Tag: Shillong

  • Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

    Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

    – ಪತಿಯನ್ನು ಕೊಲ್ಲಲು 4 ಬಾರಿ ಪ್ಲ್ಯಾನ್‌ ಮಾಡಿದ್ದ ಹಂತಕಿ ಸೋನಮ್

    ಶಿಲ್ಲಾಂಗ್: ಮೇಘಾಲಯಕ್ಕೆ (Meghalaya) ಹನಿಮೂನ್‌ಗೆ ತೆರಳಿದ್ದಾಗ ಪತಿಯನ್ನು ಹತ್ಯೆಗೈದು ಪೊಲೀಸರ ಅತಿಥಿ ಆಗಿರುವ ಸೋನಮ್‌ನ ಸಂಚುಗಳು ಬಗೆದಷ್ಟು ಬಯಲಾಗುತ್ತಿವೆ. ಹಂತಕರು ಬೇರೊಂದು ಮಹಿಳೆಯನ್ನು ಕೊಂದು ಸೋನಮ್ ಶವವೆಂದು ನಂಬಿಸಲು ಮುಂದಾಗಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಇಂದೋರ್ (Indore) ಮೂಲದ ರಾಜಾ ರಘುವಂಶಿ ಕೊಲೆ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ರೀತಿಯಲ್ಲಿ ಹನಿಮೂನ್‌ಗೆ ಕರೆದೊಯ್ದು ಪತಿಯನ್ನು ಹತ್ಯೆಗೈದ ಆರೋಪಿ ಪತ್ನಿ ಸೋನಂ ರಘುವಂಶಿ ಹಾಗೂ ಹಂತಕರ ಕರಾಳ ಮುಖಗಳು ಒಂದೊಂದಾಗಿ ಬಹಿರಂಗವಾಗುತ್ತಿದೆ.ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

    ಜೂ.11ರ<ದು ಮೇಘಾಲಯ ಪೊಲೀಸರು ಸೋನಮ್ ಹಾಗೂ ಇನ್ನುಳಿದ ಆರೋಪಿಗಳನ್ನು ಶಿಲ್ಲಾಂಗ್ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಐದು ಆರೋಪಿಗಳನ್ನು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು.

    ಪೊಲೀಸರ ತನಿಖೆ ವೇಳೆ, ಸೊಹ್ರಾದಲ್ಲಿನ ಜಲಪಾತವನ್ನು ನೋಡಲು ಶಿಖರವನ್ನು ಹತ್ತಿಕೊಂಡು ಹೋಗುವಾಗ ನಿರ್ಜನ ಪ್ರದೇಶದಲ್ಲಿ ಹಂತಕರು ರಾಜಾ ರಘುವಂಶಿಯ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದರು. ಅಲ್ಲದೇ, ಆತನ ಮೃತದೇಹವನ್ನು ಕಮರಿಗೆ ಎಸೆದಿದ್ದರು. ಅದಾದ ನಂತರ ಇನ್ನೊಬ್ಬ ಮಹಿಳೆಯನ್ನು ಕೊಂದು ಶವವನ್ನು ಸುಟ್ಟು, ಆಕೆಯನ್ನೇ ಸೋನಮ್ ಎಂದು ನಂಬಿಸಬೇಕೆಂದು ಕೊಂಡಿದ್ದರು. ಸತ್ಯ ಬಯಲಾಗುವವರೆಗೂ ಸೋನಮ್‌ನ್ನು ಎಲ್ಲಿಯಾದರೂ ಅಡಗಿಸಿಡುವ ಯೋಜನೆ ಹಾಕಿಕೊಂಡಿದ್ದರು ಎಂದು ತಿಳಿದುಬಂದಿದೆ.

    ಏನಿದು ಪ್ರಕರಣ?
    ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಡುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.ಇದನ್ನೂ ಓದಿ: ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್

  • ಹನಿಮೂನ್‌ ಮರ್ಡರ್‌ ಕೇಸ್‌ – ಹಂತಕಿ ಸೋನಂ ಜೊತೆ ಸಂಬಂಧ ಕಡಿದುಕೊಂಡ ಕುಟುಂಬ

    ಹನಿಮೂನ್‌ ಮರ್ಡರ್‌ ಕೇಸ್‌ – ಹಂತಕಿ ಸೋನಂ ಜೊತೆ ಸಂಬಂಧ ಕಡಿದುಕೊಂಡ ಕುಟುಂಬ

    ಶಿಲ್ಲಾಂಗ್‌: ಮೇಘಾಲಯಕ್ಕೆ (Meghalaya) ಹನಿಮೂನ್‌ಗೆ (Honeymoon) ತೆರಳಿದ್ದ ವೇಳೆ ಪತಿ ರಾಜಾ ರಘುವಂಶಿ ಕೊಲೆಗೆ ಸಂಚು ರೂಪಿಸಿದ್ದನ್ನು ಸೋನಂ ರಘುವಂಶಿ (Sonam Raghuvanshi) ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾಳೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಹಂತಕಿ ಸೋನಂ ಕುಟುಂಬಸ್ಥರು ಆಕೆಯೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾರೆ.

    ಆರಂಭದಲ್ಲಿ ಸೋನಂ ನಿರಪರಾಧಿ ಎಂದು ಆಕೆಯ ಕುಟುಂಬ ಹೇಳಿಕೊಂಡಿತ್ತು. ಆದರೆ ಸಾಕ್ಷಿಗಳು ಪತ್ತೆಯಾದ ಬಳಿಕ, ಹಾಗೂ ಆಕೆ ಹತ್ಯೆ ಮಾಡಿದ್ದನ್ನು ಒಪ್ಪಿಕೊಳ್ಳುತ್ತಿದ್ದಂತೆ ಅವಳೊಂದಿಗಿನ ಎಲ್ಲಾ ಸಂಬಂಧವನ್ನು ಕುಟುಂಬ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮದುವೆಯಾಗಿ ಒಂದು ತಿಂಗಳ ಬಳಿಕ ಕೊನೆಗೂ ಸತ್ಯ ಕಕ್ಕಿದ ಹನಿಮೂನ್ ಹಂತಕಿ – ತಪ್ಪೊಪ್ಪಿಕೊಂಡ ಸೋನಮ್ ರಘುವಂಶಿ

    ಸಿಸಿಟಿವಿ ದೃಶ್ಯಾವಳಿಯಲ್ಲಿ ಸೋನಂ ಹಂತಕರನ್ನು ಭೇಟಿಯಾಗಿರುವುದು ಸೆರೆಯಾಗಿದೆ. ಹತ್ಯೆ ನಡೆದ ಸ್ಥಳದಲ್ಲಿ ಅವರಿಗೆ ಸೇರಿದ್ದ ರಕ್ತಸಿಕ್ತ ಬಟ್ಟೆಗಳನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಇನ್ನೂ ಸೋನಂ ಪ್ರೇಮಿ ರಾಜ್ ಕುಶ್ವಾಹ ಹತ್ಯೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಇದರ ಜೊತೆಗೆ ಎಸ್‌ಐಟಿ ಪ್ರಮುಖ ಸಾಕ್ಷಿಗಳನ್ನು ಕಲೆಹಾಕಿದೆ ಎಂದು ಮೂಲಗಳು ತಿಳಿಸಿವೆ.

    ರಾಜಾ ಅವರ ಹತ್ಯೆಗೆ ಸೋನಂ, ವಿಶಾಲ್ ಸಿಂಗ್ ಚೌಹಾಣ್, ಆಕಾಶ್ ರಜಪೂತ್ ಮತ್ತು ಆನಂದ್ ಕುರ್ಮಿ ಎಂಬ ಮೂವರು ಹಂತಕರಿಗೆ ಸುಪಾರಿ ನೀಡಿದ್ದಳು. ಅದರಂತೆ ಸಂಚು ಮಾಡಿ, ಸೋನಂ ಮತ್ತು ರಾಜಾ ಚಾರಣಕ್ಕೆ ಹೋಗಿದ್ದ ವೇಳೆ, ಮೂವರು ಅವರೊಂದಿಗೆ ಸೇರಿಕೊಂಡಿದ್ದರು. ಬಳಿಕ ಸೊಹ್ರಾದ ಜಲಪಾತದ ಬಳಿಯ ಕಮರಿ ಬಳಿ ರಾಜಾ ಅವರನ್ನು ಬಂಡೆಯಿಂದ ತಳ್ಳಲು ಯತ್ನಿಸಿದ್ದರು. ಆದರೆ ಇದು ಕೈಗೂಡದಿದ್ದಾಗ, ಸೋನಂ ಎದುರಿನಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದರು. ಜೂ.2 ರಂದು ಅವರ ಶವ ಪತ್ತೆಯಾಗಿತ್ತು.

    ಕೊಲೆ ಬಳಿಕ ವಾರಣಾಸಿಯ ಡಾಬಾವೊಂದರ ಬಳಿ ಸೋನಂನನ್ನು ಪೊಲೀಸರು ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆ ನಂತರ ಉತ್ತರ ಪ್ರದೇಶ ಪೊಲೀಸರು ಆಕೆಯನ್ನು ಮೇಘಾಲಯ ಪೊಲೀಸರಿಗೆ ಹಸ್ತಾಂತರಿಸಿದ್ದರು. ಮಂಗಳವಾರ ಬೆಳಿಗ್ಗೆ ಮೇಘಾಲಯ ಪೊಲೀಸರು ಆಕೆಯನ್ನು ಬಿಹಾರದ ಪಾಟ್ನಾದ ಫುಲ್ವರಿ ಷರೀಫ್ ಠಾಣೆಗೆ ಕರೆತಂದಿದ್ದರು. ಮಂಗಳವಾರ ಮೇಘಾಲಯ ಪೊಲೀಸರು ಆಕೆಯನ್ನು ತಮ್ಮ ವಶಕ್ಕೆ ಪಡೆದಿದ್ದರು. ಇನ್ನುಳಿದ ನಾಲ್ವರು ಆರೋಪಿಗಳಾದ ಆಕಾಶ್ ರಜಪೂತ್, ವಿಶಾಲ್ ಸಿಂಗ್ ಚೌಹಾಣ್, ರಾಜ್ ಸಿಂಗ್ ಕುಶ್ವಾಹ ಹಾಗೂ ಆನಂದ್‌ನನ್ನು ಹೆಚ್ಚಿನ ತನಿಖೆಗಾಗಿ ಶಿಲ್ಲಾಂಗ್‌ಗೆ ಕರೆದೊಯ್ಯಲಾಗಿತ್ತು.

    ಏನಿದು ಪ್ರಕರಣ?
    ಇಂದೋರ್ (Indore) ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಟುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.

    ಹೃದ್ರೋಗಿಯಾಗಿದ್ದ ಸೋನಂ ತಂದೆ ದೇವಿ ಸಿಂಗ್, ತನ್ನ ಕಾರ್ಖಾನೆಯಲ್ಲೇ ಕೆಲಸ ಮಾಡ್ತಿದ್ದ ರಾಜ್‌ಗೆ ಕೊಟ್ಟು ಮದ್ವೆ ಮಾಡಲು ಒಪ್ಪಿಕೊಳ್ಳಲ್ಲ ಅನ್ನೋದು ಸೋನಂಗೆ ಗೊತ್ತಿತ್ತು. ಹಾಗಾಗಿಯೇ ಮಾಸ್ಟರ್ ಪ್ಲ್ಯಾನ್ ಮಾಡಿದ್ದಳು. ಮೊದಲು ರಾಜನನ್ನ ಮದುವೆ ಆಗಿಬಿಡೋಣ, ಅವನನ್ನು ಕೊಂದಮೇಲೆ ವಿಧವೆ ಅನ್ನೋ ಮಮಕಾರದಲ್ಲಾದ್ರೂ ರಾಜ್‌ಗೆ ತನ್ನನ್ನು ಕೊಟ್ಟು ಮದುವೆ ಮಾಡುತ್ತಾರೆ ಎಂಬುದು ಅವಳ ಪ್ಲ್ಯಾನ್ ಆಗಿತ್ತು ಅನ್ನೋದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಇಂದು ಮಧ್ಯರಾತ್ರಿ ಮೇಘಾಲಯಕ್ಕೆ ಹಂತಕಿ ಸೋನಮ್

  • ಪಕ್ಷದ ಎಲ್ಲಾ ಸ್ಥಾನಗಳಿಂದ ಸುನೀಲ್ ಜಾಖರ್, ಥಾಮಸ್‍ರನ್ನು ತೆಗೆದು ಹಾಕಿದ ಕಾಂಗ್ರೆಸ್

    ಪಕ್ಷದ ಎಲ್ಲಾ ಸ್ಥಾನಗಳಿಂದ ಸುನೀಲ್ ಜಾಖರ್, ಥಾಮಸ್‍ರನ್ನು ತೆಗೆದು ಹಾಕಿದ ಕಾಂಗ್ರೆಸ್

    ಶಿಲಾಂಗ್: ಪಂಜಾಬ್ ಘಟಕದ ಮಾಜಿ ಮುಖ್ಯಸ್ಥ ಸುನೀಲ್ ಜಾಖರ್ ಮತ್ತು ಕೇರಳ ನಾಯಕ ಕೆ ವಿ ಥಾಮಸ್ ಅವರನ್ನು ಪಕ್ಷದ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಲು ಕಾಂಗ್ರೆಸ್ ನಿರ್ಧರಿಸಿದೆ.

    ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಮೇಘಾಲಯದಲ್ಲಿ ತನ್ನ ಐವರು ಶಾಸಕರನ್ನು ಅಮಾನತುಗೊಳಿಸಿದೆ. ಕಾಂಗ್ರೆಸ್ ಶಿಸ್ತು ಸಮಿತಿಯು ಜಾಖರ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿತು. ಆರಂಭದಲ್ಲಿ ಅವರನ್ನು ಎರಡು ವರ್ಷಗಳ ಕಾಲ ಅಮಾನತುಗೊಳಿಸಲು ನಿರ್ಧರಿಸಲಾಯಿತು. ಇದನ್ನೂ ಓದಿ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

    ಸಭೆ ನಡೆಸಿದ ಸಮಿತಿ, ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ರಾಜ್ಯದಲ್ಲಿ ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ)ಗೆ ಬೆಂಬಲ ನೀಡಿದ ಮೇಘಾಲಯದ ಐವರು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡಿದೆ.

    ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶಿಸ್ತು ಸಮಿತಿಯ ಶಿಫಾರಸುಗಳನ್ನು ಅನುಮೋದಿಸಿದ್ದಾರೆ. ಮೇಘಾಲಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿನ್ಸೆಂಟ್ ಪಾಲಾ ಅವರಿಂದ ಸೋನಿಯಾ ಅವರು ಪ್ರಸ್ತುತ ಬಿಜೆಪಿ ಬೆಂಬಲಿತ ಸರ್ಕಾರವನ್ನು ಬೆಂಬಲಿಸುವ ಐದು ಶಾಸಕರ ಕ್ರಮಗಳ ಬಗ್ಗೆ ಪತ್ರವನ್ನು ಸ್ವೀಕರಿಸಿದ್ದರು. ಇದನ್ನೂ ಓದಿ: ಹಂಪಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಿಂತನೆ: ವಚನಾನಂದ ಮಹಾಸ್ವಾಮೀಜಿ

    ಸಮಿತಿಯು ಈ ವಿಷಯವನ್ನು ವಿಸ್ಕೃತವಾಗಿ ಚರ್ಚಿಸಿದೆ. ಈ ಸಭೆಯ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಶಾಸಕರಾದ ಅಮ್ರಾರೀನ್ ಲಿಂಗ್ಡೋಹ್, ಪಿಟಿ ಸೌಕಿಮಿ, ಕಿಮ್ಫಾ ಮಾರ್ಬನಿಯಾಂಗ್, ಮೈರಾಲ್ಬೋರ್ನ್ ಸೈಯೆಮ್ ಮತ್ತು ಮೊಹೆಂದ್ರೋ ರಾಪ್ಸಾಂಗ್ ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

    ಥಾಮಸ್ ಅವರಿಗೆ ಸಂಬಂಧಿಸಿದಂತೆ, ಸಮಿತಿಯು ಅವರನ್ನು ರಾಜ್ಯ ರಾಜಕೀಯ ವ್ಯವಹಾರಗಳ ಸಮಿತಿ ಮತ್ತು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಮಿತಿಯಿಂದ ತೆಗೆದುಹಾಕಲು ನಿರ್ಧರಿಸಿತು. ಜಾಖರ್ ವಿಚಾರವಾಗಿ ಅವರನ್ನು ಪಕ್ಷದ ಎಲ್ಲಾ ಸ್ಥಾನಗಳಿಂದ ವಜಾಗೊಳಿಸಲು ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.

    ಅವರನ್ನು ಎರಡು ವರ್ಷಗಳ ಕಾಲ ಅಮಾನತುಗೊಳಿಸಲು ಮತ್ತು ಪಕ್ಷದ ಎಲ್ಲಾ ಸ್ಥಾನಗಳಿಂದ ತೆಗೆದುಹಾಕಲು ಸಮಿತಿಯು ಮೊದಲು ನಿರ್ಧರಿಸಿತು. ಆದರೆ ನಂತರ ಅವರ ಕ್ರಮವನ್ನು ತಗ್ಗಿಸಿತು ಮತ್ತು ಅವರ ಅಮಾನತು ಕೈಬಿಡಲಾಯಿತು ಎಂದು ಮೂಲಗಳು ಸೂಚಿಸಿವೆ.

  • ಶಿಲ್ಲಾಂಗ್‍ನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ

    ಶಿಲ್ಲಾಂಗ್‍ನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸ್ಫೋಟ

    ಶಿಲ್ಲಾಂಗ್: ಮೇಘಾಲಯದ ಶಿಲ್ಲಾಂಗ್ ನಗರದ ಜನನಿಬಿಡ ಪೊಲೀಸ್ ಬಜಾರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿದೆ.

    ಸ್ಫೋಟದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಫೋಟ ಸಂಭವಿಸಿದ ಪ್ರದೇಶದಲ್ಲಿದ್ದ ಫೋನ್ ಅಂಗಡಿ ಹಾಗೂ ವೈನ್ ಅಂಗಡಿಯ ಮುಂಭಾಗಕ್ಕೆ ಹಾನಿಯಾಗಿದೆ. ಭಾನುವಾರ ಸಂಜೆ ಸುಮಾರು 6:15ರ ವೇಳೆ ಸಂಭವಿಸಿದ ಸ್ಫೋಟದ ಪ್ರದೇಶವನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದು, ಮಾರುಕಟ್ಟೆ ಪ್ರದೇಶವನ್ನು ಬ್ಯಾರಿಕೇಡ್‍ಗಳಿಂದ ಮುಚ್ಚಲಾಗಿದೆ. ಇದನ್ನೂ ಓದಿ: ಮಣಿಪುರ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಟಿಕೆಟ್‌ ವಂಚಿತರ ಬೆಂಬಲಿಗರಿಂದ ಪ್ರತಿಭಟನೆ

    ಸುಧಾರಿತ ಸ್ಫೋಟಕ ಸಾಧನದಿಂದ(ಐಇಡಿ) ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಸ್ಕ್ವಾಡ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಇದು ಯಾವ ರೀತಿಯ ಸ್ಫೋಟಕ ಎಂದು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಬ್ಬರು ಯುಎನ್ ತಜ್ಞರ ಹತ್ಯೆ – 51 ಮಂದಿಗೆ ಮರಣದಂಡನೆ

    ಇಂದು ಸಂಜೆ ಶಿಲ್ಲಾಂಗ್‍ನ ಪೊಲೀಸ್ ಬಜಾರ್‍ನಲ್ಲಿ ನಡೆದ ಸ್ಫೋಟವನ್ನು ಬಲವಾಗಿ ಖಂಡಿಸುತ್ತೇನೆ. ಶಾಂತಿ ಕದಡುವ ಹಾಗೂ ಹಾನಿ ಮಾಡುವ ಪ್ರಯತ್ನ ಹೇಡಿತನ. ದುಷ್ಕರ್ಮಿಗಳಿಗೆ ಸರಿಯಾದ ಪಾಠ ಕಲಿಸುತ್ತೇವೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುತ್ತೇವೆ ಎಂದು ಸ್ಫೋಟದ ಬಗ್ಗೆ ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ತಿಳಿಸಿದರು.

  • ವಿಷಪೂರಿತ ಕಾಡು ಅಣಬೆ ಸೇವಿಸಿ ಐವರು ದುರ್ಮರಣ

    ವಿಷಪೂರಿತ ಕಾಡು ಅಣಬೆ ಸೇವಿಸಿ ಐವರು ದುರ್ಮರಣ

    – 3 ಕುಟುಂಬದ 18 ಮಂದಿ ಸೇವಿಸಿದ್ರು
    – ಮೃತರ ಸಂಖ್ಯೆ ಏರಿಕೆ ಸಾಧ್ಯತೆ

    ಶಿಲ್ಲಾಂಗ್: ವಿಷಪೂರಿತ ಕಾಡು ಅಣಬೆ ಸೇವಿಸಿ ಐವರು ಮೃತಪಟ್ಟಿರುವ ಘಟನೆ ಮೇಘಾಲಯದ ಪಶ್ಚಿಮ ಭಾಗದ ಜೈತಿಂಯಾ ಪರ್ವತ ಜಿಲ್ಲೆಯಲ್ಲಿ ನಡೆದಿದೆ.

    ಮೃತರನ್ನು ಖೊಂಗ್ಲಾ (23), ಈತನ ಸಹೋದರ ಕಟ್ಡಿಲಿಯಾ ಖೊಂಗ್ಲಾ (26), ಸಿನ್ರಾನ್ ಖೊಂಗ್ಲಾ (16), ಲ್ಯಾಪಿನ್‍ಶಾಯ್ ಖೊಂಗ್ಲಾ (28) ಮತ್ತು ಮೋರಿಸನ್ ಧಾರ್ (40) ಎಂದು ಗುರುತಿಸಲಾಗಿದೆ.

    ಒಂದು ವಾರದ ಹಿಂದೆ ಭಾರತ-ಬಾಂಗ್ಲಾದೇಶ ಗಡಿಯ ಅಮ್ಲಾರೆಮ್ ಉಪವಿಭಾಗದ ಲ್ಯಾಮಿನ್ ಗ್ರಾಮದಲ್ಲಿ ಮೂರು ಕುಟುಂಬಗಳ ಒಟ್ಟು 18 ಜನರು ಕಾಡು ಅಣಬೆಗಳನ್ನು ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ತೀವ್ರ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದುವರೆಗೆ ಚಿಕಿತ್ಸೆ ಫಲಕಾರಿಯಾಗದೆ ಐವರು ಮೃತಪಟ್ಟಿದ್ದಾರೆ.

    ಖೊಂಗ್ಲಾ ಯುವಕನನ್ನು ಈಶಾನ್ಯ ಪ್ರಾದೇಶಿಕ ಇಂದಿರಾ ಗಾಂಧಿ ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ. ಇನ್ನೂ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

    ಸದ್ಯಕ್ಕೆ ಕಟ್ಡಿಲಿಯಾ ಸಹೋದರಿಯರಾದ ಮರಿಯಾಬಾ ಮತ್ತು ವನ್ರಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿಲ್ಲಾಂಗ್‍ನ ವುಡ್‍ಲ್ಯಾಂಡ್ ಆಸ್ಪತ್ರೆಯಲ್ಲಿ ಮೃತ ಮೋರಿಸನ್ ಮಗ 7 ವರ್ಷದ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಇತರೆ ಹತ್ತು ಜನರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.