Tag: Shivaji Statue

  • ಧರೆಗುರುಳಿದ ಶಿವಾಜಿ ಪ್ರತಿಮೆ; ಮಹಾರಾಷ್ಟ್ರ ಸರ್ಕಾರದ ವಿರುದ್ಧ `ಚಪ್ಪಲಿ ಸೇವೆ’ ಪ್ರತಿಭಟನೆ ನಡೆಸಿದ ವಿಪಕ್ಷಗಳು

    ಧರೆಗುರುಳಿದ ಶಿವಾಜಿ ಪ್ರತಿಮೆ; ಮಹಾರಾಷ್ಟ್ರ ಸರ್ಕಾರದ ವಿರುದ್ಧ `ಚಪ್ಪಲಿ ಸೇವೆ’ ಪ್ರತಿಭಟನೆ ನಡೆಸಿದ ವಿಪಕ್ಷಗಳು

    ಮುಂಬೈ: ಸಿಂಧುದುರ್ಗದ ಮಾಲ್ವಾನ್‍ನಲ್ಲಿ ಛತ್ರಪತಿ ಶಿವಾಜಿಯವರ 35 ಅಡಿಯ ಪ್ರತಿಮೆ (Shivaji Statue) ನೆಲಕ್ಕೆ ಉರುಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾ ವಿಕಾಸ್ ಅಘಾಡಿಯ (Maha Vikas Aghadi) ಪ್ರಮುಖ ನಾಯಕರಾದ ಶರದ್ ಪವಾರ್, ಉದ್ಧವ್ ಠಾಕ್ರೆ ಮತ್ತು ನಾನಾ ಪಟೋಲೆ ಅವರ ನೇತೃತ್ವದಲ್ಲಿ ಮುಂಬೈನಲ್ಲಿ (Mumbai) ರಾಜ್ಯ ಸರ್ಕಾರದ ವಿರುದ್ಧ `ಜೋಡ್ ಮಾರೊ’ (Jode Maro) ಪ್ರತಿಭಟನೆ ನಡೆಯುತ್ತಿದೆ.

    ನಗರದ ಹುತಾತ್ಮ ಚೌಕ್‍ನಿಂದ ಗೇಟ್‍ವೇ ಆಫ್ ಇಂಡಿಯಾದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಏಕನಾಥ್ ಶಿಂಧೆ ಸರ್ಕಾರದಿಂದ ಭಾರಿ ಭದ್ರತೆಯನ್ನು ನಿಯೋಜಿಸಲಾಗಿತ್ತು. ಪ್ರತಿಭಟನೆ ಹಿನ್ನೆಲೆ ಗೇಟ್‍ವೇ ಆಫ್ ಇಂಡಿಯಾಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

    ಆಪ್ ಬಣವು ತನ್ನ ಆಂದೋಲನವನ್ನು `ಜೋಡ್ ಮಾರೋ’ (ಚಪ್ಪಲಿಯಿಂದ ಹೊಡೆಯಿರಿ) ಪ್ರತಿಭಟನೆ ಎಂದು ಕರೆದಿದೆ. ಇನ್ನೂ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜನರಿಗೆ ಕರೆ ನೀಡಿರುವ ಶಿವಸೇನೆ (ಯುಬಿಟಿ) ‘ಮಹಾರಾಷ್ಟ್ರವನ್ನು ಜಾಗೃತಗೊಳಿಸಲು’ ಶಿವಾಜಿಯ ಪಾದಗಳಿಗೆ ನಮಸ್ಕರಿಸಲು ಬರುತ್ತಿದ್ದೇವೆ ಎಂದು ಟ್ವೀಟ್ ಮಾಡಿದೆ.

    ಭ್ರಷ್ಟ ಶಿವದ್ರೋಹಿಗಳಿಗೆ ಕ್ಷಮೆ ಇಲ್ಲ. ಕಳಪೆ ಕೆಲಸ ಮಾಡಿದ, ಭ್ರಷ್ಟಾಚಾರ ಎಸಗಿದ, ಶಿವಾಜಿಯನ್ನು ಅವಮಾನಿಸಿದ ಶಿವದ್ರೋಹಿಗಳಿಗೆ ತಕ್ಕ ಪಾಠ ಕಲಿಸುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕ ಹೇಳಿದೆ.

    ಕಳೆದ 8 ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಶಿವಾಜಿ ಪ್ರತಿಮೆ ಕುಸಿದ ಘಟನೆ ಮಹಾರಾಷ್ಟ್ರದಲ್ಲಿ ಭಾರಿ ರಾಜಕೀಯ ಸಂಚಲನ ಮೂಡಿಸಿದೆ. ಈ ಯೋಜನೆಯನ್ನು ನೌಕಾಪಡೆಯು ರಾಜ್ಯ ಸರ್ಕಾರದ ಸಮನ್ವಯದೊಂದಿಗೆ ನಿರ್ವಹಿಸಿತ್ತು.

    ಪೊಲೀಸರು ಯೋಜನೆಯ ರಚನಾತ್ಮಕ ಸಲಹೆಗಾರ ಮತ್ತು ಅದರ ಗುತ್ತಿಗೆದಾರನನ್ನು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಇತರರ ಜೀವ ಮತ್ತು ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕಾರ್ಯಕ್ಕೆ ಸಂಬಂಧಿಸಿದ ಸೆಕ್ಷನ್‍ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

    ಶುಕ್ರವಾರ ಪ್ರಧಾನಿ ಮೋದಿಯವರು ಪ್ರತಿಮೆ ಕುಸಿತಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದರು. “ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಹೆಸರು ಅಥವಾ ರಾಜನಲ್ಲ. ನಮಗೆ ಅವರು ನಮ್ಮ ಆರಾಧ್ಯದೈವ. ಇಂದು ನಾನು ಅವರ ಪಾದಗಳಿಗೆ ತಲೆಬಾಗಿ ನನ್ನ ದೇವರನ್ನು ಕ್ಷಮೆಯಾಚಿಸುತ್ತೇನೆ. ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದರು.

  • ಮುಗಿಯದ ಶಿವಾಜಿ‌ ಮೂರ್ತಿ ಗಲಾಟೆ – ಬಾಗಲಕೋಟೆ ಬಂದ್‌ಗೆ ಮುಂದಾದ ಬಿಜೆಪಿಗರು

    ಮುಗಿಯದ ಶಿವಾಜಿ‌ ಮೂರ್ತಿ ಗಲಾಟೆ – ಬಾಗಲಕೋಟೆ ಬಂದ್‌ಗೆ ಮುಂದಾದ ಬಿಜೆಪಿಗರು

    ಬಾಗಲಕೋಟೆ: ಸುಮಾರು ನಾಲ್ಕು ದಿನಗಳಿಂದ ಬಾಗಲಕೋಟೆ (Bagalkot) ನಗರದಲ್ಲಿ ಶಿವಾಜಿ‌ ಮೂರ್ತಿ (Shivaji Statue) ಗಲಾಟೆ ಜೋರಾಗಿದೆ. ಆ.13 ರಂದು ಬೆಳ್ಳಂಬೆಳಿಗ್ಗೆ ಬಾಗಲಕೋಟೆ ನಗರದ ಹೊರವಲಯದ ಕಾಂಚನಾ ಪಾರ್ಕ್ ಬಳಿ ಜಾಗದಲ್ಲಿ ಸುಮಾರು 18 ಅಡಿ ಎತ್ತರದ ಶಿವಾಜಿ‌ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.

    ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ಜಿಲ್ಲೆಯ ಜನರಿಗೆ ಅಚ್ಚರಿ ಹಾಗೂ ಕುತೂಹಲ ಹೆಚ್ಚಾಗಿತ್ತು. ಶಿವಾಜಿ ಮೂರ್ತಿಯನ್ನು ರಾತ್ರೋ ರಾತ್ರಿ ಹಿಂದೂ ಅಭಿಮಾನಿಗಳು ಕೂರಿಸಿ ಹೋಗಿದ್ದಾರೆಂದು ನುಣುಚಿಕೊಂಡ ಬಿಜೆಪಿ (BJP) ಮುಖಂಡರ ಒಂದು ಗುಂಪು ಶಿವಾಜಿ‌ಮೂರ್ತಿ ಪ್ರತಿಷ್ಠಾಪಿಸಿದ್ದು ಸ್ವಾಗತಾರ್ಹ ಎಂದು ಸಮರ್ಥನೆ ಮಾಡಿಕೊಂಡಿತ್ತು.

    ಬಿಜೆಪಿಯ ಇನ್ನೊಂದು ಗುಂಪಿಗೆ ಈ ವಿಚಾರದಿಂದ ಬೇಸರವೂ ಆಗಿತ್ತು. ಮೂರ್ತಿ ಪ್ರತಿಷ್ಠಾಪನೆ ಖುಷಿಯ ವಿಚಾರ ಆದರೆ ರಾತ್ರೋ ರಾತ್ರೋ ಕಳ್ಳತನದಿಂದ ಶಿವಾಜಿಮೂರ್ತಿಯನ್ನು ಪ್ರತಿಷ್ಠಾಪಿಸುವ ಅವಶ್ಯಕತೆ ಏನಿತ್ತು? ಹಿಂದೂ ಹೃದಯ ಸಾಮ್ರಾಟ ಎಂದು ಕರೆಯಲ್ಪಡುವ ಶಿವಾಜಿ ಪ್ರತಿಮೆಯನ್ನು ಅದ್ಧೂರಿಯಾಗಿ ಮೆರವಣಿಗೆ ಮೂಲಕ ತಂದು ಕೂರಿಸಬಹುದಿತ್ತು ಎಂದು ಬೇಸರವನ್ನೂ ಹೊರಹಾಕಿತ್ತು.

    ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಚಾರ ಇಷ್ಟಕ್ಕೆ ನಿಲ್ಲಲಿಲ್ಲ. ಶಿವಾಜಿ ಪ್ರತಿಮೆ ಇರಿಸಿದ ಜಾಗ ಸದ್ಯ ಬಾಗಲಕೋಟೆ ನಗರಸಭೆಯ ಆಧೀನದಲ್ಲಿದೆ. ಯಾವುದೇ ಅನುಮತಿ ಇಲ್ಲದೇ ಆ ಜಾಗದಲ್ಲಿ ಮೂರ್ತಿ ಕೂರಿಸಲಾಗಿದೆ ಎಂಬ ವದಂತಿ ಹಬ್ಬಿತ್ತು. ಅಲ್ಲದೇ ಪ್ರತಿಷ್ಠಾಪಿಸಿದ ಮೂರ್ತಿಯನ್ನು ನಗರಸಭೆ ಸಿಬ್ಬಂದಿ ತೆರವು ಗೊಳಿಸುತ್ತಾರೆಂಬ ಸುದ್ದಿ ಜೋರಾಗಿ ಹರಿದಾಡತೊಡಗಿತ್ತು. ಇದರಿಂದ ಕೆರಳಿದ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು (Hindu Activists) ಆಗಸ್ಟ್‌ 14 ರಂದು ಬೆಳಗ್ಗೆ ನಗರಸಭೆಗೆ ತೆರಳಿ ಪ್ರತಿಭಟನೆ ಮಾಡಿದರು. ಇದನ್ನೂ ಓದಿ: ಬೆಂಬಲಿಗರೇ ಬರುತ್ತೇವೆ ಎಂದ ಮೇಲೆ ಸೋಮಶೇಖರ್‌ ಕಾಂಗ್ರೆಸ್‌ನಲ್ಲಿರಲು ಸಾಧ್ಯವೇ : ಕೈ ಶಾಸಕ ಶ್ರೀನಿವಾಸ್‌

    ಆಯುಕ್ತರ ಜೊತೆ ವಾಗ್ವಾದ ಮಾಡಿ ಯಾವುದೇ ಕಾರಣಕ್ಕೂ ಮೂರ್ತಿಯನ್ನು ತೆರವುಗೊಳಿಸಬೇಡಿ ಎಂಬ ಎಚ್ಚರಿಕೆ ನೀಡಿದರು. ಆದರೆ ಬಾಗಲಕೋಟೆ ಜಿಲ್ಲಾಧಿಕಾರಿ ಎಂ ಜಾನಕಿ ಶಿವಾಜಿ ಮೂರ್ತಿ ತೆರವಿಗೆ ಆದೇಶ ನೀಡಿದ್ದಲ್ಲದೇ, ನಗರದಲ್ಲಿ ಸೆಕ್ಷನ್ 144 ಕಲಂ ಜಾರಿಮಾಡಿ ನಿಷೇಧಾಜ್ಞೆ ಜಾರಿ ಮಾಡಿದರು. ಆದೇಶದ ಅನ್ವಯ ಸಂಜೆ ಎಲ್ಲ ಅಂಗಡಿ ಮುಂಗಟ್ಟು ಬಂದ್ ಮಾಡಿಸಿದ ಪೊಲೀಸ್ ಸಿಬ್ಬಂದಿ ಮೂರ್ತಿ ಇರುವ ಕಾಂಚನಾ ಪಾರ್ಕ್ ರಸ್ತೆಯನ್ನು ಬಂದ್ ಮಾಡಿ ಸರಿಯಾಗಿ ರಾತ್ರಿ 10 ಗಂಟೆಗೆ ನಗರಸಭಾ ಸಿಬ್ಬಂದಿ ಪೊಲೀಸ್ ಭದ್ರತೆಯಲ್ಲಿ ಮೂರ್ತಿಯನ್ನ ತೆರವು ಗೊಳಿಸಿದರು.

    ಮೂರ್ತಿ ತೆರವು ಕಾರ್ಯಾಚರಣೆ ವಿರೋಧಿಸಿ ಸ್ಥಳದಲ್ಲಿ ಪ್ರತಿಭಟನೆ ನಡಸಿದ್ದ 15 ಬಿಜೆಪಿ ಮುಖಂಡರನ್ನು ಹಾಗೂ ಕೆಲ ಹಿಂದೂ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು. ಇದರಿಂದ ಕೆರಳಿರುವ ಬಿಜೆಪಿಗರು ಗುರುವಾರ ಬಾಗಲಕೋಟೆಯ ಶಿವಾನಂದ್ ಜಿನ್ ನಲ್ಲಿ ಸಭೆ ಸೇರಿ, ಮುಂದಿನ ಹೋರಾಟದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

    ಸಭೆಯಲ್ಲಿ ಒಮ್ಮತದಿಂದ ಶುಕ್ರವಾರ ಬಾಗಲಕೋಟೆ ನಗರವನ್ನು ಬಂದ್ ಮಾಡಲು ನಿರ್ಧರಿಸಿದ್ದಾರೆ. ತೆರವುಗೊಳಿಸಿದ ಮೂರ್ತಿಯನ್ನು ಅದೇ ಜಾಗೆಯಲ್ಲಿ ಮರು ಪ್ರತಿಷ್ಠಾಪಿಸಬೇಕು. ಇಲ್ಲದೇ ಇದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಮೂರ್ತಿ ಮರು ಪ್ರತಿಷ್ಠಾಪಿಸುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಮನವಿಯನ್ನೂ ಮಾಡಿದ್ದಾರೆ. ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಮಾಜಿ ಸಚಿವ ಗೋವಿಂದ ಕಾರಜೋಳ (Govind Karjol) ನೇತೃತ್ವದಲ್ಲಿ ಬಾಗಲಕೋಟೆ ಶಿವಾನಂದ್ ಜಿನ್‌ನಲ್ಲಿ ಸಭೆ ಸೇರಲಿರುವ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಂದಿನ ಹೋರಾಟದ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲು ನಿರ್ಧರಿಸಿದ್ದಾರೆ.

    ಸದ್ಯ ನಾಲ್ಕು ದಿನಗಳಿಂದ ಶಿವಾಜಿ ಮೂರ್ತಿ ವಿಚಾರವಾಗಿ ಬಾಗಲಕೋಟೆಯಲ್ಲಿ ಬಿಗುವಿನ ವಾತವರಣ ನಿರ್ಮಾವಾಗಿದೆ. ಬಿಜೆಪಿಗರ ನಡೆ ಗಮನಿಸಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂಗೆ ಸೆಡ್ಡು ಹೊಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ – ಶಿವಾಜಿ ಪ್ರತಿಮೆ ಮತ್ತೆ ಲೋಕಾರ್ಪಣೆ

    ಸಿಎಂಗೆ ಸೆಡ್ಡು ಹೊಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ – ಶಿವಾಜಿ ಪ್ರತಿಮೆ ಮತ್ತೆ ಲೋಕಾರ್ಪಣೆ

    ಬೆಳಗಾವಿ: ಜಿಲ್ಲೆಯ ರಾಜಹಂಸಗಡ ಕೋಟೆಯಲ್ಲಿ ಪ್ರತಿಷ್ಠಾಪಿಸಿರುವ ಶಿವಾಜಿ ಪ್ರತಿಮೆಯನ್ನು (Shivaji Statue) ಮತ್ತೆ ಲೋಕಾರ್ಪಣೆಗೊಳಿಸಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar), ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೇ ಸೆಡ್ಡು ಹೊಡೆದಿದ್ದಾರೆ.

    ಈಚೆಗಷ್ಟೇ ಬೆಳಗಾವಿ (Belagavi) ಜಿಲ್ಲೆಯ ರಾಜಹಂಸಗಡ ಕೋಟೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಾಜಿ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದರು. ಆದರೆ ಭಾನುವಾರ ಮತ್ತೆ ಅದೇ ಪ್ರತಿಮೆಯನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ನನ್ನ ಮೇಲೆ ಬಿಜೆಪಿ ಸರ್ಕಾರ ಎರಡು ಕೇಸ್ ಹಾಕಿದೆ: ಲಕ್ಷ್ಮಿ ಹೆಬ್ಬಾಳ್ಕರ್

    ರಾಜಹಂಸಗಡ ಕೋಟೆಯಲ್ಲಿ ಅದ್ಧೂರಿ ಲೋಕಾರ್ಪಣೆ ಸಮಾರಂಭ ಏರ್ಪಡಿಸಿದ್ದ ಲಕ್ಷ್ಮಿ ಹೆಬ್ಬಾಳಕರ್, ರಾಜಹಂಸಗಡ ಕೋಟೆಗೆ ಆಗಮಿಸಿದ ಪಲ್ಲಕ್ಕಿಗೆ ಅದ್ಧೂರಿ ಸ್ವಾಗತ ಕೋರಿದರು.‌ ಸಮಾರಂಭಕ್ಕೆ ಛತ್ರಪತಿ ಶಿವಾಜಿ ಮಹಾರಾಜರ 13ನೇ ವಂಶಸ್ಥ ಯುವರಾಜ ಸಂಭಾಜಿರಾಜೇ ಅವರ ಜೊತೆಯಲ್ಲಿ ಲಾತೂರು ಶಾಸಕ ಧೀರಜ್ ದೇಶಮುಖ, ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಕೊಲ್ಲಾಪೂರ ಶಾಸಕ ಕೂಡಾ ಆಗಮಿಸಿದ್ದರು.‌

    ಕೇಸರಿ ಸೀರೆ, ಕೇಸರಿ ಪೇಟ ತೊಟ್ಟು ರಾಜಹಂಸಗಡ ಕೋಟೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಎಂಟ್ರಿ ಕೊಟ್ಟರು. ಈ ವೇಳೆ ರಾಜಮಹಾರಾಜರ ಆಸ್ಥಾನದಲ್ಲಿ ನಡೆಯುತಿದ್ದ ದರ್ಬಾರ್ ರೀತಿಯಲ್ಲಿ ಶಿವಾಜಿ ಪುತ್ಥಳಿ ಅನಾವರಣ ಮಾಡಲಾಯಿತು. ಇದನ್ನೂ ಓದಿ: ಹಿಂದೂ, ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಈ ಸರ್ಕಾರಗಳನ್ನ ಕಿತ್ತೊಗೆಯಬೇಕು – ಖರ್ಗೆ ಕರೆ

  • ಯಾರನ್ನೂ ಸೋಲಿಸುವುದು ನಮ್ಮ ಅಜೆಂಡಾ ಅಲ್ಲ: ಜನಾರ್ದನ ರೆಡ್ಡಿ

    ಯಾರನ್ನೂ ಸೋಲಿಸುವುದು ನಮ್ಮ ಅಜೆಂಡಾ ಅಲ್ಲ: ಜನಾರ್ದನ ರೆಡ್ಡಿ

    ಕೊಪ್ಪಳ: ಯಾರನ್ನೂ ಸೋಲಿಸುವುದು ನಮ್ಮ ಅಜೆಂಡಾ ಅಲ್ಲ. ಮುಂದಿಟ್ಟ ಹೆಜ್ಜೆಯನ್ನು ಹಿಂದೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಬೇರೆ ಪಕ್ಷಕ್ಕೆ ತೊಂದರೆ ಮಾಡಬೇಕು ಎನ್ನುವ ಉದ್ದೇಶ ನನಗಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ಹೇಳಿದರು.

    ಕೊಪ್ಪಳದ (Koppala) ಗಂಗಾವತಿಯಲ್ಲಿ  (Gangavathi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರೆಂಟು ಜನ ನನ್ನ ಬಗ್ಗೆ ಮಾತನಾಡಿದರೂ ನಾನು ಯಾರಿಗೂ ಕಾಮೆಂಟ್ ಮಾಡುವುದಿಲ್ಲ. ನಾನು ನನ್ನ ಕೆಲಸ ಮಾಡಿಕೊಂಡು ಹೋಗುತ್ತಿದ್ದೇನೆ. ಅದರಿಂದ ಯಾರಿಗೆ ಲಾಭ ಯಾರಿಗೆ ನಷ್ಟ ಎಂದು ಯೋಚನೆ ಮಾಡುವುದಿಲ್ಲ. 31 ಕ್ಷೇತ್ರದಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. 9 ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆಯನ್ನು ಮಾಡಿದ್ದೇವೆ. ಜನರ ಪರವಾಗಿ ಕೆಲಸ ಮಾಡುವ ಚಿಂತನೆಯನ್ನು ಇಟ್ಟುಕೊಂಡಿದ್ದೇವೆ. ಅಮಿತ್ ಶಾ (Amit Shah) ಅವರು ಯಾಕೆ ಹೀಗೆ ಹೇಳಿದ್ದಾರೆ ಎನ್ನುವುದನ್ನು ನೀವೇ ವಿಶ್ಲೇಷಣೆ ಮಾಡಬೇಕು ಎಂದು ಟಾಂಗ್ ನೀಡಿದರು.

    ಕಳೆದ ವಾರ ಸಂಡೂರಿನಲ್ಲಿ ನಡೆದ ಸಭೆಯಲ್ಲಿ ರೆಡ್ಡಿ ಬಗ್ಗೆ ಸ್ಥಳೀಯ ಶಾಸಕರು ಅಮಿತ್ ಶಾ ಅವರಿಗೆ ದೂರು ನೀಡಿದ್ದರು. ಈ ಕುರಿತು ಅಮಿತ್ ಶಾ ರೆಡ್ಡಿ ಬಗ್ಗೆ ನಾನು ನೋಡಿಕೊಳ್ಳುತ್ತೇನೆ ಎಂದು ಹೇಳಿದ್ದರು.

    ಮಾರ್ಚ್ 5ರಿಂದ ನಾನು ರಾಜ್ಯ ಪ್ರವಾಸ ಹಮ್ಮಿಕೊಳ್ಳುತ್ತೇನೆ. ನಾನು ಗಂಗಾವತಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ಯಾರಿಗಾದರೂ ಕನಸು ಬಿದ್ದಿದ್ದರೆ ನಾನು ಏನು ಮಾಡಲಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಭಯದಿಂದ ಸರ್ಕಾರಿ ನೌಕರರ ಸಂಬಳ ಹೆಚ್ಚಳ: ಕ್ರೆಡಿಟ್‌ ತೆಗೆದುಕೊಂಡ ಡಿಕೆಶಿ

    ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದರ ಕ್ರೆಡಿಟ್ ಎರಡೂ ಪಾರ್ಟಿಯವರು ತೆಗೆದುಕೊಳ್ಳುತ್ತಿದ್ದಾರೆ. ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಇದಕ್ಕೆ ಅನುದಾನ ನೀಡಿದ್ದೆ. ಆ ಗುಡ್ಡ ಹತ್ತುವುದಕ್ಕೂ ಆಗುತ್ತಿರಲಿಲ್ಲ. ನಾನು ಬಿಜೆಪಿ ಸರ್ಕಾರದಲ್ಲಿದ್ದಾಗ 11 ಕೋಟಿ ವೆಚ್ಚದಲ್ಲಿ ಈ ಪ್ರಾಜೆಕ್ಟ್ ರೆಡಿ ಮಾಡಿದ್ದೆವು. ನಾನು ಮಾಡಿದ ಅಭಿವೃದ್ಧಿ ಕೆಲಸಗಳೇ ಜನ ನನ್ನನ್ನು ನಂಬುವಂತೆ ಮಾಡಿದೆ ಎಂದರು.

    ಬಿ.ಎಸ್ ಯಡಿಯೂರಪ್ಪ (BS Yediyurappa) ಅವರ ವಿಚಾರವಾಗಿ ಮಾತನಾಡಿದ ಅವರು, ಬಿಎಸ್‌ವೈ ಅವರು ರಾಜಕೀಯದಲ್ಲಿರಬೇಕು. ಅವರು ಮತ್ತೆ ಚುನಾವಣೆಗೆ ನಿಲ್ಲಬೇಕು. ಅವರು ನಿವೃತ್ತಿ ತೆಗೆದುಕೊಳ್ಳಬಾರದು. ಅವರಿಂದ ಇಡೀ ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ನಾನು ಸಚಿವನಾಗಿದ್ದಾಗ ಅಭಿವೃದ್ಧಿ ಕೆಲಸಕ್ಕೆ ಬಹಳ ಸಹಾಯ ಮಾಡಿದ್ದರು. ರಾಜ್ಯದ ವಿಮಾನ ನಿಲ್ದಾಣಗಳ ಕೆಲಸ ಆಗಿರುವುದೇ ಆ ಸಮಯದಲ್ಲಿ. ಅಂತಹ ಮಹಾನ್ ವ್ಯಕ್ತಿ ವಿಧಾನಸಭೆಗೆ ಬರಬೇಕು. ಮತ್ತೆ ಹುಟ್ಟಬೇಕು ಎಂದರೆ ಯಡಿಯೂರಪ್ಪನವರೇ ಹುಟ್ಟಬೇಕು. 80 ವರ್ಷ ವಯಸ್ಸಾದರೂ ನಮ್ಮನ್ನು ಮೀರಿಸುವ ಹಾಗೆ ಕೆಲಸ ಮಾಡುತ್ತಾರೆ. ಅವರು ಯಾಕೆ ಬಿಟ್ಟರು ಎನ್ನುವ ಬಗ್ಗೆ ಮಾತನಾಡುವುದಿಲ್ಲ. ಬಿಎಸ್‌ವೈ ಅವರು ಈ ರಾಜ್ಯಕ್ಕೆ ಬೇಕು ಎಂದು ಅವರ ಕಾರ್ಯಗಳನ್ನು ಶ್ಲಾಘಿಸಿದರು. ಇದನ್ನೂ ಓದಿ: ನನಗೆ, ಕುಮಾರ ಬಂಗಾರಪ್ಪಗೆ ಇನ್ಮುಂದೆ ಅಣ್ಣ-ತಮ್ಮ ಎಂದು ಕರೆಯಬೇಡಿ : ಮಧು ಬಂಗಾರಪ್ಪ

  • ಶಿವಾಜಿ ಪ್ರತಿಮೆಗೆ ಮಸಿ  – ರಣಧೀರ ಪಡೆಯ 7 ಜನರ ಬಂಧನ

    ಶಿವಾಜಿ ಪ್ರತಿಮೆಗೆ ಮಸಿ – ರಣಧೀರ ಪಡೆಯ 7 ಜನರ ಬಂಧನ

    ಬೆಂಗಳೂರು: ಕೊಲ್ಹಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದನ್ನು ಖಂಡಿಸೋ ಭರದಲ್ಲಿ ಬೆಂಗಳೂರಿನ ಸದಾಶಿವನಗರದ ಶಿವಾಜಿ ಮಹಾರಾಜರ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಣಧೀರ ಪಡೆಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಉಳಿದ 6 ಜನರಿಗಾಗಿ ಶೋಧ ಮುಂದುವರಿದಿದೆ. ಡಿಸೆಂಬರ್ 17ರಂದು ಡಸ್ಟರ್ ಕಾರ್‌ನಲ್ಲಿ 6, ಆಟೋ, ಬೈಕ್‍ನಲ್ಲಿ 7 ಜನ ಬಂದು ಸ್ಯಾಂಕಿಕೆರೆ ಸಿಗ್ನಲ್ ಬಳಿ ಇರುವ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದರು. ಬಳಿಕ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ್ಯಾಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಾಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಈ ನಡುವೆ ಎಂಇಎಸ್, ಶಿವಸೇನೆ ಪುಂಡರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳದ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ, ಶಿವಾಜಿ ಪ್ರತಿಮೆಗೆ ಮಸಿ ಬಳಿದವರ ಮೇಲೆ ಕ್ರಮಕೈಗೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಜೊತೆಗೆ, ಕರ್ನಾಟಕದಲ್ಲಿ ಮರಾಠಿಗರ ಮೇಲೆ ಕನ್ನಡಿಗರು ದೌರ್ಜನ್ಯ ಮಾಡುತ್ತಿದ್ದಾರೆ ಹೀಗಾಗಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಎಂದು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ

  • ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮತ್ತೆ ಪುಂಡಾಟಿಕೆ- ರಾಜ್ಯ ಪ್ರವೇಶಿಸಲು ಯತ್ನ

    ಮಹಾರಾಷ್ಟ್ರ ಗಡಿಯಲ್ಲಿ ಶಿವಸೇನೆ ಮತ್ತೆ ಪುಂಡಾಟಿಕೆ- ರಾಜ್ಯ ಪ್ರವೇಶಿಸಲು ಯತ್ನ

    – ಬುದ್ಧಿ ಹೇಳಿ ವಾಪಸ್ ಕಳುಹಿಸಿದ ರಾಜ್ಯದ ಪೊಲೀಸರು

    ಚಿಕ್ಕೋಡಿ/ಬೆಳಗಾವಿ: ಜಿಲ್ಲೆಯ ಗಡಿಯಲ್ಲಿ ಶಿವಸೇನೆ ಮತ್ತೆ ಪುಂಡಾಟಿಕೆ ಮುಂದುವರಿಸಿದೆ. ಮನಗುತ್ತಿ ಗ್ರಾಮದಲ್ಲಿ ತೆರವುಗೊಳಿಸಿರುವ ಶಿವಾಜಿ ಪ್ರತಿಮೆಯನ್ನು ಮತ್ತೆ ಸ್ಥಾಪಿಸಬೇಕು ಎಂದು ಶಿವಸೇನೆ ಒತ್ತಾಯಿಸಿದೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಜ್ಯದ ಮನಗುತ್ತಿ ಗ್ರಾಮಕ್ಕೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವನ ನೇತೃತ್ವದಲ್ಲಿ ಸುಮಾರು ಎಂಬತ್ತುಕ್ಕೂ ಅಧಿಕ ಕಾರ್ಯಕರ್ತರು ನುಗ್ಗಿ ಪ್ರತಿಭಟನೆ ನಡೆಸಲು ಯತ್ನಿಸಿದರು. ಆದರೆ ಶಿವಸೇನೆ ಕಾರ್ಯಕರ್ತರು ಮನಗುತ್ತಿ ಗ್ರಾಮಕ್ಕೆ ಪ್ರವೇಶ ನೀಡದಂತೆ ಗಡಿಯಲ್ಲಿಯೇ ಶಿವಸೇನೆ ಪುಂಡರನ್ನು ಪೊಲೀಸರು ತಡೆದಿದ್ದಾರೆ.

    ಮಹಾರಾಷ್ಟ್ರದ ಗಡಿ ಗ್ರಾಮ ಕವಳಿಕಟ್ಟಿಯಿಂದ ಮನಗುತ್ತಿಗೆ ಪಾದಯಾತ್ರೆ ನಡೆಸಿದ ಶಿವಸೇನೆ ಪುಂಡರು, ಪೋಲಿಸರು ಗಡಿಯಲ್ಲಿ ತಡೆದಿದ್ದಕ್ಕೆ ಅದೇ ಸ್ಥಳದಲ್ಲಿ ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

    ಕಳೆದ ಹದಿನೈದು ದಿನಗಳ ಹಿಂದೆ ಮನಗುತ್ತಿ ಗ್ರಾಮದಲ್ಲಿ ಸ್ಥಳೀಯ ಮರಾಠಿ ಭಾಷಿಕರು ಹಾಗೂ ಮುಖಂಡರು ಒಪ್ಪಿ ಗ್ರಾಮದ ಬೇರೆಡೆಗೆ ಶಿವಾಜಿ ಪ್ರತಿಮೆ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಪ್ರತಿಮೆ ಸ್ಥಾಪನೆ ವಿಳಂಬವಾಗುತ್ತಿದೆ ಎನ್ನುವ ಕುಂಟು ನೆಪ ಹೇಳಿಕೊಂಡು ಶಿವಸೇನೆ ಪುಂಡರು ಗಡಿಯಲ್ಲಿ ಪುಂಡಾಟಿಕೆ ಮೆರೆದಿದ್ದಾರೆ. ಈ ವೇಳೆ ಪೊಲೀಸರು ತಡೆದಿದ್ದಾರೆ. ಇದೀಗ ಹುಕ್ಕೇರಿ ಸಿಪಿಐ ಗುರುರಾಜ ಕಲ್ಯಾಣ ಶೆಟ್ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.