ಹಾಸನ: ಸೂರಜ್ ರೇವಣ್ಣಗೆ (Suraj Revanna) ಬ್ಲಾಕ್‌ಮೇಲ್ ಮಾಡಲಾಗಿದೆ ಎಂದು ದೂರು ನೀಡಿದ್ದ ಶಿವಕುಮಾರ್ (Shivakumar) ವಿರುದ್ಧ ಹಣ ದುರುಪಯೋಗ ಆರೋಪದಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.
ಶ್ರೀರಾಮ್ ಫೈನಾನ್ಸ್‌ನ ರಾಮನಾಥಪುರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಮೇಲೆ ವಾಹನ ಸಾಲ ಪಡೆದ ಗ್ರಾಹಕರು ನೀಡಿದ್ದ ಹಣವನ್ನು ದುರ್ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ.
ಬೆಂಗಳೂರು: ಎಂಎಲ್‍ಸಿ ಡಾ. ಸೂರಜ್ ರೇವಣ್ಣ (Dr. Suraj Revanna) ಅವರ ಸಲಿಂಗಕಾಮ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ದೊರೆಯುತ್ತಿದೆ. ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾರ್ ನಾಪತ್ತೆಯಾದರೆ ಇತ್ತ ಶಿವಕುಮಾರ್ ವಿರುದ್ಧವೇ ಸಂತ್ರಸ್ತ ಇದೀಗ ದೂರು ನೀಡಿದ್ದಾನೆ.
ಶಿವಕುಮಾರ್ ಬಳಿ ಎಲ್ಲವನ್ನೂ ನಾನು ಹೇಳಿದ್ದೆ. ಆತ ಆಸ್ಪತ್ರೆಗೆ ಹೋಗಲು ಬಿಡದೆ ಕೂಡಿ ಹಾಕಿದ್ದ. 2 ಕೋಟಿ ಹಣ, ಕೆಲಸ ಕೊಡಿಸುವುದಾಗಿ ಹೇಳಿದ್ದ. ಯಾರಿಗಾದರೂ ಹೇಳಿದರೆ ಕೊಲೆ ಮಾಡ್ತೇನೆ ಅಂತ ಬೆದರಿಕೆಯೂ ಹಾಕಿದ್ದ ಎಂದು ಸಂತ್ರಸ್ತ ಪೊಲೀಸರ ಮುಂದೆ ದೂರಿದ್ದಾನೆ.
ದೂರಿನಲ್ಲಿ ಏನಿದೆ..?: ನನ್ನ ಮೇಲೆ ಆಗಿರುವ ಅನ್ಯಾಯದ ಬಗ್ಗೆ ಶಿವಕುಮಾರ್ (Shivakumar) ಬಳಿ ಹೇಳಿದ್ದೆ. ನನಗೆ ದೈಹಿಕ ಹಿಂಸೆ ಆಗಿದ್ದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿರಲಿಲ್ಲ. ಶಿವಕುಮಾರ್ ತನ್ನ ಫೋನ್ ಮೂಲಕ ಸೂರಜ್ ಜೊತೆ ಮಾತನಾಡಿಸಿದರು. ಅಲ್ಲದೇ 2 ಕೋಟಿ ರೂ. ಹಣ, ಕೆಲಸ ಕೊಡಿಸುವುದಾಗಿ ಹೇಳಿದ್ದರು. ನಾನು ಒಪ್ಪದಿದ್ದಾಗ ಬಾಯಿಬಿಟ್ಟರೆ ನಿನ್ನ ಮುಗಿಸ್ತೇನೆ ಎಂದು ಶಿವಕುಮಾರ್ ಕೊಲೆ ಬೆದರಿಕೆ ಹಾಕಿದ್ದರು ಎಂದು ತಿಳಿಸಿದ್ದಾನೆ.
ಶಿವಕುಮಾರ್ ನನ್ನನ್ನು ಮನೆಗೆ ಹೋಗಲು ಬಿಡದೆ ಲಾಡ್ಜ್ ನಲ್ಲಿ ಕೂಡಿ ಹಾಕಿದ್ದ. ನನ್ನಿಂದಲೇ 1,000 ರೂ ಹಣ ಪಡೆದು ಊಟದ ವ್ಯವಸ್ಥೆ ಮಾಡಿದ್ದ. ನಂತರ ಅಲ್ಲಿಂದ ತಪ್ಪಿಸಿಕೊಂಡು ಸಂಬಂಧಿಕರ ಮನೆಗೆ ಹೋದೆ. ಶಿವಕುಮಾರ್ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.
ಹಾಸನ: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ (Suraj Revanna) ಪರವಾಗಿ ಸಂತ್ರಸನ ವಿರುದ್ಧ ದೂರು ನೀಡಿದ್ದ ದೂರುದಾರನೇ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಹೊಳೆನರಸೀಪುರ ನಗರ ಠಾಣೆಯಲ್ಲಿ (Holenarasipura City Police) ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ಜೂನ್ 21ರಂದು ದೂರು ನೀಡಿದ್ದರು. ಶಿವಕುಮಾರ್ ದೂರಿನ ಆಧಾರದ ಮೇಲೆಯೇ ಪೊಲೀಸರು ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಆದರೀಗ ದೂರು ನೀಡಿರುವ ಸಂತ್ರಸ್ತ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಶಿವಕುಮಾರ್ (Shivakumar) ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದೂರುದಾರನ ನಡೆ ಬಗ್ಗೆಯೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.
ಶಿವಕುಮಾರ್ ನೀಡಿದ ದೂರಿನಲ್ಲಿ ಏನಿತ್ತು?
ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ನಾನು ಫೋನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲಾಕ್‌ಮೇಲ್ ಮಾಡಲು ಆರಂಭಿಸಿದ್ದಾನೆ.
ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸ್ ಕೆಲಸ ಕೊಡಿಸುತ್ತಿಲ್ಲ. ನನಗೆ ತುಂಬಾ ಕಷ್ಟ ಇದೆ. ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಸೂರಜ್ ರೇವಣ್ಣ ಕೇಳಿದ್ದರು.
ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಬೇಡಿಕೆ ಇಟ್ಟಿದ್ದಾನೆ.
ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.
ಬೆಂಗಳೂರು: ಬಿಬಿಎಂಪಿ (BBMP) ಮುಖ್ಯ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯ ಎಂಜಿನಿಯರ್ ಶಿವಕುಮಾರ್ (Shivakumar) ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಶಿವಕುಮಾರ್ ಅವರು ಗುಣ ನಿಯಂತ್ರಣ ವಿಭಾಗದದಲ್ಲಿ ಮುಖ್ಯ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬೆಂಕಿ ಅವಘಡದ ವೇಳೆ ಎಲ್ಲರನ್ನೂ ರಕ್ಷಿಸುವಾಗ ವಿಷಾನಿಲ ದೇಹದ ಶ್ವಾಸಕೋಶಕ್ಕೆ ಹೊಕ್ಕಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ – ಪಾಲಿಕೆ ಸಿಬ್ಬಂದಿ ಸೇರಿ 9 ಮಂದಿಗೆ ಗಾಯ
ಕೆಲ ದಿನಗಳ ಹಿಂದೆ ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಹೊತ್ತಿ ಉರಿದ ಬೆಂಕಿಯಿಂದಾಗಿ 9 ಮಂದಿ ಬಿಬಿಎಂಪಿ ನೌಕರರಿಗೆ ತೀವ್ರ ಗಾಯಗಳಾಗಿದ್ದವು. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಬೆಂಕಿ ಅವಘಡದಿಂದಾಗಿ ಗಂಭೀರ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರು ಇಂದು ನಿಧನರಾಗಿದ್ದಾರೆ.
ಬಿಬಿಎಂಪಿ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯ ಅಗ್ನಿ ದುರಂತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಬಿಎಂಪಿ ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: BBMP ಬೆಂಕಿ ಪ್ರಕರಣದ ತನಿಖೆ ಚುರುಕು- ಚೀಫ್ ಎಂಜಿನಿಯರ್‌ಗೆ ನೋಟಿಸ್
“ಮುಖ್ಯ ಎಂಜಿನಿಯರ್ ಶಿವಕುಮಾರ್ ಅವರ ಅಗಲಿಕೆ ಸುದ್ದಿ ಕೇಳಿ ಬೇಸರವಾಗಿದೆ. ಕೆಲ ದಿನಗಳ ಹಿಂದಷ್ಟೇ ನಾನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡಿದರೂ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅವರು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೆವು. ನಮ್ಮ ಪ್ರಾರ್ಥನೆ ಫಲ ನೀಡಲಿಲ್ಲ” ಎಂದು ವಿಷಾದಿಸಿದ್ದಾರೆ.
“ಚಿಕ್ಕ ವಯಸ್ಸಿನಲ್ಲಿ ಈ ಅವಘಡದಿಂದ ಪ್ರಾಣ ಕಳೆದುಕೊಂಡಿರುವುದು ಮನಸ್ಸಿಗೆ ನೋವು ಉಂಟು ಮಾಡಿದೆ. ಶಿವಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು ಹಾಗೂ ಬಂಧು ಮಿತ್ರರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: BBMP ಮುಖ್ಯ ಕಚೇರಿಯಲ್ಲಿ ಬೆಂಕಿ ಪ್ರಕರಣ – ಮೂವರು ಡಿ ಗ್ರೂಪ್ ನೌಕರರು ವಶಕ್ಕೆ
ಕಿಚ್ಚ ಸುದೀಪ್ (Kichcha Sudeep) ನಟನೆಯ ಹೊಸ ಸಿನಿಮಾದ ಕುರಿತು ದಿನಕ್ಕೊಂದು ಸುದ್ದಿ ಹೊರ ಬೀಳುತ್ತಿವೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ಈ ಸಿನಿಮಾಗೆ ತಮಿಳು ನಿರ್ದೇಶಕರು ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಮಾಹಿತಿ ಇದೆ. ಜೊತೆಗೆ ಈ ಸಿನಿಮಾದ ನಾಯಕಿಯನ್ನು ಬಾಲಿವುಡ್ ನಿಂದ ಕರೆತರಲಾಗುತ್ತಿದೆಯಂತೆ. ಅಲ್ಲದೇ, ತಂತ್ರಜ್ಞರು ಮಾತ್ರ ಕನ್ನಡದವರೇ ಇರಲಿದ್ದಾರೆ ಎನ್ನುವುದು ಲೇಟೆಸ್ಟ್ ಅಪ್ ಡೇಟ್.
ಈ ಹೊಸ ಸಿನಿಮಾವನ್ನು ತಮಿಳು ನಿರ್ದೇಶಕರು ಹಾಗೂ ತಮಿಳು ಚಿತ್ರ ನಿರ್ಮಾಣ ಸಂಸ್ಥೆ ತಯಾರಿಸುತ್ತಿದ್ದರೆ, ಸಂಗೀತ, ಸಿನಿಮಾಟೋಗ್ರಫಿ ಮತ್ತು ಕಲಾ ನಿರ್ದೇಶನವನ್ನು ಕನ್ನಡದ ತಂತ್ರಜ್ಞರೇ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಜನೀಶ್ ಲೋಕನಾಥ (Ajanish Loknath) ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದರೆ, ಶಿವಕುಮಾರ್ ಕಲಾನಿರ್ದೇಶಕ. ಶೇಖರ್ ಚಂದ್ರ ಅವರ ಸಿನಿಮಾಟೋಗ್ರಫಿ ಚಿತ್ರಕ್ಕೆ ಇರಲಿದೆಯಂತೆ. ಆದರೆ, ಈ ಮಾಹಿತಿಯನ್ನು ಚಿತ್ರತಂಡ ಇನ್ನೂ ಖಚಿತ ಪಡಿಸಿಲ್ಲ. ಇದನ್ನೂ ಓದಿ:ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ
ಈ ಸಿನಿಮಾವನ್ನು ತಮಿಳು (Tamil) ನಿರ್ದೇಶಕ ವಿಜಯ್ (Vijay) ಎನ್ನುವವರು ನಿರ್ದೇಶನ ಮಾಡಲಿದ್ದು, ಈ ಸಿನಿಮಾ ಮೂಲಕ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ತಮಿಳಿನ ಕಲೈಪುಲಿ ಎಸ್ ತನು (Kalaipuli S Tanu) ನಿರ್ಮಾಣ ಸಂಸ್ಥೆ ಚಿತ್ರಕ್ಕೆ ಹಣ ಹೂಡಿದೆ. ಮೊನ್ನೆಯಷ್ಟೇ ಕಿಚ್ಚ ಕಾರಿನಿಂದ ಇಳಿಯುವುದರ ಜೊತೆಗೆ ಮೇಕಪ್ ನಲ್ಲಿ ಭಾಗಿಯಾಗುವ ಸಣ್ಣದೊಂದು ವಿಡಿಯೋ ಬಿಡುಗಡೆ ಮಾಡಿತ್ತು ಚಿತ್ರತಂಡ. ಸುದೀಪ್ ಅವರ ಗೆಟಪ್ ಜಭರದಸ್ತಾಗಿ ಇರಲಿದೆ ಎನ್ನುವ ಸುಳಿವನ್ನೂ ನೀಡಿತ್ತು.
ಒಂದು ದಿನದಲ್ಲಿ ನಡೆಯುವ ಕಥೆಯು ಇದಾಗಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಚಿತ್ರವಂತೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಭಾರೀ ಬಜೆಟ್ ನ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಮಾಹಿತಿ ಕೊಡದೇ ಇದ್ದರೂ, ಸುದೀಪ್ ಅವರ ಆಪ್ತರಿಂದಲೇ ಇವಿಷ್ಟು ಮಾಹಿತಿ ಹೊರ ಬಂದಿವೆ.
ಈ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ‘ಬಿಲ್ಲ ರಂಗ ಬಾಷಾ’ (Billa Ranga Basha) ಮೊದಲು ಮೂಡಿ ಬರಲಿದೆ ಎನ್ನಲಾಗಿತ್ತು. ಆದರೆ, ಅದಕ್ಕೂ ಮುನ್ನ ವಿಜಯ್ ನಿರ್ದೇಶನದ ಚಿತ್ರ ತಯಾರಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಕಳೆದ ವರ್ಷ ನವಂಬರ್ ತಿಂಗಳಲ್ಲಿ ‘ಅಪ್ಪು ಅಮರ’ ಕಾರ್ಯಕ್ರಮದ ಮೂಲಕ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅವರಿಗೆ ಗೌರವ ಸಲ್ಲಿಸಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರತಿಷ್ಠಿತ ಕಾವೇರಿ ಆಸ್ಪತ್ರೆಯು, ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ಸಹಯೋಗದಲ್ಲಿ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ (KTVA) ಸದಸ್ಯರುಗಳಿಗೆ ‘ಅಪ್ಪು ಅಮರ ಹೆಲ್ತ್ ಪ್ರೆವಿಲೈಜ್ ಕಾರ್ಡ್” ವಿತರಿಸುವ ಭರವಸೆ ನೀಡಿತ್ತು. ಅದರಂತೆ ಇದೇ ನವೆಂಬರ್ 13ರಂದು ಭಾನುವಾರ ಸಂಜೆ ಐದು ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ‘ಅಪ್ಪು ಅಮರ ಹೆಲ್ತ್ ಪ್ರಿವೀಲೇಜ್ ಕಾರ್ಡ್” ವಿತರಿಸಲಿದೆ.
ಈ ಕುರಿತು ಮಾತನಾಡಿದ ಕೆಟಿವಿಎ ಅಧ್ಯಕ್ಷ ಎಸ್.ವಿ. ಶಿವಕುಮಾರ್ (Shivakumar), ‘ಈ ಕಾರ್ಡ್ ಪಡೆದ ಸದಸ್ಯರುಗಳಲ್ಲಿ ಅವಶ್ಯಕತೆ ಇರುವ ಹಾಗೂ ಆರ್ಥಿಕವಾಗಿ ದುರ್ಬಲರಾದ ಸದಸ್ಯರುಗಳಿಗೆ ಶಸ್ತ್ರಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಲು ಕಾವೇರಿ ಆಸ್ಪತ್ರೆ ಮತ್ತು ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ನಿರ್ಧರಿಸಿದೆ. ಇದಲ್ಲದೆ ಈ ಹೆಲ್ತ್ ಕಾರ್ಡ್ ಅಡಿಯಲ್ಲಿ ಎಲ್ಲಾ ಸ್ಪೆಷಾಲಿಟಿ ಸವಲತ್ತುಗಳನ್ನು ಕಡಿಮೆ ದರದಲ್ಲಿ ಪಡೆದುಕೊಳ್ಳಬಹುದು. ಈ ಸವಲತ್ತನ್ನು ಸುಮಾರು 5000 ಸದಸ್ಯರು ಮತ್ತು ಅವರ ಕುಟುಂಬದವರು ಪಡೆಯಲಿದ್ದಾರೆ’ ಎನ್ನುತ್ತಾರೆ. ಇದನ್ನೂ ಓದಿ:`ಮಿಸ್ ಯೂ ಸಾನ್ಯ’ ಎಂದು ಬಿಕ್ಕಿ ಬಿಕ್ಕಿ ಅತ್ತ ರೂಪೇಶ್ ಶೆಟ್ಟಿ
ಭಾನುವಾರ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth) ಭಾಗಿಯಾಗಲಿದ್ದು, ಅವತ್ತು ಅವರೇ ಕಾರ್ಡ್ ಅನ್ನು ವಿತರಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಅಲ್ಲದೇ, ಗಣ್ಯರು ಕೂಡ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ವಿಶೇಷ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿದ್ದರಾಮೋತ್ಸವಕ್ಕೆ ಎಲ್ಲಾ ಕಡೆ ಭರದ ತಯಾರಿ ನಡೆದಿದೆ. ಬೆಳಗಾವಿ, ಚಿತ್ರದುರ್ಗ ಸೇರಿ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರು ದಾವಣಗೆರೆ ಕಡೆಗೆ ಹೊರಟು ನಿಂತಿದ್ದಾರೆ. ಕೆಲವು ನಾಯಕರು ಭಾಷಣದ ರಿಹರ್ಸಲ್ ಕೂಡ ನಡೆಸಿದ್ದಾರೆ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷರ ಭಾಷಣದ ಅಂಶಗಳು ಲೀಕ್ ಆಗಿದೆ.
ಭಾಷಣದ ಪ್ರತಿಯನ್ನು ಡಿಕೆ ಶಿವಕುಮಾರ್ ಅವರ ಮಾಧ್ಯಮ ವಿಭಾಗ ವಾಟ್ಸಪ್ ಗ್ರೂಪ್‍ಗೆ ಹಾಕಿ ನಂತರ ಡಿಲೀಟ್ ಮಾಡಿದೆ. ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿಯೇ ಸಿಎಂ ಫೈಟ್‍ಗೆ ಬ್ರೇಕ್ ಹಾಕಲು ಡಿಕೆಶಿ ಮುಂದಾಗಿದ್ರಾ ಎಂಬ ಪ್ರಶ್ನೆ ಡಿಕೆಶಿಯ ಭಾಷಣದ ಸೋರಿಕೆಯಿಂದ ಏಳುತ್ತದೆ. ಇದನ್ನೂ ಓದಿ: Exclusive-ಚಂದನ್ ಹಲ್ಲೆಗೆ ನಾನು ನ್ಯಾಯ ಕೇಳುತ್ತೇನೆ : ನಟಿ, ಚಂದನ್ ಪತ್ನಿ ಕವಿತಾ ಗೌಡ
ಪಕ್ಷವನ್ನು ಅಧಿಕಾರಕ್ಕೆ ಮೊದಲು ಅಧಿಕಾರಕ್ಕೆ ತರುವ ಕೆಲಸ ಮಾಡೋಣ. ನಂತರ ನಾವು ಯಾವ ಸ್ಥಾನಮಾನಕ್ಕೆ ಅರ್ಹರೋ ಅದನ್ನು ಪಕ್ಷ ನೀಡುತ್ತದೆ ಎಂಬ ಅಂಶ ಡಿಕೆಶಿ ಭಾಷಣದಲ್ಲಿದೆ. ಅಲ್ಲದೇ, ಉತ್ತಮ ನಾಯಕನಾದವನು ಹೆಚ್ಚು ನಾಯಕರನ್ನು ಸೃಷ್ಟಿ ಮಾಡುತ್ತಾನೆ ಹೊರತು, ಹಿಂಬಾಲಕರನ್ನಲ್ಲ ಎಂಬ ರಾಜೀವ್ ಗಾಂಧಿಯ ಮಾತು ಡಿಕೆಶಿಯ ಭಾಷಣದಲ್ಲಿದೆ. ಮೂಲಕ ಸಿದ್ದರಾಮಯ್ಯಗೆ ವೇದಿಕೆಯಲ್ಲೇ ಡಿಕೆಶಿ ತಿರುಗೇಟು ನೀಡಲು ತಂತ್ರ ರೂಪಿಸಿದ್ದಾರೆ ಎಂಬ ಮಾತು ಕೇಳಿಬಂದಿವೆ.
ಇದೇ ಹೊತ್ತಲ್ಲಿ ಅಮೃತಮಹೋತ್ಸವ ಸಮಿತಿ ಸಿದ್ದರಾಮಯ್ಯ ನಿವಾಸದಲ್ಲಿ ಅಂತಿಮ ಹಂತದ ಸಭೆ ನಡೆಸಿದೆ. ಸಿದ್ದರಾಮೋತ್ಸವಕ್ಕೆ ಎಂದಿನಂತೆ ಬಿಜೆಪಿ ಕಾಲೆಳೆಯುವ ಕೆಲಸ ಮಾಡಿದೆ.
Live Tv
[brid partner=56869869 player=32851 video=960834 autoplay=true]
ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿರುವ, ವಿನೂತನ ಶೀರ್ಷಿಕೆ ಹೊಂದಿರುವ ಕನ್ನಡ ಸಿನಿಮಾವೊಂದು ಪ್ಯಾನ್ ಇಂಡಿಯಾ ಟೈಟಲ್ ಅಡಿ ಸಿದ್ಧಗೊಂಡಿದೆ. ಬೆಳಗ್ಗೆ ಎದ್ದು ರೆಡಿಯೋ ಆನ್ ಮಾಡಿದ್ದರೆ ನಮಸ್ಕಾರ ಆಕಾಶವಾಣಿ ಮೈಸೂರು ಕೇಂದ್ರ ಎಂಬ ಮಧುರವಾದ ಮಾತು ಕೇಳಿ ಬರುತ್ತದೆ. ಈಗ ಅದೇ ಹೆಸರಿನಲ್ಲಿ ಚಿತ್ರವೊಂದು ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದೆ.
ಜಬರ್ದಸ್ತ್ ಶೋ ಖ್ಯಾತಿಯ ಸತೀಶ್ ಬತ್ತುಲ ನಿರ್ದೇಶಿಸಿರುವ “ಆಕಾಶವಾಣಿ ಮೈಸೂರು ಕೇಂದ್ರ” ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿ, ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಕಾರ್ತಿಕ್ ಕೊಡಕಂಡ್ಲ ಈ ಹಾಡಿಗೆ ಸಂಗೀತ ನೀಡಿದ್ದಾರೆ. ಮಿಥುನಾ ಎಂಟರ್ ಟೈನ್ ಮೆಂಟ್ ಪ್ರೈ ಲಿ ಹಾಗೂ ಸೈನ್ಸ್ ಸ್ಟುಡಿಯೋಸ್ ಪ್ರೊಡಕ್ಷನ್ಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಎಂ.ಎಂ.ಅರ್ಜುನ್ ಈ ಚಿತ್ರದ ನಿರ್ಮಾಪಕರು. ವಿಶ್ವನಾಥ್.ಎಂ, ಹರಿಕುಮಾರ್ ಜಿ, ಕಮಲ್ ಮೇಡಗೋಣಿ ಈ ಚಿತ್ರದ ಸಹ ನಿರ್ಮಾಪಕರು. ಇದನ್ನೂ ಓದಿ:ಬ್ರೇಕಪ್ ನಂತರ ಸ್ಟಾರ್ ನಟಿ ಸಹೋದರನ ಜೊತೆ ಇಲಿಯಾನಾ ಡೇಟಿಂಗ್
“ಆಕಾಶವಾಣಿ ಮೈಸೂರು ಕೇಂದ್ರ” ಚಿತ್ರ ಲವ್ ಎಂಟರ್ ಟೈನರ್ ಹಾಗೂ ಥ್ರಿಲಿಂಗ್ ಕಥಾಹಂದರ ಹೊಂದಿರುವ ವಿಭಿನ್ನ ಚಿತ್ರ. ಈ ಚಿತ್ರ ಉತ್ತಮವಾಗಿ ಮೂಡಿಬರಲು ನಿರ್ಮಾಪಕ ಅರ್ಜುನ್ ಅವರ ಸಹಕಾರ ಅಪಾರ. ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಈಗ ಚಿತ್ರದ ಮೊದಲ ಹಾಡು ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ತಿಳಿಸುತ್ತೇವೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಸತೀಶ್ ಬತ್ತುಲ.
ನಿರ್ದೇಶಕ ಸತೀಶ್ ಕಥೆ ಹೇಳಿದ ತಕ್ಷಣ ಇಷ್ಟವಾಯಿತು. ಅವರು ಕಥೆ ಹೇಳಿದ ರೀತಿಯಲ್ಲೇ ಸಿನಿಮಾವನ್ನು ಮಾಡಿದ್ದಾರೆ. ನಿರ್ಮಾಪಕನಾಗಿ ನಾನು, ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಎಲ್ಲಾ ಭಾಷೆಯವರು ನೋಡಬಹುದಾದ ಕಥೆಯುಳ್ಳ(ಯೂನಿವರ್ಸಲ್ ಪಾಯಿಂಟ್ ವುಳ್ಳ) ಚಿತ್ರವಾಗಿರುವುದರಿಂದ ಪ್ಯಾನ್ ಇಂಡಿಯಾ ಸಿನಿಮಾವಾಗಿ ಬಿಡುಗಡೆ ಮಾಡುತ್ತಿದ್ದೇನೆ. ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ನಮ್ಮ ಚಿತ್ರದಲ್ಲಿ ಅದ್ಭುತವಾಗಿದೆ ಎನ್ನುತ್ತಾರೆ ಎಂ.ಎಂ.ಅರ್ಜುನ್. ಶಿವಕುಮಾರ್, ಹುಮಯ್ ಚಂದ್, ಅಕ್ಷತ ಶ್ರೀಧರ್ ಹಾಗೂ ಅರ್ಚನ ಈ ಚಿತ್ರಡ ನಾಯಕ ಹಾಗೂ ನಾಯಕಿಯರಾಗಿ ನಟಿಸಿದ್ದಾರೆ. ಆರಿಫ್ ಈ ಚಿತ್ರದ ಛಾಯಾಗ್ರಹಕರು.
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನೆರ್ಲಗುಂಟೆ ಎನ್. ತಿಪ್ಪೇಸ್ವಾಮಿ ಪುತ್ರ ಶಿವಕುಮಾರ್ ಅವರು ಅಕಾಲಿಕ ಸಾವಿಗೆ ತುತ್ತಾಗಿದ್ದಾರೆ. 32 ವರ್ಷದ ಶಿವಕುಮಾರ್ ಅವರು ನಿಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಚಿತ್ರದುರ್ಗ, ದಾವಣಗೆರೆ ಹಾಗೂ ಬೆಂಗಳೂರು ಸೇರಿದಂತೆ ಮತ್ತಿತರರ ಕಡೆಗಳಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ; ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ
ಮಾಜಿ ಶಾಸಕ ತಿಪ್ಪೇಸ್ವಾಮಿ ಅವರಿಗೆ ಶಿವಕುಮಾರ್ ಹಾಗೂ ಓರ್ವ ಸುಪುತ್ರಿ ಇದ್ದರು. ಇಪ್ಪತ್ತು ವರ್ಷಗಳ ಹಿಂದೆ ಮಗಳು ಸಹ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಇವರ ಬಲಗೈ ಆಗಿದ್ದಂತಹ ಪುತ್ರ ಶಿವಕುಮಾರ್ ತಂದೆಯ ರಾಜಕೀಯ ಭವಿಷ್ಯಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು. ಎಲ್ಲಾ ಚುನಾವಣೆಗಳಲ್ಲೂ ತಂದೆಯ ವಾರಿಸುದಾರರಾಗಿ ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿ ಶಿವಣ್ಣ ಅಂತ ಖ್ಯಾತಿಯಾಗಿದ್ದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಸ್ಪರ್ಧಿಸಿದ ಕಾರಣ ಎನ್. ತಿಪ್ಪೇಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಶ್ರೀರಾಮುಲು ವಿರುದ್ಧ ಅತ್ಯಧಿಕ ಮತಗಳಿಂದ ಸೋಲು ಅನುಭವಿಸಿದ್ದರು. ಆಗ ತಮ್ಮ ತಂದೆಯ ಪರ ತಮ್ಮ ಜೀವದ ಹಂಗು ತೊರೆದು ಚುನಾವಣೆ ಎದುರಿಸಿದ್ದರು.
ಇತ್ತೀಚಿನ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ತಮ್ಮ ತಂದೆಯವರಿಗೆ ಬೆನ್ನುಲುಬಾಗಿದ್ದ ಶಿವಕುಮಾರ್ ಅನುಪಸ್ಥಿತಿಯು ಮಾಜಿ ಶಾಸಕ ತಿಪ್ಪೇಸ್ವಾಮಿಯವರಿಗೆ ತುಂಬಲಾರದ ನಷ್ಟ ಎನಿಸಿದೆ.ಮೃತರ ಅಂತ್ಯ ಕ್ರಿಯೆ ನಾಳೆ ಅವರ ಸ್ವಗ್ರಾಮ ನೇರಲುಗುಂಟೆಯಲ್ಲಿ ನಡೆಯಲಿದೆ.
Live Tv
[brid partner=56869869 player=32851 video=960834 autoplay=true]
ಕಿಚ್ಚ ಸುದೀಪ್ ಅವರು ಕಿಚನ್ ನಲ್ಲಿ ತಯಾರಾದ ಅಡುಗೆಯನ್ನು ಹೊಗಳದವರೇ ಇಲ್ಲ. ಅದರಲ್ಲೂ ಸ್ವತ ಸುದೀಪ್ ಅವರೇ ತಮ್ಮ ಕೈಯಾರ ಅಡುಗೆ ಮಾಡಿ ಬಡಿಸುತ್ತಾರೆ. ಆ ರುಚಿಯನ್ನು ಬಲ್ಲವರೇ ಬಲ್ಲರು. ಅವರ ಕಿಚನ್ ಕೂಡ ಹಾಗೆಯೇ ಇದೆ. ದೇಶ ವಿದೇಶಗಳ ಅಡುಗೆ ಪಾತ್ರೆಗಳನ್ನು ಅದು ಹೊಂದಿದೆ. ಹಾಗಾಗಿ ಕೇವಲ ದೇಶಿ ಆಹಾರ ಮಾತ್ರ ಅಲ್ಲಿ ಬೇಯುವುದಿಲ್ಲ. ವಿದೇಶ ಅಡುಗೆಗಳೂ ತಯಾರಾಗುತ್ತವೆ. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ
ಹಾಗಂತ ಕಿಚ್ಚ ಸುದೀಪ್ ಅಡುಗೆ ಮಾಡುವುದನ್ನು ಯಾವತ್ತೂ ನಿಲ್ಲಿಸಿಲ್ಲ. ಯಾವುದೇ ದೇಶಕ್ಕೆ ಹೋಗಲಿ ಉಳಿದುಕೊಂಡ ಹೋಟೆಲ್ ನ ಕಿಚನ್ ಗೆ ಭೇಟಿ ಮಾಡದೇ ಬರುವುದಿಲ್ಲವಂತೆ. ಅಡುಗೆ ಕೋಣೆ ಹೊಕ್ಕು, ಅಲ್ಲಿ ತಯಾರಾದ ವಿಶೇಷ ಭಕ್ಷ್ಯಗಳನ್ನು ನೋಡಿ, ಅದನ್ನು ತಯಾರು ಮಾಡುವ ರೀತಿ ತಿಳಿದುಕೊಳ್ಳುತ್ತಾರಂತೆ. ಅದನ್ನು ಟ್ರೈ ಕೂಡ ಮಾಡುತ್ತಾರೆ. ಹಾಗಾಗಿ ವಿವಿಧ ಬಗೆಯ ಅಡುಗೆಗಳು ಅವರಿಗೆ ಬರುತ್ತವೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ
ನಿನ್ನೆಯಷ್ಟೇ ಡಾಲಿ ಧನಂಜಯ್ ಅವರು ಸುದೀಪ್ ಮನೆಗೆ ಹೋಗಿದ್ದಾರೆ. ಇವರ ಜತೆ ನಿರ್ದೇಶಕ ನಂದ ಕಿಶೋರ್, ಸಂಗೀತ ನಿರ್ದೇಶಕ ಕಂ ಗಾಯಕ ವಾಸುಕಿ ವೈಭವ್, ಕಲಾ ನಿರ್ದೇಶಕ ಶಿವಕುಮಾರ್ ಮತ್ತು ನಿರ್ಮಾಪಕ ಜಾಕ್ ಮಂಜು ಕೂಡ ಇದ್ದಾರೆ. ಇವರೆಲ್ಲರೂ ಕಿಚ್ಚ ಸುದೀಪ್ ಅವರೇ ಅಡುಗೆ ತಯಾರಿಸಿ ಹೊಟ್ಟೆ ತುಂಬಾ ಬಡಿಸಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ
ಕಿಚ್ಚನ ಕೈ ರುಚಿ ಅನುಭವಿಸಿದ ಡಾಲಿ ಧನಂಜಯ್ ತಮ್ಮ ಟ್ವಿಟರ್ ಖಾತೆಯಲ್ಲಿ ಅದನ್ನು ಬರೆದುಕೊಂಡಿದ್ದಾರೆ. ಅಡುಗೆಯ ಬಗ್ಗೆ ಹಾಡಿ ಹೊಗಳಿದ್ದಾರೆ. ಅದಕ್ಕೆ ಸಂಗೀತ ನಿರ್ದೇಶಕ ವಾಸಕಿ ವೈಭವ್ ಕೂಡ ಅನುಮೋದಿಸಿದ್ದಾರೆ. ಈ ಟ್ವಿಟ್ ಗೆ ಅನೇಕರು ಮೆಚ್ಚಿ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.