Tag: Shiv Sena MLA

  • ನೇಣು ಬಿಗಿದ ಸ್ಥಿತಿಯಲ್ಲಿ ಶಿವಸೇನೆ ಶಾಸಕನ ಪತ್ನಿ ಶವ ಪತ್ತೆ

    ನೇಣು ಬಿಗಿದ ಸ್ಥಿತಿಯಲ್ಲಿ ಶಿವಸೇನೆ ಶಾಸಕನ ಪತ್ನಿ ಶವ ಪತ್ತೆ

    ನವದೆಹಲಿ: ನೇಣು ಬಿಗಿದ ಸ್ಥಿತಿಯಲ್ಲಿ ಸ್ಥಳೀಯ ಶಿವಸೇನೆ ಶಾಸಕರೊಬ್ಬರ ಪತ್ನಿಯ ಶವ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಅವರ ಪತ್ನಿ ರಜನಿ ಕುಡಾಲ್ಕರ್ ಅವರ ಮೃತದೇಹ, ಕುರ್ಲಾ ಪೂರ್ವದ ನೆಹರೂ ನಗರ ಪ್ರದೇಶದಲ್ಲಿರುವ ಡಿಗ್ನಿಟಿ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿ ರಾತ್ರಿ 8.30ರ ಸುಮಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗೇಶ್ ಕುಡಾಲ್ಕರ್ ಕುರ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇದನ್ನೂ ಓದಿ: 8 ವರ್ಷದ ಮಗನನ್ನೇ ಕತ್ತು ಸೀಳಿ ಕೊಂದ ಕ್ರೂರಿ ತಾಯಿ

    ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ವೇಳೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಕಾರಣ ಏನು ಎಂಬುವುದರ ಬಗ್ಗೆ ಸ್ಪಷ್ಟವಾದ ಮಾಹಿತಿ ದೊರೆತಿಲ್ಲ ಎಂದು ನೆಹರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದೊಂದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದ್ದು, ಘಟನೆ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಲಿಫ್ಟ್ ನೀಡುವ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ – ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್