Tag: Shivaji Rao Jadhav

  • ಪತ್ರ ಬರೆದು ಬೆದರಿಕೆ ಹಾಕಿದ್ದರೆ ಪ್ರಗತಿಪರರು ಸುಮ್ಮನಾಗುತ್ತಿದ್ದರು: ಶಿವಾಜಿರಾವ್‌ ಜಾಧವ್‌ ಹೇಳಿದ್ದೇನು?

    ಪತ್ರ ಬರೆದು ಬೆದರಿಕೆ ಹಾಕಿದ್ದರೆ ಪ್ರಗತಿಪರರು ಸುಮ್ಮನಾಗುತ್ತಿದ್ದರು: ಶಿವಾಜಿರಾವ್‌ ಜಾಧವ್‌ ಹೇಳಿದ್ದೇನು?

    ಬೆಂಗಳೂರು: ಹಿಂದೂ ಧರ್ಮದ (Hindu Religion) ಬಗ್ಗೆ ಅವಹೇಳನ ಮಾಡಿದ್ದಕ್ಕೆ ಪತ್ರ ಬರೆದು ಬೆದರಿಕೆ ಹಾಕಿದ್ದರೆ ಪ್ರಗತಿಪರರು ಸುಮ್ಮನಾಗುತ್ತಿದ್ದರು. ಈ ಕಾರಣಕ್ಕೆ ನಾನು ಪತ್ರ ಬರೆಯುತ್ತಿದ್ದೆ ಎಂದು ಆರೋಪಿ ಶಿವಾಜಿರಾವ್ ಜಾಧವ್‌ (Shivaji Rao Jadhav) ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

    ಸಾಹಿತಿಗಳಿಗೆ ಬೆದಿಕೆ ಹಾಕಿದ ಪ್ರಕಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಸಿಸಿಬಿ ಪೊಲೀಸರು (CCB Police) ಶಿವಾಜಿ ರಾವ್‌ನನ್ನು ಬಂಧಿಸಿದ್ದು, ಕೋರ್ಟ್‌ 13 ದಿನ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಪೊಲೀಸರ ವಿಚಾರಣೆ ಸಮಯದಲ್ಲಿ ಹಲವು ವಿಷಯಗಳನ್ನು ತಿಳಿಸಿದ್ದಾನೆ ಎಂದು ಸಿಸಿಬಿ ಮೂಲಗಳು ಪಬ್ಲಿಕ್‌ ಟಿವಿಗೆ ತಿಳಿಸಿವೆ.  ಇದನ್ನೂ ಓದಿ: ಹಿಂದುತ್ವದ ಮೇಲೆ ಆತನಿಗೆ ಒಲವಿತ್ತು, ಪತ್ರದಲ್ಲಿ ಮನವಿ ಮಾಡಿರಬಹುದು – ಆರೋಪಿ ಶಿವಾಜಿರಾವ್ ಜಾಧವ್ ಸಹೋದರ

     

    ಏನು ಬಾಯಿಬಿಟ್ಟಿದ್ದಾನೆ?
    ಸಾಹಿತಿಗಳ ಬಾಯಿ ಮುಚ್ಚಿಸಲು ನನಗೆ ಬೇರೆ ಯಾವುದೇ ದಾರಿಯೂ ಸಿಕ್ಕಿರಲಿಲ್ಲ. ಪತ್ರ ಬರೆದು ಬೆದರಿಕೆ ಹಾಕುವುದು ಒಂದೇ ನನ್ನ ಮುಂದಿದ್ದ ದಾರಿಯಾಗಿತ್ತು. ನಾನು ಪತ್ರ ಬರೆದ ಬಳಿಕ ಎಲ್ಲರೂ ಸುಮ್ಮನಿರುತ್ತಿದ್ದರು. ಹಿಂದೂ ಧರ್ಮದ ಬಗ್ಗೆ ವಿರೋಧವಾಗಿ ಮಾತನಾಡುವುದನ್ನು ನಿಲ್ಲಿಸುತ್ತಿದ್ದರು. 2008 ರಲ್ಲಿಯೇ ಇದು ನನಗೆ ಮನವರಿಕೆಯಾಗಿತ್ತು. ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್‌

    2008 ರಲ್ಲಿ ಯು ಆರ್ ಅನಂತಮೂರ್ತಿ, ಭಗವಾನ್ ಅವರಿಗೆ ಪತ್ರ ಬರೆದು ಬೆದರಿಸಿದ್ದೆ. ಪತ್ರದ ಬಳಿಕ ಇವರು ಸುಮ್ಮನಾಗಿದ್ದರು.  ಇತ್ತಿಚೀನ ದಿನಗಳಲ್ಲಿ ಈ ಸಾಹಿತಿಗಳದ್ದು ಹೆಚ್ಚಾಗಿತ್ತು. ಅದಕ್ಕೆ ಅವರಿಗೆ ಪತ್ರ ಬರೆದು ಹೆದರಿಸಿದ್ದೆ. ನನಗೆ ಶಕ್ತಿ ಇದ್ದಿದ್ದರೆ ಮತ್ತೊಂದು ಗೌರಿ ಲಂಕೇಶ್ ಹತ್ಯೆಯ ರೀತಿ ಆಗುತ್ತಿತ್ತು. ನಾನು ಪತ್ರ ಬರೆದ ಬಳಿಕ ಅವರು ವಿರೋಧವಾಗಿ ಮಾತನಾಡುವುದನ್ನು ನಿಲ್ಲಿಸಿದ್ದರು. ಈ ಕಾರಣಕ್ಕೆ ನಾನು ಪತ್ರ ಬರೆಯುತ್ತಿದ್ದೆ ಎಂದು ಹೇಳಿರುವುದಾಗಿ ಸಿಸಿಬಿ ಮೂಲಗಳು ತಿಳಿಸಿವೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್‌

    ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್‌

    ಬೆಂಗಳೂರು: ಬುದ್ದಿಜೀವಿ ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ (Threat Letter to Kannada Writers)  ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು (CCB Police) ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

    ದಾವಣಗೆರೆಯ ಹಿಂದೂ ಸಂಘಟನೆಯ ಸಂಚಾಲಕ ಶಿವಾಜಿರಾವ್ ಜಾಧವ್‌ (Shivaji Rao Jadhav) ಬಂಧನಕ್ಕೆ ಒಳಗಾದ ಆರೋಪಿ. 2 ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ (Davanagere) ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

     

    ಪತ್ರದಲ್ಲಿ ಏನಿತ್ತು?
    ನಿಮ್ಮನ್ನು ಯಾಕೆ ಕೊಲೆ ಮಾಡಬಾರದು? ನಿಮ್ಮನ್ನು ಯಾಕೆ ಗುಂಡಿಟ್ಟು ಕೊಲ್ಲಬಾರದು? ನೀವು ನಿಮ್ಮ ಕೊನೆ ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಶಿವಾಜಿ ರಾವ್ ಪತ್ರ ಬರೆಯುತ್ತಿದ್ದ. ಪ್ರತಿ ಬೆದರಿಕೆ ಪತ್ರದಲ್ಲೂ ಒಂದೇ ರೀತಿಯ ಕೈ ಬರಹ ಇತ್ತು. ದಾವಣಗೆರೆಯಿಂದಲೇ ಈ ಪತ್ರಗಳು ಪೋಸ್ಟ್ ಆಗುತ್ತಿದ್ದವು.

    ಎರಡು ವರ್ಷಗಳಿಂದ ಬರುತ್ತಿದ್ದ ಅನಾಮಧೇಯ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಏಳು ಎಫ್‌ಐಆರ್ ದಾಖಲಾಗಿತ್ತು. ನಂತರ ಪ್ರಕರಣವನ್ನು ರಾಜ್ಯ ಸರ್ಕಾರ ಸಿಸಿಬಿಗೆ ವರ್ಗಾಯಿಸಿತ್ತು.

     
    ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಯಿಂದ ದೃಢಪಟ್ಟಿತ್ತು. ತನಿಖೆಯಿಂದ ದಾವಣಗೆರೆ ಮೂಲದಿಂದ ಪತ್ರ ಬಂದಿದ್ದರೂ ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್‌ ಮಾಡಲಾಗಿತ್ತು. ಇದನ್ನೂ ಓದಿ: ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

    ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿತ್ತು.

    ಈ ಬಗ್ಗೆ ಹಿಂದೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಪರಮೇಶ್ವರ್‌, ಬೆದರಿಕೆಗೆ ಒಳಗಾಗಿರುವ ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಕಮಿಷನರ್, ಡಿಜಿಪಿ ಅವರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದ್ದರು.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]