Tag: Shirkaripur

  • ಬಿಎಸ್‍ವೈ ರಾಜೀನಾಮೆ – ಶಿಕಾರಿಪುರ ಸ್ವಯಂ ಪ್ರೇರಿತ ಬಂದ್

    ಬಿಎಸ್‍ವೈ ರಾಜೀನಾಮೆ – ಶಿಕಾರಿಪುರ ಸ್ವಯಂ ಪ್ರೇರಿತ ಬಂದ್

    – ಹೈಕಮಾಂಡ್ ವಿರುದ್ಧ ಕಾರ್ಯಕರ್ತರ ಆಕ್ರೋಶ

    ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಬಿಎಸ್‍ವೈ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಲಾಗುತ್ತಿದೆ.

    ಮಧ್ಯಾಹ್ನ ತಮ್ಮ ಸ್ಥಾನಕ್ಕೆ ಬಿಎಸ್‍ವೈ ರಾಜೀನಾಮೆ ನೀಡಿದ ತಕ್ಷಣವೇ ವರ್ತಕರು ಅಂಗಡಿ ಮುಗ್ಗಟ್ಟನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಬಿಜೆಪಿ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ದಕ್ಷಿಣ ಭಾರತದ ಹೆಬ್ಬಾಗಿಲು ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಯಡಿಯೂರಪ್ಪ ಸಾಕಷ್ಟು ಶ್ರಮ ಹಾಕಿದ್ದಾರೆ. ಅವರ ಹೋರಾಟ ಶ್ರಮದಿಂದಲೇ ಪಕ್ಷ ಅಧಿಕಾರಕ್ಕೆ ಬಂದಿದೆಯೇ ಹೊರತು ಹೈಕಮಾಂಡ್ ನಿಂದ ಅಲ್ಲ.

     

    ಹೈಕಮಾಂಡ್ ಕೆಲವು ಕಿಡಿಗೇಡಿಗಳ ಮಾತು ಕೇಳಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವಂತೆ ಮಾಡಿದೆ. ಯಡಿಯೂರಪ್ಪ ಅವರು ಕಣ್ಣೀರು ಹಾಕಿ ರಾಜೀನಾಮೆ ಕೊಡುವಂತೆ ಮಾಡಿದೆ. ಈಗಲೂ ಕಾಲ ಮಿಂಚಿಲ್ಲ ಹೈಕಮಾಂಡ್ ಇನ್ನಾದರೂ ಎಚ್ಚೆತ್ತುಕೊಂಡು ಉಳಿದ ಅವಧಿಗೆ ಅವರನ್ನೇ ಮುಖ್ಯಮಂತ್ರಿ ಆಗಿ ಮುಂದುವರಿಸಬೇಕು. ಇಲ್ಲದಿದ್ದರೆ ಅವರ ಕಣ್ಣೀರ ಶಾಪ ತಟ್ಟಿ ರಾಜ್ಯದಲ್ಲಿ ಬಿಜೆಪಿ ಸರ್ವನಾಶ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಸಿಎಂ ಸ್ಥಾನ ಸಾಧ್ಯತೆ!

    ಯಡಿಯೂರಪ್ಪ ಅವರ ಆಡಳಿತದ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ, ಶಿಕಾರಿಪುರ ತಾಲೂಕು ಸೇರಿದಂತೆ ಇಡೀ ರಾಜ್ಯ ಸಾಕಷ್ಟು ಅಭಿವೃದ್ಧಿ ಕಂಡಿದೆ. ರಾಜ್ಯದಲ್ಲಿ ಬಿಜೆಪಿ ಶಾಶ್ವತವಾಗಿ ಇರಬೇಕು ಎಂದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಸಹ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಯಡಿಯೂರಪ್ಪ ಸಂಪುಟ ವಿಸರ್ಜನೆ – ಸಚಿವರೆಲ್ಲ ಮಾಜಿ