Tag: Shiv Sena Leader

  • ಶಿವಸೇನೆಯ ಜಿಲ್ಲಾಧ್ಯಕ್ಷನ ಹತ್ಯೆ ಕೇಸ್‌ – ಮೂವರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್‌!

    ಶಿವಸೇನೆಯ ಜಿಲ್ಲಾಧ್ಯಕ್ಷನ ಹತ್ಯೆ ಕೇಸ್‌ – ಮೂವರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್‌!

    ಚಂಡೀಗಢ: ಪಂಜಾಬ್‌ನ (Punjab) ಮೋಗಾದ ಶಿವಸೇನೆಯ (Shiv Sena) ಜಿಲ್ಲಾಧ್ಯಕ್ಷ ಮಂಗತ್ ರಾಯ್ ಮಂಗಾ (Mangat Rai Manga) ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರನ್ನು ಅರುಣ್ ಅಲಿಯಾಸ್ ದೀಪು, ಅರುಣ್ ಅಲಿಯಾಸ್ ಸಿಂಘಾ ಮತ್ತು ರಾಜ್‌ವೀರ್ ಅಲಿಯಾಸ್ ಲಡ್ಡೊ ಎಂದು ಗುರುತಿಸಲಾಗಿದೆ. ಮೂವರು ಅಡಗುತಾಣಗಳಲ್ಲಿ ಅಡಗಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ.

    ಆರೋಪಿಗಳನ್ನು ಪೊಲೀಸರು ಸುತ್ತುವರಿದಾಗ, ಪೊಲೀಸರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಸಹ ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ, ದೀಪು ಎಡಗಾಲಿಗೆ, ಸಿಂಘಾ ಬಲಗಾಲಿಗೆ ಗುಂಡು ತಗುಲಿದೆ. ರಾಜವೀರ್‌ ಸಹ ಗಾಯಗೊಂಡಿದ್ದಾನೆ. ಮೂವರು ಆರೋಪಿಗಳನ್ನು ತಕ್ಷಣ ಮಾಲೌಟ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಂಗತ್ ರಾಯ್ ಮಂಗಾ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು. ಗುಂಡಿನ ದಾಳಿಯಲ್ಲಿ 11 ವರ್ಷದ ಬಾಲಕ ಸೇರಿದಂತೆ ಇತರ ಇಬ್ಬರು ಗಾಯಗೊಂಡಿದ್ದರು.

    ಈ ಸಂಬಂಧ ಬಿಎನ್‌ಎಸ್ ಸೆಕ್ಷನ್ 103(1), 191(3), 190 ಮತ್ತು ಶಸ್ತ್ರಾಸ್ತ್ರ ಕಾಯ್ದೆ ಸೆಕ್ಷನ್ 25/27ರ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನಿಗೆ ಗುಂಡಿಕ್ಕಿ ಹತ್ಯೆ

    ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನಿಗೆ ಗುಂಡಿಕ್ಕಿ ಹತ್ಯೆ

    ಚಂಡೀಗಢ: ಬೈಕ್‌ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ ಗಾಯಗೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

    ಗುರುವಾರ ರಾತ್ರಿ ಶಿವಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ.

    ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಶಿವಸೇನಾ ನಾಯಕನ ಮೇಲೆ ಗುಂಡು ಹಾರಿಸಿದರು. ಆದರೆ, ಮಂಗತ್‌ ಬದಲಿಗೆ 12 ವರ್ಷದ ಬಾಲಕನಿಗೆ ತಗುಲಿತು. ದಾಳಿಕೋರರು ಬೆನ್ನಟ್ಟಿದಾಗ ಮಂಗಾ ತಕ್ಷಣ ದ್ವಿಚಕ್ರ ವಾಹನದಲ್ಲಿ ಆ ಪ್ರದೇಶದಿಂದ ಪರಾರಿಯಾಗಲು ಯತ್ನಿಸಿದರು. ಬೆನ್ನಟ್ಟಿ ಮತ್ತೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

    ಗಾಯಗೊಂಡ ಬಾಲಕನನ್ನು ಆರಂಭದಲ್ಲಿ ಮೋಗಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮಂಗಾ ಯಾವ ಶಿವಸೇನಾ ಬಣದ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಪ್ರತಿಭಟನೆ ವೇಳೆ ಶಿವಸೇನೆ ಮುಖಂಡ ಗುಂಡಿನ ದಾಳಿಗೆ ಬಲಿ

    ಪ್ರತಿಭಟನೆ ವೇಳೆ ಶಿವಸೇನೆ ಮುಖಂಡ ಗುಂಡಿನ ದಾಳಿಗೆ ಬಲಿ

    ಚಂಡೀಗಢ: ಪ್ರತಿಭಟನೆ ವೇಳೆ ಶಿವಸೇನೆಯ ಮುಖಂಡ (Shiv Sena Leader) ಸುಧೀರ್ ಸೂರಿ (Sudhir Suri) ಅವರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರು ಸಾವನ್ನಪ್ಪಿರುವ ಘಟನೆ ಪಂಜಾಬ್‌ನ (Punjab) ಅಮೃತಸರದಲ್ಲಿ (Amritsar) ಶುಕ್ರವಾರ ನಡೆದಿದೆ.

    ವರದಿಗಳ ಪ್ರಕಾರ ಪಂಜಾಬ್‌ನ ಅಮೃತಸರದಲ್ಲಿ ಶಿವಸೇನೆಯ ಮುಖಂಡರು ದೇವಸ್ಥಾನದ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ಇದನ್ನೂ ಓದಿ: ಗುಜರಾತ್‌ ಚುನಾವಣೆ – ಮಾಜಿ ಪತ್ರಕರ್ತ, ಟಿವಿ ಆ್ಯಂಕರ್‌ ಇಸುದನ್‌ ಗಧ್ವಿ ಎಎಪಿ ಸಿಎಂ ಅಭ್ಯರ್ಥಿ

    ಈ ವರ್ಷ ಜುಲೈನಲ್ಲಿ ನಿರ್ದಿಷ್ಟ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಭಾಷಣ ಮಾಡಿ, ಧಾರ್ಮಿಕ ಭಾವನೆಯನ್ನು ಕೆರಳಿಸಿರುವ ಆರೋಪದ ಮೇಲೆ ಸೂರಿ ಬಂಧನಕ್ಕೊಳಗಾಗಿ ಬಿಡುಗಡೆಯೂ ಆಗಿದ್ದರು. ಆಗಿನಿಂದ ಸುಧೀರ್ ಸೂರಿ ಅವರು ಸುದ್ದಿಯಲ್ಲಿದ್ದರು. ಇದನ್ನೂ ಓದಿ: ಮನೆಯಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ – ಮೂವರು ಸಾವು, ಇಬ್ಬರಿಗೆ ಗಾಯ

    ಇದು 2 ದಿನಗಳ ಅವಧಿಯಲ್ಲಿ ಶಿವಸೇನೆ ನಾಯಕರ ಮೇಲೆ ನಡೆದಿರುವ 2ನೇ ದಾಳಿಯಾಗಿದೆ. ಗುರುವಾರ ಮುಂಜಾನೆ ಟಿಬ್ಬಾ ರಸ್ತೆಯಲ್ಲಿರುವ ಗ್ರೆವಾಲ್ ಕಾಲೋನಿಯಲ್ಲಿ ಪಂಜಾಬ್ ಶಿವಸೇನೆಯ ನಾಯಕ ಅಶ್ವನಿ ಚೋಪ್ರಾ ಅವರ ಮನೆ ಬಳಿ ಇಬ್ಬರು ಸೈಕಲ್‌ನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದರು.

    Live Tv
    [brid partner=56869869 player=32851 video=960834 autoplay=true]