Tag: Shirur

  • Uttara Kannada| ಮಳೆಹಾನಿ ಸಮಸ್ಯೆ- ಸಂತ್ರಸ್ತರಿಗೆ ಸಿಗದ ಪರಿಹಾರ

    Uttara Kannada| ಮಳೆಹಾನಿ ಸಮಸ್ಯೆ- ಸಂತ್ರಸ್ತರಿಗೆ ಸಿಗದ ಪರಿಹಾರ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಪ್ರವಾಹ ಸಂತ್ರಸ್ತರಿಗೆ ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ನೀಡುವ ಪರಿಹಾರ ಕಡಿತ ಮಾಡಿದ್ದು, ಕಂದಾಯ ಇಲಾಖೆ ಸೂಕ್ತ ದಾಖಲೆ ಕೊರತೆ ಎಂದು ಪರಿಹಾರ ನಿರಾಕರಿಸಿದೆ.

    ಈ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಸಾಕಷ್ಟು ಅನಾಹುತ ತಂದೊಡ್ಡಿತ್ತು. ನದಿ ಪ್ರವಾಹ, ಭೂ ಕುಸಿತ, ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಸಾವಿರಾರು ಕುಟುಂಬಗಳು ಬೀದಿಗೆ ಬರುವಂತಾಗಿತ್ತು. ಮಳೆಯ ಅಬ್ಬರಕ್ಕೆ ಅಂಕೋಲಾದ ಶಿರೂರಿನಲ್ಲಿ ಭೂ ಕುಸಿತದಿಂದ ಮೃತರಾದ ಇಬ್ಬರ ಶವ ಈವರೆಗೂ ದೊರೆತಿಲ್ಲ. ಗಂಗಾವಳಿ ನದಿ ಪ್ರವಾಹಕ್ಕೆ 25ಕ್ಕೂ ಹೆಚ್ಚು ಗ್ರಾಮಗಳು ನೀರು ತುಂಬಿ ಹಾನಿಯಾಗಿದ್ದವು. ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದ್ದರು. ಆದರೆ ಗಂಗಾವಳಿ ನದಿಪಾತ್ರದ ಬಿಳೆಹೊಂಗೆ, ಬೆಳಂಬರ ಸೇರಿದಂತೆ ಹಲವು ಗ್ರಾಮದ ಪ್ರವಾಹ ಸಂತ್ರಸ್ತರ ಮನೆಗೆ ನೀರು ನುಗ್ಗಿದ ಫೋಟೋ ಕಾಪಿ ಇಲ್ಲ. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿಲ್ಲ ಎಂಬ ನೆಪವೊಡ್ಡಿ ಪರಿಹಾರದ ಹಣವನ್ನು ನೀಡಲು ನಿರಾಕರಿಸಿದ್ದು, ಸಂತ್ರಸ್ತರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಆಪರೇಷನ್‌ಗೆ ದರ್ಶನ್ ಹಿಂದೇಟು- 10 ದಿನ ಮುಂದುವರಿಯುತ್ತೆ ಕನ್ಸರ್ವೇಟಿವ್ ಚಿಕಿತ್ಸೆ

    ಜಿಲ್ಲೆಯಲ್ಲಿ ಅಂಕೋಲಾದ (Ankola) 90ಕ್ಕೂ ಹೆಚ್ಚು ಕುಟುಂಬಗಳಿಗೆ ಪರಿಹಾರ ಹಣ ನಿರಾಕರಿಸಿ ಅರ್ಜಿ ನೀಡಿದವರಿಗೆ ಕಂದಾಯ ಇಲಾಖೆ ಹಿಂಬರಹ ನೀಡಿದೆ. ಉಳಿದಂತೆ ಇತರೆ ತಾಲೂಕಿನಲ್ಲಿ ಪರಿಹಾರ ವಿತರಿಸಲಾಗಿದೆ. ಪ್ರವಾಹ ಬಂದಾಗ ಗ್ರಾಮ ಆಡಳಿತಾಧಿಕಾರಿ, ಪಿಡಿಓ ಮೂಲಕ ವರದಿ ಪಡೆದು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ (SDRF) ನಿಯಮಾವಳಿ ಪ್ರಕಾರ 48 ತಾಸುಗಳು ನೀರು ನಿಂತ ಮನೆಗಳಿಗೆ 5,000 ರೂ. ಪರಿಹಾರ ನೀಡಲಾಗುತ್ತದೆ. ಹಲವು ಭಾಗದಲ್ಲಿ ನೀರು ನಿಂತ ದಾಖಲೆಗಳಿದ್ದರೂ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿಲ್ಲ ಎಂದು ತಿರಸ್ಕರಿಸಲಾಗುತ್ತಿದೆ. ಇದನ್ನೂ ಓದಿ: ಶಾರುಖ್ ಖಾನ್‌ಗೆ ಬೆದರಿಕೆ: ಕೃತ್ಯದ ಹಿಂದೆ ನಟನ ವಿರುದ್ಧ ದೂರು ನೀಡಿದ್ದ ವಕೀಲನ ಫೋನ್‌!

    ರಾಜ್ಯ ಸರ್ಕಾರ ಪ್ರವಾಹ (Flood) ಸಂತ್ರಸ್ತರಿಗೆ ನೀಡುವ ಹಣವನ್ನೂ ಸಹ ಮೊಟಕುಗೊಳಿಸಿದೆ. ಈ ಹಿಂದೆ ಮನೆ ಹಾನಿಗೆ 5 ಲಕ್ಷ ರೂ. ಇದ್ದರೆ, ಮನೆಗಳಿಗೆ ನೀರು ನುಗ್ಗಿದರೇ 10,000 ಪರಿಹಾರ ನೀಡುತ್ತಿತ್ತು. ಇದೀಗ ಮನೆ ಹಾನಿಗೆ 1.20 ಲಕ್ಷ ರೂ., ವಸತಿ ಯೋಜನೆಯಡಿ ಮನೆ ಹಾಗೂ ಮನೆಗೆ ನೀರು ನುಗ್ಗಿದರೆ 5,000 ರೂ. ಪರಿಹಾರ ನೀಡುತ್ತಿದೆ. ಈ ಮೂಲಕ ಸರ್ಕಾರ ಪರಿಹಾರ ಹಣಕ್ಕೂ ಕತ್ತರಿ ಹಾಕಿದೆ. ಇದನ್ನೂ ಓದಿ: ಡೊನಾಲ್ಡ್‌ ಟ್ರಂಪ್‌ಗೆ ರಷ್ಯಾ ಅಧ್ಯಕ್ಷ ಪುಟಿನ್‌ ವಿಶ್‌ – ಮಾತುಕತೆಗೆ ಸಿದ್ಧ ಎಂದ ನಾಯಕರು

  • ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಕಾರವಾರ/ನವದೆಹಲಿ: ಶಿರೂರು ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara Hegde Kageri) ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಭೂಕುಸಿತವಾಗಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಕಾರಣ. ಶಿರೂರು ಭೂಕುಸಿತದಲ್ಲಿ ಮೃತರಾದವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಡಿ ಪರಿಹಾರ ನೀಡಬೇಕು. NDRFನ ಮತ್ತೊಂದು ತಂಡವನ್ನು ಶಿರೂರಿಗೆ ಶೋಧ ಕಾರ್ಯ ನಡೆಸಲು ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ

    ವಯನಾಡಿನಲ್ಲಿ ಆಗಿರುವಂತೆ ಶಿರೂರಿನಲ್ಲಿ ಸಹ ಗುಡ್ಡ ಕುಸಿತವಾಗಿದೆ. ಅಭಿವೃದ್ಧಿ ಆಗಬೇಕು. ಅಭಿವೃದ್ಧಿ ಮಾಡುವಾಗ ವೈಜ್ಞಾನಿಕ ಅಧ್ಯಯನದ ವರದಿ ಮೂಲಕ ಅಭಿವೃದ್ಧಿ ಮಾಡಬೇಕು. ಪಶ್ಚಿಮಘಟ್ಟ ಬಹಳ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅದರ ಕ್ಯಾರಿಂಗ್ ಕ್ಯಪಾಸಿಟಿ ಅಧ್ಯಯನ ಆಗುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

    ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡುತ್ತಿರುವ ಕೆಲಸ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕವಾಗಿರುವುದರಿಂದಲೇ ಗುಡ್ಡ ಕುಸಿದಿದೆ ಎಂಬುದಾಗಿ ಹೇಳಲಾಗುತ್ತಿದೆ ಎಂದು ಸಂಸತ್‌ನಲ್ಲಿ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ

    ಮುಂದಿನ ದಿನಗಳಲ್ಲಿಯಾದರೂ ಕಾಮಗಾರಿ ಮಾಡುವಾಗ ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಆಗಬೇಕು ಎಂದು ಸಂಸತ್‌ನಲ್ಲಿ ಕಾಗೇರಿ, ಜಿಲ್ಲೆಯ ಸಮಸ್ಯೆ ಕುರಿತು ಸಂಸತ್ ಗಮನಕ್ಕೆ ತಂದಿದ್ದಾರೆ.

  • Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ

    Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ

    ಕಾರವಾರ: ಶಿರೂರು ಗುಡ್ಡ ಕುಸಿತದಲ್ಲಿ (Shirur Landslide) ನಾಪತ್ತೆಯಾದವರ ಕುಟುಂಬಸ್ಥರನ್ನು ಭೇಟಿ ಮಾಡಿದೆ. ಅವರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಡೆಸಲು ನಿರ್ಧರಿಸಿದ್ದೇನೆ ಎಂದು ಮುಳುಗು ತಜ್ಞ ಈಶ್ವರ್ ಮಲ್ಪೆ (Eshwar Malpe) ಹೇಳಿದ್ದಾರೆ.

    ಶಿರೂರು ಗುಡ್ಡ ಕುಸಿತ ಪ್ರಕರಣದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಮವಾಸ್ಯೆ ಸಂದರ್ಭದಲ್ಲಿ ನೀರಿನ ಸೆಳೆತ ಕಡಿಮೆ ಇರುತ್ತದೆ. ಮಳೆಯಾಗದೇ ಇದ್ದರೆ ಅಂದು ಕಾರ್ಯಾಚರಣೆ ಮಾಡುತ್ತೇನೆ. ಕೇರಳದಿಂದ ಬೋಟ್ ಒಂದು ಬರುತ್ತದೆ. ಬೋಟ್ ಬಂದು ಮಣ್ಣು ತೆರವು ಮಾಡಿದರೆ ಕಾರ್ಯಾಚರಣೆ ಮಾಡಬಹುದು ಎಂದರು. ಇದನ್ನೂ ಓದಿ: ಭಾರೀ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ, ಪೂರ್ವ ಸಿದ್ಧತೆ ಮಾಡಿಕೊಳ್ಳಿ – ಸಿಎಂ ಖಡಕ್ ಸೂಚನೆ

    ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಡೆಸಿದ 13 ದಿನಗಳ ಕಾರ್ಯಾಚರಣೆಯಲ್ಲಿ 8 ಮಂದಿಯ ಮೃತದೇಹ ದೊರೆತಿದ್ದು, ಇನ್ನೂ ಮೂವರು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆ ಮುಳುಗು ತಜ್ಞರ ತಂಡ ಕೂಡ ಕಾರ್ಯಾಚರಣೆ ನಡೆಸಿತ್ತು. ಆದರೆ ಭಾರೀ ಮಳೆ ಹಾಗೂ ಗಂಗಾವಳಿ ನದಿಯಲ್ಲಿ ಕಲ್ಲು ಬಂಡೆಗಳಿದ್ದರಿಂದ ಅಡಚಣೆ ಉಂಟಾಗಿತ್ತು. ಅಲ್ಲದೇ ನದಿಯಲ್ಲಿ ಟ್ಯಾಂಕರ್ ಹಾಗೂ ಮರದ ದಿಮ್ಮಿಗಳನ್ನು ಮುಳುಗು ತಜ್ಞರು ಪತ್ತೆಹಚ್ಚಿದ್ದರು. ಭಾರೀ ಮಳೆಯಿಂದ ಅಡಚಣೆ ಉಂಟಾದ ಹಿನ್ನೆಲೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಇದನ್ನೂ ಓದಿ: 4 ಮಕ್ಕಳ ತಾಯಿಯನ್ನ ಮದ್ವೆಯಾಗಿ ಇಸ್ಲಾಂಗೆ ಮತಾಂತರವಾಗುವಂತೆ ಚಿತ್ರಹಿಂಸೆ; ಪತಿ ಅರೆಸ್ಟ್‌

  • ಶಿರೂರು ಗುಡ್ಡ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ

    ಶಿರೂರು ಗುಡ್ಡ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತಗೊಳಿಸಿದ ಜಿಲ್ಲಾಡಳಿತ

    ಕಾರವಾರ: ಶಿರೂರು ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳುಗು ತಜ್ಞರ ತಂಡ ಎಷ್ಟೇ ಹುಡುಕಿದರೂ ಲಾರಿ ಹಾಗೂ ನಾಪತ್ತೆಯಾದ ಮೂವರ ಮೃತದೇಹ ಸಿಗದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ.

    ಗಂಗಾವಳಿ ನದಿ (Gangavali River) ನೀರಿನ ವೇಗ ಹೆಚ್ಚಿದೆ. ಅಲ್ಲದೇ ನದಿಯ ಒಳಗೆ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿ ಇರುವ ಹಿನ್ನೆಲೆ ಕಾರ್ಯಾಚರಣೆಯಲ್ಲಿ ಲಾರಿ ಮೇಲಕ್ಕೆ ಎತ್ತಲು ಜಿಲ್ಲಾಡಳಿತ ಯಶಸ್ವಿಯಾಗಲಿಲ್ಲ. ಆದ್ದರಿಂದ ಕಾರ್ಯಾಚರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

    ಭೂ ಕುಸಿತದಿಂದ ಕಾಣೆಯಾದ ಕೇರಳ ಮೂಲದ ಅರ್ಜುನ್, ಶಿರೂರಿನ ಜಗನ್ನಾಥ ನಾಯ್ಕ, ಗಂಗೆ ಕೊಳ್ಳದ ಲೋಕೇಶ್‌ಗಾಗಿ ಗಂಗಾವಳಿ ನದಿಗೆ ಮುಳುಗು ತಜ್ಞರ ತಂಡ ಇಳಿದಿತ್ತು. ನೌಕಾದಳ, ಭೂಸೇನೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಹೆಸ್ಕಾಂ ಹಾಗೂ ಈಶ್ವರ್ ಮಲ್ಪೆ ಅವರ ತಂಡ ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಆಲದ ಮರದ ದಿಮ್ಮಿ, ವಿದ್ಯುತ್ ಕಂಬ, ತಂತಿಗಳನ್ನು ಮುಳುಗು ತಜ್ಞರು ಪತ್ತೆಹಚ್ಚಿದ್ದಾರೆ. ಆದರೆ ಲಾರಿ ಹಾಗೂ ಕಾಣೆಯಾದವರ ಮೃತದೇಹಗಳು ಪತ್ತೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್‌

    ಕಾರ್ಯಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಜು ತಜ್ಞ ಈಶ್ವರ್ ಮಲ್ಪೆ, ನಾನು ಈ ಹಿಂದೆ ಮಾಡಿದ ಬಹಳಷ್ಟು ಕಾರ್ಯಾಚರಣೆ ಯಶಸ್ವಿ ಆಗಿದೆ. ಆದರೆ ಇವತ್ತಿನ ಕಾರ್ಯಾಚರಣೆಯಲ್ಲಿ ಯಶಸ್ಸು ಸಿಗದೇ ಇರುವ ದುಃಖ ನನಗಿದೆ. ನಿರಂತರ ಮಳೆಯಿಂದ ಗಂಗಾವಳಿ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಆಗುತ್ತಲೇ ಇದೆ. ನದಿಯ ನೀರಿನ ವೇಗ ಮತ್ತು ಕೆಸರು ನೀರಿನಿಂದ ಕಾರ್ಯಾಚರಣೆಯಲ್ಲಿ ಯಶಸ್ಸು ಕಾಣುವುದಕ್ಕೆ ಆಗಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ – ಪರಮೇಶ್ವರ್

    ನಾನು ಶನಿವಾರ ನದಿಗೆ ಇಳಿದಾಗ ಅಲ್ಲಿ ಬಂಡೆಕಲ್ಲು ಹಾಗೂ ಮಣ್ಣು ಹೊರತುಪಡಿಸಿ ಬೇರೆ ಏನು ಕಾಣಲಿಲ್ಲ. ಭಾನುವಾರ ಕಾರ್ಯಾಚರಣೆ ಮಾಡಿದ ಪಾಯಿಂಟ್‌ನಲ್ಲಿ ಆಲದ ಮರ ಕಾಣಿಸಿತ್ತು. ಮರದ ಸುತ್ತ ಏನಿದೆ ಎಂಬುವುದನ್ನು ನೋಡಲು ಪ್ರಯತ್ನಿಸಿದೆ. ಆದರೆ ನದಿಯ ನೀರಿನ ವೇಗ ಜಾಸ್ತಿ ಇರುವ ಹಿನ್ನೆಲೆ ಅಲ್ಲಿ ಇರಲಾಗಲಿಲ್ಲ. ಕೆಸರು ನೀರು ಇರೋತನಕ ಕಾರ್ಯಾಚರಣೆ ಮಾಡುವುದು ಕಷ್ಟ. ನಾನು ನದಿಯ ಒಳಗೆ ಎಷ್ಟೆ ಇಳಿದರೂ ಸರಿಯಾಗಿ ಏನೂ ಕಾಣಲಿಲ್ಲ. ನದಿಯ ನೀರು ಕೆಸರು ಮಿಶ್ರಿತ ಆಗಿರುವುದರಿಂದ ಏನೂ ಸರಿಯಾಗಿ ಕಾಣುತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಎನ್‌ಡಿಎ ಅವಧಿಯಲ್ಲಿ 2,95,817 ಕೋಟಿ ರೂ. ತೆರಿಗೆ ಹಂಚಿಕೆ: ರಾಜ್ಯ ಸರ್ಕಾರಕ್ಕೆ ನಿರ್ಮಲಾ ತಿರುಗೇಟು

  • ಶಿರೂರು ಗುಡ್ಡ ಕುಸಿತ ದುರಂತ; ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ

    ಶಿರೂರು ಗುಡ್ಡ ಕುಸಿತ ದುರಂತ; ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ

    – 8 ಕ್ಕೇರಿದ ಶವಗಳ ಸಂಖ್ಯೆ
    – 100 ಕ್ಕೂ ಹೆಚ್ಚು ಜನರಿಂದ ಮಣ್ಣು ತೆರವು ಕಾರ್ಯಾಚರಣೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ಜೊತೆಗೆ ಯೋಧರ ನೆರವು ಪಡೆದಿದೆ.

    ಒಂದೆಡೆ ಬಿಟ್ಟು ಬಿಡದ ಮಳೆ, ಮತ್ತೊಂದೆಡೆ ಪದೇ ಪದೇ ನೆಲಕ್ಕುರುಳುತ್ತಿರುವ ಗುಡ್ಡದ ಮಣ್ಣು. ಇದರ ನಡುವೆ ಜೀವ ಪಣಕ್ಕಿಟ್ಟು ಕಾರ್ಯಾಚರಣೆ ಮಾಡುತ್ತಿದೆ ರಕ್ಷಣಾ ತಂಡ. ಈಗ ಸಣ್ಣಿ ಹನುಮಂತ ಗೌಡ (67) ಮಹಿಳೆ ಶವ ಸಿಕ್ಕಿದೆ. ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಇನ್ನೂ ಮೂವರಿಗೆ ಶೋಧ ಕಾರ್ಯ ಮುಂದುವರಿದಿದೆ.

    ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್‌ಗಳು ಮಾತ್ರ ಪತ್ತೆಯಾಗಿಲ್ಲ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಆರ್ಮಿ ಕಮಾಂಡೋಗಳ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.

    ಗುಡ್ಡದ ಮಣ್ಣು ತೆರವಿಗೆ ಅಬ್ಬರದ ಅಡ್ಡಿ ಉಂಟು ಮಾಡಿದರೆ, ಮಳೆಯಿಂದ ಗುಡ್ಡದ ಭಾಗದಿಂದ ಬರುತ್ತಿರುವ ನೀರು ದೊಡ್ಡ ಕಂದಕವನ್ನೇ ಸೃಷ್ಟಿ ಮಾಡಿದೆ. ಇದರ ಜೊತೆಗೆ ಈ ಭಾಗದ ಮಣ್ಣನ್ನು ಪರೀಕ್ಷೆ ಮಾಡಿದ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಭೂ ವಿಜ್ಞಾನಿಗಳ ತಂಡ ಮತ್ತೆ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ವರದಿ ನೀಡಿದೆ. ಹೀಗಾಗಿ ಕಾರ್ಯಾಚರಣೆ ಮಾಡುವುದು ಸಹ ದೊಡ್ಡ ತೊಡಕಾಗಿದ್ದು, ಸಾರ್ವಜನಿಕರಿಗೆ ಮಣ್ಣು ತೆರವಾದ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

    ಜುಲೈ 16ರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಯಿತು. ಈ ದುರಂತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಅವರಲ್ಲಿ ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

  • ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸೈನಿಕರಿಗೆ ಅಪಮಾನ ಮಾಡಿದ್ದಾರೆ: ಹೆಚ್‌ಡಿಕೆ

    ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸೈನಿಕರಿಗೆ ಅಪಮಾನ ಮಾಡಿದ್ದಾರೆ: ಹೆಚ್‌ಡಿಕೆ

    ಬೆಂಗಳೂರು: ಅಂಕೋಲ ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಸೇನೆ (Army) ಕರೆದುಕೊಂಡು ಬರಬೇಕಿತ್ತು ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಹೆಚ್‌ಡಿಕೆ ಮತ್ತೆ ಕಿಡಿಕಾರಿದ್ದಾರೆ. ಡಿಕೆ ಶಿವಕುಮಾರ್ ಸೈನಿಕರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆ ಮೂಲಕ ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದರು. ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು. ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ ಎಂದರು. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ

    ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರ ಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ತಮಿಳುನಾಡಿಗೆ ನಾವು ನೀರು ಬಿಟ್ಟಿಲ್ಲ: ಡಿಕೆಶಿ

    ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ. ಇಷ್ಟು ಸರಳ ಸಾಮರಸ್ಯ ತತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ. ನಮ್ಮ ಸೇನೆ ನಮ್ಮ ಹೆಮ್ಮೆ ಎಂದು ಹರಿಹಾಯ್ದರು. ಇದನ್ನೂ ಓದಿ: ಇಂದಿನಿಂದ ಸಂಸತ್‌ ಅಧಿವೇಶನ ಆರಂಭ – ನಾಳೆ ಕೇಂದ್ರ ಬಜೆಟ್‌ ಮಂಡನೆ

  • ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

    ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

    ಕಾರವಾರ: ಅಂಕೋಲ (Ankola) ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ.

    ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಇನ್ನು ಈ ಕುರಿತು ಅಂಕೋಲ ತಹಶೀಲ್ದಾರ್ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ. ಸದ್ಯ ಈಗ ಐದು ಜನ ಸಿಕ್ಕಿದ್ದಾರೆ. ಕ್ಯಾಂಟೀನ್ ಮಾಲೀಕನ ಮಗಳು ಆವಂತಿಕಾ ಮೃತದೇಹ ಪತ್ತೆಯಾಗಿದೆ. ಮತ್ತೊಂದು ಕಡೆ ರಸ್ತೆ ಮೇಲಿನ ಗುಡ್ಡ ತೆರವು ಕಾರ್ಯ ಸಹ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿದು 20ಕ್ಕೂ ಹೆಚ್ಚು ಜನರು ಮೃತ ಆಗಿರುವ ಬಗ್ಗೆ ಶಂಕೆ ವ್ಯಕ್ತ ಆಗುವುದರ ಜೊತೆಗೆ ಇನ್ನಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಈ ಹಿನ್ನೆಲೆ ಘಟನಾ ಸ್ಥಳಕ್ಕೆ ತಜ್ಞರು ಭೇಟಿ ನೀಡಲಿದ್ದಾರೆ. ಜಿಯೋಗ್ರಾಫಿಕಲ್ ಸರ್ವೇ ಆಫ್ ಇಂಡಿಯಾ ತಜ್ಞ ಸಂಜೀವ್ ಎಂಬವರು ಭೂಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈಗಾಗಲೇ ಗುಡ್ಡ ಕುಸಿತ ಆಗಿರುವ ಬಗ್ಗೆ ಬಹಳಷ್ಟು ಚರ್ಚೆ ಆಗುತ್ತಿದೆ. ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದ್ದರಿಂದ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಭೂ ಕುಸಿತದ ಬಗ್ಗೆ ಅಧ್ಯಯನ ಮಾಡಲಿದೆ. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

  • ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದೆ ಗ್ಯಾಸ್‌

    ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಟ್ಯಾಂಕರ್‌ನಿಂದ ಸೋರಿಕೆಯಾಗುತ್ತಿದೆ ಗ್ಯಾಸ್‌

    ಕಾರವಾರ: ಗಂಗಾವಳಿ ನದಿಯಲ್ಲಿ ಕೊಚ್ಚಿ‌ ಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ಅನಿಲ ಸೋರಿಕೆ ಆಗುತ್ತಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

    ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಎರಡು ಗ್ಯಾಸ್ ಟ್ಯಾಂಕರ್ ಹಾಗೂ ಒಂದು ಲಾರಿಯನ್ನು ನಿಲ್ಲಿಸಲಾಗಿತ್ತು. ಏಕಾಏಕಿ ಗುಡ್ಡ ಕುಸಿದ ಪರಿಣಾಮ ಒಂದು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಹೋಗಿ ಬಿದ್ದಿದೆ. ಇದನ್ನೂ ಓದಿ: ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮೇಲ್ಸೇತುವೆ ಇಂದು ಬೆಂಗಳೂರಿನಲ್ಲಿ ಲೋಕಾರ್ಪಣೆ

     

    ಗಂಗಾವಳಿ ನದಿ ವೇಗಕ್ಕೆ 7 ಕಿ.ಮೀ ದೂರಕ್ಕೆ ಕೊಚ್ಚಿ ಹೋಗಿರುವ ಟ್ಯಾಂಕರ್ ಈಗ ಸಗಡಗೇರಿ ಎಂಬಲ್ಲಿ ವಾಲಿ ನಿಂತಿದೆ. ಗ್ಯಾಸ್ ಟ್ಯಾಂಕರ್ ಸ್ಥಿತಿಯನ್ನು ಪರಿಶೀಲಿಸಲು ಬೋಟ್ ಮೂಲಕ ಭಾರತ್ ಗ್ಯಾಸ್‌ ತಜ್ಞರು ತೆರಳಿದಾಗ ಸೋರಿಕೆ ಆಗುತ್ತಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಒಮಾನ್‌ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್‌ – 13 ಭಾರತೀಯ ಸಿಬ್ಬಂದಿ ನಾಪತ್ತೆ

    ನೀರಿನಲ್ಲಿ ಕೊಚ್ಚಿ ಹೋಗಿರುವ ಟ್ಯಾಂಕರ್‌ನಲ್ಲಿರುವ ಅನಿಲವನ್ನು ಬೇರೆ ಟ್ಯಾಂಕರ್‌ಗೆ ವರ್ಗಾಯಿಸುವುದೇ ಹೇಗೆ ಎನ್ನುವುದೇ ತಜ್ಞರ ಮುಂದೆ ಇರುವ ದೊಡ್ಡ ಸವಾಲು.

     

    ಮಂಗಳೂರಿನಿಂದ ಧಾರವಾಡಕ್ಕೆ ಟ್ಯಾಂಕರ್‌ ತೆರಳುತ್ತಿತ್ತು. ಈ ಟ್ಯಾಂಕರ್‌ನಲ್ಲಿ ಸುಮಾರು 30 ಟನ್‌ ಅನಿಲವಿದೆ. ಸೋರಿಕೆ ಭೀತಿಯಿಂದ ಪರಿಸರದ ನಿವಾಸಿಗಳಿಗೆ ಬೆಂಕಿ ಒಲೆ ಮತ್ತು ವಿದ್ಯುತ್‌ ದೀಪ ಹಚ್ಚದಂತೆ ಜಿಲ್ಲಾಡಳಿತ ಸೂಚಿಸಿದೆ.

  • ಶಿರೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ

    ಶಿರೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಭೂ ಸಮಾಧಿ – ಅಂತ್ಯಸಂಸ್ಕಾರ ಮಾಡಲೂ ಜನರಿಲ್ಲ

    – ಗುಡ್ಡ ಕುಸಿದು 10 ಮಂದಿ ಬಲಿ
    – ಕಣ್ಮರೆಯಾದವರಿಗೆ ಶೋಧಕಾರ್ಯ

    ಕಾರವಾರ: ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ಮಳೆ ಮರಣ ಮಳೆಯಾಗಿ ಬದಲಾಗಿದೆ. ಅದರಲ್ಲೂ ರಣಮಳೆ ಮತ್ತು ಭಾರೀ ಭೂಕುಸಿತಗಳಿಂದ ಉತ್ತರ ಕನ್ನಡ (Uttara Kannada) ಜಿಲ್ಲೆ ತತ್ತರಿಸಿ ಹೋಗಿದೆ. ಅಂಕೋಲಾದ ಶಿರೂರು (Shirur) ಬಳಿ ಮಂಗಳೂರು ಗೋವಾಗೆ ಸಂರ್ಪಕ ಕಲ್ಪಿಸುವ ರಾಷ್ಟೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು ಕನಿಷ್ಠ 10 ಮಂದಿ ಬಲಿ ಆಗಿದ್ದಾರೆ.

    ಮೃತರಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಐವರಿದ್ದಾರೆ. ಇನ್ನೂ 20 ಮಂದಿ ಕಣ್ಮರೆಯಾಗಿರುವ ಶಂಕೆ ಇದ್ದು, ಭಾರೀ ಮಳೆ ನಡುವೆ ಎನ್‌ಡಿಆರ್‌ಎಫ್ ಶೋಧ ಕಾರ್ಯ ನಡೆಸಿದ್ದು, ಐವರ ಶವ ಹೊರತೆಗೆದಿದೆ.  ಮಂಗಳವಾರ ಇಡೀ ದಿನ ನಡೆದ ಎನ್‌ಡಿಆರ್‌ಎಫ್ (NDRF) ಕಾರ್ಯಚರಣೆ ರಾತ್ರಿ ವೇಳೆ ಸ್ಥಗಿತ ಮಾಡಲಾಗಿದ್ದು ಇಂದು ಮುಂದುವರಿಯಲಿದೆ.

    ಜೀವನ ನಿರ್ವಹಣೆಗಾಗಿ ದೂರದ ಕಾರವಾರದಿಂದ ಬಂದು ಗಂಗಾವಳಿ ನದಿ ಬಳಿಯ ಶಿರೂರಿನಲ್ಲಿ ಟೀ ಅಂಗಡಿ (Tea Shop) ವ್ಯಾಪಾರ ನಡೆಸುತ್ತಿದ್ದ ಲಕ್ಷ್ಮಣ ನಾಯ್ಕ್ ಇಡೀ ಕುಟುಂಬವೇ ಗುಡ್ಡ ಕುಸಿತಕ್ಕೆ ಬಲಿಯಾಗಿದೆ. ಇಡೀ ದಿನ ನಡೆದ ಕಾರ್ಯಚರಣೆಯಲ್ಲಿ 6 ಜನರ ಮೃತ ದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ. ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ತುಂಗಭದ್ರ – ಉಕ್ಕಡಗಾತ್ರಿ ಸ್ನಾನಘಟ್ಟ, ಅಂಗಡಿಗಳು ಜಲಾವೃತ

    ಮೃತರನ್ನು ಲಕ್ಷ್ಮಣ ನಾಯ್ಕ್, ಶಾಂತಿ ನಾಯ್ಕ್, ರೋಶನ್, ಅವಂತಿಕಾ, ಜಗನ್ನಾಥ ಎಂದು ಗುರುತಿಸಲಾಗಿದೆ. ಈ ನತದೃಷ್ಟ ಕುಟುಂಬದಲ್ಲಿ ಅಂತ್ಯಕ್ರಿಯೆ ಮಾಡಲೂ ಯಾರು ಉಳಿದಿಲ್ಲ. ಸಂಬಂಧಿ ಲಕ್ಷ್ಮಣ ನಾಯ್ಕ್ ಕುಟುಂಬ ಬಲಿಯಾಗಿದೆ ಎಂಬ ಸುದ್ದಿ ತಿಳಿದು ಸ್ಥಳಕ್ಕೆ ಓಡಿ ಬಂದ ಸಂಬಂಧಿಕರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಲಕ್ಷ್ಮಣ ನಾಯ್ಕ್ ಕುಟುಂಬದ ಸದಸ್ಯರ ಸಾಮೂಹಿಕ ಅಂತ್ಯಕ್ರಿಯೆ ಮಾಡುವುದಾಗಿ ಹೇಳಿದರು.

     

    ಶಿರೂರು ಬಳಿ ಕೇಂದ್ರ ಐಆರ್‌ಬಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದು ಇದೇ ಕಾಮಗಾರಿ ನಡೆಯುಗ ಸ್ಥಳದಲ್ಲೇ ಲಕ್ಷ್ಮಣ ನಾಯ್ಕ್ ಕುಟುಂಬ ಟೀ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಸತತ ಮಳೆಯಿಂದಾಗಿ ಗುಡ್ಡದಲ್ಲಿ ನೀರು ಹರಿದು ಗುಡ್ಡ ಕುಸಿತವಾಗಿದೆ. ಕುಸಿತ ಗುಡ್ಡ ರಸ್ತೆಯಲ್ಲಿ ನಿಂತ ಎಲ್‌ಪಿಜಿ ಟ್ಯಾಂಕರ್ ಮೇಲೆ ಬಿದ್ದಿದೆ. ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿದ್ದು, ನದಿಯಲ್ಲಿ ತೇಲುತ್ತಿದೆ. ಹೈವೇ ಪಕ್ಕ ಟ್ಯಾಂಕರ್ ನಿಲ್ಲಿಸಿದ್ದ ಚಾಲಕ ಮತ್ತು ಕ್ಲೀನರ್ ಟೀ ಕುಡಿಯುವಾಗ ಈ ದುರಂತ ಸಂಭವಿಸಿದೆ.

    ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ಸತೀಶ್ ಶೈಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಒಂದು ವರ್ಷದಿಂದ ಕೇಂದ್ರ ಐಆರ್‌ಬಿ ಅಧಿಕಾರಿಗಳಿಗೆ ರಸ್ತೆ ತೆರವು ಮಾಡಿಕೊಡುವಂತೆ ಮಾಡಿದ್ರು ಗಮನ ಹರಿಸಲಿಲ್ಲ.  ಸತತ ಮಳೆ ಹಾಗೂ ಐಆರ್‌ಬಿ ಅಧಿಕಾರಿಗಳ ಕಾಮಗಾರಿಗಳಿಂದಲೇ ಈ ದುರಂತವಾಗಿದೆ ಎಂದು ಮಂಕಾಳು ವೈದ್ಯ ಅಸಮಧಾನ ವ್ಯಕ್ತಪಡಿಸಿದರು.

     

  • ಶಿರೂರು ಶ್ರೀ ಧರಿಸಿದ್ದ 1ಕೋಟಿ ರೂ. ಮೌಲ್ಯದ ಚಿನ್ನ ಸೇಫ್- ಎಲ್ಲಿದೆ ಆ ಚಿನ್ನಾಭರಣಗಳು?

    ಶಿರೂರು ಶ್ರೀ ಧರಿಸಿದ್ದ 1ಕೋಟಿ ರೂ. ಮೌಲ್ಯದ ಚಿನ್ನ ಸೇಫ್- ಎಲ್ಲಿದೆ ಆ ಚಿನ್ನಾಭರಣಗಳು?

    ಉಡುಪಿ: ಶಿರೂರು ಸ್ವಾಮೀಜಿಯವರು ಧರಿಸುತ್ತಿದ್ದ 1 ಕೋಟಿ ರೂ. ಮೌಲ್ಯದ ಚಿನ್ನ ಭದ್ರವಾಗಿದೆ. ಈ ಚಿನ್ನಾಭರಣಗಳನ್ನು ಶೀರೂರು ಶ್ರೀಗಳ ಪೂರ್ವಶ್ರಮಕ್ಕೆ ಸಲ್ಲಿಕೆ ಮಾಡಲಾಗಿದೆ ಅಂತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಶಿರೂರು ಶ್ರೀಗಳು ಧರಿಸುತ್ತಿದ್ದ ಚಿನ್ನಾಭರಣ ಸೇಫಾಗಿದೆ. ರಮ್ಯಾ ಶೆಟ್ಟಿ ಚಿನ್ನಾಭರಣ ಕದ್ದಿಲ್ಲ. ಸ್ವಾಮೀಜಿ ಆಪ್ತರೂ ಚಿನ್ನಾಭರಣ ಎಗರಿಸಿಲ್ಲ. ಕೆಲ ಮಾಧ್ಯಮಗಳಲ್ಲಿ ಚಿನ್ನಾಭರಣ ಕಾಣೆ ಎಂಬ ವದಂತಿ ಹಬ್ಬಿಸಲಾಗಿತ್ತು. ಆದ್ರೆ ಇದೀಗ ಚಿನ್ನಾಭರಣಗಳನ್ನು ಆಸ್ಪತ್ರೆಯ ವೈದ್ಯರು ಸ್ವಾಮೀಜಿ ಕುಟುಂಬಕ್ಕೆ ನೀಡಿದ್ದಾರೆ ಅಂತ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಶನಿವಾರ ಮರಣೋತ್ತರ ವರದಿ?;
    ಜುಲೈ 19 ರಂದು ಶೀರೂರು ಶ್ರೀ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಶ್ರೀಗಳ ಸಾವಿನ ಕುರಿತು ಇನ್ನೆರಡು ದಿನದಲ್ಲಿ ಮರಣೋತ್ತರ ಪರೀಕ್ಷೆ ವರದಿ ಬರಲಿದೆ. ಶನಿವಾರ ಮರಣೋತ್ತರ ಪರೀಕ್ಷೆಯ ವರದಿ ಸಿಗುವ ಸಾಧ್ಯತೆಗಳಿದ್ದು, 6 ವಾರದ ನಂತರ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‍ಎಸ್‍ಎಲ್) ವರದಿ ಕೈ ಸೇರುವ ಸಾಧ್ಯತೆಯಿದೆ. ಈ ಎರಡೂ ವರದಿ ಬಂದ ಬಳಿಕ ಸಾವಿನ ತನಿಖೆ ಮಹತ್ವ ಪಡೆಯಲಿದೆ.

    ಜುಲೈ 31ರಂದು ಆರಾಧನೆ:
    ಲಕ್ಷ್ಮೀವರತೀರ್ಥ ಸ್ವಾಮೀಜಿ ವೃಂದಾವನಸ್ಥ ಹಿನ್ನೆಲೆಯಲ್ಲಿ ಜುಲೈ 31 ರಂದು ಶಿರೂರು ಸ್ವಾಮೀಜಿ ಆರಾಧನೆ ಕಾರ್ಯಕ್ರಮವಿದೆ. ಶ್ರೀಗಳು ನಿಧನ ಹೊಂದಿದ ಹದಿಮೂರನೇ ದಿನ ಸೋದೆಮಠದ ನೇತೃತ್ವದಲ್ಲಿ ಈ ಆರಾಧನೆ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಹಿರಿಯಡ್ಕ ಸಮೀಪದ ಮೂಲಮಠ ಶೀರೂರಿನಲ್ಲಿ ಆರಾಧನಾ ಪ್ರಕ್ರಿಯೆ ನಡೆಯಲಿದೆ.

    ಅನಗತ್ಯ ಮಾನಹಾನಿ:
    ಸ್ವಾಮೀಜಿಯ ಚಿನ್ನವನ್ನು ಸ್ವಾಮೀಜಿ ಆಪ್ತ ಬುಲೆಟ್ ಗಣೇಶ್ ಎಂಬವರು ಕದ್ದಿದ್ದಾರೆಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಗಣೇಶ್, ನಾನು ಆರೋಪಿಯಲ್ಲ. ನಾನು ಚಿನ್ನ ಕದ್ದಿಲ್ಲ. ನನ್ನನ್ನು ಯಾರೂ ಈವರೆಗೆ ವಿಚಾರಣೆ ಮಾಡಿಲ್ಲ. ಅನಗತ್ಯವಾಗಿ ನನ್ನ ಮಾನಹಾನಿ ಮಾಡಲಾಗುತ್ತಿದೆ ಅಂತ ಕಿಡಿಕಾರಿದ್ದಾರೆ.

    ಸ್ವಾಮೀಜಿ ಚಿನ್ನಕ್ಕೂ ನನಗೂ ಸಂಬಂಧವಿಲ್ಲ. ಸ್ವಾಮೀಜಿ ಜೊತೆ ಯಾವುದೇ ಆರ್ಥಿಕ ವ್ಯವಹಾರ ಇಲ್ಲ. ನಾನು ಸ್ವಾಮೀಜಿ ಪಾರ್ಟ್‍ನರ್ ಅಲ್ಲ. ನಾನು ಶಿರೂರು ಸ್ವಾಮೀಜಿಯ ಭಕ್ತನಾಗಿದ್ದು, ಅನುಮಾನಾಸ್ಪದ ಸಾವಿನ ತನಿಖೆಯಾಗಬೇಕು ಅಂತ ಅವರು ಆಗ್ರಹಿಸಿದ್ದಾರೆ.