Tag: shirasi police station

  • ಹಣ್ಣಿನ ಅಂಗಡಿಗೆ ಆಕಸ್ಮಿಕ ಬೆಂಕಿ- 2 ಲಕ್ಷಕ್ಕೂ ಹೆಚ್ಚು ನಷ್ಟ

    ಹಣ್ಣಿನ ಅಂಗಡಿಗೆ ಆಕಸ್ಮಿಕ ಬೆಂಕಿ- 2 ಲಕ್ಷಕ್ಕೂ ಹೆಚ್ಚು ನಷ್ಟ

    ಕಾರವಾರ: ಹಣ್ಣಿನ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ 2 ಲಕ್ಷಕ್ಕೂ ಹೆಚ್ಚು ಹಾನಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಶಿವಾಜಿ ವೃತ್ತದ ಬಳಿ ನೆಡೆದಿದೆ.

    ಗುರುವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಗಯ ಕೆನ್ನಾಲಿಗೆಗೆ ಅಂಗಡಿ ಯಲ್ಲಿ ಸಂಗ್ರಹಿಸಿಟ್ಟಿದ್ದ ಹಣ್ಣುಗಳು ಹಾಗೂ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

    ಅಶೋಕ ಜಾಧವ್ ಎಂಬವರಿಗೆ ಸೇರಿದ ಕಟ್ಟಡ ಇದಾಗಿದ್ದು, ಅಬ್ದುಲ್ ಜಬ್ಬಾರ್ ಎನ್ನುವವರು ಈ ಕಟ್ಟಡದಲ್ಲಿ ಹಣ್ಣಿನ ಅಂಗಡಿ ನಡೆಸುತ್ತಿದ್ದರು. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ಘಟನೆ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

    ಈ ಸಂಬಂಧ ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.