Tag: shiradi ghat

  • ಶಿರಾಡಿ ಘಾಟ್‍ನಲ್ಲಿ ಲಾರಿ ಪಲ್ಟಿ- ಮಣ್ಣಿನಡಿ ಸಿಲುಕಿದ ಚಾಲಕ

    ಶಿರಾಡಿ ಘಾಟ್‍ನಲ್ಲಿ ಲಾರಿ ಪಲ್ಟಿ- ಮಣ್ಣಿನಡಿ ಸಿಲುಕಿದ ಚಾಲಕ

    – ಕ್ಲೀನರ್ ಕಾಲು ಕಟ್

    ಹಾಸನ: ಚಲಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.

    ಶಿರಾಡಿಘಾಟ್ ರಸ್ತೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಿರುವಿನಲ್ಲಿ ಉರುಳಿಬಿದ್ದಿದೆ. ಬಿದ್ದ ರಭಸಕ್ಕೆ ಒಂದಷ್ಟು ಮಣ್ಣು ಲಾರಿ ಮೇಲೆ ಕುಸಿದಿದೆ. ಪರಿಣಾಮ ಚಾಲಕ ಮಣ್ಣಿನಡಿಯಲ್ಲಿ ಸಿಲುಕಿದ್ದಾನೆ.

    ಲಾರಿ ಕ್ಲೀನರ್‍ನ ಕಾಲು ಕಟ್ ಆಗಿದೆ. ಮಣ್ಣಿನಡಿ ಸಿಲುಕಿರುವ ಚಾಲಕನ ರಕ್ಷಣಾ ಕಾರ್ಯ ಸಾಗಿದೆ. ಅಪಘಾತದಲ್ಲಿ ಗಾಯಗೊಂಡ ಕ್ಲೀನರ್ ನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬರ್ತ್‍ಡೇ ಪಾರ್ಟಿಯಲ್ಲಿ ವೈದ್ಯೆ ಮೇಲೆ ಸಹೋದ್ಯೋಗಿಯಿಂದ ಅತ್ಯಾಚಾರ

  • ಶಿರಾಡಿ ಘಾಟ್‍ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ – 2 ಗಂಟೆ ಕಾರ್ಯಾಚರಣೆ ನಂತ್ರ ಚಾಲಕನ ರಕ್ಷಣೆ

    ಶಿರಾಡಿ ಘಾಟ್‍ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ – 2 ಗಂಟೆ ಕಾರ್ಯಾಚರಣೆ ನಂತ್ರ ಚಾಲಕನ ರಕ್ಷಣೆ

    ಹಾಸನ: ಮಂಗಳೂರಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.

    ಟ್ಯಾಂಕರ್ ಉರುಳಿಬಿದ್ದ ಪರಿಣಾಮ, ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಲಾರಂಭಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಾರನಹಳ್ಳಿ ಸಮೀಪ ಹಾಸನ ಮಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ವಾಹನಗಳಿಗೆ ನಿರ್ಬಂಧ ವಿಧಿಸಿ ಬದಲಿ ಮಾರ್ಗ ಕಲ್ಪಿಸಲಾಗಿದೆ. ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಇಂಜಿನ್ ಒಳಗೆ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಚಾಲಕ ಸಿಕ್ಕಿಹಾಕಿಕೊಂಡು ಆತಂಕ ಸೃಷ್ಟಿಯಾಗಿತ್ತು. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯರು, ಕ್ರೇನ್ ಸಹಾಯದಿಂದ ಚಾಲಕನ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ಗ್ಯಾಸ್ ಟ್ಯಾಂಕರ್ ಬಿದ್ದ ಸ್ಥಳದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ವಾಹನ ಸಂಚರಿಸಲು ಬದಲಿ ಮಾರ್ಗ ಕಲ್ಪಿಸಿಕೊಡಲಾಗಿದೆ. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ

  • ಉಪನಗರ ವರ್ತುಲ ರಸ್ತೆ ಯೋಜನೆ ಶೀಘ್ರವೇ ಕೈಗೆತ್ತಿಕೊಳ್ಳಲು ಕೇಂದ್ರಕ್ಕೆ ಸಿಎಂ ಮನವಿ

    ಉಪನಗರ ವರ್ತುಲ ರಸ್ತೆ ಯೋಜನೆ ಶೀಘ್ರವೇ ಕೈಗೆತ್ತಿಕೊಳ್ಳಲು ಕೇಂದ್ರಕ್ಕೆ ಸಿಎಂ ಮನವಿ

    ನವದೆಹಲಿ: ಬೆಂಗಳೂರು ನಗರ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಲು ಪೂರಕವಾದ ಉಪನಗರ ವರ್ತುಲ ರಸ್ತೆ ಯೋಜನೆಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಭೂಸಾರಿಗೆ, ರಾಷ್ಟ್ರೀಯ ಹೆದ್ದಾರಿ ಹಾಗೂ ಎಂಎಸ್‍ಎಂಇ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು.

    ನವದೆಹಲಿಯಲ್ಲಿ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಯವರು ಭಾರತ್‍ಮಾಲಾ ಪರಿಯೋಜನಾ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಬೆಂಗಳೂರು ಸುತ್ತಲಿನ ಸಂಚಾರವನ್ನು ಸುಗಮ ಗೊಳಿಸುವ ಉಪನಗರ ವರ್ತುಲ ರಸ್ತೆ ಯೋಜನೆಯ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲು ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಬೆಂಗಳೂರಿನಲ್ಲಿ ನಡೆಸಿದ ಸಭೆಯಲ್ಲಿ ಸಚಿವರು ಒಪ್ಪಿರುವುದನ್ನು ಸ್ಮರಿಸಿದರು. ಈ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಸರ್ಕಾರವು ಭೂಸ್ವಾಧೀನ ವೆಚ್ಚ 1560 ಕೋಟಿ ರೂ.ಗಳ ಶೇ.30ರಷ್ಟನ್ನು ಭರಿಸಲು ಸಮ್ಮತಿ ಪತ್ರ ನೀಡಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.

    ಭೇಟಿಯ ವೇಳೆ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಗಳು ಭಾರಿ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಅವುಗಳ ದುರಸ್ತಿಗೆ 184.85 ಕೋಟಿ ರೂ. ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದನ್ನೂ ಓದಿ:  ಶಿರಾಡಿ ಘಾಟ್ ನಾಲ್ಕು ಪಥದ ರಸ್ತೆ ಪೂರ್ಣಗೊಳಿಸಿ – ಗಡ್ಕರಿ ಬಳಿ ಸಿಎಂ ಮನವಿ

    ಈ ಸಂದರ್ಭದಲ್ಲಿ ಶಿರಾಡಿ ಘಾಟಿಯಲ್ಲಿ ಟನೆಲ್ ಬೈಪಾಸ್ ನಿರ್ಮಾಣ, ವಿಜಯಪುರ – ಸಂಕೇಶ್ವರ ಹೆದ್ದಾರಿ ಸುಧಾರಣೆ ಕುರಿತು ಸಹ ಚರ್ಚಿಸಲಾಯಿತು.

    ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಿಸಲು ತಾತ್ವಿಕ ಅನುಮೋದನೆ ನೀಡಿರುವ ನಾಲ್ಕು ಹೆದ್ದಾರಿಗಳ ಕುರಿತು ಡಿಪಿಆರ್ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ಅವುಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಘೋಷಿಸುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಕಂದಾಯ ಸಚಿವ ಆರ್. ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

  • ಧರ್ಮಸ್ಥಳ ಪ್ರವಾಸ ಮುಗಿಸಿ ಗ್ರಾಮಕ್ಕೆ ಮರಳುತ್ತಿದ್ದವರು ಮಸಣಕ್ಕೆ

    ಧರ್ಮಸ್ಥಳ ಪ್ರವಾಸ ಮುಗಿಸಿ ಗ್ರಾಮಕ್ಕೆ ಮರಳುತ್ತಿದ್ದವರು ಮಸಣಕ್ಕೆ

    – ಶಿರಾಡಿ ಘಾಟ್‍ನಲ್ಲಿ ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿ
    – ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    ಮಂಗಳೂರು: ಕಾರಿನ ಮೇಲೆ ಕಂಟೇನರ್ ಲಾರಿ ಪಲ್ಟಿಯಾಗಿ ಮೂವರು ಮೃತಪಟ್ಟ ಭಾರೀ ಅನಾಹುತ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಬಳಿಯ ಶಿರಾಡಿ ಗ್ರಾಮದ ಪರ್ವರಕೊಟ್ಯ ಬಳಿ ನಡೆದಿದೆ.

    ಮಂಡ್ಯ ಮೂಲದ ನಾರಾಯಣ (65), ನೀತು(35), ನಿಧಿ(15) ಮೃತ ದುರ್ದೈವಿಗಳು. ಮಂಗಳೂರಿನಿಂದ ಮಂಡ್ಯದ ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ.

    ಮಂಡ್ಯ ಜಿಲ್ಲೆಯ ನಾರಾಯಣ ಸೇರಿದಂತೆ ಐವರು ಬ್ರೀಝಾ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದರು. ಮಂಜುನಾಥನ ದರ್ಶನ ಪಡೆದು ಶುಕ್ರವಾರ ಪ್ರವಾಸ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದರು. ಈ ವೇಳೆ ಬ್ರೀಝಾ ಕಾರು ಶಿರಾಡಿ ಗ್ರಾಮದ ಪರ್ವರಕೊಟ್ಯ ಸಮೀಪ ಇರುವಂತೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಕಂಟೇನರ್ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

    ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಸಮೀಪದ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತರ ಹಾಗೂ ಗಾಯಾಳುಗಳ ಸಂಬಂಧಿಕರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ.

  • ದೇವರ ದರ್ಶನ ಪಡೆದು ಹಿಂದಿರುಗುತ್ತಿದ್ದ ಭಕ್ತರ ಕಾರು ಪಲ್ಟಿ- ಓರ್ವ ಸಾವು

    ದೇವರ ದರ್ಶನ ಪಡೆದು ಹಿಂದಿರುಗುತ್ತಿದ್ದ ಭಕ್ತರ ಕಾರು ಪಲ್ಟಿ- ಓರ್ವ ಸಾವು

    ಮಂಗಳೂರು: ದೇವರ ದರ್ಶನ ಪಡೆದು ಹಿಂದಿರುಗುತ್ತಿದ್ದ ಪ್ರಯಾಣಿಕರ ಕಾರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಹೊಂಡಕ್ಕೆ ಉರುಳಿ ಬಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಬೆಂಗಳೂರು ಮೂಲದ ನಿವಾಸಿಗಳು ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಶಿರಾಡಿ ಘಾಟಿಯಲ್ಲಿ ಕಾರು ಚಲಿಸುತ್ತಿದ್ದಾಗ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ಈ ವೇಳೆ ಬೆಂಗಳೂರು ಮೂಲದ ಸುನಿಲ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಪ್ರಶಾಂತ್, ಮನೋಜ್ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಗಾಯಾಳುಗಳನ್ನು ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಪಲ್ಟಿಯಾದ ಪರಿಣಾಮ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಾಟಿ ಹೆದ್ದಾರಿಯ ಬದಿಯಲ್ಲಿ ತಡೆಗೋಡೆ ರಚಿಸದ ಕಾರಣ ಅಪಾಯಕಾರಿ ಅಪಘಾತಗಳು ಮರುಕಳಿಸುತ್ತಲೇ ಇದೆ. ಅಲ್ಲದೆ ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

  • ಶಿರಾಡಿ ಘಾಟ್‍ನಲ್ಲಿ ಸಂಚಾರ ಡೇಂಜರ್..!

    ಶಿರಾಡಿ ಘಾಟ್‍ನಲ್ಲಿ ಸಂಚಾರ ಡೇಂಜರ್..!

    ಹಾಸನ: ಭಾರೀ ಮಳೆಯಿಂದ ಸಂಚಾರ ಸ್ಥಗಿತವಾಗಿದ್ದ ಶಿರಾಡಿಘಾಟ್‍ನಲ್ಲಿ ಬರೋಬ್ಬರಿ 5 ತಿಂಗಳ ನಂತರ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದ್ರೆ ರಸ್ತೆಯ ಎರಡೂ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದ್ದ ಕಡೆ ಇನ್ನೂ ದುರಸ್ತಿ ಕಾರ್ಯ ಸಂಪೂರ್ಣ ಮುಗಿದಿಲ್ಲ. ಈಗಲೂ ಒಟ್ಟು 26 ಕಿಮೀ ಉದ್ದದ ಶಿರಾಡಿಘಾಟ್ ನಲ್ಲಿ ಹಲವು ಕಡೆ ಏಕ ಸಂಚಾರಕ್ಕಷ್ಟೇ ಅವಕಾಶವಿದ್ದು, ಕೊಂಚ ಆಯತಪ್ಪಿದ್ರೂ ಅಪಾಯ ಗ್ಯಾರಂಟಿ. ಆಕಸ್ಮಾತ್ ಮತ್ತೆ ಮಳೆ ಶುರುವಾದ್ರೆ ಅನಾಹುತ ಅಕ್ಕಪಕ್ಕದಲ್ಲೇ ಕಾದು ಕುಳಿತಿರುವ ಹಿನ್ನೆಲೆಯಲ್ಲಿ ಶಿರಾಡಿ ಹಾದಿ ಸೇಫ್ ಎನ್ನುವ ಅಭಯ ಇನ್ನೂ ಸಿಕ್ಕಿಲ್ಲ.

    ರಾಜಧಾನಿ ಬೆಂಗಳೂರು-ಮಂಗಳೂರು ನಡುವೆ ನೇರ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಶಿರಾಡಿಘಾಟ್. ಭಾರೀ ಮಳೆಯಿಂದಾಗಿ ಸ್ಥಗಿತವಾಗಿದ್ದ ಶಿರಾಡಿ ಮಾರ್ಗದಲ್ಲಿ ಬರೋಬ್ಬರಿ 5 ತಿಂಗಳ ನಂತರ ಭಾರಿ ವಾಹನಗಳ ಸಂಚಾರ ಆರಂಭವಾಗಿದೆ. ಲಘು ವಾಹನ ಸೇರಿದಂತೆ 16 ಚಕ್ರಗಳ ಲಾರಿಗೂ ಅವಕಾಶ ಕೊಟ್ಟಿರೋದು ಕರಾವಳಿ ಭಾಗಕ್ಕೆ ನಾನಾ ರೀತಿಯ ಸರಕು ಸರಂಜಾಮು ಸಾಗಾಟಕ್ಕೆ ಅನುಕೂಲವಾಗಿದೆ.

    ಆದ್ರೆ ಶಿರಾಡಿ ಘಾಟ್ ಇನ್ನೂ ಸೇಫ್ ಆಗಿಲ್ಲ. ಯಾಕಂದ್ರೆ ರಸ್ತೆಯ ಎರಡೂ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದ್ದು, ಇನ್ನೂ ದುರಸ್ತಿ ಕಾರ್ಯ ಮುಗಿದಿಲ್ಲ. ಹಲವೆಡೆ ತಾತ್ಕಾಲಿಕವಾಗಿ ತಡೆಗೋಡೆ ಇಲ್ಲವೇ ಮರಳು ಚೀಲ ಜೋಡಿಸಿ ತೇಪೆ ಹಾಕುವ ಕೆಲಸ ಮಾಡಲಾಗಿದೆ. ಈಗಲೂ ಒಟ್ಟು 26 ಕಿಮೀ ಉದ್ದದ ಶಿರಾಡಿಘಾಟ್‍ನಲ್ಲಿ ಹಲವು ಕಡೆ ಏಕ ಸಂಚಾರಕ್ಕಷ್ಟೇ ಅವಕಾಶವಿದ್ದು, ಕೊಂಚ ಆಯತಪ್ಪಿದ್ರೂ ಅಪಾಯ ಗ್ಯಾರಂಟಿ. ಅಕಸ್ಮಾತ್ ಮತ್ತೆ ಹುಚ್ಚು ಮಳೆ ಶುರುವಾದ್ರೆ ಅನಾಹುತ ಅಕ್ಕಪಕ್ಕದಲ್ಲೇ ಕಾದು ಕುಳಿತಿರುತ್ತದೆ ಅಂತ ವಾಹನ ಚಾಲಕರು ಹೇಳುತ್ತಾರೆ.

    ಶಿರಾಡಿ ಸಂಚಾರ ಪುನಃ ಆರಂಭವಾಗಿರೋದು ಖುಷಿಯ ವಿಚಾರವೇ. ಆದ್ರೆ ದುರಸ್ತಿಕಾರ್ಯ ಸರಿಯಾಗಿ ಮುಗಿಯದ ಕಾರಣ ಭಾರಿ ಗಾತ್ರದ ವಾಹನ ಸವಾರರಿಗೆ ಅಪಾಯ ಎದುರು ನೋಡ್ತಿದೆ. ಹೀಗಾಗಿ ನೀವೇನಾದ್ರೂ ಈ ಮಾರ್ಗದಲ್ಲಿ ಹೋದ್ರೆ ಸ್ವಲ್ಪ ಹುಷಾರಾಗಿ ವಾಹನ ಚಲಾಯಿಸಬೇಕಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗಮನಿಸಿ, ಬುಧವಾರದಿಂದ ಶಿರಾಡಿ ಘಾಟ್ ಬಸ್ ಸಂಚಾರಕ್ಕೆ ಮುಕ್ತ

    ಗಮನಿಸಿ, ಬುಧವಾರದಿಂದ ಶಿರಾಡಿ ಘಾಟ್ ಬಸ್ ಸಂಚಾರಕ್ಕೆ ಮುಕ್ತ

    ಮಂಗಳೂರು: ಭೂ-ಕುಸಿತ ಹಾಗೂ ಭಾರೀ ಮಳೆಯಿಂದಾಗಿ ಬಂದ್ ಆಗಿದ್ದ ಶಿರಾಡಿ ಘಾಟಿ ರಸ್ತೆಯಲ್ಲಿ ಅಕ್ಟೋಬರ್ 3(ಬುಧವಾರ)ರಿಂದ ಬಸ್ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ಅನುಮತಿ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿಯವರು, ಭಾರಿ ಮಳೆಯಿಂದ ರಸ್ತೆ ಮೇಲೆ ಗುಡ್ಡ ಕುಸಿತ ಉಂಟಾಗಿದ್ದ ಕಾರಣ ಶಿರಾಡಿ ಘಾಟ್‍ನ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿತ್ತು. ಸದ್ಯ ತೆರವು ಕಾರ್ಯಾಚರಣೆ ಪೂರ್ಣಗೊಂಡಿದೆ. ಈ ಮೊದಲು ಸೆಪ್ಟೆಂಬರ್ 5 ರಿಂದ ಲಘು ವಾಹನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಅಕ್ಟೋಬರ್ 3 ರಿಂದ ಸಾರಿಗೆ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅಲ್ಲದೇ ಇನ್ನೆರಡು ವಾರಗಳ ಬಳಿಕ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ಘಾಟ್ ರಸ್ತೆಯ ಕುಸಿತ ಸ್ಥಳಗಳಲ್ಲಿ 24 ಗಂಟೆ ಪೊಲೀಸ್ ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಇದಲ್ಲದೇ ಜಿಲ್ಲಾಡಳಿತ ಹೆದ್ದಾರಿ ಪರಿಸ್ಥಿತಿ ಅವಲೋಕಿಸಲು ತಜ್ಞರ ಮೊರೆ ಹೋಗಿದ್ದು, ಭಾರತೀಯ ವಿಜ್ಞಾನ ಸಂಸ್ಥೆಯ ತಜ್ಞರಾದ ತಂಗವೇಲುರವರು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಇನ್ನೊಂದು ವಾರದಲ್ಲಿ ಸ್ಥಳ ಪರಿಶೀಲನೆ ನಡೆಸುತ್ತಾರೆ ಎಂದು ತಿಳಿದು ಬಂದಿದೆ. ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.

    ಶಿರಾಡಿ ಘಾಟ್ ಕಾಂಕ್ರೀಟ್ ಆದ ಬಳಿಕ ಕಳೆದ ಜುಲೈ 15ರಂದು ಅಧಿಕೃತ ಉದ್ಘಾಟನೆ ಆಗಿತ್ತು. ಆದರೆ ಭೂಕುಸಿತ ಕಾರಣದಿಂದಾಗಿ ಶಿರಾಡಿ ಘಾಟ್ ಹೆದ್ದಾರಿ ಸ್ಥಗಿತಗೊಳಿಸಲಾಗಿತ್ತು. ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಜೊತೆಗೆ ಸಂಪಾಜೆ ಘಾಟಿಯಲ್ಲಿ ಗುಡ್ಡ ಕುಸಿತ ಸಂಭವಿದ್ದ ಪರಿಣಾಮ ರಸ್ತೆ ಸಂಪರ್ಕ ಬಂದ್ ಆಗಿತ್ತು. ಚಾರ್ಮಾಡಿ ರಸ್ತೆಯಲ್ಲಿ ವಾಹನಗಳ ದಟ್ಟನೆ ಜಾಸ್ತಿಯಾಗಿ ಭಾರೀ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನಲೆಯಲ್ಲಿ ಲಘು ವಾಹನಗಳಿಗೆ ಶಿರಾಡಿ ಘಾಟಿ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ಕೊನೆಯ ವಾರ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ತಿಳಿಸಿದ್ದರು. ಈ ವೇಳೆ ಗಡ್ಕರಿ ಒಂದು ವಾರದ ಒಳಗಡೆ ರಸ್ತೆಯನ್ನು ದುರಸ್ತಿ ಮಾಡಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು. ಹೀಗಾಗಿ ಸೆಪ್ಟೆಂಬರ್ 5 ರಿಂದ ಹಾಸನ ಜಿಲ್ಲಾಡಳಿತ ಲಘು ವಾಹನಗಳಿಗೆ ಈ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಿತ್ತು.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲಾರಿ ಪಲ್ಟಿಯಾಗಿ ಚಾರ್ಮಾಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಲಾರಿ ಪಲ್ಟಿಯಾಗಿ ಚಾರ್ಮಾಡಿಯಲ್ಲಿ ಭಾರೀ ಟ್ರಾಫಿಕ್ ಜಾಮ್

    ಮಂಗಳೂರು: ಲಾರಿ ಪಲ್ಟಿಯಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಮತ್ತೊಮ್ಮೆ ಟ್ರಾಫಿಕ್ ಜಾಮ್ ಉಂಟಾಗಿದೆ.

    ಇಂದು ಮುಂಜಾನೆ ಘಾಟ್ ನ 6ನೇ ತಿರುವಿನಲ್ಲಿ ಲಾರಿಯೊಂದು ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.


    ಘಾಟ್ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎನ್ನಲಾಗಿದೆ. ಪರಿಣಾಮ ವಾಹನಗಳು ಕಿಲೋಮೀಟರ್ ಗಟ್ಟಲೆ ನಿಂತಿದ್ದವು. ಒಟ್ಟಿನಲ್ಲಿ ಇತ್ತೀಚೆಗಷ್ಟೇ ಶಿರಾಡಿ ಘಾಟ್ ನಲ್ಲು ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಪರಿಣಾಮ ಎಲ್ಲಾ ವಾಹನಗಳು ಚಾರ್ಮಾಡಿ ಘಾಟ್ ಆಗಿಯೇ ಸಂಚರಿಸುತ್ತಿದ್ದವು. ಹೀಗಾಗಿ ಹಲವು ದಿನ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಟ ಅನುಭವಿಸಿದ್ದರು. ಇದನ್ನೂ ಓದಿ: ಸೆಪ್ಟೆಂಬರ್ ನಲ್ಲೇ ಹರಿವು ನಿಲ್ಲಿಸಿದ ಚಾರ್ಮಾಡಿಯ ಫಾಲ್ಸ್ ಗಳು!

    ಸದ್ಯ ಶಿರಾಡಿ ಘಾಟ್ ಲಘು ವಾಹನಕ್ಕೆ ಮುಕ್ತವಾಗಿದ್ದು, ಇದರಿಂದ ಚಾರ್ಮಾಡಿ ಘಾಟ್ ಟ್ರಾಫಿಕ್ ಸಮಸ್ಯೆಯಿಂದ ಮುಕ್ತಿ ಪಡೆದಿದೆ. ಇದನ್ನೂ ಓದಿ: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಚಾರ್ಮಾಡಿ ಘಾಟ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊನೆಗೂ ಶಿರಾಡಿ ಘಾಟ್ ಓಪನ್ – ಇಂದಿನಿಂದ ಲಘು ವಾಹನಗಳಿಗೆ ಮಾತ್ರ ಸಂಚಾರ

    ಕೊನೆಗೂ ಶಿರಾಡಿ ಘಾಟ್ ಓಪನ್ – ಇಂದಿನಿಂದ ಲಘು ವಾಹನಗಳಿಗೆ ಮಾತ್ರ ಸಂಚಾರ

    ಮಂಗಳೂರು: ಬೆಂಗಳೂರು – ಮಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ ಕೊನೆಗೂ ಓಪನ್ ಆಗಿದೆ. ಇಂದಿನಿಂದ ಹೆದ್ದಾರಿಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

    ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಪ ವಿಭಾಗಾಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರುಗಳ ಜಂಟಿ ತಂಡ ಸ್ಥಳ ಪರಿಶೀಲಿಸಿದ್ದು, ಡೇಂಜರ್ ಝೋನ್ ಇರುವ 11 ಕಡೆ ಪೊಲೀಸ್ ಭದ್ರತೆಯೊಂದಿಗೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

    ಹಾಸನ ಎಸಿ ಲಕ್ಷ್ಮೀಕಾಂತ್ ರೆಡ್ಡಿ ಮತ್ತು ಪುತ್ತೂರು ಎಸಿ ಕೃಷ್ಣಮೂರ್ತಿ ಸ್ಥಳ ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಇದೇ ವೇಳೆ ಕಾಮಗಾರಿಯೂ ನಡೆಯಲಿದ್ದು, ಹಾಸನ ಮತ್ತು ದಕ್ಷಿಣ ಕನ್ನಡ ಭಾಗದ ಜನರ ಬೇಡಿಕೆಯಿಂದಾಗಿ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ ಎಂದು ಹಾಸನ ಎಸಿ ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ.

    ಸಕಲೇಶಪುರದಲ್ಲಿ 8 ಕಡೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಕಡೆ ಗುಡ್ಡ ಕುಸಿತವಾಗಿದೆ. ಇದರಿಂದ ರಸ್ತೆ ಹಾಳಗಿದೆ. ಆದ್ದರಿಂದ ಅಂತಹ ಕಡೆಯಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೆಲವು ಕಡೆ ಬ್ಯಾರಿಕೇಡ್ ಮತ್ತೆ ಕೆಲವು ಕಡೆಯಲ್ಲಿ ಶಾಶ್ವತವಾಗಿ ಗೋಡೆ ಕಟ್ಟಿ ಓನ್‍ವೇ ಮಾಡಬೇಕು ಎಂದು ನಿರ್ಧಾರವಾಗಿದೆ. ಈಗ ಲಘವಾಹನಗಳಾದ ಕಾರು, ಬೈಕ್ ಗಳನ್ನು ಬಿಡಲಾಗುತ್ತಿದೆ. ಒಂದು ವಾರದ ಬಳಿ ಮತ್ತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ರೆಡ್ಡಿ ಅವರು ಹೇಳಿದ್ದಾರೆ.

    ಶಿರಾಡಿ ಘಾಟ್ ಕಾಂಕ್ರೀಟ್ ಆದ ಬಳಿಕ ಕಳೆದ ಜುಲೈ 15ರಂದು ಅಧಿಕೃತ ಉದ್ಘಾಟನೆ ಆಗಿತ್ತು. ಆದರೆ ಭೂಕುಸಿತ ಕಾರಣದಿಂದಾಗಿ ಶಿರಾಡಿ ಘಾಟ್ ಹೆದ್ದಾರಿ ಸ್ಥಗಿತಗೊಳಿಸಲಾಗಿತ್ತು. ಸದ್ಯ ಮಂಗಳೂರು – ಬೆಂಗಳೂರು ಸಂಚಾರಕ್ಕೆ ಚಾರ್ಮಾಡಿ ಘಾಟಿಯಲ್ಲಿ ಮಾತ್ರ ಅವಕಾಶ ಇದ್ದುದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ಲಘು ವಾಹನಗಳಿಗೆ ಮುಕ್ತ

    ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ಲಘು ವಾಹನಗಳಿಗೆ ಮುಕ್ತ

    ಹಾಸನ: ಬುಧವಾರ ಮಧ್ಯಾಹ್ನದಿಂದ ಶಿರಾಡಿಘಾಟ್ ರಸ್ತೆಯಲ್ಲಿ ಲಘು ವಾಹನಗಳು ಸಂಚರಿಸಲು ಹಾಸನ ಜಿಲ್ಲಾಡಳಿತ ಅನುಮತಿ ನೀಡಿದೆ.

    ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಈ ಮಾಹಿತಿ ನೀಡಿದ್ದು, ಲಘು ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು. ಯಾವುದೇ ಅನಾಹುತಗಳು ಸಂಭವಿಸಿದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ತಿಳಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಶಿರಾಡಿ ಘಾಟ್ ರಸ್ತೆಯನ್ನು ಪರಿಶೀಲಿಸಿ ಸಂಚಾರಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

    ಕಳೆದ ವಾರ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ತಿಳಿಸಿದ್ದರು. ಈ ವೇಳೆ ಗಡ್ಕರಿ ಒಂದು ವಾರದ ಒಳಗಡೆ ರಸ್ತೆಯನ್ನು ದುರಸ್ತಿ ಮಾಡಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ್ದರು.

    ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಜೊತೆಗೆ ಸಂಪಾಜೆ ಘಾಟಿಯಲ್ಲಿ ಗುಡ್ಡ ಕುಸಿತ ಸಂಭವಿದ್ದ ಪರಿಣಾಮ ರಸ್ತೆ ಸಂಪರ್ಕ ಬಂದ್ ಆಗಿತ್ತು. ಚಾರ್ಮಾಡಿ ರಸ್ತೆಯಲ್ಲಿ ವಾಹನಗಳ ದಟ್ಟನೆ ಜಾಸ್ತಿಯಾಗಿ ಭಾರೀ ಟ್ರಾಫಿಕ್ ಜಾಮ್ ಆಗುತ್ತಿರುವ ಹಿನ್ನಲೆಯಲ್ಲಿ ಲಘು ವಾಹನಗಳಿಗೆ ಶಿರಾಡಿ ಘಾಟಿ ರಸ್ತೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು.