Tag: Shirsi

  • ಶಿರಸಿಯಲ್ಲಿ ಭಾರೀ ಮಳೆಗೆ ಕೊಚ್ಚಿಹೋದ ಅಡಿಕೆ – 20 ಎಕರೆಗೂ ಹೆಚ್ಚು ಅಡಿಕೆ ತೋಟಕ್ಕೆ ಹಾನಿ

    ಶಿರಸಿಯಲ್ಲಿ ಭಾರೀ ಮಳೆಗೆ ಕೊಚ್ಚಿಹೋದ ಅಡಿಕೆ – 20 ಎಕರೆಗೂ ಹೆಚ್ಚು ಅಡಿಕೆ ತೋಟಕ್ಕೆ ಹಾನಿ

    ಕಾರವಾರ: ಶಿರಸಿಯಲ್ಲಿ (Shirsi) ನಿನ್ನೆ ಸುರಿದ ಭಾರಿ ಮಳೆಗೆ ಹಲವು ಭಾಗದಲ್ಲಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಶಿರಸಿ ತಾಲೂಕಿನ ಇಸಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಣಗೇರಿಯಲ್ಲಿ ಉಪೇಂದ್ರ ಹೆಗಡೆ ಎಂಬವರಿಗೆ ಸೇರಿದ ಅಡಿಕೆ ನೀರಿನಲ್ಲಿ ಕೊಚ್ಚಿ ಹೋಗಿದೆ.

    ಅಡಿಕೆ ಸುಗ್ಗಿ ನಡೆಸಿ ಕೆಂಪಡಿಕೆಯನ್ನು ಮನೆ ಮುಂದೆ ಒಣಗಿಸಲು ಹಾಕಿದ್ದರು. ಮಳೆ ಅಬ್ಬರಕ್ಕೆ ಲಕ್ಷಾಂತರ ರೂ. ಮೌಲ್ಯದ ಅಡಿಕೆ ನೀರು ಪಾಲಾಗಿದೆ. ಮಳೆಯಿಂದ ಸುಮಾರು 20 ಎಕರೆಗೂ ಹೆಚ್ಚು ಅಡಿಕೆ ತೋಟ ಹಾನಿಯಾಗಿದ್ದು, ಭತ್ತದ ಬೆಳೆಗಳು ಸಹ ಮಳೆಗೆ ಹಾನಿಯಾಗಿದೆ. ಇದನ್ನೂ ಓದಿ: ವಿಜಯಪುರದಲ್ಲಿ ಭೂಕಂಪನ: ಜೋರು ಶಬ್ದಕ್ಕೆ ಹೆದರಿ ಮನೆಯಿಂದಾಚೆ ಓಡಿ ಬಂದ ಜನ!

    ಶಿರಸಿಯಲ್ಲಿ ನಿನ್ನೆ ಸಂಜೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಲಂಡಕನಹಳ್ಳಿ, ನರೇಬೈಲಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ನರೇಬೈಲಿನ ಕಿರು ಸೇತುವೆ ಮುಳುಗಡೆಯಾಗಿದ್ದು, ರಸ್ತೆ ಸಂಚಾರ ಬಂದ್ ಆಗಿದೆ.

    ಈ ಭಾಗದ ನಾಲ್ಕಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅನಾಹುತ ಸೃಷ್ಟಿಯಾಗಿದೆ. ಇದನ್ನೂ ಓದಿ: ಬೆಂಗಳೂರು ಮಳೆಯ ಸಮಸ್ಯೆಗೆ ಪರಿಹಾರ ಕೊಡದ ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ: ಸುರೇಶ್ ಬಾಬು

  • ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಶಿರಸಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

    ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಶಿರಸಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

    ಕಾರವಾರ: ಕಾರು ಮತ್ತು ಸರ್ಕಾರಿ ಬಸ್ಸಿನ ನಡುವೆ ನಡೆದ ಭೀಕರ ಅಪಘಾತದಲ್ಲಿ (Bus Car Accident) ಐವರು ಮೃತಪಟ್ಟಿರುವ ಘಟನೆ ಶುಕ್ರವಾರ (ಇಂದು) ಉತ್ತರ ಕನ್ನಡ ಜಿಲ್ಲೆಯ ಶಿರಸಿ (Shirsi) ತಾಲೂಕಿನ ಬಂಡಲದಲ್ಲಿ ನಡೆದಿದೆ.

    ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ಸು ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

    ಕಾರಿನಲ್ಲಿದ್ದ ವ್ಯಕ್ತಿಗಳು ಮಂಗಳೂರು ಸಮೀಪದವರು ಎನ್ನಲಾಗಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ತಮಿಳುನಾಡಿನ (TamilNadu) ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಬರ ಪರಿಹಾರಕ್ಕೆ ಇನ್ನೆರಡು ದಿನಗಳಲ್ಲಿ ಮಾನದಂಡ ಬಿಡುಗಡೆ: ಚೆಲುವರಾಯಸ್ವಾಮಿ

    ಬಸ್‌ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರಿದ್ದು ಕೆಲವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ (Shirsi Rural Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ

  • ವಿದ್ಯಾರ್ಥಿಗಳಿಗೆ ಗಾಂಜಾ ಮಾರುತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ- 2 ಕೆ.ಜಿ ಗಾಂಜಾ ವಶ

    ವಿದ್ಯಾರ್ಥಿಗಳಿಗೆ ಗಾಂಜಾ ಮಾರುತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ- 2 ಕೆ.ಜಿ ಗಾಂಜಾ ವಶ

    ಕಾರವಾರ: ಕಾಲೇಜು ಯುವಕರನ್ನೇ ಗುರಿಯಾಗಿಸಿಕೊಂಡು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ವಿದ್ಯಾರ್ಥಿಗಳಿಗೆ ಗಾಂಜಾ ಮಾರಲು ಬಂದಿದ್ದ ಹಾವೇರಿಯ ಶಿಗ್ಗಾಂವ್ ಮೂಲದ ಭಾಷಾ ಸಾಬ್, 15 ಜನ ವಿದ್ಯಾರ್ಥಿಗಳಿಗೆ ಮಾರಲು ಎರಡು ಕೆ.ಜಿ ಗಾಂಜವನ್ನು ಶಿರಸಿ ನಗರಕ್ಕೆ ತಂದಿದ್ದ. ಈ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಗಾಂಜಾ ಪಡೆಯಲು ಬಂದಿದ್ದ ವಿದ್ಯಾರ್ಥಿಗಳು ತಪ್ಪಿಸಿಕೊಂಡಿದ್ದು, ಶಿಗ್ಗಾಂವ್ ನ ಭಾಷಾ ಸಾಬ್ ಗಾಂಜಾ ಸಮೇತ ಸಿಕ್ಕಿಬಿದ್ದಿದ್ದಾನೆ.

    ಈ ಕುರಿತು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ವಿದ್ಯಾರ್ಥಿಗಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಶಿರಸಿ ಸೇರಿದಂತೆ ಜಿಲ್ಲೆಯ ಹಲವು ಭಾಗದಲ್ಲಿ ಗಾಂಜಾ, ಬ್ರೌನ್ ಶುಗರ್ ಮಾರಾಟ ಜಾಲ ವ್ಯಾಪಕವಾಗಿದೆ. ಕಳೆದ ಮೂರು ದಿನಗಳ ಹಿಂದೆ ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಬಂಧಿಸಿ ಎರಡು ಕೋಟಿ ರೂ. ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಳ್ಳುವ ಮೂಲಕ ಜಿಲ್ಲಾ ಪೊಲೀಸರು ಮಾದಕ ವಸ್ತು ಸಾಗಾಟಗಾರರ ಹೆಡೆಮುರಿ ಕಟ್ಟಿದ್ದರು.

  • ಸಿದ್ದಾಪುರದಲ್ಲಿ ಭೂ ಕುಸಿತ – ಡ್ಯಾಂ ಒಡೆದು ರಸ್ತೆ ಜಲಾವೃತ

    ಸಿದ್ದಾಪುರದಲ್ಲಿ ಭೂ ಕುಸಿತ – ಡ್ಯಾಂ ಒಡೆದು ರಸ್ತೆ ಜಲಾವೃತ

    ಕಾರವಾರ: ಭಾರೀ ಮಳೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಎಲ್ಲೆಂದರಲ್ಲಿ ಭೂಮಿ ಕುಸಿದು ರಸ್ತೆಗಳು ಬಂದ್ ಆಗಿರುವುದು ಹಾಗೂ ಹೊಲಕ್ಕೆ ಹೊಲವೇ ಕುಸಿದಿರುವುದು ಒಂದು ಕಡೆಯಾದರೆ ಇನ್ನೊಂದೆಡೆ ಚೆಕ್ ಡ್ಯಾಂ ಒಡೆದು ಮುಂಡುಗೋಡು ಭಾಗದ ಹಳ್ಳಿಗಳಲ್ಲಿನ ಮನೆಗಳು ಜಲಾವೃತಗೊಂಡಿವೆ.

    ಸಿದ್ದಾಪುರ ತಾಲೂಕಿನ ಭಾನ್ಕುಳಿ ಗ್ರಾಮದಲ್ಲಿ ನಾಲ್ಕು ಎಕರೆ ಭೂಮಿ ಸಂಪೂರ್ಣ ಬಿರುಕು ಬಿಟ್ಟಿದ್ದು, ಆಳಕ್ಕೆ ಕುಸಿದಿದೆ. ಭೂಮಿ ಬಿರುಕು ಬಿಟ್ಟು ಕ್ಷಣ ಕ್ಷಣಕ್ಕೂ ಕುಸಿಯುತ್ತಿದ್ದು, ಇನ್ನೂ ಹೆಚ್ಚಿನ ಭಾಗ ಕುಸಿಯುವ ಹಂತ ತಲುಪಿದೆ. ಭೂಮಿ ಕುಸಿತದಿಂದ ದೊಡ್ಡ ಕಂದಕಗಳು ನಿರ್ಮಾಣವಾಗಿವೆ. ನಾಲ್ಕು ಎಕರೆ ಭೂಮಿ ಪೂರ್ತಿ ಇದೇ ರೀತಿ ಆಗುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಗ್ರಾಮದಲ್ಲಿನ ಮನೆಗಳೂ ಕುಸಿದರೆ ಏನು ಗತಿ ಎಂಬ ಭಯದಲ್ಲೇ ಗ್ರಾಮಸ್ಥರು ಬದುಕುತ್ತಿದ್ದಾರೆ.

    ಮುಂಡಗೋಡಿನ ಚಿಗಳ್ಳಿ ಚೆಕ್ ಡ್ಯಾಮ್ ಒಡೆದ ಪರಿಣಾಮ 1,150 ಎಕರೆ ಕೃಷಿ ಜಮೀನು ಸಂಪೂರ್ಣ ಜಲಾವೃತವಾಗಿದ್ದು, ಹುಬ್ಬಳ್ಳಿ-ಮುಂಡಗೋಡು-ಶಿರಸಿ ರಾಜ್ಯ ಹೆದ್ದಾರಿ ಜಲಾವೃತವಾಗಿದೆ.

    ಚೆಕ್ ಡ್ಯಾಂ ಒಡೆದ ಹಿನ್ನೆಲೆಯಲ್ಲಿ ಮುಂಡಗೋಡು ಭಾಗದ ಚೌಡಳ್ಳಿ, ಕೋಡಂಬಿ, ಹನುಮಾಪುರ, ಅಂದಲಗಿ, ಅಜ್ಜಳ್ಳಿ, ಜೋಗೇಶ್ವರಹಳ್ಳ ಪ್ರದೇಶದ 40ಕ್ಕೂ ಅಧಿಕ ಮನೆಗಳು ಜಲಾವೃತವಾಗಿದೆ. ಒಡೆದ ಚೆಕ್ ಡ್ಯಾಂನಿಂದ 0.3 ಟಿಎಂಸಿ ನೀರು ಹೊರ ಬರುತ್ತಿದ್ದು, ಆರು ಮೀಟರ್ ಎತ್ತರದಲ್ಲಿ ನೀರು ಹರಿಯುತ್ತಿದೆ. ಪ್ರವಾಹ ವೀಕ್ಷಿಸಲು ಜನ ತಂಡೋಪ ತಂಡವಾಗಿ ಬರುತ್ತಿದ್ದು ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಮೂರು ತಾಸಿನಲ್ಲಿ ಪ್ರವಾಹದ ಮಟ್ಟ ಇಳಿಯಲಿದ್ದು ಪ್ರವಾಹ ಸಂಪೂರ್ಣ ಇಳಿಮುಖವಾಗಲಿದೆ ಎಂದು ಜಿಲ್ಲಾ ಪಂಚಾಯತಿ ಸಿಇಓ ರೋಷನ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    20 ಮೀಟರ್ ಎತ್ತರ, 830 ಮೀಟರ್ ಅಗಲವಿರುವ ಡ್ಯಾಂ 6,800 ಕ್ಯೂಸೆಕ್ ನೀರನ್ನು ಹಿಡಿದಿಡುವ ಸಾಮಥ್ರ್ಯ ಹೊಂದಿತ್ತು. ಚೆಕ್ ಡ್ಯಾಂ ಸುತ್ತಲಿನ ಗ್ರಾಮಗಳಲ್ಲಿ ಕೃತಕ ಪ್ರವಾಹ ಉಂಟಾಗಿದ್ದು ಎರಡು ದಿನಗಳ ಕಾಲ ಈ ನೀರಿನಿಂದ ಜನರು ಪರದಾಡಲಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಭೇಟಿ ನೀಡಿದ್ದು, ಸ್ಥಳೀಯ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.