ತೆಲುಗಿನ ಖ್ಯಾತ ಗಾಯಕಿ, ಕನ್ನಡದಲ್ಲೂ ಹಲವು ಸೂಪರ್ ಹಿಟ್ ಗೀತೆಗಳಿಗೆ ದನಿಯಾಗಿರುವ ಮಂಗ್ಲಿ, ಇದೀಗ ಮೊಟ್ಟ ಮೊದಲ ಬಾರಿಗೆ ಕನ್ನಡದ ಆಲ್ಬಂಗೆ ಹೆಜ್ಜೆ ಹಾಕಿದ್ದಾರೆ. ಜೊತೆಗೆ ಆ ಗೀತೆಯನ್ನು ಹಾಡಿದ್ದಾರೆ. ಗಣೇಶ ಹಬ್ಬಕ್ಕಾಗಿ ಈ ಹಾಡು ರಿಲೀಸ್ ಆಗಿದ್ದು, ಶಿವನ ಭಕ್ತರು ಗೀತೆಯನ್ನು ಕೇಳಿ ಪುನಿತರಾಗಿದ್ದಾರೆ. ಶಿವನ ಭಕ್ತಿ ಗೀತೆ ಅದಾಗಿದ್ದು, ಮಂಗ್ಲಿ ಕಂಠದಲ್ಲಿ ಆ ಹಾಡು ಮತ್ತಷ್ಟು ಭಕ್ತಿರಸ ಉಕ್ಕಿಸಿದೆ.
ವರದರಾಜ್ ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದ್ದು, ಬಾಜಿ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಬೆಳ್ಳಿ ಬೆಟ್ಟವನಾಳೋನೆ’ ಸಾಲಿನಿಂದ ಶುರುವಾಗುವ ಈ ಗೀತೆಯನ್ನು ತಮ್ಮದೇ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ ಮಂಗ್ಲಿ. ಜಾನಪದ ಹಾಡುಗಳ ಮೂಲಕ ಫೇಮಸ್ ಆಗಿದ್ದ ಮಂಗ್ಲಿ, ಇದೀಗ ಭಕ್ತಿ ಗೀತೆಯ ಮೂಲಕವೂ ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ. ಬೆಳ್ಳಿ ಬೆಟ್ಟವನಾಳೋನೆ ಗೀತೆಯು ಅಷ್ಟೇ ಭಕ್ತ ಪ್ರಧಾನವಾಗಿ ಮೂಡಿ ಬಂದಿದೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್
ಕನ್ನಡದಲ್ಲಿ ರಾಬರ್ಟ್ ಸಿನಿಮಾದ ಕಣ್ಣೆ ಅದರಂದಿ ಹಾಡಿನ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ ಮಂಗ್ಲಿ, ಆನಂತರ ಜೋಗಿ ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಚಿತ್ರದ ಎಣ್ಣೆಗೂ ಹೆಣ್ಣಿಗೂ ಗೀತೆಗೂ ದನಿಯಾದರು. ನಂತರ ಪುಷ್ಪಾ ಸಿನಿಮಾದ ಕನ್ನಡದ ಡಬ್ಬಿಂಗ್ ಸಿನಿಮಾದಲ್ಲಿ ಐಟಂ ಸಾಂಗ್ ಗೂ ಮಂಗ್ಲಿ ಹಾಡಿದ್ದರು. ಅಷ್ಟೂ ಹಾಡುಗಳು ಸೂಪ್ ಹಿಟ್ ಆದವು ಎನ್ನುವುದು ವಿಶೇಷ.
Live Tv
[brid partner=56869869 player=32851 video=960834 autoplay=true]
ಭೀಮನ ಅಮಾವಾಸ್ಯೆಯು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ಭಾಗಗಳಲ್ಲಿ ಆಚರಿಸಲಾಗುವ ಹಬ್ಬವಾಗಿದೆ. ಇದನ್ನು ಹಿಂದೂ ಕ್ಯಾಲೆಂಡರ್‍ನ ಆಷಾಢ ಮಾಸದ ಕೊನೆ ಅಮಾವಾಸ್ಯೆವೆಂದು ಆಚರಿಸಲಾಗುತ್ತದೆ.
ಭಾರತೀಯ ಸಂಪ್ರದಾಯದಂತೆ ಹಿಂದೂಗಳು ಆಷಾಢದಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಆದರೆ ಆಷಾಢದ ಅಮಾವಾಸ್ಯೆಯ ದಿನ ಜ್ಯೋತಿರ್ಭೀಮೇಶ್ವರ ವ್ರತವನ್ನು ನವದಂಪತಿಗಳು ಸಡಗರದಿಂದ ಆಚರಿಸುತ್ತಾರೆ. ಈ ವ್ರತಕ್ಕೆ ‘ಪತಿ ಸಂಜೀವಿನಿ ವ್ರತ’ ಎಂದೂ ಕರೆಯುವುದುಂಟು. ಪತಿಗೆ ದೀರ್ಘಾಯುಷ್ಯವನ್ನು ಕರುಣಿಸುವಂತೆ, ತಮ್ಮನ್ನು ದೀರ್ಘ ಸುಮಂಗಲಿಯಾಗಿ ಹರಸುವಂತೆ ಕೋರಿ ಶಿವನನ್ನು ಪೂಜಿಸುವ ಹಬ್ಬವೇ ಭೀಮನ ಅಮಾವಾಸ್ಯೆ.
ಈ ದಿನ ಮದುವೆಯಾದ ಹೆಂಗಸರು ಮಾತ್ರವಲ್ಲ, ಮದುವೆಯಾಗದ ಹೆಣ್ಣುಮಕ್ಕಳು ಕೂಡ ಆಚರಿಸಬಹುದು. ಮದುವೆಯಾಗದ ಹೆಣ್ಣುಮಕ್ಕಳು ಒಳ್ಳೆ ಗಂಡ ಸಿಗಲಿ ಎಂದು ಹಾಗೂ ಮದುವೆಯಾದ ಹೆಣ್ಣು ತನ್ನ ಗಂಡನ ಆಯುಷ್ಯ ಹೆಚ್ಚಲಿ ಎಂದು ದೇವರನ್ನು ಪ್ರಾರ್ಥಿಸಿ ಈ ವ್ರತ ಕೈಗೊಳ್ಳುತ್ತಾರೆ.
ಪೂಜಾ ವಿಧಾನ
ಗೃಹಿಣಿಯರು ಕೈಗೆ ಕಂಕಣ ಕಟ್ಟಿಕೊಂಡು ಜ್ಯೋರ್ತಿಭೀಮೇಶ್ವರನ್ನು ಧ್ಯಾನಿಸಿ, ವ್ರತ ಕೈಗೊಳ್ಳಬೇಕು. ರಾಹುಕಾಲ ಹೊರತುಪಡಿಸಿ ಬೆಳಗ್ಗೆ ಅಥವಾ ಸಂಜೆ ಯಾವುದೇ ಶುಭ ಮುಹೂರ್ತದಲ್ಲಿ ವ್ರತ ಕೈಗೊಳ್ಳಬಹುದು.
ಒಂದು ತಟ್ಟೆಯಲ್ಲಿ ಅಕ್ಕಿ ಹಾಕಿ, ಅದರ ಮೇಲೆ ಎರಡು ದೀಪದ ಕಂಭ ನೆಟ್ಟು, ದೀಪದ ಎಣ್ಣೆ ಹಾಕಿ ಹಚ್ಚಬೇಕು. ಈ ದೀಪಸ್ತಂಭದಲ್ಲಿ ಶಿವ ಪಾರ್ವತಿಯನ್ನು ಆವಾಹನೆ ಮಾಡಿ ಪೂಜೆ ಸಲ್ಲಿಸುತ್ತಾರೆ. ಪೂಜಾ ಸಾಮಗ್ರಿಗಳ ಜೊತೆಗೆ 9 ಗಂಟಿನ ಗೌರಿ ದಾರ ಇಟ್ಟು ಪೂಜೆ ಮಾಡಿ ಆ ಬಳಿಕ ಕೈಗೆ ಕಟ್ಟಿಕೊಳ್ಳಬೇಕು. ಮೊದಲು ಗಣಪತಿ ಪೂಜೆ ಮಾಡಿ ನಂತರ ಭೀಮೇಶ್ವರನ ಪೂಜೆ ಮಾಡುತ್ತಾರೆ. ನೈವೇದ್ಯಕ್ಕೆ 9 ಕರಿಗಡುಬು ಅರ್ಪಿಸಲಾಗುತ್ತದೆ. ಆ ಬಳಿಕ ಗಂಡನ ಪಾದಪೂಜೆಯನ್ನು ನೆರವೇರಿಸಬೇಕು.
ಆಚರಣೆ ವಿಧಾನ ಭಿನ್ನ
ವ್ರತಾಚರಣೆ ಪ್ರಾಂತ್ಯದಿಂದ ಪ್ರಾಂತ್ಯಕ್ಕೆ ಭಿನ್ನತೆಯಿಂದ ಕೂಡಿದೆ. ಉದ್ದೇಶ ಒಂದೇ ಆದರೂ, ಆಚರಣೆಯಲ್ಲಿ ವಿವಿಧತೆಯನ್ನು ಕಾಣಬಹುದು. ದಕ್ಷಿಣ ಕನ್ನಡದಲ್ಲಿ ಇದನ್ನು ‘ಆಟಿ ಅಮಾವಾಸ್ಯೆ’ ಎಂದು ಕರೆಯುತ್ತಾರೆ. ಈ ದಿನದಂದು ಆ ಭಾಗದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಇದಕ್ಕೆ ‘ಕೊಡೆ ಅಮಾವಾಸ್ಯೆ’ ಎಂದು ಕರೆಯುತ್ತಾರೆ. ಈ ದಿನದಂದು ಮಗಳೊಂದಿಗೆ ಮನೆಗೆ ಬಂದು ಅಳಿಯನಿಗೆ ಮಾವ ಕೊಡೆ ನೀಡಿ ಸತ್ಕರಿಸುತ್ತಾರೆ.
ಪೌರಾಣಿಕ ಹಿನ್ನೆಲೆ
ಪುರಾಣಗಳ ಪ್ರಕಾರ ಶಿವನು ಪಾರ್ವತಿಯನ್ನು ಪತ್ನಿಯನ್ನಾಗಿ ಸ್ವೀಕರಿಸಿದ್ದು, ಭೀಮನ ಅಮಾವಾಸ್ಯೆ ದಿನ. ಪಾರ್ವತಿ ಸಮೃದ್ಧಿ, ಸಂತಾನ, ಪತಿವ್ರತೆ, ಶಕ್ತಿಯ ಸಂಕೇತ. ಹೀಗಾಗಿ ಈ ದಿನದಂದು ಹೆಂಗಳೆಯರು ವ್ರತ ಕೈಗೊಂಡು ಶಿವ ಮತ್ತು ಪಾರ್ವತಿಯನ್ನು ಆರಾಧಿಸಿದರೆ ಅವರಿಗೆ ಉತ್ತಮನಾದ ಗಂಡ ಸಿಗುತ್ತಾನೆ. ಅದೇ ರೀತಿ ವಿವಾಹಿತ ಹೆಂಗಸರು ಗಂಡನಿಗೆ ದೀರ್ಘಾಯುಷ್ಯ, ಯಶಸ್ಸು ಹಾಗೂ ಸಂತೋಷವನ್ನು ಬಯಸಿ ಪೂಜೆ ಸಲ್ಲಿಸುತ್ತಾರೆ.
Live Tv
[brid partner=56869869 player=32851 video=960834 autoplay=true]
ಅಸ್ಸಾಂನಲ್ಲಿ ಶಿವ ಪಾರ್ವತಿ ವೇಷ ಹಾಕಿಕೊಂಡು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿರಿಂಚಿ ಬೋರಾ ಅವರನ್ನು ಅಲ್ಲಿ ಪೊಲೀಸರು ಬಂಧಿಸಿದ್ದಾರೆ. ತೈಲ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳಿಗಾಗಿ ಈ ಬಿರಿಂಚಿ ತನ್ನ ಸ್ನೇಹಿತೆಗೆ ಪಾರ್ವತಿ ವೇಷ ಹಾಕಿಸಿ, ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು. ಆ ಪ್ರತಿಭಟನೆಗೆ ಧಾರ್ಮಿಕ ಮುಖವಾಡ ಹಾಕಿ, ಬಂಧಿಸಲಾಗಿದೆ ಎನ್ನಲಾಗುತ್ತಿದೆ.
ಅಗತ್ಯ ವಸ್ತುಗಳು ಬೆಲೆ ಏರಿಕೆಯಾಗುತ್ತಿವೆ. ಬಡವರಿಗೆ ಅವುಗಳನ್ನು ಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರಕಾರದ ವಿರುದ್ಧ ನಾನು ಪ್ರತಿಭಟಿಸುತ್ತೇನೆ. ಆ ಪ್ರತಿಭಟನೆಯಲ್ಲಿ ಎಲ್ಲರೂ ಭಾಗಿಯಾಗಿ ಎಂದು ಬಿರಿಂಚಿ ಪೋಸ್ಟ್ ಮಾಡಿದ್ದ. ಹಲವರು ಈ ಪ್ರತಿಭಟನೆಯಲ್ಲಿ ಭಾಗಿ ಕೂಡ ಆಗಿದ್ದರು. ಈ ಸಂದರ್ಭದಲ್ಲಿ ಪಾರ್ವತಿ ಮತ್ತು ಶಿವ ಜಗಳ ಮಾಡಿದಂತೆ ಅಣಕು ಪ್ರದರ್ಶನ ನಡೆಸಿದ್ದಾರೆ. ಇದೇ ಆ ಹುಡುಗನಿಗೆ ಮುಳುವಾಗಿದೆ. ಇದನ್ನೂ ಓದಿ:ಟ್ವೀಟರ್‌ನಲ್ಲಿ ಯಶ್ ಹೆಸರು ಟ್ರೇಂಡಿಂಗ್: ಯಶ್ 19ನೇ ಚಿತ್ರದ ಅಪ್‌ಡೇಟ್ ಇಲ್ಲಿದೆ
ಶಿವ ಮತ್ತು ಪಾರ್ವತಿಯ ಜಗಳವನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ, ಬಿರಿಂಚಿ ಬೋರಾನನ್ನು ಬಂಧಿಸಲಾಗಿದೆ. ಈ ಕುರಿತಂತೆ ಅಸ್ಸಾಂನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಅದು ಕಲೆಯ ಮೂಲಕ ಅಭಿವ್ಯಕ್ತಿ. ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚೆನ್ನೈ: ಕಾಳಿ ಮಾತೆ ಸಿಗರೇಟ್ ಸೇದುತ್ತಿರುವ ಪೋಸ್ಟರ್ ಇತ್ತೀಚೆಗಷ್ಟೇ ವೈರಲ್ ಆಗಿ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ಶಿವ ಸಿಗರೇಟ್ ಸೇದುತ್ತಿರುವ ಬ್ಯಾನರ್ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕನ್ಯಾಕುಮಾರಿ ಜಿಲ್ಲೆಯ ಆರೋಕಿಯಪುರಂ ಗ್ರಾಮದ ಪ್ರತೀಶ್ ಅವರ ಮದುವೆ ಇತ್ತೀಚೆಗಷ್ಟೇ ನೆರವೇರಿತು. ಈ ಹಿನ್ನೆಲೆ ಪ್ರತೀಶ್‍ಗೆ ಶುಭ ಕೋರುವ ಸಲುವಾಗಿ ಸ್ನೇಹಿತರು ಬ್ಯಾನರ್ ಹಾಕಿದ್ದರು. ಈ ಬ್ಯಾನರ್‌ನಲ್ಲಿ ಶಿವ ಸಿಗರೇಟ್ ಸೇದುತ್ತಿರುವ ಫೋಟೋವನ್ನು ಕೂಡ ಪ್ರಿಂಟ್ ಮಾಡಿದ್ದರಿಂದ, ಕೆಲವು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ- ಪಾಟ್ನಾದಿಂದ ದೆಹಲಿಗೆ ಏರ್‌ಲಿಫ್ಟ್
ನಂತರ ಮಾಹಿತಿ ದೊರೆತ ಪೊಲೀಸರು ಆರೋಕಿಯಾಪುರಂನಲ್ಲಿ ಕಟ್ಟಿದ್ದ ಬ್ಯಾನರ್ ತೆರವುಗೊಳಿಸಿದರು. ಅಲ್ಲದೇ ಈ ಸಂಬಂಧ ಪೊಲೀಸರು ಮದು ಮಗ ಹಾಗೂ ಆತನ ಸ್ನೇಹಿತರಿಗೆ ನೋಟಿಸ್ ಜಾರಿ ಮಾಡಿ, ವಶಕ್ಕೆ ಪಡೆದಿದ್ದರು. ಬಳಿಕ ಮತ್ತೆ ಈ ರೀತಿಯ ಕೆಲಸವನ್ನು ಮಾಡಬಾರದೆಂದು ಎಚ್ಚರಿಕೆ ನೀಡಿ ನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಒಟ್ಟಾವಾ: ಕಾಳಿ ಸಾಕ್ಷ್ಯಾಚಿತ್ರದ ವಿವಾದ ಬಳಿಕ ನಿರ್ಮಾಪಕಿ ಲೀನಾ ಮತ್ತೊಂದು ಪೋಸ್ಟ್ ಮಾಡಿ, ಕಾಳಿ ಪೊಸ್ಟರ್ ವಿರೋಧಿಸಿದವರನ್ನು ವ್ಯಂಗ್ಯ ಮಾಡಿದ್ದಾರೆ.
ಈಗಾಗಲೇ ಲೀನಾ ಅವರು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದ್ದ ತಮ್ಮ ಸಾಕ್ಷ್ಯ ಚಿತ್ರದ ಪೋಸ್ಟರ್‌ವೊಂದನ್ನು ಶೇರ್ ಮಾಡುವ ಮೂಲಕ ಭಾರೀ ವಿವಾದಕ್ಕೆ ಕಾರಣರಾಗಿದ್ದರು. ತನ್ನ ವಿರುದ್ಧ ಹಲವು ಎಫ್‍ಐಆರ್‌ಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಅವರು ತನ್ನ ರಕ್ಷಣೆಗಾಗಿ ಹೊಸ ಟ್ವೀಟ್‍ವೊಂದನ್ನು ಮಾಡಿದ್ದಾರೆ.
— Leena Manimekalai (@LeenaManimekali) July 7, 2022
ಈ ಪೋಸ್ಟ್‌ನಲ್ಲಿ ಶಿವ, ಪಾರ್ವತಿ ಪಾತ್ರಧಾರಿಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಈ ಇಬ್ಬರು ಪಾತ್ರಧಾರಿಗಳು ಧೂಮಪಾನದಲ್ಲಿ ತೊಡಗಿದ್ದಾರೆ. ಇದೀಗ ಈ ಚಿತ್ರಕ್ಕೆ ನಿರ್ಮಾಪಕಿ ವಿರುದ್ಧ ಮತ್ತೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರು ಪದೇ ಪದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಟ್ವಿಟ್ಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದಾರೆ ಎಂದು ಕಿಡಿಕಾರಿ, ಅವರ ವಿರುದ್ಧ ಅನೇಕ ಎಫ್‍ಐಆರ್ ದಾಖಲಾಗಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ನಿರ್ಬಂಧಿತ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ನೋದ ಮಹಿಳೆಯೊಬ್ಬರು ತಾನು ಪಾರ್ವತಿ ದೇವಿಯ ಅವತಾರವಾಗಿದ್ದೇನೆ. ಕೈಲಾಸ ಪರ್ವತದಲ್ಲಿರುವ ಶಿವನನ್ನು ತಾನೇ ಮದುವೆಯಾಗುವುದಾಗಿ ಹೇಳಿರುವ ಘಟನೆ ಭಾರತ ಮತ್ತು ಚೀನಾ ಗಡಿಯ ಸಮೀಪವಿರುವ ನಾಭಿದಾಂಗ್‍ವನ ಗುಂಜಿಯಲ್ಲಿ ನಡೆದಿದೆ.
ಹರ್ಮಿಂದರ್ ಕೌರ್ ಮಹಿಳೆ. ಈಕೆ ಉತ್ತರ ಪ್ರದೇಶದ ಅಲಿಗಂಜ್ ಪ್ರದೇಶದ ನಿವಾಸಿಯಾಗಿದ್ದಾರೆ. ಗುಂಜಿ ಕೈಲಾಸ-ಮಾನಸ ಸರೋವರದ ಹಾದಿಯಲ್ಲಿದೆ. ಇವಳನ್ನು ನಿರ್ಬಂಧಿತ ಪ್ರದೇಶದಿಂದ ಆಚೆ ಹಾಕಲು ಪೊಲೀಸ್ ತಂಡ ಹೋಗಿತ್ತು. ಆದರೆ ಹಮಿರ್ಂದರ್ ಕೌರ್ ಪೊಲೀಸರಿಗೆ ಆತ್ಮಹತ್ಯೆಯ ಬೆದರಿಕೆಯನ್ನು ಹಾಕಿದ್ದಾಳೆ. ಇದರಿಂದಾಗಿ ಆ ಪೊಲೀಸ್ ತಂಡ ವಿಧಿ ಇಲ್ಲದೇ ವಾಪಸ್ ಬರಬೇಕಾಯಿತು.
ಈ ಬಗ್ಗೆ ಅಲ್ಲಿನ ಪೊಲೀಸ್ ಅಧಿಕಾರಿ ಮಾತನಾಡಿ, 15 ದಿನಗಳ ಅನುಮತಿಯ ಮೇರೆಗೆ ತಾಯಿಯೊಂದಿಗೆ ಈ ಪ್ರದೇಶಕ್ಕೆ ಬಂದಿದ್ದರು. ಆದರೆ ಅವರು ಅಲ್ಲಿ ವಾಸವಾಗಲು ಅವಧಿ ಮುಗಿದರೂ ನಿರ್ಬಂಧಿತ ಪ್ರದೇಶವನ್ನು ತೊರಯಲು ನಿರಾಕರಿಸಿದರು. ಹರ್ಮಿಂದರ್‌ನ್ನು ನಿರ್ಬಂಧಿತ ಪ್ರದೇಶದಿಂದ ಕರೆತರಲು ಇಬ್ಬರು ಸಬ್ ಇನ್ಸ್‌ಪೆಕ್ಟರ್‌ಗಳನ್ನು ಒಳಗೊಂಡ ಮೂವರ ಪೊಲೀಸ್ ತಂಡವನ್ನು ಧಾರ್ಚುಲಾದಿಂದ ಕಳುಹಿಸಲಾಗಿತ್ತು ಎಂದರು.
ಹಮಿರ್ಂದರ್ ಕೌರ್‌ನನ್ನು ಬಲವಂತಯವಾಗಿ ಧಾರ್ಚುಲಾಗೆ ಕಳುಹಿಸಲು ನಿರ್ಧಸಿದ್ದೆವು. ಆದರೆ ಪ್ರಯೋಜನವಾಗಲಿಲ್ಲ. ಇದರಿಂದಾಗಿ ನಾವು ಈಗ ಹರ್ಮಿಂದರ್‌ನ್ನು ಮರಳಿ ಕರೆತರಲು ವೈದ್ಯಕೀಯ ಸಿಬ್ಬಂದಿ ಸೇರಿದಂತೆ 12 ಸದಸ್ಯರ ದೊಡ್ಡ ಪೊಲೀಸ್ ತಂಡವನ್ನು ಕಳುಹಿಸಲು ಯೋಜಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಶ್ಮೀರಿ ಪಂಡಿತರ ಮೇಲೆ ದಾಳಿ – 177 ಶಿಕ್ಷಕರ ವರ್ಗಾವಣೆ
ಶುಭ ಸೋಮವಾರ ಶಿವನಿಗೆ ತುಂಬಾ ಇಷ್ಟವಾದ ದಿನ. ಈ ದಿನ ಶಿವನ ನೈವೇದ್ಯಕ್ಕೆ ವಿಶೇಷ ರೆಸಿಪಿ ಟ್ರೈ ಮಾಡಿ. ಅದೇ ‘ಪಾಲ್ ಪಾಯಸ’ ಇದನ್ನು ಮಾಡುವುದು ತುಂಬಾ ಸುಲಭ ಮತ್ತು ಕಡಿಮೆ ಪದಾರ್ಥದಲ್ಲಿ ಮಾಡಬಹುದು. ಈ ಪಾಯಸವನ್ನು ದೇಶಾದ್ಯಂತ ವಿವಿಧ ದೇವಾಲಯಗಳಲ್ಲಿ ‘ಪ್ರಸಾದ’ವಾಗಿ ನೀಡಲಾಗುತ್ತದೆ.
ಬೇಕಾದ ಪದಾರ್ಥಗಳು:
* ಅಕ್ಕಿ – 50 ಗ್ರಾಂ
* ಹಾಲು – 1 ಲೀಟರ್
* ಏಲಕ್ಕಿ ಪುಡಿ – 5 ಗ್ರಾಂ
* ಸಕ್ಕರೆ – 100 ಗ್ರಾಂ
ಮಾಡುವ ವಿಧಾನ:
* ಅಕ್ಕಿಯನ್ನು ತೊಳೆದು 1/2 ಗಂಟೆ ನೆನೆಸಿಡಿ.
* ಒಂದು ಬಾಣಲಿಯಲ್ಲಿ ಹಾಲನ್ನು ಹಾಕಿ ನಂತರ ಅದಕ್ಕೆ ಅಕ್ಕಿಯನ್ನು ಹಾಕಿ ಬೇಯಿಸಿ.
* ಏಲಕ್ಕಿ ಪುಡಿ, ಸಕ್ಕರೆ ಸೇರಿಸಿ ಸಕ್ಕರೆ ಕರಗುವ ತನಕ ಸರಿಯಾಗಿ ಬೆರೆಸಿ(ಗಟ್ಟು ಆಗದಂತೆ ನೋಡಿಕೊಳ್ಳಿ)
* ಇನ್ನೊಂದು ಪ್ಯಾನ್‍ನಲ್ಲಿ ತುಪ್ಪ ಬಿಸಿ ಮಾಡಿ ಅದಕ್ಕೆ ಗೋಡಂಬಿ ಹಾಕಿ ಗೋಲ್ಡನ್ ಆಗುವವರೆಗೂ ಹುರಿಯಿರಿ. ನಂತರ ಅದಕ್ಕೆ ಒಣದ್ರಾಕ್ಷಿ ಸೇರಿಸಿ ಮತ್ತು ಒಂದು ನಿಮಿಷ ಹುರಿಯಿರಿ.
* ಅಕ್ಕಿ ಮಿಶ್ರಣದ ಮೇಲೆ ತುಪ್ಪದಿಂದ ಕರಿದ ದ್ರಾಕ್ಷಿ, ಗೋಡಂಬಿ ಹಾಕಿ, ಸ್ವಲ್ಪ ತಣ್ಣಗಾದ ಮೇಲೆ ಬಡಿಸಿ.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಇಂದು ಚಿಕ್ಕಬಳ್ಳಾಪುರ ತಾಲೂಕು ನಂದಿ ಗ್ರಾಮದಲ್ಲಿರುವ ಐತಿಹಾಸಿಕ ಪುರಾಣ ಪ್ರಸಿದ್ಧ ಶ್ರೀ ಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ಶಿವೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ಆರಂಭವಾಗಿದೆ.
ಕ್ಷೇತ್ರದ ಶಾಸಕ, ಸಚಿವ ಡಾ.ಕೆ ಸುಧಾಕರ್ ಫೌಂಡೇಶನ್ ವತಿಯಿಂದ ಇದೇ ಪ್ರಪ್ರಥಮ ಬಾರಿಗೆ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ನಂದಿ ಶಿವೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಶಿವೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಿರಿಗೆರೆ ಶಿವಾಚಾರ್ಯ ಶ್ರೀಗಳು ಹಾಗೂ ಸದ್ಗುರು ಮಧುಸೂದನಸಾಯಿ ಶಂಖ ಊದುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ: ಗೋಕರ್ಣ, ಮುರುಡೇಶ್ವರದಲ್ಲಿ ವಿಜ್ರಂಭಣೆಯ ಶಿವರಾತ್ರಿ ಆಚರಣೆ
ಶಿವಲಿಂಗಕ್ಕೆ ಅಭಿಷೇಕ ಮಾಡುವ ಮೂಲಕ ಶಿವೋತ್ಸವ ಕಾರ್ಯಕ್ರಮ ಅರಂಭವಾಯಿತು. ಶಿವರಾತ್ರಿ ಜಾಗರಣೆ ಪ್ರಯುಕ್ತ ವೇದಿಕೆ ಕಾರ್ಯಕ್ರಮದ ನಂತರ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುಲಿವೆ. ಈ ನಂದಿ ಶಿವೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಹಾಡುಗಾರರಾದ ಅನನ್ಯ ಭಟ್, ರಘು ದೀಕ್ಷಿತ್, ವಿಜಯ್ ಪ್ರಕಾಶ್, ಭರತನಾಟ್ಯ ಕಲಾವಿದೆ ಲಕ್ಷ್ಮೀ ಗೋಪಾಲಸ್ವಾಮಿ, ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿ ತಮ್ಮ ಕಲಾ ಪ್ರದರ್ಶನ ಮಾಡಲಿದ್ದಾರೆ. ಜೊತೆಗೆ ನಗೆ ಹಬ್ಬ ಕಾರ್ಯಕ್ರಮ ಸಹ ಆಯೋಜನೆ ಮಾಡಲಾಗಿದ್ದು ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಲೇಸರ್ ಶೋ ಹಾಗೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ ಜೆಪಿ ಪಾರ್ಕ್‌ನಲ್ಲಿ ಅಹೋರಾತ್ರಿ ಕಾರ್ಯಕ್ರಮ – 1 ಸಾವಿರ ಸಾಧಕರಿಗೆ ಸನ್ಮಾನ
ವೈಭವದ ಶಿವೋತ್ಸವದ ಅಂಗವಾಗಿ ಇಡೀ ದೇವಾಲಯಕ್ಕೆ ಹೂವಿನ ಅಲಂಕಾರ ಮಾಡಲಾಗಿದ್ದು, ನಾಳೆ ನಂದಿ ಶ್ರೀ ಭೋಗನಂದಿಶ್ವರನ ಜೋಡಿ ಬ್ರಹ್ಮ ರಥೋತ್ಸವ ನೆರವೇರಲಿದೆ. ಶಿವರಾತ್ರಿ ಹಿನ್ನೆಲೆ ಈಗಾಗಲೇ ಸಾವಿರಾರು ಮಂದಿ ಭಕ್ತರು ನಂದಿ ಗ್ರಾಮದ ಭೋಗನಂದೀಶ್ವರನ ಆಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ – ಭಕ್ತರಲ್ಲಿ ಸಂಭ್ರಮ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರ ಗೋಕರ್ಣ ಹಾಗೂ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಾವಿರಾರು ಭಕ್ತರು ಶಿವರಾತ್ರಿ ಉತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿ ಶಿವನ ದರ್ಶನ ಪಡೆದರು.
ಗೋಕರ್ಣದಲ್ಲಿ ಆತ್ಮಲಿಂಗ ಅಭಿಷೇಕಕ್ಕೆ ಮಾತ್ರ ಅವಕಾಶ:
ಗೋಕರ್ಣದಲ್ಲಿ ಸೋಮವಾರ ಮಧ್ಯರಾತ್ರಿಯಿಂದಲೇ ಸೇರಿದ್ದ ಭಕ್ತರು, ಸಮುದ್ರ, ಕೋಟಿತೀರ್ಥದಲ್ಲಿ ಸ್ನಾನ ಮಾಡಿ ಮಹಾಬಲೇಶ್ವರ ದೇವರ ಸನ್ನಿಧಿಯಲ್ಲಿ ಸಾಲುಗಟ್ಟಿ ನಿಂತ ಭಕ್ತರು ಮಹಾಗಣಪತಿ ಮತ್ತು ಮಹಾಬಲೇಶ್ವರನಿಗೆ ಪೂಜೆ ಅರ್ಪಿಸಿದರು. ಸ್ಥಳೀಯರು ಬೆಳಗ್ಗೆ ಆತ್ಮಲಿಂಗದ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕೋವಿಡ್ ನಿಯಮ ಸಡಿಲಿಸಿದ ಕಾರಣ ಮಹಾರಾಷ್ಟ್ರ ಮತ್ತು ಗೋವಾದಿಂದ ಹೆಚ್ಚಿನ ಭಕ್ತರು ಇಂದು ಆಗಮಿಸಿದ್ದರು. ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ ಜೆಪಿ ಪಾರ್ಕ್‌ನಲ್ಲಿ ಅಹೋರಾತ್ರಿ ಕಾರ್ಯಕ್ರಮ – 1 ಸಾವಿರ ಸಾಧಕರಿಗೆ ಸನ್ಮಾನ
ಮಹಾಬಲೇಶ್ವರ ದೇವಸ್ಥಾನದಲ್ಲಿ ಆತ್ಮಲಿಂಗಕ್ಕೆ ಮೇಲಿನಿಂದ ಅಭಿಷೇಕ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿತ್ತು. ಸ್ಪರ್ಶಿಸಿ ನಮಸ್ಕರಿಸಲು ಆಗದ ಕಾರಣ ಭಕ್ತರು ಅಸಮಾಧಾನ ವ್ಯಕ್ತಪಡಿಸಿದರು. ಪಾಣಪೀಠಕ್ಕೆ ಕಾಲು ತಗುಲಬಾರದು ಎಂದು ಸುತ್ತಲೂ ಪರದೆ ಅಳವಡಿಸಲಾಗಿತ್ತು. ಸ್ವಲ್ಪ ಎತ್ತರಿಸಿದ್ದ ಕಾರಣ ಕೈಯಿಂದ ಆತ್ಮಲಿಂಗ ಮುಟ್ಟಲು ಭಕ್ತರಿಗೆ ಸಾಧ್ಯವಾಗಲಿಲ್ಲ. ಭಕ್ತರಿಗೆ ವಿಶೇಷ ಪೂಜೆಗೂ ಅವಕಾಶ ನಿರಾಕರಿಸಲಾಗಿತ್ತು. ಕೇವಲ ನೀರು, ಬಿಲ್ವಪತ್ರೆ, ಹಾಲು ಎರೆಯಲು ಅವಕಾಶ ನೀಡಲಾಗಿತ್ತು. ಇದನ್ನೂ ಓದಿ: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ – ಭಕ್ತರಲ್ಲಿ ಸಂಭ್ರಮ
ಮುರುಡೇಶ್ವರದಲ್ಲಿ ಜಾತ್ರೆಯಂತೆ ಸೇರಿದ ಭಕ್ತರು:
ಧಾರ್ಮಿಕ ಕ್ಷೇತ್ರದ ಜೊತೆ ಪ್ರವಾಸಿ ಸ್ಥಳವೂ ಆಗಿರುವ ಮುರುಡೇಶ್ವರದಲ್ಲಿ ಸಾವಿರಾರು ಜನರು ಶಿವನ ದರ್ಶನ ಪಡೆದು ಪುನೀತರಾದರು. ರಾಜ್ಯ ಮತ್ತು ಹೊರ ರಾಜ್ಯದಿಂದ ಆಗಮಿಸಿದ್ದ ಸಾವಿರಾರು ಭಕ್ತರು ಮುರುಡೇಶ್ವರದ ಸಮುದ್ರದಲ್ಲಿ ಪವಿತ್ರ ಸ್ನಾನ ಮಾಡಿ ಶಿವನ ದರ್ಶನ ಪಡೆದರು. ಮುರುಡೇಶ್ವರದಲ್ಲಿ ಈ ಬಾರಿ ಪೂಜೆ ಹಾಗೂ ದರ್ಶನಕ್ಕೆ ಸಂಪೂರ್ಣ ಅವಕಾಶ ಮಾಡಿಕೊಡಲಾಗಿದ್ದು ರಾತ್ರಿ ಕೂಡ ವಿಶೇಷ ಪೂಜೆಗೆ ಅವಕಾಶ ಮಾಡಿಕೊಡಲಾಗಿದೆ. ಇದನ್ನೂ ಓದಿ: ಮಹಾಶಿವರಾತ್ರಿ ಹಬ್ಬದ ದಿನ ಉಪವಾಸ ಏಕೆ ಮಾಡ್ತಾರೆ?
ರಾಯಚೂರು: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ಸಂಭ್ರಮ ಜೋರಾಗಿದೆ. ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಎಲ್ಲ ಭಕ್ತರು ಸಂಭ್ರಮದಲ್ಲಿದ್ದಾರೆ.
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥಸ್ವಾಮಿ ವಿಶೇಷ ಪೂಜೆ ನೆರವೇರಿಸುತ್ತಿದ್ದು, ರುದ್ರದೇವರಿಗೆ ಮಹಾರುದ್ರಾಭಿಷೇಕ ನಡೆಯಿತು. ಮಠದ ಪಂಡಿತರು, ಸಂಸ್ಕೃತ ಪಾಠಶಾಲೆ ವಿದ್ಯಾರ್ಥಿಗಳಿಂದ ಮಂತ್ರಪಠಣ ನಡೆಯಿತು. ಮಹಾಶಿವರಾತ್ರಿ ಹಿನ್ನೆಲೆ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಇದನ್ನೂ ಓದಿ: ಇಂದು ಮಹಾಶಿವರಾತ್ರಿ – ಆದಿ ಅಂತ್ಯವಿಲ್ಲದ ಶಿವನ ಆರಾಧಕರಿಗೆ ಇಂದು ಹಬ್ಬ
ಮಹಾಶಿವರಾತ್ರಿ ಹಿನ್ನೆಲೆ ರಾಯಚೂರಿನ ಈಶ್ವರ ದೇವಾಲಯಗಳಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬೆಳಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ನಗರದ ಐತಿಹಾಸಿಕ ಚಂದ್ರಮೌಳೇಶ್ವರ ದೇವಾಲಯ, ರಾಮಲಿಂಗೇಶ್ವರ ದೇವಾಲಯ, ನಂದೀಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಅಲ್ಲದೆ ಭಕ್ತರ ಸಂಖ್ಯೆಯೂ ಸಹ ಹೆಚ್ಚಾಗಿದೆ.