್ಲಲೇಬೇಕು ಒಳ್ಳೆಯತನ. ಬೊಮ್ಮಾಯಿ ಅವರನ್ನು ಗೆಲ್ಲಿಸಿಕೊಂಡು ಹೋಗುತ್ತೇನೆ. ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಿ ಎಂದು ಜನರಲ್ಲಿ ಮನವಿ ಮಾಡಿದರು.