Tag: Shikaripura

  • ಬಾಲ್ಯ ವಿವಾಹ ತಡೆಯಲು ಬಂದ ಅಧಿಕಾರಿಗಳ ಮೇಲೆ ಸಂಬಂಧಿಕರಿಂದ ಹಲ್ಲೆ!

    ಬಾಲ್ಯ ವಿವಾಹ ತಡೆಯಲು ಬಂದ ಅಧಿಕಾರಿಗಳ ಮೇಲೆ ಸಂಬಂಧಿಕರಿಂದ ಹಲ್ಲೆ!

    ಮಂಡ್ಯ: ಬಾಲ್ಯ ವಿವಾಹ ತಡೆಯಲು ಮುಂದಾದ ಅಧಿಕಾರಿಗಳಿಗೆ ಘೆರಾವ್ ಹಾಕಿ, ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ನಡೆದಿದೆ.

    ಬಾಲ್ಯ ವಿವಾಹದ ಕುರಿತು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಅಧಿಕಾರಿಗಳು ಬಂದಿದ್ದಾರೆ. ಪರಿಶೀಲನೆ ನಡೆಸುತ್ತಿದ್ದ ವೇಳೆ ಅವರನ್ನು ತಡೆದ ಸಂಬಂಧಿಕರು, ಇಲ್ಲಿ ಯಾವುದೇ ಮದುವೆ ನಡೆಯುತ್ತಿಲ್ಲವೆಂದು ಗಲಾಟೆ ಮಾಡಿದ್ದಾರೆ. ಅಲ್ಲದೇ, ವಿಡಿಯೋ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದು, ಅವರ ಮೊಬೈಲ್ ಕಿತ್ತುಕೊಂಡಿದ್ದಾರೆ.

    ಸದ್ಯ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ನಾಗಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • ಬಿಎಸ್‍ವೈ ಬಳಿಯಿದೆ 7.23 ಕೋಟಿ ರೂ. ಮೌಲ್ಯದ ಆಸ್ತಿ!

    ಬಿಎಸ್‍ವೈ ಬಳಿಯಿದೆ 7.23 ಕೋಟಿ ರೂ. ಮೌಲ್ಯದ ಆಸ್ತಿ!

    ಶಿವಮೊಗ್ಗ: ಶಿಕಾರಿಪುರದಿಂದ ಇವತ್ತು ನಾಮಪತ್ರ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ತಮ್ಮ ಬಳಿ 7.23 ಕೋಟಿ ರೂ. ಮೌಲ್ಯದ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದಾರೆ.

    ಯಾವುದು ಎಷ್ಟು?
    ಚರಾಸ್ತಿ 71,30,040 ಲಕ್ಷ ರೂ. ಇದ್ದರೆ ಸ್ಥಿರಾಸ್ತಿ- 6,52,29,147 ಕೋಟಿ ರೂ., ಆದಾಯ 12.33 ಲಕ್ಷ. 2.658 ಕೆಜಿ ಚಿನ್ನ, 84 ಕೆಜಿ ಬೆಳ್ಳಿ ಹಾಗೂ 1 ಲಕ್ಷ ರೂ. ನಗದು. 2 ಟೊಯೋಟಾ ಫಾರ್ಚುನರ್ ಕಾರ್, 1 ದ್ವಿಚಕ್ರ ವಾಹನವಿದೆ ಎಂದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ.

    ಗುಂಡ್ಲು ಪೇಟೆಯ ಚುನಾವಣೆ ವೇಳೆ 2 ಕೇಸ್, 2 ಭ್ರಷ್ಟಾಚಾರ ಕೇಸ್ ಸೇರಿ ಒಟ್ಟು ನನ್ನ ಮೇಲೆ 6 ಪ್ರಕರಣಗಳು ದಾಖಲಾಗಿದೆ ಎಂದು ಬಿಎಸ್‍ವೈ ಮಾಹಿತಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: 2008ರಲ್ಲಿ 75 ಕೋಟಿ ಇದ್ದ ಡಿಕೆಶಿ ಆಸ್ತಿ ಈಗ 548 ಕೋಟಿ ರೂ.ಗೆ ಏರಿಕೆ!

    ಯಾವ ವರ್ಷ ಎಷ್ಟು ಆಸ್ತಿ ಇತ್ತು?
    2008ರ ವಿಧಾನಸಭಾ ಚುನಾವಣೆಯ ವೇಳೆ 1,82,30,030 ರೂ. ಮೌಲ್ಯದ ಆಸ್ತಿ ತೋರಿಸಿದ್ದರೆ, 2014ರ ಲೋಕಸಭಾ ಚುನಾವಣೆಯ ವೇಳೆ ತನ್ನ 6,97,46,267 ರೂ. ಮೌಲ್ಯದ ಆಸ್ತಿಯಿದೆ ಎಂದು ಘೋಷಿಸಿಕೊಂಡಿದ್ದರು.

  • 2018ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲ್ವಂತೆ ಬಿಎಸ್‍ವೈ ಪುತ್ರ..!

    2018ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲ್ವಂತೆ ಬಿಎಸ್‍ವೈ ಪುತ್ರ..!

    ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಕಣಕ್ಕಿಳಿಯಲ್ವಂತೆ. ಹೀಗಂತಾ ಸ್ವತಃ ಬಿಎಸ್ ಯಡಿಯೂರಪ್ಪನವ್ರೇ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತದೆ.

    ನನ್ನ ಮಗ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ. ಆಗ ಬೇಕಾದ್ರೆ ನೋಡೋಣ ಅಂತ ಪಕ್ಷದ ಹೈಕಮಾಂಡ್‍ಗೂ ತಿಳಿಸಿದ್ದಾರೆ. ಈ ಮಧ್ಯೆ ತಾವು ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ನಿರ್ಧಾರದಿಂದಲೂ ಬಿಎಸ್‍ವೈ ಹಿಂದೆ ಸರಿದಿದ್ದು, ಶಿಕಾರಿಪುರದಿಂದಲೇ ಸ್ಪರ್ಧಿಸೋದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಬಿಜೆಪಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಗೆ ಇಂದು ಚಾಲನೆ ಸಿಗಲಿದೆ. ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಗಳೂರು ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಆವರಣದಲ್ಲಿ ಬೃಹತ್ ಸಮಾವೇಶವನ್ನು ಏರ್ಪಡಿಸಿದ್ದು, ಈ ಸಮಾವೇಶಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದಾರೆ.

  • ನಾನು ಸಂತೋಷ್ ಅಣ್ಣತಮ್ಮಂದಿರಂತೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಬಿಎಸ್‍ವೈ

    ನಾನು ಸಂತೋಷ್ ಅಣ್ಣತಮ್ಮಂದಿರಂತೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ: ಬಿಎಸ್‍ವೈ

    ಶಿವಮೊಗ್ಗ: ನಾನು ಮತ್ತು ಸಂತೋಷ್ ನಡುವೆ ಗುಲಗಂಜಿಯಷ್ಟು ಭಿನ್ನಾಭಿಪ್ರಾಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾವಿಬ್ಬರು ಅಣ್ಣ ತಮ್ಮಂದಿರಂತೆ ಇದ್ದು, ಪಕ್ಷ ಬಲವರ್ಧನೆಗೆ ನಾವಿಬ್ಬರು ಕೆಲಸ ಮಾಡುತ್ತಿದ್ದೇವೆ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಸೃಷ್ಟಿ ಮಾಡುತ್ತಿರುವುದು ಮಾಧ್ಯಮದವರು ಎಂದು ದೂರಿದರು.

    ಇದೇ ವೇಳೆ ಶಿಕಾರಿಪುರದ ಜನತೆ ಇಲ್ಲಿಂದಲೇ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ನೀವು ನಾಮಪತ್ರ ಸಲ್ಲಿಸಿ ಹೋಗಿ ನಾವು ನೋಡಿಕೊಳ್ಳುತ್ತೆವೆ ಎಂದಿದ್ದಾರೆ. ಈ ಕುರಿತು ಕೇಂದ್ರದ ನಾಯಕರ ಮನವೊಲಿಸಿ ಶಿಕಾರಿಪುರದಿಂದಲೇ ಸ್ಪರ್ಧೆಮಾಡಲು ಪ್ರಯತ್ನ ಮಾಡುತ್ತೇನೆ ಎಂದರು.

    ನಾನು ಟಿಕೆಟ್ ನೀಡುವುದಿಲ್ಲ. ಪಕ್ಷ ಟಿಕೆಟ್ ನೀಡುತ್ತದೆ. ಹೈಕಮಾಂಡ್ ಪ್ರತಿ ಕ್ಷೇತ್ರದಲ್ಲೂ ಸರ್ವೆ ನಡೆಸಿ ಟಿಕೆಟ್ ನೀಡಲಿದೆ ಎಂದರು.

    ಕ್ಷಮೆ ಕೇಳಬೇಕು: ಕಾಗೋಡು ತಿಮ್ಮಪ್ಪರಂತಹ ಹಿರಿಯರಿಂದ ಗೋವಿನ ಬಗ್ಗೆ ಈ ರೀತಿಯ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಗೋಮಾಂಸ ವಿಚಾರದಲ್ಲಿ ಒಂದು ಸಮುದಾಯದವರನ್ನು ಅವಮಾನ ಮಾಡಿದ್ದಾರೆ. ಕಾಗೋಡು ತಿಮ್ಮಪ್ಪ ತಕ್ಷಣ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ ಅವರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

  • 7 ವರ್ಷದ ಮಗನನ್ನ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ತಾಯಿ

    7 ವರ್ಷದ ಮಗನನ್ನ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ತಾಯಿ

    ಶಿವಮೊಗ್ಗ: ತನ್ನ ಅನೈತಿಕ ಸಂಬಂಧಕ್ಕೆ ಮಗ ಅಡಚಣೆಯಾಗ್ತಾನೆಂದು ತಾಯಿಯೇ ಸುಪಾರಿ ಕೊಟ್ಟು ಮಗನನ್ನು ಕೊಲೆ ಮಾಡಿಸಿರುವ ಅಮಾನವೀಯ ಘಟನೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದಲ್ಲಿ ನಡೆದಿದೆ.

    7 ವರ್ಷದ ಪ್ರಮೋದ ಕೊಲೆಯಾದ ಬಾಲಕ. ಪ್ರಮೋದನ ತಾಯಿ ರೇಖಾ ಅಲಿಯಾಸ್ ಬೇಬಿ ತನ್ನ ಪ್ರಿಯಕರ ತಿಮ್ಮನಗೌಡ ಎಂಬಾತನಿಂದ ಮಗನ ಕೊಲೆ ಮಾಡಿಸಿದ್ದಾಳೆ. ಪ್ರಮೋದ ಚೋರಡಿಯ ರಾಮಕೃಷ್ಣ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ. ಇದೇ ತಿಂಗಳು ಜೂನ್ 2ರಂದು ಪ್ರಮೋದನನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ಚೋರಡಿಯ ಕುಮದ್ವತಿ ನದಿ ಬಳಿ ಪ್ರಮೋದನ ಮೃತದೇಹವನ್ನು ಎಸೆಯಲಾಗಿತ್ತು.

    ರೇಖಾ ಪತಿ

    ರೇಖಾ ಹತ್ತು ವರ್ಷಗಳ ಹಿಂದೆ ಹಿರೇಕೆರೂರು ತಾಲೂಕಿನ ಹಳಿಯಾಳ ಗ್ರಾಮದ ವೀರಭದ್ರ ಎಂಬವರೊಂದಿಗೆ ಮದುವೆಯಾಗಿದ್ದಳು. ಮದುವೆಯ ಆರು ತಿಂಗಳ ನಂತರ ರೇಖಾ ಪತಿಯಿಂದ ದೂರವಾಗಿದ್ದಳು. ರೇಖಾ ಮತ್ತು ತಿಮ್ಮನಗೌಡನ ನಡುವೆ ಅನೈತಿಕ ಸಂಬಂಧವಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ತಿಮ್ಮನಗೌಡನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ.

    ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಬೇಸತ್ತು ಗಂಡನ ಕೊಲೆಗೆ 5 ಲಕ್ಷ ರೂ.ಗೆ ಸುಪಾರಿ ಕೊಟ್ಟ ಪತ್ನಿ

    ರೇಖಾ ಮತ್ತು ತಿಮ್ಮನಗೌಡ ಸದ್ಯ ಪೊಲೀಸರ ವಶದಲ್ಲಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇದನ್ನೂ ಓದಿ: ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು! 

     

  • ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗಕ್ಕೆ ರೆಡಿಯಾದ ಬಿಎಸ್‍ವೈ!

    ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗಕ್ಕೆ ರೆಡಿಯಾದ ಬಿಎಸ್‍ವೈ!

    -ಮಾಜಿ ಸಚಿವ ಕುಮಾರ್ ಬಂಗಾರಪ್ಪಗೆ ಬಿಜೆಪಿಯಿಂದ ಎಂಪಿ ಟಿಕೆಟ್..?

    ಬೆಂಗಳೂರು: 2018ರ ವಿಧಾನಸಭಾ ಚುನಾವಣೆಗೆ ತಮ್ಮ ಸ್ವಕ್ಷೇತ್ರವಾದ ಶಿಕಾರಿಪುರವನ್ನು ಮಗ ಬಿ.ವೈ. ರಾಘವೇಂದ್ರ ಅವರಿಗೆ ಬಿಟ್ಟು ಕೊಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

    ಬಿಎಸ್‍ವೈ ತಾವು ಮುಂದಿನ ಚುನಾವಣೆಗಾಗಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಅಥವಾ ಬಿಜೆಪಿಯ ಭದ್ರಕೋಟೆಯಾಗಿರುವ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದತ್ತ ಕಣ್ಣು ಹಾಕಿದ್ದಾರೆ. ಈ ಕುರಿತು ಅವರು ಈಗಾಗಲೇ ಆಪ್ತರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.

    ಶಿವಮೊಗ್ಗ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಹಿಡಿತ ಸಾಧಿಸಲು ಬಿಎಸ್ ವೈ ಮಾಸ್ಟರ್ ಪ್ಲಾನ್ ಮಾಡಿದ್ದು ಮಾಜಿ ಸಚಿವ ಕುಮಾರ್ ಬಂಗಾರಪ್ಪಗೆ ಬಿಜೆಪಿಯಿಂದ ಎಂಪಿ ಟಿಕೆಟ್ ನೀಡುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿಸುವ ಸಾಧ್ಯತೆಗಳಿವೆ. ಅದಕ್ಕಾಗಿ ಈಗಾಗಲೇ ಕುಮಾರ್ ಬಂಗಾರಪ್ಪ ಅವರ ಜೊತೆ ಎರಡು ಸುತ್ತಿನ ಮಾತುಕತೆ ನಡೆಸಿರುವ ಬಿಎಸ್‍ವೈ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.

    ಕುಮಾರ್ ಬಂಗಾರಪ್ಪ ಬಿಜೆಪಿಗೆ ಬಂದರೆ ಸೊರಬ ಕ್ಷೇತ್ರದಿಂದ ಟಿಕೆಟ್ ನೀಡುವುದು ಅಥವಾ ಸಂಸದ ಎಲೆಕ್ಷನ್ ಗೆ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ನೀಡಬಹುದು ಎಂದು ಬಿಎಸ್‍ವೈ ಲೆಕ್ಕಾಚಾರ ಹಾಕಿದ್ದಾರೆ. ಆದ್ರೆ ಯಡಿಯೂರಪ್ಪ ಅವರ ಭರವಸೆಗೆ ಯೋಚನೆ ಮಾಡ್ತಿನಿ ಅಂತಾ ಇತ್ತ ಕುಮಾರ್ ಬಂಗಾರಪ್ಪ ತಿಳಿಸಿದ್ದಾರೆ.