Tag: shiradi ghat

  • ಸಾಲು ಸಾಲು ರಜೆ ಎಫೆಕ್ಟ್‌ – ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌, ಹೈರಾಣದ ಪೊಲೀಸರು!

    ಸಾಲು ಸಾಲು ರಜೆ ಎಫೆಕ್ಟ್‌ – ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌, ಹೈರಾಣದ ಪೊಲೀಸರು!

    ಹಾಸನ: ಸಾಲು ಸಾಲು ರಜೆ ಹಿನ್ನೆಲೆ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಸಂಖ್ಯೆಯಲ್ಲಿ ಜನ ತೆರಳುತ್ತಿದ್ದಾರೆ. ಪರಿಣಾಮ ಸಕಲೇಶಪುರ (Sakaleshapura) ಶಿರಾಡಿಘಾಟ್ (Shiradi Ghat) ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.

    ಸಾವಿರಾರರು ವಾಹನಗಳಲ್ಲಿ ಬೆಂಗಳೂರಿನಿಂದ ಮಂಗಳೂರು, ಮಂಗಳೂರು ಕಡೆಯಿಂದ ಬೆಂಗಳೂರಿಗೆ ಜನ ತೆರಳುತ್ತಿದ್ದಾರೆ. ಇದರಿಂದ ಸುಮಾರು ಅರ್ಧ ಗಂಟೆಯಿಂದ ವಾಹನಗಳು ಕಿಲೋ ಮೀಟರ್‌ಗಟ್ಟಲೇ ಸಾಲುಗಟ್ಟಿ ನಿಂತಿವೆ. ಟ್ರಾಫಿಕ್‌ ಜಾಮ್‌ನಿಂದ ಪ್ರವಾಸಿಗರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ. ಇದನ್ನೂ ಓದಿ: ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಮುಳ್ಳಯ್ಯನಗಿರಿ ಬಳಿ 5 ಕಿ.ಮೀ ಸಾಲುಗಟ್ಟಿ ನಿಂತ ವಾಹನಗಳು

    ದಸರಾ ಪ್ರಯುಕ್ತ ಸಾಲು ಸಾಲು ರಜೆಯಿಂದಾಗಿ ಪ್ರವಾಸಿಗರು ಪ್ರವಾಸಿ ತಾಣಗಳುಗೆ ತೆರಳುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಕೆಲಸ ಮಾಡುವವರು ಸ್ವಂತ ಊರಿಗೆ ತೆರಳುತ್ತಿದ್ದಾರೆ. ಇದರ ನಡುವೆ ಕೆಲವರು ಊರಿಂದ ವಾಪಸ್‌ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಟ್ರಾಫಿಕ್‌ನಲ್ಲಿ ಸಿಲುಕುವಂತಾಗಿದೆ.

    ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ಸಕಲೇಶಪುರ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ಮಲೆನಾಡಿಗರ ಸ್ಪೆಷಲ್‌ ಬರಗಾಪಿಗೆ ಮನಸೋತ ಪ್ರವಾಸಿಗರು!

  • ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ – ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

    ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ – ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

    – ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್
    – ಸಂಕಷ್ಟಕ್ಕೆ ಸಿಲುಕಿದ ಸಾವಿರಾರು ಸವಾರರು

    ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (NH 75) ಭೂಕುಸಿತ (Landslide) ಉಂಟಾಗಿದೆ. ಭೂಕುಸಿತ ಹಿನ್ನೆಲೆ ವಾಹನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

    ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಶಿರಾಡಿ ಘಾಟ್ (Shiradi Ghat) ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ (Traffic Jam) ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ಬುರುಡೆ ಸಿಕ್ಕಿದ್ದೆಲ್ಲಿ? ತಂದಿದ್ದೆಲ್ಲಿ? – ಅನಾಮಿಕ ದೂರುದಾರನ ತೀವ್ರ ವಿಚಾರಣೆ

    ಭೂಕುಸಿತ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಆಗಿದ್ದು, ನೂರಾರು ವಾಹನಗಳು ರಸ್ತೆ ಮಧ್ಯೆ ನಿಂತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ ಸ್ವಾಮೀಜಿ ಭೈರವೈಕ್ಯ – ನಾಥ ಸಂಪ್ರದಾಯದಂತೆ ನೆರವೇರಿದ ಅಂತ್ಯ ಸಂಸ್ಕಾರ

    ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಮಾರನಹಳ್ಳಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಸಾವಿರಾರು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಇದನ್ನೂ ಓದಿ: ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲ್ಸ ಆಗ್ತಿದೆ: ವಿಶ್ವನಾಥ್‌

  • ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

    ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

    ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (Car) ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpura) ತಾಲೂಕಿನ ಶಿರಾಡಿಘಾಟ್ (Shiradi Ghat) ರಸ್ತೆಯಲ್ಲಿ ನಡೆದಿದೆ.

    ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಫಾಲ್ಸ್‌ಗೆ ಕಾರು ಉರುಳಿ ಬಿದ್ದಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಲೆನಾಡು ಭಾಗದಲ್ಲಿ ಬಾರಿ ಮಳೆಯಿಂದ ಕಿರು ಜಲಪಾತಗಳು ತುಂಬಿ ಹರಿಯುತ್ತಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: ಹಿರಿಯ ನಟಿ ಬಿ. ಸರೋಜಾದೇವಿ ನಿಧನ – ಡಿಕೆಶಿ ಸಂತಾಪ

    ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಆಲ್ಕರಜ್‌ ಹ್ಯಾಟ್ರಿಕ್‌ ಕನಸು ಭಗ್ನ- ಚೊಚ್ಚಲ ವಿಂಬಲ್ಡನ್‌ ಗೆದ್ದ ಸಿನ್ನರ್‌ | ನಗದು ಬಹುಮಾನ ಎಷ್ಟು?

  • ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ | ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್

    ಮಾರನಹಳ್ಳಿಯಲ್ಲಿ ಗುಡ್ಡ ಕುಸಿತ | ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್

    ಹಾಸನ: ಮುಂಗಾರು ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು (Bengaluru- Mangaluru) ಸಂಪರ್ಕ ಕಡಿತವಾಗಿದೆ.

    ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ (Shiradi Ghat) ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟ; ರಣಪ್ರವಾಹಕ್ಕೆ ಇಬ್ಬರು ಬಲಿ, 15-20 ಕಾರ್ಮಿಕರು ಕೊಚ್ಚಿ ಹೋಗಿರುವ ಶಂಕೆ

    ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸಬೇಕು. ಮಂಗಳೂರು ಕಡೆಯಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸಂಪಾಜೆ ಘಾಟ್‌ ಬಳಸುವಂತೆ ಹಾಸನ ಡಿಸಿ ಕೆ.ಎಸ್.ಲತಾಕುಮಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

  • ಮಲೆನಾಡು ಭಾಗದಲ್ಲಿ ಭಾರೀ ಮಳೆ – ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ

    ಮಲೆನಾಡು ಭಾಗದಲ್ಲಿ ಭಾರೀ ಮಳೆ – ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ

    ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರಂಭವಾಗಿದ್ದು, ಶಿರಾಡಿಘಾಟ್ (Shiradi Ghat) ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.

    ಸಕಲೇಶಪುರ (Sakaleshpura) ತಾಲೂಕಿನ ಮಾರನಹಳ್ಳಿ ಸಮೀಪ ಭೂಕುಸಿತದ ಪರಿಣಾಮ ರಸ್ತೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಧಿಕಾರಿಗಳು ಇಟಾಚಿ, ಲಾರಿ ಮೂಲಕ ಮಣ್ಣು ತೆರವು ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರಲ್ಲಿ ಕಡಲಬ್ಬರ – ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

    ಮಣ್ಣು ಕುಸಿದ ಕೂಡಲೇ ಇಟಾಚಿ ಮೂಲಕ ಮಣ್ಣು ತೆರವು ಕಾರ್ಯಕ್ಕೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಕುಸಿಯುವ ಆತಂಕ ಎದುರಾಗಿದೆ. ಇದನ್ನೂ ಓದಿ: ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

  • ಹಾಸನದಲ್ಲಿ ವರುಣಾರ್ಭಟ; ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

    ಹಾಸನದಲ್ಲಿ ವರುಣಾರ್ಭಟ; ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

    – ಆತಂಕದಲ್ಲಿ ಓಡಾಡುತ್ತಿರೋ ವಾಹನ ಸವಾರರು

    ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಪರಿಣಾಮ ಶಿರಾಡಿಘಾಟ್ (Shiradi Ghat) ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ.

    ಸಕಲೇಶಪುರ (Sakaleshpura) ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು 90 ಡಿಗ್ರಿ ಮಾದರಿಯಲ್ಲಿ ನೂರು ಅಡಿಗಳಷ್ಟು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ; ಮಳೆಗೆ ಕೊಚ್ಚಿಹೋದ 15 ವಾಹನಗಳು

    ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ ನೆಲಕ್ಕುರುಳಿವೆ. ಬಿರುಗಾಳಿ ಸಹಿತ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಆಗಿದೆ. ವಾಹನ ಸವಾರರು ಆತಂಕದಿಂದ ಪ್ರಯಾಣಿಕರು ಪರಿಸ್ಥಿತಿ ಎದುರಾಗಿದೆ.

    ವೀಕೆಂಡ್ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ವಾಹನಗಳ ಓಡಾಟ ಹೆಚ್ಚಾಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – ರಸ್ತೆಯಲ್ಲಿ ಹೊಳೆಯಂತೆ ಹರಿದ ನೀರು, ಧರೆಗುರುಳಿದ ಮರಗಳು

  • 9 ವರ್ಷವಾದ್ರೂ ಪೂರ್ಣಗೊಳ್ಳದ ಶಿರಾಡಿ ಘಾಟ್ ರಸ್ತೆ – ಅಧಿಕ ಮಳೆಯಾದರೆ ಅನಾಹುತ ಫಿಕ್ಸ್?

    9 ವರ್ಷವಾದ್ರೂ ಪೂರ್ಣಗೊಳ್ಳದ ಶಿರಾಡಿ ಘಾಟ್ ರಸ್ತೆ – ಅಧಿಕ ಮಳೆಯಾದರೆ ಅನಾಹುತ ಫಿಕ್ಸ್?

    – ಜೂನ್ ಮೊದಲ ವಾರದೊಳಗೆ ಕಾಮಗಾರಿ ಮುಗಿಸುವಂತೆ ಒತ್ತಾಯ

    ಹಾಸನ: ಕಳೆದ 9 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಶಿರಾಡಿ ಘಾಟ್ (Shiradi Ghat) ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇನ್ನೇನು ಮಳೆಗಾಲ ಸಮೀಪಿಸುತ್ತಿದ್ದು, ಅಷ್ಟರಲ್ಲಿ ಕಾಮಗಾರಿ ಮುಗಿಯದಿದ್ದರೆ ಈ ಬಾರಿಯೂ ವಾಹನ ಸಂಚಾರ ಅಸ್ತವ್ಯಸ್ತವಾಗುವುದು ಖಚಿತವಾಗಿದೆ. ಆದ್ದರಿಂದ ಕಾಮಗಾರಿ ಬೇಗ ಮುಗಿಸುವಂತೆ ಈ ಭಾಗದ ಜನರು ಆಗ್ರಹಿಸಿದ್ದಾರೆ.

    ಹಾಸನ ಮಾರ್ಗವಾಗಿ ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾದ ಎನ್‌ಹೆಚ್ 75ರ ಶಿರಡಿ ಘಾಟ್ ರಸ್ತೆ ಕಾಮಗಾರಿ ಆರಂಭಗೊಂಡು ಬರೋಬ್ಬರಿ 9 ವರ್ಷಗಳು ಕಳೆದಿವೆ. ಆದರೆ ಇದುವರೆಗೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಸನದಿಂದ ಸಕಲೇಶಪುರದವರೆಗೂ ಮಾತ್ರ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಸಕಲೇಶಪುರದಿಂದ ಮಾರನಹಳ್ಳಿವರೆಗೆ ಚತುಷ್ಪಥ ಸಿಮೆಂಟ್ ರಸ್ತೆ ಕಾಮಗಾರಿ ಇನ್ನೂ ನಡೆಯುತ್ತಲೇ ಇದೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು

    ಕಳೆದ ಎರಡು ತಿಂಗಳ ಹಿಂದೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಏಪ್ರಿಲ್ ಅಂತ್ಯ ಅಥವಾ ಮೇ ಮೊದಲ ವಾರದಲ್ಲಿ ರಸ್ತೆ ಕಾಮಗಾರಿ (Road Construction) ಮುಗಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಗಡುವು ನೀಡಿದ್ದರು. ಆದರೆ ಏಪ್ರಿಲ್ ತಿಂಗಳು ಮುಗಿಯುತ್ತಾ ಬಂದಿದ್ದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಇದನ್ನೂ ಓದಿ: ಕಾರವಾರ| ಮಟ್ಕಾ ಆಡಿಸಲು ಲಂಚ ಪಡೆದ ಪೊಲೀಸ್‌ಗೆ 8 ವರ್ಷಗಳ ಬಳಿಕ ಜೈಲು ಶಿಕ್ಷೆ

    ಚತುಷ್ಪಥ ರಸ್ತೆ ಕಾಮಗಾರಿಗಾಗಿ ಹಲವರಿಂದ ಭೂಸ್ವಾಧೀನಪಡಿಸಿಕೊಂಡಿದ್ದು, ಸರಿಯಾದ ಪರಿಹಾರ ನೀಡದ ಹಿನ್ನಲೆಯಲ್ಲಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದಾಗಿ ಆನೆಮಹಲ್ ಬಳಿ ರಸ್ತೆ ಅಗಲೀಕರಣ ಕಾಮಗಾರಿ ನಡೆಸಲು ಸಾಧ್ಯವಾಗಿಲ್ಲ. ಇದನ್ನು ಮನಗಂಡಿರುವ ಸ್ಥಳೀಯ ಶಾಸಕ ಸಿಮೆಂಟ್ ಮಂಜು, ಭೂಮಿ ನೀಡದವರ ಜೊತೆ ಚರ್ಚಿಸಿ ಕಾಮಗಾರಿ ನಡೆಸಲು ಅವಕಾಶ ಕಲ್ಪಿಸಿಕೊಡುವುದಾಗಿ ಹೇಳಿದ್ದಾರೆ. ಇನ್ನೊಂದೆಡೆ ರಸ್ತೆ ಅಗಲೀಕರಣಕ್ಕಾಗಿ ಎರಡು ಬದಿಗಳಲ್ಲಿ ನೂರು ಅಡಿಯಷ್ಟು ಗುಡ್ಡವನ್ನು ಬಗೆಯಲಾಗಿದೆ. ಮಣ್ಣು ಕುಸಿತವಾಗುತ್ತಿರುವ ಕಡೆಗಳಲ್ಲಿ ಗೆಬ್ರಿಯನ್ ವಾಲ್ ನಿರ್ಮಿಸಲಾಗುತ್ತಿದೆ. ಒಂದು ವೇಳೆ ಭಾರಿ ಮಳೆಯಿಂದ ಮಣ್ಣು ಕುಸಿತವಾದರೆ ಗೆಬ್ರಿಯನ್ ವಾಲ್‌ಗಳು ಕೂಡ ಕುಸಿತವಾಗುವ ಸಂಭವವಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಭಾರೀ ಮಳೆ – ಬೃಹತ್‌ ಮರಗಳು, ವಿದ್ಯುತ್ ಕಂಬಗಳು ಧರೆಗೆ

    ಕಳೆದ ಬಾರಿಯಂತೆ ಈ ಬಾರಿಯೂ ಅಧಿಕ ಪ್ರಮಾಣದಲ್ಲಿ ಮಳೆಯಾದರೇ ಅನಾಹುತ ಸಂಭವಿಸುವುದರ ಜೊತೆಗೆ ರಸ್ತೆ ಸಂಚಾರಕ್ಕೆ ಅಡ್ಡಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ; ರಾಯಚೂರಲ್ಲಿ ಸಿಡಿಲಿಗೆ ಇಬ್ಬರು ಬಲಿ

  • ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ಕೇಂದ್ರ ಒಪ್ಪಿಗೆ

    ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ಕೇಂದ್ರ ಒಪ್ಪಿಗೆ

    – ಹೆದ್ದಾರಿ ಕಾಮಗಾರಿಗೆ ಪರಿಸರವಾದಿಗಳ ತೀವ್ರ ಆಕ್ರೋಶ

    ಹಾಸನ: ಮಂಗಳೂರು-ಬೆಂಗಳೂರು (Mangaluru-Bengaluru) ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‌ನಲ್ಲಿ ಸುರಂಗ, ಗ್ರೀನ್ ಫೀಲ್ಡ್ ಮಾರ್ಗ ನಿರ್ಮಾಣ ಕಾಮಗಾರಿ ಕುರಿತು ಸಮಗ್ರ ಯೋಜನಾ ವರದಿ (DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

    2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಸುರಂಗ ಮಾರ್ಗ ಕಾರ್ಯಸಾಧುವಲ್ಲ, ಇದಕ್ಕೆ ಭಾರೀ ಮೊತ್ತ ಬೇಕಾಗುತ್ತದೆ ಎಂದು ತಿರಸ್ಕರಿಸಿದ್ದರು. ಆದರೆ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಹಾಸನ ಜಿಲ್ಲೆಯ ಮಲೆನಾಡು ಭಾಗದ ಶಾಸಕರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕೇಂದ್ರದ ಮೇಲೆ ಒತ್ತಡ ತಂದ ಹಿನ್ನೆಲೆಯಲ್ಲಿ ಡಿಪಿಆರ್ ತಯಾರಿಸಲು ಇದೀಗ ಒಪ್ಪಿಗೆ ಸಿಕ್ಕಿದೆ. ಆದರೆ ಇದಕ್ಕೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ:

    ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಒಟ್ಟು 26 ಕಿ.ಮೀ ಉದ್ದದ ಯೋಜನೆ ಇದಾಗಿದ್ದು, 3.8 ಕಿ.ಮೀ ಸುರಂಗ ಇದ್ದರೆ, 10 ಕಿ.ಮೀ ರಸ್ತೆ ಇರಲಿದೆ. ಮಾರನಹಳ್ಳಿಯಿಂದ ಪ್ರಾರಂಭವಾಗಿ ಅಡ್ಡಹೊಳೆಯವರೆಗೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಇಲ್ಲಿ ಬಹಳಷ್ಟು ಅರಣ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ವಿವರವಾದ ಅಂದಾಜು ಮಾಡಬೇಕಿದೆ. ಕೆಲವು ಕಡೆಗಳಲ್ಲಿ ಫ್ಲೈ ಓವರ್‌ಗಳ ನಿರ್ಮಾಣ ಕೂಡ ಆಗಬೇಕಿದೆ. ಇದಕ್ಕೆ ದುಬಾರಿ ವೆಚ್ಚವಾಗುವುದರಿಂದ ಇದನ್ನು ಕೇಂದ್ರ ಸರ್ಕಾರವೇ ಭರಿಸಬೇಕಾಗಿದೆ. ಸುರಂಗ ನಿರ್ಮಾಣ ಮಾಡುವುದರಿಂದ ಭೂಸ್ವಾಧೀನ ಜವಾಬ್ದಾರಿ ಕೂಡ ರಾಜ್ಯ ಸರ್ಕಾರ ಹೆಗಲಿಗೆ ಬೀಳಲಿದೆ. ರಾಜ್ಯ ಸರ್ಕಾರವು ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಲು ಸಿದ್ಧವಿದ್ದರೆ, ಶಿರಾಡಿಘಾಟ್ ರಸ್ತೆಯನ್ನು ಅಭಿವೃದ್ಧಿಪಡಿಸಲು ಹಣ ಹೂಡಿಕೆ ಮಾಡಲು ತಮ್ಮ ಇಲಾಖೆ ಪರಿಗಣಿಸಲಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈಗಾಗಲೇ ಭರವಸೆ ನೀಡಿದ್ದಾರೆ.

    ಸಕಲೇಶಪುರದಿಂದ ಗುಂಡ್ಯದವರೆಗೂ ಚತುಷ್ಪಥ ರಸ್ತೆ ಮಾಡಲು ಹಲವು ರೀತಿಯ ಸಮಸ್ಯೆಗಳು ಎದುರಾಗಿವೆ. ರಸ್ತೆ ವಿಸ್ತರಣೆ ಮಾಡುತ್ತಿರುವುದರಿಂದ ಲಕ್ಷಾಂತರ ಗಿಡ ಮರಗಳನ್ನು ಕಡಿಯಬೇಕಾಗುತ್ತದೆ. ಇದರಿಂದ ಮುಂದೆ ಭಾರೀ ಅನಾಹುತ ಆಗಲಿದೆ ಎನ್ನುವ ಕಾರಣಕ್ಕೆ ಸುರಂಗ ಯೋಜನೆಯೇ ಉತ್ತಮ ಎಂದು ರಾಜ್ಯ ಸರ್ಕಾರ ಸಮರ್ಥನೆ ಮಾಡಿಕೊಂಡಿದೆ. ಇದಕ್ಕೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿ, ಈಗಾಗಲೇ ರಸ್ತೆ ಕಾಮಗಾರಿಗೆ ಗುಡ್ಡಗಳನ್ನು ಕತ್ತರಿಸಿ ರಸ್ತೆ ವಿಸ್ತರಣೆ ಮಾಡಿರುವುದರಿಂದ ಮಳೆಗಾಲದಲ್ಲಿ ಭೂಕುಸಿತ ಉಂಟಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸುರಂಗ ಮಾರ್ಗ ನಿರ್ಮಾಣ ಮಾಡಿದರೆ ಪಶ್ಚಿಮಘಟ್ಟದ ಮೇಲೆ ಇನ್ನಷ್ಟು ದುಷ್ಪರಿಣಾಮ ಬೀರಲಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನು ಲೆಕ್ಕಿಸದೆ ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಒತ್ತಡ ತಂದು ಸುರಂಗ ಮಾರ್ಗ ಮಾಡಲು ಮುಂದಾಗಿದೆ.

    ಪಶ್ಚಿಮಘಟ್ಟದಲ್ಲಿ ಸುರಂಗ ನಿರ್ಮಾಣ ಮಾಡುವುದರಿಂದ ಜೀವ ವೈವಿಧ್ಯತೆ ಮೇಲೆ ಮಾರಕ ಪರಿಣಾಮ ಬೀರಬಹುದು ಎನ್ನುವುದು ಪರಿಸರವಾದಿಗಳು ಹಾಗೂ ಮಲೆನಾಡು ಭಾಗದ ಜನರ ಆತಂಕವಾಗಿದೆ. ರಸ್ತೆ ಅಗಲೀಕರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾದರೆ, ಸುರಂಗ ಮಾರ್ಗ ಸ್ವಲ್ಪಮಟ್ಟಿಗೆ ಕಡಿಮೆ ಹಾನಿ ಮಾಡಬಹುದು ಎಂದು ಸರ್ಕಾರ ಬಿಂಬಿಸುತ್ತಿದ್ದರೂ ಪರಿಸರವಾದಿಗಳು ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ಸುರಂಗ ಯೋಜನೆಯ ಪರ ಮತ್ತು ವಿರುದ್ಧವಾಗಿಯೂ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಅಪರೂಪದ ಜೀವ ವೈವಿದ್ಯತೆಗಳಿರುವ ಪಶ್ಚಿಮಘಟ್ಟ ಅತೀ ಸೂಕ್ಷ್ಮ ಪರಿಸರ ವಲಯವಾಗಿರುವುದರಿಂದ ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯನಡೆಸುವುದು ಸೂಕ್ತವಲ್ಲವೆಂದು ಈಗಾಗಲೇ ಮಾಧವ್ ಗಾಡ್ಗೀಳ್, ಕಸ್ತೂರಿ ರಂಗನ್ ವರದಿ ತಿಳಿಸಿರುವುದರಿಂದ ಇದನ್ನೇ ಮುಂದಿಟ್ಟುಕೊAಡು ಪರಿಸರವಾದಿಗಳು ಹಾಗೂ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

    ಒಟ್ಟಿನಲ್ಲಿ ಕಳೆದ ಏಳು ವರ್ಷಗಳಿಂದ ಶಿರಾಡಿಘಾಟ್ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದ್ದು, ಇದಕ್ಕಾಗಿ ಗುಡ್ಡಗಳನ್ನು ಬಗೆದು ಪರಿಸರಕ್ಕೆ ಹಾನಿ ಮಾಡಲಾಗಿದೆ. ಇದರ ಜೊತೆಗೆ ಎತ್ತಿನಹೊಳೆ ಕಾಮಗಾರಿಗಾಗಿ ಸಾಕಷ್ಟು ಪಶ್ಚಿಮಘಟ್ಟ ನಾಶವಾಗಿದ್ದು, ಇದೀಗ ಟನಲ್ ನಿರ್ಮಾಣಕ್ಕೆ ಮುಂದಾಗಿರುವುದು ಪರಿಸರವಾದಿಗಳು, ಮಲೆನಾಡು ಭಾಗದ ಜನರು ಹಾಗೂ ಸರ್ಕಾರಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಹೆಚ್ಚಾಗಿದೆ.ಇದನ್ನೂ ಓದಿ:

     

  • ಶಿರಾಡಿಯಲ್ಲಿ ಸುರಂಗ ಮಾರ್ಗ – ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ

    ಶಿರಾಡಿಯಲ್ಲಿ ಸುರಂಗ ಮಾರ್ಗ – ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ

    ನವದೆಹಲಿ: ಮಂಗಳೂರು-ಬೆಂಗಳೂರು (Mangaluru-Bengaluru) ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ (Shiradi Ghat) ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ(DPR) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

    ಸುರಂಗ (Tunnel Project) ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದನ್ನೂ ಓದಿ: ಇನ್ನು ಮುಂದೆ 5, 8ನೇ ಕ್ಲಾಸ್‌ನಲ್ಲಿ ವಿದ್ಯಾರ್ಥಿಯನ್ನು ಫೇಲ್‌ ಮಾಡಬಹುದು

    ಏನಿದು ಸುರಂಗ ಮಾರ್ಗ?
    ಒಟ್ಟು 30 ಕಿಲೋಮೀಟರ್ ಉದ್ದದ ಯೋಜನೆ ಇದಾಗಿದ್ದು 3.8 ಕಿಲೋಮೀಟರ್ ಸುರಂಗ ಇದ್ದರೆ, 10 ಕಿ.ಮೀ ವಯಡಕ್ಟ್‌ ಇರಲಿದೆ. ಮಾರೇನಹಳ್ಳಿಯಿಂದ ಪ್ರಾರಂಭವಾಗಿ ಅಡ್ಡಹೊಳೆಯವರೆಗೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಇಲ್ಲಿ ಬಹಳಷ್ಟು ಅರಣ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ವಿವರವಾದ ಅಂದಾಜು ಮಾಡಬೇಕಿದೆ ಎಂದು ಹಿಂದೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದರು.

    ಕರ್ನಾಟಕ ಸರ್ಕಾರವು ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಲು ಸಿದ್ಧವಿದ್ದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೆಲವು ಸಾವಿರ ಕೋಟಿಗಳನ್ನು ಹೂಡಿಕೆ ಮಾಡಲು ತಮ್ಮ ಇಲಾಖೆ ಪರಿಗಣಿಸಲಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದರು.

     

  • Karnataka Rain Alert: ಮಳೆ ಕಡಿಮೆಯಾದ್ರೂ ನಿಲ್ಲದ ಅವಾಂತರ; ಕರಾವಳಿಯಲ್ಲಿ ಅಪಾಯದ ಮಟ್ಟ ಮೀರಿದ ನದಿಗಳು

    Karnataka Rain Alert: ಮಳೆ ಕಡಿಮೆಯಾದ್ರೂ ನಿಲ್ಲದ ಅವಾಂತರ; ಕರಾವಳಿಯಲ್ಲಿ ಅಪಾಯದ ಮಟ್ಟ ಮೀರಿದ ನದಿಗಳು

    – ಕದ್ರಾ ಜಲಾಶಯದಿಂದ 67 ಸಾವಿರ ಕ್ಯುಸೆಕ್‌ ನೀರು ಹೊರಕ್ಕೆ

    ಬೆಂಗಳೂರು: ರಾಜ್ಯದಲ್ಲಿ ಮಳೆಯ (Karnataka Rains) ಪ್ರಮಾಣ ಕೊಂಚ ಇಳಿಕೆಯಾದರೂ ಅವಾಂತರಗಳು ಮುಂದುವರಿದಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫಲ್ಗುಣಿ ನದಿಯ ಅಬ್ಬರ ಮುಂದುವರಿಯುತ್ತಲೇ ಇದೆ.

    ಮಂಗಳೂರಿನಲ್ಲಿ (Mangaluru) ಅದ್ಯಪಾಡಿ ಗ್ರಾಮ ಸಂಪೂರ್ಣ ಜಲಾವೃತವಾಗಿದ್ದು, 30ಕ್ಕೂ ಹೆಚ್ಚು ಮನೆಗಳಿಗೆ ಜಲ ದಿಗ್ಭಂಧನವಾಗಿದೆ. ಸಂತ್ರಸ್ತರನ್ನ ದೋಣಿಗಳ ಮೂಲಕ ಸ್ಥಳಾಂತರಿಸಲಾಗಿದೆ. ನೆರೆ ಪ್ರದೇಶಗಳ ಡ್ರೋನ್‌ ದೃಶ್ಯಗಳು ಸೆರೆಯಾಗಿವೆ. ಉತ್ತರ ಕನ್ನಡದಲ್ಲೂ ನದಿಗಳು (UttaraKannada Rivers) ಅಪಾಯ ಮಟ್ಟ ಮೀರಿ ಹರಿಯುತ್ತಿವೆ.

    ಕದ್ರಾ ಜಲಾಶಯದಿಂದ 67 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹೊರಬಿಟ್ಟಿರುವ ಕಾರಣ 20ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಈಗಾಗಲೇ ಮಹಾ ಮಾಯಿ ದೇವಸ್ಥಾನ ಮುಳುಗಡೆಯಾಗಿದೆ. ಇದನ್ನೂ ಓದಿ: ವಯನಾಡಿನಲ್ಲಿ ಸಾವಿನ ಸುರಿ`ಮಳೆ’ – ಗುರುತು ಸಿಗದಷ್ಟು ಛಿದ್ರಗೊಂಡಿರುವ ದೇಹಗಳು; ಶವಗಳ ಶೋಧಕ್ಕೆ ಶ್ವಾನಪಡೆ!

    ಲಿಂಗನಮಕ್ಕಿ ಜಲಾಶಯದಿಂದ ಅಪಾರ ನೀರು ರಿಲೀಸ್ ಮಾಡಲಾಗಿದೆ. ಹೊಸನಗರದ ಸವೆಹಕ್ಲು ಡ್ಯಾಂ ಕೋಡಿ ಬಿದ್ದಿದ್ದು, ಜಲಪಾತದಂತೆ ನೀರು ಹರಿಯುತ್ತಿದೆ. ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಮಳೆ ತಗ್ಗಿದರೂ ಬೆಳಗಾವಿ ಭಾಗದಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಇದನ್ನೂ ಓದಿ: ಪ್ರೀತಿಯ ಭಾರತೀಯ ಸೇನೆ..; ವಯನಾಡಲ್ಲಿ ರಕ್ಷಣೆಗೆ ನಿಂತ ಸೈನಿಕರಿಗೆ ಪುಟ್ಟ ಬಾಲಕ ಸೆಲ್ಯೂಟ್‌

    ಅಥಣಿ ತಾಲೂಕಿನ ಸವದಿ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ಹಾಸನದ ಶಿರಾಡಿಘಾಟ್ ರಸ್ತೆಯ ಭೂ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆಲಮಟ್ಟಿ ಜಲಾಶಯ ತುಂಬಿ ಹರಿವ ದೃಶ್ಯಗಳು ರುದ್ರ ರಮಣೀಯವಾಗಿವೆ. ಇನ್ನು, ಜೋಗದ ಅದ್ಭುತ ದೃಶ್ಯ ಡ್ರೋನ್ ಕಣ್ಣಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಶಿರಾಡಿಘಾಟ್‌ ಭೂಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿಯೇ ಕಾರಣ – ಕೇಂದ್ರಕ್ಕೆ ಮನವರಿಕೆ ಮಾಡುತ್ತೇವೆಂದ ಸಿಎಂ